Connect with us

court

ಕಾಂಗ್ರೆಸ್ ಶಾಸಕ ವಿನಯ್ ಕುಲಕರ್ಣಿಗೆ ಜೀವಾವಧಿ ಶಿಕ್ಷೆ; ಯೋಗೀಶ್ ಗೌಡ ಕೊಲೆ ಪ್ರಕರಣ

Published

on

ಧಾರವಾಡ: ಜಿಲ್ಲಾ ಪಂಚಾಯತ್ ಮಾಜಿ ಸದಸ್ಯ ಯೋಗೀಶ್ ಗೌಡ ಕೊಲೆ ಪ್ರಕರಣಕ್ಕೆ ಸಂಬಂಧಿಸಿದಂತೆ ಜನಪ್ರತಿನಿಧಿಗಳ ವಿಶೇಷ ನ್ಯಾಯಾಲಯ ಮಹತ್ವದ ತೀರ್ಪು ಪ್ರಕಟಿಸಿದೆ. ಪ್ರಕರಣದ ಪ್ರಮುಖ ಆರೋಪಿ, ಕಾಂಗ್ರೆಸ್ ಶಾಸಕ ವಿನಯ್ ಕುಲಕರ್ಣಿ ಸೇರಿದಂತೆ 16 ಆರೋಪಿಗಳಿಗೆ ಜೀವಾವಧಿ ಶಿಕ್ಷೆ ಜೊತೆಗೆ 16ಲಕ್ಷ ರೂಪಾಯಿ ದಂಡ ವಿಧಿಸಿ ತೀರ್ಪು ನೀಡಿದೆ.

ತೀರ್ಪಿನ ಮುಖ್ಯಾಂಶಗಳು:

ವಿನಯ್ ಕುಲಕರ್ಣಿಗೆ ಜೀವಾವಧಿ: ಒಟ್ಟು 17 ಆರೋಪಿಗಳ ಪೈಕಿ 16 ಆರೋಪಿಗಳಿಗೆ ನ್ಯಾಯಾಲಯ ಜೀವಾವಧಿ ಶಿಕ್ಷೆ ವಿಧಿಸಿದೆ. ಇದರಲ್ಲಿ ಪ್ರಮುಖ ಆರೋಪಿ ಶಾಸಕ ವಿನಯ್ ಕುಲಕರ್ಣಿ ಕೂಡ ಸೇರಿದ್ದಾರೆ. ತೀರ್ಪು ಪ್ರಕಟವಾಗುತ್ತಿದ್ದಂತೆ ವಿನಯ್ ಕುಲಕರ್ಣಿ ಕಟಕಟೆಯಲ್ಲೇ ಬಿಕ್ಕಿ ಬಿಕ್ಕಿ ಕಣ್ಣೀರು ಹಾಕಿದ್ದಾರೆ.

ಪೊಲೀಸ್ ಅಧಿಕಾರಿಗೆ ಶಿಕ್ಷೆ: ಪ್ರಕರಣದಲ್ಲಿ ಭಾಗಿಯಾದ ಪೊಲೀಸ್ ಅಧಿಕಾರಿ ಚನ್ನಕೇಶವ ಅವರಿಗೆ 7 ವರ್ಷ ಕಠಿಣ ಸಜೆ ಹಾಗೂ ಮೂವತ್ತು ಸಾವಿರ ರೂಪಾಯಿ ದಂಡ ವಿಧಿಸಲಾಗಿದೆ. ರಾಜಕೀಯ ಧ್ವೇಷದಿಂದ ನಡೆದ ಕೊಲೆಯನ್ನು ಜಮೀನು ವಿವಾದಕ್ಕೆ ಸಂಬಂಧಿಸಿದಂತೆ ನಡೆದ ಕೊಲೆ ಎಂದು ಹೇಳಿ ತನಿಖೆಯ ಹಾದಿ ತಪ್ಪಿಸಿದ ಆರೋಪದ ಮೇಲೆ ಪೊಲೀಸ್ ಅಧಿಕಾರಿ ಸಂತೋಷ್ ಟಂಗರಿಕ ಅವರಿಗೆ 7 ವರ್ಷ ಕಠಿಣ ಸಜೆ ಮತ್ತು 30 ಸಾವಿರ ರೂ. ದಂಡ ವಿಧಿಸಲಾಗಿದೆ.

ಪರಿಹಾರ ಮೊತ್ತ: ಆರೋಪಿಗಳಿಗೆ ಒಟ್ಟು 16 ಲಕ್ಷ ರೂ. ದಂಡ ವಿಧಿಸಿದ್ದು, ಈ ಮೊತ್ತವನ್ನು ಮೃತ ಯೋಗೀಶ್ ಗೌಡ ಅವರ ಪುತ್ರರಿಗೆ ನೀಡುವಂತೆ ನ್ಯಾಯಾಲಯ ಆದೇಶಿಸಿದೆ.

ಜಿ.ಪಂ. ಮಾಜಿ ಸದಸ್ಯ ಯೋಗೀಶ್ ಗೌಡ ಕೊಲೆ ಪ್ರಕರಣ ರಾಜ್ಯಾದ್ಯಂತ ಭಾರೀ ಸಂಚಲನ ಮೂಡಿಸಿತ್ತು. ಜಮೀನು ವಿವಾದವೇ ಕೊಲೆಗೆ ಕಾರಣ ಎಂದು ಹೇಳಲಾಗುತ್ತಿದೆ. ತನಿಖೆ ವೇಳೆ ಪೊಲೀಸ್ ಅಧಿಕಾರಿಗಳು ಹಾದಿ ತಪ್ಪಿಸಲು ಯತ್ನಿಸಿದ್ದು ಕೂಡ ಬೆಳಕಿಗೆ ಬಂದಿತ್ತು.

ಜನಪ್ರತಿನಿಧಿಗಳ ವಿಶೇಷ ನ್ಯಾಯಾಲಯದ ಈ ತೀರ್ಪು ರಾಜಕೀಯ ವಲಯದಲ್ಲಿ ಭಾರೀ ಚರ್ಚೆಗೆ ಕಾರಣವಾಗಿದೆ.

ಮುಂದಕ್ಕೆ ಓದಲು ಇಲ್ಲಿ ಕ್ಲಿಕ್‌ ಮಾಡಿ
Advertisement

Belthangady

ಬೆಳ್ತಂಗಡಿ: ಗಾಂಜಾ ಮಾರಾಟ ಯತ್ನ ಪ್ರಕರಣ; ಆರೋಪಿಗೆ 5 ವರ್ಷ ಕಠಿಣ ಜೈಲು ಶಿಕ್ಷೆ ಹಾಗೂ ದಂಡ ವಿಧಿಸಿದ ಮಂಗಳೂರು ನ್ಯಾಯಾಲಯ

Published

on

ಮಂಗಳೂರು: ಸುಮಾರು 17 ವರ್ಷಗಳ ಹಿಂದೆ ಬೆಳ್ತಂಗಡಿ ತಾಲೂಕಿನ ಉಜಿರೆಯಲ್ಲಿ ನಿಷೇಧಿತ ಮಾದಕ ವಸ್ತು ಗಾಂಜಾ ಮಾರಾಟಕ್ಕೆ ಯತ್ನಿಸಿದ ಪ್ರಕರಣಕ್ಕೆ ಸಂಬಂಧಿಸಿದಂತೆ, ಆರೋಪಿಗೆ ಮಂಗಳೂರಿನ ನ್ಯಾಯಾಲಯವು ಜೈಲು ಶಿಕ್ಷೆ ಹಾಗೂ ದಂಡ ವಿಧಿಸಿ ತೀರ್ಪು ನೀಡಿದೆ.

ಪ್ರಕರಣದ ಹಿನ್ನೆಲೆ:

ದಿನಾಂಕ 08/03/2009 ರಂದು ಬೆಳ್ತಂಗಡಿಯ ಉಜಿರೆ ರಥಬೀದಿ ಎಂಬಲ್ಲಿ ಅಂದಾಜು 1.500 ಕಿ.ಗ್ರಾಂ ತೂಕದ (ಅಂದಾಜು ಮೌಲ್ಯ 50,000 ರೂ.) ನಿಷೇಧಿತ ಗಾಂಜಾವನ್ನು ಮಾರಾಟ ಮಾಡಲು ಯತ್ನಿಸುತ್ತಿದ್ದ ವೇಳೆ ಬೆಳ್ತಂಗಡಿ ನಿವಾಸಿ ಟಿ.ಇ ಜೋಸೆಫ್ (42) ಎಂಬಾತನನ್ನು ಪೊಲೀಸರು ಬಂಧಿಸಿದ್ದರು. ಈ ಬಗ್ಗೆ ಬೆಳ್ತಂಗಡಿ ಪೊಲೀಸ್ ಠಾಣೆಯಲ್ಲಿ ಅ.ಕ್ರ 60/09, ಕಲಂ: 8(ಸಿ) ಜೊತೆಗೆ 20(ಬಿ) ಎನ್.ಡಿ.ಪಿ.ಎಸ್. (NDPS) ಕಾಯಿದೆಯಡಿ ಪ್ರಕರಣ ದಾಖಲಾಗಿತ್ತು.

ಪ್ರಕರಣದ ಸುದೀರ್ಘ ವಿಚಾರಣೆ ನಡೆಸಿದ ಮಂಗಳೂರಿನ ಜಿಲ್ಲಾ ವಿಶೇಷ ಪ್ರಧಾನ ಮತ್ತು ಸತ್ರ ನ್ಯಾಯಾಲಯದ ಮಾನ್ಯ ನ್ಯಾಯಧೀಶರಾದ ಶ್ರೀ ಬಸವರಾಜ್ ರವರು, ಆರೋಪಿ ಟಿ.ಇ ಜೋಸೆಫ್ ತಪ್ಪಿತಸ್ಥನೆಂದು ತೀರ್ಮಾನಿಸಿ ದಿನಾಂಕ 16/04/2026 ರಂದು ಶಿಕ್ಷೆಯ ಪ್ರಮಾಣವನ್ನು ಪ್ರಕಟಿಸಿದ್ದಾರೆ.

ವಿಧಿಸಲಾದ ಶಿಕ್ಷೆಯ ವಿವರಗಳು:

NDPS ಕಾಯ್ದೆಯ ಸೆಕ್ಷನ್ 8(c) ಮತ್ತು 20(b)(ii)(B) ಅಡಿಯಲ್ಲಿ: 5 ವರ್ಷಗಳ ಕಠಿಣ ಜೈಲು ಶಿಕ್ಷೆ ಹಾಗೂ 50,000 ರೂ. ದಂಡ ವಿಧಿಸಲಾಗಿದೆ. ದಂಡ ಪಾವತಿಸಲು ವಿಫಲವಾದರೆ ಹೆಚ್ಚುವರಿ 2 ತಿಂಗಳ ಕಠಿಣ ಜೈಲು ಶಿಕ್ಷೆ ಅನುಭವಿಸಬೇಕಾಗುತ್ತದೆ. NDPS ಕಾಯ್ದೆಯ ಸೆಕ್ಷನ್ 32-B(f) ಅಡಿಯಲ್ಲಿ: 1 ವರ್ಷದ ಅವಧಿಯ ಕಠಿಣ ಜೈಲು ಶಿಕ್ಷೆಯನ್ನು ನ್ಯಾಯಾಲಯ ವಿಧಿಸಿದೆ.

    ತನಿಖೆ ಮತ್ತು ವಾದ ಮಂಡನೆ:

    ಅಂದಿನ ಬೆಳ್ತಂಗಡಿ ಠಾಣಾ ಪೊಲೀಸ್ ಉಪನಿರೀಕ್ಷಕರಾಗಿದ್ದ ಬಿ.ಜಿ. ಸುಬ್ಬಾಪುರ್ ಮಠ್ ರವರು ಈ ಪ್ರಕರಣದ ತನಿಖೆ ನಡೆಸಿ, ಅಗತ್ಯ ಸಾಕ್ಷ್ಯಾಧಾರಗಳನ್ನು ಕಲೆಹಾಕಿ ನ್ಯಾಯಾಲಯಕ್ಕೆ ದೋಷಾರೋಪಣಾ ಪಟ್ಟಿ ಸಲ್ಲಿಸಿದ್ದರು. ಸರ್ಕಾರದ ಪರವಾಗಿ ಅಭಿಯೋಜಕರಾದ ಶ್ರೀಮತಿ ಜುಡಿತ್ ಓಲ್ಗಾ ಮಾರ್ಗರೇಟ್ ಕ್ರಸ್ತಾ ರವರು ಸಮರ್ಥವಾಗಿ ವಾದ ಮಂಡಿಸಿ ಆರೋಪದ ಮೇಲಿನ ದೋಷ ಸಾಬೀತುಪಡಿಸುವಲ್ಲಿ ಯಶಸ್ವಿಯಾಗಿದ್ದಾರೆ.

    ಮಾದಕ ವಸ್ತುಗಳ ಮಾರಾಟ ಜಾಲದ ವಿರುದ್ಧ ಪೊಲೀಸರ ಈ ಯಶಸ್ವಿ ತನಿಖೆ ಮತ್ತು ನ್ಯಾಯಾಲಯದ ಕಠಿಣ ತೀರ್ಪು ಸಮಾಜಕ್ಕೆ ಪ್ರಬಲ ಸಂದೇಶ ರವಾನಿಸಿದೆ.

    Continue Reading

    Bantawala

    ನೇರಳಕಟ್ಟೆ ಸಹಕಾರಿ ಸಂಘದ ಅಧ್ಯಕ್ಷರು ಹಾಗೂ ಸಿಬ್ಬಂದಿ ಮೇಲಿನ ದೂರಿಗೆ ಹೈಕೋರ್ಟ್ ಮಧ್ಯಂತರ ತಡೆಯಾಜ್ಞೆ

    Published

    on

    ವಿಟ್ಲ: ನೇರಳಕಟ್ಟೆ ಪ್ರಾಥಮಿಕ ಕೃಷಿ ಪತ್ತಿನ ಸಹಕಾರಿ ಸಂಘದ ಅಧ್ಯಕ್ಷರು ಹಾಗೂ ಅಧಿಕಾರಿಗಳ ವಿರುದ್ಧ ವಿಟ್ಲ ಪೊಲೀಸ್ ಠಾಣೆಯಲ್ಲಿ ದಾಖಲಾಗಿದ್ದ ಜಾತಿ ನಿಂದನೆ ಪ್ರಕರಣಕ್ಕೆ ಸಂಬಂಧಿಸಿದಂತೆ ಮಾನ್ಯ ಉಚ್ಚ ನ್ಯಾಯಾಲಯವು (High Court) ತಡೆಯಾಜ್ಞೆ ನೀಡಿ ಆದೇಶಿಸಿದೆ.

    ಪ್ರಕರಣದ ಹಿನ್ನೆಲೆ:

    ಬಂಟ್ವಾಳ ತಾಲೂಕಿನ ನೇರಳಕಟ್ಟೆ ಪ್ರಾಥಮಿಕ ಕೃಷಿ ಪತ್ತಿನ ಸಹಕಾರ ಸಂಘದ ಮಾಣಿ ಶಾಖೆಯ ಸಿಬ್ಬಂದಿ, ನೆಟ್ಟಮುತ್ತೂರು ನಿವಾಸಿ ಸೇಸಮ್ಮ (47 ವರ್ಷ) ಎಂಬುವವರು ಸಂಘದ ಪದಾಧಿಕಾರಿಗಳ ವಿರುದ್ಧ ದೂರು ನೀಡಿದ್ದರು. ಈ ದೂರಿನ ಆಧಾರದ ಮೇಲೆ ಸಂಘದ ಅಧ್ಯಕ್ಷರಾದ ಪುಷ್ಪರಾಜ್ ಚೌಟ, ಮುಖ್ಯ ಕಾರ್ಯನಿರ್ವಹಣಾಧಿಕಾರಿ ಯಶೋಧ ಹಾಗೂ ಪ್ರಭಾರ ಶಾಖಾ ವ್ಯವಸ್ಥಾಪಕ ಯತೀಶ್ ಡಿ. ಗೌಡ ಅವರ ವಿರುದ್ಧ ವಿಟ್ಲ ಪೊಲೀಸ್ ಠಾಣೆಯಲ್ಲಿ ಪ್ರಕರಣ ಸಂಖ್ಯೆ 88/2026 ರಂತೆ ಜಾತಿ ನಿಂದನೆ ಮೊಕದ್ದಮೆ ದಾಖಲಾಗಿತ್ತು.

    ಹೈಕೋರ್ಟ್ ಮೆಟ್ಟಿಲೇರಿದ ಆರೋಪಿಗಳು:

    ತಮ್ಮ ವಿರುದ್ಧ ದಾಖಲಾದ ಎಫ್‌ಐಆರ್ ಹಾಗೂ ತನಿಖಾ ಪ್ರಕ್ರಿಯೆಯನ್ನು ರದ್ದುಗೊಳಿಸುವಂತೆ ಕೋರಿ ಆರೋಪಿಗಳು ಹೈಕೋರ್ಟ್‌ನಲ್ಲಿ ರಿಟ್ ಅರ್ಜಿಯನ್ನು ಸಲ್ಲಿಸಿದ್ದರು. ಅರ್ಜಿಯ ವಿಚಾರಣೆ ನಡೆಸಿದ ನ್ಯಾಯಾಲಯವು, ಪ್ರಕರಣದ ಮುಂದಿನ ತನಿಖೆ ಹಾಗೂ ವಿಚಾರಣೆಗೆ ಮಧ್ಯಂತರ ತಡೆಯಾಜ್ಞೆ ನೀಡಿದೆ.

    ನ್ಯಾಯಾಲಯದಲ್ಲಿ ವಾದ:

    ನೇರಳಕಟ್ಟೆ ಸಹಕಾರ ಸಂಘದ ಪದಾಧಿಕಾರಿಗಳ ಪರವಾಗಿ ಸುಪ್ರೀಂಕೋರ್ಟ್‌ನ ಹಿರಿಯ ನ್ಯಾಯವಾದಿ ಪಿ.ಪಿ. ಹೆಗ್ಡೆ ಅವರು ವಾದ ಮಂಡಿಸಿದ್ದರು. ವಾದವನ್ನು ಪುರಸ್ಕರಿಸಿದ ನ್ಯಾಯಾಲಯವು ಸದ್ಯಕ್ಕೆ ಈ ಪ್ರಕರಣದ ಕಾನೂನು ಪ್ರಕ್ರಿಯೆಗಳಿಗೆ ತಡೆ ನೀಡುವ ಮೂಲಕ ಸಂಘದ ಅಧ್ಯಕ್ಷರು ಹಾಗೂ ಸಿಬ್ಬಂದಿಗೆ ಸಮಾಧಾನ ತಂದಿದೆ.


    Continue Reading

    Belthangady

    ಇನ್ಸ್‌ಪೆಕ್ಟರ್ ಸಂದೇಶ್‌ಗೆ ಹೈಕೋರ್ಟ್ ಶಾಕ್: ಪ್ರಕರಣ ರದ್ದು ಕೋರಿದ್ದ ಅರ್ಜಿ ವಜಾ, ತನಿಖೆಗೆ ಗ್ರೀನ್ ಸಿಗ್ನಲ್

    Published

    on

    ಬೆಂಗಳೂರು: ಲೈಂಗಿಕ ದೌರ್ಜನ್ಯ ಹಾಗೂ ಹಣದ ವಹಿವಾಟಿನ ಆರೋಪ ಎದುರಿಸುತ್ತಿರುವ ಮೂಡಬಿದ್ರೆಯ ಅಮಾನತುಗೊಂಡ ಇನ್ಸ್‌ಪೆಕ್ಟರ್ ಸಂದೇಶ್ ಪಿ.ಜಿ. ಅವರಿಗೆ ಹೈಕೋರ್ಟ್‌ನಲ್ಲಿ ಭಾರಿ ಹಿನ್ನಡೆಯಾಗಿದೆ. ತಮ್ಮ ವಿರುದ್ಧ ದಾಖಲಾಗಿರುವ ಪ್ರಕರಣವನ್ನು ರದ್ದುಗೊಳಿಸುವಂತೆ ಕೋರಿ ಅವರು ಸಲ್ಲಿಸಿದ್ದ ಅರ್ಜಿಯನ್ನು ನ್ಯಾಯಾಲಯ ವಜಾಗೊಳಿಸಿದೆ.

    ನ್ಯಾಯಾಲಯದ ಪ್ರಮುಖ ನಡಾವಳಿಗಳು : ವೇಣೂರು ಪೊಲೀಸ್ ಠಾಣೆಯಲ್ಲಿ ದಾಖಲಾಗಿರುವ ಅತ್ಯಾಚಾರ ಪ್ರಕರಣವನ್ನು ರದ್ದುಗೊಳಿಸುವಂತೆ ಕೋರಿ ಇನ್ಸ್‌ಪೆಕ್ಟರ್ ಪಿ.ಜಿ. ಸಂದೇಶ್, ಉಡುಪಿಯ ಸ್ಮಿತಾ ಪೂರ್ಣಿಮಾ ಆರ್. ಮಲ್ಯ ಮತ್ತು ಮಂಗಳೂರಿನ ಸುನೀತಾ ಲೋಬೋ ಅವರು ಹೈಕೋರ್ಟ್‌ಗೆ ಅರ್ಜಿ ಸಲ್ಲಿಸಿದ್ದರು. ಈ ಅರ್ಜಿಯ ವಿಚಾರಣೆಯನ್ನು ನ್ಯಾಯಮೂರ್ತಿ ಎಂ. ನಾಗಪ್ರಸನ್ನ ಅವರ ಏಕಸದಸ್ಯ ಪೀಠ ಈ ಮಹತ್ವದ ಆದೇಶವನ್ನು ನೀಡಿದೆ. ಸಂದೇಶ್ ಅವರೊಂದಿಗೆ ಇತರ ಇಬ್ಬರು ಅರ್ಜಿದಾರರು ಸಲ್ಲಿಸಿದ್ದ ಮನವಿಯನ್ನೂ ನ್ಯಾಯಾಲಯ ತಿರಸ್ಕರಿಸಿದೆ. ಪ್ರಕರಣದ ಗಂಭೀರತೆಯನ್ನು ಪರಿಗಣಿಸಿರುವ ನ್ಯಾಯಾಧೀಶರು, ಆರೋಪಿ ಇನ್ಸ್‌ಪೆಕ್ಟರ್ ವಿರುದ್ಧ ತನಿಖೆ ಮುಂದುವರಿಸಲು ‘ಗ್ರೀನ್ ಸಿಗ್ನಲ್’ ನೀಡಿದ್ದಾರೆ “ಒಂದು ವೇಳೆ ಅರ್ಜಿದಾರರ ವಿರುದ್ಧ ದೋಷಾರೋಪ ಪಟ್ಟಿ (Charge sheet) ಸಲ್ಲಿಕೆಯಾದರೆ, ಅದನ್ನು ಇದೇ ನ್ಯಾಯಾಲಯದಲ್ಲಿ ಪ್ರಶ್ನಿಸಲು ಅರ್ಜಿದಾರರು ಸ್ವತಂತ್ರರಾಗಿದ್ದಾರೆ” ಎಂದು ನ್ಯಾಯಾಲಯವು ಸ್ಪಷ್ಟಪಡಿಸಿದೆ.

    ಪ್ರಕರಣಕ್ಕೆ ಸಂಬಂಧಿಸಿದಂತೆ ಕಟುವಾದ ಶಬ್ದಗಳಲ್ಲಿ ಎಚ್ಚರಿಕೆ ನೀಡಿರುವ ನ್ಯಾಯಾಲಯ, “ಒಬ್ಬ ಪೊಲೀಸ್ ಅಧಿಕಾರಿಯಾಗಿ ಈ ರೀತಿ ವರ್ತಿಸುವುದು ಸರಿಯಲ್ಲ” ಎಂದು ಹೇಳಿದೆ. ಶಾಲೆಯೊಂದರ ಮುಖ್ಯ ಶಿಕ್ಷಕಿಯ ಮೇಲೆ ನಿರಂತರ ಅತ್ಯಾಚಾರ ಎಸಗಿದ ಆರೋಪ ಎದುರಿಸುತ್ತಿರುವ ಮೂಡಬಿದಿರೆ ಪೊಲೀಸ್ ಇನ್ಸ್‌ಪೆಕ್ಟರ್ ಪಿ.ಜಿ. ಸಂದೇಶ್ ಅವರಿಗೆ ಹೈಕೋರ್ಟ್ ತೀವ್ರ ತರಾಟೆಗೆ ತೆಗೆದುಕೊಂಡಿದೆ.

    ಹಣದ ವಹಿವಾಟಿನ ಬಗ್ಗೆ ತನಿಖೆಗೆ ಸೂಚನೆ: ಪ್ರಕರಣದ ವಿಚಾರಣೆಯ ವೇಳೆ ಪೀಠವು ಮಹತ್ವದ ವೀಕ್ಷಣೆ ಮಾಡಿದ್ದು, “ಸಂತ್ರಸ್ತೆಯರೊಂದಿಗೆ ಹಣದ ವಹಿವಾಟು ನಡೆದಿರುವ ಸಾಧ್ಯತೆಗಳಿದ್ದರೆ, ಆ ಬಗ್ಗೆಯೂ ಸಮಗ್ರವಾಗಿ ತನಿಖೆಯಾಗಲಿ” ಎಂದು ತಿಳಿಸಿದೆ. ಈ ಆದೇಶವು ಪ್ರಸ್ತುತ ಸಿಐಡಿ (CID) ತನಿಖೆ ಎದುರಿಸುತ್ತಿರುವ ಸಂದೇಶ್‌ ಅವರಿಗೆ ದೊಡ್ಡ ಸಂಕಷ್ಟ ತಂದೊಡ್ಡಿದೆ.

    ಮೂಡಬಿದ್ರೆ ಪೊಲೀಸ್ ಠಾಣೆಯಲ್ಲಿ ಇನ್ಸ್‌ಪೆಕ್ಟರ್ ಆಗಿದ್ದ ಸಂದೇಶ್ ಪಿ.ಜಿ. ವಿರುದ್ಧ ಗಂಭೀರ ಆರೋಪಗಳು ಕೇಳಿಬಂದ ಹಿನ್ನೆಲೆಯಲ್ಲಿ ಅವರನ್ನು ಅಮಾನತುಗೊಳಿಸಲಾಗಿತ್ತು. ಪ್ರಸ್ತುತ ಈ ಪ್ರಕರಣದ ತನಿಖೆಯನ್ನು ಸಿಐಡಿ ನಡೆಸುತ್ತಿದ್ದು, ಹೈಕೋರ್ಟ್‌ನ ಈ ಇತ್ತೀಚಿನ ಆದೇಶವು ತನಿಖಾ ತಂಡಕ್ಕೆ ಮತ್ತಷ್ಟು ಬಲ ನೀಡಿದಂತಾಗಿದೆ.


    Continue Reading

    Trending

    Copyright © 2025 Deevatige

    error: Content is protected !!