arrest
ಅಕ್ರಮ ಜಾನುವಾರು ಸಾಗಾಟ: ಮೂಡಬಿದ್ರೆ ಪೊಲೀಸರಿಂದ ಇಬ್ಬರು ಹಳೇ ಆರೋಪಿಗಳ ಬಂಧನ!
- Share
- Tweet /home/u338848369/domains/deevatigenews.com/public_html/wp-content/plugins/mvp-social-buttons/mvp-social-buttons.php on line 72
https://deevatigenews.com/wp-content/uploads/2026/05/2-6-1000x600.jpg&description=ಅಕ್ರಮ ಜಾನುವಾರು ಸಾಗಾಟ: ಮೂಡಬಿದ್ರೆ ಪೊಲೀಸರಿಂದ ಇಬ್ಬರು ಹಳೇ ಆರೋಪಿಗಳ ಬಂಧನ!', 'pinterestShare', 'width=750,height=350'); return false;" title="Pin This Post">
ಮಂಗಳೂರು: ಮೂಡಬಿದ್ರೆ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ಐಷಾರಾಮಿ ಕಾರಿನಲ್ಲಿ ಅತ್ಯಂತ ಹಿಂಸಾತ್ಮಕವಾಗಿ ಕಾನೂನುಬಾಹಿರವಾಗಿ ಜಾನುವಾರು ಸಾಗಾಟ ಮಾಡುತ್ತಿದ್ದ ಜಾಲವನ್ನು ಭೇದಿಸುವಲ್ಲಿ ಪೊಲೀಸರು ಯಶಸ್ವಿಯಾಗಿದ್ದಾರೆ. ಪ್ರಕರಣಕ್ಕೆ ಸಂಬಂಧಿಸಿದಂತೆ ಇಬ್ಬರು ಸರಣಿ ಅಪರಾಧ ಹಿನ್ನೆಲೆಯುಳ್ಳ ಆರೋಪಿಗಳನ್ನು ಪೊಲೀಸರು ಕಾರು ಹಾಗೂ ಜಾನುವಾರು ಸಹಿತ ವಶಕ್ಕೆ ಪಡೆದಿದ್ದಾರೆ.
ಘಟನೆಯ ವಿವರ:
ದಿನಾಂಕ 14/05/2026 ರಂದು ಬೆಳಗ್ಗೆ ಮೂಡಬಿದ್ರೆ ಠಾಣಾ ಪಿಎಸ್ಐ ಕೃಷ್ಣಪ್ಪ ಮತ್ತು ಸಿಬ್ಬಂದಿಗಳು ರೌಂಡ್ಸ್ ಕರ್ತವ್ಯದಲ್ಲಿದ್ದಾಗ, ಬೆಳುವಾಯಿ ಕಡೆಯಿಂದ ಮಾರ್ನಾಡು ಅಳಿಯೂರು ಕಡೆಗೆ ಮಾರುತಿ ಬ್ರೀಜಾ ವಾಹನದಲ್ಲಿ ಅಕ್ರಮವಾಗಿ ಜಾನುವಾರು ಸಾಗಿಸಲಾಗುತ್ತಿದೆ ಎಂಬ ಖಚಿತ ಮಾಹಿತಿ ಲಭಿಸಿದೆ. ತಕ್ಷಣ ಕಾರ್ಯಪ್ರವೃತ್ತರಾದ ಪೊಲೀಸರು ಪಡುಮಾರ್ನಾಡು ಗ್ರಾಮದ ಗುಂಡುಕಲ್ಲು ಕ್ರಾಸ್ ಬಳಿ ವಾಹನ ತಪಾಸಣೆ ನಡೆಸುತ್ತಿದ್ದರು.
ಬೆಳಗ್ಗೆ ಸುಮಾರು 07.30ರ ವೇಳೆಗೆ ಬೆಳುವಾಯಿ ಕಡೆಯಿಂದ ಬಂದ ಬೂದು ಬಣ್ಣದ ಮಾರುತಿ ಬ್ರೀಜಾ ಕಾರಿಗೆ (KA 19 MK 4265) ನಿಲ್ಲಿಸಲು ಸೂಚಿಸಿದಾಗ, ಚಾಲಕ ಕಾರನ್ನು ನಿಲ್ಲಿಸದೇ ವೇಗವಾಗಿ ಮುಂದಕ್ಕೆ ಚಲಾಯಿಸಿದ್ದಾನೆ. ತಕ್ಷಣ ಪೊಲೀಸರು ವಾಹನವನ್ನು ಬೆನ್ನಟ್ಟಿದ್ದಾರೆ. ಆರೋಪಿಗಳು ಗುಂಡುಕಲ್ಲು 5 ಸೈಂಟ್ಸ್ ರಸ್ತೆಗೆ ತಿರುಗಿ, ಅಲ್ಲಿನ ನಿವಾಸಿ ಸಾಹುಲ್ ಹಮೀದ್ ಎಂಬುವರ ಮನೆ ಕಂಪೌಂಡ್ ಒಳಗೆ ಕಾರು ನಿಲ್ಲಿಸಿ ಓಡಿಹೋಗಲು ಯತ್ನಿಸಿದ್ದಾರೆ. ಈ ವೇಳೆ ಪೊಲೀಸ್ ಸಿಬ್ಬಂದಿ ಬೆನ್ನಟ್ಟಿ ಇಬ್ಬರು ಆರೋಪಿಗಳನ್ನು ಹಿಡಿಯುವಲ್ಲಿ ಯಶಸ್ವಿಯಾಗಿದ್ದಾರೆ.
ಕಾರಿನ ಸೀಟ್ ಕಿತ್ತೆಸೆದು ಕರುವಿನ ಹಿಂಸಾತ್ಮಕ ಸಾಗಾಟ!
ಬಂಧಿತ ಆರೋಪಿಗಳನ್ನು ಮೂಡಬಿದ್ರೆ ಠಾಣಾ ಎಂ.ಓ.ಬಿ (ರೌಡಿಶೀಟರ್) ಆಗಿರುವ ಹಂಡೇಲಿನ ಮಹಮ್ಮದ್ ಆರೀಪ್ ಮತ್ತು ಆತನ ಸಹಚರ ಗಂಟಾಲಕಟ್ಟೆಯ ಇಮ್ರಾನ್ @ ಇಬ್ರಾಹಿಂ ಎಂದು ಗುರುತಿಸಲಾಗಿದೆ.
ಪೊಲೀಸರು ಮಾರುತಿ ಬ್ರೀಜಾ ಕಾರನ್ನು ಪರಿಶೀಲಿಸಿದಾಗ ಸಾಗಾಟದ ಕ್ರೌರ್ಯ ಬೆಳಕಿಗೆ ಬಂದಿದೆ. ಕಾರಿನ ಹಿಂಬದಿಯ ಸೀಟನ್ನು ಸಂಪೂರ್ಣವಾಗಿ ತೆಗೆದು, ಅದರ ಮೇಲೆ ನೀಲಿ ಬಣ್ಣದ ಪ್ಲಾಸ್ಟಿಕ್ ಹಾಕಿ, ಒಂದು ಗಂಡು ಕರುವಿನ ಕಾಲು ಮತ್ತು ತಲೆಯನ್ನು ಹಗ್ಗದಿಂದ ಅತ್ಯಂತ ಹಿಂಸಾತ್ಮಕವಾಗಿ ಕಟ್ಟಿ ತುಂಬಿಸಲಾಗಿತ್ತು.
ಕಳ್ಳತನ ಮಾಡಿ ಮಾಂಸ ಮಾರಾಟದ ಸಂಚು:
ವಿಚಾರಣೆ ವೇಳೆ ಆರೋಪಿಗಳು ತಲ್ಲಣಗೊಳಿಸುವ ಮಾಹಿತಿ ಬಾಯ್ಬಿಟ್ಟಿದ್ದಾರೆ. ಕಳೆದ ಒಂದು ವಾರದಿಂದ ಬೇರೆ ಬೇರೆ ಕಡೆಗಳಿಂದ ದನಗಳನ್ನು ಕಳ್ಳತನ ಮಾಡಿಕೊಂಡು ಬಂದು, ಪಡುಮಾರ್ನಾಡು ಗ್ರಾಮದ ಗುಂಡುಕಲ್ಲು ನಿವಾಸಿ ಸಾಹುಲ್ ಹಮೀದ್ ರವರ ಮನೆಯ ಬಳಿ ಕಡಿದು ಮಾಂಸ ಮಾಡಿ ಮಾರಾಟ ಮಾಡುವ ಅಥವಾ ದನಗಳನ್ನು ಕಡಿಯಲೆಂದೇ ಇತರರಿಗೆ ಮಾರಾಟ ಮಾಡುವ ಉದ್ದೇಶದಿಂದ ಸಂಗ್ರಹಿಸಿಟ್ಟಿರುವುದಾಗಿ ಒಪ್ಪಿಕೊಂಡಿದ್ದಾರೆ. ಪೊಲೀಸರು ಸದ್ಯ ಜಾನುವಾರು, ಮಾರುತಿ ಬ್ರೀಜಾ ಕಾರು ಹಾಗೂ ಆರೋಪಿಗಳನ್ನು ವಶಕ್ಕೆ ಪಡೆದು ಮುಂದಿನ ಕಾನೂನು ಕ್ರಮ ಕೈಗೊಂಡಿದ್ದಾರೆ.
ಆರೋಪಿಗಳ ಮೇಲಿರುವ ಹಳೇ ಕ್ರಿಮಿನಲ್ ಪ್ರಕರಣಗಳ ಜಾತಕ:
ಬಂಧಿತ ಇಬ್ಬರೂ ಆರೋಪಿಗಳು ಹಲವು ಪೊಲೀಸ್ ಠಾಣೆಗಳಲ್ಲಿ ಜಾನುವಾರು ಕಳ್ಳತನ, ಗಾಂಜಾ ಹಾಗೂ ಇತರೆ ಅಪರಾಧ ಪ್ರಕರಣಗಳಲ್ಲಿ ಭಾಗಿಯಾಗಿರುವ ಹಳೇ ಮುದ್ರೆ ಹೊಂದಿದ್ದಾರೆ.
1. ಮೊಹಮ್ಮದ್ ಆರಿಫ್ ಮೇಲಿನ ಪ್ರಕರಣಗಳು:
- ಬಜಪೆ ಪೊಲೀಸ್ ಠಾಣೆ (ಮೊ.ಸಂ. 150/2024): ಬಿಎನ್ಎಸ್ ಕಾಯ್ದೆ ಹಾಗೂ ಕರ್ನಾಟಕ ಜಾನುವಾರು ಹತ್ಯೆ ಪ್ರತಿಬಂಧಕ ಮತ್ತು ಸಂರಕ್ಷಣಾ ಕಾಯ್ದೆ 2020ರ ಅಡಿಯಲ್ಲಿ ಪ್ರಕರಣ ದಾಖಲಾಗಿದ್ದು, ನ್ಯಾಯಾಲಯದಲ್ಲಿ ವಿಚಾರಣೆಯಲ್ಲಿದೆ (ಮುಂದಿನ ವಿಚಾರಣೆ ದಿನಾಂಕ: 22/06/2026).
- ಬಣಕಲ್ ಪೊಲೀಸ್ ಠಾಣೆ (ಮೊ.ಸಂ. 31/2024): ದನ ಕಳ್ಳತನ, ಪ್ರಾಣಿ ಹಿಂಸೆ ತಡೆ ಕಾಯ್ದೆ ಹಾಗೂ ಮೋಟಾರು ವಾಹನ ಕಾಯ್ದೆಯಡಿ ಪ್ರಕರಣ (ಮುಂದಿನ ವಿಚಾರಣೆ ದಿನಾಂಕ: 30/05/2026).
- ಮೂಡಬಿದ್ರೆ ಪೊಲೀಸ್ ಠಾಣೆ (ಮೊ.ಸಂ. 56/2025): ಬಿಎನ್ಎಸ್ ಹಾಗೂ ಜಾನುವಾರು ಹತ್ಯೆ ಪ್ರತಿಬಂಧಕ ಕಾಯ್ದೆಯಡಿ ತನಿಖೆಯ ಹಂತದಲ್ಲಿದೆ (UI).
- ಮೂಡಬಿದ್ರೆ ಪೊಲೀಸ್ ಠಾಣೆ (ಮೊ.ಸಂ. 130/2025): ಬಿಎನ್ಎಸ್ ಸೆಕ್ಷನ್ 303(2) ಅಡಿಯಲ್ಲಿ ತನಿಖೆಯಲ್ಲಿದೆ (UI).
2. ಇಮ್ರಾನ್ @ ಇಬ್ರಾಹಿಂ ಮೇಲಿನ ಪ್ರಕರಣಗಳು:
- ಮೂಡಬಿದ್ರೆ ಪೊಲೀಸ್ ಠಾಣೆ (ಮೊ.ಸಂ. 133/2024): ಎನ್ಡಿಪಿಎಸ್ (ಗಾಂಜಾ/ಮಾದಕ ದ್ರವ್ಯ) ಕಾಯ್ದೆಯಡಿ ಪ್ರಕರಣ.
- ಮೂಡಬಿದ್ರೆ ಪೊಲೀಸ್ ಠಾಣೆ (ಮೊ.ಸಂ. 6/2025): ಕರ್ನಾಟಕ ಜೂಜಾಟ ಪ್ರತಿಬಂಧಕ (KP Act) ಕಾಯ್ದೆಯಡಿ ಪ್ರಕರಣ.
- ಮೂಡಬಿದ್ರೆ ಪೊಲೀಸ್ ಠಾಣೆ (ಮೊ.ಸಂ. 40/2025): ಕರ್ನಾಟಕ ಜೂಜಾಟ ಪ್ರತಿಬಂಧಕ (KP Act) ಕಾಯ್ದೆಯಡಿ ಪ್ರಕರಣ.
- ಮೂಡಬಿದ್ರೆ ಪೊಲೀಸ್ ಠಾಣೆ (ಮೊ.ಸಂ. 56/2025): ಬಿಎನ್ಎಸ್ ಹಾಗೂ ಜಾನುವಾರು ಹತ್ಯೆ ಪ್ರತಿಬಂಧಕ ಕಾಯ್ದೆಯಡಿ ಪ್ರಕರಣ.
- ಮೂಡಬಿದ್ರೆ ಪೊಲೀಸ್ ಠಾಣೆ (ಮೊ.ಸಂ. 130/2025): ಬಿಎನ್ಎಸ್ ಸೆಕ್ಷನ್ 303(2) ಅಡಿಯಲ್ಲಿ ಪ್ರಕರಣ.
- ಕಾರ್ಕಳ ನಗರ ಪೊಲೀಸ್ ಠಾಣೆ (ಮೊ.ಸಂ. 169/2025): ಬಿಎನ್ಎಸ್ ಸೆಕ್ಷನ್ 303(2) ಅಡಿಯಲ್ಲಿ ಪ್ರಕರಣ ದಾಖಲಾಗಿದೆ.
ಮಂಗಳೂರು ನಗರ ಪೊಲೀಸ್ ಕಮಿಷನರೇಟ್ ಮಾರ್ಗದರ್ಶನದಲ್ಲಿ ಮೂಡಬಿದ್ರೆ ಪೊಲೀಸರು ಈ ಯಶಸ್ವಿ ಕಾರ್ಯಾಚರಣೆ ನಡೆಸಿದ್ದಾರೆ



arrest
ಬೆಳ್ತಂಗಡಿ: ಗುರುವಾಯನಕೆರೆ ಬಳಿ ಪತ್ತೆಯಾದ ಮೃತದೇಹದ ಗುರುತು ಪತ್ತೆ – ಯತೀಶ್ ಗೌಡ ಕೊಲೆ ಶಂಕೆ, ಮೂವರು ವಶಕ್ಕೆ
ಬೆಳ್ತಂಗಡಿ, ದಕ್ಷಿಣ ಕನ್ನಡ: ಬೆಳ್ತಂಗಡಿ ತಾಲೂಕಿನ ಕುವೆಟ್ಟು ಗ್ರಾಮ ಪಂಚಾಯತ್ ವ್ಯಾಪ್ತಿಯ ಗುರುವಾಯನಕೆರೆ ಸಮೀಪದ ಅಲಾದಿಕೊಟ್ಟಿಗೆ ಎಂಬಲ್ಲಿ ಜೂನ್ 1ರಂದು ಬೆಳಿಗ್ಗೆ ಪತ್ತೆಯಾಗಿದ್ದ ಅಪರಿಚಿತ ಮೃತದೇಹದ ಗುರುತು ಪತ್ತೆಯಾಗಿದ್ದು, ಇದು ಕೊಲೆ ಎಂದು ಶಂಕಿಸಲಾಗಿದೆ. ಮೃತರನ್ನು ಬಂಟ್ವಾಳ ತಾಲೂಕಿನ ಪೆರ್ನೆ ನಿವಾಸಿ, ದಿ. ಕೂಸಪ್ಪ ಗೌಡ ಮತ್ತು ಪದ್ಮಾವತಿ ದಂಪತಿಯ ದ್ವಿತೀಯ ಪುತ್ರ ಯತೀಶ್ ಗೌಡ (33) ಎಂದು ಗುರುತಿಸಲಾಗಿದೆ. ವೃತ್ತಿಯಲ್ಲಿ ವೆಲ್ಡಿಂಗ್ ಕೆಲಸ ಮಾಡುತ್ತಿದ್ದ ಯತೀಶ್, ಕಳೆದ ಎರಡು ತಿಂಗಳ ಹಿಂದೆ ಮನೆ ಬಿಟ್ಟು ಹೋಗಿದ್ದು, ನಾಪತ್ತೆಯಾಗಿದ್ದರು.
ಘಟನೆಯ ಹಿನ್ನೆಲೆ ಮತ್ತು ದೂರು:
ಜೂನ್ 1ರಂದು ಬೆಳಿಗ್ಗೆ ಗುರುವಾಯನಕೆರೆಯ ಶ್ರೀದೇವಿ ಹಾರ್ಡ್ವೇರ್ ಬಳಿ ಅಪರಿಚಿತ ಮೃತದೇಹ ಇರುವ ಬಗ್ಗೆ ಭಾವಚಿತ್ರ ಸಹಿತ ಮಾಹಿತಿ ವಾಟ್ಸಾಪ್ ಮೂಲಕ ಮೃತರ ಸಹೋದರ ನಿತಿನ್ (34) ಅವರಿಗೆ ತಲುಪಿತ್ತು. ತಕ್ಷಣ ಸ್ಥಳಕ್ಕೆ ಧಾವಿಸಿದ ನಿತಿನ್, ಮೃತದೇಹವನ್ನು ತನ್ನ ಸಹೋದರ ಯತೀಶ್ ಗೌಡ ಎಂದು ಗುರುತಿಸಿದ್ದಾರೆ.
ಸಿಸಿಟಿವಿ ತನಿಖೆ ಮತ್ತು ಕೊಲೆ ಶಂಕೆ:
ಮೃತದೇಹದ ಮೇಲೆ ಹಲ್ಲೆಯ ಗುರುತುಗಳಿದ್ದ ಹಿನ್ನೆಲೆಯಲ್ಲಿ, ದೂರುದಾರರು ಘಟನಾ ಸ್ಥಳದ ಸಿಸಿಟಿವಿ ದೃಶ್ಯಾವಳಿಗಳನ್ನು ಪರಿಶೀಲಿಸಿದ್ದಾರೆ. ಈ ವೇಳೆ ಜೂನ್ 1ರ ಬೆಳಿಗ್ಗಿನ ಸಮಯ ಮೂವರು ವ್ಯಕ್ತಿಗಳು ಯತೀಶ್ ಅವರ ಮೇಲೆ ಹಲ್ಲೆ ನಡೆಸುತ್ತಿರುವುದು ಬೆಳಕಿಗೆ ಬಂದಿದೆ. ಆರೋಪಿಗಳ ತೀವ್ರ ಹಲ್ಲೆಯಿಂದಾಗಿಯೇ ಯತೀಶ್ ಮೃತಪಟ್ಟಿರುವುದಾಗಿ ಅವರ ಸಹೋದರ ಪೊಲೀಸರಿಗೆ ದೂರು ನೀಡಿದ್ದಾರೆ.
ಪೊಲೀಸ್ ಕಾರ್ಯಾಚರಣೆ, ಮೂವರ ವಶಕ್ಕೆ:
ಘಟನಾ ಸ್ಥಳಕ್ಕೆ ಭೇಟಿ ನೀಡಿದ ಬೆಳ್ತಂಗಡಿ ಪೊಲೀಸರು ಪರಿಶೀಲನೆ ನಡೆಸಿದ್ದಾರೆ. ನಿತಿನ್ ನೀಡಿದ ದೂರಿನನ್ವಯ ಬೆಳ್ತಂಗಡಿ ಪೊಲೀಸ್ ಠಾಣೆಯಲ್ಲಿ ಅ ಕ್ರ : 65/2026, ಕಲಂ: 115(2), 103 ಜೊತೆಗೆ 3(5) ಬಿ.ಎನ್.ಎಸ್ (BNS) ರಂತೆ ಕೊಲೆ ಪ್ರಕರಣ ದಾಖಲಾಗಿದೆ.
ಪ್ರಕರಣಕ್ಕೆ ಸಂಬಂಧಿಸಿದಂತೆ ಪೊಲೀಸರು ತಕ್ಷಣವೇ ಕಾರ್ಯಪ್ರವೃತ್ತರಾಗಿ, ಸಿಸಿಟಿವಿ ದೃಶ್ಯಾವಳಿಗಳ ಆಧಾರದ ಮೇಲೆ ಮೂವರು ಆರೋಪಿಗಳನ್ನು ವಶಕ್ಕೆ ಪಡೆದಿದ್ದಾರೆ:
ಯಶೋಧರ (35) – ನಿವಾಸಿ: ಮಿತ್ತಬಾಗಿಲು, ಬೆಳ್ತಂಗಡಿ
ಮೋಹನ್ (30) – ನಿವಾಸಿ: ಚಾರ್ವಾಕ, ಕಡಬ
ಇಬ್ರಾಹಿಂ (54) – ನಿವಾಸಿ: ಪದಂಗಡಿ, ಬೆಳ್ತಂಗಡಿ
ವಶಕ್ಕೆ ಪಡೆದಿರುವ ಮೂವರನ್ನು ಪೊಲೀಸರು ತೀವ್ರ ವಿಚಾರಣೆಗೆ ಒಳಪಡಿಸಿದ್ದು, ಕೊಲೆಗೆ ನಿಖರವಾದ ಕಾರಣ ಮತ್ತು ಹಲ್ಲೆಯ ಹಿಂದಿನ ಸತ್ಯಾಸತ್ಯತೆಗಳನ್ನು ಪತ್ತೆಹಚ್ಚಲು ಬೆಳ್ತಂಗಡಿ ಪೊಲೀಸರು ಮುಂದಿನ ತನಿಖೆಯನ್ನು ಚುರುಕುಗೊಳಿಸಿದ್ದಾರೆ.
arrest
ಪುಣಚದಲ್ಲಿ ಅಕ್ರಮ ಕೋಳಿ ಅಂಕದ ಮೇಲೆ ಪೊಲೀಸ್ ದಾಳಿ; ಇಬ್ಬರ ಬಂಧನ, ಸೊತ್ತು ವಶ!
ವಿಟ್ಲ: ಕಾನೂನುಬಾಹಿರವಾಗಿ ಹಣವನ್ನು ಪಣವಾಗಿಟ್ಟು ಕೋಳಿ ಅಂಕ ಜೂಜಾಟ ಆಡುತ್ತಿದ್ದ ಅಡ್ಡೆಗೆ ವಿಟ್ಲ ಪೊಲೀಸರು ದಾಳಿ ನಡೆಸಿ, ಇಬ್ಬರು ಆರೋಪಿಗಳನ್ನು ಬಂಧಿಸಿರುವ ಘಟನೆ ಪುಣಚ ಗ್ರಾಮದ ಪೆರಿಯಾಲ್ತಡ್ಕ ಎಂಬಲ್ಲಿ ನಡೆದಿದೆ.
ಬಂಟ್ವಾಳ ತಾಲೂಕಿನ ಪುಣಚ ನಿವಾಸಿಗಳಾದ ದಿವಾಕರ ಪೂಜಾರಿ (46) ಮತ್ತು ಯಶ್ವಂತ್ (34) ಬಂಧಿತ ಆರೋಪಿಗಳಾಗಿದ್ದಾರೆ.
ದಾಳಿಯ ವಿವರ:
ಮೇ 30ರಂದು ರಾತ್ರಿ ಪುಣಚ ಗ್ರಾಮದ ಪೆರಿಯಾಲ್ತಡ್ಕ ಎಂಬಲ್ಲಿ ಸಾರ್ವಜನಿಕ ಸ್ಥಳದಲ್ಲಿ ನಿಷೇಧಿತ ಕೋಳಿ ಅಂಕ ಜೂಜಾಟ ನಡೆಯುತ್ತಿದೆ ಎಂಬ ಖಚಿತ ಮಾಹಿತಿ ವಿಟ್ಲ ಪೊಲೀಸ್ ಠಾಣಾ ಉಪ ನಿರೀಕ್ಷಕರಾದ ರಾಮಕೃಷ್ಣ ರವರಿಗೆ ಲಭಿಸಿತ್ತು. ತಕ್ಷಣ ಕಾರ್ಯಪ್ರವೃತ್ತರಾದ ಪಿಎಸ್ಐ ಮತ್ತು ಠಾಣಾ ಸಿಬ್ಬಂದಿಗಳ ತಂಡ ಸ್ಥಳಕ್ಕೆ ಜಂಟಿ ದಾಳಿ ನಡೆಸಿದೆ.
ದಾಳಿಯ ವೇಳೆ ಹಣವನ್ನು ಪಣವಾಗಿಟ್ಟು ಜೂಜಾಡುತ್ತಿದ್ದ ಇಬ್ಬರನ್ನು ಪೊಲೀಸರು ವಶಕ್ಕೆ ಪಡೆದಿದ್ದಾರೆ. ಪ್ರಮುಖವಾಗಿ ಸ್ಥಳದಲ್ಲಿದ್ದ 4 ಅಂಕದ ಕೋಳಿಗಳು, ಜೂಜಾಟಕ್ಕೆ ಬಳಸುತ್ತಿದ್ದ ಕೋಳಿ ಕತ್ತಿ (ಬಾಳು), ಇತರೆ ಪರಿಕರಗಳು ಹಾಗೂ ರೂ. 4,145/- ನಗದು ಹಣವನ್ನು ಪೊಲೀಸರು ಜಪ್ತಿ ಮಾಡಿದ್ದಾರೆ.
ಬಂಧಿತ ಆರೋಪಿಗಳ ವಿರುದ್ಧ ವಿಟ್ಲ ಪೊಲೀಸ್ ಠಾಣೆಯಲ್ಲಿ ಅ.ಕ್ರ: 119/2026 ರಂತೆ ಕರ್ನಾಟಕ ಪೊಲೀಸ್ ಕಾಯ್ದೆ 1963ರ ಕಲಂ: 87, 93, ಪ್ರಾಣಿ ಹಿಂಸೆ ತಡೆ ಕಾಯ್ದೆ 1960ರ ಕಲಂ: 3, 11 ಹಾಗೂ ಭಾರತೀಯ ನ್ಯಾಯ ಸಂಹಿತೆ (BNS) 2023ರ ಕಲಂ: 112 ರ ಅಡಿಯಲ್ಲಿ ಮೊಕದ್ದಮೆ ಹೂಡಲಾಗಿದೆ. ಸದ್ಯ ಪ್ರಕರಣ ದಾಖಲಿಸಿಕೊಂಡಿರುವ ವಿಟ್ಲ ಠಾಣಾ ಪೊಲೀಸರು ಮುಂದಿನ ಕಾನೂನು ಕ್ರಮ ಹಾಗೂ ತನಿಖೆಯನ್ನು ಕೈಗೊಂಡಿದ್ದಾರೆ.



arrest
ಮಂಗಳೂರು: ರಾತ್ರಿ ಬೀಟ್ ಪೊಲೀಸರ ಮೇಲೆಯೇ ಹಲ್ಲೆ ನಡೆಸಿ ಕೇರಳಕ್ಕೆ ಪರಾರಿಯಾಗಿದ್ದ ಇಬ್ಬರು ಕಿಡಿಗೇಡಿಗಳ ಬಂಧನ!
ಮಂಗಳೂರು: ನಗರದಲ್ಲಿ ತಡರಾತ್ರಿ ಬೀಟ್ ಕರ್ತವ್ಯ ನಿರ್ವಹಿಸುತ್ತಿದ್ದ ಪೊಲೀಸ್ ಸಿಬ್ಬಂದಿಯ ಮೇಲೆ ಸಿಮೆಂಟ್ ಶೀಟ್ನಿಂದ ಭೀಕರ ಹಲ್ಲೆ ನಡೆಸಿ, ಕೊಲೆ ಯತ್ನ ನಡೆಸಿ ಕೇರಳಕ್ಕೆ ಪರಾರಿಯಾಗಿದ್ದ ಇಬ್ಬರು ಆರೋಪಿಗಳನ್ನು ಮಂಗಳೂರು ಸಿಸಿಬಿ (CCB) ಪೊಲೀಸರು ಸಿನಿಮೀಯ ಶೈಲಿಯಲ್ಲಿ ಕಾರ್ಯಾಚರಣೆ ನಡೆಸಿ ಬಂಧಿಸಿದ್ದಾರೆ.
ಬಂಧಿತ ಆರೋಪಿಗಳ ವಿವರ:
ಸಚಿನ್ ಕೆ. ಆರ್. (24 ವರ್ಷ), ವಾಸ: ಹತ್ಯಡ್ಕ ಗ್ರಾಮ, ಅರಸಿನಮಕ್ಕಿ, ಕೊಕ್ಕಡ, ಬೆಳ್ತಂಗಡಿ ತಾಲೂಕು. (ಈತ ಕುಂಟಿಕಾನದ ‘ಪೋನ್ ಪೋನ್ ಸ್ವೀಟ್ಸ್’ (PON PON Sweets) ಫ್ಯಾಕ್ಟರಿಯಲ್ಲಿ ಚಾಲಕನಾಗಿ ಕೆಲಸ ಮಾಡುತ್ತಿದ್ದ).
ಚಂದನ್ (24 ವರ್ಷ), ವಾಸ: ಮಣ್ಣಗುಂಡಿ ಹೌಸ್, ನೆಲ್ಯಾಡಿ, ಪುತ್ತೂರು ತಾಲೂಕು. (ಈತ ಕೂಳೂರಿನ ‘ಅದ್ವೈತ್ ಕಿಯಾ’ ಶೋ ರೂಮ್ನಲ್ಲಿ ಟೆಕ್ನಿಷಿಯನ್ ಆಗಿ ಕೆಲಸ ಮಾಡುತ್ತಿದ್ದ).
ಪ್ರಸ್ತುತ ಆರೋಪಿಗಳು ಮಂಗಳೂರಿನ ಅಶೋಕನಗರದ ಫಲ್ಗುಣಿ ನಗರದಲ್ಲಿ ಬಾಡಿಗೆ ಮನೆಯೊಂದರಲ್ಲಿ ವಾಸವಾಗಿದ್ದರು ಎಂದು ಪೊಲೀಸರು ತಿಳಿಸಿದ್ದಾರೆ.
ಘಟನೆಯ ಹಿನ್ನೆಲೆ:
ಕಳೆದ ಮೇ 24, 2026 ರಂದು ತಡರಾತ್ರಿ (ಬೆಳಗಿನ ಜಾವ) ಸುಮಾರು 2:10 ಗಂಟೆಯ ವೇಳೆಗೆ ಉರ್ವ ಪೊಲೀಸ್ ಠಾಣಾ ವ್ಯಾಪ್ತಿಯ ಕೋಡಿಕಲ್ ನಾರಾಯಣಗುರು ಸಮುದಾಯ ಭವನ ರಸ್ತೆಯ ಎದುರು ಪೊಲೀಸ್ ಸಿಬ್ಬಂದಿ ಬೀಟ್ ಕರ್ತವ್ಯದಲ್ಲಿದ್ದರು. ಈ ವೇಳೆ ಕೆಂಪು ಬಣ್ಣದ ಎಲೆಕ್ಟ್ರಿಕ್ ಸ್ಕೂಟರ್ನಲ್ಲಿ ಬಂದ ಈ ಇಬ್ಬರು ಯುವಕರು ಮಧ್ಯರಾತ್ರಿಯಲ್ಲೂ ನಗರದಲ್ಲಿ ಸುತ್ತಾಡುತ್ತಿರುವುದನ್ನು ಗಮನಿಸಿದ ಬೀಟ್ ಪೊಲೀಸರು, ಅವರನ್ನು ತಡೆದು ಪ್ರಶ್ನಿಸಿದ್ದಾರೆ.
ಇದರಿಂದ ತೀವ್ರ ಸಿಟ್ಟಿಗೆದ್ದ ಯುವಕರು ಪೊಲೀಸರೊಂದಿಗೆ ವಾಗ್ವಾದಕ್ಕಿಳಿದಿದ್ದಾರೆ. ಈ ವೇಳೆ ಸ್ಕೂಟರ್ ಹಿಂಬದಿಯಲ್ಲಿ ಕುಳಿತಿದ್ದ ಆರೋಪಿಯು ಏಕಾಏಕಿ ಅಲ್ಲೇ ಹತ್ತಿರದಲ್ಲಿದ್ದ ಸಿಮೆಂಟ್ ಶೀಟ್ನ ತುಂಡೊಂದನ್ನು ತೆಗೆದುಕೊಂಡು, ಕರ್ತವ್ಯದಲ್ಲಿದ್ದ ಪೊಲೀಸ್ ಸಿಬ್ಬಂದಿಯ ತಲೆಗೆ ಬಲವಾಗಿ ಹೊಡೆದಿದ್ದಾನೆ. ಹಲ್ಲೆಯ ತೀವ್ರತೆಗೆ ಪೊಲೀಸ್ ಸಿಬ್ಬಂದಿಯ ತಲೆಗೆ ಗಂಭೀರ ಗಾಯಗಳಾಗಿದ್ದು, ಸರ್ಕಾರಿ ಕರ್ತವ್ಯಕ್ಕೆ ಅಡ್ಡಿಪಡಿಸಿ ಕೊಲೆ ಯತ್ನ ನಡೆಸಿದ ಹಿನ್ನೆಲೆಯಲ್ಲಿ ಉರ್ವ ಪೊಲೀಸ್ ಠಾಣೆಯಲ್ಲಿ ಐಪಿಸಿ ಬದಲಿಗೆ ಹೊಸ ಕಾನೂನಿನ ಅನ್ವಯ ಅ.ಕ್ರ 57/2026 ಕಲಂ 121(1), 109, 132, 3(5) ಬಿ.ಎನ್.ಎಸ್ (BNS) ರಂತೆ ಪ್ರಕರಣ ದಾಖಲಾಗಿತ್ತು.
ಕೇರಳದಲ್ಲಿ ಹೆಡೆಮುರಿ ಕಟ್ಟಿದ ಸಿಸಿಬಿ:
ಪ್ರಕರಣವನ್ನು ಅತ್ಯಂತ ಗಂಭೀರವಾಗಿ ಪರಿಗಣಿಸಿದ ಮಂಗಳೂರು ನಗರ ಪೊಲೀಸ್ ಕಮೀಷನರ್, ಆರೋಪಿಗಳ ಪತ್ತೆಗೆ ಸಿಸಿಬಿ ತಂಡವನ್ನು ನಿಯೋಜಿಸಿದ್ದರು. ತನಿಖೆ ಕೈಗೆತ್ತಿಕೊಂಡ ಸಿಸಿಬಿ ಪೊಲೀಸರು ತಾಂತ್ರಿಕ ಹಾಗೂ ಖಚಿತ ಮಾಹಿತಿ ಆಧರಿಸಿ, ಕೃತ್ಯ ನಡೆಸಿ ನೆರೆಯ ಕೇರಳ ರಾಜ್ಯದ ಕಾಂಞಿಗಾಡ್ ಪ್ರದೇಶದಲ್ಲಿ ತಲೆಮರೆಸಿಕೊಂಡಿದ್ದ ಆರೋಪಿಗಳನ್ನು ಮೇ 26, 2026 ರಂದು ಯಶಸ್ವಿಯಾಗಿ ವಶಕ್ಕೆ ಪಡೆದಿದ್ದಾರೆ.
ಬಂಧಿತ ಆರೋಪಿಗಳನ್ನು ಮುಂದಿನ ಕಾನೂನು ಕ್ರಮಕ್ಕಾಗಿ ಉರ್ವ ಪೊಲೀಸ್ ಠಾಣೆಗೆ ಹಸ್ತಾಂತರಿಸಲಾಗಿದ್ದು, ಕೃತ್ಯಕ್ಕೆ ಬಳಸಲಾಗಿದ್ದ ಎಲೆಕ್ಟ್ರಿಕ್ ಸ್ಕೂಟರ್ ಅನ್ನು ಪೊಲೀಸರು ವಶಪಡಿಸಿಕೊಂಡಿದ್ದಾರೆ. ಪೊಲೀಸರ ಮೇಲೆಯೇ ಹಲ್ಲೆ ನಡೆಸಿ ಉದ್ಧಟತನ ತೋರಿದ ಕೇವಲ ಎರಡೇ ದಿನದಲ್ಲಿ ಆರೋಪಿಗಳ ಹೆಡೆಮುರಿ ಕಟ್ಟಿದ ಸಿಸಿಬಿ ಹಾಗೂ ಉರ್ವ ಠಾಣಾ ಕ್ರೈಂ ತಂಡದ ಕ್ಷಿಪ್ರ ಕಾರ್ಯಾಚರಣೆಗೆ ಸಾರ್ವಜನಿಕ ವಲಯದಲ್ಲಿ ಭಾರಿ ಶ್ಲಾಘನೆ ವ್ಯಕ್ತವಾಗಿದೆ.



-
crime2 months agoಧಾರ್ಮಿಕ ನಂಬಿಕೆಗೆ ಅವಮಾನ: ಕೊಡಗಿನ ಎಮ್ಮೆಮಾಡಿನಲ್ಲಿ ದೈವದ ವೇಷದಂತೆ ಧರಿಸಿ ಮದುಮಗನ ಅತಿರೇಕದ ವರ್ತನೆ!
-
crime4 months agoಅತ್ಯಾಚಾರ ಯತ್ನಕ್ಕೆ ತಡೆದ ಸೊಸೆಯ ಮುಖಕ್ಕೆ ಕಚ್ಚಿ ಕೊಲೆಗೆ ಯತ್ನಿಸಿದ ಮಾವ..ತಂದೆಯ ರಾಕ್ಷಸೀ ಕೃತ್ಯಕ್ಕೆ ಬೆಂಬಲಿಸಿದ ಗಂಡ..ಸುಳ್ಯ ಠಾಣಾ ವ್ಯಾಪ್ತಿಯಲ್ಲಿ ಅದೃಷ್ಟವಶಾತ್ ಬಚಾವಾದ ಸೊಸೆ..
-
Bantawala2 months agoವಿಟ್ಲದಲ್ಲಿ ನಡೆಯಿತೊಂದು ದೈವ ಕಾರಣಿಕ; ಪೊಲೀಸರ ಕಣ್ಣಿಗೆ ಮಣ್ಣೆರಚಿದರೂ ದೈವದ ದೃಷ್ಟಿಗೆ ತತ್ತರಿಸಿದ ದನಕಳ್ಳ..
-
Bantawala5 months agoನಾಗಬನ, ರಕ್ತೇಶ್ವರಿ ತಾಣ, ದೈವದೇವರ ಸಾನಿಧ್ಯ ದ್ವಂಸ ಗೊಳಿಸಿದ ಧರ್ಮದ್ರೋಹಿ ಕೃತ್ಯದ ವಿರುದ್ಧ ಭಕ್ತರ ಆಕ್ರೋಶ ; ನಾಶವಾದ ಸಾನಿಧ್ಯದಲ್ಲಿಯೇ ಸ್ವಾಮೀಜಿಯವರ ಮಾರ್ಗದರ್ಶನದಲ್ಲಿ ಕುಟುಂಬಸ್ತರು, ಸಾರ್ವಜನಿಕರ ಸಾಮೂಹಿಕ ಪ್ರಾರ್ಥನೆ
-
accident3 weeks agoವಿಟ್ಲ ಆಕಾಶದಲ್ಲಿ ಹಾರಾಡಿದ ವಿಮಾನ: ತಾಂತ್ರಿಕ ದೋಷವಲ್ಲ, ಹವಾಮಾನ ವೈಪರೀತ್ಯದ ಕಾರಣ ! ಸಾರ್ವಜನಿಕರು ಆತಂಕ ಪಡುವ ಅಗತ್ಯವಿಲ್ಲ
-
Dakshina Kannada5 months agoಶಾಸಕರ ಉಪಸ್ಥಿತಿಯಲ್ಲಿ ಪೊಲೀಸರ ನಿರಾಕರಣೆ ಮಧ್ಯೆಯೇ ಕೇಪುವಿನಲ್ಲಿ ನಡೆದ ಕೋಳಿಅಂಕ
-
Bantawala4 months agoಕುದ್ರಿಯ ತರವಾಡು ಮನೆಯಲ್ಲಿ ಸಂಕ್ರಮಣದಂದು ರಣಾಂಗಣ; ಅಧ್ಯಕ್ಷ, ಟ್ರಸ್ಟಿ ಮೇಲೆ ಮಾರಣಾಂತಿಕ ಹಲ್ಲೆ
-
Bantawala5 months agoವಿಟ್ಲದಲ್ಲಿ ಶಾರ್ಟ್ ಸರ್ಕ್ಯೂಟ್..ಶ್ರೀ ಎಲೆಕ್ಟ್ರಾನಿಕ್ಸ್ ,ಅಮಿತ್ ಹೋಟೆಲ್..ಸೇರಿ ಐದಾರು ಕಟ್ಟಡಗಳು ಸಂಪೂರ್ಣ ಬೆಂಕಿಗಾಹುತಿ..
