arrest
ವಿಟ್ಲ ಪೊಲೀಸರ ಬಲೆಗೆ ಬಿದ್ದ ಫರ್ಟಿಲೈಸರ್ ಮಾಫಿಯಾ; ಪೊಲೀಸ್ ಇನ್ಸ್ಪೆಕ್ಟರ್ ಪ್ರಕಾಶ್ ದೇವಾಡಿಗ ತಂಡದಿಂದ ದಾಳಿ;ವಿಟ್ಲ ಪೊಲೀಸರ ಭರ್ಜರಿ ಕಾರ್ಯಾಚರಣೆ; ಅಕ್ರಮ ದಂಧೆ ಜಾಲ ಬೇಧಿಸಿದ ಖಾಕಿ ಪಡೆ!
Breaking News
ವಿಟ್ಲ: ರೈತರಿಗೆ ಕೇಂದ್ರ ಸರ್ಕಾರವು ರಿಯಾಯಿತಿ (ಸಬ್ಸಿಡಿ) ದರದಲ್ಲಿ ನೀಡುವ ಯೂರಿಯಾ ರಸಗೊಬ್ಬರವನ್ನು ಅಕ್ರಮವಾಗಿ ಶೇಖರಿಸಿ, ಚೀಲಗಳನ್ನು ಬದಲಾಯಿಸಿ ಬೇರೆಡೆಗೆ ಹೆಚ್ಚಿನ ಬೆಲೆಗೆ ಸಾಗಾಟ ಮಾಡುತ್ತಿದ್ದ ರಾಜ್ಯಮಟ್ಟದ ವ್ಯವಸ್ಥಿತ ಜಾಲವೊಂದನ್ನು ವಿಟ್ಲ ಪೊಲೀಸ್ ಇನ್ಸ್ಪೆಕ್ಟರ್ ಪ್ರಕಾಶ್ ದೇವಾಡಿಗ ಮತ್ತು ತಂಡ ಯಶಸ್ವಿಯಾಗಿ ಬೇಧಿಸಿದೆ. ಕಾರ್ಯಾಚರಣೆಯ ವೇಳೆ ಓರ್ವ ಆರೋಪಿಯನ್ನು ಬಂಧಿಸಲಾಗಿದ್ದು, ಲಕ್ಷಾಂತರ ರೂಪಾಯಿ ಮೌಲ್ಯದ ರಸಗೊಬ್ಬರ ಹಾಗೂ ಲಾರಿಯನ್ನು ವಶಪಡಿಸಿಕೊಳ್ಳಲಾಗಿದೆ.

ಆರೋಪಿಯ ಬಂಧನ: ಬಂಟ್ವಾಳ ತಾಲೂಕಿನ ಕೊಳ್ನಾಡು ಗ್ರಾಮದ ಖಂಡಿಗ ಸರ್ಕಾರಿ ಶಾಲೆಯ ಬಳಿಯ ನಿವಾಸಿ ಕೆ. ಮಹಮ್ಮದ್ ಎಂಬವರ ಪುತ್ರ ಮೊಹಮ್ಮದ್ ಅಶ್ರಫ್ (40) ಬಂಧಿತ ಆರೋಪಿಯಾಗಿದ್ದಾನೆ. ಈತ ತನ್ನ ಮನೆಯಲ್ಲೇ ಕಾನೂನುಬಾಹಿರವಾಗಿ ಯೂರಿಯಾ ರಸಗೊಬ್ಬರವನ್ನು ಸಂಗ್ರಹಿಸಿ ಈ ದಂಧೆ ನಡೆಸುತ್ತಿದ್ದ ಎನ್ನಲಾಗಿದೆ.

ಖದೀಮರ ದಂಧೆಯ ಸ್ವರೂಪ: ಕೇಂದ್ರ ಸರ್ಕಾರವು ರೈತರಿಗೆ ನೀಡುವ ಸಬ್ಸಿಡಿ ಯೂರಿಯಾವನ್ನು ವಿವಿಧ ಕೃಷಿ ಪತ್ತಿನ ಸಹಕಾರಿ ಸಂಘಗಳು ಅಥವಾ ಸೊಸೈಟಿಗಳ ಮೂಲಕ ಬೇನಾಮಿ ರೈತರ ಹೆಸರಿನಲ್ಲಿ ಈ ಜಾಲವು ಖರೀದಿಸುತ್ತಿತ್ತು. ಬಳಿಕ, ಸರ್ಕಾರದ ಅಧಿಕೃತ ಮೊಹರು ಹೊಂದಿರುವ ಹಳದಿ ಚೀಲಗಳಿಂದ ಯೂರಿಯಾವನ್ನು ಹೊರತೆಗೆದು, ‘ಟೆಕ್ನಿಕಲ್ ಗ್ರೇಡ್’ ಎಂದು ನಮೂದಿಸಲಾದ 50 ಕೆಜಿಯ ಬಿಳಿ ಚೀಲಗಳಿಗೆ ತುಂಬಿಸಲಾಗುತ್ತಿತ್ತು. ಈ ರೀತಿ ಪ್ಯಾಕ್ ಮಾಡಲಾದ ರಸಗೊಬ್ಬರವನ್ನು ಕೇರಳದ ಫ್ಲೈವುಡ್ ಕಾರ್ಖಾನೆಗಳಿಗೆ ಅತ್ಯಧಿಕ ಬೆಲೆಗೆ ಅಕ್ರಮವಾಗಿ ಮಾರಾಟ ಮಾಡಲಾಗುತ್ತಿತ್ತು ಎಂಬುದು ತನಿಖೆಯಿಂದ ಬೆಳಕಿಗೆ ಬಂದಿದೆ.

ಬೃಹತ್ ಪ್ರಮಾಣದ ರಸಗೊಬ್ಬರ, ಲಾರಿ ಜಪ್ತಿ: ಪೊಲೀಸರು ದಾಳಿ ನಡೆಸಿದ ಸಂದರ್ಭದಲ್ಲಿ ಅಕ್ರಮವಾಗಿ ಶೇಖರಿಸಿಡಲಾಗಿದ್ದ ತಲಾ 50 ಕಿಲೋ ತೂಕದ 342 ಚೀಲ ಯೂರಿಯಾ ರಸಗೊಬ್ಬರ ಪತ್ತೆಯಾಗಿದೆ. ಇದರೊಂದಿಗೆ ತುಮಕೂರು ಮತ್ತು ಹಾಸನ ಭಾಗಗಳಿಂದ ತಲಾ 300 ರೂಪಾಯಿಯಂತೆ ಖರೀದಿಸಿ ಸಾಗಿಸುತ್ತಿದ್ದ ಲಾರಿಯಲ್ಲಿದ್ದ ಮತ್ತೊಂದು 300 ಚೀಲ (ಒಟ್ಟು 642 ಚೀಲ) ರಸಗೊಬ್ಬರ ಹಾಗೂ ಸಾಗಾಟಕ್ಕೆ ಬಳಸುತ್ತಿದ್ದ KA 11 A 6017 ಸಂಖ್ಯೆಯ ಟಾಟಾ ಲಾರಿಯನ್ನು ಪೊಲೀಸರು ವಶಕ್ಕೆ ಪಡೆದಿದ್ದಾರೆ.

ರೈತರ ಹಿತಾಸಕ್ತಿಗೆ ಕನ್ನ: ಪ್ರಸ್ತುತ ಮಾರುಕಟ್ಟೆಯಲ್ಲಿ ತಲಾ 50 ಕಿಲೋ ತೂಕದ ಯೂರಿಯಾ ಚೀಲದ ನೈಜ ಬೆಲೆ 1,457.29 ರೂ. ಆಗಿದ್ದು, ಇದಕ್ಕೆ ಕೇಂದ್ರ ಸರ್ಕಾರವು 1,190.79 ರೂ. ಸಬ್ಸಿಡಿ ನೀಡುತ್ತದೆ. ಹೀಗಾಗಿ ರೈತರಿಗೆ ಇದು ಕೇವಲ 266.50 ರೂ.ಗೆ ಲಭ್ಯವಾಗುತ್ತದೆ. ಆದರೆ, ಇಂತಹ ರಿಯಾಯಿತಿ ದರದ ರಸಗೊಬ್ಬರವನ್ನು ರಸಗೊಬ್ಬರ ಮಾರಾಟ ಕೇಂದ್ರಗಳ ಸಿಬ್ಬಂದಿಗಳ ಜೊತೆ ಶಾಮೀಲಾಗಿ ಕಳ್ಳಮಾರ್ಗದಿಂದ ಲೂಟಿ ಮಾಡುತ್ತಿರುವುದು ರೈತ ಸಮುದಾಯದ ಆಕ್ರೋಶಕ್ಕೆ ಕಾರಣವಾಗಿದೆ.
ದಾಳಿ ನಡೆದ ಸ್ಥಳಕ್ಕೆ ಬಂಟ್ವಾಳ ಕೃಷಿ ಅಧಿಕಾರಿ ನಂದನ್ ಶೆಣೈ, ಸಹಾಯಕ ನಿರ್ದೇಶಕಿ ವೀಣಾ, ಜಿಲ್ಲಾ ಜಾಗೃತ ದಳದ (ವಿಜಿಲೆನ್ಸ್) ಅಧಿಕಾರಿ ನಾಗವೇಣಿ, ಕೊಳ್ನಾಡು ಗ್ರಾಮ ಆಡಳಿತಾಧಿಕಾರಿ ಕರಿಬಸಪ್ಪ ಹಾಗೂ ಪೊಲೀಸ್ ಸಿಬ್ಬಂದಿಗಳಾದ ವಿನಯ್ ಕುಮಾರ್, ಗದಿಗೆಪ್ಪ, ಮಾಯಪ್ಪ, ಸಾಬು ಮಿರ್ಜಿ ಸೇರಿದಂತೆ ಪ್ರಮುಖರು ಭೇಟಿ ನೀಡಿ ಪರಿಶೀಲನೆ ನಡೆಸಿದ್ದಾರೆ. ವಿಟ್ಲ ಪೊಲೀಸರು ಪ್ರಕರಣ ದಾಖಲಿಸಿಕೊಂಡು ತನಿಖೆ ಮುಂದುವರಿಸಿದ್ದಾರೆ.
ಮುಂದಿನ ಕಾನೂನುಕ್ರಮಕ್ಕಾಗಿ ಬಂಟ್ವಾಳ ಸಹಾಯಕ ಕೃಷಿ ನಿರ್ದೇಶಕರು ಕಛೇರಿಯ ಕೃಷಿ ಅಧಿಕಾರಿಗಳಾದ ನಂದನ ಶೆಣೈ ಪಿ, (ತಾಂತ್ರಿಕ)ರವರಿಗೆ ಮಾಹಿತಿ ನೀಡಲಾಗಿ ಸದ್ರಿಯವರು ಸ್ಥಳಕ್ಕೆ ಬಂದು ಪರಿಶೀಲನೆ ನಡೆಸಿ ನೀಡಿದ ದೂರಿನ ಮೇರೆಗೆ ವಿಟ್ಲ ಪೊಲೀಸ್ ಠಾಣೆಯಲ್ಲಿ ಅಕ್ರ : 127/2026 ಕಲಂ: 3(2)(a), 3(2)(d), 3(2)(c), 3(2)(f) ESSENTIAL COMMODITIES ACT, 1955 ಯಂತೆ ಪ್ರಕರಣ ದಾಖಲಾಗಿರುತ್ತದೆ.




arrest
ಮಂಗಳೂರು: ಲಂಚ ಸ್ವೀಕರಿಸುತ್ತಿದ್ದಾಗ ಲೋಕಾಯುಕ್ತ ಬಲೆಗೆ ಬಿದ್ದ ಬಜ್ಪೆ ಇನ್ಸ್‌ಪೆಕ್ಟರ್ ಬಾಲಕೃಷ್ಣ!
ಮಂಗಳೂರು: ವಂಚನೆ ಪ್ರಕರಣವೊಂದರಲ್ಲಿ ವಶಪಡಿಸಿಕೊಂಡಿದ್ದ ಹಣವನ್ನು ಬಿಡುಗಡೆ ಮಾಡಲು ಲಂಚಕ್ಕೆ ಬೇಡಿಕೆ ಇಟ್ಟಿದ್ದ ಬಜ್ಪೆ ಪೊಲೀಸ್ ಠಾಣೆಯ ಪೊಲೀಸ್ ಇನ್ಸ್‌ಪೆಕ್ಟರ್ ಬಾಲಕೃಷ್ಣ ಅವರು ಲೋಕಾಯುಕ್ತ ಪೊಲೀಸರ ಬಲೆಗೆ ಬಿದ್ದಿದ್ದಾರೆ.
ಕಾರ್ಯಾಚರಣೆಯ ವಿವರ:
ಬಜ್ಜೆ ಪೊಲೀಸ್ ಠಾಣೆಯಲ್ಲಿ ದಾಖಲಾಗಿದ್ದ ವಂಚನೆ ಪ್ರಕರಣದಲ್ಲಿ ಆರೋಪಿಗಳಿಂದ ಪೊಲೀಸರು ಹಣವನ್ನು ವಶಕ್ಕೆ ಪಡೆದುಕೊಂಡಿದ್ದರು. ಈ ಹಣವನ್ನು ದೂರುದಾರರಿಗೆ ಬಿಡುಗಡೆ ಮಾಡಲು ಇನ್ಸ್‌ಪೆಕ್ಟರ್ ಬಾಲಕೃಷ್ಣ ಅವರು ಒಟ್ಟು ₹25,000 ಲಂಚದ ಹಣಕ್ಕೆ ಬೇಡಿಕೆ ಇಟ್ಟಿದ್ದರು.
ಈ ಪೈಕಿ ಈಗಾಗಲೇ ₹15,000 ಹಣವನ್ನು ಮುಂಗಡವಾಗಿ ಪಡೆದುಕೊಂಡಿದ್ದ ಇನ್ಸ್‌ಪೆಕ್ಟರ್, ಬಳಿಕ ಹೆಚ್ಚುವರಿಯಾಗಿ ಮತ್ತೊಮ್ಮೆ ₹5,000 ಲಂಚ ನೀಡುವಂತೆ ಪಟ್ಟು ಹಿಡಿದಿದ್ದರು. ಇದರಿಂದ ಬೇಸತ್ತ ಫಿರ್ಯಾದುದಾರರು ಮಂಗಳೂರು ಲೋಕಾಯುಕ್ತ ಪೊಲೀಸ್ ಠಾಣೆಗೆ ದೂರು ನೀಡಿದ್ದರು.
ದೂರಿನ ಅನ್ವಯ ಸೆಪ್ಟೆಂಬರ್ 21ರ ಸಂಜೆ ಕಾರ್ಯಾಚರಣೆ ನಡೆಸಿದ ಲೋಕಾಯುಕ್ತ ಪೊಲೀಸರು, ದೂರುದಾರರಿಂದ ₹5,000 ಲಂಚ ಸ್ವೀಕರಿಸುತ್ತಿದ್ದ ವೇಳೆಯಲ್ಲೇ ಇನ್ಸ್‌ಪೆಕ್ಟರ್ ಬಾಲಕೃಷ್ಣ ಅವರನ್ನು ರೆಡ್ ಹ್ಯಾಂಡ್ ಆಗಿ ಹಿಡಿದು ವಶಕ್ಕೆ ಪಡೆದಿದ್ದಾರೆ. ಪ್ರಸ್ತುತ ಲೋಕಾಯುಕ್ತ ಪೊಲೀಸರು ಮುಂದಿನ ಕಾನೂನು ಕ್ರಮ ಹಾಗೂ ತನಿಖೆಯನ್ನು ಕೈಗೊಂಡಿದ್ದಾರೆ.
ಹಿನ್ನೆಲೆ ಮತ್ತು ಹಳೆಯ ಆರೋಪಗಳು:
ಈ ಹಿಂದೆ ಉಳ್ಳಾಲ ಠಾಣೆಯಲ್ಲಿದ್ದಾಗಲೂ ಬಾಲಕೃಷ್ಣ ಅವರ ಮೇಲೆ ಭ್ರಷ್ಟಾಚಾರದ ಸಾಲು ಸಾಲು ಆರೋಪಗಳು ಕೇಳಿಬಂದಿದ್ದವು:
ಕಳ್ಳತನ ಪ್ರಕರಣದಲ್ಲಿ ಲಂಚ: ಉಳ್ಳಾಲದ ಮನೆಯೊಂದರಲ್ಲಿ ₹15 ಲಕ್ಷ ಮೌಲ್ಯದ ಚಿನ್ನಾಭರಣ ಕಳ್ಳತನವಾದ ಪ್ರಕರಣದಲ್ಲಿ ಮಾರಾಟ ಮಾಡಿದ್ದ ಚಿನ್ನಾಭರಣ ವಶಪಡಿಸಿಕೊಳ್ಳುವಾಗಲೂ ಲಂಚ ಪಡೆದ ಆರೋಪವಿತ್ತು.
ಪ್ರಕರಣ ಮುಚ್ಚಿಹಾಕಲು ದಂಧೆ:
ಬೆಳ್ತಂಗಡಿ ಮೂಲದ ಯುವಕನೊಬ್ಬನ ತಾಯಿಯಿಂದ ಪ್ರಕರಣ ಮುಚ್ಚಿಹಾಕಲು ₹3 ಲಕ್ಷ ರೂಪಾಯಿ ಪೀಕಿಸಿದ್ದಲ್ಲದೆ, ಮಗನ ಚಿನ್ನಾಭರಣ ಎಗರಿಸಿದ ಆರೋಪ ಕೇಳಿಬಂದಿತ್ತು. ಈ ಕುರಿತು ಅಂದಿನ ಪೊಲೀಸ್ ಕಮಿಷನರ್‌ಗೆ ದೂರು ನೀಡಿದ್ದಾಗ, ಇಲಾಖಾ ವಿಚಾರಣೆ ವೇಳೆ ದೂರುದಾರ ಮಹಿಳೆಗೆ ₹4.5 ಲಕ್ಷ ರೂಪಾಯಿ ನೀಡಿ ಕೇಸ್ ಹಿಂಪಡೆಯುವಂತೆ ಮಾಡಿದ್ದರೆನ್ನಲಾಗಿದೆ.
ವರ್ಗಾವಣೆ ನಾಟಕ: ಉಳ್ಳಾಲದ ಮರಳು ದಂಧೆಕೋರರ ಸಾಲಿಗೆ ಸಿಲುಕಿ ವರ್ಗಾವಣೆಯಾಗಿದ್ದ ಇವರು, ಬಳಿಕ ಪಾಂಡೇಶ್ವರ ಮಹಿಳಾ ಠಾಣೆಗೆ ಸೇರಿ, ಪ್ರಸ್ತುತ ಬಜ್ಜೆ ಠಾಣೆಯಲ್ಲಿ ಕರ್ತವ್ಯ ನಿರ್ವಹಿಸುತ್ತಿದ್ದರು.
ಮುಖ್ಯಮಂತ್ರಿ ಪದಕದ ವಿವಾದ.! ಕೋಟೆಕಾರು ಬ್ಯಾಂಕ್ ದರೋಡೆ ಪ್ರಕರಣದಲ್ಲಿ ಇತರೆ ತಂಡಗಳು ಶ್ರಮವಹಿಸಿ ಆರೋಪಿಗಳನ್ನು ಬಂಧಿಸಿದ್ದರೂ, ಅದರ ನೆಪದಲ್ಲಿ ಅಂದಿನ ಇನ್ಸ್‌ಪೆಕ್ಟರ್ ಬಾಲಕೃಷ್ಣ ಅವರ ಹೆಸರನ್ನು ಮುಖ್ಯಮಂತ್ರಿ ಪದಕಕ್ಕೆ ಶಿಫಾರಸು ಮಾಡಿದ್ದು ಭಾರೀ ಸುದ್ದಿಯಾಗಿತ್ತು.
arrest
ಕಾಸರಗೋಡು: ವಿವಾಹಿತ ಮಹಿಳೆಯ ಗೆಳೆಯನ ಜೊತೆ ನಿಲ್ಲಿಸಿ ಗೂಂಡಾಗಿರಿ, ಫೋಟೋ ತೋರಿಸಿ ಬ್ಲ್ಯಾಕ್ ಮೇಲ್ – ಐವರ ಬಂಧನ
ಕಾಸರಗೋಡು: ವಿವಾಹಿತ ಮಹಿಳೆಯ ಮನೆಗೆ ಅಕ್ರಮ ಪ್ರವೇಶ ಮಾಡಿ ಗೂಂಡಾಗಿರಿ ನಡೆಸಿ, ಆಕೆ ಮತ್ತು ಆಕೆಯ ಪುರುಷ ಸ್ನೇಹಿತನನ್ನು ಬೆದರಿಸಿ ಹಣ ಮತ್ತು ಚಿನ್ನಾಭರಣ ಸುಲಿಗೆ ಮಾಡಿದ ಪ್ರಕರಣಕ್ಕೆ ಸಂಬಂಧಿಸಿದಂತೆ ಐವರು ಆರೋಪಿಗಳನ್ನು ವಿದ್ಯಾನಗರ ಪೊಲೀಸರು ಬಂಧಿಸಿದ್ದಾರೆ.
ಬಂಧಿತರನ್ನು ಮುಳಿಯಾರು ಪೊವ್ವಲ್ ನ ಬಿ. ಶರೀಫ್ (42), ಚೆಂಗಳ ಸಂತೋಷ್ ನಗರದ ಮೊಹಮ್ಮದ್ ಸಾಲಿಹ್ (22), ನಾಲ್ಕನೇ ಮೈಲ್ ನಿವಾಸಿಗಳಾದ ಉಮರ್ ಮುಖ್ತಾರ್ (18), ಮೊಹಮ್ಮದ್ ಶಿಹಾನ್ (20) ಹಾಗೂ ಆಲಂಪಾಡಿಯ ಅಬ್ದುಲ್ ರಶೀದ್ (36) ಎಂದು ಗುರುತಿಸಲಾಗಿದೆ. ಆರೋಪಿಗಳನ್ನು ನ್ಯಾಯಾಲಯಕ್ಕೆ ಹಾಜರುಪಡಿಸಲಾಗಿದ್ದು, ನ್ಯಾಯಾಂಗ ಬಂಧನಕ್ಕೆ ಒಪ್ಪಿಸಲಾಗಿದೆ.
ಘಟನೆ ಏನು?
ಮಹಿಳೆಯ ಮನೆಗೆ ಆಕೆಯ ಪುರುಷ ಸ್ನೇಹಿತ ಬಂದಿದ್ದ ವೇಳೆ ಆರೋಪಿಗಳ ಗುಂಪು ಅಕ್ರಮವಾಗಿ ಮನೆ ಪ್ರವೇಶ ಮಾಡಿದೆ. ಇಬ್ಬರನ್ನೂ ಒಟ್ಟಿಗೆ ನಿಲ್ಲಿಸಿ ಫೋಟೋ ತೆಗೆದಿರುವ ಆರೋಪಿಗಳು, ಆ ಫೋಟೋವನ್ನು ಬಹಿರಂಗಪಡಿಸುವುದಾಗಿ ಬೆದರಿಸಿ ಹಣಕ್ಕೆ ಬೇಡಿಕೆ ಇಟ್ಟಿದ್ದಾರೆ.
ಮೊದಲಿಗೆ ಮಹಿಳೆಯಿಂದ 2 ಪವನ್ ತೂಕದ ಚಿನ್ನದ ಸರ, ಉಂಗುರ ಹಾಗೂ 15,000 ರೂ. ನಗದನ್ನು ಕಸಿದುಕೊಂಡಿದ್ದಾರೆ. ಬಳಿಕ ಆಕೆಯ ಪುರುಷ ಸ್ನೇಹಿತನಿಂದ 40,000 ರೂ. ಹಣವನ್ನು ಸುಲಿಗೆ ಮಾಡಿದ್ದಾರೆ ಎಂದು ದೂರಿನಲ್ಲಿ ತಿಳಿಸಲಾಗಿದೆ.
ಘಟನೆಯ ನಂತರವೂ ಹೆಚ್ಚಿನ ಹಣ ಮತ್ತು ಚಿನ್ನಾಭರಣ ನೀಡುವಂತೆ ನಿರಂತರ ಬೆದರಿಕೆ ಹಾಕುತ್ತಿದ್ದ ಹಿನ್ನೆಲೆಯಲ್ಲಿ ಮಹಿಳೆ ವಿದ್ಯಾನಗರ ಪೊಲೀಸ್ ಠಾಣೆಗೆ ದೂರು ನೀಡಿದ್ದಾರೆ.
ದೂರು ದಾಖಲಿಸಿಕೊಂಡ ಪೊಲೀಸರು, ಇನ್ಸ್‌ಪೆಕ್ಟರ್ ಪಿ. ಪ್ರಮೋದ್ ಅವರ ನೇತೃತ್ವದಲ್ಲಿ ಕಾರ್ಯಾಚರಣೆ ನಡೆಸಿ ಐವರನ್ನೂ ಬಂಧಿಸಿದ್ದಾರೆ
arrest
6 ವರ್ಷಗಳಿಂದ ವಿದೇಶದಲ್ಲಿದ್ದ ವಾರೆಂಟ್ ಆರೋಪಿ ವಿಮಾನ ನಿಲ್ದಾಣದಲ್ಲಿ ಅರೆಸ್ಟ್: ಬಂಟ್ವಾಳ ಪೊಲೀಸರ ಕಾರ್ಯಾಚರಣೆ
ಮಂಗಳೂರು: ನ್ಯಾಯಾಲಯದ ವಿಚಾರಣೆಗೆ ಹಾಜರಾಗದೆ ಕಳೆದ 6 ವರ್ಷಗಳಿಂದ ವಿದೇಶದಲ್ಲಿ ತಲೆಮರೆಸಿಕೊಂಡಿದ್ದ ವಾರೆಂಟ್ ಆರೋಪಿಯನ್ನು ಬಂಟ್ವಾಳ ನಗರ ಪೊಲೀಸರು ಮಂಗಳೂರು ಅಂತಾರಾಷ್ಟ್ರೀಯ ವಿಮಾನ ನಿಲ್ದಾಣದಲ್ಲಿ ವಶಕ್ಕೆ ಪಡೆದಿದ್ದಾರೆ.
ಮಂಗಳೂರು ಬಜಾಲ್‌ನಂತೂರು ನಿವಾಸಿ ಮಹಮ್ಮದ್ ನೌಫಲ್ @ ಸಫಾರಿ ನೌಫಲ್ (34) ದಸ್ತಗಿರಿಯಾದ ಆರೋಪಿ.
ಪ್ರಕರಣದ ವಿವರ: ಬಂಟ್ವಾಳ ನಗರ ಪೊಲೀಸ್ ಠಾಣೆಯಲ್ಲಿ ದಾಖಲಾಗಿದ್ದ ಪ್ರಕರಣಕ್ಕೆ (ಅ.ಕ್ರ: 24/2020, ಐಪಿಸಿ ಕಲಂ: 143, 147, 148, 504, 323, 324, 506, 427 r/w 149 ಮತ್ತು ಕಾವಲು ಕಾಯ್ದೆ) ಸಂಬಂಧಿಸಿದಂತೆ ಈಾತನು ಮಾನ್ಯ ನ್ಯಾಯಾಲಯಕ್ಕೆ ವಿಚಾರಣೆಗೆ ಹಾಜರಾಗದೆ ವಿದೇಶಕ್ಕೆ ಪರಾರಿಯಾಗಿದ್ದ. ಈತನ ವಿರುದ್ಧ ನ್ಯಾಯಾಲಯದಿಂದ ವಾರೆಂಟ್ ಜಾರಿಯಾಗಿತ್ತು.
ಸೆಪ್ಟೆಂಬರ್ 15, 2026ರಂದು ವಿದೇಶದಿಂದ ಮನೆಗೆ ಹಿಂತಿರುಗುತ್ತಿದ್ದ ವೇಳೆ, ಮಂಗಳೂರು ಅಂತಾರಾಷ್ಟ್ರೀಯ ವಿಮಾನ ನಿಲ್ದಾಣದ ಇಮಿಗ್ರೇಷನ್ ವಿಭಾಗದ ಸಹಾಯದಿಂದ ಬಂಟ್ವಾಳ ನಗರ ಪೊಲೀಸರು ಆರೋಪಿಯನ್ನು ಯಶಸ್ವಿಯಾಗಿ ಬಂಧಿಸಿದ್ದಾರೆ.
ಬಂಧಿತ ಆರೋಪಿಯನ್ನು ಮಾನ್ಯ ನ್ಯಾಯಾಲಯಕ್ಕೆ ಹಾಜರುಪಡಿಸಲಾಗಿದ್ದು, ನ್ಯಾಯಾಲಯವು ಸೆಪ್ಟೆಂಬರ್ 29, 2026ರವರೆಗೆ ನ್ಯಾಯಾಂಗ ಬಂಧನ ವಿಧಿಸಿ ಆದೇಶಿಸಿದೆ.
-
accident2 months agoಬಿ.ಸಿ. ರೋಡ್ ಸರ್ಕಲ್ನಲ್ಲಿ ಭೀಕರ ಅಪಘಾತ: ಟಿಪ್ಪರ್-ಆಕ್ಟಿವಾ ನಡುವೆ ಡಿಕ್ಕಿ, ಸವಾರರಿಬ್ಬರೂ ದುರ್ಮರಣ
-
Bantawala2 months agoಬಂಟ್ವಾಳದಲ್ಲಿ ಭೀಕರ ಹತ್ಯಾಕಾಂಡ: ಬಸ್ನಲ್ಲಿ ಕುಳಿತಿದ್ದ ಯುವತಿಯನ್ನು ಸಾರ್ವಜನಿಕರೆದುರೇ ಕೊಚ್ಚಿ ಕೊಂದ ತಲೆಹರಟೆ ಪ್ರೇಮಿ!
-
crime8 months agoಅತ್ಯಾಚಾರ ಯತ್ನಕ್ಕೆ ತಡೆದ ಸೊಸೆಯ ಮುಖಕ್ಕೆ ಕಚ್ಚಿ ಕೊಲೆಗೆ ಯತ್ನಿಸಿದ ಮಾವ..ತಂದೆಯ ರಾಕ್ಷಸೀ ಕೃತ್ಯಕ್ಕೆ ಬೆಂಬಲಿಸಿದ ಗಂಡ..ಸುಳ್ಯ ಠಾಣಾ ವ್ಯಾಪ್ತಿಯಲ್ಲಿ ಅದೃಷ್ಟವಶಾತ್ ಬಚಾವಾದ ಸೊಸೆ..
-
crime6 months agoಧಾರ್ಮಿಕ ನಂಬಿಕೆಗೆ ಅವಮಾನ: ಕೊಡಗಿನ ಎಮ್ಮೆಮಾಡಿನಲ್ಲಿ ದೈವದ ವೇಷದಂತೆ ಧರಿಸಿ ಮದುಮಗನ ಅತಿರೇಕದ ವರ್ತನೆ!
-
Bantawala6 months agoವಿಟ್ಲದಲ್ಲಿ ನಡೆಯಿತೊಂದು ದೈವ ಕಾರಣಿಕ; ಪೊಲೀಸರ ಕಣ್ಣಿಗೆ ಮಣ್ಣೆರಚಿದರೂ ದೈವದ ದೃಷ್ಟಿಗೆ ತತ್ತರಿಸಿದ ದನಕಳ್ಳ..
-
Bantawala9 months agoನಾಗಬನ, ರಕ್ತೇಶ್ವರಿ ತಾಣ, ದೈವದೇವರ ಸಾನಿಧ್ಯ ದ್ವಂಸ ಗೊಳಿಸಿದ ಧರ್ಮದ್ರೋಹಿ ಕೃತ್ಯದ ವಿರುದ್ಧ ಭಕ್ತರ ಆಕ್ರೋಶ ; ನಾಶವಾದ ಸಾನಿಧ್ಯದಲ್ಲಿಯೇ ಸ್ವಾಮೀಜಿಯವರ ಮಾರ್ಗದರ್ಶನದಲ್ಲಿ ಕುಟುಂಬಸ್ತರು, ಸಾರ್ವಜನಿಕರ ಸಾಮೂಹಿಕ ಪ್ರಾರ್ಥನೆ
-
accident2 months agoBreaking: ಬಂಟ್ವಾಳದಲ್ಲಿ ಶಾಲಾ ಬಸ್ ಮೇಲೆ ಉರುಳಿದ ಬೃಹತ್ ಮರ; ಕಲ್ಲಡ್ಕ ಶ್ರೀರಾಮ ಶಾಲೆಯ ಓರ್ವ ವಿದ್ಯಾರ್ಥಿ ಸಾವು, ಕೆಲವರು ಗಂಭೀರ, ಹಲವರಿಗೆ ಗಾಯ!
-
accident4 months agoವಿಟ್ಲ ಆಕಾಶದಲ್ಲಿ ಹಾರಾಡಿದ ವಿಮಾನ: ತಾಂತ್ರಿಕ ದೋಷವಲ್ಲ, ಹವಾಮಾನ ವೈಪರೀತ್ಯದ ಕಾರಣ ! ಸಾರ್ವಜನಿಕರು ಆತಂಕ ಪಡುವ ಅಗತ್ಯವಿಲ್ಲ
