Connect with us

crime

ವಿಟ್ಲ: ಪರವಾನಗಿ ತಿದ್ದಿ ಅಕ್ರಮ ಕೆಂಪುಕಲ್ಲು ಗಣಿಗಾರಿಕೆ; ಪ್ರಕರಣ ದಾಖಲು

Published

on

ವಿಟ್ಲ: ಬಂಟ್ವಾಳ ತಾಲೂಕಿನ ಅಳಿಕೆ ಗ್ರಾಮದ ಕೋಟೆ ಎಂಬಲ್ಲಿ ಪರವಾನಗಿಯ ಅವಧಿ ಮುಗಿದ ಬಳಿಕವೂ ಪರವಾನಗೆಯನ್ನು ತಿದ್ದಿ ಅಕ್ರಮವಾಗಿ ಕೆಂಪುಕಲ್ಲು ಗಣಿಗಾರಿಕೆ ನಡೆಸುತ್ತಿದ್ದ ಪ್ರಕರಣ ಬೆಳಕಿಗೆ ಬಂದಿದ್ದು, ವಿಟ್ಲ ಪೊಲೀಸ್ ಠಾಣೆಯಲ್ಲಿ ಕೇಸ್ ದಾಖಲಾಗಿದೆ.

ಘಟನೆಯ ವಿವರ
ದಿನಾಂಕ 14-05-2026 ರಂದು ವಿಟ್ಲ ಪೊಲೀಸ್ ಠಾಣಾ ಪೊಲೀಸ್ ಉಪನಿರೀಕ್ಷಕ ರಾಮಕೃಷ್ಣ ಅವರಿಗೆ ಅಕ್ರಮ ಗಣಿಗಾರಿಕೆ ಕುರಿತು ಖಚಿತ ಮಾಹಿತಿ ಲಭಿಸಿತ್ತು. ತಕ್ಷಣ ಸ್ಥಳಕ್ಕೆ ತೆರಳಿ ಪರಿಶೀಲನೆ ನಡೆಸಿದ ಪೊಲೀಸರು, ಗಣಿಗಾರಿಕೆಗೆ ಸಂಬಂಧಿಸಿದ ದಾಖಲಾತಿಗಳನ್ನು ಗಣಿ ಮತ್ತು ಭೂ ವಿಜ್ಞಾನ ಇಲಾಖೆಯ ಮೂಲಕ ಪರಿಶೀಲಿಸಿದ್ದಾರೆ.

ಪತ್ತೆಯಾದ ಅಕ್ರಮ
ಪರಿಶೀಲನೆ ವೇಳೆ ಕೆಂಪುಕಲ್ಲು ಗಣಿಗಾರಿಕೆಯ ಪರವಾನಿಗೆ ದಿನಾಂಕ 29-04-2026 ರಂದು ಮುಕ್ತಾಯಗೊಂಡಿರುವುದು ಧೃಢಪಟ್ಟಿದೆ. ಆದರೆ ಆರೋಪಿಯು ಪರವಾನಿಗೆ ಪತ್ರದಲ್ಲಿನ ದಿನಾಂಕವನ್ನು 29-05-2026 ಎಂದು ತಿದ್ದಿ ಅಕ್ರಮವಾಗಿ ಗಣಿಗಾರಿಕೆ ನಡೆಸುತ್ತಿದ್ದುದು ಪತ್ತೆಯಾಗಿದೆ.

ಆರೋಪಿ ವಿರುದ್ಧ ಕೇಸ್
ಈ ಹಿನ್ನೆಲೆಯಲ್ಲಿ ಪ್ರಕರಣದ ಆರೋಪಿ ಬಂಟ್ವಾಳ ಮೇರಮಜಲು ನಿವಾಸಿ ರಂಜೀತ್ ಕುಮಾರ್ ವಿರುದ್ಧ ದಿನಾಂಕ 15-05-2026 ರಂದು ವಿಟ್ಲ ಪೊಲೀಸ್ ಠಾಣೆಯಲ್ಲಿ ಅ.ಕ್ರ 110/2026 ರಂತೆ ಪ್ರಕರಣ ದಾಖಲಿಸಲಾಗಿದೆ.

ದಾಖಲಾದ ಕಲಂಗಳು: BNS 2023: ಕಲಂ 318(4), 336(3) MMDR Act 1957: ಕಲಂ 4(1), 4(1A), 21KMMC Rule 1994: ಕಲಂ 3, 44

ಸದ್ಯ ವಿಟ್ಲ ಪೊಲೀಸರು ಪ್ರಕರಣದ ತನಿಖೆ ಮುಂದುವರಿಸಿದ್ದಾರೆ.

ads (2)
ads (3)
ads (4)
ads (5)
ads (6)
ads (1)
ads (8)
ads (7)
ಮುಂದಕ್ಕೆ ಓದಲು ಇಲ್ಲಿ ಕ್ಲಿಕ್‌ ಮಾಡಿ
Advertisement

crime

ಪುತ್ತೂರು: ಗಣೇಶ ವಿಸರ್ಜನಾ ಶೋಭಾಯಾತ್ರೆ ವೇಳೆ ಪೊಲೀಸ್ ಕರ್ತವ್ಯಕ್ಕೆ ಅಡ್ಡಿ; ಅಜಿತ್ ರೈ ಹೊಸಮನೆ ಹಾಗೂ ಇತರರ ವಿರುದ್ಧ ಪ್ರಕರಣ ದಾಖಲು

Published

on

ಪುತ್ತೂರು: ಪುತ್ತೂರು ಮಹಾಲಿಂಗೇಶ್ವರ ದೇವಸ್ಥಾನ ವಠಾರದ ಸಾರ್ವಜನಿಕ ಶ್ರೀ ಗಣೇಶೋತ್ಸವ ಸಮಿತಿ ನೇತೃತ್ವದಲ್ಲಿ ಸೆ.17ರಂದು ರಾತ್ರಿ ನಡೆದ ಗಣೇಶೋತ್ಸವ ವಿಸರ್ಜನಾ ಶೋಭಾಯಾತ್ರೆ ವೇಳೆ ಧ್ವನಿವರ್ಧಕ ಬಳಕೆಗೆ ಸಂಬಂಧಿಸಿದ ನಿಯಮ ಉಲ್ಲಂಘಿಸಿ, ಪೊಲೀಸ್ ಕರ್ತವ್ಯಕ್ಕೆ ಅಡ್ಡಿಪಡಿಸಿದ ಆರೋಪದ ಮೇಲೆ ಪುತ್ತೂರು ನಗರ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

ಪ್ರಕರಣದ ಹಿನ್ನೆಲೆ:

  • ಷರತ್ತುಬದ್ಧ ಅನುಮತಿ: ಶೋಭಾಯಾತ್ರೆಗೆ ರಾತ್ರಿ 10 ಗಂಟೆಯವರೆಗೆ ಮಾತ್ರ ಧ್ವನಿವರ್ಧಕ ಬಳಸಲು ಷರತ್ತುಬದ್ಧ ಅನುಮತಿ ನೀಡಲಾಗಿತ್ತು.
  • ಸಮಯ ಮೀರಿದ ಬಳಿಕವೂ ಬಳಕೆ: ರಾತ್ರಿ ಸುಮಾರು 10.35ರ ವೇಳೆಗೆ ಪುತ್ತೂರು ಕೆಎಸ್‌ಆರ್‌ಟಿಸಿ ಬಸ್ ನಿಲ್ದಾಣ ಜಂಕ್ಷನ್‌ನಲ್ಲಿ ‘ಪಂಚಮುಖಿ ಫ್ರೆಂಡ್ಸ್’ ಹೆಸರಿನ ಸ್ತಬ್ಧಚಿತ್ರದಲ್ಲಿ ಧ್ವನಿವರ್ಧಕ ಬಳಕೆ ಮುಂದುವರಿದಿರುವುದನ್ನು ಗಮನಿಸಿದ ಪೊಲೀಸರು, ಅದನ್ನು ಸ್ವಿಚ್ ಆಫ್ ಮಾಡುವಂತೆ ಸೂಚಿಸಿದ್ದರು.
  • ಆರೋಪವೇನು?: ಪೊಲೀಸರು ಸೂಚನೆ ನೀಡಿದರೂ, ಸ್ಥಳಕ್ಕೆ ಆಗಮಿಸಿದ ಅಜಿತ್ ರೈ ಹೊಸಮನೆ ಹಾಗೂ ಇತರರು ಧ್ವನಿವರ್ಧಕ ಬಂದ್ ಮಾಡದಂತೆ ತಡೆದು, ಪುನಃ ಧ್ವನಿವರ್ಧಕ ಬಳಸುವಂತೆ ಆಯೋಜಕರಿಗೆ ಸೂಚಿಸಿದ್ದಾರೆ ಎಂದು ದೂರಿನಲ್ಲಿ ತಿಳಿಸಲಾಗಿದೆ.

ಸುಪ್ರೀಂ ಕೋರ್ಟ್ ಆದೇಶ ಉಲ್ಲಂಘನೆ ಆರೋಪ:

ಧ್ವನಿವರ್ಧಕ ಬಳಕೆಗೆ ಸಂಬಂಧಿಸಿದ ಸುಪ್ರೀಂ ಕೋರ್ಟ್ ನಿರ್ದೇಶನಗಳು ಹಾಗೂ ಠಾಣೆಯಿಂದ ಆಯೋಜಕರಿಗೆ ನೀಡಲಾಗಿದ್ದ ಷರತ್ತುಗಳ ಕುರಿತು ಸ್ಥಳದಲ್ಲಿದ್ದವರಿಗೆ ಪೊಲೀಸರು ತಿಳಿವಳಿಕೆ ನೀಡಿದರೂ, ಅದನ್ನು ಲೆಕ್ಕಿಸದೆ ಧ್ವನಿವರ್ಧಕ ಬಳಕೆಯನ್ನು ಮುಂದುವರಿಸಿ ಕರ್ತವ್ಯಕ್ಕೆ ಅಡ್ಡಿಪಡಿಸಲಾಗಿದೆ ಎಂದು ಪೊಲೀಸ್ ಉಪನಿರೀಕ್ಷಕರು ನೀಡಿರುವ ದೂರಿನಲ್ಲಿ ಗಂಭೀರ ಆರೋಪ ಮಾಡಲಾಗಿದೆ.

ಕಾನೂನು ಸುವ್ಯವಸ್ಥೆ ಕರ್ತವ್ಯದಲ್ಲಿದ್ದ ಅಧಿಕಾರಿಯು ಠಾಣೆಗೆ ಹಾಜರಾಗಿ ನೀಡಿದ ದೂರಿನ ಮೇರೆಗೆ ಅಜಿತ್ ರೈ ಹೊಸಮನೆ, ಪಂಚಮುಖಿ ಫ್ರೆಂಡ್ಸ್ ಸ್ತಬ್ಧಚಿತ್ರದ ಆಯೋಜಕರು ಹಾಗೂ ಇತರರ ವಿರುದ್ಧ ಪ್ರಕರಣ ದಾಖಲಿಸಿಕೊಳ್ಳಲಾಗಿದ್ದು, ಪೊಲೀಸರು ಮುಂದಿನ ತನಿಖೆ ಮುಂದುವರಿಸಿದ್ದಾರೆ

Continue Reading

crime

ಪುತ್ತೂರು ಮಹಿಳಾ ಠಾಣೆಯಲ್ಲಿ ಸೌಜನ್ಯ ಪರ ಹೋರಾಟಗಾರ ಮಹೇಶ್ ಶೆಟ್ಟಿ ತಿಮರೋಡಿ

Published

on

ಪುತ್ತೂರು: ಸೌಜನ್ಯ ಪರ ಹೋರಾಟಗಾರ ಮಹೇಶ್ ಶೆಟ್ಟಿ ತಿಮರೋಡಿ ಅವರು ಇಂದು ಪುತ್ತೂರು ಶ್ರೀ ಮಹಾಲಿಂಗೇಶ್ವರ ದೇವಸ್ಥಾನಕ್ಕೆ ತೆರಳಿ, ತಮ್ಮ ಹೋರಾಟಕ್ಕೆ ಜಯ ಸಿಗುವಂತೆ ವಿಶೇಷ ಪ್ರಾರ್ಥನೆ ಸಲ್ಲಿಸಿದರು

ಮೂಲಗಳ ಪ್ರಕಾರ, ಬೆಳಿಗ್ಗೆ 11.30ರ ಸುಮಾರಿಗೆ ಅವರು ತಮ್ಮ ಹಳೆಯ ಕೇಸ್ ಒಂದರ ಸಂಬಂಧ ಪುತ್ತೂರು ಮಹಿಳಾ ಪೊಲೀಸ್‌ ಠಾಣೆಗೆ ಬಂದಿದ್ದರು ಎಂದು ತಿಳಿದುಬಂದಿದೆ.

ಈ ಸಂದರ್ಭದಲ್ಲಿ ಮಹಿಳಾ ಠಾಣಾ ಇನ್‌ಸ್ಪೆಕ್ಟರ್‌ ಸುನಿಲ್ ಕುಮಾರ್ ಅವರು ಬೇರೆ ಕಾರ್ಯ ನಿಮಿತ್ತ ಠಾಣೆಯಲ್ಲಿ ಇರಲಿಲ್ಲ. ಹೀಗಾಗಿ, ಲಿಖಿತವಾಗಿ ಹಾಜರಾದ ಬಗ್ಗೆ ಅವರಿಗೆ ನೋಟಿಸ್ ನೀಡಲಾಯಿತು. ಮುಂದಿನ ಸೂಚಿತ ದಿನಾಂಕದಂದು ಮಹೇಶ್ ಶೆಟ್ಟಿ ತಿಮರೋಡಿ ಅವರು ಮತ್ತೆ ಠಾಣೆಗೆ ಹಾಜರಾಗಲಿದ್ದಾರೆ ಎಂದು ಮಾಹಿತಿ ಲಭ್ಯವಾಗಿದೆ.

ಈ ಸಂದರ್ಭ ಸಾಮಾಜಿಕ ಕಾರ್ಯಕರ್ತ ದಿನೇಶ್ ಜೈನ್ ಸೇರಿದಂತೆ ಹಲವರು ಅಭಿಮಾನಿಗಳು ಅವರ ಜೊತೆಗಿದ್ದರು.

ಮಹೇಶ್ ಶೆಟ್ಟಿ ತಿಮರೋಡಿ ಅವರು ಪುತ್ತೂರಿಗೆ ಭೇಟಿ ನೀಡಿದಾಗ ಪುತ್ತೂರು ಶ್ರೀ ಮಹಾಲಿಂಗೇಶ್ವರ ದೇವರ ದರ್ಶನ ಪಡೆದೇ ಹೋಗುತ್ತಿದ್ದು, ಅದರಂತೆ ಇಂದು ಠಾಣೆಗೆ ತೆರಳಿ ಹಿಂತಿರುಗುವಾಗ ಶ್ರೀ ಮಹಾಲಿಂಗೇಶ್ವರ ದೇವಸ್ಥಾನಕ್ಕೆ ತೆರಳಿ, ವಿಶೇಷ ಪ್ರಾರ್ಥನೆ ಸಲ್ಲಿಸಿದರು ಎಂದು ಅವರ ಆಪ್ತ ವಲಯ ತಿಳಿಸಿದೆ.

Continue Reading

crime

ಸಕಲೇಶಪುರ ಲಾಡ್ಜ್‌ನಲ್ಲಿ ಕರಾಳ ರಾತ್ರಿ: ಬಾತ್‌ರೂಮ್‌ನಲ್ಲಿ 23 ವರ್ಷದ ಯುವತಿ ನಿಗೂಢ ಸಾವು, ಜೊತೆಗಿದ್ದ ಯುವಕರು ಎಸ್ಕೇಪ್!

Published

on

ಹಾಸನ: ಜಿಲ್ಲೆಯ ಸಕಲೇಶಪುರ ತಾಲೂಕಿನ ವಳಲಹಳ್ಳಿ ಕೂಡಿಗೆಯಲ್ಲಿರುವ ಲಾಡ್ಜ್‌ ಒಂದರಲ್ಲಿ 23 ವರ್ಷದ ವರ್ಷ ಎಂಬ ಯುವತಿ ಅನುಮಾನಾಸ್ಪದವಾಗಿ ಸಾವನ್ನಪ್ಪಿರುವ ಘಟನೆ ವರದಿಯಾಗಿದೆ. ಈ ಘಟನೆಯು ಸಕಲೇಶಪುರ ಗ್ರಾಮಾಂತರ ಪೊಲೀಸ್ ಠಾಣೆ ವ್ಯಾಪ್ತಿಯಲ್ಲಿ ನಡೆದಿದೆ.

ಘಟನೆಯ ವಿವರಣೆ:

ಪ್ರವಾಸಕ್ಕೆ ತೆರಳಿದ್ದ ಮೂವರು: ಬೆಂಗಳೂರು ಮೂಲದ (ನಾಗಸಂದ್ರ/ಚಿಕ್ಕಬಾಣಾವರ) 23 ವರ್ಷದ ವರ್ಷ ಎಂಬ ಯುವತಿ, ತನ್ನ ಪ್ರಿಯಕರ ರಘು ಹಾಗೂ ಸ್ನೇಹಿತ ದರ್ಶನ್ ಎಂಬುವವರೊಂದಿಗೆ ಶುಕ್ರವಾರ ಪ್ರವಾಸಕ್ಕೆಂದು ಸಕಲೇಶಪುರಕ್ಕೆ ಬಂದಿದ್ದಳು.

ಪ್ರವಾಸಿ ತಾಣಗಳ ವೀಕ್ಷಣೆ: ಶನಿವಾರ, ಭಾನುವಾರ ಹಾಗೂ ಸೋಮವಾರದಂದು ಈ ಮೂವರು ಬೆಟ್ಟದ ಭೈರವೇಶ್ವರ, ಮಜಗಹಳ್ಳಿ ಜಲಪಾತ ಸೇರಿದಂತೆ ವಿವಿಧ ಪ್ರವಾಸಿ ತಾಣಗಳಿಗೆ ಭೇಟಿ ನೀಡಿ ಸುತ್ತಾಡಿದ್ದರು.

ಲಾಡ್ಜ್‌ನಲ್ಲಿ ತಂಗಿದ್ದ ದಳ: ವಳಲಹಳ್ಳಿ ಕೂಡಿಗೆಯಲ್ಲಿರುವ ಶ್ರೀದೇವು ಲಾಡ್ಜ್‌ನಲ್ಲಿ ಮೂವರು ಒಂದೇ ರೂಮ್‌ನಲ್ಲಿ ತಂಗಿದ್ದರು.

ಅನುಮಾನಾಸ್ಪದ ಸಾವು: ಮಂಗಳವಾರ ಲಾಡ್ಜ್‌ನ ಬಾತ್‌ರೂಮ್‌ನಲ್ಲಿ ಸ್ನಾನಕ್ಕೆ ತೆರಳಿದ್ದ ವೇಳೆ ವರ್ಷ ಅಸುನೀಗಿದ್ದಾರೆ. ಯುವತಿ ಮೃತಪಟ್ಟ ಬಳಿಕ ಜೊತೆಗಿದ್ದ ಯುವಕರು ಆಸ್ಪತ್ರೆಗೆ ದಾಖಲಿಸಿ ನಾಪತ್ತೆಯಾಗಿದ್ದಾರೆ (ಕೆಲವು ಮೂಲಗಳ ಪ್ರಕಾರ ಆಸ್ಪತ್ರೆಗೆ ಕರೆತಂದು ಬಳಿಕ ತೆರಳಿದ್ದಾರೆ).

ಆಸ್ಪತ್ರೆ ಹಾಗೂ ಪೊಲೀಸ್ ತನಿಖೆ: ಕೂಡಲೇ ಆಸ್ಪತ್ರೆ ಸಿಬ್ಬಂದಿ ಪೊಲೀಸರಿಗೆ ಮಾಹಿತಿ ನೀಡಿದ್ದು, ಸಕಲೇಶಪುರ ಗ್ರಾಮಾಂತರ ಠಾಣೆಯ ಪೊಲೀಸರು ಸ್ಥಳಕ್ಕೆ ಭೇಟಿ ನೀಡಿ ಪರಿಶೀಲನೆ ನಡೆಸಿದ್ದಾರೆ.

ಬಾತ್‌ರೂಮ್‌ನಲ್ಲಿ ಯುವತಿ ಮೃತಪಟ್ಟಿರುವುದು ಮತ್ತು ಜೊತೆಗಿದ್ದವರು ನಾಪತ್ತೆಯಾಗಿರುವುದು ಹಲವು ಅನುಮಾನಗಳಿಗೆ ಕಾರಣವಾಗಿದ್ದು, ಸಾವಿಗೆ ನಿಖರವಾದ ಕಾರಣವೇನು ಎಂಬುದು ಪೊಲೀಸರ ತನಿಖೆಯಿಂದಷ್ಟೇ ಹೊರಬರಬೇಕಿದೆ.

Continue Reading

Trending

Copyright © 2025 Deevatige

error: Content is protected !!