accident
ಬೊಲೆರೊ-ಬೈಕ್ ಭೀಕರ ಅಪಘಾತ – ಬಜರಂಗ ದಳದ ಇಬ್ಬರು ಕಾರ್ಯಕರ್ತರು ದುರ್ಮರಣ
- Share
- Tweet /home/u338848369/domains/deevatigenews.com/public_html/wp-content/plugins/mvp-social-buttons/mvp-social-buttons.php on line 72
https://deevatigenews.com/wp-content/uploads/2026/05/8888888.jpg&description=ಬೊಲೆರೊ-ಬೈಕ್ ಭೀಕರ ಅಪಘಾತ – ಬಜರಂಗ ದಳದ ಇಬ್ಬರು ಕಾರ್ಯಕರ್ತರು ದುರ್ಮರಣ', 'pinterestShare', 'width=750,height=350'); return false;" title="Pin This Post">
ಕುಣಿಗಲ್: ತಾಲೂಕಿನ ರಾಜ್ಯ ಹೆದ್ದಾರಿ 33ರ ಟಿ.ಎಂ. ರಸ್ತೆ, ಕೊತ್ತಗೆರೆ ಗ್ರಾಮದ ಬಳಿ ಗುರುವಾರ, ಮೇ 7 ರಂದು ನಡೆದ ಭೀಕರ ರಸ್ತೆ ಅಪಘಾತದಲ್ಲಿ ಬೈಕ್ ಸವಾರರಾದ ಬಜರಂಗ ದಳದ ಇಬ್ಬರು ಕಾರ್ಯಕರ್ತರು ಮೃತಪಟ್ಟಿದ್ದಾರೆ.
ಏನಾಯಿತು?
ತುಮಕೂರು ಕಡೆಯಿಂದ ಕುಣಿಗಲ್ ಕಡೆಗೆ ಬರುತ್ತಿದ್ದ ಬೊಲೆರೊ ವಾಹನ ಚಾಲಕನ ನಿಯಂತ್ರಣ ತಪ್ಪಿ ಎದುರಿಗೆ ಬಂದ ಕಾರಿಗೆ ಡಿಕ್ಕಿ ಹೊಡೆದಿದೆ. ಬಳಿಕ ದ್ವಿಚಕ್ರ ವಾಹನಕ್ಕೆ ಗುದ್ದಿದ ಪರಿಣಾಮ ಈ ದುರಂತ ಸಂಭವಿಸಿದೆ.
ಅಪಘಾತದಲ್ಲಿ ಆಕಾಶ್ (28) ಸ್ಥಳದಲ್ಲೇ ಮೃತಪಟ್ಟರೆ, ತೀವ್ರವಾಗಿ ಗಾಯಗೊಂಡಿದ್ದ ಮಂಜುನಾಥ್ (36) ಕುಣಿಗಲ್ ಸರ್ಕಾರಿ ಆಸ್ಪತ್ರೆಯಲ್ಲಿ ಚಿಕಿತ್ಸೆ ಫಲಕಾರಿಯಾಗದೆ ಕೊನೆಯುಸಿರೆಳೆದಿದ್ದಾರೆ.
ಮೃತರು ಯಾರು?
ಮೃತರು ಕುಣಿಗಲ್ ಪಟ್ಟಣದ ಆಶ್ರಯ ಕಾಲೋನಿ ನಿವಾಸಿ ಆಕಾಶ್ ಮತ್ತು ಚೌಡೇಶ್ವರಿ ಬೀದಿ ನಿವಾಸಿ ಮಂಜುನಾಥ್ ಎಂದು ಗುರುತಿಸಲಾಗಿದೆ.
ಆಕಾಶ್ ಕುಣಿಗಲ್‌ನ ಖಾಸಗಿ ಫೈನಾನ್ಸ್ ಕಂಪನಿಯಲ್ಲಿ ಕೆಲಸ ಮಾಡುತ್ತಿದ್ದರು. ಕೆಲ ದಿನಗಳ ಹಿಂದೆ ಕೆಲಸ ಬಿಟ್ಟಿದ್ದರಿಂದ ಪಿಎಫ್ ಹಣ ಪಡೆಯಲು ದಾಖಲಾತಿಗಳೊಂದಿಗೆ, ಸ್ನೇಹಿತ ಮಂಜುನಾಥ್ ಜೊತೆ ಬೈಕ್‌ನಲ್ಲಿ ತುಮಕೂರು ಪಿಎಫ್ ಕಚೇರಿಗೆ ತೆರಳುತ್ತಿದ್ದರು.
ಪೊಲೀಸ್ ಕ್ರಮ:
ಸ್ಥಳಕ್ಕೆ ಕುಣಿಗಲ್ ವೃತ್ತ ನಿರೀಕ್ಷಕ ಮಾದ್ಯಾನಾಯ್ಕ ಭೇಟಿ ನೀಡಿ ಪರಿಶೀಲನೆ ನಡೆಸಿ ಪ್ರಕರಣ ದಾಖಲಿಸಿಕೊಂಡು ತನಿಖೆ ಕೈಗೊಂಡಿದ್ದಾರೆ.

ಶಾಸಕರು ಭೇಟಿ:
ಘಟನಾ ಸ್ಥಳಕ್ಕೆ ಶಾಸಕ ಡಾ. ಎಚ್.ಡಿ. ರಂಗನಾಥ್ ಭೇಟಿ ನೀಡಿ ಪೊಲೀಸರಿಂದ ಮಾಹಿತಿ ಪಡೆದರು. “ನನ್ನ ಕ್ಷೇತ್ರದ ಇಬ್ಬರು ಯುವಕರು ಘಟನೆಯಲ್ಲಿ ಮೃತಪಟ್ಟಿರುವುದು ತೀವ್ರ ದುಃಖ ತಂದಿದೆ” ಎಂದು ಅವರು ಹೇಳಿದರು.


accident
ಮಾಣಿ ಸಮೀಪ ನಿಯಂತ್ರಣ ತಪ್ಪಿ ಚರಂಡಿಗೆ ಜಿಗಿದ ಇನ್ನೋವಾ ಕಾರು;ತಪ್ಪಿದ ಭೀಕರ ಪ್ರಾಣಾಪಾಯ
ಮಾಣಿ: ಮಂಗಳೂರು-ಬೆಂಗಳೂರು ರಾಷ್ಟ್ರೀಯ ಹೆದ್ದಾರಿಯ ಮಾಣಿ ಸಮೀಪದ ಅಳಿರಾ ಎಂಬಲ್ಲಿ ಇಂದು ಮಧ್ಯಾಹ್ನ ಭೀಕರ ರಸ್ತೆ ಅಪಘಾತವೊಂದು ಸಂಭವಿಸಿದ್ದು, ಪ್ರಯಾಣಿಕರು ಅದೃಷ್ಟವಶಾತ್ ಪ್ರಾಣಾಪಾಯದಿಂದ ಪಾರಾಗಿದ್ದಾರೆ.
ಇಂದು ಮಧ್ಯಾಹ್ನ ಸುಮಾರು 2 ಗಂಟೆಯ ವೇಳೆಗೆ ಈ ಘಟನೆ ನಡೆದಿದೆ. ಉಪ್ಪಿನಂಗಡಿ ಕಡೆಯಿಂದ ಮಂಗಳೂರು ಕಡೆಗೆ ಪ್ರಯಾಣಿಸುತ್ತಿದ್ದ ಇನ್ನೋವಾ ಕಾರು ಚಾಲಕನ ನಿಯಂತ್ರಣ ತಪ್ಪಿ ರಸ್ತೆ ಬದಿಯ ಫುಟ್‌ಪಾತ್ ಡಿವೈಡರ್‌ಗೆ ಡಿಕ್ಕಿ ಹೊಡೆದಿದೆ. ಡಿಕ್ಕಿಯ ರಭಸಕ್ಕೆ ಕಾರು ರಸ್ತೆ ಬದಿಯ ಆಳವಾದ ಚರಂಡಿಯನ್ನು ಜಿಗಿದು, ಪಕ್ಕದಲ್ಲಿದ್ದ ಬಾಳೆ ಗಿಡಗಳ ಗುಂಟೆಗೆ ಬಡಿದು ನಿಂತಿದೆ.
ಅದೃಷ್ಟವಶಾತ್ ಬಚಾವ್
ಅಪಘಾತದ ಸಮಯದಲ್ಲಿ ಕಾರಿನಲ್ಲಿ ನಾಲ್ಕು ಮಂದಿ ಪ್ರಯಾಣಿಕರಿದ್ದರು ಎನ್ನಲಾಗಿದ್ದು, ಯಾರಿಗೂ ಯಾವುದೇ ಪ್ರಾಣಾಪಾಯ ಸಂಭವಿಸಿಲ್ಲ ಎಂದು ತಿಳಿದುಬಂದಿದೆ. ಆದರೆ, ಅಪಘಾತದ ತೀವ್ರತೆಗೆ ಇನ್ನೋವಾ ಕಾರಿನ ಮುಂಭಾಗ ಸಂಪೂರ್ಣವಾಗಿ ನುಜ್ಜುಗುಜ್ಜಾಗಿದೆ. ಸದ್ಯ ಕ್ರೇನ್ ಮುಖಾಂತರ ಕಾರನ್ನು ಮೇಲಕ್ಕೆತ್ತಿ ರಸ್ತೆಗೆ ತರುವ ಕಾರ್ಯಾಚರಣೆ ನಡೆಯುತ್ತಿದೆ.
ಒಂದೇ ದಿನ ಎರಡು ಅಪಘಾತ: ಸವಾರರಲ್ಲಿ ಆತಂಕ
ಇದೇ ರಾಷ್ಟ್ರೀಯ ಹೆದ್ದಾರಿಯ ಕೇವಲ 3 ಕಿಲೋಮೀಟರ್ ವ್ಯಾಪ್ತಿಯಲ್ಲಿ ಇಂದು ಬೆಳಿಗ್ಗೆಯಷ್ಟೇ ಮತ್ತೊಂದು ಕಾರು ಡಿವೈಡರ್‌ಗೆ ಡಿಕ್ಕಿ ಹೊಡೆದು ಚಾಲಕ ಮೃತಪಟ್ಟ ಘಟನೆ ನಡೆದಿತ್ತು. ಈ ಬೆನ್ನಲ್ಲೇ ಮಧ್ಯಾಹ್ನ ಮತ್ತೊಂದು ಭೀಕರ ಅಪಘಾತ ಸಂಭವಿಸಿರುವುದು ಸ್ಥಳೀಯ ಹಾಗೂ ಹೆದ್ದಾರಿ ಪ್ರಯಾಣಿಕರಲ್ಲಿ ತೀವ್ರ ಆತಂಕ ಮೂಡಿಸಿದೆ. ಮಾಣಿ ಪರಿಸರದಲ್ಲಿ ಹೆದ್ದಾರಿ ಸಂಚಾರದ ವೇಳೆ ಚಾಲಕರು ಹೆಚ್ಚಿನ ಜಾಗ್ರತೆ ವಹಿಸುವ ಅಗತ್ಯವಿದೆ ಎಂದು ಸಾರ್ವಜನಿಕರು ಒತ್ತಾಯಿಸಿದ್ದಾರೆ.



accident
ಗಡಿಯಾರದಲ್ಲಿ ಭೀಕರ ಅಪಘಾತ: ಡಿವೈಡರ್‌ಗೆ ಡಿಕ್ಕಿ ಹೊಡೆದ ಕಾರು; ನಾಲ್ವರಿಗೆ ಗಂಭೀರ ಗಾಯ, ಚಾಲಕ ದುರ್ಮರಣ
ಬಂಟ್ವಾಳ/ಉಪ್ಪಿನಂಗಡಿ: ಮಂಗಳೂರು-ಬೆಂಗಳೂರು ರಾಷ್ಟ್ರೀಯ ಹೆದ್ದಾರಿಯ ಮಾಣಿ ಮತ್ತು ಉಪ್ಪಿನಂಗಡಿ ಮಧ್ಯದ ಗಡಿಯಾರ ಎಂಬಲ್ಲಿ ಇಂದು ಮಧ್ಯಾಹ್ನ ಭೀಕರ ಕಾರು ಅಪಘಾತವೊಂದು ಸಂಭವಿಸಿದ್ದು, ಚಾಲಕ ಸಾವನ್ನಪ್ಪಿದ್ದಾರೆ. ಮಂಗಳೂರಿನಿಂದ ಹಾಸನ ಕಡೆಗೆ ಪ್ರಯಾಣಿಸುತ್ತಿದ್ದ ಕಾರು ನಿಯಂತ್ರಣ ತಪ್ಪಿ ಹೆದ್ದಾರಿಯ ಡಿವೈಡರ್‌ಗೆ ಬಲವಾಗಿ ಡಿಕ್ಕಿ ಹೊಡೆದಿದೆ.

ಹೆದ್ದಾರಿಯಲ್ಲಿ ಕೇಳಿಬಂದ ಭೀಕರ ಸದ್ದು: ಮಧ್ಯಾಹ್ನ ಸುಮಾರು 12 ಗಂಟೆಯ ವೇಳೆಗೆ ಈ ಘಟನೆ ನಡೆದಿದ್ದು, ಡಿಕ್ಕಿಯ ರಭಸಕ್ಕೆ ದೊಡ್ಡ ಮಟ್ಟದ ಸದ್ದು ಕೇಳಿಬಂದಿದೆ ಎನ್ನಲಾಗಿದೆ. ಅಪಘಾತದ ತೀವ್ರತೆಗೆ ಕಾರು (ನಂಬರ್: KA 12 N 6668) ಸಂಪೂರ್ಣವಾಗಿ ನುಜ್ಜುಗುಜ್ಜಾಗಿದೆ. ಸದ್ದು ಕೇಳಿ ಸ್ಥಳೀಯರು ಹಾಗೂ ಹೆದ್ದಾರಿಯಲ್ಲಿ ಸಂಚರಿಸುತ್ತಿದ್ದ ಸಾರ್ವಜನಿಕರು ತಕ್ಷಣವೇ ಸ್ಥಳಕ್ಕೆ ಧಾವಿಸಿ, ಕಾರಿನಲ್ಲಿದ್ದವರ ರಕ್ಷಣೆಗೆ ಮುಂದಾಗಿದ್ದಾರೆ.

ಹಾಸನ ಮೂಲದ ಪ್ರಯಾಣಿಕರು: ಕಾರಿನಲ್ಲಿ ಹಾಸನ ಮೂಲದ ನಾಲ್ಕು ಮಂದಿ ಪ್ರಯಾಣಿಸುತ್ತಿದ್ದರು ಎಂದು ತಿಳಿದುಬಂದಿದೆ. ಅಪಘಾತದಲ್ಲಿ ನಾಲ್ವರಿಗೂ ಗಂಭೀರ ಗಾಯಗಳಾಗಿದ್ದು, ತಕ್ಷಣವೇ ಅವರನ್ನು ಮಂಗಳೂರಿನ ಫಾದರ್ ಮುಲ್ಲರ್ಸ್ ಆಸ್ಪತ್ರೆಗೆ ದಾಖಲಿಸಿ ಚಿಕಿತ್ಸೆ ನೀಡಲಾಗುತ್ತಿದೆ. ಗಾಯಾಳುಗಳ ಪೈಕಿ ಕಾರು ಚಾಲಕನ ಸ್ಥಿತಿ ಅತ್ಯಂತ ಚಿಂತಾಜನಕವಾಗಿದ್ದು ಆಸ್ಪತ್ರೆಯಲ್ಲಿ ಸಾವನ್ನಪ್ಪಿರುವುದಾಗಿ ಮಾಹಿತಿ ಲಭ್ಯವಾಗಿದೆ.
ಸ್ಥಳಕ್ಕೆ ಭೇಟಿ ನೀಡಿದ ಪೊಲೀಸರು ಪರಿಶೀಲನೆ ನಡೆಸಿದ್ದು, ಸುಗಮ ಸಂಚಾರಕ್ಕೆ ವ್ಯವಸ್ಥೆ ಕಲ್ಪಿಸಿದ್ದಾರೆ. ಗಾಯಾಳುಗಳ ಸಂಪೂರ್ಣ ವಿವರ ಹಾಗೂ ಅಪಘಾತಕ್ಕೆ ನಿಖರ ಕಾರಣ ಇನ್ನಷ್ಟೇ ತಿಳಿದುಬರಬೇಕಿದೆ.



accident
ಬೆಳ್ತಂಗಡಿ: ಚಾಲಕನ ನಿಯಂತ್ರಣ ತಪ್ಪಿ ರಸ್ತೆಬದಿಯ ಚರಂಡಿಗೆ ಉರುಳಿದ ಕಾರು; ಮೂವರಿಗೆ ಗಾಯ
ಬೆಳ್ತಂಗಡಿ: ಚಾಲಕನ ನಿಯಂತ್ರಣ ತಪ್ಪಿದ ಕಾರೊಂದು ರಸ್ತೆಬದಿಯ ಆಳವಾದ ಚರಂಡಿಗೆ ಬಿದ್ದ ಘಟನೆ ಬೆಳ್ತಂಗಡಿ ಸಮೀಪದ ರಾಷ್ಟ್ರೀಯ ಹೆದ್ದಾರಿಯ ಕಾಶಿಬೆಟ್ಟು ಎಂಬಲ್ಲಿ ಮಂಗಳವಾರ ಬೆಳಿಗ್ಗೆ ಸಂಭವಿಸಿದೆ.
ಅಪಘಾತದ ಸಮಯದಲ್ಲಿ ಕಾರಿನಲ್ಲಿ ಮೂವರು ಪ್ರಯಾಣಿಕರಿದ್ದು, ಕಾರು ನಿಯಂತ್ರಣ ತಪ್ಪಿ ನೇರವಾಗಿ ಚರಂಡಿಗೆ ಇಳಿದಿದೆ. ಪರಿಣಾಮವಾಗಿ ಕಾರಿನಲ್ಲಿದ್ದ ಮೂವರಿಗೂ ಗಾಯಗಳಾಗಿದ್ದು, ಅವರನ್ನು ತಕ್ಷಣವೇ ಸ್ಥಳೀಯ ಆಸ್ಪತ್ರೆಗೆ ದಾಖಲಿಸಿ ಚಿಕಿತ್ಸೆ ಕೊಡಿಸಲಾಗುತ್ತಿದೆ ಎಂದು ತಿಳಿದುಬಂದಿದೆ.
ಅಪಘಾತದ ತೀವ್ರತೆಗೆ ಕಾರಿನ ಮುಂಭಾಗ ಜಖಂಗೊಂಡಿದೆ. ಸ್ಥಳಕ್ಕೆ ಸ್ಥಳೀಯರು ಧಾವಿಸಿ ಗಾಯಾಳುಗಳ ರಕ್ಷಣೆಗೆ ನೆರವಾಗಿದ್ದಾರೆ. ಸ್ಥಳೀಯ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ಈ ಘಟನೆ ನಡೆದಿದೆ.
-
crime3 months agoಧಾರ್ಮಿಕ ನಂಬಿಕೆಗೆ ಅವಮಾನ: ಕೊಡಗಿನ ಎಮ್ಮೆಮಾಡಿನಲ್ಲಿ ದೈವದ ವೇಷದಂತೆ ಧರಿಸಿ ಮದುಮಗನ ಅತಿರೇಕದ ವರ್ತನೆ!
-
crime4 months agoಅತ್ಯಾಚಾರ ಯತ್ನಕ್ಕೆ ತಡೆದ ಸೊಸೆಯ ಮುಖಕ್ಕೆ ಕಚ್ಚಿ ಕೊಲೆಗೆ ಯತ್ನಿಸಿದ ಮಾವ..ತಂದೆಯ ರಾಕ್ಷಸೀ ಕೃತ್ಯಕ್ಕೆ ಬೆಂಬಲಿಸಿದ ಗಂಡ..ಸುಳ್ಯ ಠಾಣಾ ವ್ಯಾಪ್ತಿಯಲ್ಲಿ ಅದೃಷ್ಟವಶಾತ್ ಬಚಾವಾದ ಸೊಸೆ..
-
Bantawala2 months agoವಿಟ್ಲದಲ್ಲಿ ನಡೆಯಿತೊಂದು ದೈವ ಕಾರಣಿಕ; ಪೊಲೀಸರ ಕಣ್ಣಿಗೆ ಮಣ್ಣೆರಚಿದರೂ ದೈವದ ದೃಷ್ಟಿಗೆ ತತ್ತರಿಸಿದ ದನಕಳ್ಳ..
-
Bantawala5 months agoನಾಗಬನ, ರಕ್ತೇಶ್ವರಿ ತಾಣ, ದೈವದೇವರ ಸಾನಿಧ್ಯ ದ್ವಂಸ ಗೊಳಿಸಿದ ಧರ್ಮದ್ರೋಹಿ ಕೃತ್ಯದ ವಿರುದ್ಧ ಭಕ್ತರ ಆಕ್ರೋಶ ; ನಾಶವಾದ ಸಾನಿಧ್ಯದಲ್ಲಿಯೇ ಸ್ವಾಮೀಜಿಯವರ ಮಾರ್ಗದರ್ಶನದಲ್ಲಿ ಕುಟುಂಬಸ್ತರು, ಸಾರ್ವಜನಿಕರ ಸಾಮೂಹಿಕ ಪ್ರಾರ್ಥನೆ
-
accident4 weeks agoವಿಟ್ಲ ಆಕಾಶದಲ್ಲಿ ಹಾರಾಡಿದ ವಿಮಾನ: ತಾಂತ್ರಿಕ ದೋಷವಲ್ಲ, ಹವಾಮಾನ ವೈಪರೀತ್ಯದ ಕಾರಣ ! ಸಾರ್ವಜನಿಕರು ಆತಂಕ ಪಡುವ ಅಗತ್ಯವಿಲ್ಲ
-
Dakshina Kannada6 months agoಶಾಸಕರ ಉಪಸ್ಥಿತಿಯಲ್ಲಿ ಪೊಲೀಸರ ನಿರಾಕರಣೆ ಮಧ್ಯೆಯೇ ಕೇಪುವಿನಲ್ಲಿ ನಡೆದ ಕೋಳಿಅಂಕ
-
Bantawala5 months agoವಿಟ್ಲದಲ್ಲಿ ಶಾರ್ಟ್ ಸರ್ಕ್ಯೂಟ್..ಶ್ರೀ ಎಲೆಕ್ಟ್ರಾನಿಕ್ಸ್ ,ಅಮಿತ್ ಹೋಟೆಲ್..ಸೇರಿ ಐದಾರು ಕಟ್ಟಡಗಳು ಸಂಪೂರ್ಣ ಬೆಂಕಿಗಾಹುತಿ..
-
Bantawala4 months agoಕುದ್ರಿಯ ತರವಾಡು ಮನೆಯಲ್ಲಿ ಸಂಕ್ರಮಣದಂದು ರಣಾಂಗಣ; ಅಧ್ಯಕ್ಷ, ಟ್ರಸ್ಟಿ ಮೇಲೆ ಮಾರಣಾಂತಿಕ ಹಲ್ಲೆ
