Connect with us

Politics

ಬ್ರೇಕಿಂಗ್ ನ್ಯೂಸ್: ಕರ್ನಾಟಕ ರಾಜಕೀಯದಲ್ಲಿ ಮಹಾ ದಂಗೆಗೆ ತೆರೆ; ಇಂದು ಮಧ್ಯಾಹ್ನ ಸಿಎಂ ಸಿದ್ದರಾಮಯ್ಯ ರಾಜೀನಾಮೆ, ಮುಂದಿನ ಮುಖ್ಯಮಂತ್ರಿಯಾಗಿ ಡಿ.ಕೆ. ಶಿವಕುಮಾರ್ ಪಟ್ಟಾಭಿಷೇಕ!

Published

on

ಬೆಂಗಳೂರು: ಕಳೆದ ಕೆಲವು ತಿಂಗಳುಗಳಿಂದ ತೀವ್ರ ಕುತೂಹಲ ಮೂಡಿಸಿದ್ದ ರಾಜ್ಯ ರಾಜಕೀಯದ ಹೈಡ್ರಾಮಾಗೆ ಕೊನೆಗೂ ತೆರೆ ಬಿದ್ದಿದೆ. ಕಾಂಗ್ರೆಸ್ ಹೈಕಮಾಂಡ್ ಸೂತ್ರದಂತೆ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ಇಂದು (ಗುರುವಾರ) ಮಧ್ಯಾಹ್ನ 2:30ಕ್ಕೆ ತಮ್ಮ ಸ್ಥಾನಕ್ಕೆ ಅಧಿಕೃತವಾಗಿ ರಾಜೀನಾಮೆ ನೀಡಲಿದ್ದಾರೆ. ಇದರೊಂದಿಗೆ ಕರ್ನಾಟಕದ ಮುಂದಿನ ಮುಖ್ಯಮಂತ್ರಿಯಾಗಿ ಉಪಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್‌ ಅಧಿಕಾರ ಚುಕ್ಕಾಣಿ ಹಿಡಿಯುವುದು ಬಹುತೇಕ ಖಚಿತವಾಗಿದೆ.

🔴 ಮುಖ್ಯಾಂಶಗಳು:

  • ಕ್ಷಣ ಕ್ಷಣದ ಅಪ್ಡೇಟ್: ಇಂದು ಮಧ್ಯಾಹ್ನ 2:30ಕ್ಕೆ ಲೋಕಭವನದಲ್ಲಿ (ರಾಜಭವನ) ರಾಜ್ಯಪಾಲರನ್ನು ಭೇಟಿ ಮಾಡಲಿರುವ ಸಿದ್ದರಾಮಯ್ಯ, ತಮ್ಮ ರಾಜೀನಾಮೆ ಪತ್ರವನ್ನು ಹಸ್ತಾಂತರಿಸಲಿದ್ದಾರೆ.
  • ಭಾವುಕ ಕ್ಷಣಕ್ಕೆ ಸಾಕ್ಷಿಯಾದ ಉಪಹಾರ ಸಭೆ: ಇಂದು ಬೆಳಗ್ಗೆ ಮುಖ್ಯಮಂತ್ರಿ ನಿವಾಸದಲ್ಲಿ ನಡೆದ ಸಚಿವರು ಹಾಗೂ ಪ್ರಮುಖ ನಾಯಕರ ಜಂಟಿ ಉಪಹಾರ ಸಭೆಯಲ್ಲಿ ಸಿದ್ದರಾಮಯ್ಯ ತಮ್ಮ ರಾಜೀನಾಮೆ ನಿರ್ಧಾರವನ್ನು ಪ್ರಕಟಿಸಿದರು. ಈ ವೇಳೆ ತೀವ್ರ ಭಾವುಕ ಸನ್ನಿವೇಶ ಸೃಷ್ಟಿಯಾಗಿತ್ತು.
  • ಆಶೀರ್ವಾದ ಪಡೆದ ಡಿಕೆಶಿ: ನಿರ್ಧಾರ ಪ್ರಕಟವಾಗುತ್ತಿದ್ದಂತೆ ಡಿ.ಕೆ. ಶಿವಕುಮಾರ್ ಅವರು ಸಿದ್ದರಾಮಯ್ಯ ಅವರ ಕಾಲಿಗೆ ಬಿದ್ದು ಆಶೀರ್ವಾದ ಪಡೆದರು. ಇಬ್ಬರು ನಾಯಕರು ಪರಸ್ಪರ ಅಪ್ಪಿಕೊಂಡು ಒಗ್ಗಟ್ಟು ಪ್ರದರ್ಶಿಸಿದರು.
  • ಹೈಕಮಾಂಡ್ ಫಾರ್ಮುಲಾ: ಲೋಕಸಭೆ ಚುನಾವಣೆ ಬೆನ್ನಲ್ಲೇ ಅಧಿಕಾರ ಹಂಚಿಕೆ (2.5 ವರ್ಷಗಳ ಸೂತ್ರ) ಪ್ರಕ್ರಿಯೆಗೆ ಹೈಕಮಾಂಡ್ ಗ್ರೀನ್ ಸಿಗ್ನಲ್ ನೀಡಿದ್ದು, ಅದರಂತೆಯೇ ಈ ನಾಯಕತ್ವ ಬದಲಾವಣೆ ಪ್ರಕ್ರಿಯೆ ಸುಸೂತ್ರವಾಗಿ ನಡೆಯುತ್ತಿದೆ.

ಭಿನ್ನಮತಕ್ಕೆ ಯಾವುದೇ ಅವಕಾಶವಿಲ್ಲ: ಸಚಿವ ಎಚ್.ಕೆ. ಪಾಟೀಲ್ ಸ್ಪಷ್ಟನೆ

ಉಪಹಾರ ಸಭೆಯ ಬಳಿಕ ಸುದ್ದಿಗಾರರೊಂದಿಗೆ ಮಾತನಾಡಿದ ಕಾನೂನು ಸಚಿವ ಎಚ್.ಕೆ. ಪಾಟೀಲ್, ನಾಯಕತ್ವ ಬದಲಾವಣೆಯ ಅಧಿಕೃತ ಮಾಹಿತಿ ನೀಡಿದರು:

“ಹೈಕಮಾಂಡ್ ಜೊತೆ ನಡೆದ ಸುದೀರ್ಘ ಚರ್ಚೆಗಳ ಬಳಿಕ ಮುಖ್ಯಮಂತ್ರಿಯವರು ರಾಜೀನಾಮೆ ನೀಡುವ ತೀರ್ಮಾನಕ್ಕೆ ಬಂದಿದ್ದಾರೆ. ಪಕ್ಷದಲ್ಲಿ ಯಾವುದೇ ಭಿನ್ನಮತ ಅಥವಾ ಅಸಮಾಧಾನಕ್ಕೆ ಅವಕಾಶವೇ ಇಲ್ಲ. ಇದು ಸಂಪೂರ್ಣವಾಗಿ ಏಕಮತದ ತೀರ್ಮಾನವಾಗಿದ್ದು, ಹೈಕಮಾಂಡ್ ಸೂಚನೆಗೆ ಎಲ್ಲ ಸಚಿವರು ಮತ್ತು ಶಾಸಕರು ತಲೆಬಾಗಿದ್ದಾರೆ. ಸಿದ್ದರಾಮಯ್ಯ ಅವರ ಮಾರ್ಗದರ್ಶನದಲ್ಲೇ ಮುಂದಿನ ಸರ್ಕಾರ ಮುನ್ನಡೆಯಲಿದೆ.”

🔄 ಮುಂದಿನ ರಾಜಕೀಯ ಬೆಳವಣಿಗೆಗಳು ಹೀಗಿವೆ:

ಸಮಯಸಂಭಾವ್ಯ ರಾಜಕೀಯ ಪ್ರಕ್ರಿಯೆ
ಮಧ್ಯಾಹ್ನ 2:30ಸಿದ್ದರಾಮಯ್ಯ ಅವರಿಂದ ರಾಜ್ಯಪಾಲರಿಗೆ ಅಧಿಕೃತ ರಾಜೀನಾಮೆ ಸಲ್ಲಿಕೆ.
ಸಂಜೆ 6:00ಕಾಂಗ್ರೆಸ್ ಶಾಸಕಾಂಗ ಪಕ್ಷದ (CLP) ತುರ್ತು ಸಭೆ – ಡಿ.ಕೆ. ಶಿವಕುಮಾರ್ ನೂತನ ಶಾಸಕಾಂಗ ಪಕ್ಷದ ನಾಯಕರಾಗಿ ಅಧಿಕೃತ ಆಯ್ಕೆ.
ಮುಂದಿನ 48 ಗಂಟೆಡಿ.ಕೆ. ಶಿವಕುಮಾರ್ ಅವರಿಂದ ಸರ್ಕಾರ ರಚನೆಗೆ ಹಕ್ಕು ಮಂಡನೆ ಮತ್ತು ನೂತನ ಮುಖ್ಯಮಂತ್ರಿಯಾಗಿ ಪ್ರಮಾಣ ವಚನ ಸ್ವೀಕಾರದ ದಿನಾಂಕ ನಿಗದಿ.

ರಾಜ್ಯ ರಾಜಕೀಯದಲ್ಲಿ ಸಿದ್ದರಾಮಯ್ಯ ಯುಗ ಸದ್ಯಕ್ಕೆ ಮುಕ್ತಾಯವಾಗಿದ್ದು, ‘ಕನಕಪುರ ಬಂಡೆ’ ಡಿ.ಕೆ. ಶಿವಕುಮಾರ್ ಅವರ ನೇತೃತ್ವದಲ್ಲಿ ಹೊಸ ಅಧ್ಯಾಯ ಆರಂಭವಾಗಲು ಕ್ಷಣಗಣನೆ ಆರಂಭವಾಗಿದೆ.



ads (2)
ads (3)
ads (4)
ads (5)
ads (6)
ads (1)
ads (8)
ads (7)
ಮುಂದಕ್ಕೆ ಓದಲು ಇಲ್ಲಿ ಕ್ಲಿಕ್‌ ಮಾಡಿ
Advertisement

award

ತುಳು ಭಾಷೆಗೆ ಕರ್ನಾಟಕದ ಎರಡನೇ ಅಧಿಕೃತ ಭಾಷೆಯ ಐತಿಹಾಸಿಕ ಮಾನ್ಯತೆ: ಕರಾವಳಿಯಲ್ಲಿ ಹಬ್ಬದ ವಾತಾವರಣ

Published

on

ಮಂಗಳೂರು: ತುಳು ಭಾಷಿಕರ ಹಲವು ದಶಕಗಳ ಹೋರಾಟ ಹಾಗೂ ಬಹುದಿನಗಳ ನಿರೀಕ್ಷೆಗೆ ಕೊನೆಗೂ ಐತಿಹಾಸಿಕ ಜಯ ಸಿಕ್ಕಿದೆ. ಶ್ರೀಮಂತ ಪರಂಪರೆಯ ತುಳು ಭಾಷೆಗೆ ಕರ್ನಾಟಕದ ಎರಡನೇ ಅಧಿಕೃತ ಭಾಷೆಯ ಮಾನ್ಯತೆ ನೀಡುವುದಾಗಿ ರಾಜ್ಯ ಸರ್ಕಾರ ಅಧಿಕೃತವಾಗಿ ಘೋಷಿಸಿದೆ.

ಮಂಗಳೂರಿನ ಜಿಲ್ಲಾಧಿಕಾರಿ ಕಚೇರಿ ಸಭಾಂಗಣದಲ್ಲಿ ನಡೆದ ಮಹತ್ವದ ಸಚಿವ ಸಂಪುಟ ಸಭೆಯ ಬಳಿಕ, ಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್ ಅವರು ಸುದ್ದಿಗೋಷ್ಠಿಯಲ್ಲಿ ಈ ಮಹತ್ವದ ತೀರ್ಮಾನವನ್ನು ಪ್ರಕಟಿಸಿದರು.

ಸಂವಿಧಾನದ 8ನೇ ಪರಿಚ್ಛೇದ ಸೇರ್ಪಡೆಗೆ ಬಲ: ಪಂಚ ದ್ರಾವಿಡ ಭಾಷೆಗಳಲ್ಲಿ ಒಂದಾಗಿರುವ ತುಳು, ಪ್ರಾಚೀನ ಹಾಗೂ ಆಧುನಿಕ ಸಾಹಿತ್ಯಿಕ ಸಮೃದ್ಧತೆಯನ್ನು ಹೊಂದಿರುವ ಅಪೂರ್ವ ಭಾಷೆಯಾಗಿದೆ. ರಾಜ್ಯ ಸರ್ಕಾರದಿಂದ ಎರಡನೇ ಅಧಿಕೃತ ಭಾಷಾ ಸ್ಥಾನಮಾನ ಲಭಿಸಿರುವುದು, ಭಾರತೀಯ ಸಂವಿಧಾನದ 8ನೇ ಪರಿಚ್ಛೇದಕ್ಕೆ ತುಳು ಭಾಷೆಯನ್ನು ಸೇರ್ಪಡೆಗೊಳಿಸುವ ಹೋರಾಟಕ್ಕೆ ಮತ್ತಷ್ಟು ಪ್ರಬಲ ವೇದಿಕೆಯಾಗಲಿದೆ.

ನಿರಂತರ ಹೋರಾಟಕ್ಕೆ ಸಿಕ್ಕ ಫಲ: ಕರಾವಳಿ ಭಾಗದ ದಕ್ಷಿಣ ಕನ್ನಡ ಮತ್ತು ಉಡುಪಿ ಜಿಲ್ಲೆಗಳಲ್ಲಿ ಪ್ರಮುಖವಾಗಿ ಮಾತನಾಡುವ ತುಳುವಿಗೆ ಹೆಚ್ಚುವರಿ ಅಧಿಕೃತ ಭಾಷಾ ಮಾನ್ಯತೆ ನೀಡಬೇಕೆಂದು ದಶಕಗಳಿಂದ ತುಳು ಸಾಹಿತ್ಯ ಅಕಾಡೆಮಿ, ತುಳು ಪರ ಸಂಘಟನೆಗಳು, ಸಾಹಿತಿಗಳು ಹಾಗೂ ಸ್ಥಳೀಯ ಜನಪ್ರತಿನಿಧಿಗಳು ಸರ್ಕಾರದ ಮೇಲೆ ನಿರಂತರವಾಗಿ ಒತ್ತಡ ಹೇರುತ್ತ ಬಂದಿದ್ದರು.

ತಜ್ಞರ ಸಮಿತಿಯ ವರದಿ ಆಧಾರ: ತುಳು ಭಾಷೆಗೆ ಅಧಿಕೃತ ಸ್ಥಾನಮಾನ ನೀಡುವ ಸಾಧಕ-ಬಾಧಕಗಳನ್ನು ಕೂಲಂಕಷವಾಗಿ ಪರಿಶೀಲಿಸಲು ಹಿರಿಯ ಶಿಕ್ಷಣ ತಜ್ಞ ಡಾ. ಎಂ. ಮೋಹನ್ ಆಳ್ವ ಅವರ ಅಧ್ಯಕ್ಷತೆಯಲ್ಲಿ ತಜ್ಞರ ಸಮಿತಿಯನ್ನು ರಚಿಸಲಾಗಿತ್ತು. ಈ ಸಮಿತಿಯು ಹೊರ ರಾಜ್ಯಗಳಲ್ಲಿನ ಭಾಷಾ ನೀತಿ ಮಾದರಿಗಳನ್ನು ಅಧ್ಯಯನ ಮಾಡಿ ಸರ್ಕಾರಕ್ಕೆ ವಿಸ್ತೃತ ವರದಿಯನ್ನು ಸಲ್ಲಿಸಿತ್ತು. ಈ ಎಲ್ಲಾ ಬೆಳವಣಿಗೆಗಳ ಹಿನ್ನೆಲೆಯಲ್ಲಿ ಈಗ ತುಳುವರ ಬಹುಕಾಲದ ಕನಸು ನನಸಾಗಿದ್ದು, ಕರಾವಳಿ ಭಾಗದಲ್ಲಿ ಹರ್ಷೋದ್ಗಾರ ವ್ಯಕ್ತವಾಗಿದೆ.

Continue Reading

CONGRESS

ಮಂಗಳೂರು ಸಚಿವ ಸಂಪುಟ ಸಭೆ: ವಿವಿಧ ಸಂಘಟನೆಗಳ ಪ್ರತಿಭಟನೆ ಮತ್ತು ಬಿಗಿ ಭದ್ರತೆ

Published

on

ಮಂಗಳೂರು: ಕರಾವಳಿ ಕರ್ನಾಟಕದಲ್ಲಿ ಮೊದಲ ಬಾರಿಗೆ ಶುಕ್ರವಾರ (ಸೆಪ್ಟೆಂಬರ್ 18) ಆಯೋಜಿಸಲಾದ ವಿಶೇಷ ಸಚಿವ ಸಂಪುಟ ಸಭೆಗೆ ಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್ ಹಾಗೂ ಸಂಪುಟದ ಸಚಿವರು ಆಗಮಿಸಿದ ವೇಳೆ, ವಿವಿಧ ಬೇಡಿಕೆಗಳನ್ನು ಈಡೇರಿಸುವಂತೆ ಒತ್ತಾಯಿಸಿ ನಗರದಲ್ಲಿ ವಿವಿಧ ಸಂಘಟನೆಗಳು ಭಾರಿ ಪ್ರತಿಭಟನೆ ನಡೆಸಿದವು. ಅಬ್ದುಲ್ ರಹೀಮಾನ್ ಕೊಲೆ ಆರೋಪಿಗಳಿಗೆ ಜಾಮೀನು ಮಂಜೂರಾಗಿರುವುದಕ್ಕೆ ರಾಜ್ಯ ಸರ್ಕಾರದ ವೈಫಲ್ಯವೇ ಕಾರಣವೆಂದು ಆರೋಪಿಸಿ ಎಸ್.ಡಿ.ಪಿ.ಐ. ಕಾರ್ಯಕರ್ತರು ಮಂಗಳೂರಿನ ರಾವ್ & ರಾವ್ ಸರ್ಕಲ್ ಬಳಿ ಕಪ್ಪುಪತಾಕೆ ಪ್ರದರ್ಶಿಸಿ ಪ್ರತಿಭಟನೆ ನಡೆಸಿದರು. ಈ ವೇಳೆ ಪೊಲೀಸರು ಹಲವು ಮುಖಂಡರನ್ನು ವಶಕ್ಕೆ ಪಡೆದಿದ್ದಾರೆ.

ಅದೇ ರೀತಿ, ಜೈಲ್ ಜಾಮರ್ ಸಮಸ್ಯೆ ಬಗೆಹರಿಸಲು ಒತ್ತಾಯಿಸಿ ಡಿಸಿ ಕಚೇರಿಗೆ ಮುತ್ತಿಗೆ ಹಾಕಲು ಯತ್ನಿಸಿದ ವಕೀಲರನ್ನು ಹಾಗೂ ವಿವಿಧ ಬೇಡಿಕೆಗಳ ಈಡೇರಿಕೆಗೆ ಆಗ್ರಹಿಸಿ ಡಿಸಿ ಕಚೇರಿಗೆ ಪ್ರತಿಭಟನಾ ಮೆರವಣಿಗೆ ಹೊರಟ ಸಿ.ಪಿ.ಐ.ಎಂ. ಕಾರ್ಯಕರ್ತರನ್ನು ಪೊಲೀಸರು ತಡೆದು ವಶಕ್ಕೆ ಪಡೆದರು. ಇದರೊಂದಿಗೆ ಜಿಲ್ಲಾಧಿಕಾರಿ ಕಚೇರಿ ಮುಂದೆ ಜಮಾಯಿಸಿದ ತುಳು ಸಂಘಟನೆಯವರು ತುಳು ಭಾಷೆಗೆ ಅಧಿಕೃತ ಮಾನ್ಯತೆ ನೀಡುವಂತೆ ಘೋಷಣೆಗಳನ್ನು ಕೂಗಿ ತಮ್ಮ ಆಕ್ರೋಶ ಹೊರಹಾಕಿದರು.

ಈ ಎಲ್ಲಾ ಬೆಳವಣಿಗೆಗಳ ನಡುವೆ, ಸಿಎಂ ಡಿ.ಕೆ. ಶಿವಕುಮಾರ್ ಅವರು ಸಚಿವ ಸಂಪುಟದ ‌ ಸಹೋದ್ಯೋಗಿಗಳೊಂದಿಗೆ ಕದ್ರಿ ಶ್ರೀ ಮಂಜುನಾಥ ದೇವರ ದರ್ಶನ ಪಡೆದು ವಿಶೇಷ ಪ್ರಾರ್ಥನೆ ಸಲ್ಲಿಸಿದರು. ಪಡೀಲ್‌ನಲ್ಲಿರುವ ಪ್ರಜ್ಞಾಸೌಧದ ಎರಡನೇ ಮಹಡಿಯ ಸಭಾಂಗಣದಲ್ಲಿ ಸಚಿವ ಸಂಪುಟ ಸಭೆಗೆ ಸಿದ್ಧತೆ ಮಾಡಿಕೊಳ್ಳಲಾಗಿದ್ದು, ಒಟ್ಟು 33 ಮಂದಿ ಸಚಿವರಿಗೆ ಮತ್ತು ಮುಖ್ಯ ಕಾರ್ಯದರ್ಶಿಗಳು ಸೇರಿದಂತೆ ಹಿರಿಯ ಅಧಿಕಾರಿಗಳಿಗೆ ಆಯಾ ಸಭಾಂಗಣದಲ್ಲೇ ಅಗತ್ಯ ವ್ಯವಸ್ಥೆಗಳನ್ನು ಕಲ್ಪಿಸಲಾಗಿದೆ. ನಿಗದಿತ ಸಮಯಕ್ಕಿಂತ ಸಭೆ ಸ್ವಲ್ಪ ವಿಳಂಬವಾಗಿ ಆರಂಭವಾಗುವ ಸಾಧ್ಯತೆಯಿದೆ ಎಂದು ವರದಿಯಾಗಿದೆ.

Continue Reading

CONGRESS

ಮಂಗಳೂರಿನಲ್ಲಿ ಐತಿಹಾಸಿಕ ರಾಜ್ಯ ವಿಶೇಷ ಸಚಿವ ಸಂಪುಟ ಸಭೆ: ಸಿಎಂ ಹಾಗೂ ಸಚಿವರ ಭೇಟಿ ಮತ್ತು ಕಾರ್ಯಕ್ರಮಗಳ ವರದಿ

Published

on

ಮಂಗಳೂರು: ಕರಾವಳಿ ಜಿಲ್ಲೆ ಮಂಗಳೂರಿನಲ್ಲಿ ಇದೇ ಮೊದಲ ಬಾರಿಗೆ ಆಯೋಜಿಸಲಾಗಿರುವ ರಾಜ್ಯ ವಿಶೇಷ ಸಚಿವ ಸಂಪುಟ ಸಭೆಯಲ್ಲಿ ಪಾಲ್ಗೊಳ್ಳಲು ಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್ ಹಾಗೂ ಸಂಪುಟ ಸಚಿವರು ಆಗಮಿಸಿದ್ದು, ನಗರದಲ್ಲಿ ಬಿರುಸಿನ ರಾಜಕೀಯ ಹಾಗೂ ಸಾಂಸ್ಕೃತಿಕ ಚಟುವಟಿಕೆಗಳು ಆರಂಭವಾಗಿವೆ.

ಕದ್ರಿ ದೇವಸ್ಥಾನ ಭೇಟಿ ಮತ್ತು ಗಾಂಧೀಜಿ ಸ್ಮರಣೆ

ಪ್ರವಾಸದ ಮೊದಲ ದಿನವಾದ ಶುಕ್ರವಾರ ಬೆಳಗ್ಗೆ ಮುಖ್ಯಮಂತ್ರಿಗಳು ಐತಿಹಾಸಿಕ ಕದ್ರಿ ಮಂಜುನಾಥ ಸ್ವಾಮಿ ದೇವಸ್ಥಾನಕ್ಕೆ ಭೇಟಿ ನೀಡಿ ವಿಶೇಷ ಪೂಜೆ ಸಲ್ಲಿಸಿದರು. ಬಳಿಕ, 1934ರಲ್ಲಿ ಮಹಾತ್ಮ ಗಾಂಧೀಜಿಯವರು ಮಂಗಳೂರಿಗೆ ಭೇಟಿ ನೀಡಿದ್ದ ಸಂದರ್ಭದಲ್ಲಿ ಉಳಿದುಕೊಂಡಿದ್ದ ಐತಿಹಾಸಿಕ ಮನೆಯ ಸಮೀಪವಿರುವ ಗಾಂಧಿ ಸ್ಕ್ವೇರ್ ಕೆಫೆಗೆ ತೆರಳಿದರು.

ಯುವ ಕಂಟೆಂಟ್‌ ಕ್ರಿಯೇಟರ್ಸ್‌ ಜೊತೆ ಉಪಾಹಾರ ಹಾಗೂ ಸಂವಾದ

ಮಂಗಳೂರಿನ ಯುವ ಸೋಶಿಯಲ್ ಮೀಡಿಯಾ ಕಂಟೆಂಟ್‌ ಕ್ರಿಯೇಟರ್‌ಗಳೊಂದಿಗೆ ಕೆಫೆಯಲ್ಲಿ ಸಾಂಪ್ರದಾಯಿಕ ಉಪಾಹಾರ ಸವಿಯುತ್ತಾ ಸಿಎಂ ಸಂವಾದ ನಡೆಸಿದರು. ಮಂಗಳೂರು ಬನ್ಸ್, ದೋಸೆ ಸೇರಿದಂತೆ ಕರಾವಳಿಯ ವಿಶಿಷ್ಟ ಉಪಾಹಾರಗಳನ್ನು ಸವಿದ ಅವರು, “ಇಲ್ಲಿಗೆ ಬಂದಿರುವುದು ಬಹಳ ಸಂತೋಷ ತಂದಿದೆ” ಎಂದು ಹರ್ಷ ವ್ಯಕ್ತಪಡಿಸಿದರು.

ಜನರ ಬದುಕು ಮುಖ್ಯ – ಸಿಎಂ ಸ್ಪಷ್ಟನೆ

ಸರ್ಕಾರಿ ಅತಿಥಿ ಗೃಹದಲ್ಲಿ ಸುದ್ದಿಗಾರರೊಂದಿಗೆ ಮಾತನಾಡಿದ ಮುಖ್ಯಮಂತ್ರಿಗಳು, “ಜಿಲ್ಲಾ ಉಸ್ತುವಾರಿ ಸಚಿವರು ಎಲ್ಲೆಲ್ಲಿ ಕರೆದುಕೊಂಡು ಹೋಗುತ್ತಾರೋ ಅಲ್ಲಿಗೆ ಹೋಗುತ್ತೇನೆ. ಯಾರೂ ಗಾಬರಿಯಾಗಬೇಕಿಲ್ಲ; ನಮಗೆ ಜನರ ಬದುಕು ಮುಖ್ಯವೇ ಹೊರತು ಭಾವನೆಗಳ ಮೇಲೆ ರಾಜಕೀಯ ಮಾಡುವವರಲ್ಲ. ಎಲ್ಲರ ಚಿಂತನೆಯನ್ನೊಳಗೊಂಡು ನಮ್ಮ ಸರ್ಕಾರ ಕೆಲಸ ಮಾಡಲಿದೆ” ಎಂದು ಸ್ಪಷ್ಟಪಡಿಸಿದರು.

ಸಂಪುಟ ಸಭೆಗೆ ಭರ್ಜರಿ ಸ್ವಾಗತ ಮತ್ತು ಸಿದ್ಧತೆ

ಸಚಿವ ಸಂಪುಟ ಸಭೆಗೆ ಕ್ಷಣಗಣನೆ ಆರಂಭವಾಗಿರುವ ಹಿನ್ನೆಲೆಯಲ್ಲಿ ಮಂಗಳೂರಿನಲ್ಲಿ ಭವ್ಯ ಸ್ವಾಗತಕ್ಕೆ ಸಿದ್ಧತೆ ಕೈಗೊಳ್ಳಲಾಗಿದೆ. ಪಂಪ್‌ವೆಲ್‌ನಿಂದ ಪಡೀಲ್ ವರೆಗೆ ಚೆಂಡೆ ಬ್ಯಾಂಡ್‌ಗಳು ಹಾಗೂ ವಿವಿಧ ವೇಷಧಾರಿಗಳ ಸಾಂಸ್ಕೃತಿಕ ತಂಡಗಳು ರಸ್ತೆಯುದ್ದಕ್ಕೂ ಗಮನ ಸೆಳೆದವು. ಡಿಸಿ ಕಚೇರಿ ಮುಂದೆ ಸಾರ್ವಜನಿಕರು ದೊಡ್ಡ ಸಂಖ್ಯೆಯಲ್ಲಿ ಜಮಾಯಿಸಿದ್ದು, ಮುಖ್ಯಮಂತ್ರಿಗಳನ್ನು ಕಣ್ತುಂಬಿಕೊಳ್ಳಲು ರಸ್ತೆ ಬದಿ ಕಾದು ನಿಂತಿದ್ದಾರೆ.

Continue Reading

Trending

Copyright © 2025 Deevatige

error: Content is protected !!