manglore police
ದಕ್ಷಿಣ ಕನ್ನಡದಲ್ಲಿ ಕಾನೂನು ಸುವ್ಯವಸ್ಥೆ ಉತ್ತಮವಾಗಿದೆ; ಮಂಗಳೂರಿನಲ್ಲಿ ಡಿಜಿಪಿ ಡಾ. ಎಂ.ಎ. ಸಲೀಂ ಹೇಳಿಕೆ
- Share
- Tweet /home/u338848369/domains/deevatigenews.com/public_html/wp-content/plugins/mvp-social-buttons/mvp-social-buttons.php on line 72
https://deevatigenews.com/wp-content/uploads/2026/04/saleem-DGP-1000x600.jpg&description=ದಕ್ಷಿಣ ಕನ್ನಡದಲ್ಲಿ ಕಾನೂನು ಸುವ್ಯವಸ್ಥೆ ಉತ್ತಮವಾಗಿದೆ; ಮಂಗಳೂರಿನಲ್ಲಿ ಡಿಜಿಪಿ ಡಾ. ಎಂ.ಎ. ಸಲೀಂ ಹೇಳಿಕೆ', 'pinterestShare', 'width=750,height=350'); return false;" title="Pin This Post">
ಮಂಗಳೂರು: ದಕ್ಷಿಣ ಕನ್ನಡ ಜಿಲ್ಲೆಯಲ್ಲಿ ಕಳೆದ ಒಂದು ವರ್ಷದಿಂದ ಕಾನೂನು ಮತ್ತು ಸುವ್ಯವಸ್ಥೆ ಅತ್ಯಂತ ಉತ್ತಮವಾಗಿದೆ. ಇದೇ ರೀತಿಯ ಶಾಂತಿ ಕಾಪಾಡುವಂತೆ ಅಧಿಕಾರಿಗಳಿಗೆ ಸೂಚನೆ ನೀಡಲಾಗಿದೆ ಎಂದು ರಾಜ್ಯ ಪೊಲೀಸ್ ಮಹಾನಿರ್ದೇಶಕ (ಡಿಜಿಪಿ) ಡಾ. ಎಂ.ಎ. ಸಲೀಂ ತಿಳಿಸಿದ್ದಾರೆ.
ಮಂಗಳೂರಿಗೆ ಭೇಟಿ ನೀಡಿದ ಅವರು, ನಗರ ಪೊಲೀಸ್ ಕಮೀಷನರ್ ಕಚೇರಿಯಲ್ಲಿ ಜಿಲ್ಲೆಯ ಪೊಲೀಸ್ ಪ್ರಗತಿ ಪರಿಶೀಲನಾ ಸಭೆ ನಡೆಸಿದರು. ಸಭೆಯ ನಂತರ ಮಾಧ್ಯಮಗಳೊಂದಿಗೆ ಮಾತನಾಡಿದ ಅವರು ಈ ಕೆಳಗಿನ ಪ್ರಮುಖ ಅಂಶಗಳನ್ನು ಹಂಚಿಕೊಂಡರು:
ಶಾಂತಿ ಕಾಪಾಡಲು ಸೂಚನೆ: ಜಿಲ್ಲೆಯಲ್ಲಿ ಕಳೆದ ಒಂದು ವರ್ಷದಿಂದ ಯಾವುದೇ ಅಹಿತಕರ ಘಟನೆಗಳಿಲ್ಲದೆ ಕಾನೂನು ಸುವ್ಯವಸ್ಥೆ ಸುಸ್ಥಿತಿಯಲ್ಲಿದೆ. ಇದನ್ನು ಹೀಗೆಯೇ ಮುಂದುವರಿಸಿಕೊಂಡು ಹೋಗುವಂತೆ ಮತ್ತು ಸಾರ್ವಜನಿಕರೊಂದಿಗೆ ಉತ್ತಮ ಬಾಂಧವ್ಯ ಇರಿಸಿಕೊಳ್ಳುವಂತೆ ಪೊಲೀಸರಿಗೆ ನಿರ್ದೇಶನ ನೀಡಲಾಗಿದೆ.
ವರ್ಗಾವಣೆ ಮನವಿಗಳ ಪರಿಶೀಲನೆ: ಉತ್ತರ ಕರ್ನಾಟಕ ಭಾಗದ ಅನೇಕ ಪೊಲೀಸ್ ಸಿಬ್ಬಂದಿ ಹಾಗೂ ಅವರ ಕುಟುಂಬದವರು ವರ್ಗಾವಣೆ ಕೋರಿ ಮನವಿ ಸಲ್ಲಿಸಿದ್ದಾರೆ. ಈ ಬಗ್ಗೆ ಪ್ರಗತಿ ಪರಿಶೀಲನಾ ಸಭೆಯಲ್ಲಿ ಸುದೀರ್ಘ ಚರ್ಚೆ ನಡೆಸಲಾಗಿದ್ದು, ಹಂತ ಹಂತವಾಗಿ ಅವರ ವರ್ಗಾವಣೆಗೆ ಅಗತ್ಯ ಕ್ರಮ ಕೈಗೊಳ್ಳಲಾಗುವುದು ಎಂದು ಡಿಜಿಪಿ ಭರವಸೆ ನೀಡಿದರು.
ಆರೋಪದ ಕುರಿತ ಪ್ರಶ್ನೆಗೆ ಡಿಜಿಪಿ ಮೌನ: ಮಂಗಳೂರು ಪೊಲೀಸ್ ಕಮೀಷನರ್ ಸುಧೀರ್ ಕುಮಾರ್ ರೆಡ್ಡಿ ವಿರುದ್ಧ ಡಿ.ಎ.ಆರ್.ನ ಎಸ್ಪಿ ಎನ್.ಎಸ್. ಕಾಶಿ ಅವರು ಸಲ್ಲಿಸಿದ್ದಾರೆ ಎನ್ನಲಾದ ದೂರಿನ ಬಗ್ಗೆ ಮಾಧ್ಯಮ ಪ್ರತಿನಿಧಿಗಳು ಪ್ರಶ್ನೆ ಕೇಳಿದರು. ಆದರೆ, ಈ ವಿವಾದಾತ್ಮಕ ಪ್ರಶ್ನೆಗೆ ಯಾವುದೇ ಪ್ರತಿಕ್ರಿಯೆ ನೀಡದ ಡಿಜಿಪಿ ಡಾ. ಎಂ.ಎ. ಸಲೀಂ ಅವರು ಮೌನವಾಗಿಯೇ ಸ್ಥಳದಿಂದ ನಿರ್ಗಮಿಸಿದರು.

manglore police
ಸಾವಿನ ದವಡೆಯಿಂದ ವ್ಯಕ್ತಿಯನ್ನು ಕಾಪಾಡಿದ ಪಣಂಬೂರು ಪೊಲೀಸರ ಸಮಯಪ್ರಜ್ಞೆ
ಮಂಗಳೂರು : ಆತ್ಮಹತ್ಯೆ ಮಾಡಿಕೊಳ್ಳಲು ಫಲ್ಗುಣಿ ನದಿಗೆ ಹಾರಲು ಮುಂದಾಗಿದ್ದ ಹಾಸನ ಮೂಲದ ಕೃಷಿಕನೋರ್ವನನ್ನು ಪಣಂಬೂರು ಪೊಲೀಸರು ತಮ್ಮ ತ್ವರಿತ ಕ್ರಮ ಮತ್ತು ಮಾನವೀಯತೆಯಿಂದ ಸಾವಿನ ದವಡೆಯಿಂದ ಕಾಪಾಡಿದ್ದಾರೆ.
ಘಟನೆಯ ವಿವರ:
ದಿನಾಂಕ 22-05-2026 ಸಂಜೆ ಸುಮಾರು 7:00 ಗಂಟೆಗೆ ಕೂಳೂರು ಸೇತುವೆ ಬಳಿ ಫಲ್ಗುಣಿ ನದಿಗೆ ಹಾರಿ ಆತ್ಮಹತ್ಯೆ ಮಾಡಿಕೊಳ್ಳಲು ಪ್ರಯತ್ನಿಸುತ್ತಿದ್ದ ವ್ಯಕ್ತಿಯನ್ನು ಪೊಲೀಸರು ಪತ್ತೆ ಹಚ್ಚಿ ರಕ್ಷಿಸಿದರು.
ಆತ್ಮಹತ್ಯೆಗೆ ಯತ್ನಿಸಿದ ವ್ಯಕ್ತಿ ಹಾಸನ ಜಿಲ್ಲೆಯ ಚನ್ನರಾಯಪಟ್ಟಣ ತಾಲ್ಲೂಕು, ಶ್ರವಣ ಬೆಳಗೊಳ ಸಮೀಪದ ಹಳ್ಳಿಯ ನಿವಾಸಿ ಕೃಷಿಕ. ಆರೋಗ್ಯ ಸಮಸ್ಯೆ ಮತ್ತು ಸಣ್ಣ ಮಟ್ಟಿನ ಹಣಕಾಸು ಸಮಸ್ಯೆಯಿಂದ ಮನನೊಂದಿದ್ದ ಈ ವ್ಯಕ್ತಿ ಬೆಳಿಗ್ಗೆ ಮನೆಯವರಿಗೆ ಹೇಳದೆ ಮನೆ ಬಿಟ್ಟು ಬಂದಿದ್ದರು. ಮೊಬೈಲ್ ಮಾತ್ರ ಆನ್ನಲ್ಲಿಟ್ಟಿದ್ದ ಅವರು, ಮನೆಯವರು ಮತ್ತು ಸಂಬಂಧಿಕರು ಸಂಪರ್ಕಿಸಿದರೂ “ತಾನು ಸಾಯುತ್ತೇನೆ” ಎಂದು ಮಾತ್ರ ಹೇಳಿ ತನ್ನ ಇರುವಿಕೆ ತಿಳಿಸಿರಲಿಲ್ಲ.
ಪೊಲೀಸರ ರಕ್ಷಣಾ ಕಾರ್ಯಾಚರಣೆ:
ಸಂಜೆ 5:30ಕ್ಕೆ ವ್ಯಕ್ತಿ ಪಣಂಬೂರು ಬೀಚ್ ಬಳಿ ಇರುವ ಬಗ್ಗೆ ಮಾಹಿತಿ ಪಡೆದ ಸಂಬಂಧಿಕರು, ನಿವೃತ್ತ ಪೊಲೀಸ್ ಅಧಿಕಾರಿಯ ಮೂಲಕ ಪಣಂಬೂರು ಪೊಲೀಸ್ ಇನ್ಸ್ಪೆಕ್ಟರ್ ಸಲೀಂ ಅಬ್ಬಾಸ್ ಅವರನ್ನು ಸಂಪರ್ಕಿಸಿದರು.
ಕೂಡಲೇ ಇನ್ಸ್ಪೆಕ್ಟರ್ ಮೇಲಾಧಿಕಾರಿಗಳಿಗೆ ಮಾಹಿತಿ ನೀಡಿ, ಪೊಲೀಸ್ ಕಮೀಷನರ್ ಕಚೇರಿಯ ತಾಂತ್ರಿಕ ಘಟಕದ ಸಹಾಯದೊಂದಿಗೆ ಶೋಧ ಕಾರ್ಯ ಆರಂಭಿಸಿದರು. ಮೊದಲು ಫೋನ್ ಮೂಲಕ ಕೌನ್ಸೆಲಿಂಗ್ ಮಾಡಿದರೂ ವ್ಯಕ್ತಿ ಸ್ಪಂದಿಸಲಿಲ್ಲ. ನಿರಂತರ ಒಂದೂವರೆ ಗಂಟೆ ಹುಡುಕಾಟದ ಬಳಿಕ ಸಂಜೆ 7 ಗಂಟೆಗೆ ಕೂಳೂರು ಸೇತುವೆ ಬಳಿ ನದಿಗೆ ಹಾರಲು ಸಿದ್ಧನಾಗಿದ್ದ ವ್ಯಕ್ತಿಯನ್ನು ಪತ್ತೆ ಹಚ್ಚಲಾಯಿತು.

ಪತ್ತೆಯಾದ ಸ್ಥಳ ಕಾವೂರು ಠಾಣಾ ವ್ಯಾಪ್ತಿಗೆ ಸೇರಿದ್ದರೂ, ಒಂದು ಅಮೂಲ್ಯ ಜೀವ ಉಳಿಸುವ ಸದುದ್ದೇಶದಿಂದ ಪಣಂಬೂರು ಪೊಲೀಸರು ಸರಹದ್ದಿನ ಬಗ್ಗೆ ಚಿಂತಿಸದೆ ವ್ಯಕ್ತಿಯನ್ನು ತಮ್ಮ ಠಾಣೆಗೆ ಕರೆತಂದು ನೀರು, ಆಹಾರ ನೀಡಿ ಕೌನ್ಸೆಲಿಂಗ್ ನಡೆಸಿದರು. ಆತ್ಮಹತ್ಯೆ ಸಮಸ್ಯೆಗೆ ಪರಿಹಾರವಲ್ಲ ಎಂಬ ಬುದ್ಧಿಮಾತು ಹೇಳಿ ಆತ್ಮವಿಶ್ವಾಸ ತುಂಬಿದರು. ಕೊನೆಗೆ ಊರಿನಿಂದ ಬಂದ ಸಂಬಂಧಿಕರ ಜೊತೆ ಅವರನ್ನು ಮನೆಗೆ ಕಳುಹಿಸಲಾಯಿತು.
ಸಂಬಂಧಿಕರ ಕೃತಜ್ಞತೆ, ಮೇಲಾಧಿಕಾರಿಗಳ ಶ್ಲಾಘನೆ
ತಮ್ಮವರ ಪ್ರಾಣ ಉಳಿಸಿದ ಪಣಂಬೂರು ಪೊಲೀಸರ ಕಾರ್ಯಕ್ಕೆ ಸಂಬಂಧಿಕರು ಕೃತಜ್ಞತೆ ಸಲ್ಲಿಸಿದ್ದಾರೆ. ಪೊಲೀಸರ ಈ ಮಾನವೀಯ ಕಾರ್ಯಕ್ಕೆ ಮೇಲಾಧಿಕಾರಿಗಳೂ ಶ್ಲಾಘನೆ ವ್ಯಕ್ತಪಡಿಸಿದ್ದಾರೆ.
ಕಳೆದ ವರ್ಷ ನವೆಂಬರ್ನಲ್ಲಿ ತಣ್ಣೀರು ಬಾವಿ ಬೀಚ್ನಲ್ಲಿ ತನ್ನ 4 ವರ್ಷದ ಮಗಳೊಂದಿಗೆ ಸಮುದ್ರಕ್ಕೆ ಹಾರಿ ಆತ್ಮಹತ್ಯೆ ಮಾಡಿಕೊಳ್ಳುವುದಾಗಿ ವಾಟ್ಸಾಪ್ ವಿಡಿಯೋ ಹರಿಬಿಟ್ಟು, ನಂತರ ಮನೆಯಲ್ಲಿ ನೇಣು ಹಾಕಿಕೊಳ್ಳಲು ಪ್ರಯತ್ನಿಸಿದ್ದ ತಂದೆ-ಮಗಳ ಪ್ರಾಣವನ್ನೂ ಪಣಂಬೂರು ಪೊಲೀಸರು ರಕ್ಷಿಸಿದ್ದರು. ಆರು ತಿಂಗಳಲ್ಲಿ ಇದು ಪೊಲೀಸರು ಉಳಿಸಿದ ಮೂರನೇ ಜೀವವಾಗಿದೆ.
ಕಾರ್ಯಾಚರಣೆಯಲ್ಲಿ ಭಾಗವಹಿಸಿದವರು: ಇನ್ಸ್ಪೆಕ್ಟರ್ ಸಲೀಂ ಅಬ್ಬಾಸ್, ಸಬ್ ಇನ್ಸ್ಪೆಕ್ಟರ್ ಜ್ಞಾನಶೇಖರ್, ಎಎಸ್ಐ ಸುಬ್ರಹ್ಮಣ್ಯ, ಸಿಬ್ಬಂದಿಗಳಾದ ಸುರೇಂದ್ರ, ದೀಪಕ್, ಇಮ್ತಿಯಾಝ್, ರಾಕೇಶ್, ಫಕ್ಕಿರೇಶ್, ಶರಣಬಸವ, ಅನ್ವರ್, ಮಂಜುನಾಥ್ ಮತ್ತಿತರರು ಭಾಗವಹಿಸಿದ್ಧರು.



manglore police
ಬೆಳ್ತಂಗಡಿ, ಉಪ್ಪಿನಂಗಡಿ ಸರಣಿ ಕಳ್ಳತನ: ಶಂಕಿತ ಕೇರಳ ಮೂಲದ ಆರೋಪಿಯ ಪತ್ತೆಗೆ ಪೊಲೀಸರ ಜಾಲ – ಮಾಹಿತಿ ಇದ್ದರೆ ಕರೆ ಮಾಡಿ
ಮಂಗಳೂರು: ಕಳೆದ ಎರಡು ದಿನಗಳಿಂದ ದಕ್ಷಿಣ ಕನ್ನಡ ಜಿಲ್ಲೆಯ ಬೆಳ್ತಂಗಡಿ ಹಾಗೂ ಉಪ್ಪಿನಂಗಡಿ ಸುತ್ತಮುತ್ತಲಿನ ಪರಿಸರದಲ್ಲಿ ನಡೆದಿರುವ ಸರಣಿ ಮನೆಗಳ್ಳತನ ಪ್ರಕರಣಗಳಿಗೆ ಸಂಬಂಧಿಸಿದಂತೆ ಪೊಲೀಸರು ತನಿಖೆಯನ್ನು ಚುರುಕುಗೊಳಿಸಿದ್ದಾರೆ. ಈ ಕೃತ್ಯಗಳಲ್ಲಿ ಕೇರಳ ಮೂಲದ ಹಳೇ ಕಳ್ಳನೊಬ್ಬ ಭಾಗಿಯಾಗಿರುವ ಬಲವಾದ ಸಂಶಯ ವ್ಯಕ್ತವಾಗಿದ್ದು, ಆತನ ಪತ್ತೆಗಾಗಿ ದಕ್ಷಿಣ ಕನ್ನಡ ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿಗಳು (SP) ಸಾರ್ವಜನಿಕರ ಸಹಕಾರ ಕೋರಿದ್ದಾರೆ.
ಕಣ್ಣೂರು ಮೂಲದ ತಂಗಚ್ಚ ಶಂಕಿತ!
ಕೇರಳದ ಕಣ್ಣೂರು ತಳಿಪರಂಬು ನಿವಾಸಿಯಾಗಿರುವ ತಂಗಚ್ಚ @ ಮ್ಯಾಥ್ಯೂ @ ಬಶೀರ್ ಎಂಬಾತನೇ ಪ್ರಮುಖ ಶಂಕಿತ ಆಸಾಮಿಯಾಗಿದ್ದಾನೆ. ಈತನ ವಿರುದ್ಧ ಈಗಾಗಲೇ ಪುತ್ತೂರು ನಗರ ಪೊಲೀಸ್ ಠಾಣೆಯಲ್ಲಿ ಜಾಮೀನುರಹಿತ ದಸ್ತಗಿರಿ ವಾರೆಂಟ್ (NBW) ಜಾರಿಯಾಗಲು ಬಾಕಿಯಿರುತ್ತದೆ. ಪ್ರಸ್ತುತ ಈತ ಬೆಳ್ತಂಗಡಿ ಮತ್ತು ಉಪ್ಪಿನಂಗಡಿ ಪರಿಸರದ ಕಳ್ಳತನ ಪ್ರಕರಣಗಳಲ್ಲೂ ಭಾಗಿಯಾಗಿರುವ ಸಾಧ್ಯತೆಯಿದೆ ಎಂದು ಪೊಲೀಸರು ಶಂಕಿಸಿದ್ದಾರೆ.
ಮಾಹಿತಿ ನೀಡಲು ಕೋರಿಕೆ:
ಸದ್ರಿ ಶಂಕಿತ ಆಸಾಮಿಯ ಬಗ್ಗೆ ಸಾರ್ವಜನಿಕರಿಗೆ ಯಾವುದೇ ರೀತಿಯ ಸುಳಿವು ಅಥವಾ ಮಾಹಿತಿ ಲಭ್ಯವಾದಲ್ಲಿ ತಕ್ಷಣವೇ ಕೆಳಗಿನ ಪೊಲೀಸ್ ಅಧಿಕಾರಿಗಳು ಹಾಗೂ ನಿಯಂತ್ರಣ ಕೊಠಡಿಯ ದೂರವಾಣಿ ಸಂಖ್ಯೆಗಳಿಗೆ ಕರೆ ಮಾಡಿ ಮಾಹಿತಿ ನೀಡಬೇಕಾಗಿ ದ.ಕ ಜಿಲ್ಲಾ ಎಸ್ಪಿಯವರು ಪ್ರಕಟಣೆಯಲ್ಲಿ ವಿನಂತಿಸಿದ್ದಾರೆ. ಮಾಹಿತಿ ನೀಡುವವರ ವಿವರಗಳನ್ನು ಗೌಪ್ಯವಾಗಿಡಲಾಗುವುದು.
ಸಂಪರ್ಕಿಸಬೇಕಾದ ಸಂಖ್ಯೆಗಳು:
- ಉಪ್ಪಿನಂಗಡಿ ಪೊಲೀಸ್ ಠಾಣೆ: 08251-251055, 9480805362
- ಬೆಳ್ತಂಗಡಿ ಪೊಲೀಸ್ ಠಾಣೆ: 08256-232093, 9480805370
- ಪುತ್ತೂರು ಪೊಲೀಸ್ ಠಾಣಾ ಉಪನಿರೀಕ್ಷಕರು: 08251-230555, 9480805361
- ದಕ್ಷಿಣ ಕನ್ನಡ ಜಿಲ್ಲಾ ಕಂಟ್ರೋಲ್ ರೂಂ: 9480805300 / 0824-2220500
ವಿಶೇಷ ಸೂಚನೆ: ನಿಮ್ಮ ಸುತ್ತಮುತ್ತ ಯಾವುದೇ ಅಪರಿಚಿತ ವ್ಯಕ್ತಿಗಳು ಅನುಮಾನಾಸ್ಪದವಾಗಿ ಓಡಾಡುತ್ತಿರುವುದು ಕಂಡುಬಂದಲ್ಲಿ ತಕ್ಷಣವೇ ಅಲರ್ಟ್ ಆಗಿರಿ ಮತ್ತು ಪೊಲೀಸರಿಗೆ ಮಾಹಿತಿ ನೀಡಿ. ಈ ಸುದ್ದಿಯನ್ನು ಗರಿಷ್ಠ ಮಟ್ಟದಲ್ಲಿ ಶೇರ್ ಮಾಡುವ ಮೂಲಕ ಕಳ್ಳನನ್ನು ಹಿಡಿಯಲು ಸಹಕರಿಸಿ
crime
ಮಂಗಳೂರು: ಜಪ್ಪಿನಮೊಗರು ಬಳಿ ಅಕ್ರಮ ಕೋಣ ಸಾಗಾಟ ಪತ್ತೆ; 27 ಕೋಣಗಳ ರಕ್ಷಣೆ; ನಾಲ್ವರ ಬಂಧನ
ಮಂಗಳೂರು: ಯಾವುದೇ ಅಧಿಕೃತ ದಾಖಲೆಗಳಿಲ್ಲದೆ ಲಾರಿಯೊಂದರಲ್ಲಿ ಅತ್ಯಂತ ಹಿಂಸಾತ್ಮಕ ರೀತಿಯಲ್ಲಿ ಕೇರಳಕ್ಕೆ ಸಾಗಿಸಲಾಗುತ್ತಿದ್ದ 27 ಕೋಣಗಳನ್ನು ಕಂಕನಾಡಿ ನಗರ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ಪೊಲೀಸರು ಯಶಸ್ವಿಯಾಗಿ ರಕ್ಷಿಸಿದ್ದಾರೆ. ಅಕ್ರಮ ಸಾಗಾಟದಲ್ಲಿ ತೊಡಗಿದ್ದ ನಾಲ್ವರು ಆರೋಪಿಗಳನ್ನು ವಶಕ್ಕೆ ಪಡೆಯಲಾಗಿದೆ.

ಘಟನೆಯ ವಿವರ: ದಿನಾಂಕ 16-05-2026ರಂದು ಮುಂಜಾವಿನ ಜಾವ 6:00 ಗಂಟೆಯ ಸುಮಾರಿಗೆ, ಹಾವೇರಿಯಿಂದ ಕೇರಳ ರಾಜ್ಯದ ತಲಿಪರಂಬು ಎಂಬಲ್ಲಿಗೆ ಈಚರ್ ಲಾರಿಯಲ್ಲಿ ಕೋಣಗಳನ್ನು ಸಾಗಿಸಲಾಗುತ್ತಿತ್ತು. ಕಂಕನಾಡಿ ನಗರ ಪೊಲೀಸ್ ಠಾಣಾ ವ್ಯಾಪ್ತಿಯ ಜಪ್ಪಿನಮೊಗೆರಿನ ಇಂಡಿಯಾನ ಹಾಲ್ ಎದುರಿನ ರಾಷ್ಟ್ರೀಯ ಹೆದ್ದಾರಿ 66ರಲ್ಲಿ ಮಂಗಳೂರು ಹೈವೇ ಪೆಟ್ರೋಲ್ ಪೊಲೀಸರು ಮತ್ತು ಮುಂಜಾನೆ ಗಸ್ತು ಕರ್ತವ್ಯದಲ್ಲಿದ್ದ ಕಂಕನಾಡಿ ನಗರ ಪೊಲೀಸರು ಜಂಟಿ ಕಾರ್ಯಾಚರಣೆ ನಡೆಸಿ ಈ ಅಕ್ರಮವನ್ನು ಪತ್ತೆ ಹಚ್ಚಿದ್ದಾರೆ. ವಾಹನದಲ್ಲಿದ್ದ 27 ಕೋಣಗಳನ್ನು ರಕ್ಷಿಸಲಾಗಿದ್ದು, ಸಾಗಾಟಕ್ಕೆ ಬಳಸಿದ್ದ ಈಚರ್ ಲಾರಿಯನ್ನು ವಶಪಡಿಸಿಕೊಳ್ಳಲಾಗಿದೆ.
ದಸ್ತಗಿರಿಯಾದ ಆರೋಪಿಗಳ ವಿವರ:
ಸಯ್ಯದ್ ಮೆಹಬೂಬ್ ಅಲಿ (28 ವರ್ಷ), ತಂದೆ: ರಾಜೇಸಾಬ, ವಾಸ: ಡೋರ್ ನಂ. 81, ಆಶ್ರಯ ಬಡಾವಣೆ, ಬೊಮ್ಮನಕಟ್ಟೆ, ಶಿವಮೊಗ್ಗ.
ಅರುಣ ಚಂದ್ರಪ್ಪ ಜಾವಳಿ (32 ವರ್ಷ), ತಂದೆ: ಚಂದ್ರಪ್ಪ, ವಾಸ: ನಿಟ್ಟೂರು ಅಡವಿ, ಮಾಡ್ಲುರು ಅಂಚೆ, ಹಿರೇಕೆರೂರು ತಾಲೂಕು, ಹಾವೇರಿ ಜಿಲ್ಲೆ.
ಹಿರಿಯಣ್ಣ ಗೌಡ (46 ವರ್ಷ), ತಂದೆ: ರಂಗಸ್ವಾಮಿ, ವಾಸ: ಮಾದೇವರಳ್ಳಿ ಗ್ರಾಮ, ಅರಸಿಕೇರೆ ತಾಲೂಕು, ಹಾಸನ ಜಿಲ್ಲೆ.
ಸುನೀಲ್ ಲಕ್ಷ್ಮಪ್ಪ ಜಾವಳ್ಳಿ (24 ವರ್ಷ), ತಂದೆ: ಲಕ್ಷ್ಮಪ್ಪ, ವಾಸ: ನಿಟ್ಟೂರು ಅಡವಿ, ನಿಟ್ಟೂರು ಗ್ರಾಮ, ಮಡ್ಲೂರು ಅಂಚೆ, ಹಿರೆಕೇರೂರು ತಾಲೂಕು, ಹಾವೇರಿ ಜಿಲ್ಲೆ.
ಕಾನೂನು ಕ್ರಮ: ಈ ಅಕ್ರಮ ಸಾಗಾಟದ ಕುರಿತು ಕಂಕನಾಡಿ ನಗರ ಪೊಲೀಸ್ ಠಾಣೆಯಲ್ಲಿ ಅಪರಾಧ ಕ್ರಮಾಂಕ (ಅ.ಕ್ರ) 59/2026 ರಂತೆ, ಪ್ರಾಣಿ ಹಿಂಸೆ ತಡೆ ಕಾಯ್ದೆ 1960 ರ ಕಲಂ 11(A), 11(D), ಕರ್ನಾಟಕ ಜಾನುವಾರು ಹತ್ಯೆ ಪ್ರತಿಬಂಧಕ ಮತ್ತು ಸಂರಕ್ಷಣಾ ಕಾಯ್ದೆ-2020 ರ ಕಲಂ 6 ಹಾಗೂ ಭಾರತೀಯ ನ್ಯಾಯ ಸಂಹಿತೆ (BNS) ಯ ಕಲಂ 3(5) ಅಡಿಯಲ್ಲಿ ಪ್ರಕರಣ ದಾಖಲಿಸಲಾಗಿದೆ.
ಬಂಧಿತ ಆರೋಪಿಗಳನ್ನು ಮಾನ್ಯ ನ್ಯಾಯಾಲಯಕ್ಕೆ ಹಾಜರುಪಡಿಸಲಾಗಿದ್ದು, ರಕ್ಷಿಸಲಾದ ಕೋಣಗಳನ್ನು ನ್ಯಾಯಾಲಯದ ಆದೇಶದಂತೆ ಸುರಕ್ಷಿತವಾಗಿ ಗೋಶಾಲೆಯ ವಶಕ್ಕೆ ಒಪ್ಪಿಸಲಾಗಿದೆ. ಪ್ರಕರಣದ ಮುಂದಿನ ತನಿಖೆ ಪ್ರಗತಿಯಲ್ಲಿದೆ ಎಂದು ಮಂಗಳೂರು ನಗರ ಪೊಲೀಸ್ ಆಯುಕ್ತರು ತಮ್ಮ ಪ್ರಕಟಣೆಯಲ್ಲಿ ತಿಳಿಸಿದ್ದಾರೆ.



-
crime2 months agoಧಾರ್ಮಿಕ ನಂಬಿಕೆಗೆ ಅವಮಾನ: ಕೊಡಗಿನ ಎಮ್ಮೆಮಾಡಿನಲ್ಲಿ ದೈವದ ವೇಷದಂತೆ ಧರಿಸಿ ಮದುಮಗನ ಅತಿರೇಕದ ವರ್ತನೆ!
-
crime4 months agoಅತ್ಯಾಚಾರ ಯತ್ನಕ್ಕೆ ತಡೆದ ಸೊಸೆಯ ಮುಖಕ್ಕೆ ಕಚ್ಚಿ ಕೊಲೆಗೆ ಯತ್ನಿಸಿದ ಮಾವ..ತಂದೆಯ ರಾಕ್ಷಸೀ ಕೃತ್ಯಕ್ಕೆ ಬೆಂಬಲಿಸಿದ ಗಂಡ..ಸುಳ್ಯ ಠಾಣಾ ವ್ಯಾಪ್ತಿಯಲ್ಲಿ ಅದೃಷ್ಟವಶಾತ್ ಬಚಾವಾದ ಸೊಸೆ..
-
Bantawala2 months agoವಿಟ್ಲದಲ್ಲಿ ನಡೆಯಿತೊಂದು ದೈವ ಕಾರಣಿಕ; ಪೊಲೀಸರ ಕಣ್ಣಿಗೆ ಮಣ್ಣೆರಚಿದರೂ ದೈವದ ದೃಷ್ಟಿಗೆ ತತ್ತರಿಸಿದ ದನಕಳ್ಳ..
-
Bantawala5 months agoನಾಗಬನ, ರಕ್ತೇಶ್ವರಿ ತಾಣ, ದೈವದೇವರ ಸಾನಿಧ್ಯ ದ್ವಂಸ ಗೊಳಿಸಿದ ಧರ್ಮದ್ರೋಹಿ ಕೃತ್ಯದ ವಿರುದ್ಧ ಭಕ್ತರ ಆಕ್ರೋಶ ; ನಾಶವಾದ ಸಾನಿಧ್ಯದಲ್ಲಿಯೇ ಸ್ವಾಮೀಜಿಯವರ ಮಾರ್ಗದರ್ಶನದಲ್ಲಿ ಕುಟುಂಬಸ್ತರು, ಸಾರ್ವಜನಿಕರ ಸಾಮೂಹಿಕ ಪ್ರಾರ್ಥನೆ
-
accident4 weeks agoವಿಟ್ಲ ಆಕಾಶದಲ್ಲಿ ಹಾರಾಡಿದ ವಿಮಾನ: ತಾಂತ್ರಿಕ ದೋಷವಲ್ಲ, ಹವಾಮಾನ ವೈಪರೀತ್ಯದ ಕಾರಣ ! ಸಾರ್ವಜನಿಕರು ಆತಂಕ ಪಡುವ ಅಗತ್ಯವಿಲ್ಲ
-
Dakshina Kannada6 months agoಶಾಸಕರ ಉಪಸ್ಥಿತಿಯಲ್ಲಿ ಪೊಲೀಸರ ನಿರಾಕರಣೆ ಮಧ್ಯೆಯೇ ಕೇಪುವಿನಲ್ಲಿ ನಡೆದ ಕೋಳಿಅಂಕ
-
Bantawala5 months agoವಿಟ್ಲದಲ್ಲಿ ಶಾರ್ಟ್ ಸರ್ಕ್ಯೂಟ್..ಶ್ರೀ ಎಲೆಕ್ಟ್ರಾನಿಕ್ಸ್ ,ಅಮಿತ್ ಹೋಟೆಲ್..ಸೇರಿ ಐದಾರು ಕಟ್ಟಡಗಳು ಸಂಪೂರ್ಣ ಬೆಂಕಿಗಾಹುತಿ..
-
Bantawala4 months agoಕುದ್ರಿಯ ತರವಾಡು ಮನೆಯಲ್ಲಿ ಸಂಕ್ರಮಣದಂದು ರಣಾಂಗಣ; ಅಧ್ಯಕ್ಷ, ಟ್ರಸ್ಟಿ ಮೇಲೆ ಮಾರಣಾಂತಿಕ ಹಲ್ಲೆ
