accident
ತೋಡಿಗೆ ಬಿದ್ದ ಕಾರು..ಪ್ರಯಾಣಿಕರು ಅದೃಷ್ಟವಶಾತ್ ಪಾರು..
ವಿಟ್ಲ: ವಿಟ್ಲ-ಸಾಲೆತ್ತೂರು ರಸ್ತೆಯ ಕೊಡಂಗಾಯಿ ಸೇತುವೆಯ ಸಮೀಪ ಮಾರುತಿ ಕಾರೊಂದು ಚಾಲಕನ ನಿಯಂತ್ರಣ ತಪ್ಪಿ ರಸ್ತೆ ಬದಿಯ ತೋಡಿಗೆ ಪಲ್ಟಿ ಹೊಡೆದ ಘಟನೆ ಸಂಭವಿಸಿದೆ.
ಅಪಘಾತದ ತೀವ್ರತೆಗೆ ಕಾರು ಸಂಪೂರ್ಣವಾಗಿ ಉರುಳಿಬಿದ್ದಿದ್ದರೂ, ಅದೃಷ್ಟವಶಾತ್ ಕಾರಿನಲ್ಲಿದ್ದ ಚಾಲಕ ಮತ್ತು ಇಬ್ಬರು ಮಕ್ಕಳು ಪ್ರಾಣಾಪಾಯದಿಂದ ಪಾರಾಗಿದ್ದಾರೆ. ಘಟನೆಯಲ್ಲಿ ಅವರಿಗೆ ಸಣ್ಣಪುಟ್ಟ ಗಾಯಗಳಾಗಿದ್ದು, ಪ್ರಾಣಹಾನಿ ಸಂಭವಿಸದಿರುವುದು ನೆಮ್ಮದಿಯ ವಿಷಯವಾಗಿದೆ.
ಅಪಘಾತಕ್ಕೀಡಾದ ಕಾರು ಸ್ಥಳೀಯ ನಿವಾಸಿಯೊಬ್ಬರಿಗೆ ಸೇರಿದ್ದೆಂದು ತಿಳಿದುಬಂದಿದೆ. ಸ್ಥಳೀಯರು ತಕ್ಷಣವೇ ಧಾವಿಸಿ ಗಾಯಾಳುಗಳಿಗೆ ನೆರವಾಗಿದ್ದಾರೆ.
accident
ಪುತ್ತೂರು: ರಸ್ತೆ ಅಪಘಾತಕ್ಕೆ ಯುವಕ ಬಲಿ – ಸಿಸಿಟಿವಿಯಲ್ಲಿ ಸೆರೆಯಾಯ್ತು ಭೀಕರ ದೃಶ್ಯ
ಪುತ್ತೂರು: ನಗರದ ಪಡೀಲ್ ಸಮೀಪ ಶನಿವಾರ ಬೆಳಿಗ್ಗೆ ಸಂಭವಿಸಿದ ಭೀಕರ ರಸ್ತೆ ಅಪಘಾತದಲ್ಲಿ ಯುವಕನೋರ್ವ ದಾರುಣವಾಗಿ ಸಾವನ್ನಪ್ಪಿದ್ದು, ಇನ್ನಿಬ್ಬರು ಗಂಭೀರವಾಗಿ ಗಾಯಗೊಂಡಿದ್ದಾರೆ. ಪುತ್ತೂರು-ಉಪ್ಪಿನಂಗಡಿ ರಸ್ತೆಯಲ್ಲಿ ಈ ಘಟನೆ ನಡೆದಿದೆ.
ಪುತ್ತೂರುತಾಲೂಕು ಬೆಳ್ಳಿಪ್ಪಾಡಿ ಗ್ರಾಮದ (ವಯಾ ದಾರಂದಕುಕ್ಕು) ಕೊಡಿಮರ ನಿವಾಸಿ ವಿಶ್ವನಾಥ ಪೂಜಾರಿ ಅವರ ಪುತ್ರ ಧನರಾಜ್ (23) ಯಾನೆ ಧನು ಮೃತಪಟ್ಟ ದುರ್ದೈವಿ. ಬೆಂಗಳೂರಿನಲ್ಲಿ ಉದ್ಯೋಗದಲ್ಲಿದ್ದ ಧನರಾಜ್, ಪುತ್ತೂರು ಶ್ರೀ ಮಹಾಲಿಂಗೇಶ್ವರ ದೇವಸ್ಥಾನದ ವಾರ್ಷಿಕ ಜಾತ್ರೋತ್ಸವದ ಅಂಗವಾಗಿ ಊರಿಗೆ ಬಂದಿದ್ದರು. ಜಾತ್ರಾ ಗದ್ದೆಯಲ್ಲಿ (ಸಂತೆ ಗದ್ದೆ) ಜ್ಯೂಸ್ ಅಂಗಡಿ ಇಟ್ಟುಕೊಂಡಿದ್ದ ಅವರು, ನಿನ್ನೆ ಮುರದಲ್ಲಿ ತನ್ನ ಗೆಳೆಯನ ಮನೆಯಲ್ಲಿ ತಂಗಿದ್ದರು. ಇಂದು ಬಟ್ಟೆ ಬದಲಾಯಿಸಿ ಮತ್ತೆ ಸ್ಟಾಲ್ ಗೆ ಹೋಗಲು ಬೆಳಿಗ್ಗೆ ಸುಮಾರು 11:30ಕ್ಕೆ ಮನೆಗೆ ತೆರಳುತ್ತಿದ್ದಾಗ ಈ ಅಪಘಾತ ಸಂಭವಿಸಿದೆ.

ಸಿಸಿಟಿವಿಯಲ್ಲಿ ಸೆರೆಯಾದ ಅಪಘಾತ: ದೊರೆತಿರುವ ಸಿಸಿಟಿವಿ ದೃಶ್ಯಾವಳಿಗಳ ಪ್ರಕಾರ, ಧನರಾಜ್ ಚಲಾಯಿಸುತ್ತಿದ್ದ ಬೈಕ್ ನಿಯಂತ್ರಣ ತಪ್ಪಿ ಮೊದಲು ಡಿವೈಡರ್‌ಗೆ ಡಿಕ್ಕಿ ಹೊಡೆದು ಲೈಟ್ ಕಂಬಕ್ಕೆ ಅಪ್ಪಳಿಸಿ. ಬಳಿಕ ಎದುರಿನಿಂದ ಬರುತ್ತಿದ್ದ ಮತ್ತೊಂದು ದ್ವಿಚಕ್ರ ವಾಹನದ ಮೇಲೆ ಹಾರಿದೆ. ಡಿಕ್ಕಿಯ ತೀವ್ರತೆಗೆ ಧನರಾಜ್ ಸ್ಥಳದಲ್ಲೇ ಮೃತಪಟ್ಟಿದ್ದಾರೆ , ಈ ದೃಶ್ಯ ಸ್ಥಳೀಯ ಸಿ ಸಿ ಕ್ಯಾಮಾರದಲ್ಲಿ ಸೆರೆಯಾಗಿದೆ.
ಗಾಯಾಳುಗಳ ಸ್ಥಿತಿ: ಮತ್ತೊಂದು ಬೈಕಿನಲ್ಲಿದ್ದ ಇಬ್ಬರು ಸವಾರರು ತೀವ್ರವಾಗಿ ಗಾಯಗೊಂಡಿದ್ದು, ಅವರನ್ನು ಕೂಡಲೇ ಸ್ಥಳೀಯರು ಆಸ್ಪತ್ರೆಗೆ ದಾಖಲಿಸಿದ್ದಾರೆ. ಅವರ ಸ್ಥಿತಿ ಗಂಭೀರವಾಗಿದೆ ಎಂದು ತಿಳಿದುಬಂದಿದೆ.
ಕುಟುಂಬದಲ್ಲಿ ಆಕ್ರಂದನ: ವಿಶ್ವನಾಥ ಪೂಜಾರಿ ಅವರಿಗೆ ಇಬ್ಬರು ಗಂಡು ಮಕ್ಕಳಿದ್ದು, ದುಡಿಯುವ ಕೈಯಾಗಿದ್ದ ಮಗನನ್ನು ಕಳೆದುಕೊಂಡ ಕುಟುಂಬದ ಆಕ್ರಂದನ ಮುಗಿಲು ಮುಟ್ಟಿದೆ. ಜಾತ್ರೆಯ ಸಂಭ್ರಮದಲ್ಲಿದ್ದ ಪುತ್ತೂರು ಸುತ್ತಮುತ್ತ ಈ ಘಟನೆಯಿಂದಾಗಿ ಶೋಕದ ಛಾಯೆ ಆವರಿಸಿದೆ.
ಮೃತ ದೇಹವನ್ನು ಪುತ್ತೂರು ಸರಕಾರಿ ಆಸ್ಪತ್ರೆಯ ಶವಾಗಾರದಲ್ಲಿರಿಸಲಾಗಿದೆ. ಘಟನಾ ಸ್ಥಳಕ್ಕೆ ಸಂಚಾರಿ ಪೊಲೀಸ್ ಠಾಣಾ ಪೊಲೀಸರು ಭೇಟಿ ನೀಡಿದ್ದಾರೆ. ಈ ಬಗ್ಗೆ ಪ್ರಕರಣ ದಾಖಲಿಸಿಕೊಂಡು ತನಿಖೆ ನಡೆಸುತ್ತಿದ್ದಾರೆ.

ಅಪಘಾತದಲ್ಲಿ ಬೆಳ್ಳಿಪ್ಪಾಡಿ ನಿವಾಸಿ ಬೈಕ್ ಸವಾರ ಬೆಳ್ಳಿಪ್ಪಾಡಿ ಧನು ಎಂಬವರು ಮೃತಪಟ್ಟಿದ್ದುಆಸ್ಪತ್ರೆಗೆ ಭೇಟಿ ನೀಡಿದ ಶಾಸಕ ಅಶೋಕ್ ರೈ ಕುಟುಂಬಕ್ಕೆ ಸಾಂತ್ವಾನ ನೀಡಿದರು


accident
ಕುಕ್ಕಾಜೆ ಜಂಕ್ಷನ್ ಬಳಿ ಆಕ್ಸಿಡೆಂಟ್.. ಬೈಕ್ ಸವಾರ ಸ್ಥಳದಲ್ಲೇ ದುರ್ಮರಣ..
ಬಂಟ್ವಾಳ: ಸಾಲೆತ್ತೂರು-ಮಾರ್ನಬೈಲು ಸಂಪರ್ಕ ರಸ್ತೆಯ ಕುಕ್ಕಾಜೆ ಜಂಕ್ಷನ್ ಬಳಿ ಇಂದು ಸಂಭವಿಸಿದ ಭೀಕರ ರಸ್ತೆ ಅಪಘಾತದಲ್ಲಿ ಬೈಕ್ ಸವಾರ ಸ್ಥಳದಲ್ಲೇ ಮೃತಪಟ್ಟಿದ್ದಾರೆ.
ಇರಾ ಗ್ರಾಮದ ಕುಕ್ಕಾಜೆ ಬೈಲ್ ನಿವಾಸಿ, ಅಶೋಕ ಎಂಬವರ ಏಕೈಕ ಪುತ್ರ ಮನೀಶ್ (22) ಮೃತಪಟ್ಟ ದುರ್ದೈವಿ. ಇವರು ಮುಂಚಿಯಲ್ಲಿರುವ ವಿಕಾಸ್ ಶಾಮಿಯಾನ ಸಂಸ್ಥೆಯಲ್ಲಿ ಕಾರ್ಮಿಕರಾಗಿ ಕೆಲಸ ಮಾಡುತ್ತಿದ್ದರು ಎಂದು ತಿಳಿದುಬಂದಿದೆ.

ಘಟನೆಯ ವಿವರ: ಮನೀಶ್ ಅವರು ಸಾಲೆತ್ತೂರಿನಿಂದ ಕುಕ್ಕಾಜೆ ಕಡೆಗೆ ಬೈಕ್‌ನಲ್ಲಿ ತೆರಳುತ್ತಿದ್ದ ವೇಳೆ ಎದುರಿನಿಂದ ಬಂದ ಆಪೆ ರಿಕ್ಷಾ ಡಿಕ್ಕಿ ಹೊಡೆದಿದೆ. ಅಪಘಾತದ ತೀವ್ರತೆಗೆ ಬೈಕ್ ಸವಾರ ರಸ್ತೆಗೆ ಎಸೆಯಲ್ಪಟ್ಟು ಗಂಭೀರವಾಗಿ ಗಾಯಗೊಂಡಿದ್ದರು. ತಕ್ಷಣವೇ ಸ್ಥಳೀಯರು ಅಂಬ್ಯುಲೆನ್ಸ್ ಮೂಲಕ ಆಸ್ಪತ್ರೆಗೆ ಸಾಗಿಸಲು ಪ್ರಯತ್ನಿಸಿದರಾದರೂ, ಅವರು ದಾರಿ ಮಧ್ಯೆಯೇ ಕೊನೆಯುಸಿರೆಳೆದಿದ್ದಾರೆ.
ಘಟನಾ ಸ್ಥಳಕ್ಕೆ ಬಂಟ್ವಾಳ ಸಂಚಾರಿ ಠಾಣಾ ಪೊಲೀಸರು ಭೇಟಿ ನೀಡಿ ಪರಿಶೀಲನೆ ನಡೆಸುತ್ತಿದ್ದು, ಪ್ರಕರಣ ದಾಖಲಿಸಿಕೊಂಡಿದ್ದಾರೆ. ಮೃತ ಮನೀಶ್ ಅವರು ಕುಟುಂಬದ ಏಕೈಕ ಪುತ್ರನಾಗಿದ್ದು, ಮನೆಯ ಆಧಾರಸ್ತಂಭವಾಗಿದ್ದ ಯುವಕನ ಅಗಲಿಕೆಯಿಂದ ಕುಕ್ಕಾಜೆ ಪರಿಸರದಲ್ಲಿ ಶೋಕ ಮಡುಗಟ್ಟಿದೆ.
accident
ಕಲ್ಲಡ್ಕ ಬಳಿ ಭೀಕರ ಅಪಘಾತ: ಮಿನಿ ಟೆಂಪೋ ಹಾಗೂ ಸ್ವಿಫ್ಟ್ ಮುಖಾಮುಖಿ ಡಿಕ್ಕಿ
ವಿಟ್ಲ: ಕಲ್ಲಡ್ಕ-ವಿಟ್ಲ ರಸ್ತೆಯ ಕುಂಟಿಪಾಪು ಎಂಬಲ್ಲಿ ಮಂಗಳವಾರ ಮಧ್ಯಾಹ್ನ ಮಾರುತಿ ಸ್ವಿಫ್ಟ್ ಕಾರು ಹಾಗೂ ಮೀನು ಸಾಗಾಟದ ಮಿನಿ ಟೆಂಪೋ ನಡುವೆ ಸಂಭವಿಸಿದ ಭೀಕರ ರಸ್ತೆ ಅಪಘಾತದಲ್ಲಿ ಮೀನು ವ್ಯಾಪಾರಿಯೊಬ್ಬರು ಗಂಭೀರವಾಗಿ ಗಾಯಗೊಂಡಿದ್ದಾರೆ.

ಘಟನೆಯ ವಿವರ: ಕಲ್ಲಡ್ಕ ನಿವಾಸಿಯಾದ ಮೀನು ವ್ಯಾಪಾರಿ ಇಸಾಕ್ ಅವರು ಎಂದಿನಂತೆ ತಮ್ಮ ಮಿನಿ ಟೆಂಪೋದಲ್ಲಿ ಮೀನು ಮಾರಾಟ ಮುಗಿಸಿ ಕಲ್ಲಡ್ಕಕ್ಕೆ ಹಿಂತಿರುಗುತ್ತಿದ್ದರು. ಈ ವೇಳೆ ಎದುರಿನಿಂದ ವೇಗವಾಗಿ ಬಂದ ಮಾರುತಿ ಸ್ವಿಫ್ಟ್ ಕಾರು ಕುಂಟಿಪಾಪು ಎಂಬಲ್ಲಿ ಟೆಂಪೋಗೆ ಮುಖಾಮುಖಿ ಡಿಕ್ಕಿ ಹೊಡೆದಿದೆ.

ಗಂಭೀರ ಗಾಯ: ಅಪಘಾತದ ತೀವ್ರತೆಗೆ ಎರಡೂ ವಾಹನಗಳು ಪೂರ್ಣ ಪ್ರಮಾಣದಲ್ಲಿ ಜಖಂಗೊಂಡಿವೆ. ಘಟನೆಯಲ್ಲಿ ಮಿನಿ ಟೆಂಪೋ ಚಾಲಕ ಇಸಾಕ್ ಅವರ ಎರಡೂ ಕಾಲುಗಳಿಗೆ ಗಂಭೀರ ಸ್ವರೂಪದ ಗಾಯಗಳಾಗಿದ್ದು, ಅವರನ್ನು ಹೆಚ್ಚಿನ ಚಿಕಿತ್ಸೆಗಾಗಿ ಮಂಗಳೂರಿನ ಖಾಸಗಿ ಆಸ್ಪತ್ರೆಗೆ ದಾಖಲಿಸಲಾಗಿದೆ.
ಅಪ್ರಾಪ್ತರಿಂದ ಚಾಲನೆ? ಸ್ವಿಫ್ಟ್ ಕಾರಿನಲ್ಲಿದ್ದ ಇಬ್ಬರು ಬಾಲಕರಿಗೂ ಗಾಯಗಳಾಗಿದ್ದು, ಅವರನ್ನು ಸ್ಥಳೀಯ ಆಸ್ಪತ್ರೆಗೆ ದಾಖಲಿಸಲಾಗಿದೆ. ಕಾರನ್ನು ಚಲಾಯಿಸುತ್ತಿದ್ದವರು ಅಪ್ರಾಪ್ತ ವಯಸ್ಸಿನವರು ಎಂದು ಪ್ರತ್ಯಕ್ಷದರ್ಶಿಗಳು ಮಾಹಿತಿ ನೀಡಿದ್ದಾರೆ. ಘಟನಾ ಸ್ಥಳಕ್ಕೆ ವಿಟ್ಲ ಪೊಲೀಸರು ಭೇಟಿ ನೀಡಿ ಪರಿಶೀಲನೆ ನಡೆಸುತ್ತಿದ್ದಾರೆ.
-
crime3 weeks agoಧಾರ್ಮಿಕ ನಂಬಿಕೆಗೆ ಅವಮಾನ: ಕೊಡಗಿನ ಎಮ್ಮೆಮಾಡಿನಲ್ಲಿ ದೈವದ ವೇಷದಂತೆ ಧರಿಸಿ ಮದುಮಗನ ಅತಿರೇಕದ ವರ್ತನೆ!
-
crime2 months agoಅತ್ಯಾಚಾರ ಯತ್ನಕ್ಕೆ ತಡೆದ ಸೊಸೆಯ ಮುಖಕ್ಕೆ ಕಚ್ಚಿ ಕೊಲೆಗೆ ಯತ್ನಿಸಿದ ಮಾವ..ತಂದೆಯ ರಾಕ್ಷಸೀ ಕೃತ್ಯಕ್ಕೆ ಬೆಂಬಲಿಸಿದ ಗಂಡ..ಸುಳ್ಯ ಠಾಣಾ ವ್ಯಾಪ್ತಿಯಲ್ಲಿ ಅದೃಷ್ಟವಶಾತ್ ಬಚಾವಾದ ಸೊಸೆ..
-
Bantawala3 weeks agoವಿಟ್ಲದಲ್ಲಿ ನಡೆಯಿತೊಂದು ದೈವ ಕಾರಣಿಕ; ಪೊಲೀಸರ ಕಣ್ಣಿಗೆ ಮಣ್ಣೆರಚಿದರೂ ದೈವದ ದೃಷ್ಟಿಗೆ ತತ್ತರಿಸಿದ ದನಕಳ್ಳ..
-
Bantawala3 months agoನಾಗಬನ, ರಕ್ತೇಶ್ವರಿ ತಾಣ, ದೈವದೇವರ ಸಾನಿಧ್ಯ ದ್ವಂಸ ಗೊಳಿಸಿದ ಧರ್ಮದ್ರೋಹಿ ಕೃತ್ಯದ ವಿರುದ್ಧ ಭಕ್ತರ ಆಕ್ರೋಶ ; ನಾಶವಾದ ಸಾನಿಧ್ಯದಲ್ಲಿಯೇ ಸ್ವಾಮೀಜಿಯವರ ಮಾರ್ಗದರ್ಶನದಲ್ಲಿ ಕುಟುಂಬಸ್ತರು, ಸಾರ್ವಜನಿಕರ ಸಾಮೂಹಿಕ ಪ್ರಾರ್ಥನೆ
-
Dakshina Kannada4 months agoಶಾಸಕರ ಉಪಸ್ಥಿತಿಯಲ್ಲಿ ಪೊಲೀಸರ ನಿರಾಕರಣೆ ಮಧ್ಯೆಯೇ ಕೇಪುವಿನಲ್ಲಿ ನಡೆದ ಕೋಳಿಅಂಕ
-
Bantawala2 months agoಕುದ್ರಿಯ ತರವಾಡು ಮನೆಯಲ್ಲಿ ಸಂಕ್ರಮಣದಂದು ರಣಾಂಗಣ; ಅಧ್ಯಕ್ಷ, ಟ್ರಸ್ಟಿ ಮೇಲೆ ಮಾರಣಾಂತಿಕ ಹಲ್ಲೆ
-
Bantawala4 months agoವಿಟ್ಲದಲ್ಲಿ ಶಾರ್ಟ್ ಸರ್ಕ್ಯೂಟ್..ಶ್ರೀ ಎಲೆಕ್ಟ್ರಾನಿಕ್ಸ್ ,ಅಮಿತ್ ಹೋಟೆಲ್..ಸೇರಿ ಐದಾರು ಕಟ್ಟಡಗಳು ಸಂಪೂರ್ಣ ಬೆಂಕಿಗಾಹುತಿ..
-
Bantawala2 months agoವಿಟ್ಲ ಮೈತ್ರೇಯಿ ಗುರುಕುಲದ ವಿದ್ಯಾರ್ಥಿನಿ ವೈಗ ಲಕ್ಷ್ಮಿ(15) ಆತ್ಮಹತ್ಯೆ ? ; ಫೆ. 22ರಂದು ಗುರುಕುಲದಿಂದ ನಾಪತ್ತೆಯಾದ 10ನೇ ತರಗತಿ ವಿದ್ಯಾರ್ಥಿನಿ
