Connect with us

crime

ಅಕ್ರಮ ಬೀಟೆ ಮರ ಸಾಗಾಟ ಜಾಲ ಭೇದಿಸಿದ ಅರಣ್ಯ ಇಲಾಖೆ; ಆನೆ ಕಾರ್ಯಾಚರಣೆ ವೇಳೆ ಸಿಬ್ಬಂದಿ ಬೆನ್ನಟ್ಟಿದ ಕಾಡಾನೆ ಹಿಂಡು!

Published

on

ಮಡಿಕೇರಿ: ಕೊಡಗು ಜಿಲ್ಲೆಯ ಮಡಿಕೇರಿ ವಿಭಾಗದಲ್ಲಿ ಅರಣ್ಯ ಇಲಾಖೆಯ ಅಧಿಕಾರಿಗಳು ಹಾಗೂ ಸಿಬ್ಬಂದಿಗಳು ಒಂದೆಡೆ ಭರ್ಜರಿ ಕಾರ್ಯಾಚರಣೆ ನಡೆಸಿ ಲಕ್ಷಾಂತರ ರೂಪಾಯಿ ಮೌಲ್ಯದ ಅಕ್ರಮ ಮರಗಳನ್ನು ಜಪ್ತಿ ಮಾಡಿದರೆ, ಮತ್ತೊಂದೆಡೆ ಕಾಡಾನೆಗಳನ್ನು ಕಾಡಿಗಟ್ಟುವ ಕಾರ್ಯಾಚರಣೆ ವೇಳೆ ಆನೆಗಳ ಹಿಂಡು ಸಿಬ್ಬಂದಿಯನ್ನೇ ಅಟ್ಟಾಡಿಸಿದ ಆತಂಕಕಾರಿ ಘಟನೆಗಳು ವರದಿಯಾಗಿವೆ.

ಅಕ್ರಮ ಮರ ಸಾಗಣೆ: 28 ಲಕ್ಷ ರೂ. ಮೌಲ್ಯದ ಬೀಟೆ ಮರ ಸಹಿತ ಲಾರಿ ಜಪ್ತಿ, ಆರೋಪಿ ಬಂಧನ

ಕೊಡಗು ಜಿಲ್ಲೆಯ ವಿರಾಜಪೇಟೆ ಅರಣ್ಯ ಪ್ರದೇಶದಿಂದ ಅಕ್ರಮವಾಗಿ ಬೀಟೆ ಮರದ ದಿಮ್ಮಿಗಳನ್ನು ಸಾಗಿಸುತ್ತಿದ್ದ ಬೃಹತ್ ಜಾಲವನ್ನು ಅರಣ್ಯ ಇಲಾಖೆಯ ಅಧಿಕಾರಿಗಳು ಯಶಸ್ವಿಯಾಗಿ ಭೇದಿಸಿದ್ದಾರೆ. ಸುಮಾರು 28 ಲಕ್ಷ ರೂ. ಮೌಲ್ಯದ 45 ಬೀಟೆ ಮರದ ದಿಮ್ಮಿಗಳನ್ನು ಹಾಗೂ ಸಾಗಾಟಕ್ಕೆ ಬಳಸಿದ್ದ ಲಾರಿಯನ್ನು ವಶಪಡಿಸಿಕೊಳ್ಳಲಾಗಿದೆ.

ಪ್ರಕರಣಕ್ಕೆ ಸಂಬಂಧಿಸಿದಂತೆ ಕೇರಳದ ಮಲಪ್ಪುರಂ ಮೂಲದ ಲಾರಿ ಮಾಲೀಕ ಹಾಗೂ ಚಾಲಕ ಅಬ್ದುಲ್ ಶಕೂರ್ ಎಂಬಾತನನ್ನು ಬಂಧಿಸಲಾಗಿದೆ.

ಕಾರ್ಯಾಚರಣೆ ನಡೆದದ್ದು ಹೀಗೆ: ಕೊಡಗಿನಿಂದ ಕಾಫಿ ಹಾಗೂ ಮರದ ಹೊಟ್ಟು ತುಂಬಿದ ಚೀಲಗಳ ನಡುವೆ ಬೀಟೆ ಮರದ ದಿಮ್ಮಿಗಳನ್ನು ಅಡಗಿಸಿಟ್ಟು ಸಾಗಿಸಲಾಗುತ್ತಿದೆ ಎಂಬ ಖಚಿತ ಮಾಹಿತಿ ಲಭ್ಯವಾಗಿತ್ತು. ಈ ಮೇರೆಗೆ ಹುಣಸೂರು ಪ್ರಾದೇಶಿಕ ಅರಣ್ಯ ವಿಭಾಗದ ಅಧಿಕಾರಿಗಳು, ಹುಣಸೂರು-ಹೆಚ್.ಡಿ.ಕೋಟೆ ಮುಖ್ಯರಸ್ತೆಯ ಆಜಾದ್ ನಗರ ಪೆಟ್ರೋಲ್ ಬಂಕ್ ಬಳಿ ಲಾರಿಯನ್ನು ತಡೆದು ಪರಿಶೀಲನೆ ನಡೆಸಿದಾಗ ಈ ಅಕ್ರಮ ಬಯಲಾಗಿದೆ. ಅರಣ್ಯ ಇಲಾಖೆಯು ಲಾರಿ, ಮರದ ದಿಮ್ಮಿ ಹಾಗೂ ಕೃತ್ಯಕ್ಕೆ ಬಳಸಿದ್ದ ಮೊಬೈಲ್ ಫೋನ್‌ಗಳನ್ನು ಜಪ್ತಿ ಮಾಡಿದೆ.

ಅರಣ್ಯ ಸಿಬ್ಬಂದಿ ತಂಡವನ್ನೇ ಅಟ್ಟಾಡಿಸಿದ ಕಾಡಾನೆ ಹಿಂಡು

ವಿರಾಜಪೇಟೆ ತಾಲೂಕಿನ ಗುಹ್ಯ ಹಾಗೂ ನೆಲ್ಲಿಹುದಿಕೇರಿ ಗ್ರಾಮದ ಬೆಟ್ಟದ ಕಾಡು ಮತ್ತು ಸುತ್ತಮುತ್ತಲಿನ ಕಾಫಿ ತೋಟಗಳಲ್ಲಿ ಕಾಡಾನೆಗಳು ಬೀಡುಬಿಟ್ಟು ನಿರಂತರ ಹಾವಳಿ ಸೃಷ್ಟಿಸುತ್ತಿದ್ದವು. ಆನೆಗಳನ್ನು ಕಾಡಿಗಟ್ಟುವಂತೆ ಗ್ರಾಮಸ್ಥರು ಅರಣ್ಯ ಇಲಾಖೆಗೆ ಮನವಿ ಮಾಡಿದ್ದರು.

ಈ ಹಿನ್ನೆಲೆಯಲ್ಲಿ ಅರಣ್ಯ ಇಲಾಖೆ ಅಧಿಕಾರಿಗಳು ಮತ್ತು ಸಿಬ್ಬಂದಿ ನೇತೃತ್ವದಲ್ಲಿ ಕಾಡಾನೆಗಳನ್ನು ಕಾಡಿಗಟ್ಟುವ ಕಾರ್ಯಾಚರಣೆ ಹಮ್ಮಿಕೊಳ್ಳಲಾಗಿತ್ತು. ಈ ವೇಳೆ ಗುಂಪಿನಲ್ಲಿದ್ದ ಕಾಡಾನೆಗಳು ತೀವ್ರ ಕೋಪಗೊಂಡು, ಕಾರ್ಯಾಚರಣೆ ನಡೆಸುತ್ತಿದ್ದ ತಂಡದ ಮೇಲೆಯೇ ತಿರುಗಿಬಿದ್ದು ಅಟ್ಟಾಡಿಸಿವೆ. ಕಾಡಾನೆಗಳಿಂದ ತಪ್ಪಿಸಿಕೊಳ್ಳಲು ಅರಣ್ಯ ಸಿಬ್ಬಂದಿ ಹಾಗೂ ವೇಗದ ಕಾರ್ಯಪಡೆ (DRF/RRT) ಸಿಬ್ಬಂದಿ ಕಾಫಿ ತೋಟದೊಳಗೆ ಓಡಿ ಹೋಗಿ ಪ್ರಾಣಾಪಾಯದಿಂದ ಪಾರಾಗಿದ್ದಾರೆ.

ಗ್ರಾಮಸ್ಥರಲ್ಲಿ ಮುಂದುವರಿದ ಆತಂಕ: ಗುಂಪಿನಲ್ಲಿದ್ದ ಬಹುತೇಕ ಕಾಡಾನೆಗಳು ಕಾಫಿ ತೋಟಗಳಿಂದ ಹೊರಕ್ಕೆ ಹೋಗದೆ ಹಿಂಡಾಗಿಯೇ ಬೀಡುಬಿಟ್ಟಿವೆ ಎಂದು ಸಿಬ್ಬಂದಿ ತಿಳಿಸಿದ್ದಾರೆ. ಸದ್ಯ ಒಂದು ಗುಂಪಿನ ಕಾಡಾನೆಗಳು ಗುಹ್ಯ ಗ್ರಾಮದಲ್ಲಿ ಹಾಗೂ ಬೆಳ್ಳಿಹುದಿಕೇರಿ ಗ್ರಾಮದ ಬೆಟ್ಟದ ಕಾಡು ವಡಿ ತೋಟದ ಬಳಿ ಉಳಿದುಕೊಂಡಿವೆ. ಈ ಗುಂಪಿನಲ್ಲಿ 5 ಮರಿಯಾನೆಗಳು ಸೇರಿದಂತೆ ಒಟ್ಟು 21ಕ್ಕೂ ಅಧಿಕ ಕಾಡಾನೆಗಳು ಬೀಡುಬಿಟ್ಟಿರುವುದು ಸ್ಥಳೀಯ ಗ್ರಾಮಸ್ಥರಲ್ಲಿ ತೀವ್ರ ಆತಂಕ ಮೂಡಿಸಿದೆ.

ads (2)
ads (3)
ads (4)
ads (5)
ads (6)
ads (1)
ads (8)
ads (7)
ಮುಂದಕ್ಕೆ ಓದಲು ಇಲ್ಲಿ ಕ್ಲಿಕ್‌ ಮಾಡಿ
Advertisement

arrest

ಬೆಳ್ತಂಗಡಿ: ಅಕ್ರಮ ಕೋಳಿಅಂಕ ಜೂಜಾಟದ ಅಡ್ಡೆಗೆ ಪೋಲಿಸ್ ದಾಳಿ – ಇಬ್ಬರ ಬಂಧನ, ಸೊತ್ತುಗಳು ಜಪ್ತಿ

Published

on

ಬೆಳ್ತಂಗಡಿ: ತಾಲೂಕಿನ ಬಂದಾರು ಗ್ರಾಮದ ನಿರ್ಮಡ ಎಂಬಲ್ಲಿ ಅಕ್ರಮವಾಗಿ ನಡೆಯುತ್ತಿದ್ದ ಕೋಳಿಅಂಕ ಜೂಜಾಟದ ಸ್ಥಳಕ್ಕೆ ಧರ್ಮಸ್ಥಳ ಪೊಲೀಸರು ದಾಳಿ ನಡೆಸಿ, ಇಬ್ಬರು ಆರೋಪಿಗಳನ್ನು ಬಂಧಿಸಿರುವ ಘಟನೆ ಸಂಭವಿಸಿದೆ.

ಧರ್ಮಪ್ಪ ಗೌಡ (38) (ಬಂದಾರು ಗ್ರಾಮದ ನಿರ್ಮಡ ನಿವಾಸಿ) ಮತ್ತು ಹರೀಶ್ ಎಸ್. (30) (ಪುತ್ತೂರು ತಾಲೂಕಿನ ನೆಕ್ಕಿಲಾಡಿ ಗ್ರಾಮದ ಬೆಳ್ಳೂರು ನಿವಾಸಿ) ಬಂಧಿತ ಆರೋಪಿಗಳು.

ದಾಳಿಯ ವಿವರ:

ಆಗಸ್ಟ್ 3ರಂದು ಸಂಜೆ ಸುಮಾರು 5:15ರ ವೇಳೆಗೆ ಲಭಿಸಿದ ಖಚಿತ ಮಾಹಿತಿಯ ಮೇರೆಗೆ ಧರ್ಮಸ್ಥಳ ಸಬ್ ಇನ್ಸ್‌ಪೆಕ್ಟರ್ ಸಮರ್ಥ್ ಆರ್. ಗಾಣಿಗೇರ ಅವರ ನೇತೃತ್ವದ ಪೊಲೀಸ್ ತಂಡ ನಿರ್ಮಡ ಪ್ರದೇಶಕ್ಕೆ ದಾಳಿ ನಡೆಸಿತು. ಈ ವೇಳೆ ಆರೋಪಿಗಳು ಕೋಳಿಗಳ ಕಾಲಿಗೆ ಬಾಳು (ಸಣ್ಣ ಕತ್ತಿ) ಕಟ್ಟಿ, ಪರಸ್ಪರ ಕಾದಾಟಕ್ಕೆ ಬಿಟ್ಟು ಹಣವನ್ನು ಪಣವಾಗಿಟ್ಟುಕೊಂಡು ಜೂಜಾಟದಲ್ಲಿ ತೊಡಗಿರುವುದು ಪತ್ತೆಯಾಗಿದೆ.

ಪೊಲೀಸರನ್ನು ಕಂಡ ತಕ್ಷಣವೇ ಸ್ಥಳದಲ್ಲಿದ್ದ ಕೆಲವರು ಕಾಲ್ಕಿತ್ತಿದ್ದು, ಇಬ್ಬರು ಆರೋಪಿಗಳನ್ನು ಪೊಲೀಸರು ವಶಕ್ಕೆ ಪಡೆಯುವಲ್ಲಿ ಯಶಸ್ವಿಯಾಗಿದ್ದಾರೆ.

ವಶಪಡಿಸಿಕೊಂಡ ಸೊತ್ತುಗಳು:

ದಾಳಿಯ ವೇಳೆ ಪೊಲೀಸರು ಜೂಜಾಟಕ್ಕೆ ಬಳಸಿದ್ದ ₹350 ನಗದು, 2 ಬಾಳುಗಳು (ಸಣ್ಣ ಕತ್ತಿ), ವಿವಿಧ ತಳಿಯ 4 ಕೋಳಿಗಳು ಹಾಗೂ 3 ದ್ವಿಚಕ್ರ ವಾಹನಗಳು ಸೇರಿದಂತೆ ಒಟ್ಟು ₹74,370 ಮೌಲ್ಯದ ಸ್ವತ್ತುಗಳನ್ನು ಜಪ್ತಿ ಮಾಡಿದ್ದಾರೆ.

ಪ್ರಕರಣ ದಾಖಲು:

ಈ ಕುರಿತು ಧರ್ಮಸ್ಥಳ ಪೊಲೀಸ್ ಠಾಣೆಯಲ್ಲಿ BNS ಕಲಂ 112, ಕರ್ನಾಟಕ ಪೊಲೀಸ್ ಕಾಯ್ದೆ ಕಲಂ 87 ಹಾಗೂ ಪ್ರಾಣಿಗಳ ಮೇಲಿನ ಕ್ರೌರ್ಯ ತಡೆ ಕಾಯ್ದೆ – 1960ರ ಕಲಂ 11(1) ರ ಅಡಿಯಲ್ಲಿ ಪ್ರಕರಣ ದಾಖಲಿಸಿಕೊಂಡು ಮುಂದಿನ ಕಾನೂನು ಕ್ರಮ ಕೈಗೊಳ್ಳಲಾಗಿದೆ\

Continue Reading

Bantawala

ಬಸ್‌ನಲ್ಲಿ ಅಸಭ್ಯ ವರ್ತನೆ: ವಿಕೃತಕಾಮಿ ವೃದ್ಧ ಅರ್ಚಕನ ವಿರುದ್ಧ ಬಂಟ್ವಾಳ ಠಾಣೆಯಲ್ಲಿ ಕೇಸ್‌ ದಾಖಲು!

Published

on

ಬಂಟ್ವಾಳ: ಸಾರ್ವಜನಿಕ ಸಾರಿಗೆಯಲ್ಲಿ ಮಹಿಳೆಯರ ಎದುರು ಖಾಸಗಿ ಅಂಗ ಪ್ರದರ್ಶಿಸಿ ಅಸಭ್ಯವಾಗಿ ವರ್ತಿಸಿದ ಆರೋಪದ ಮೇಲೆ ವೃದ್ಧನೊಬ್ಬನ ವಿರುದ್ಧ ಬಂಟ್ವಾಳ ನಗರ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

ಘಟನೆಯ ವಿವರ:

ಜುಲೈ 30ರಂದು ಮಂಗಳೂರಿನ ಸ್ಟೇಟ್ ಬ್ಯಾಂಕ್‌ನಿಂದ ಉಪ್ಪಿನಂಗಡಿಗೆ ಹೊರಟಿದ್ದ ಖಾಸಗಿ ಬಸ್‌ನಲ್ಲಿ ಈ ಘಟನೆ ನಡೆದಿದೆ. ಮಧ್ಯಾಹ್ನ 2.10ರ ಸುಮಾರಿಗೆ ಬಿ.ಸಿ. ರೋಡ್ ಬಸ್ ನಿಲ್ದಾಣದಲ್ಲಿ ಬಸ್‌ ಏರಿದ್ದ ಸುಮಾರು 60–70 ವರ್ಷ ಪ್ರಾಯದ ವ್ಯಕ್ತಿಯೊಬ್ಬ, ಚಾಲಕನ ಎಡಭಾಗದ ಅಡ್ಡ ಸೀಟಿನಲ್ಲಿ ಕುಳಿತುಕೊಂಡಿದ್ದ. ಪ್ರಯಾಣದ ವೇಳೆ ಎದುರಿನ ಸೀಟಿನಲ್ಲಿದ್ದ ಮಹಿಳೆಯರಿಗೆ ಕಾಣುವಂತೆ ಅಸಭ್ಯವಾಗಿ ಗುಪ್ತಾಂಗ ಪ್ರದರ್ಶಿಸಿ ವಿಕೃತಿ ಮೆರೆದಿದ್ದಾನೆ.

ಮಹಿಳೆಯ ಧೈರ್ಯ, ವೈರಲ್ ವೀಡಿಯೋ:

ವೃದ್ಧನ ನೀಚ ಕೃತ್ಯವನ್ನು ಕಂಡು ಆಕ್ರೋಶಗೊಂಡ ಬಸ್‌ನಲ್ಲಿದ್ದ ಮಹಿಳೆಯೊಬ್ಬರು ಧೈರ್ಯದಿಂದ ತಮ್ಮ ಮೊಬೈಲ್‌ನಲ್ಲಿ ಆತನ ವಿಕೃತಿಯನ್ನು ವೀಡಿಯೋ ರೆಕಾರ್ಡ್ ಮಾಡಿದ್ದಾರೆ. ಇದನ್ನು ಗಮನಿಸಿದ ವೃದ್ಧ, ಮೆಲ್ಕಾರ್ ಜಂಕ್ಷನ್ ತಲುಪುತ್ತಿದ್ದಂತೆ ಗಾಬರಿಯಿಂದ ಬಸ್‌ನಿಂದ ಇಳಿದು ಪರಾರಿಯಾಗಿದ್ದ. ಬಳಿಕ ಈ ವಿಷಯ ಬಸ್ ಚಾಲಕನ ಗಮನಕ್ಕೂ ಬಂದಿತ್ತು. ವೀಡಿಯೋ ಸಾಮಾಜಿಕ ಜಾಲತಾಣಗಳಲ್ಲಿ ವೈರಲ್ ಆಗುತ್ತಿದ್ದಂತೆ ಸಾರ್ವಜನಿಕರು ಆರೋಪಿಯ ಗುರುತು ಪತ್ತೆ ಹಚ್ಚಿದ್ದು, ಆತ ಬಂಟ್ವಾಳ ತಾಲೂಕಿನ ಪೆರಾಜೆ ಗ್ರಾಮದ ಸಾದಿಕುಕ್ಕು ಅಂಗನವಾಡಿ ಬಳಿಯ ನಿವಾಸಿ ಹಾಗೂ ವೃತ್ತಿಯಲ್ಲಿ ಅರ್ಚಕ ಎಂದು ತಿಳಿದುಬಂದಿದೆ.

ಬಂಟ್ವಾಳ ಠಾಣೆಯಲ್ಲಿ ದೂರು:

ಸಾಮಾಜಿಕ ಜಾಲತಾಣಗಳಲ್ಲಿ ವ್ಯಾಪಕ ಆಕ್ರೋಶ ವ್ಯಕ್ತವಾದ ಬೆನ್ನಲ್ಲೇ ಇದೀಗ ಬಂಟ್ವಾಳ ನಗರ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ. ಅ.ಕ್ರ. 107/2026ರಂತೆ ಭಾರತೀಯ ನ್ಯಾಯ ಸಂಹಿತೆ (BNS)-2023ರ ಕಲಂ 75(2)ರ ಅಡಿಯಲ್ಲಿ ಎಫ್‌ಐಆರ್ ದಾಖಲಿಸಿಕೊಂಡಿರುವ ಪೊಲೀಸರು ಮುಂದಿನ ತನಿಖೆ ಕೈಗೊಂಡಿದ್ದಾರೆ.

Continue Reading

arrest

7 ವರ್ಷಗಳಿಂದ ತಲೆಮರೆಸಿಕೊಂಡಿದ್ದ ಖ್ಯಾತ ವಾರಂಟ್ ಆರೋಪಿ ಉಮ್ಮರ್ ನವಾಫ್ ಬಂಧನ: ಮಂಗಳೂರು ಪೊಲೀಸರ ಕಾರ್ಯಾಚರಣೆ

Published

on

ಮಂಗಳೂರು: ಕಳೆದ 7 ವರ್ಷಗಳಿಂದ ನ್ಯಾಯಾಲಯದ ವಿಚಾರಣೆಗೆ ಹಾಜರಾಗದೆ ತಲೆಮರೆಸಿಕೊಂಡಿದ್ದ, 30ಕ್ಕೂ ಹೆಚ್ಚು ವಾರಂಟ್ ಹಾಗೂ 13ಕ್ಕೂ ಅಧಿಕ ಗಂಭೀರ ಕ್ರಿಮಿನಲ್ ಪ್ರಕರಣಗಳಲ್ಲಿ ಭಾಗಿಯಾಗಿದ್ದ ವಾರಂಟ್ ಆರೋಪಿಯನ್ನು ಮಂಗಳೂರು ದಕ್ಷಿಣ ಉಪವಿಭಾಗದ ವಿಶೇಷ ಕರ್ತವ್ಯ ಪಡೆ ಪೊಲೀಸರು ಸೆರೆಹಿಡಿಯುವಲ್ಲಿ ಯಶಸ್ವಿಯಾಗಿದ್ದಾರೆ.

ಉಳ್ಳಾಲ ತಾಲೂಕಿನ ಮಾರ್ಗತಲೆ ಮೂಲದ, ಪ್ರಸ್ತುತ ಕೇರಳ ರಾಜ್ಯದ ಕಾಸರಗೋಡು ಜಿಲ್ಲೆಯ ಮಂಜೇಶ್ವರ ತಾಲೂಕಿನ ಕುಂಡಪ್ಪು ನಿವಾಸಿ ಉಮ್ಮರ್ ನವಾಫ್ (33) ಬಂಧಿತ ಆರೋಪಿ.

30ಕ್ಕೂ ಹೆಚ್ಚು ವಾರಂಟ್, ಪ್ರೋಕ್ಲಮೇಷನ್ ಜಾರಿ

ಬಂಧಿತ ಉಮ್ಮರ್ ನವಾಫ್ ವಿರುದ್ಧ ಕೊಲೆ ಯತ್ನ, ಅಪಹರಣ, ದರೋಡೆ, ಹಫ್ತಾ ವಸೂಲಿ, ಸಾರ್ವಜನಿಕ ಆಸ್ತಿಗೆ ಹಾನಿ ಹಾಗೂ ಸರ್ಕಾರಿ ನೌಕರರ ಕರ್ತವ್ಯಕ್ಕೆ ಅಡ್ಡಿಪಡಿಸಿದ ವಿಚಾರಗಳಿಗೆ ಸಂಬಂಧಿಸಿದಂತೆ ಉಳ್ಳಾಲ, ಪಣಂಬೂರು ಹಾಗೂ ಬರ್ಕೆ ಪೊಲೀಸ್ ಠಾಣೆಗಳಲ್ಲಿ 13ಕ್ಕೂ ಹೆಚ್ಚು ಪ್ರಕರಣಗಳು ದಾಖಲಾಗಿದ್ದವು.

ಪ್ರಕರಣಗಳ ವಿಚಾರಣೆಗೆ ನ್ಯಾಯಾಲಯಕ್ಕೆ ಹಾಜರಾಗದೆ ಕಳೆದ 7 ವರ್ಷಗಳಿಂದ ತಲೆಮರೆಸಿಕೊಂಡಿದ್ದ ಈತನ ವಿರುದ್ಧ ಘನ ನ್ಯಾಯಾಲಯವು 30ಕ್ಕೂ ಹೆಚ್ಚು ವಾರಂಟ್‌ಗಳನ್ನು ಹೊರಡಿಸಿತ್ತು. ಅಲ್ಲದೆ, ಉಳ್ಳಾಲ ಠಾಣೆಯ ಮೂರು ಪ್ರಕರಣಗಳಲ್ಲಿ ಈತನ ವಿರುದ್ಧ ನ್ಯಾಯಾಲಯದ ಆದೇಶದಂತೆ ‘ಪ್ರೋಕ್ಲಮೇಷನ್’ ಜಾರಿಗೊಳಿಸಲಾಗಿತ್ತು ಹಾಗೂ ಒಂದು ಪ್ರಕರಣದಲ್ಲಿ ಎಲ್.ಪಿ.ಸಿ (LPC) ಮಾಡಲಾಗಿತ್ತು.

ಆರೋಪಿ ಉಮ್ಮರ್ ನವಾಫ್ ಮೇಲಿರುವ ಪ್ರಕರಣಗಳ ವಿವರಗಳು:

  1. ಉಳ್ಳಾಲ ಪೊಲೀಸ್ ಠಾಣೆ (ಮೊ.ನಂ 222/17):
    • ಕಲಂಗಳು: 143, 147, 148 (ಕಾನೂನುಬಾಹಿರ ಗುಂಪುಗಾರಿಕೆ, ಗಲಭೆ), 341 (ಅಕ್ರಮ ತಡೆ), 504, 506 (ಶಾಂತಿ ಭಂಗ, ಜೀವ ಬೆದರಿಕೆ), 324 (ಹಾಕಾಹಾಕಿ/ಹೊಡೆದಾಟ) ಮತ್ತು 307 (ಕೊಲೆ ಯತ್ನ).
  2. ಉಳ್ಳಾಲ ಪೊಲೀಸ್ ಠಾಣೆ (ಮೊ.ನಂ 23/17):
    • ಕಲಂಗಳು: 427 IPC (ಆಸ್ತಿಗೆ ಹಾನಿ) ಮತ್ತು KPDLP ಕಾಯ್ದೆಯ 2(a), 2(b) (ಸಾರ್ವಜನಿಕ ಆಸ್ತಿ ನಷ್ಟ ತಡೆ ಕಾಯ್ದೆ).
  3. ಉಳ್ಳಾಲ ಪೊಲೀಸ್ ಠಾಣೆ (ಮೊ.ನಂ 247/14):
    • ಕಲಂಗಳು: 448 (ಅಕ್ರಮ ಪ್ರವೇಶ) ಮತ್ತು 395 (ದರೋಡೆ).
  4. ಉಳ್ಳಾಲ ಪೊಲೀಸ್ ಠಾಣೆ (ಮೊ.ನಂ 289/17):
    • ಕಲಂಗಳು: 504, 506, 364(a) (ಅಪಹರಣ ಮತ್ತು ಕಪ್ಪಕ್ಕೆ ಬೇಡಿಕೆ), 387 (ಹಫ್ತಾ ವಸೂಲಿಗೆ ಬೆದರಿಕೆ), 395 (ದರೋಡೆ), 149 IPC.
  5. ಉಳ್ಳಾಲ ಪೊಲೀಸ್ ಠಾಣೆ (ಮೊ.ನಂ 276/15) – (ನ್ಯಾಯಾಲಯದಿಂದ LPC ಮಾಡಲಾದ ಪ್ರಕರಣ):
    • ಕಲಂಗಳು: 143, 144, 148, 448, 451, 452 (ಅಕ್ರಮ ಮನೆ ಪ್ರವೇಶ), 326, 307 (ಕೊಲೆ ಯತ್ನ), 397 (ಮಾರಕ ಆಯುಧದೊಂದಿಗೆ ದರೋಡೆ/ಕಳವು), 506, 149 IPC.
  6. ಉಳ್ಳಾಲ ಪೊಲೀಸ್ ಠಾಣೆ (ಮೊ.ನಂ 206/2012) – (ಪ್ರೋಕ್ಲಮೇಷನ್ ಜಾರಿಯಾದ ಪ್ರಕರಣ):
    • ಕಲಂಗಳು: 143, 147, 148, 323, 427, 504, 506, 149 IPC.
  7. ಉಳ್ಳಾಲ ಪೊಲೀಸ್ ಠಾಣೆ (ಮೊ.ನಂ 27/2017) – (ಪ್ರೋಕ್ಲಮೇಷನ್ ಜಾರಿಯಾದ ಪ್ರಕರಣ):
    • ಕಲಂಗಳು: 387 IPC (ಭಯ ಹುಟ್ಟಿಸಿ ಹಣ/ಆಸ್ತಿ ವಸೂಲಿ ಮಾಡುವುದು).
  8. ಉಳ್ಳಾಲ ಪೊಲೀಸ್ ಠಾಣೆ (ಮೊ.ನಂ 103/2021):
    • ಕಲಂಗಳು: 364 IPC (ಕೊಲೆ ಮಾಡುವ ಉದ್ದೇಶದಿಂದ ಅಪಹರಣ).
  9. ಉಳ್ಳಾಲ ಪೊಲೀಸ್ ಠಾಣೆ (ಮೊ.ನಂ 71/23):
    • ಕಲಂಗಳು: 504, 506, 307 (ಕೊಲೆ ಯತ್ನ), 324, 427 IPC.
  10. ಉಳ್ಳಾಲ ಪೊಲೀಸ್ ಠಾಣೆ (ಮೊ.ನಂ 183/17) – (ಪ್ರೋಕ್ಲಮೇಷನ್ ಜಾರಿಯಾದ ಪ್ರಕರಣ):
    • ಕಲಂಗಳು: 143, 147, 148, 448, 504, 324, 323, 506, 427 R/w 149 IPC.
  11. ಉಳ್ಳಾಲ ಪೊಲೀಸ್ ಠಾಣೆ (ಮೊ.ನಂ 159/23):
    • ಕಲಂಗಳು: 341, 394 (ಕಳವು ಮಾಡುವಾಗ ಗಾಯಗೊಳಿಸುವುದು), 307 (ಕೊಲೆ ಯತ್ನ) R/w 34 IPC.
  12. ಪಣಂಬೂರು ಪೊಲೀಸ್ ಠಾಣೆ (PNB ಮೊ.ನಂ 158/2012):
    • ಕಲಂಗಳು: 379 IPC (ಕಳವು).
  13. ಬರ್ಕೆ ಪೊಲೀಸ್ ಠಾಣೆ (ಮೊ.ನಂ 04/15):
    • ಕಲಂಗಳು: 353 (ಸರ್ಕಾರಿ ನೌಕರರ ಕರ್ತವ್ಯಕ್ಕೆ ಅಡ್ಡಿ), 427 R/w 34 IPC.

ಪೊಲೀಸರ ಸಕಾಲಿಕ ಕಾರ್ಯಾಚರಣೆ

ಮಂಗಳೂರು ದಕ್ಷಿಣ ಉಪವಿಭಾಗದ ಸಹಾಯಕ ಪೊಲೀಸ್ ಆಯುಕ್ತರ (ACP) ಮಾರ್ಗದರ್ಶನದಲ್ಲಿ, ದಕ್ಷಿಣ ಉಪವಿಭಾಗ ಕಚೇರಿಯ ವಿಶೇಷ ಕರ್ತವ್ಯ ಪಡೆಯ ಅಧಿಕಾರಿಗಳು ಮತ್ತು ಸಿಬ್ಬಂದಿಗಳು ದಿನಾಂಕ 02-08-2026 ರಂದು ಸುಳಿವು ಆಧರಿಸಿ ಆರೋಪಿಯನ್ನು ಪತ್ತೆಹಚ್ಚಿ ವಶಕ್ಕೆ ಪಡೆದುಕೊಂಡಿದ್ದಾರೆ. ಬಂಧಿತ ಆರೋಪಿಯನ್ನು ನ್ಯಾಯಾಲಯಕ್ಕೆ ಹಾಜರುಪಡಿಸಲಾಗುವುದು ಎಂದು ನಗರ ಪೊಲೀಸ್ ಕಮಿಷನರ್ ಕಚೇರಿಯ ಪತ್ರಿಕಾ ಪ್ರಕಟಣೆ ತಿಳಿಸಿದೆ.

Continue Reading

Trending

Copyright © 2025 Deevatige

error: Content is protected !!