Connect with us

accident

ರಸ್ತೆ ಅಪಘಾತಕ್ಕೆ ವಾನರ ಬಲಿ: ಮೃತದೇಹ ಅಪ್ಪಿ ಮರಿಯ ಆಕ್ರಂದನ, ಕಣ್ಣೀರು ತರಿಸಿದ ಘಟನೆ!

Published

on

ಬಂಟ್ವಾಳ : ರಾಷ್ಟ್ರೀಯ ಹೆದ್ದಾರಿಯಲ್ಲಿ ಸಂಭವಿಸಿದ ಅಪಘಾತವೊಂದರಲ್ಲಿ ವಯಸ್ಕ ವಾನರವೊಂದು ಮೃತಪಟ್ಟ ಘಟನೆ ನರಹರಿ ಪರ್ವತ ಬಳಿ ನಡೆದಿದೆ. ಗಂಭೀರ ಗಾಯಗೊಂಡ ವಾನರನನ್ನು ಬದುಕಿಸಲು ಸಾಕಷ್ಟು ಪ್ರಯತ್ನಪಟ್ಟರೂ ವಿಧಿಯಾಟ ಬೇರೆಯಾಗಿತ್ತು.

ಘಟನೆಯ ವಿವರ:
ರಾಷ್ಟ್ರೀಯ ಹೆದ್ದಾರಿಯ ನರಹರಿ ಬಳಿ ಅಪಘಾತದಲ್ಲಿ ವಾನರವೊಂದು ಗಂಭೀರವಾಗಿ ಗಾಯಗೊಂಡಿತು. ಸ್ಥಳೀಯರು ಮತ್ತು ಕಾರ್ಯಕರ್ತರು ತಕ್ಷಣ ರಕ್ಷಣೆಗೆ ಧಾವಿಸಿ ಚಿಕಿತ್ಸೆ ನೀಡಲು ಪ್ರಯತ್ನಿಸಿದರು. ಆದರೆ ಸ್ಥಳದಲ್ಲೇ ವಾನರ ಮೃತಪಟ್ಟಿತು.

ಅತ್ಯಂತ ಹೃದಯವಿದ್ರಾವಕ ಸಂಗತಿಯೆಂದರೆ, ಮೃತ ವಾನರನ ಜೊತೆಯಲ್ಲಿದ್ದ ಪುಟ್ಟ ಮರಿ ಆಶ್ರಯದಾತನಾಗಿದ್ದ ಗಂಡು ವಾನರವನ್ನು ಬಿಡದೆ ಅಂಟಿಕೊಂಡು ಆಕ್ರಂದನ ಮಾಡುತ್ತಿತ್ತು. ಅಪಘಾತದಲ್ಲಿ ಮರಿಗೂ ಗಾಯವಾಗಿರುವುದು ಕಂಡುಬಂದಿದೆ.

ಅಂತ್ಯಸಂಸ್ಕಾರ:
ಮೃತ ವಾನರನ ಬಗ್ಗೆ ಮಾನವೀಯತೆಯಿಂದ ಸ್ಪಂದಿಸಿದ ಕಲ್ಲಡ್ಕ ಪ್ರಖಂಡ ಬಜರಂಗದಳದ ಕಾರ್ಯಕರ್ತರು ಮುಂದೆ ಬಂದರು. ಲೋಹಿತ್ ಪನೋಲಿಬೈಲು ಅವರ ನೇತೃತ್ವದಲ್ಲಿ ಕಾರ್ಯಕರ್ತರು ನರಹರಿ ಬೆಟ್ಟದಲ್ಲಿ ವಾನರನಿಗೆ ಅಂತ್ಯಸಂಸ್ಕಾರ ನೆರವೇರಿಸಿದರು.

ಮಾನವನ ನಿರ್ಲಕ್ಷ್ಯ ಮತ್ತು ವೇಗದ ವಾಹನ ಸಂಚಾರದಿಂದಾಗಿ ಅಮಾಯಕ ಮೂಕ ಪ್ರಾಣಿಗಳು ಪ್ರಾಣ ಕಳೆದುಕೊಳ್ಳುತ್ತಿರುವುದು ಮತ್ತೊಮ್ಮೆ ಬೆಳಕಿಗೆ ಬಂದಿದೆ.

ಮುಂದಕ್ಕೆ ಓದಲು ಇಲ್ಲಿ ಕ್ಲಿಕ್‌ ಮಾಡಿ
Advertisement

accident

ಮಾಣಿ ಸಮೀಪ ನಿಯಂತ್ರಣ ತಪ್ಪಿ ಚರಂಡಿಗೆ ಜಿಗಿದ ಇನ್ನೋವಾ ಕಾರು;ತಪ್ಪಿದ ಭೀಕರ ಪ್ರಾಣಾಪಾಯ

Published

on

ಮಾಣಿ: ಮಂಗಳೂರು-ಬೆಂಗಳೂರು ರಾಷ್ಟ್ರೀಯ ಹೆದ್ದಾರಿಯ ಮಾಣಿ ಸಮೀಪದ ಅಳಿರಾ ಎಂಬಲ್ಲಿ ಇಂದು ಮಧ್ಯಾಹ್ನ ಭೀಕರ ರಸ್ತೆ ಅಪಘಾತವೊಂದು ಸಂಭವಿಸಿದ್ದು, ಪ್ರಯಾಣಿಕರು ಅದೃಷ್ಟವಶಾತ್ ಪ್ರಾಣಾಪಾಯದಿಂದ ಪಾರಾಗಿದ್ದಾರೆ.

ಇಂದು ಮಧ್ಯಾಹ್ನ ಸುಮಾರು 2 ಗಂಟೆಯ ವೇಳೆಗೆ ಈ ಘಟನೆ ನಡೆದಿದೆ. ಉಪ್ಪಿನಂಗಡಿ ಕಡೆಯಿಂದ ಮಂಗಳೂರು ಕಡೆಗೆ ಪ್ರಯಾಣಿಸುತ್ತಿದ್ದ ಇನ್ನೋವಾ ಕಾರು ಚಾಲಕನ ನಿಯಂತ್ರಣ ತಪ್ಪಿ ರಸ್ತೆ ಬದಿಯ ಫುಟ್‌ಪಾತ್ ಡಿವೈಡರ್‌ಗೆ ಡಿಕ್ಕಿ ಹೊಡೆದಿದೆ. ಡಿಕ್ಕಿಯ ರಭಸಕ್ಕೆ ಕಾರು ರಸ್ತೆ ಬದಿಯ ಆಳವಾದ ಚರಂಡಿಯನ್ನು ಜಿಗಿದು, ಪಕ್ಕದಲ್ಲಿದ್ದ ಬಾಳೆ ಗಿಡಗಳ ಗುಂಟೆಗೆ ಬಡಿದು ನಿಂತಿದೆ.

ಅದೃಷ್ಟವಶಾತ್ ಬಚಾವ್

ಅಪಘಾತದ ಸಮಯದಲ್ಲಿ ಕಾರಿನಲ್ಲಿ ನಾಲ್ಕು ಮಂದಿ ಪ್ರಯಾಣಿಕರಿದ್ದರು ಎನ್ನಲಾಗಿದ್ದು, ಯಾರಿಗೂ ಯಾವುದೇ ಪ್ರಾಣಾಪಾಯ ಸಂಭವಿಸಿಲ್ಲ ಎಂದು ತಿಳಿದುಬಂದಿದೆ. ಆದರೆ, ಅಪಘಾತದ ತೀವ್ರತೆಗೆ ಇನ್ನೋವಾ ಕಾರಿನ ಮುಂಭಾಗ ಸಂಪೂರ್ಣವಾಗಿ ನುಜ್ಜುಗುಜ್ಜಾಗಿದೆ. ಸದ್ಯ ಕ್ರೇನ್ ಮುಖಾಂತರ ಕಾರನ್ನು ಮೇಲಕ್ಕೆತ್ತಿ ರಸ್ತೆಗೆ ತರುವ ಕಾರ್ಯಾಚರಣೆ ನಡೆಯುತ್ತಿದೆ.

ಒಂದೇ ದಿನ ಎರಡು ಅಪಘಾತ: ಸವಾರರಲ್ಲಿ ಆತಂಕ

ಇದೇ ರಾಷ್ಟ್ರೀಯ ಹೆದ್ದಾರಿಯ ಕೇವಲ 3 ಕಿಲೋಮೀಟರ್ ವ್ಯಾಪ್ತಿಯಲ್ಲಿ ಇಂದು ಬೆಳಿಗ್ಗೆಯಷ್ಟೇ ಮತ್ತೊಂದು ಕಾರು ಡಿವೈಡರ್‌ಗೆ ಡಿಕ್ಕಿ ಹೊಡೆದು ಚಾಲಕ ಮೃತಪಟ್ಟ ಘಟನೆ ನಡೆದಿತ್ತು. ಈ ಬೆನ್ನಲ್ಲೇ ಮಧ್ಯಾಹ್ನ ಮತ್ತೊಂದು ಭೀಕರ ಅಪಘಾತ ಸಂಭವಿಸಿರುವುದು ಸ್ಥಳೀಯ ಹಾಗೂ ಹೆದ್ದಾರಿ ಪ್ರಯಾಣಿಕರಲ್ಲಿ ತೀವ್ರ ಆತಂಕ ಮೂಡಿಸಿದೆ. ಮಾಣಿ ಪರಿಸರದಲ್ಲಿ ಹೆದ್ದಾರಿ ಸಂಚಾರದ ವೇಳೆ ಚಾಲಕರು ಹೆಚ್ಚಿನ ಜಾಗ್ರತೆ ವಹಿಸುವ ಅಗತ್ಯವಿದೆ ಎಂದು ಸಾರ್ವಜನಿಕರು ಒತ್ತಾಯಿಸಿದ್ದಾರೆ.




Continue Reading

accident

ಗಡಿಯಾರದಲ್ಲಿ ಭೀಕರ ಅಪಘಾತ: ಡಿವೈಡರ್‌ಗೆ ಡಿಕ್ಕಿ ಹೊಡೆದ ಕಾರು; ನಾಲ್ವರಿಗೆ ಗಂಭೀರ ಗಾಯ, ಚಾಲಕ ದುರ್ಮರಣ

Published

on

ಬಂಟ್ವಾಳ/ಉಪ್ಪಿನಂಗಡಿ: ಮಂಗಳೂರು-ಬೆಂಗಳೂರು ರಾಷ್ಟ್ರೀಯ ಹೆದ್ದಾರಿಯ ಮಾಣಿ ಮತ್ತು ಉಪ್ಪಿನಂಗಡಿ ಮಧ್ಯದ ಗಡಿಯಾರ ಎಂಬಲ್ಲಿ ಇಂದು ಮಧ್ಯಾಹ್ನ ಭೀಕರ ಕಾರು ಅಪಘಾತವೊಂದು ಸಂಭವಿಸಿದ್ದು, ಚಾಲಕ ಸಾವನ್ನಪ್ಪಿದ್ದಾರೆ. ಮಂಗಳೂರಿನಿಂದ ಹಾಸನ ಕಡೆಗೆ ಪ್ರಯಾಣಿಸುತ್ತಿದ್ದ ಕಾರು ನಿಯಂತ್ರಣ ತಪ್ಪಿ ಹೆದ್ದಾರಿಯ ಡಿವೈಡರ್‌ಗೆ ಬಲವಾಗಿ ಡಿಕ್ಕಿ ಹೊಡೆದಿದೆ.

ಹೆದ್ದಾರಿಯಲ್ಲಿ ಕೇಳಿಬಂದ ಭೀಕರ ಸದ್ದು: ಮಧ್ಯಾಹ್ನ ಸುಮಾರು 12 ಗಂಟೆಯ ವೇಳೆಗೆ ಈ ಘಟನೆ ನಡೆದಿದ್ದು, ಡಿಕ್ಕಿಯ ರಭಸಕ್ಕೆ ದೊಡ್ಡ ಮಟ್ಟದ ಸದ್ದು ಕೇಳಿಬಂದಿದೆ ಎನ್ನಲಾಗಿದೆ. ಅಪಘಾತದ ತೀವ್ರತೆಗೆ ಕಾರು (ನಂಬರ್: KA 12 N 6668) ಸಂಪೂರ್ಣವಾಗಿ ನುಜ್ಜುಗುಜ್ಜಾಗಿದೆ. ಸದ್ದು ಕೇಳಿ ಸ್ಥಳೀಯರು ಹಾಗೂ ಹೆದ್ದಾರಿಯಲ್ಲಿ ಸಂಚರಿಸುತ್ತಿದ್ದ ಸಾರ್ವಜನಿಕರು ತಕ್ಷಣವೇ ಸ್ಥಳಕ್ಕೆ ಧಾವಿಸಿ, ಕಾರಿನಲ್ಲಿದ್ದವರ ರಕ್ಷಣೆಗೆ ಮುಂದಾಗಿದ್ದಾರೆ.

ಹಾಸನ ಮೂಲದ ಪ್ರಯಾಣಿಕರು: ಕಾರಿನಲ್ಲಿ ಹಾಸನ ಮೂಲದ ನಾಲ್ಕು ಮಂದಿ ಪ್ರಯಾಣಿಸುತ್ತಿದ್ದರು ಎಂದು ತಿಳಿದುಬಂದಿದೆ. ಅಪಘಾತದಲ್ಲಿ ನಾಲ್ವರಿಗೂ ಗಂಭೀರ ಗಾಯಗಳಾಗಿದ್ದು, ತಕ್ಷಣವೇ ಅವರನ್ನು ಮಂಗಳೂರಿನ ಫಾದರ್ ಮುಲ್ಲರ್ಸ್ ಆಸ್ಪತ್ರೆಗೆ ದಾಖಲಿಸಿ ಚಿಕಿತ್ಸೆ ನೀಡಲಾಗುತ್ತಿದೆ. ಗಾಯಾಳುಗಳ ಪೈಕಿ ಕಾರು ಚಾಲಕನ ಸ್ಥಿತಿ ಅತ್ಯಂತ ಚಿಂತಾಜನಕವಾಗಿದ್ದು ಆಸ್ಪತ್ರೆಯಲ್ಲಿ ಸಾವನ್ನಪ್ಪಿರುವುದಾಗಿ ಮಾಹಿತಿ ಲಭ್ಯವಾಗಿದೆ.

ಸ್ಥಳಕ್ಕೆ ಭೇಟಿ ನೀಡಿದ ಪೊಲೀಸರು ಪರಿಶೀಲನೆ ನಡೆಸಿದ್ದು, ಸುಗಮ ಸಂಚಾರಕ್ಕೆ ವ್ಯವಸ್ಥೆ ಕಲ್ಪಿಸಿದ್ದಾರೆ. ಗಾಯಾಳುಗಳ ಸಂಪೂರ್ಣ ವಿವರ ಹಾಗೂ ಅಪಘಾತಕ್ಕೆ ನಿಖರ ಕಾರಣ ಇನ್ನಷ್ಟೇ ತಿಳಿದುಬರಬೇಕಿದೆ.




Continue Reading

accident

ಬೆಳ್ತಂಗಡಿ: ಚಾಲಕನ ನಿಯಂತ್ರಣ ತಪ್ಪಿ ರಸ್ತೆಬದಿಯ ಚರಂಡಿಗೆ ಉರುಳಿದ ಕಾರು; ಮೂವರಿಗೆ ಗಾಯ

Published

on

ಬೆಳ್ತಂಗಡಿ: ಚಾಲಕನ ನಿಯಂತ್ರಣ ತಪ್ಪಿದ ಕಾರೊಂದು ರಸ್ತೆಬದಿಯ ಆಳವಾದ ಚರಂಡಿಗೆ ಬಿದ್ದ ಘಟನೆ ಬೆಳ್ತಂಗಡಿ ಸಮೀಪದ ರಾಷ್ಟ್ರೀಯ ಹೆದ್ದಾರಿಯ ಕಾಶಿಬೆಟ್ಟು ಎಂಬಲ್ಲಿ ಮಂಗಳವಾರ ಬೆಳಿಗ್ಗೆ ಸಂಭವಿಸಿದೆ.

ಅಪಘಾತದ ಸಮಯದಲ್ಲಿ ಕಾರಿನಲ್ಲಿ ಮೂವರು ಪ್ರಯಾಣಿಕರಿದ್ದು, ಕಾರು ನಿಯಂತ್ರಣ ತಪ್ಪಿ ನೇರವಾಗಿ ಚರಂಡಿಗೆ ಇಳಿದಿದೆ. ಪರಿಣಾಮವಾಗಿ ಕಾರಿನಲ್ಲಿದ್ದ ಮೂವರಿಗೂ ಗಾಯಗಳಾಗಿದ್ದು, ಅವರನ್ನು ತಕ್ಷಣವೇ ಸ್ಥಳೀಯ ಆಸ್ಪತ್ರೆಗೆ ದಾಖಲಿಸಿ ಚಿಕಿತ್ಸೆ ಕೊಡಿಸಲಾಗುತ್ತಿದೆ ಎಂದು ತಿಳಿದುಬಂದಿದೆ.

ಅಪಘಾತದ ತೀವ್ರತೆಗೆ ಕಾರಿನ ಮುಂಭಾಗ ಜಖಂಗೊಂಡಿದೆ. ಸ್ಥಳಕ್ಕೆ ಸ್ಥಳೀಯರು ಧಾವಿಸಿ ಗಾಯಾಳುಗಳ ರಕ್ಷಣೆಗೆ ನೆರವಾಗಿದ್ದಾರೆ. ಸ್ಥಳೀಯ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ಈ ಘಟನೆ ನಡೆದಿದೆ.

Continue Reading

Trending

Copyright © 2025 Deevatige

error: Content is protected !!