Belthangady
ಕೊಕ್ಕಡ: ಕಾಲೇಜಿಗೆ ಹೊರಡಲು ಸಿದ್ಧತೆ ನಡೆಸುತ್ತಿದ್ದ ದ್ವಿತೀಯ ಪಿಯುಸಿ ವಿದ್ಯಾರ್ಥಿನಿ ಆತ್ಮಹತ್ಯೆ
- Share
- Tweet /home/u338848369/domains/deevatigenews.com/public_html/wp-content/plugins/mvp-social-buttons/mvp-social-buttons.php on line 72
https://deevatigenews.com/wp-content/uploads/2026/06/shwetha-death-1000x600.jpg&description=ಕೊಕ್ಕಡ: ಕಾಲೇಜಿಗೆ ಹೊರಡಲು ಸಿದ್ಧತೆ ನಡೆಸುತ್ತಿದ್ದ ದ್ವಿತೀಯ ಪಿಯುಸಿ ವಿದ್ಯಾರ್ಥಿನಿ ಆತ್ಮಹತ್ಯೆ', 'pinterestShare', 'width=750,height=350'); return false;" title="Pin This Post">
ಬೆಳ್ತಂಗಡಿ: ತಾಲೂಕಿನ ಕೊಕ್ಕಡ ಗ್ರಾಮದ ಹಳ್ಳಿಂಗೇರಿಯಲ್ಲಿ ದ್ವಿತೀಯ ಪಿಯುಸಿ ವ್ಯಾಸಂಗ ಮಾಡುತ್ತಿದ್ದ ವಿದ್ಯಾರ್ಥಿನಿಯೊಬ್ಬಳು ಮನೆಯ ಕೊಠಡಿಯಲ್ಲಿ ನೇಣು ಬಿಗಿದು ಆತ್ಮಹತ್ಯೆ ಮಾಡಿಕೊಂಡಿರುವ ಧೃತಿಗೆಡಿಸುವ ಘಟನೆ ಸಂಭವಿಸಿದೆ.
ಮೃತ ವಿದ್ಯಾರ್ಥಿನಿಯನ್ನು ಧಾರವಾಡ ಜಿಲ್ಲೆಯ ಹಿರೇಗುಂಜಲ್-ಚಿಕ್ಕಗುಂಜಲ್ ಮೂಲದ ರಮೇಶ್ ಅವರ ಪುತ್ರಿ ಶ್ವೇತಾ (18) ಎಂದು ಗುರುತಿಸಲಾಗಿದೆ. ಈಕೆ ಬೆಳ್ತಂಗಡಿಯ ಹಳೆಕೋಟೆ ಪರಿಸರದ ಪದವಿ ಪೂರ್ವ ಕಾಲೇಜೊಂದರಲ್ಲಿ ದ್ವಿತೀಯ ಪಿಯುಸಿ ವ್ಯಾಸಂಗ ಮಾಡುತ್ತಿದ್ದಳು ಎಂದು ತಿಳಿದುಬಂದಿದೆ.
ಕೂಲಿ ಕೆಲಸ ಮಾಡಿ ಮಗಳಿಗೆ ಓದಿಸುತ್ತಿದ್ದ ಪೋಷಕರು
ಮೂಲತಃ ಧಾರವಾಡದವರಾದ ಶ್ವೇತಾ ಅವರ ತಂದೆ-ತಾಯಿ ಕಳೆದ ಐದು ವರ್ಷಗಳಿಂದ ಕೊಕ್ಕಡ ಸಮೀಪದ ಹಳ್ಳಿಂಗೇರಿಯಲ್ಲಿ ವಾಸವಾಗಿದ್ದರು. ತಂದೆ ಮತ್ತು ತಾಯಿ ಇಬ್ಬರೂ ಕೂಲಿ ಕೆಲಸ ಮಾಡಿಕೊಂಡು ಕಷ್ಟದ ಜೀವನದ ನಡುವೆಯೂ ಮಗಳಿಗೆ ಉತ್ತಮ ಶಿಕ್ಷಣ ಕೊಡಿಸುತ್ತಿದ್ದರು ಎನ್ನಲಾಗಿದೆ.

ಬೆಳ್ಳಂಬೆಳಗ್ಗೆ ನಡೆದ ದುರಂತ
ಎಂದಿನಂತೆ ಬೆಳಗ್ಗೆ ಎದ್ದಿದ್ದ ಶ್ವೇತಾ ಕಾಲೇಜಿಗೆ ತೆರಳಲು ಸಿದ್ಧತೆ ನಡೆಸುತ್ತಿದ್ದಳು. ಈ ವೇಳೆ ತಂದೆ ಕೆಲಸದ ನಿಮಿತ್ತ ಮನೆಯಿಂದ ಹೊರಗೆ ತೆರಳಿದ್ದರು, ತಾಯಿ ಮಾತ್ರ ಮನೆಯಲ್ಲಿದ್ದರು. ತಾಯಿ ಮನೆಯ ಬೇರೆ ಕೆಲಸದಲ್ಲಿ ನಿರತರಾಗಿದ್ದ ಸಂದರ್ಭವನ್ನು ಗಮನಿಸಿ ಕೊಠಡಿಯೊಳಗೆ ಹೋದ ಶ್ವೇತಾ ನೇಣು ಬಿಗಿದುಕೊಂಡಿದ್ದಾಳೆ. ತದನಂತರ ತಾಯಿ ಗಮನಿಸಿದಾಗ ಈ ಘಟನೆ ಬೆಳಕಿಗೆ ಬಂದಿದ್ದು, ಪೋಷಕರ ಆಕ್ರಂದನ ಮುಗಿಲು ಮುಟ್ಟಿದೆ.
ಆತ್ಮಹತ್ಯೆಗೆ ಕಾರಣ ನಿಗೂಢ
ಕಾಲೇಜಿಗೆ ಹೊರಡಲು ಸಿದ್ಧತೆ ನಡೆಸುತ್ತಿದ್ದ ವಿದ್ಯಾರ್ಥಿನಿ ದಿಢೀರನೆ ಇಂತಹ ಕಠಿಣ ನಿರ್ಧಾರ ಕೈಗೊಳ್ಳಲು ನಿಖರ ಕಾರಣ ಏನೆಂಬುದು ಇನ್ನು ತಿಳಿದುಬಂದಿಲ್ಲ. ಘಟನಾ ಸ್ಥಳಕ್ಕೆ ಧರ್ಮಸ್ಥಳ ಪೊಲೀಸರು ಭೇಟಿ ನೀಡಿ ಪರಿಶೀಲನೆ ನಡೆಸಿದ್ದಾರೆ. ಈ ಕುರಿತು ಧರ್ಮಸ್ಥಳ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದ್ದು, ಪೊಲೀಸರು ಮುಂದಿನ ತನಿಖೆ ಕೈಗೊಂಡಿದ್ದಾರೆ.
ಆತ್ಮಹತ್ಯೆ ಯಾವುದಕ್ಕೂ ಪರಿಹಾರವಲ್ಲ. ಮಾನಸಿಕ ಒತ್ತಡ ಅಥವಾ ಯಾವುದೇ ರೀತಿಯ ಸಮಸ್ಯೆಗಳಿದ್ದಲ್ಲಿ ಸಹಾಯ ಪಡೆಯಲು ಸರ್ಕಾರಿ ಹೆಲ್ಪ್ಲೈನ್ ಸಂಖ್ಯೆ 104 ಅಥವಾ ಇತರೆ ಆಪ್ತಸಮಾಲೋಚನಾ ಕೇಂದ್ರಗಳನ್ನು ಸಂಪರ್ಕಿಸಬಹುದು.



accident
ಬೆಳ್ತಂಗಡಿ: ಚಾರ್ಮಾಡಿಯಲ್ಲಿ ಎಸ್ಐಟಿ ಅಧಿಕಾರಿಗಳ ಕಾರು ಪಲ್ಟಿ – ಕೂದಲೆಳೆ ಅಂತರದಲ್ಲಿ ಪಾರಾದ ಎಸ್ಪಿ ಸೈಮನ್ ಮತ್ತು ತಂಡ
ಬೆಳ್ತಂಗಡಿ: ತೀವ್ರ ಕುತೂಹಲ ಕೆರಳಿಸಿರುವ ಬುರುಡೆ ಪ್ರಕರಣದ ತನಿಖೆ ನಡೆಸುತ್ತಿರುವ ಎಸ್ಐಟಿ (SIT) ತಂಡದ ಅಧಿಕಾರಿಗಳು ಪ್ರಯಾಣಿಸುತ್ತಿದ್ದ ಇನೋವಾ ಕಾರು ಚಾರ್ಮಾಡಿಯಲ್ಲಿ ನಿಯಂತ್ರಣ ತಪ್ಪಿ ಪಲ್ಟಿಯಾದ ಘಟನೆ ಜೂನ್ 16ರಂದು ಮಧ್ಯಾಹ್ನ ಸಂಭವಿಸಿದೆ.

ಘಟನೆಯ ವಿವರ: ಬುರುಡೆ ಪ್ರಕರಣಕ್ಕೆ ಸಂಬಂಧಿಸಿದಂತೆ ಚಿನ್ನಯ್ಯ ಅವರು ಹೈಕೋರ್ಟ್ನಲ್ಲಿ ರಿಟ್ ಅರ್ಜಿ ಸಲ್ಲಿಸಿರುವ ಬಗ್ಗೆ ಚರ್ಚಿಸಲು ಬೆಳ್ತಂಗಡಿ ಎಸ್ಐಟಿ ಕಚೇರಿಯಿಂದ ಅಧಿಕಾರಿಗಳ ತಂಡ ಚಿಕ್ಕಮಗಳೂರಿಗೆ ತೆರಳುತ್ತಿತ್ತು. ತಂಡದಲ್ಲಿ ಎಸ್ಐಟಿ ಎಸ್ಪಿ ಸಿ.ಎ. ಸೈಮನ್, ಇನ್ಸ್ಪೆಕ್ಟರ್ ಕುಸುಮಾಧರ್ ಹಾಗೂ ಸಿಬ್ಬಂದಿ ಮಂಜುನಾಥ್ ಪಿ.ಸಿ. ಇದ್ದರು. ಇವರು ಚಿಕ್ಕಮಗಳೂರು ಜಿಲ್ಲಾ ಎಸ್ಪಿ ಹಾಗೂ ಎಸ್ಐಟಿ ತನಿಖಾಧಿಕಾರಿಯಾಗಿರುವ ಜಿತೇಂದ್ರ ಕುಮಾರ್ ದಯಾಮ ಅವರನ್ನು ಭೇಟಿ ಮಾಡಲು ತೆರಳುತ್ತಿದ್ದಾಗ ಈ ಅಪಘಾತ ಸಂಭವಿಸಿದೆ.
ತಪ್ಪಿದ ಭಾರಿ ಅನಾಹುತ: ಅಧಿಕಾರಿಗಳು ಪ್ರಯಾಣಿಸುತ್ತಿದ್ದ ಪೊಲೀಸ್ ಇಲಾಖೆಯ ಇನೋವಾ ಕಾರು (KA-01-G-6463) ಚಾರ್ಮಾಡಿ ಘಾಟ್ ಸಮೀಪ ಚಾಲಕನ ನಿಯಂತ್ರಣ ತಪ್ಪಿ ರಸ್ತೆಯಲ್ಲೇ ಪಲ್ಟಿಯಾಗಿದೆ. ಕಾರಿನಲ್ಲಿ ಚಾಲಕ ಸೇರಿ ಒಟ್ಟು ನಾಲ್ವರು ಪ್ರಯಾಣಿಸುತ್ತಿದ್ದರು. ಕಾರು ಸಂಪೂರ್ಣವಾಗಿ ಉಲ್ಟಾ ಆಗಿದ್ದರೂ, ಅದೃಷ್ಟವಶಾತ್ ಯಾರಿಗೂ ಯಾವುದೇ ಪ್ರಾಣಾಪಾಯ ಅಥವಾ ಗಂಭೀರ ಗಾಯಗಳಾಗಿಲ್ಲ.



Belthangady
ಧರ್ಮಸ್ಥಳ ಬುರುಡೆ ಪ್ರಕರಣಕ್ಕೆ ಮತ್ತೊಂದು ತಿರುವು: ಚಿನ್ನಯ್ಯ ವಿರುದ್ಧ ಎಸ್ಐಟಿಗೆ ಗಿರೀಶ್ ಮಟ್ಟಣ್ಣನವರ್ ದೂರು
ಧರ್ಮಸ್ಥಳದ ಬುರುಡೆ ಪ್ರಕರಣ ದಿನದಿಂದ ದಿನಕ್ಕೆ ಹೊಸ ತಿರುವುಗಳನ್ನು ಪಡೆದುಕೊಳ್ಳುತ್ತಿದ್ದು, ಪ್ರಕರಣದಲ್ಲಿ ಪರಸ್ಪರ ಆರೋಪ-ಪ್ರತ್ಯಾರೋಪಗಳು ತೀವ್ರಗೊಂಡಿವೆ. ಇತ್ತೀಚೆಗೆ ಮಾಸ್ಟರ್ಮ್ಯಾನ್ ಚಿನ್ನಯ್ಯ ತನ್ನದೇ ತಂಡದ ವಿರುದ್ಧ 200 ಕೋಟಿ ರೂ. ಫಂಡಿಂಗ್, ಪಿತೂರಿ ಹಾಗೂ ನಟ Prakash Raj ಹೆಸರನ್ನು ಉಲ್ಲೇಖಿಸಿ ಹೈಕೋರ್ಟ್ಗೆ ರಿಟ್ ಅರ್ಜಿ ಸಲ್ಲಿಸಿದ್ದ ಬೆನ್ನಲ್ಲೇ, ಇದೀಗ ಗಿರೀಶ್ ಮಟ್ಟಣ್ಣನವರ್ ಪ್ರತಿದಾಳಿ ನಡೆಸಿದ್ದಾರೆ.
ಬೆಳ್ತಂಗಡಿಯ ಎಸ್ಐಟಿ ಕಚೇರಿಗೆ ಭೇಟಿ ನೀಡಿದ ಗಿರೀಶ್ ಮಟ್ಟಣ್ಣನವರ್, ಹೋರಾಟಗಾರ ಟಿ. ಜಯಂತ್ ಹಾಗೂ ಯೂಟ್ಯೂಬರ್ ಅಭಿಷೇಕ್ ಅವರೊಂದಿಗೆ ಚಿನ್ನಯ್ಯ ವಿರುದ್ಧ ದೂರು ಸಲ್ಲಿಸಿದರು. ಬಳಿಕ ಮಾಧ್ಯಮಗಳೊಂದಿಗೆ ಮಾತನಾಡಿದ ಅವರು, ಚಿನ್ನಯ್ಯನ ಬ್ರೈನ್ ಮ್ಯಾಪಿಂಗ್ ಸೇರಿದಂತೆ ಚಿನ್ನಯ್ಯ ತನ್ನ ರಿಟ್ ಅರ್ಜಿಯಲ್ಲಿ ಮಾಡಿರುವ ಎಲ್ಲ ಆರೋಪಗಳ ಕುರಿತು ಸಮಗ್ರ ತನಿಖೆ ನಡೆಸಬೇಕು ಎಂದು ಒತ್ತಾಯಿಸಿದರು.
“ಚಿನ್ನಯ್ಯ ನಮ್ಮ ವಿರುದ್ಧ ಮಾಡಿರುವ ಆರೋಪಗಳ ಆಧಾರದ ಮೇಲೆ ನಮ್ಮೆಲ್ಲರನ್ನೂ ತನಿಖೆಗೆ ಒಳಪಡಿಸಬೇಕು. ನನ್ನ ಬ್ರೈನ್ ಮ್ಯಾಪಿಂಗ್ ಪರೀಕ್ಷೆಯನ್ನು ಬೇಕಿದ್ದರೆ ಲೈವ್ ಆಗಿಯೇ ನಡೆಸಲಿ. ಆತ ಹೇಳಿರುವ 200 ಕೋಟಿ ರೂ. ಹಣದ ಆರೋಪ ಸೇರಿದಂತೆ ರಿಟ್ ಅರ್ಜಿಯಲ್ಲಿರುವ ಪ್ರತಿಯೊಂದು ಅಂಶವನ್ನು ಎಸ್ಐಟಿ ತನಿಖೆ ಮಾಡಬೇಕು” ಎಂದು ಗಿರೀಶ್ ಮಟ್ಟಣ್ಣನವರ್ ಹೇಳಿದರು.
ಅಲ್ಲದೆ, ಚಿನ್ನಯ್ಯನಿಗೆ ನೀಡಲಾಗಿರುವ ಜಾಮೀನನ್ನು ರದ್ದುಗೊಳಿಸುವಂತೆ ನ್ಯಾಯಾಲಯಕ್ಕೆ ಎಸ್ಐಟಿ ಅರ್ಜಿ ಸಲ್ಲಿಸಬೇಕು ಹಾಗೂ ಆತನಿಗೆ ಸೂಕ್ತ ಪೊಲೀಸ್ ಭದ್ರತೆ ಒದಗಿಸಬೇಕು ಎಂಬುದನ್ನೂ ತಮ್ಮ ದೂರಿನಲ್ಲಿ ಉಲ್ಲೇಖಿಸಿರುವುದಾಗಿ ತಿಳಿಸಿದರು.
ಚಂದ್ರಶೇಖರ್ ಸ್ವಾಮೀಜಿ ಅವರನ್ನು ಭೇಟಿಯಾಗಿದ್ದ ವಿಚಾರವನ್ನು ಒಪ್ಪಿಕೊಂಡ ಗಿರೀಶ್ ಮಟ್ಟಣ್ಣನವರ್, “ಪಾಯಿಂಟ್ ತೋರಿಸುವ ಸಂದರ್ಭದಲ್ಲಿ ಚಿನ್ನಯ್ಯನಿಗೆ ವಿಚಿತ್ರ ಅನುಭವವಾಗುತ್ತಿದೆ ಎಂದು ಹೇಳಿದ್ದ. ಆ ಕಾರಣದಿಂದಲೇ ಮಾಟ-ಮಂತ್ರ ಸಂಬಂಧ ಸಲಹೆ ಪಡೆಯಲು ಸ್ವಾಮೀಜಿ ಅವರನ್ನು ಭೇಟಿ ಮಾಡಿದ್ದೆವು. ಆದರೆ ಅವರು ಯಾವುದೇ ಪೊಲೀಸರಿಗೆ ಶಿಫಾರಸು ಮಾಡಿಲ್ಲ” ಎಂದು ಸ್ಪಷ್ಟಪಡಿಸಿದರು.
ಚಿನ್ನಯ್ಯ ತನ್ನ ರಿಟ್ ಅರ್ಜಿಯಲ್ಲಿ ನಟ ಪ್ರಕಾಶ್ ರಾಜ್ ಹೆಸರನ್ನು ಉಲ್ಲೇಖಿಸಿರುವ ಕುರಿತು ಪ್ರತಿಕ್ರಿಯಿಸಿದ ಅವರು, “ಪ್ರಕಾಶ್ ರಾಜ್ ಕರೆ ಮಾಡಿದ್ದಾರೆಯೇ ಎಂಬ ಬಗ್ಗೆ ನಾನು ಪ್ರತಿಕ್ರಿಯಿಸುವುದಿಲ್ಲ. ಅದಕ್ಕೆ ಅವರೇ ಉತ್ತರ ನೀಡುತ್ತಾರೆ. ಈ ಹೋರಾಟಕ್ಕೆ ನೈತಿಕವಾಗಿ ಸಾಕಷ್ಟು ಜನ ಬೆಂಬಲ ನೀಡಿದ್ದಾರೆ” ಎಂದು ಹೇಳಿದರು.
ಇದೇ ವೇಳೆ, ಚಿನ್ನಯ್ಯನಿಗೆ ಹಿಂಸೆ ನೀಡಿ ಕೈ-ಕಾಲು ಒತ್ತಿಸಿಕೊಳ್ಳುತ್ತಿದ್ದೆವು ಎಂಬ ಆರೋಪವನ್ನೂ ಗಿರೀಶ್ ಮಟ್ಟಣ್ಣನವರ್ ತಳ್ಳಿಹಾಕಿದರು. “ಚಿನ್ನಯ್ಯ ನಮ್ಮೊಂದಿಗೆ ಆತ್ಮೀಯವಾಗಿದ್ದ. ನಾವು ಬೇಡ ಎಂದರೂ ಆತನೇ ಬಂದು ಕಾಲು ಒತ್ತುತ್ತಿದ್ದ. ನನಗೆ ಕಾಲಿನ ನೋವು ಇದ್ದ ಕಾರಣ ಆತ ಸ್ವಯಂಪ್ರೇರಿತವಾಗಿ ಸಹಾಯ ಮಾಡುತ್ತಿದ್ದ. ಇದರಲ್ಲಿ ಯಾವುದೇ ಬಲವಂತ ಅಥವಾ ಹಿಂಸೆ ಇರಲಿಲ್ಲ” ಎಂದು ಸಮರ್ಥಿಸಿಕೊಂಡರು.
ಪ್ರಕರಣ ಮತ್ತಷ್ಟು ಸಂಕೀರ್ಣ
ಧರ್ಮಸ್ಥಳ ಬುರುಡೆ ಪ್ರಕರಣದಲ್ಲಿ ಚಿನ್ನಯ್ಯ ಮತ್ತು ಆತನ ವಿರುದ್ಧ ಆರೋಪ ಕೇಳಿಬರುತ್ತಿರುವವರ ನಡುವಿನ ಪರಸ್ಪರ ಆರೋಪಗಳು ಪ್ರಕರಣವನ್ನು ಮತ್ತಷ್ಟು ಸಂಕೀರ್ಣಗೊಳಿಸಿವೆ. ಇದೀಗ ಚಿನ್ನಯ್ಯ ಸಲ್ಲಿಸಿರುವ ರಿಟ್ ಅರ್ಜಿಯಲ್ಲಿನ ಆರೋಪಗಳು ಹಾಗೂ ಗಿರೀಶ್ ಮಟ್ಟಣ್ಣನವರ್ ನೀಡಿರುವ ದೂರಿನ ಆಧಾರದ ಮೇಲೆ ಎಸ್ಐಟಿ ತನಿಖೆ ಯಾವ ದಿಕ್ಕಿನಲ್ಲಿ ಸಾಗಲಿದೆ ಎಂಬುದು ಕುತೂಹಲಕ್ಕೆ ಕಾರಣವಾಗಿದೆ. ಪ್ರಕರಣದ ಮುಂದಿನ ಬೆಳವಣಿಗೆಗಳತ್ತ ಸಾರ್ವಜನಿಕರ ಗಮನ ನೆಟ್ಟಿದೆ



Belthangady
ಬೆಳ್ತಂಗಡಿ: 50 ಲಕ್ಷದ ರಸ್ತೆ 9 ವರ್ಷಕ್ಕೆ ಗುಂಡಿಮಯ – ಕೈಕಂಬ–ಫಾರೆಸ್ಟ್ ಬಂಗಲೆ ರಸ್ತೆ ದುಸ್ಥಿತಿ
ಬೆಳ್ತಂಗಡಿ: 2017ರಲ್ಲಿ 50 ಲಕ್ಷ ರೂ. ವೆಚ್ಚದಲ್ಲಿ ಡಾಮರೀಕರಣಗೊಂಡ ನಾವೂರು ಗ್ರಾಮದ ಕೈಕಂಬ ಜಂಕ್ಷನ್ನಿಂದ ಫಾರೆಸ್ಟ್ ಬಂಗಲೆಗೆ ಸಂಪರ್ಕಿಸುವ 1.40 ಕಿ.ಮೀ ರಸ್ತೆ ಇದೀಗ ಗುಂಡಿಯಿಂದ ಗುಂಡಿಯಾಗಿ ಸಂಪೂರ್ಣ ಹದಗೆಟ್ಟಿದೆ. “ಇಲ್ಲಿ ರಸ್ತೆಯಲ್ಲಿ ಗುಂಡಿ ಇದೆಯೋ, ಅಥವಾ ಗುಂಡಿಯಲ್ಲಿ ರಸ್ತೆ ಇದೆಯೋ ಅರ್ಥವಾಗದ ಸ್ಥಿತಿ” ಎಂದು ಸ್ಥಳೀಯರು ಆಕ್ರೋಶ ವ್ಯಕ್ತಪಡಿಸಿದ್ದಾರೆ.

ಪಂಚಾಯತ್ ರಾಜ್ ಇಂಜಿನಿಯರಿಂಗ್ ಉಪ ವಿಭಾಗ, ಬೆಳ್ತಂಗಡಿ ಮೂಲಕ 2017ರಲ್ಲಿ ನಿರ್ಮಾಣವಾದ ಈ 1 ಕಿ.ಮೀ ರಸ್ತೆ ಇದೀಗ ಇಂಚಿಂಚಿಗೂ ಗುಂಡಿಯಾಗಿದೆ. ಬೇಸಿಗೆಯಲ್ಲಿ ಗುಂಡಿ ಮುಚ್ಚಲು ಮಣ್ಣು ಹಾಕಲಾಗಿತ್ತು. ಆದರೆ ಮಳೆ ಆರಂಭವಾಗುತ್ತಿದ್ದಂತೆ ರಸ್ತೆ ಪೂರ್ತಿ ಕೆಸರುಮಯವಾಗಿ ಕಂಬಳ ಗದ್ದೆಯನ್ನು ನಾಚಿಸುವಂತಾಗಿದೆ.
ಜನರ ಸಂಕಷ್ಟ:
ಕುದುರೆಮುಖ ರಾಷ್ಟ್ರೀಯ ಉದ್ಯಾನವನ ವ್ಯಾಪ್ತಿ ಸೇರಿದಂತೆ ಫಾರೆಸ್ಟ್ ಬಂಗಲೆ, ಕಣಾಲು, ಕಾರಿಂಜ, ಕುಂಡಡ್ಕ, ಸುಳ್ಳೊಡಿ ಮುಂತಾದ ಪ್ರದೇಶಗಳನ್ನು ಸಂಪರ್ಕಿಸುವ ಏಕೈಕ ಪ್ರಮುಖ ರಸ್ತೆ ಇದಾಗಿದೆ. ದಿನನಿತ್ಯ ನೂರಾರು ವಿದ್ಯಾರ್ಥಿಗಳು ಶಾಲಾ-ಕಾಲೇಜಿಗೆ, ನೂರಾರು ಜನರು ಕೆಲಸಕ್ಕೆ ಇದೇ ರಸ್ತೆಯಲ್ಲಿ ಸಂಚರಿಸಬೇಕಾಗಿದೆ. ಅಂಗನವಾಡಿ, ಕಿ.ಪ್ರಾ ಶಾಲೆ, ಹಾಲು ಉತ್ಪಾದಕರ ಸಂಘವೂ ಇದೆ.

ಗುಂಡಿ ತಪ್ಪಿಸುವ ಭರದಲ್ಲಿ ದ್ವಿಚಕ್ರ ವಾಹನ, ಆಟೋ, ಖಾಸಗಿ ವಾಹನಗಳು ಅಡ್ಡಾದಿಡ್ಡಿ ಚಲಿಸುತ್ತಿದ್ದು, ಅಪಘಾತಗಳೂ ಸಂಭವಿಸಿವೆ. ಆದರೂ ರಸ್ತೆ ದುರಸ್ತಿ ಆಗದಿರುವುದು ದುರಂತ ಎಂದು ಸ್ಥಳೀಯರು ಬೇಸರಿಸಿದ್ದಾರೆ.
ಒತ್ತಾಯ:
“ಕೈಕಂಬದಿಂದ ಮೂರು ಮಾರ್ಗದವರೆಗಿನ ರಸ್ತೆ ಜನ, ವಾಹನ ಸಂಚರಿಸಲು ಅಯೋಗ್ಯವಾಗಿದೆ. ದಿತ್ಯೋಪಯೋಗಿ ರಸ್ತೆಯನ್ನು ತಕ್ಷಣ ದುರಸ್ತಿ ಮಾಡಬೇಕು. ರಸ್ತೆಯ ಇಕ್ಕೆಲಗಳಲ್ಲಿ ಚರಂಡಿ ವ್ಯವಸ್ಥೆಯೂ ಅಗತ್ಯ” ಎಂದು ಆಟೋ ರಿಕ್ಷಾ ಚಾಲಕ-ಮಾಲೀಕರಾದ ದಿನೇಶ್ ಗೌಡ ಆಗ್ರಹಿಸಿದ್ದಾರೆ.



-
crime3 months agoಧಾರ್ಮಿಕ ನಂಬಿಕೆಗೆ ಅವಮಾನ: ಕೊಡಗಿನ ಎಮ್ಮೆಮಾಡಿನಲ್ಲಿ ದೈವದ ವೇಷದಂತೆ ಧರಿಸಿ ಮದುಮಗನ ಅತಿರೇಕದ ವರ್ತನೆ!
-
crime4 months agoಅತ್ಯಾಚಾರ ಯತ್ನಕ್ಕೆ ತಡೆದ ಸೊಸೆಯ ಮುಖಕ್ಕೆ ಕಚ್ಚಿ ಕೊಲೆಗೆ ಯತ್ನಿಸಿದ ಮಾವ..ತಂದೆಯ ರಾಕ್ಷಸೀ ಕೃತ್ಯಕ್ಕೆ ಬೆಂಬಲಿಸಿದ ಗಂಡ..ಸುಳ್ಯ ಠಾಣಾ ವ್ಯಾಪ್ತಿಯಲ್ಲಿ ಅದೃಷ್ಟವಶಾತ್ ಬಚಾವಾದ ಸೊಸೆ..
-
Bantawala3 months agoವಿಟ್ಲದಲ್ಲಿ ನಡೆಯಿತೊಂದು ದೈವ ಕಾರಣಿಕ; ಪೊಲೀಸರ ಕಣ್ಣಿಗೆ ಮಣ್ಣೆರಚಿದರೂ ದೈವದ ದೃಷ್ಟಿಗೆ ತತ್ತರಿಸಿದ ದನಕಳ್ಳ..
-
Bantawala5 months agoನಾಗಬನ, ರಕ್ತೇಶ್ವರಿ ತಾಣ, ದೈವದೇವರ ಸಾನಿಧ್ಯ ದ್ವಂಸ ಗೊಳಿಸಿದ ಧರ್ಮದ್ರೋಹಿ ಕೃತ್ಯದ ವಿರುದ್ಧ ಭಕ್ತರ ಆಕ್ರೋಶ ; ನಾಶವಾದ ಸಾನಿಧ್ಯದಲ್ಲಿಯೇ ಸ್ವಾಮೀಜಿಯವರ ಮಾರ್ಗದರ್ಶನದಲ್ಲಿ ಕುಟುಂಬಸ್ತರು, ಸಾರ್ವಜನಿಕರ ಸಾಮೂಹಿಕ ಪ್ರಾರ್ಥನೆ
-
accident1 month agoವಿಟ್ಲ ಆಕಾಶದಲ್ಲಿ ಹಾರಾಡಿದ ವಿಮಾನ: ತಾಂತ್ರಿಕ ದೋಷವಲ್ಲ, ಹವಾಮಾನ ವೈಪರೀತ್ಯದ ಕಾರಣ ! ಸಾರ್ವಜನಿಕರು ಆತಂಕ ಪಡುವ ಅಗತ್ಯವಿಲ್ಲ
-
Dakshina Kannada6 months agoಶಾಸಕರ ಉಪಸ್ಥಿತಿಯಲ್ಲಿ ಪೊಲೀಸರ ನಿರಾಕರಣೆ ಮಧ್ಯೆಯೇ ಕೇಪುವಿನಲ್ಲಿ ನಡೆದ ಕೋಳಿಅಂಕ
-
Bantawala6 months agoವಿಟ್ಲದಲ್ಲಿ ಶಾರ್ಟ್ ಸರ್ಕ್ಯೂಟ್..ಶ್ರೀ ಎಲೆಕ್ಟ್ರಾನಿಕ್ಸ್ ,ಅಮಿತ್ ಹೋಟೆಲ್..ಸೇರಿ ಐದಾರು ಕಟ್ಟಡಗಳು ಸಂಪೂರ್ಣ ಬೆಂಕಿಗಾಹುತಿ..
-
Bantawala4 months agoಕುದ್ರಿಯ ತರವಾಡು ಮನೆಯಲ್ಲಿ ಸಂಕ್ರಮಣದಂದು ರಣಾಂಗಣ; ಅಧ್ಯಕ್ಷ, ಟ್ರಸ್ಟಿ ಮೇಲೆ ಮಾರಣಾಂತಿಕ ಹಲ್ಲೆ
