Connect with us

arrest

ಪೊಲೀಸ್ ಕಾರ್ಯಾಚರಣೆ: ಹಲವು ವರ್ಷಗಳಿಂದ ತಲೆಮರೆಸಿಕೊಂಡಿದ್ದ ಇಬ್ಬರು ವಾರಂಟ್ ಆರೋಪಿಗಳ ಬಂಧನ

Published

on

ಮಂಗಳೂರು: ದೀರ್ಘಕಾಲದಿಂದ ನ್ಯಾಯಾಲಯಕ್ಕೆ ಹಾಜರಾಗದೆ ತಲೆಮರೆಸಿಕೊಂಡಿದ್ದ ಆರೋಪಿಗಳ ಪತ್ತೆಗೆ ವಿಶೇಷ ಕಾರ್ಯಾಚರಣೆ ಕೈಗೊಂಡಿರುವ ದಕ್ಷಿಣ ಕನ್ನಡ ಜಿಲ್ಲಾ ಪೊಲೀಸರು, ಕಳೆದ 6 ಮತ್ತು 34 ವರ್ಷಗಳಿಂದ ತಪ್ಪಿಸಿಕೊಂಡಿದ್ದ ಇಬ್ಬರು ಆರೋಪಿಗಳನ್ನು ಬಂಧಿಸುವಲ್ಲಿ ಯಶಸ್ವಿಯಾಗಿದ್ದಾರೆ.

1. 6 ವರ್ಷಗಳ ಬಳಿಕ ಸಿಕ್ಕಿಬಿದ್ದ ಮೊಬೈಲ್ ಅಂಗಡಿ ಕಳ್ಳತನ ಪ್ರಕರಣದ ಆರೋಪಿ

2018ರಲ್ಲಿ ಮಂಗಳೂರು ತಾಲೂಕಿನ ಬೈಕಂಪಾಡಿ ಗ್ರಾಮದ ಕುಡುಂಬೂರು ಎಂಬಲ್ಲಿರುವ ‘ಪೂಜಾ ಮೊಬೈಲ್ಸ್’ ಅಂಗಡಿಯಲ್ಲಿ ನಡೆದಿದ್ದ ಭಾರಿ ಕಳ್ಳತನ ಪ್ರಕರಣಕ್ಕೆ ಸಂಬಂಧಿಸಿದಂತೆ ಆರೋಪಿಯೊಬ್ಬನನ್ನು ಪಣಂಬೂರು ಪೊಲೀಸರು ಬಂಧಿಸಿದ್ದಾರೆ.

ಘಟನೆಯ ಹಿನ್ನೆಲೆ: ಅಸ್ಸಾಂ ರಾಜ್ಯದ ಸಿಲ್ಚಾರ್ ಮೂಲದ ಪಾರೂಲ್ ಹುಸೈನ್ ಲಸ್ಕರ್ (34) ಎಂಬಾತ 2018ರಲ್ಲಿ ಮೊಬೈಲ್ ಅಂಗಡಿಯಿಂದ ಸುಮಾರು ₹2,17,740 ಮೌಲ್ಯದ ಮೊಬೈಲ್ ಫೋನ್, ಅದರ ಬಿಡಿಭಾಗ, ಸಿಸಿಟಿವಿ ಡಿವಿಆರ್ ಹಾಗೂ 2,100 ನಗದು ಹಣವನ್ನು ಕಳವು ಮಾಡಿ, ರೂ. 10,000 ಮೌಲ್ಯದ 02 ಕಂಪ್ಯೂಟರ್ ಮೊನಿಟರನ್ನು ಒಡೆದು ನಷ್ಟವುಂಟು ಮಾಡಿರುವ ಪ್ರಕರಣಕ್ಕೆ ಸಂಬಂದಿಸಿ ಈ ಹಿಂದೆ 2018 ರಲ್ಲಿ ಪಣಂಬೂರು ಪೊಲೀಸ್ ಠಾಣೆಯಲ್ಲಿ ಠಾಣಾ ಅ.ಕ್ರ. 152/2018 ಕಲಂ. 427, 457, 380 ಐಪಿಸಿ ಪ್ರಕರಣ ದಾಖಲಾಗಿರುತ್ತದೆ.

ಬಂಧನ: ಕಳೆದ 6 ವರ್ಷಗಳಿಂದ ನ್ಯಾಯಾಲಯದ ವಿಚಾರಣೆಗೆ ಹಾಜರಾಗದೆ ತಲೆಮರೆಸಿಕೊಂಡಿದ್ದ ಈತನ ವಿರುದ್ಧ ನ್ಯಾಯಾಲಯವು ದಸ್ತಗಿರಿ ವಾರಂಟ್ ಹೊರಡಿಸಿತ್ತು. ಮೇಲಾಧಿಕಾರಿಗಳ ನಿರ್ದೇಶನದಂತೆ ಪಣಂಬೂರು ಪೊಲೀಸ್ ನಿರೀಕ್ಷಕ ಮೊಹಮ್ಮದ್ ಸಲೀಂ ಅಬ್ಬಾಸ್ ಮಾರ್ಗದರ್ಶನದಲ್ಲಿ, ಸಿಬ್ಬಂದಿಗಳಾದ ನವೀನ ಚಂದ್ರ, ಸಯ್ಯದ್ ಇಂತಿಯಾಜ್, ರಾಕೇಶ್ ಮತ್ತು ವಿನಯ್ ಅವರ ತಂಡ ಕೇರಳದ ಮಂಜೇಶ್ವರದ ಬಳಿ ಆರೋಪಿಯನ್ನು ಬಂಧಿಸಿ ನ್ಯಾಯಾಲಯಕ್ಕೆ ಹಾಜರುಪಡಿಸಿದೆ.

2. 34 ವರ್ಷಗಳ ಬಳಿಕ ವಿಟ್ಲ ಪೊಲೀಸರ ಬಲೆಗೆ ಬಿದ್ದ ಪೆಟ್ರೋಲ್ ಸಾಗಾಟ ಪ್ರಕರಣದ ಆರೋಪಿ

ಮತ್ತೊಂದು ಗಮನಾರ್ಹ ಕಾರ್ಯಾಚರಣೆಯಲ್ಲಿ, ಬರೋಬ್ಬರಿ 3 ದಶಕಗಳಿಗೂ ಹೆಚ್ಚು ಕಾಲ ಪೊಲೀಸರ ಕಣ್ಣು ತಪ್ಪಿಸಿ ಓಡಾಡುತ್ತಿದ್ದ ಆರೋಪಿಯನ್ನು ವಿಟ್ಲ ಪೊಲೀಸರು ಬಂಧಿಸಿದ್ದಾರೆ.

ಘಟನೆಯ ಹಿನ್ನೆಲೆ: 1992ರ ಅಕ್ಟೋಬರ್ 14ರಂದು ಕಾರೊಂದರಲ್ಲಿ ಅಕ್ರಮವಾಗಿ ಪೆಟ್ರೋಲ್ ಸಾಗಾಟ ಮಾಡುತ್ತಿದ್ದ ಪ್ರಕರಣಕ್ಕೆ ಸಂಬಂಧಿಸಿ ಕಾಸರಗೋಡು ಮೂಲದ ಸಿದ್ದೀಕ್ ಎಂಬಾತನ ವಿರುದ್ಧ ವಿಟ್ಲ ಠಾಣೆಯಲ್ಲಿ ಅಕ್ರ: 124/1992 ಕಲಂ:3 ಮತ್ತು ಕಲಂ: 23 ಪೆಟ್ರೋಲಿಯಂ ಕಾಯ್ದೆಯಡಿ ಪ್ರಕರಣ ದಾಖಲಾಗಿತ್ತು. ಅಂದಿನಿಂದ ಈತ ನ್ಯಾಯಾಲಯಕ್ಕೆ ಹಾಜರಾಗದೆ ತಲೆಮರೆಸಿಕೊಂಡಿದ್ದನು.

ಬಂಧನ: ವಿಟ್ಲ ಠಾಣಾ ಪ್ರೊಬೇಶನರ್ ಪಿಎಸ್ಐ ಸಿದ್ದಪ್ಪ ಅವರ ನೇತೃತ್ವದ ತಂಡವು ಕನ್ಯಾನ ಗ್ರಾಮದ ಕಬ್ಬಿನ ಮೂಲೆ ಎಂಬಲ್ಲಿ ದಾಳಿ ನಡೆಸಿ ಸಿದ್ದೀಕ್‌ನನ್ನು ವಶಕ್ಕೆ ಪಡೆದಿದೆ. ಎಎಸ್ಐ ಜಯರಾಮ್ ಹಾಗೂ ಸಿಬ್ಬಂದಿಗಳಾದ ಗೋಪಾಲ್, ಯಂಕಪ್ಪ ಮತ್ತು ಶ್ರೀಶೈಲ್ ಜೋರಾಪುರ ಈ ಕಾರ್ಯಾಚರಣೆಯಲ್ಲಿ ಪಾಲ್ಗೊಂಡಿದ್ದರು. ಬಂಧಿತನನ್ನು ಕಾನೂನು ಕ್ರಮಕ್ಕಾಗಿ ನ್ಯಾಯಾಲಯಕ್ಕೆ ಹಾಜರುಪಡಿಸಲಾಗುವುದು ಎಂದು ಪೊಲೀಸ್ ಪ್ರಕಟಣೆ ತಿಳಿಸಿದೆ.

ಹಳೆಯ ಪ್ರಕರಣಗಳನ್ನು ಬೆನ್ನಟ್ಟಿ ಆರೋಪಿಗಳನ್ನು ಕಾನೂನಿನ ಪಂಜರಕ್ಕೆ ತಳ್ಳುತ್ತಿರುವ ಪೊಲೀಸ್ ಇಲಾಖೆಯ ಈ ಕ್ರಮಕ್ಕೆ ಸಾರ್ವಜನಿಕ ವಲಯದಲ್ಲಿ ಮೆಚ್ಚುಗೆ ವ್ಯಕ್ತವಾಗಿದೆ




ads (2)
ads (3)
ads (4)
ads (5)
ads (6)
ads (1)
ads (8)
ads (7)
ಮುಂದಕ್ಕೆ ಓದಲು ಇಲ್ಲಿ ಕ್ಲಿಕ್‌ ಮಾಡಿ
Advertisement

arrest

6 ವರ್ಷಗಳಿಂದ ವಿದೇಶದಲ್ಲಿದ್ದ ವಾರೆಂಟ್ ಆರೋಪಿ ವಿಮಾನ ನಿಲ್ದಾಣದಲ್ಲಿ ಅರೆಸ್ಟ್: ಬಂಟ್ವಾಳ ಪೊಲೀಸರ ಕಾರ್ಯಾಚರಣೆ

Published

on

ಮಂಗಳೂರು: ನ್ಯಾಯಾಲಯದ ವಿಚಾರಣೆಗೆ ಹಾಜರಾಗದೆ ಕಳೆದ 6 ವರ್ಷಗಳಿಂದ ವಿದೇಶದಲ್ಲಿ ತಲೆಮರೆಸಿಕೊಂಡಿದ್ದ ವಾರೆಂಟ್ ಆರೋಪಿಯನ್ನು ಬಂಟ್ವಾಳ ನಗರ ಪೊಲೀಸರು ಮಂಗಳೂರು ಅಂತಾರಾಷ್ಟ್ರೀಯ ವಿಮಾನ ನಿಲ್ದಾಣದಲ್ಲಿ ವಶಕ್ಕೆ ಪಡೆದಿದ್ದಾರೆ.

ಮಂಗಳೂರು ಬಜಾಲ್‌ನಂತೂರು ನಿವಾಸಿ ಮಹಮ್ಮದ್ ನೌಫಲ್ @ ಸಫಾರಿ ನೌಫಲ್ (34) ದಸ್ತಗಿರಿಯಾದ ಆರೋಪಿ.

ಪ್ರಕರಣದ ವಿವರ: ಬಂಟ್ವಾಳ ನಗರ ಪೊಲೀಸ್ ಠಾಣೆಯಲ್ಲಿ ದಾಖಲಾಗಿದ್ದ ಪ್ರಕರಣಕ್ಕೆ (ಅ.ಕ್ರ: 24/2020, ಐಪಿಸಿ ಕಲಂ: 143, 147, 148, 504, 323, 324, 506, 427 r/w 149 ಮತ್ತು ಕಾವಲು ಕಾಯ್ದೆ) ಸಂಬಂಧಿಸಿದಂತೆ ಈಾತನು ಮಾನ್ಯ ನ್ಯಾಯಾಲಯಕ್ಕೆ ವಿಚಾರಣೆಗೆ ಹಾಜರಾಗದೆ ವಿದೇಶಕ್ಕೆ ಪರಾರಿಯಾಗಿದ್ದ. ಈತನ ವಿರುದ್ಧ ನ್ಯಾಯಾಲಯದಿಂದ ವಾರೆಂಟ್ ಜಾರಿಯಾಗಿತ್ತು.

ಸೆಪ್ಟೆಂಬರ್ 15, 2026ರಂದು ವಿದೇಶದಿಂದ ಮನೆಗೆ ಹಿಂತಿರುಗುತ್ತಿದ್ದ ವೇಳೆ, ಮಂಗಳೂರು ಅಂತಾರಾಷ್ಟ್ರೀಯ ವಿಮಾನ ನಿಲ್ದಾಣದ ಇಮಿಗ್ರೇಷನ್ ವಿಭಾಗದ ಸಹಾಯದಿಂದ ಬಂಟ್ವಾಳ ನಗರ ಪೊಲೀಸರು ಆರೋಪಿಯನ್ನು ಯಶಸ್ವಿಯಾಗಿ ಬಂಧಿಸಿದ್ದಾರೆ.

ಬಂಧಿತ ಆರೋಪಿಯನ್ನು ಮಾನ್ಯ ನ್ಯಾಯಾಲಯಕ್ಕೆ ಹಾಜರುಪಡಿಸಲಾಗಿದ್ದು, ನ್ಯಾಯಾಲಯವು ಸೆಪ್ಟೆಂಬರ್ 29, 2026ರವರೆಗೆ ನ್ಯಾಯಾಂಗ ಬಂಧನ ವಿಧಿಸಿ ಆದೇಶಿಸಿದೆ.

Continue Reading

arrest

ಬೆಳ್ತಂಗಡಿ: ದಲಿತ ಕುಟುಂಬದ ಜಮೀನಿಗೆ ಅಕ್ರಮ ಪ್ರವೇಶಿಸಿ ಅಶ್ಲೀಲ ಪ್ರದರ್ಶನ – ಆರೋಪಿ ಬಂಧನ

Published

on

ಬೆಳ್ತಂಗಡಿ: ದಕ್ಷಿಣ ಕನ್ನಡ ಜಿಲ್ಲೆಯ ಬೆಳ್ತಂಗಡಿ ತಾಲೂಕಿನ ವೇಣೂರು ಸಮೀಪದಲ್ಲಿ ಪರಿಶಿಷ್ಟ ಜಾತಿಯ ಕುಟುಂಬಗಳಿಗೆ ಸೇರಿದ ಜಮೀನಿಗೆ ಅಕ್ರಮ ಪ್ರವೇಶಿಸಿ ಕೃತ್ಯವೆಸಗಿ, ದಲಿತ ಕುಟುಂಬದ ಮಹಿಳೆಯರ ಮುಂದೆ ಪಂಚೆ ಎತ್ತಿ ಮರ್ಮಾಂಗ ಪ್ರದರ್ಶಿಸಿ ವಿಕೃತಿ ಮೆರೆದ ವಿಲಕ್ಷಣ ಪ್ರಕರಣ ನಡೆದಿದ್ದು, ಈ ಬಗ್ಗೆ ವೇಣೂರು ಠಾಣೆಯಲ್ಲಿ ಪ್ರಕರಣ ದಾಖಲಾಗಿ ಆರೋಪಿಯನ್ನು ಪೊಲೀಸರು ಬಂಧಿಸಿದ್ದಾರೆ.

ಬಂಧಿತ ಆರೋಪಿಯನ್ನು ಬೆಳ್ತಂಗಡಿ ತಾಲೂಕಿನ ಹೊಸಂಗಡಿ ಗ್ರಾಮದ ಪಟ್ಟಾಡಿ ಮನೆಯ ಅಬ್ದುಲ್ ಹನೀಫ್ ಹುಸೇನ್ (50) ಎಂದು ಗುರುತಿಸಲಾಗಿದೆ.

ಘಟನೆ ವಿವರ:

ಬೆಳ್ತಂಗಡಿ ತಾಲೂಕಿನ ವೇಣೂರು ಸಮೀಪದ ಪಡ್ಯಾರಬೆಟ್ಟು ಎಂಬಲ್ಲಿ ಸುಮಾರು 40 ವರ್ಷಗಳಿಗಿಂತಲೂ ಹೆಚ್ಚು ಕಾಲದಿಂದ ವಾಸ್ತವ್ಯವಿದ್ದು ಕೃಷಿ ಚಟುವಟಿಕೆ ನಡೆಸಿಕೊಂಡು ಬರುತ್ತಿದ್ದ ಪರಿಶಿಷ್ಟ ಜಾತಿಯ ಕುಟುಂಬದ ಸ್ವಾಧೀನದ ಜಾಗದಲ್ಲಿ ಸಿಮೆಂಟ್ ಕಂಬ ಹಾಗೂ ತಂತಿ ಬೇಲಿ ಹಾಕಿ ಕುಟುಂಬ ಕೃಷಿ ಕಾರ್ಯದಲ್ಲಿ ತೊಡಗಿತ್ತು.

ಸೆ.7 ರಂದು ಸ್ಥಳೀಯ ನಿವಾಸಿ ಹನೀಫ್ ಎಂಬಾತ ಏಕಾಏಕಿ ಆ ಜಾಗಕ್ಕೆ ಅತಿಕ್ರಮ ಪ್ರವೇಶಿಸಿ, ಜಾತಿ ನಿಂದನೆ ಮಾಡಿ ಅವಾಚ್ಯ ಮತ್ತು ಅಶ್ಲೀಲ ಪದಗಳಿಂದ ನಿಂದಿಸಿದ್ದಾನೆ. ಬಡ ಕುಟುಂಬ ಹಾಕಿದ್ದ ಸಿಮೆಂಟ್ ಬೇಲಿ ಕಂಬ ಹಾಗೂ ತಂತಿ ಬೇಲಿಯನ್ನು ಕಿತ್ತೆಸೆದು, ಅಡಿಕೆ ಹಾಗೂ ಬಾಳೆ ಗಿಡಗಳನ್ನು ಮುರಿದು ದಾಂಧಲೆ ನಡೆಸಿ ಕೊಲೆ ಬೆದರಿಕೆ ಹಾಕಿದ್ದಾನೆ ಎಂದು ಆರೋಪಿಸಲಾಗಿದೆ.

ಈ ವೇಳೆ ಕೆಲಸದಲ್ಲಿ ತೊಡಗಿದ್ದ ದಲಿತ ಕುಟುಂಬದ ಮಹಿಳೆಯರು ದಾಂಧಲೆಯ ಘಟನೆಯನ್ನು ತಮ್ಮ ಮೊಬೈಲ್‌ನಲ್ಲಿ ವಿಡಿಯೋ ಚಿತ್ರೀಕರಣ ಮಾಡುತ್ತಿದ್ದಾಗ ಆರೋಪಿ ಹನೀಫ್ ಮಹಿಳೆಯರ ಎದುರು ಬಂದು ತಾನು ಉಟ್ಟಿದ್ದ ಪಂಚೆಯನ್ನು ಎತ್ತಿ ಒಳ ಉಡುಪನ್ನು ಜಾರಿಸಿ ತನ್ನ ಗುಪ್ತಾಂಗವನ್ನು ತೋರಿಸುತ್ತಾ ಸಾರ್ವಜನಿಕವಾಗಿ ವಿಕೃತಿಯನ್ನು ಮೆರೆದಿದ್ದಾನೆ. “ನಿಮ್ಮನ್ನು ಇದರಿಂದಲೇ ಅತ್ಯಾಚಾರ ಮಾಡುತ್ತೇನೆ, ಈ ಜಾಗ ಬಿಟ್ಟು ಹೋಗದಿದ್ದರೆ ನಿಮ್ಮನ್ನು ಕೊಲ್ಲದೆ ಬಿಡುವುದಿಲ್ಲ” ಎಂದು ಬೆದರಿಕೆ ಹಾಕಿ ಮಹಿಳೆಯರನ್ನು ಬೆನ್ನಟ್ಟಿಕೊಂಡು ಬಂದಿದ್ದಾನೆ ಎಂದು ದೂರಿನಲ್ಲಿ ತಿಳಿಸಲಾಗಿದೆ.

ದೂರು ಮತ್ತು ಬಂಧನ:

ಈತನ ವಿಕೃತಿಯಿಂದ ಭಯಗೊಂಡ ಬಡ ಕುಟುಂಬವು ಸ್ಥಳೀಯ ದಲಿತ ಮುಖಂಡರು ಹಾಗೂ ಕಾರ್ಯಕರ್ತರೊಂದಿಗೆ ವೇಣೂರು ಪೊಲೀಸ್ ಠಾಣೆಗೆ ತೆರಳಿ ವಿಡಿಯೋ ಚಿತ್ರೀಕರಣದ ದೃಶ್ಯಾವಳಿ ಸಾಕ್ಷ್ಯಾಧಾರಗಳೊಂದಿಗೆ ಸೆ.8 ರಂದು ದೂರು ನೀಡಿದೆ.

ದೂರಿನ ಅನ್ವಯ ವೇಣೂರು ಠಾಣೆಯಲ್ಲಿ ದಲಿತ ದೌರ್ಜನ್ಯ ಕಾಯ್ದೆ ಅಡಿಯಲ್ಲಿ ಹಾಗೂ ಬಿಎನ್ಎಸ್ 329(3), 352, 351(2), 75(1), 324(4) ರಂತೆ ಪ್ರಕರಣ ದಾಖಲಿಸಲಾಗಿದೆ.

ಪ್ರಕರಣ ದಾಖಲಿಸಿಕೊಂಡ ವೇಣೂರು ಪೊಲೀಸರು ಆರೋಪಿಯನ್ನು ಸಂಜೆ ಬಂಧಿಸಿ ಮಂಗಳೂರು ನ್ಯಾಯಾಲಯಕ್ಕೆ ಹಾಜರುಪಡಿಸಿದ್ದು, ನ್ಯಾಯಾಲಯ ಆರೋಪಿಗೆ ನ್ಯಾಯಾಂಗ ಬಂಧನ ವಿಧಿಸಿದೆ.

40 ವರ್ಷಗಳಿಂದ ಕೃಷಿ ಮಾಡಿಕೊಂಡು ಬಂದಿದ್ದ ಬಡ ಪರಿಶಿಷ್ಟ ಕುಟುಂಬದ ಮೇಲೆ ದೌರ್ಜನ್ಯ ನಡೆಸಿ, ಮಹಿಳೆಯರ ಮುಂದೆ ಅಸಭ್ಯವಾಗಿ ವರ್ತಿಸಿದ ಆರೋಪಿಗೆ ಸ್ಥಳೀಯ ದಲಿತ ಮುಖಂಡರು ಹಾಗೂ ಕಾರ್ಯಕರ್ತರ ಸಂಘಟಿತ ಹೋರಾಟದ ಫಲವಾಗಿ ಕಾನೂನಿನ ತಕ್ಕ ಪಾಠ ಕಲಿಸಿದಂತಾಗಿದ್ದು, ಈ ಹೋರಾಟಕ್ಕೆ ರಾಜ್ಯಾದ್ಯಂತ ಮೆಚ್ಚುಗೆ ವ್ಯಕ್ತವಾಗಿದೆ.

Continue Reading

arrest

ಕರಿಕೆ: ಕೇರಳ ಮೀಸಲು ಅರಣ್ಯದಲ್ಲಿ ಕಡವೆ ಬೇಟೆಯಾಡಿ ಮಾಂಸ ಮಾರಾಟ ಮಾಡುತ್ತಿದ್ದ ಜಾಲ ಪತ್ತೆ; ಓರ್ವನ ಬಂಧನ, 40 ಕೆಜಿ ಮಾಂಸ ವಶ

Published

on

ಕರಿಕೆ ಸಮೀಪದ ಕೇರಳ ಮೀಸಲು ಅರಣ್ಯ ಪ್ರದೇಶದಲ್ಲಿ ಅಕ್ರಮವಾಗಿ ಕಡವೆ ಬೇಟೆಯಾಡಿ, ಮಾಂಸ ಮಾರಾಟ ಮಾಡುತ್ತಿದ್ದ ಜಾಲವನ್ನು ಕೇರಳ ಅರಣ್ಯ ಇಲಾಖೆ ಅಧಿಕಾರಿಗಳು ಯಶಸ್ವಿಯಾಗಿ ಭೇದಿಸಿದ್ದು, ಓರ್ವ ಆರೋಪಿಯನ್ನು ಬಂಧಿಸಿದ್ದಾರೆ.

ಕರಿಕೆ ತೋಟಮ್ ನಿವಾಸಿ ಸಿದ್ದು (35) ಬಂಧಿತ ಆರೋಪಿ. ಈ ಕೃತ್ಯದಲ್ಲಿ ಭಾಗಿಯಾಗಿದ್ದ ಇತರ ಇಬ್ಬರು ಆರೋಪಿಗಳಾದ ಜಿ.ಎಸ್. ವಿನೀಶ್ ಮತ್ತು ವಿಮಲ್ ರಾಜ್ ಪರಾರಿಯಾಗಿದ್ದಾರೆ.

ಕರಿಕೆ ಸಮೀಪದ ತೋಟಮ್ ಬಳಿಯ ಕೇರಳ ಮೀಸಲು ಅರಣ್ಯದ ಗೇರು ತೋಟಿನ ಕಾಟೂರ್ ಕೊಪ್ಪು ಎಂಬಲ್ಲಿ ಈ ಅಕ್ರಮ ಚಟುವಟಿಕೆ ನಡೆಯುತ್ತಿತ್ತು. ಖಚಿತ ಮಾಹಿತಿ ಮೇರೆಗೆ ಕಾರ್ಯಾಚರಣೆ ನಡೆಸಿದ ಅರಣ್ಯ ಇಲಾಖೆ ಅಧಿಕಾರಿಗಳು, ಆರೋಪಿಯಿಂದ ಒಂದು ನಾಡ ಬಂದೂಕು, ಸುಮಾರು 40 ಕೆಜಿ ಕಡವೆ ಮಾಂಸ ಹಾಗೂ ಬೇಟೆಗೆ ಬಳಸಿದ್ದ ಇತರೆ ವಸ್ತುಗಳನ್ನು ವಶಪಡಿಸಿಕೊಂಡಿದ್ದಾರೆ.

ಬಂಧಿತ ಆರೋಪಿ ವಿರುದ್ಧ ವನ್ಯಜೀವಿ ಸಂರಕ್ಷಣಾ ಕಾಯ್ದೆಯಡಿ ಪ್ರಕರಣ ದಾಖಲಿಸಿ, ನ್ಯಾಯಾಂಗ ಬಂಧನಕ್ಕೆ ಒಪ್ಪಿಸಲಾಗಿದೆ. ಕಾಸರಗೋಡು ವಲಯದ ಅರಣ್ಯ ಅಧಿಕಾರಿಗಳಾದ ರಾಜು ಎಂ.ಪಿ., ಪ್ರಕಾಶ್ ವಿ.ಪಿ. ಹಾಗೂ ಪ್ರವೀಣ್ ಕುಮಾರ್ ಅವರನ್ನೊಳಗೊಂಡ ತಂಡ ಈ ಕಾರ್ಯಾಚರಣೆಯಲ್ಲಿ ಯಶಸ್ವಿಯಾಗಿ ಭಾಗವಹಿಸಿತ್ತು

Continue Reading

Trending

Copyright © 2025 Deevatige

error: Content is protected !!