Belthangady
ಬೆಳ್ತಂಗಡಿ: ಅಪ್ರಾಪ್ತ ಬಾಲಕಿ ಮೇಲೆ ಅತ್ಯಾಚಾರ – ಇಬ್ಬರು ಯುವಕರ ಬಂಧನ; ಮೇ 10ಕ್ಕೆ ಮದುವೆಯಾಗಬೇಕಿದ್ದ ಆರೋಪಿಯೂ ಜೈಲುಪಾಲು!
ಬೆಳ್ತಂಗಡಿ: ಧರ್ಮಸ್ಥಳ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ 15 ವರ್ಷದ ಅಪ್ರಾಪ್ತ ಬಾಲಕಿಯ ಮೇಲೆ ಅತ್ಯಾಚಾರವೆಸಗಿದ ಪ್ರಕರಣಕ್ಕೆ ಸಂಬಂಧಿಸಿದಂತೆ ಇಬ್ಬರು ಯುವಕರನ್ನು ಪೊಲೀಸರು ಬಂಧಿಸಿದ್ದಾರೆ. ಬಂಧಿತರಲ್ಲಿ ಓರ್ವ ಆರೋಪಿಗೆ ಮುಂದಿನ ತಿಂಗಳು ಮದುವೆ ನಿಶ್ಚಯವಾಗಿತ್ತು ಎಂಬ ಆಘಾತಕಾರಿ ಅಂಶ ಬೆಳಕಿಗೆ ಬಂದಿದೆ.
ಘಟನೆಯ ವಿವರ: ಏಪ್ರಿಲ್ 16 ರಂದು ಇಬ್ಬರು ಯುವಕರು ಅಪ್ರಾಪ್ತ ಬಾಲಕಿಯನ್ನು ಪುಸಲಾಯಿಸಿ ಎರ್ಮಾಯಿ ಫಾಲ್ಸ್ ಬಳಿಯ ಕಾಡಿಗೆ ಕರೆದೊಯ್ದು ಅತ್ಯಾಚಾರವೆಸಗಿದ್ದರು. ಈ ವಿಷಯವನ್ನು ಬಾಲಕಿಯು ಮನೆಯವರಿಗೆ ತಿಳಿಸಿದ್ದು, ಪೋಷಕರು ಏಪ್ರಿಲ್ 17 ರಂದು ಧರ್ಮಸ್ಥಳ ಪೊಲೀಸ್ ಠಾಣೆಯಲ್ಲಿ ದೂರು ದಾಖಲಿಸಿದ್ದರು. ದೂರಿನನ್ವಯ ಪೊಲೀಸರು ಪೋಕ್ಸೋ ಕಾಯ್ದೆಯಡಿ ಪ್ರಕರಣ ದಾಖಲಿಸಿಕೊಂಡು ತನಿಖೆ ಕೈಗೆತ್ತಿಕೊಂಡಿದ್ದರು.
ಬೆಳ್ತಂಗಡಿ ಉಪವಿಭಾಗದ ಡಿವೈಎಸ್ಪಿ ರೋಹಿಣಿ ಸಿ.ಕೆ. ಅವರ ಮಾರ್ಗದರ್ಶನದಲ್ಲಿ, ಬೆಳ್ತಂಗಡಿ ವೃತ್ತ ನಿರೀಕ್ಷಕ ರವಿ ಬಿ.ಎಸ್. ನೇತೃತ್ವದ ತಂಡ ಕಾರ್ಯಾಚರಣೆ ನಡೆಸಿ ಬೆಳ್ತಂಗಡಿ ತಾಲ್ಲೂಕು. ಕಡೂರುದ್ಯಾವರ ಗ್ರಾಮದ ಸುಮಂತ್ (28) ಮತ್ತು ಗಡಾಯಿಕಲ್ಲು ಗ್ರಾಮದ ನವನೀತ್ (26) ಎಂಬ ಇಬ್ಬರು ಆರೋಪಿಗಳನ್ನು ಏಪ್ರಿಲ್ 18ರ ಸಂಜೆ ಬಂಧಿಸಿದ್ದಾರೆ.
ನವ ವರನಾಗಬೇಕಿದ್ದವ ಈಗ ಕಂಬಿ ಹಿಂದೆ: ಬಂಧಿತ ಆರೋಪಿಗಳ ಪೈಕಿ ಸುಮಂತ್ ಎಂಬಾತನಿಗೆ ಮೇ 10 ರಂದು ವಿವಾಹ ಕಾರ್ಯಕ್ರಮ ನಿಗದಿಯಾಗಿತ್ತು. ಮದುವೆಯ ಸಂಭ್ರಮದಲ್ಲಿದ್ದ ಯುವಕ ಈಗ ಹೇಯ ಕೃತ್ಯವೆಸಗಿ ಜೈಲು ಪಾಲಾಗಿದ್ದಾನೆ.
ಧರ್ಮಸ್ಥಳ ಪೊಲೀಸ್ ಠಾಣೆಯ ಸಬ್ ಇನ್ಸ್ಪೆಕ್ಟರ್ ಸಮರ್ಥ್ ಆರ್. ಗಾಣಿಗೇರ್ ಮತ್ತು ತಂಡ ಈ ಯಶಸ್ವಿ ಕಾರ್ಯಾಚರಣೆ ನಡೆಸಿದ್ದು, ಆರೋಪಿಗಳ ವಿಚಾರಣೆ ಮುಂದುವರಿದಿದೆ.

Belthangady
ನೆಲ್ಯಾಡಿ: ಕಾಡಿನ ಮಧ್ಯೆ ವ್ಯಕ್ತಿ ವಿಷ ಸೇವಿಸಿ ಆತ್ಮಹತ್ಯೆ
ನೆಲ್ಯಾಡಿ ಸಮೀಪದ ಪೆರಿಯಶಾಂತಿ-ಇಚಿಲಂಪಾಡಿ ರಸ್ತೆಯ ಮಧ್ಯೆ ಇರುವ ಕಾಡಿನೊಳಗೆ ವ್ಯಕ್ತಿಯೊಬ್ಬರು ವಿಷ ಸೇವಿಸಿ ಆತ್ಮಹತ್ಯೆ ಮಾಡಿಕೊಂಡಿರುವ ಧಾರುಣ ಘಟನೆ ಭಾನುವಾರ ಬೆಳಿಗ್ಗೆ ಬೆಳಕಿಗೆ ಬಂದಿದೆ. ಮೃತರನ್ನು ಇಚಿಲಂಪಾಡಿ ಗ್ರಾಮದ ಬಿಜೀರು ನಿವಾಸಿ ಎಸ್. ಸಜೀವ (46) ಎಂದು ಗುರುತಿಸಲಾಗಿದೆ.

ಶನಿವಾರ ಮನೆಯಿಂದ ಬೈಕ್ನಲ್ಲಿ ಹೊರಟಿದ್ದ ಸಂಜೀವ ಅವರು ಸಂಜೆಯಾದರೂ ಮನೆಗೆ ವಾಪಸ್ ಆಗದಿದ್ದಾಗ ಆತಂಕಗೊಂಡ ಕುಟುಂಬಸ್ಥರು ವಿವಿಧ ಕಡೆಗಳಲ್ಲಿ ಹುಡುಕಾಟ ನಡೆಸಿದ್ದರು. ಭಾನುವಾರ ಬೆಳಿಗ್ಗೆ ರಸ್ತೆ ಬದಿಯಲ್ಲಿ ಅವರ ಬೈಕ್ ಪತ್ತೆಯಾದ ಹಿನ್ನೆಲೆಯಲ್ಲಿ ಕುಟುಂಬಸ್ಥರು ಸುತ್ತಮುತ್ತಲಿನ ಕಾಡಿನಲ್ಲಿ ಶೋಧ ನಡೆಸಿದಾಗ, ಮರದ ಬುಡದಲ್ಲಿ ಸಜೀವ ಅವರ ಮೃತದೇಹ ಪತ್ತೆಯಾಗಿದೆ.
ಘಟನಾ ಸ್ಥಳದಲ್ಲಿ ಮದ್ಯದ ಬಾಟಲಿಗಳು ಕಂಡುಬಂದಿದ್ದು, ಅವರು ಮೊದಲು ಮದ್ಯ ಸೇವಿಸಿ ಬಳಿಕ ವಿಷ ಸೇವಿಸಿ ಆತ್ಮಹತ್ಯೆ ಮಾಡಿಕೊಂಡಿರುವ ಸಾಧ್ಯತೆ ಮೇಲ್ನೋಟಕ್ಕೆ ವ್ಯಕ್ತವಾಗಿದೆ. ಮೃತರಿಗೆ ಇಬ್ಬರು ಪುತ್ರಿಯರಿದ್ದಾರೆ.
ಘಟನಾ ಸ್ಥಳಕ್ಕೆ ನೆಲ್ಯಾಡಿ ಹೊರಠಾಣೆ ಪೊಲೀಸರು ಭೇಟಿ ನೀಡಿ ಪರಿಶೀಲನೆ ನಡೆಸಿದ್ದು, ಪ್ರಕರಣ ದಾಖಲಿಸಿಕೊಂಡು ಮುಂದಿನ ತನಿಖೆ ಕೈಗೊಂಡಿದ್ದಾರೆ.

Belthangady
ಬೆಳ್ತಂಗಡಿ: ಗಾಂಜಾ ಮಾರಾಟ ಯತ್ನ ಪ್ರಕರಣ; ಆರೋಪಿಗೆ 5 ವರ್ಷ ಕಠಿಣ ಜೈಲು ಶಿಕ್ಷೆ ಹಾಗೂ ದಂಡ ವಿಧಿಸಿದ ಮಂಗಳೂರು ನ್ಯಾಯಾಲಯ
ಮಂಗಳೂರು: ಸುಮಾರು 17 ವರ್ಷಗಳ ಹಿಂದೆ ಬೆಳ್ತಂಗಡಿ ತಾಲೂಕಿನ ಉಜಿರೆಯಲ್ಲಿ ನಿಷೇಧಿತ ಮಾದಕ ವಸ್ತು ಗಾಂಜಾ ಮಾರಾಟಕ್ಕೆ ಯತ್ನಿಸಿದ ಪ್ರಕರಣಕ್ಕೆ ಸಂಬಂಧಿಸಿದಂತೆ, ಆರೋಪಿಗೆ ಮಂಗಳೂರಿನ ನ್ಯಾಯಾಲಯವು ಜೈಲು ಶಿಕ್ಷೆ ಹಾಗೂ ದಂಡ ವಿಧಿಸಿ ತೀರ್ಪು ನೀಡಿದೆ.
ಪ್ರಕರಣದ ಹಿನ್ನೆಲೆ:
ದಿನಾಂಕ 08/03/2009 ರಂದು ಬೆಳ್ತಂಗಡಿಯ ಉಜಿರೆ ರಥಬೀದಿ ಎಂಬಲ್ಲಿ ಅಂದಾಜು 1.500 ಕಿ.ಗ್ರಾಂ ತೂಕದ (ಅಂದಾಜು ಮೌಲ್ಯ 50,000 ರೂ.) ನಿಷೇಧಿತ ಗಾಂಜಾವನ್ನು ಮಾರಾಟ ಮಾಡಲು ಯತ್ನಿಸುತ್ತಿದ್ದ ವೇಳೆ ಬೆಳ್ತಂಗಡಿ ನಿವಾಸಿ ಟಿ.ಇ ಜೋಸೆಫ್ (42) ಎಂಬಾತನನ್ನು ಪೊಲೀಸರು ಬಂಧಿಸಿದ್ದರು. ಈ ಬಗ್ಗೆ ಬೆಳ್ತಂಗಡಿ ಪೊಲೀಸ್ ಠಾಣೆಯಲ್ಲಿ ಅ.ಕ್ರ 60/09, ಕಲಂ: 8(ಸಿ) ಜೊತೆಗೆ 20(ಬಿ) ಎನ್.ಡಿ.ಪಿ.ಎಸ್. (NDPS) ಕಾಯಿದೆಯಡಿ ಪ್ರಕರಣ ದಾಖಲಾಗಿತ್ತು.
ಪ್ರಕರಣದ ಸುದೀರ್ಘ ವಿಚಾರಣೆ ನಡೆಸಿದ ಮಂಗಳೂರಿನ ಜಿಲ್ಲಾ ವಿಶೇಷ ಪ್ರಧಾನ ಮತ್ತು ಸತ್ರ ನ್ಯಾಯಾಲಯದ ಮಾನ್ಯ ನ್ಯಾಯಧೀಶರಾದ ಶ್ರೀ ಬಸವರಾಜ್ ರವರು, ಆರೋಪಿ ಟಿ.ಇ ಜೋಸೆಫ್ ತಪ್ಪಿತಸ್ಥನೆಂದು ತೀರ್ಮಾನಿಸಿ ದಿನಾಂಕ 16/04/2026 ರಂದು ಶಿಕ್ಷೆಯ ಪ್ರಮಾಣವನ್ನು ಪ್ರಕಟಿಸಿದ್ದಾರೆ.
ವಿಧಿಸಲಾದ ಶಿಕ್ಷೆಯ ವಿವರಗಳು:
NDPS ಕಾಯ್ದೆಯ ಸೆಕ್ಷನ್ 8(c) ಮತ್ತು 20(b)(ii)(B) ಅಡಿಯಲ್ಲಿ: 5 ವರ್ಷಗಳ ಕಠಿಣ ಜೈಲು ಶಿಕ್ಷೆ ಹಾಗೂ 50,000 ರೂ. ದಂಡ ವಿಧಿಸಲಾಗಿದೆ. ದಂಡ ಪಾವತಿಸಲು ವಿಫಲವಾದರೆ ಹೆಚ್ಚುವರಿ 2 ತಿಂಗಳ ಕಠಿಣ ಜೈಲು ಶಿಕ್ಷೆ ಅನುಭವಿಸಬೇಕಾಗುತ್ತದೆ. NDPS ಕಾಯ್ದೆಯ ಸೆಕ್ಷನ್ 32-B(f) ಅಡಿಯಲ್ಲಿ: 1 ವರ್ಷದ ಅವಧಿಯ ಕಠಿಣ ಜೈಲು ಶಿಕ್ಷೆಯನ್ನು ನ್ಯಾಯಾಲಯ ವಿಧಿಸಿದೆ.
ತನಿಖೆ ಮತ್ತು ವಾದ ಮಂಡನೆ:
ಅಂದಿನ ಬೆಳ್ತಂಗಡಿ ಠಾಣಾ ಪೊಲೀಸ್ ಉಪನಿರೀಕ್ಷಕರಾಗಿದ್ದ ಬಿ.ಜಿ. ಸುಬ್ಬಾಪುರ್ ಮಠ್ ರವರು ಈ ಪ್ರಕರಣದ ತನಿಖೆ ನಡೆಸಿ, ಅಗತ್ಯ ಸಾಕ್ಷ್ಯಾಧಾರಗಳನ್ನು ಕಲೆಹಾಕಿ ನ್ಯಾಯಾಲಯಕ್ಕೆ ದೋಷಾರೋಪಣಾ ಪಟ್ಟಿ ಸಲ್ಲಿಸಿದ್ದರು. ಸರ್ಕಾರದ ಪರವಾಗಿ ಅಭಿಯೋಜಕರಾದ ಶ್ರೀಮತಿ ಜುಡಿತ್ ಓಲ್ಗಾ ಮಾರ್ಗರೇಟ್ ಕ್ರಸ್ತಾ ರವರು ಸಮರ್ಥವಾಗಿ ವಾದ ಮಂಡಿಸಿ ಆರೋಪದ ಮೇಲಿನ ದೋಷ ಸಾಬೀತುಪಡಿಸುವಲ್ಲಿ ಯಶಸ್ವಿಯಾಗಿದ್ದಾರೆ.
ಮಾದಕ ವಸ್ತುಗಳ ಮಾರಾಟ ಜಾಲದ ವಿರುದ್ಧ ಪೊಲೀಸರ ಈ ಯಶಸ್ವಿ ತನಿಖೆ ಮತ್ತು ನ್ಯಾಯಾಲಯದ ಕಠಿಣ ತೀರ್ಪು ಸಮಾಜಕ್ಕೆ ಪ್ರಬಲ ಸಂದೇಶ ರವಾನಿಸಿದೆ.


Belthangady
ಇನ್ಸ್ಪೆಕ್ಟರ್ ಸಂದೇಶ್ಗೆ ಹೈಕೋರ್ಟ್ ಶಾಕ್: ಪ್ರಕರಣ ರದ್ದು ಕೋರಿದ್ದ ಅರ್ಜಿ ವಜಾ, ತನಿಖೆಗೆ ಗ್ರೀನ್ ಸಿಗ್ನಲ್
ಬೆಂಗಳೂರು: ಲೈಂಗಿಕ ದೌರ್ಜನ್ಯ ಹಾಗೂ ಹಣದ ವಹಿವಾಟಿನ ಆರೋಪ ಎದುರಿಸುತ್ತಿರುವ ಮೂಡಬಿದ್ರೆಯ ಅಮಾನತುಗೊಂಡ ಇನ್ಸ್ಪೆಕ್ಟರ್ ಸಂದೇಶ್ ಪಿ.ಜಿ. ಅವರಿಗೆ ಹೈಕೋರ್ಟ್ನಲ್ಲಿ ಭಾರಿ ಹಿನ್ನಡೆಯಾಗಿದೆ. ತಮ್ಮ ವಿರುದ್ಧ ದಾಖಲಾಗಿರುವ ಪ್ರಕರಣವನ್ನು ರದ್ದುಗೊಳಿಸುವಂತೆ ಕೋರಿ ಅವರು ಸಲ್ಲಿಸಿದ್ದ ಅರ್ಜಿಯನ್ನು ನ್ಯಾಯಾಲಯ ವಜಾಗೊಳಿಸಿದೆ.
ನ್ಯಾಯಾಲಯದ ಪ್ರಮುಖ ನಡಾವಳಿಗಳು : ವೇಣೂರು ಪೊಲೀಸ್ ಠಾಣೆಯಲ್ಲಿ ದಾಖಲಾಗಿರುವ ಅತ್ಯಾಚಾರ ಪ್ರಕರಣವನ್ನು ರದ್ದುಗೊಳಿಸುವಂತೆ ಕೋರಿ ಇನ್ಸ್ಪೆಕ್ಟರ್ ಪಿ.ಜಿ. ಸಂದೇಶ್, ಉಡುಪಿಯ ಸ್ಮಿತಾ ಪೂರ್ಣಿಮಾ ಆರ್. ಮಲ್ಯ ಮತ್ತು ಮಂಗಳೂರಿನ ಸುನೀತಾ ಲೋಬೋ ಅವರು ಹೈಕೋರ್ಟ್ಗೆ ಅರ್ಜಿ ಸಲ್ಲಿಸಿದ್ದರು. ಈ ಅರ್ಜಿಯ ವಿಚಾರಣೆಯನ್ನು ನ್ಯಾಯಮೂರ್ತಿ ಎಂ. ನಾಗಪ್ರಸನ್ನ ಅವರ ಏಕಸದಸ್ಯ ಪೀಠ ಈ ಮಹತ್ವದ ಆದೇಶವನ್ನು ನೀಡಿದೆ. ಸಂದೇಶ್ ಅವರೊಂದಿಗೆ ಇತರ ಇಬ್ಬರು ಅರ್ಜಿದಾರರು ಸಲ್ಲಿಸಿದ್ದ ಮನವಿಯನ್ನೂ ನ್ಯಾಯಾಲಯ ತಿರಸ್ಕರಿಸಿದೆ. ಪ್ರಕರಣದ ಗಂಭೀರತೆಯನ್ನು ಪರಿಗಣಿಸಿರುವ ನ್ಯಾಯಾಧೀಶರು, ಆರೋಪಿ ಇನ್ಸ್ಪೆಕ್ಟರ್ ವಿರುದ್ಧ ತನಿಖೆ ಮುಂದುವರಿಸಲು ‘ಗ್ರೀನ್ ಸಿಗ್ನಲ್’ ನೀಡಿದ್ದಾರೆ “ಒಂದು ವೇಳೆ ಅರ್ಜಿದಾರರ ವಿರುದ್ಧ ದೋಷಾರೋಪ ಪಟ್ಟಿ (Charge sheet) ಸಲ್ಲಿಕೆಯಾದರೆ, ಅದನ್ನು ಇದೇ ನ್ಯಾಯಾಲಯದಲ್ಲಿ ಪ್ರಶ್ನಿಸಲು ಅರ್ಜಿದಾರರು ಸ್ವತಂತ್ರರಾಗಿದ್ದಾರೆ” ಎಂದು ನ್ಯಾಯಾಲಯವು ಸ್ಪಷ್ಟಪಡಿಸಿದೆ.
ಪ್ರಕರಣಕ್ಕೆ ಸಂಬಂಧಿಸಿದಂತೆ ಕಟುವಾದ ಶಬ್ದಗಳಲ್ಲಿ ಎಚ್ಚರಿಕೆ ನೀಡಿರುವ ನ್ಯಾಯಾಲಯ, “ಒಬ್ಬ ಪೊಲೀಸ್ ಅಧಿಕಾರಿಯಾಗಿ ಈ ರೀತಿ ವರ್ತಿಸುವುದು ಸರಿಯಲ್ಲ” ಎಂದು ಹೇಳಿದೆ. ಶಾಲೆಯೊಂದರ ಮುಖ್ಯ ಶಿಕ್ಷಕಿಯ ಮೇಲೆ ನಿರಂತರ ಅತ್ಯಾಚಾರ ಎಸಗಿದ ಆರೋಪ ಎದುರಿಸುತ್ತಿರುವ ಮೂಡಬಿದಿರೆ ಪೊಲೀಸ್ ಇನ್ಸ್ಪೆಕ್ಟರ್ ಪಿ.ಜಿ. ಸಂದೇಶ್ ಅವರಿಗೆ ಹೈಕೋರ್ಟ್ ತೀವ್ರ ತರಾಟೆಗೆ ತೆಗೆದುಕೊಂಡಿದೆ.
ಹಣದ ವಹಿವಾಟಿನ ಬಗ್ಗೆ ತನಿಖೆಗೆ ಸೂಚನೆ: ಪ್ರಕರಣದ ವಿಚಾರಣೆಯ ವೇಳೆ ಪೀಠವು ಮಹತ್ವದ ವೀಕ್ಷಣೆ ಮಾಡಿದ್ದು, “ಸಂತ್ರಸ್ತೆಯರೊಂದಿಗೆ ಹಣದ ವಹಿವಾಟು ನಡೆದಿರುವ ಸಾಧ್ಯತೆಗಳಿದ್ದರೆ, ಆ ಬಗ್ಗೆಯೂ ಸಮಗ್ರವಾಗಿ ತನಿಖೆಯಾಗಲಿ” ಎಂದು ತಿಳಿಸಿದೆ. ಈ ಆದೇಶವು ಪ್ರಸ್ತುತ ಸಿಐಡಿ (CID) ತನಿಖೆ ಎದುರಿಸುತ್ತಿರುವ ಸಂದೇಶ್ ಅವರಿಗೆ ದೊಡ್ಡ ಸಂಕಷ್ಟ ತಂದೊಡ್ಡಿದೆ.
ಮೂಡಬಿದ್ರೆ ಪೊಲೀಸ್ ಠಾಣೆಯಲ್ಲಿ ಇನ್ಸ್ಪೆಕ್ಟರ್ ಆಗಿದ್ದ ಸಂದೇಶ್ ಪಿ.ಜಿ. ವಿರುದ್ಧ ಗಂಭೀರ ಆರೋಪಗಳು ಕೇಳಿಬಂದ ಹಿನ್ನೆಲೆಯಲ್ಲಿ ಅವರನ್ನು ಅಮಾನತುಗೊಳಿಸಲಾಗಿತ್ತು. ಪ್ರಸ್ತುತ ಈ ಪ್ರಕರಣದ ತನಿಖೆಯನ್ನು ಸಿಐಡಿ ನಡೆಸುತ್ತಿದ್ದು, ಹೈಕೋರ್ಟ್ನ ಈ ಇತ್ತೀಚಿನ ಆದೇಶವು ತನಿಖಾ ತಂಡಕ್ಕೆ ಮತ್ತಷ್ಟು ಬಲ ನೀಡಿದಂತಾಗಿದೆ.

-
crime3 weeks agoಧಾರ್ಮಿಕ ನಂಬಿಕೆಗೆ ಅವಮಾನ: ಕೊಡಗಿನ ಎಮ್ಮೆಮಾಡಿನಲ್ಲಿ ದೈವದ ವೇಷದಂತೆ ಧರಿಸಿ ಮದುಮಗನ ಅತಿರೇಕದ ವರ್ತನೆ!
-
crime2 months agoಅತ್ಯಾಚಾರ ಯತ್ನಕ್ಕೆ ತಡೆದ ಸೊಸೆಯ ಮುಖಕ್ಕೆ ಕಚ್ಚಿ ಕೊಲೆಗೆ ಯತ್ನಿಸಿದ ಮಾವ..ತಂದೆಯ ರಾಕ್ಷಸೀ ಕೃತ್ಯಕ್ಕೆ ಬೆಂಬಲಿಸಿದ ಗಂಡ..ಸುಳ್ಯ ಠಾಣಾ ವ್ಯಾಪ್ತಿಯಲ್ಲಿ ಅದೃಷ್ಟವಶಾತ್ ಬಚಾವಾದ ಸೊಸೆ..
-
Bantawala3 weeks agoವಿಟ್ಲದಲ್ಲಿ ನಡೆಯಿತೊಂದು ದೈವ ಕಾರಣಿಕ; ಪೊಲೀಸರ ಕಣ್ಣಿಗೆ ಮಣ್ಣೆರಚಿದರೂ ದೈವದ ದೃಷ್ಟಿಗೆ ತತ್ತರಿಸಿದ ದನಕಳ್ಳ..
-
Bantawala3 months agoನಾಗಬನ, ರಕ್ತೇಶ್ವರಿ ತಾಣ, ದೈವದೇವರ ಸಾನಿಧ್ಯ ದ್ವಂಸ ಗೊಳಿಸಿದ ಧರ್ಮದ್ರೋಹಿ ಕೃತ್ಯದ ವಿರುದ್ಧ ಭಕ್ತರ ಆಕ್ರೋಶ ; ನಾಶವಾದ ಸಾನಿಧ್ಯದಲ್ಲಿಯೇ ಸ್ವಾಮೀಜಿಯವರ ಮಾರ್ಗದರ್ಶನದಲ್ಲಿ ಕುಟುಂಬಸ್ತರು, ಸಾರ್ವಜನಿಕರ ಸಾಮೂಹಿಕ ಪ್ರಾರ್ಥನೆ
-
Dakshina Kannada4 months agoಶಾಸಕರ ಉಪಸ್ಥಿತಿಯಲ್ಲಿ ಪೊಲೀಸರ ನಿರಾಕರಣೆ ಮಧ್ಯೆಯೇ ಕೇಪುವಿನಲ್ಲಿ ನಡೆದ ಕೋಳಿಅಂಕ
-
Bantawala2 months agoಕುದ್ರಿಯ ತರವಾಡು ಮನೆಯಲ್ಲಿ ಸಂಕ್ರಮಣದಂದು ರಣಾಂಗಣ; ಅಧ್ಯಕ್ಷ, ಟ್ರಸ್ಟಿ ಮೇಲೆ ಮಾರಣಾಂತಿಕ ಹಲ್ಲೆ
-
Bantawala4 months agoವಿಟ್ಲದಲ್ಲಿ ಶಾರ್ಟ್ ಸರ್ಕ್ಯೂಟ್..ಶ್ರೀ ಎಲೆಕ್ಟ್ರಾನಿಕ್ಸ್ ,ಅಮಿತ್ ಹೋಟೆಲ್..ಸೇರಿ ಐದಾರು ಕಟ್ಟಡಗಳು ಸಂಪೂರ್ಣ ಬೆಂಕಿಗಾಹುತಿ..
-
Bantawala2 months agoವಿಟ್ಲ ಮೈತ್ರೇಯಿ ಗುರುಕುಲದ ವಿದ್ಯಾರ್ಥಿನಿ ವೈಗ ಲಕ್ಷ್ಮಿ(15) ಆತ್ಮಹತ್ಯೆ ? ; ಫೆ. 22ರಂದು ಗುರುಕುಲದಿಂದ ನಾಪತ್ತೆಯಾದ 10ನೇ ತರಗತಿ ವಿದ್ಯಾರ್ಥಿನಿ
