crime
ಉಳ್ಳಾಲ ಜುಬೇರ್ ಕೊಲೆ ಪ್ರಕರಣ: ತಲೆಮರೆಸಿಕೊಂಡಿದ್ದ ಮೊದಲ ಆರೋಪಿಗೆ ಜೀವಾವಧಿ ಶಿಕ್ಷೆ
ಮಂಗಳೂರು ನಗರದ ಉಳ್ಳಾಲ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ನಡೆದಿದ್ದ ಜುಬೇರ್ ಎಂಬವರ ಕೊಲೆ ಪ್ರಕರಣಕ್ಕೆ ಸಂಬಂಧಿಸಿದಂತೆ, ತಲೆಮರೆಸಿಕೊಂಡಿದ್ದ ಮೊದಲನೇ ಪ್ರಮುಖ ಆರೋಪಿಗೆ ಮಂಗಳೂರಿನ ನ್ಯಾಯಾಲಯವು ಜೀವಾವಧಿ ಶಿಕ್ಷೆ ವಿಧಿಸಿ ತೀರ್ಪು ನೀಡಿದೆ.
ದಿನಾಂಕ 04-10-2017 ರಂದು ರಾತ್ರಿ 7-55 ಗಂಟೆಗೆ ಮುಕ್ಕಚ್ಚೇರಿ ಮಸೀದಿ ಎದುರು ಜುಬೇರ್ ಅವರು ತಮ್ಮ ಗೆಳೆಯ ಇಲಿಯಾಸ್ ಎಂಬವರ ಜೊತೆ ಮಾತನಾಡುತ್ತಿದ್ದಾಗ, ಆರೋಪಿಗಳು ತಲ್ವಾರ್ ಹಾಗೂ ಉದ್ದದ ಕತ್ತಿಯಿಂದ ದಾಳಿ ನಡೆಸಿ ಜುಬೇರ್ನನ್ನು ಕೊಲೆ ಮಾಡಿದ್ದರು. ಈ ವೇಳೆ ಅಡ್ಡ ಬಂದ ಇಲಿಯಾಸ್ ಅವರಿಗೂ ತೀವ್ರ ಗಾಯಗಳಾಗಿದ್ದವು. ಈ ಬಗ್ಗೆ ಉಳ್ಳಾಲ ಪೊಲೀಸ್ ಠಾಣೆಯ ಅಂದಿನ ಇನ್ಸ್ಪೆಕ್ಟರ್ ಶ್ರೀ ಗೋಪಿಕೃಷ್ಣ ಕೆ.ಆರ್ ಅವರು ತನಿಖೆ ನಡೆಸಿ ಅಬ್ದುಲ್ ರಹಿಮಾನ್ ಸುಹೇಲ್ ಸೇರಿದಂತೆ ಒಟ್ಟು 7 ಮಂದಿ ಆರೋಪಿಗಳ ಮೇಲೆ ದೋಷಾರೋಪಣಾ ಪಟ್ಟಿ ಸಲ್ಲಿಸಿದ್ದರು.
ಈ ಪ್ರಕರಣದಲ್ಲಿ ಈಗಾಗಲೇ 2 ರಿಂದ 4ನೇ ಆರೋಪಿಗಳಿಗೆ 2022ರಲ್ಲಿಯೇ ಜೀವಾವಧಿ ಶಿಕ್ಷೆಯಾಗಿತ್ತು. ಆದರೆ ಮೊದಲನೇ ಆರೋಪಿ ಅಬ್ದುಲ್ ರಹಿಮಾನ್ ಸುಹೇಲ್ ಜಾಮೀನು ಪಡೆದು ವಿಚಾರಣೆಯ ಅಂತಿಮ ಹಂತದಲ್ಲಿ ತಲೆಮರೆಸಿಕೊಂಡಿದ್ದನು. ಪೊಲೀಸರು ವಾರೆಂಟ್ ಮೂಲಕ ಆತನನ್ನು ದಸ್ತಗಿರಿ ಮಾಡಿ ನ್ಯಾಯಾಲಯಕ್ಕೆ ಹಾಜರುಪಡಿಸಿದ ನಂತರ, ಮಂಗಳೂರಿನ 3ನೇ ಹೆಚ್ಚುವರಿ ಜಿಲ್ಲಾ ಮತ್ತು ಸತ್ರ ನ್ಯಾಯಾಲಯದ ನ್ಯಾಯಾಧೀಶರಾದ ಶ್ರೀಮತಿ ಸುನೀತಾ ಅವರು ಎಪ್ರಿಲ್ 22, 2026 ರಂದು ಆರೋಪಿಗೆ ಜೀವಾವಧಿ ಶಿಕ್ಷೆ ಪ್ರಕಟಿಸಿದ್ದಾರೆ. ಸರ್ಕಾರದ ಪರವಾಗಿ ಅಭಿಯೋಜಕ ಶ್ರೀ ಮೋಹನ್ ಅವರು ವಾದ ಮಂಡಿಸಿದ್ದರು.



crime
ಮಂಗಳೂರು ಕುಕ್ಕರ್ ಬಾಂಬ್ ಸ್ಫೋಟ ಪ್ರಕರಣ: ಪ್ರಮುಖ ಆರೋಪಿ ಶಾರೀಕ್ಗೆ 10 ವರ್ಷ ಕಠಿಣ ಜೈಲು ಶಿಕ್ಷೆ
ರಾಜ್ಯವನ್ನೇ ಬೆಚ್ಚಿಬೀಳಿಸಿದ್ದ ಮಂಗಳೂರಿನ ನಾಗುರಿ ಬಳಿಯ ಆಟೋರಿಕ್ಷಾದಲ್ಲಿ ನಡೆದ ಕುಕ್ಕರ್ ಬಾಂಬ್ ಸ್ಫೋಟ ಪ್ರಕರಣಕ್ಕೆ ಸಂಬಂಧಿಸಿದಂತೆ ಬೆಂಗಳೂರಿನ ಎನ್.ಐ.ಎ (NIA) ವಿಶೇಷ ನ್ಯಾಯಾಲಯವು ಮಹತ್ವದ ತೀರ್ಪು ಪ್ರಕಟಿಸಿದೆ. ಈ ಭಯೋತ್ಪಾದನಾ ಕೃತ್ಯದ ಪ್ರಮುಖ ಆರೋಪಿ ಮೊಹಮ್ಮದ್ ಶಾರೀಕ್ಗೆ 10 ವರ್ಷಗಳ ಕಠಿಣ ಕಾರಾಗೃಹ ಶಿಕ್ಷೆ ಮತ್ತು ದಂಡ ವಿಧಿಸಿ ಆದೇಶ ಹೊರಡಿಸಲಾಗಿದೆ.

ನವೆಂಬರ್ 19, 2022 ರಂದು ಮಂಗಳೂರಿನಲ್ಲಿ ನಡೆದ ಈ ಘಟನೆಯಲ್ಲಿ, ಕುಕ್ಕರ್ ಬಾಂಬ್ ಹೊತ್ತು ಸಾಗಿಸುತ್ತಿದ್ದಾಗಲೇ ಆಕಸ್ಮಿಕವಾಗಿ ಸ್ಫೋಟ ಸಂಭವಿಸಿತ್ತು. ಪ್ರಕರಣದ ತನಿಖೆ ನಡೆಸಿದ ಎನ್.ಐ.ಎ ಅಧಿಕಾರಿಗಳು ಶಾರೀಕ್ ಐಸಿಸ್ ಸಿದ್ಧಾಂತಗಳಿಂದ ಪ್ರೇರಿತನಾಗಿ ಈ ಸಂಚು ರೂಪಿಸಿದ್ದನ್ನು ಪತ್ತೆಹಚ್ಚಿದ್ದರು.
ವಿಚಾರಣೆ ನಡೆಸಿದ ನ್ಯಾಯಾಲಯವು ಯುಎಪಿಎ ಕಾಯ್ದೆಯಡಿ ಆರೋಪ ಸಾಬೀತಾದ ಹಿನ್ನೆಲೆಯಲ್ಲಿ ಈ ಶಿಕ್ಷೆ ವಿಧಿಸಿದೆ. ದೇಶದ ಭದ್ರತೆಗೆ ಧಕ್ಕೆ ತರಲು ಯತ್ನಿಸಿದ ಆರೋಪಿಗೆ ಸಿಕ್ಕಿರುವ ಈ ಕಠಿಣ ಶಿಕ್ಷೆಯು ಸಮಾಜಘಾತುಕ ಶಕ್ತಿಗಳಿಗೆ ದೊಡ್ಡ ಎಚ್ಚರಿಕೆಯಾಗಿದೆ.


crime
ಕಾರ್ಕಳ: ಮನೆ ಕಳ್ಳತನ ಪ್ರಕರಣ 24 ಗಂಟೆಯೊಳಗೆ ಭೇದಿಸಿದ ಪೊಲೀಸರು; ಇಬ್ಬರ ಬಂಧನ, ಲಕ್ಷಾಂತರ ಮೌಲ್ಯದ ಚಿನ್ನಾಭರಣ ವಶ
ಕಾರ್ಕಳ: ನಗರದ ಪತ್ತೊಂಜಿ ಕಟ್ಟೆಯ ಮನೆಯೊಂದರಲ್ಲಿ ನಡೆದಿದ್ದ ಕಳ್ಳತನ ಪ್ರಕರಣವನ್ನು ಕಾರ್ಕಳ ನಗರ ಪೊಲೀಸರು ಕೇವಲ 24 ಗಂಟೆಯೊಳಗೆ ಭೇದಿಸುವಲ್ಲಿ ಯಶಸ್ವಿಯಾಗಿದ್ದಾರೆ. ಪ್ರಕರಣಕ್ಕೆ ಸಂಬಂಧಿಸಿದಂತೆ ಇಬ್ಬರು ಆರೋಪಿಗಳನ್ನು ಬಂಧಿಸಲಾಗಿದ್ದು, ಅವರಿಂದ ಲಕ್ಷಾಂತರ ರೂಪಾಯಿ ಮೌಲ್ಯದ ಚಿನ್ನಾಭರಣಗಳನ್ನು ವಶಪಡಿಸಿಕೊಳ್ಳಲಾಗಿದೆ.
ಘಟನೆಯ ವಿವರ: ಪತ್ತೊಂಜಿ ಕಟ್ಟೆಯ ನಿವಾಸಿ ಶಂಕರ ಕುಲಾಲ್ ಅವರು ಏಪ್ರಿಲ್ 23ರ ಬೆಳಿಗ್ಗೆ ಮನೆಯಿಂದ ಹೊರಗಡೆ ಹೋಗಿದ್ದ ಸಂದರ್ಭದಲ್ಲಿ ಕಳ್ಳರು ತಮ್ಮ ಕೈಚಳಕ ತೋರಿಸಿದ್ದಾರೆ. ಏಪ್ರಿಲ್ 24ರ ಸಂಜೆ 6 ಗಂಟೆಯ ಒಳಗಿನ ಅವಧಿಯಲ್ಲಿ ಮನೆಯ ಬಾಗಿಲು ಮೀಟಿ ಒಳನುಗ್ಗಿದ ಕಳ್ಳರು, ಕಪಾಟಿನಲ್ಲಿದ್ದ ಸುಮಾರು 2.64 ಲಕ್ಷ ರೂ. ಮೌಲ್ಯದ ಚಿನ್ನದ ನೆಕ್ಲೆಸ್, ಉಂಗುರಗಳು ಹಾಗೂ ಜುಮ್ಕಿ ಸೇರಿದಂತೆ ವಿವಿಧ ಆಭರಣಗಳನ್ನು ದೋಚಿದ್ದರು. ಈ ಬಗ್ಗೆ ಶಂಕರ ಕುಲಾಲ್ ಅವರು ಕಾರ್ಕಳ ನಗರ ಪೊಲೀಸ್ ಠಾಣೆಯಲ್ಲಿ ದೂರು ದಾಖಲಿಸಿದ್ದರು.
ಮಿಂಚಿನ ಕಾರ್ಯಾಚರಣೆ: ಪ್ರಕರಣ ದಾಖಲಾಗುತ್ತಿದ್ದಂತೆ ಕಾರ್ಯಪ್ರವೃತ್ತರಾದ ಪೊಲೀಸರು ವಿಶೇಷ ತಂಡವನ್ನು ರಚಿಸಿದ್ದರು. ಕಾರ್ಕಳ ಉಪವಿಭಾಗದ ಡಿವೈಎಸ್ಪಿ ವಿಜಯಪ್ರಸಾದ್ ಅವರ ಮಾರ್ಗದರ್ಶನದಲ್ಲಿ, ಪೊಲೀಸ್ ನಿರೀಕ್ಷಕ ಮಂಜಪ್ಪ ಡಿ.ಆರ್., ಪಿಎಸ್ಐಗಳಾದ ಮುರುಳೀಧರ ನಾಯ್ಕ, ಶಿವಕುಮಾರ್ ಎಸ್.ಆರ್. ಹಾಗೂ ಸಿಬ್ಬಂದಿಗಳ ತಂಡ ತನಿಖೆ ನಡೆಸಿ ಕೇವಲ 24 ಗಂಟೆಯೊಳಗೆ ಆರೋಪಿಗಳನ್ನು ಹೆಡೆಮುರಿ ಕಟ್ಟಿದ್ದಾರೆ.
ಬಂಧಿತರು ಮತ್ತು ವಶಪಡಿಸಿಕೊಂಡ ಸೊತ್ತು:
ಆನಂದ ಕುಲಾಲ್ (40) ಬೈರಂಪಳ್ಳಿ ಗ್ರಾಮದ ನಿವಾಸಿಯಾಗಿದ್ದು, ಕಳ್ಳತನ ಮಾಡಿದ ಪ್ರಮುಖ ಆರೋಪಿ. ಜಯರಾಮ ಆಚಾರ್ಯ (54) ಅಜೆಕಾರು ಮರ್ಣೆ ಗ್ರಾಮದ ನಿವಾಸಿಯಾಗಿದ್ದು, ಕಳವು ಮಾಡಿದ ಚಿನ್ನವನ್ನು ವಿಲೇವಾರಿ ಮಾಡಲು ಸಹಕರಿಸಿದ ಆರೋಪದಡಿ ಬಂಧಿಸಲಾಗಿದೆ.
ಆರೋಪಿಗಳಿಂದ ಒಟ್ಟು 39 ಗ್ರಾಂ ತೂಕದ, ಅಂದಾಜು 5.60 ಲಕ್ಷ ರೂ. ಮೌಲ್ಯದ ಚಿನ್ನಾಭರಣಗಳನ್ನು ಪೊಲೀಸರು ವಶಪಡಿಸಿಕೊಂಡಿದ್ದಾರೆ. ಬಂಧಿತರನ್ನು ನ್ಯಾಯಾಲಯಕ್ಕೆ ಹಾಜರುಪಡಿಸಲಾಗಿದೆ. ಅತ್ಯಲ್ಪ ಅವಧಿಯಲ್ಲಿ ಕಳ್ಳರನ್ನು ಪತ್ತೆಹಚ್ಚಿದ ಪೊಲೀಸ್ ತಂಡದ ಕಾರ್ಯವೈಖರಿಗೆ ಸಾರ್ವಜನಿಕ ವಲಯದಲ್ಲಿ ಶ್ಲಾಘನೆ ವ್ಯಕ್ತವಾಗಿದೆ.



crime
ಸುಳ್ಯದ ಮೆಸ್ಕಾಂ ಅಧಿಕಾರಿ ಟೈಂಯ… ! ಕಂಠಪೂರ್ತಿ ಕುಡಿದು ಮೆಟ್ಟಿಲಲ್ಲಿ ಹೊರಳಾಡಿದ ಮೆಸ್ಕಾಂ ಹಿರಿಯ ಅಧಿಕಾರಿ – ಸಾರ್ವಜನಿಕರ ಆಕ್ರೋಶ
ಸುಳ್ಯ: ಮೆಸ್ಕಾಂ ಇಲಾಖೆಯ ಹಿರಿಯ ಅಧಿಕಾರಿಯೊಬ್ಬರು ಕಂಠಪೂರ್ತಿ ಮದ್ಯ ಸೇವಿಸಿ ಶ್ರೀರಾಮ ಪೇಟೆಯ ಕಟ್ಟಡದ ಮೆಟ್ಟಿಲಲ್ಲಿ ಹೊರಳಾಡಿದ ಘಟನೆ ಸಾರ್ವಜನಿಕರ ತೀವ್ರ ಆಕ್ರೋಶಕ್ಕೆ ಕಾರಣವಾಗಿದೆ.

ನಡೆದದ್ದೇನು? : ಮಟಮಟ ಮಧ್ಯಾಹ್ನದಲ್ಲೇ ಮೆಸ್ಕಾಂ ಅಧಿಕಾರಿ ಮದ್ಯದ ನಶೆಯಲ್ಲಿ ಮೇಲೇಳಲಾರದೆ ಮೆಟ್ಟಿಲಲ್ಲಿ ಹೊರಳಾಡುತ್ತಿದ್ದರು. ವಿಷಯ ತಿಳಿದು ಸ್ಥಳದಲ್ಲಿ ಜನ ಜಮಾಯಿಸಿದ್ದರು.
ಮಾಹಿತಿ ತಿಳಿದ ಮೆಸ್ಕಾಂ ಸಿಬ್ಬಂದಿ ಇಲಾಖೆಗೆ ಮುಜುಗರವಾಗುವುದನ್ನು ಅರಿತು ತಕ್ಷಣ ಸ್ಥಳಕ್ಕೆ ಧಾವಿಸಿ, ಇಲಾಖಾ ವಾಹನದಲ್ಲಿ ಕುಡುಕ ಅಧಿಕಾರಿಯನ್ನು ತುಂಬಿಸಿಕೊಂಡು ಕರೆದೊಯ್ದಿದ್ದಾರೆ.

ಸಾರ್ವಜನಿಕರ ಒತ್ತಾಯ: ಕರ್ತವ್ಯದ ವೇಳೆಯಲ್ಲೇ ಮದ್ಯ ಸೇವಿಸಿ ಸಾರ್ವಜನಿಕ ಸ್ಥಳದಲ್ಲಿ ಹೊರಳಾಡಿ ಇಲಾಖೆಯ ಮಾನ ಹರಾಜು ಹಾಕಿದ ಅಧಿಕಾರಿಯ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಬೇಕು ಹಾಗೂ ಸೇವೆಯಿಂದ ಅಮಾನತು ಮಾಡಬೇಕು ಎಂದು ಸ್ಥಳೀಯರು ಒತ್ತಾಯಿಸಿದ್ದಾರೆ.
ಈ ಬಗ್ಗೆ ಮೆಸ್ಕಾಂ ಮೇಲಾಧಿಕಾರಿಗಳು ಇನ್ನೂ ಅಧಿಕೃತ ಪ್ರತಿಕ್ರಿಯೆ ನೀಡಿಲ್ಲ. ಘಟನೆಯ ವಿಡಿಯೋ ಸಾಮಾಜಿಕ ಜಾಲತಾಣದಲ್ಲಿ ಹರಿದಾಡುತ್ತಿದೆ.

-
crime4 weeks agoಧಾರ್ಮಿಕ ನಂಬಿಕೆಗೆ ಅವಮಾನ: ಕೊಡಗಿನ ಎಮ್ಮೆಮಾಡಿನಲ್ಲಿ ದೈವದ ವೇಷದಂತೆ ಧರಿಸಿ ಮದುಮಗನ ಅತಿರೇಕದ ವರ್ತನೆ!
-
crime3 months agoಅತ್ಯಾಚಾರ ಯತ್ನಕ್ಕೆ ತಡೆದ ಸೊಸೆಯ ಮುಖಕ್ಕೆ ಕಚ್ಚಿ ಕೊಲೆಗೆ ಯತ್ನಿಸಿದ ಮಾವ..ತಂದೆಯ ರಾಕ್ಷಸೀ ಕೃತ್ಯಕ್ಕೆ ಬೆಂಬಲಿಸಿದ ಗಂಡ..ಸುಳ್ಯ ಠಾಣಾ ವ್ಯಾಪ್ತಿಯಲ್ಲಿ ಅದೃಷ್ಟವಶಾತ್ ಬಚಾವಾದ ಸೊಸೆ..
-
Bantawala4 weeks agoವಿಟ್ಲದಲ್ಲಿ ನಡೆಯಿತೊಂದು ದೈವ ಕಾರಣಿಕ; ಪೊಲೀಸರ ಕಣ್ಣಿಗೆ ಮಣ್ಣೆರಚಿದರೂ ದೈವದ ದೃಷ್ಟಿಗೆ ತತ್ತರಿಸಿದ ದನಕಳ್ಳ..
-
Bantawala4 months agoನಾಗಬನ, ರಕ್ತೇಶ್ವರಿ ತಾಣ, ದೈವದೇವರ ಸಾನಿಧ್ಯ ದ್ವಂಸ ಗೊಳಿಸಿದ ಧರ್ಮದ್ರೋಹಿ ಕೃತ್ಯದ ವಿರುದ್ಧ ಭಕ್ತರ ಆಕ್ರೋಶ ; ನಾಶವಾದ ಸಾನಿಧ್ಯದಲ್ಲಿಯೇ ಸ್ವಾಮೀಜಿಯವರ ಮಾರ್ಗದರ್ಶನದಲ್ಲಿ ಕುಟುಂಬಸ್ತರು, ಸಾರ್ವಜನಿಕರ ಸಾಮೂಹಿಕ ಪ್ರಾರ್ಥನೆ
-
Dakshina Kannada4 months agoಶಾಸಕರ ಉಪಸ್ಥಿತಿಯಲ್ಲಿ ಪೊಲೀಸರ ನಿರಾಕರಣೆ ಮಧ್ಯೆಯೇ ಕೇಪುವಿನಲ್ಲಿ ನಡೆದ ಕೋಳಿಅಂಕ
-
Bantawala2 months agoಕುದ್ರಿಯ ತರವಾಡು ಮನೆಯಲ್ಲಿ ಸಂಕ್ರಮಣದಂದು ರಣಾಂಗಣ; ಅಧ್ಯಕ್ಷ, ಟ್ರಸ್ಟಿ ಮೇಲೆ ಮಾರಣಾಂತಿಕ ಹಲ್ಲೆ
-
Bantawala4 months agoವಿಟ್ಲದಲ್ಲಿ ಶಾರ್ಟ್ ಸರ್ಕ್ಯೂಟ್..ಶ್ರೀ ಎಲೆಕ್ಟ್ರಾನಿಕ್ಸ್ ,ಅಮಿತ್ ಹೋಟೆಲ್..ಸೇರಿ ಐದಾರು ಕಟ್ಟಡಗಳು ಸಂಪೂರ್ಣ ಬೆಂಕಿಗಾಹುತಿ..
-
Bantawala2 months agoವಿಟ್ಲ ಮೈತ್ರೇಯಿ ಗುರುಕುಲದ ವಿದ್ಯಾರ್ಥಿನಿ ವೈಗ ಲಕ್ಷ್ಮಿ(15) ಆತ್ಮಹತ್ಯೆ ? ; ಫೆ. 22ರಂದು ಗುರುಕುಲದಿಂದ ನಾಪತ್ತೆಯಾದ 10ನೇ ತರಗತಿ ವಿದ್ಯಾರ್ಥಿನಿ
