Connect with us

Dakshina Kannada

ಪುತ್ತೂರಿನ ಹೆಮ್ಮೆ ‘ಬಾಲವನ’ಕ್ಕೆ ಬಂತು ದುರ್ಗತಿ: ಕಾರಂತರ ಸ್ಮರಣಾ ತಾಣದ ಅವಸ್ಥೆಗೆ ಆಕ್ರೋಶ!

Published

on

ಜ್ಞಾನಪೀಠ ಪ್ರಶಸ್ತಿ ಪುರಸ್ಕೃತ, ಕಡಲ ತೀರದ ಭಾರ್ಗವ ಡಾ. ಕೋಟ ಶಿವರಾಮ ಕಾರಂತರ ಕರ್ಮಭೂಮಿ ಪುತ್ತೂರಿನ ‘ಬಾಲವನ’ ಈಗ ಅಕ್ಷರಶಃ ನಿರ್ಲಕ್ಷ್ಯದ ಸುಳಿಗೆ ಸಿಲುಕಿದೆ. ಮಕ್ಕಳಿಗಾಗಿ ಕಾರಂತರು ಕಂಡ ಕನಸಿನ ಲೋಕ ಇಂದು ದುಸ್ಥಿತಿಯಲ್ಲಿದ್ದು, ಪ್ರವಾಸಿಗರು ಹಾಗೂ ಸ್ಥಳೀಯರ ಪಾಲಿಗೆ ನಿರಾಸೆಯ ತಾಣವಾಗಿ ಮಾರ್ಪಟ್ಟಿದೆ.


ಮಕ್ಕಳ ಮನೋರಂಜನೆ ಮತ್ತು ಸಾಂಸ್ಕೃತಿಕ ಚಟುವಟಿಕೆಗಳಿಗಾಗಿ ಕೋಟ್ಯಂತರ ರೂಪಾಯಿ ವೆಚ್ಚದಲ್ಲಿ ನಿರ್ಮಿಸಲಾದ ಬಾಲವನ ಇಂದು ಪಾಳುಬಿದ್ದಂತಿದೆ. ಆಟದ ಉಪಕರಣಗಳು ಮುರಿದು ಬಿದ್ದಿದೆ, ಉದ್ಯಾನದಲ್ಲಿ ಕಳೆಗಿಡಗಳು ಬೆಳೆದು ನಿಂತಿವೆ. ಬಹಳ ವರ್ಷಗಳಿಂದ ಆಟಿಕೆಗಳಿಗೆ ಬಣ್ಣ ಬಳಿದಿಲ್ಲ ಅಥವಾ ದುರಸ್ತಿ ಮಾಡಿಲ್ಲ ಎಂಬುದು ಕಂಡುಬರುತ್ತಿದೆ. ಸ್ವಚ್ಛತೆ ಇಲ್ಲದೆ ಪ್ಲಾಸ್ಟಿಕ್, ಕಸದ ರಾಶಿ ತುಂಬಿಕೊಂಡಿದೆ. ಕುಡಿಯುವ ನೀರಿನ ವ್ಯವಸ್ಥೆ, ಶುಚಿತ್ವ ಕಾಣದ ಶೌಚಾಲಯಗಳು ಸಂಪೂರ್ಣ ಹಾಳಾಗಿವೆ. ಅಲ್ಲಲ್ಲಿ ಕಾಣ ಸಿಗುವ ಬಾಟಲಿಗಳು ಕೊಳೆತ ಕಸಗಳು ಇದು ನಿರ್ಲಕ್ಷ್ಯದ ಸುಳಿಗೆ ಸಿಲುಕಿದೆ ಎಂಬುವುದನ್ನು ಸಾರಿ ಹೇಳುತ್ತಿದೆ.


ಹದಗೆಟ್ಟ ಆಟಿಕೆಗಳು; ಮಕ್ಕಳಿಗೆ ಸಂಚಕಾರ!
ಬಾಲವನಕ್ಕೆ ಬರುವ ಮಕ್ಕಳು ಸಂಭ್ರಮದಿಂದ ಆಟವಾಡಲು ಇರುವ ಸೀ-ಸಾ (See-saw), ಮೆರ್ರಿ-ಗೋ-ರೌಂಡ್, ಜಾರುಬಂಡೆಗಳು ಸಂಪೂರ್ಣ ತುಕ್ಕು ಹಿಡಿದು ಕಿತ್ತು ಹೋಗಿವೆ. ಆಟದ ಸಾಮಗ್ರಿಗಳು ಮುರಿದು ಬಿದ್ದಿದ್ದು, ಉಯ್ಯಾಲೆ ಮುರಿದು ನೆಲದ ಮೇಲಿದ್ದು, ಯಾವ ಮಗು ನೋವು ಅನುಭವಿಸಿದೆಯೋ ಗೊತ್ತಿಲ್ಲ. ಹರಿತವಾದ ಕಬ್ಬಿಣದ ಭಾಗಗಳು ಹೊರಬಂದಿವೆ. ಇದರಿಂದಾಗಿ ಇಲ್ಲಿ ಆಟವಾಡಲು ಬರುವ ಪುಟಾಣಿ ಮಕ್ಕಳಿಗೆ ಗಾಯಗಳಾಗುತ್ತಿವೆ. ಮಕ್ಕಳ ಉದ್ಯಾನವನದ ನೆಲದಲ್ಲಿ ಇರಬೇಕಾದ ಮರಳು ಮಾಯವಾಗಿದ್ದು, ಗಟ್ಟಿಯಾದ ನೆಲದ ಮೇಲೆ ಮಕ್ಕಳು ಬಿದ್ದರೆ ಅಪಾಯ ಕಟ್ಟಿಟ್ಟ ಬುತ್ತಿ. ಜಾರುಬಂಡೆಯ ಕಬ್ಬಿಣದ ಶೀಟ್ ಕಿತ್ತು ಹೋಗಿದ್ದು, ಅದರ ಮೇಲಿಂದ ಜಾರುವ ಮಗುವಿನ ಮೈ ಕೈ ಕತ್ತರಿಸುವ ಅಪಾಯವಿದೆ.

ಸ್ವಿಮ್ಮಿಂಗ್ ಪೂಲ್ ಬಿಟ್ಟರೆ ಏನೂ ಇಲ್ಲ: ದೂರದ ಊರುಗಳಿಂದ ಬರುವ ಶಾಲಾ ಪ್ರವಾಸದ ಬಸ್ಸುಗಳು ಹಾಗೂ ಪ್ರವಾಸಿಗರು ಇಲ್ಲಿನ ಸ್ವಿಮ್ಮಿಂಗ್ ಪೂಲ್ ಹೊರತುಪಡಿಸಿ ಉಳಿದ ವ್ಯವಸ್ಥೆ ಕಂಡು ಅಸಮಾಧಾನ ವ್ಯಕ್ತಪಡಿಸುತ್ತಿದ್ದಾರೆ.
“ಕಾರಂತರ ಹೆಸರಲ್ಲಿ ಮಾಡಿದ ಬಾಲವನ ಮಕ್ಕಳಿಗೆ ಬೇಡವಾಗಿದೆ. ಸಂಜೆ ಹೊತ್ತಿಗೆ ಇಲ್ಲಿ ಯಾರೂ ಕಾಲಿಡುವಂತಿಲ್ಲ. ನಿರ್ವಹಣೆಗೆ ಯಾರೂ ಇಲ್ಲ” ಎಂದು ಸ್ಥಳೀಯ ಪೋಷಕರು ಆಕ್ರೋಶ ವ್ಯಕ್ತಪಡಿಸಿದ್ದಾರೆ. ಶಾಲಾ ಮಕ್ಕಳ ಶೈಕ್ಷಣಿಕ ಪ್ರವಾಸಕ್ಕೂ ಬಾಲವನ ಯೋಗ್ಯವಲ್ಲದ ಸ್ಥಿತಿಗೆ ತಲುಪಿದೆ.

ಶಾಸಕರು ಮತ್ತು ಇಲಾಖೆಯ ಗಮನಕ್ಕೆ ಮನವಿ
“ಪುತ್ತೂರಿನಲ್ಲಿ ಏನಿದೆ ಎಂದು ಕೇಳಿದರೆ ನಾವು ಬಾಲವನ ಇದೆ ಎಂದು ಹೆಮ್ಮೆಯಿಂದ ಹೇಳುತ್ತಿದ್ದೆವು. ಆದರೆ ಈಗಿನ ಪರಿಸ್ಥಿತಿ ನೋಡಿದರೆ ಅತಿಥಿಗಳನ್ನು ಇಲ್ಲಿಗೆ ಕರೆಯಲು ಮುಜುಗರವಾಗುತ್ತಿದೆ,” ಎಂದು ವೀಕ್ಷಕರು ಅಳಲು ತೋಡಿಕೊಂಡಿದ್ದಾರೆ. ಪುತ್ತೂರಿನ ಶಾಸಕರು ಅಭಿವೃದ್ಧಿ ಕೆಲಸಗಳಲ್ಲಿ ಸಕ್ರಿಯರಾಗಿದ್ದು, ಬಾಲವನದ ಈ ಸಮಸ್ಯೆಯನ್ನೂ ಆದಷ್ಟು ಬೇಗ ಬಗೆಹರಿಸುತ್ತಾರೆ ಎಂಬ ಆಶಯವನ್ನು ವ್ಯಕ್ತಪಡಿಸಿದ್ದಾರೆ.


ಸಾರ್ವಜನಿಕರ ಆಗ್ರಹ:
ಕನ್ನಡದ ಸಾಂಸ್ಕೃತಿಕ ಲೋಕದ ದಿಗ್ಗಜ ಶಿವರಾಮ ಕಾರಂತರು ಮಕ್ಕಳಿಗಾಗಿ ಮೀಸಲಿಟ್ಟ ಈ ಜಾಗವನ್ನು ಕೇವಲ ಪ್ರವಾಸಿ ತಾಣವಾಗಿ ನೋಡದೆ, ಒಂದು ಭಾವನಾತ್ಮಕ ಆಸ್ತಿಯಾಗಿ ಕಾಪಾಡಬೇಕಿದೆ. ಕೂಡಲೇ ಸಂಬಂಧಪಟ್ಟ ಕನ್ನಡ ಮತ್ತು ಸಂಸ್ಕೃತಿ ಇಲಾಖೆ ಹಾಗೂ ಸ್ಥಳೀಯ ಆಡಳಿತ ಎಚ್ಚೆತ್ತುಕೊಂಡು, ಬಾಲವನಕ್ಕೆ ಹೊಸ ಕಳೆ ನೀಡಬೇಕು ಮತ್ತು ಮಕ್ಕಳಿಗೆ ಸುರಕ್ಷಿತ ಆಟದ ವಾತಾವರಣ ನಿರ್ಮಿಸಿಕೊಡಬೇಕು. “ಕೇವಲ ಕಟ್ಟಡ ಕಟ್ಟಿದರೆ ಸಾಲದು, ಕಾರಂತರ ಆಶಯದಂತೆ ಮಕ್ಕಳ ಸೃಜನಶೀಲತೆಗೆ ವೇದಿಕೆಯಾಗಬೇಕು. ತಕ್ಷಣ ದುರಸ್ತಿ, ಭದ್ರತಾ ಸಿಬ್ಬಂದಿ ನೇಮಕ, ಸ್ವಚ್ಛತೆ ಕಾಪಾಡಬೇಕು” ಎಂದು ಕಾರಂತ ಅಭಿಮಾನಿ ಬಳಗ ಮತ್ತು ಪುತ್ತೂರು ಜನತೆ ಆಗ್ರಹಿಸಿದ್ದಾರೆ.

ಮುಂದಕ್ಕೆ ಓದಲು ಇಲ್ಲಿ ಕ್ಲಿಕ್‌ ಮಾಡಿ
Advertisement

court

ವಕೀಲರ ರಕ್ಷಣೆಗಾಗಿ ಆಗ್ರಹ: ನಾಳೆ (ನವೆಂಬರ್ 3) ರಾಜ್ಯಾದ್ಯಂತ ನ್ಯಾಯಾಲಯ ಕಲಾಪಗಳಿಂದ ವಕೀಲರು ದೂರ ಉಳಿಯಲು ಕರೆ.

Published

on

​ಬೆಂಗಳೂರು: ವಕೀಲರ ಮೇಲೆ ನಡೆಯುತ್ತಿರುವ ಸರಣಿ ಹಲ್ಲೆಗಳು ಮತ್ತು ಕೊಲೆಗಳನ್ನು ಖಂಡಿಸಿ ಹಾಗೂ ಕಟ್ಟುನಿಟ್ಟಿನ ‘ವಕೀಲರ ರಕ್ಷಣಾ ಕಾಯ್ದೆ’ (Advocates Protection Act) ಜಾರಿಗೆ ಒತ್ತಾಯಿಸಿ, ದಿ ವಕೀಲರ ಅಸೋಸಿಯೇಷನ್ ಬೆಂಗಳೂರು (The Advocates’ Association, Bengaluru) ವತಿಯಿಂದ ನಾಳೆ ಅಂದರೆ ನವೆಂಬರ್ 3, 2026ರ ಮಂಗಳವಾರ ರಾಜ್ಯಾದ್ಯಂತ ನ್ಯಾಯಾಲಯ ಕಲಾಪಗಳಿಂದ ವಕೀಲರು ಸಂಪೂರ್ಣವಾಗಿ ದೂರ ಉಳಿದು (Abstain from work) ಪ್ರತಿಭಟಿಸಲು ಕರೆ ನೀಡಲಾಗಿದೆ.


​ಇತ್ತೀಚೆಗೆ ವೈಟ್‌ಫೀಲ್ಡ್‌ನ ವಕೀಲರಾದ ಮಂಜುನಾಥ್ ಮತ್ತು ಅನ್ನಪೂರ್ಣೇಶ್ವರಿ ನಗರದ ಶ್ರೀರಾಮ್ ಅವರ ಬರ್ಬರ ಕೊಲೆ ಹಾಗೂ ಗೌರಿಬಿದನೂರಿನ ವಕೀಲ ವೆಂಕಟರಮಣ ಸನ್ನಕಿ ಅವರ ಮೇಲಿನ ಹತ್ಯೆ ಯತ್ನದ ಘಟನೆಗಳನ್ನು ಅಸೋಸಿಯೇಷನ್ ತೀವ್ರವಾಗಿ ಖಂಡಿಸಿದೆ. ವಕೀಲರಿಗೆ ವೃತ್ತಿಯಲ್ಲಿ ಸೂಕ್ತ ಭದ್ರತೆ ಇಲ್ಲದಿರುವುದನ್ನು ವಿರೋಧಿಸಿ ಮತ್ತು ವಕೀಲರ ರಕ್ಷಣಾ ಕಾಯ್ದೆಯನ್ನು ಬಲಪಡಿಸುವಂತೆ ಒತ್ತಾಯಿಸಿ ಅಕ್ಟೋಬರ್ 29ರಂದು ನಡೆದ ಸರ್ವಸಭೆಯ ಸಭೆಯಲ್ಲಿ ಈ ನಿರ್ಣಯ ಕೈಗೊಳ್ಳಲಾಗಿದೆ.
​ಈ ಹಿನ್ನೆಲೆಯಲ್ಲಿ, ನವೆಂಬರ್ 3ರಂದು ಮಂಗಳವಾರದಂದು ಕರ್ತವ್ಯದಿಂದ ದೂರ ಉಳಿಯುವಂತೆ ನಿರ್ಧರಿಸಲಾಗಿದ್ದು, ರಾಜ್ಯದ ಎಲ್ಲಾ ವಕೀಲರ ಸಂಘಗಳು ಈ ಪ್ರತಿಭಟನೆಯಲ್ಲಿ ಭಾಗವಹಿಸಿ ಸಹಕರಿಸುವಂತೆ ಬೆಂಗಳೂರು ವಕೀಲರ ಸಂಘದ ಅಧ್ಯಕ್ಷ ವಿವೇಕ್ ಸುಬ್ಬಾರೆಡ್ಡಿ, ಪ್ರಧಾನ ಕಾರ್ಯದರ್ಶಿ ಹೆಚ್.ವಿ. ಪ್ರವೀಣ್ ಗೌಡ, ಉಪಾಧ್ಯಕ್ಷ ಗಿರೀಶ್ ಕುಮಾರ್ ಸಿ.ಎಸ್. ಹಾಗೂ ಖಚಾಂಚಿ ಶ್ವೇತಾ ರವಿಶಂಕರ್ ಮನವಿ ಮಾಡಿದ್ದಾರೆ

Continue Reading

Bantawala

ವಿಟ್ಲದ ಖ್ಯಾತ ವೈದ್ಯ ಡಾ. ವಿ.ಕೆ. ಹೆಗ್ಡೆ ಅವರಿಗೆ ಜಿಲ್ಲಾ ರಾಜ್ಯೋತ್ಸವ ಪ್ರಶಸ್ತಿ

Published

on

ವಿಟ್ಲದ ಖ್ಯಾತ ವೈದ್ಯ, ಪುಷ್ಪಾಕ್ ಹೆಲ್ತ್ ಸೆಂಟರ್ ಸಂಸ್ಥಾಪಕ *ಡಾ. ವಿ.ಕೆ. ಹೆಗ್ಡೆ* ಅವರಿಗೆ ದಕ್ಷಿಣ ಕನ್ನಡ ಜಿಲ್ಲಾ ರಾಜ್ಯೋತ್ಸವ ಪ್ರಶಸ್ತಿ ಲಭಿಸಿದೆ.1987 ರಿಂದ ವಿಟ್ಲದಲ್ಲಿ ನಿರಂತರವಾಗಿ ವೈದ್ಯಕೀಯ ಸೇವೆ ಸಲ್ಲಿಸುತ್ತಾ ಬಂದಿರುವ ಡಾ. ವಿ.ಕೆ. ಹೆಗ್ಡೆ ಅವರ ವೃತ್ತಿಪರ ಪಯಣವು ಗ್ರಾಮೀಣ ಪ್ರದೇಶದಲ್ಲಿ ದೀರ್ಘಕಾಲದ ಪ್ರಾಥಮಿಕ ಆರೋಗ್ಯ ಸೇವೆಯ ನಿರಂತರ ಅಧ್ಯಾಯವಾಗಿದೆ.ವೈದ್ಯಕೀಯ ವೃತ್ತಿಯನ್ನು ಕೇವಲ ಉದ್ಯೋಗವಾಗಿ ಪರಿಗಣಿಸದೆ, ಜನರ ಆರೋಗ್ಯದ ಅಗತ್ಯಗಳಿಗೆ ಸ್ಪಂದಿಸುವ ಮಾನವೀಯ ಸೇವೆಯಾಗಿ ಅವರು ಅಳವಡಿಸಿಕೊಂಡಿದ್ದಾರೆ. ಗ್ರಾಮೀಣ ಹಾಗೂ ಅರೆನಗರ ಪ್ರದೇಶದ ಜನರಿಗೆ ಸಮಗ್ರ ಪ್ರಾಥಮಿಕ ಆರೋಗ್ಯ ಸೇವೆ, ವೈಯಕ್ತಿಕ ವೈದ್ಯಕೀಯ ಕಾಳಜಿ ಮತ್ತು ಮಾನವೀಯ ಸ್ಪಂದನೆಯನ್ನು ನೀಡುತ್ತಾ ಬಂದಿದ್ದಾರೆ.ವೈದ್ಯಕೀಯ ವೃತ್ತಿಯ ಜೊತೆಗೆ ರೋಟರಿ ಹಾಗೂ ವಿವಿಧ ಸಮಾಜಮುಖಿ ಚಟುವಟಿಕೆಗಳ ಮೂಲಕ ಆರೋಗ್ಯ ಮತ್ತು ಸಾಮಾಜಿಕ ಕಲ್ಯಾಣ ಕ್ಷೇತ್ರಗಳಲ್ಲಿಯೂ ದೀರ್ಘಕಾಲದ ಕೊಡುಗೆ ನೀಡಿದ್ದಾರೆ.ವಿಶೇಷವಾಗಿ ಕೋವಿಡ್-19 ಮಹಾಮಾರಿಯ ಸಂಕಷ್ಟದ ಅವಧಿಯಲ್ಲಿ ವೈದ್ಯಕೀಯ ಸೇವೆಯ ನಿರಂತರತೆಯನ್ನು ಕಾಪಾಡಿ, ಅಗತ್ಯವಿರುವ ರೋಗಿಗಳಿಗೆ ಸಲಹೆ, ಚಿಕಿತ್ಸೆ, ಮಾರ್ಗದರ್ಶನ ಮತ್ತು ಸೂಕ್ತ ರೆಫರಲ್ ನೆರವು ನೀಡಿದ ಅವರ ಸೇವಾ ಬದ್ಧತೆಯು ಈ ನಾಮನಿರ್ದೇಶನದ ಪ್ರಮುಖ ಅಂಶವಾಗಿದೆ.

Continue Reading

CONGRESS

ಕಸ್ತೂರಿ ರಂಗನ್ ವರದಿ: ಜನರ ಆತಂಕ ಸಂಸದರ ಗಮನಕ್ಕೆ ತರದಿರುವುದು ಕಳವಳಕಾರಿ – ಎಂ. ವೆಂಕಪ್ಪ ಗೌಡ

Published

on

ಸುಳ್ಯ: ಕಸ್ತೂರಿ ರಂಗನ್ ವರದಿಯಿಂದ ಸುಳ್ಯ ತಾಲೂಕಿನ ಹಲವು ಗ್ರಾಮಗಳ ಜನರು ತೀವ್ರ ಆತಂಕಕ್ಕೆ ಒಳಗಾಗಿದ್ದು, ಜನರ ಬದುಕಿನ ಅಳಿವು-ಉಳಿವಿನ ಈ ಗಂಭೀರ ವಿಚಾರವನ್ನು ಸಂಬಂಧಪಟ್ಟ ಸಂಸದರ ಗಮನಕ್ಕೆ ಪರಿಣಾಮಕಾರಿಯಾಗಿ ತಲುಪಿಸದಿರುವುದು ಕಳವಳಕಾರಿ ಸಂಗತಿಯಾಗಿದೆ ಎಂದು ಕೆಪಿಸಿಸಿ ಸಂಯೋಜಕ ಹಾಗೂ ಸುಳ್ಯ ನಗರ ಪಂಚಾಯತ್ ಮಾಜಿ ಅಧ್ಯಕ್ಷ ಎಂ. ವೆಂಕಪ್ಪ ಗೌಡ ಹೇಳಿದ್ದಾರೆ.

ವರದಿಯಿಂದ ಬಾಧಿತವಾಗಿರುವ ಪ್ರದೇಶಗಳ ಜನರು ಹಲವು ವರ್ಷಗಳಿಂದ ಭಯದಲ್ಲೇ ಜೀವನ ನಡೆಸುತ್ತಿದ್ದು, ಇದರ ವಿರುದ್ಧ ಈಗಾಗಲೇ ಹಲವು ಹಂತದ ಹೋರಾಟಗಳು ನಡೆದಿವೆ. ಜನರ ಹಿತದೃಷ್ಟಿಯಿಂದ ಕರ್ನಾಟಕ ಸರ್ಕಾರವು ಕೇಂದ್ರ ಸರ್ಕಾರದ ಕರಡು ಅಧಿಸೂಚನೆಯನ್ನು ಏಳು ಬಾರಿ ತಿರಸ್ಕರಿಸಿ ವಾಪಸ್ ಕಳುಹಿಸಿದೆ. ಆದರೆ, ಈ ವಿಷಯದಲ್ಲಿ ಅಂತಿಮ ತೀರ್ಮಾನ ಕೈಗೊಳ್ಳುವ ಅಧಿಕಾರ ಕೇಂದ್ರ ಸರ್ಕಾರದ ಬಳಿಯೇ ಇರುವುದರಿಂದ, ಬಾಧಿತ ಗ್ರಾಮಗಳ ಜನರ ಭವಿಷ್ಯ ಕೇಂದ್ರದ ನಿರ್ಧಾರದ ಮೇಲೆ ನಿಂತಿದೆ. ಆದ್ದರಿಂದ, ಸ್ಥಳೀಯ ಸಂಸದರು ಮತ್ತು ಕೇಂದ್ರ ಸಚಿವರು ಈ ವಿಚಾರದಲ್ಲಿ ಹೆಚ್ಚಿನ ಮುತುವರ್ಜಿ ವಹಿಸಿ ಶಾಶ್ವತ ಪರಿಹಾರ ಕಂಡುಕೊಳ್ಳಬೇಕಿದೆ.

ಇತ್ತೀಚೆಗೆ ಸುಳ್ಯ ತಾಲೂಕಿಗೆ ಆಗಮಿಸಿದ್ದ ಸಂಸದರು ವರದಿ ವಿರೋಧಿ ಪ್ರತಿಭಟನೆಯಲ್ಲಿ ಭಾಗವಹಿಸಿದ್ದರೂ, ಸ್ಥಳದಲ್ಲಿದ್ದ ಹೋರಾಟಗಾರರು ಅವರಿಗೆ ಜನರ ಸಮಸ್ಯೆಗಳನ್ನು ವಿವರಿಸುವ ಮನವಿ ಸಲ್ಲಿಸದಿರುವುದು ಮತ್ತು ಒತ್ತಡ ಹೇರದಿರುವುದು ಬೇಸರದ ಸಂಗತಿ. ಈ ಹೋರಾಟ ಕೇವಲ ರಾಜ್ಯ ಸರ್ಕಾರಕ್ಕೆ ಮಾತ್ರ ಸೀಮಿತವಾಗಿದೆಯೇ ಎಂಬ ಪ್ರಶ್ನೆ ಸಾರ್ವಜನಿಕರಲ್ಲಿ ಮೂಡುತ್ತಿದೆ.

ಕಸ್ತೂರಿ ರಂಗನ್ ವರದಿಯ ವಿಷಯವು ಕೇಂದ್ರ ప్రభుత్వದ ನಿರ್ಧಾರಕ್ಕೆ ಸಂಬಂಧಿಸಿದ ಮಹತ್ವದ ವಿಚಾರವಾಗಿರುವುದರಿಂದ, ಹೋರಾಟಗಾರರು, ಜನಪ್ರತಿನಿಧಿಗಳು ಹಾಗೂ ಮುಖಂಡರು ಒಗ್ಗಟ್ಟಿನಿಂದ ಕಾರ್ಯನಿರ್ವಹಿಸಿ ಕೇಂದ್ರದ ಮೇಲೆಯೂ ಒತ್ತಡ ತರಬೇಕು. ಜನಸಾಮಾನ್ಯರ ನೈಜ ಸಮಸ್ಯೆಗಳನ್ನು ಸಂಸದರ ಗಮನಕ್ಕೆ ತಲುಪಿಸುವ ಜವಾಬ್ದಾರಿಯನ್ನು ನಿರ್ಲಕ್ಷಿಸುವುದು ಸರಿಯಲ್ಲ ಎಂದು ವೆಂಕಪ್ಪ ಗೌಡ ಅವರು ತಿಳಿಸಿದ್ದಾರೆ

Continue Reading

ads (2)
ads (3)
ads (4)
ads (5)
ads (6)
ads (1)
ads (8)
ads (7)

Trending

Copyright © 2025 Deevatige

error: Content is protected !!