Dakshina Kannada
ದಕ್ಷಿಣ ಕನ್ನಡ ಜಿಲ್ಲಾ ಖಾಝಿ ಬಹುಃ ಶೈಖುನಾ ತ್ವಾಕಾ ಅಹ್ಮದ್ ಮುಸ್ಲಿಯಾರ್ ಇನ್ನಿಲ್ಲ
ಮಂಗಳೂರು: ದಕ್ಷಿಣ ಕನ್ನಡ ಜಿಲ್ಲಾ ಖಾಝಿ, ಸಮಸ್ತ ಕೇರಳ ಜಂ ಇಯ್ಯತ್ತುಲ್ ಉಲಮಾ ಕೇಂದ್ರ ಮುಶಾವರದ ಹಿರಿಯ ಸದಸ್ಯರು ಹಾಗೂ ಕಾಶಿಪಟ್ಣ ದಾರುನ್ನೂರು ವಿದ್ಯಾಸಂಸ್ಥೆಯ ಸ್ಥಾಪಕರೂ ಆದ ಬಹುಮಾನ್ಯ ಶೈಖುನಾ ತ್ವಾಕಾ ಅಹ್ಮದ್ ಮುಸ್ಲಿಯಾರ್ ಅವರು ಮಂಗಳವಾರ ಅನಾರೋಗ್ಯದ ಹಿನ್ನೆಲೆಯಲ್ಲಿ ನಿಧನರಾಗಿದ್ದಾರೆ.
ಕಳೆದ ಕೆಲವು ದಿನಗಳಿಂದ ಅನಾರೋಗ್ಯದಿಂದ ಬಳಲುತ್ತಿದ್ದ ಅವರನ್ನು ಮಂಗಳೂರಿನ ಕೊಡಿಯಾಲ್‌ಬೈಲ್‌ನಲ್ಲಿರುವ ಯೆನೆಪೋಯ ಆಸ್ಪತ್ರೆಗೆ ದಾಖಲಿಸಲಾಗಿತ್ತು. ಆದರೆ, ಚಿಕಿತ್ಸೆ ಫಲಕಾರಿಯಾಗದೆ ಅವರು ಆಸ್ಪತ್ರೆಯಲ್ಲಿ ಕೊನೆಯುಸಿರೆಳೆದಿದ್ದಾರೆ. ಮೃತರು ಕಾಸರಗೋಡು ನಿವಾಸಿಯಾಗಿದ್ದು, ಅಪಾರ ಬಂಧು-ಬಳಗ ಹಾಗೂ ಶಿಷ್ಯಕೋಟಿಯನ್ನು ಅಗಲಿದ್ದಾರೆ.
ಕುಟುಂಬ: ಮೃತರು ಪತ್ನಿ, ಪ್ರಮುಖ ವಿದ್ವಾಂಸರಾದ ಬಹುಮಾನ್ಯ ಹುಸೈನ್ ರಹ್ಮಾನಿ ಉಸ್ತಾದ್ ಸೇರಿದಂತೆ ಮೂವರು ಪುತ್ರರು ಹಾಗೂ ಇಬ್ಬರು ಪುತ್ರಿಯರನ್ನು ಅಗಲಿದ್ದಾರೆ.
ಸಚಿವ ಯು.ಟಿ. ಖಾದರ್ ತೀವ್ರ ಸಂತಾಪ:
ದ.ಕ. ಜಿಲ್ಲಾ ಖಾಝಿ ಅಲ್-ಹಾಜ್ ತ್ವಾಕಾ ಅಹ್ಮದ್ ಮುಸ್ಲಿಯಾರ್ ಅವರ ನಿಧನಕ್ಕೆ ಸಚಿವ ಯು.ಟಿ. ಖಾದರ್ ಅವರು ತೀವ್ರ ಸಂತಾಪ ವ್ಯಕ್ತಪಡಿಸಿದ್ದಾರೆ.
“ಜಿಲ್ಲೆಯ ಮುಸ್ಲಿಂ ಸಮುದಾಯಕ್ಕೆ ದೀರ್ಘಕಾಲ ಧಾರ್ಮಿಕ ಮಾರ್ಗದರ್ಶನ ನೀಡಿದ ಮುಸ್ಲಿಯಾರ್ ಅವರು ತಮ್ಮ ಜೀವನವನ್ನೆಲ್ಲಾ ಧರ್ಮ, ಶಿಕ್ಷಣ ಹಾಗೂ ಸಮಾಜ ಸೇವೆಗೆ ಸಮರ್ಪಿಸಿ ಸಾವಿರಾರು ಜನರಿಗೆ ದಾರಿದೀಪವಾಗಿದ್ದರು. ಅವರ ಸರಳತೆ, ಆಳವಾದ ಜ್ಞಾನ ಹಾಗೂ ಸಮನ್ವಯದ ಮನೋಭಾವವು ಎಲ್ಲರಿಗೂ ಪ್ರೇರಣೆಯಾಗಿತ್ತು. ಅವರ ಅಗಲಿಕೆ ಮುಸ್ಲಿಂ ಸಮುದಾಯಕ್ಕೆ ಮಾತ್ರವಲ್ಲದೆ ಸಮಸ್ತ ಸಮಾಜಕ್ಕೂ ಅಪಾರ ನಷ್ಟವಾಗಿದೆ. ಸಮಾಜದಲ್ಲಿ ಶಾಂತಿ, ಸೌಹಾರ್ದತೆ ಹಾಗೂ ಧಾರ್ಮಿಕ ಮೌಲ್ಯಗಳನ್ನು ಬಲಪಡಿಸುವಲ್ಲಿ ಅವರ ಪಾತ್ರ ಅತ್ಯಂತ ಮಹತ್ವದ್ದಾಗಿತ್ತು” ಎಂದು ಯು.ಟಿ. ಖಾದರ್ ತಮ್ಮ ಸಂತಾಪ ಸಂದೇಶದಲ್ಲಿ ಸ್ಮರಿಸಿದ್ದಾರೆ.
ಖಾಝೀಯವರ ಬಗ್ಗೆ ಒಂದಷ್ಟು ಜೀವನ ಚರಿತ್ರೆಯನ್ನು ಶವಿಲ್ ಉದ್ದಬೆಟ್ಟು ಅವರು ನೀಡಿದ್ದಾರೆ.
ತ್ವಾಖಾ ಉಸ್ತಾದ್ ಎಂದೇ ಪ್ರಸಿದ್ಧರಾದ ಶೈಖುನಾ ತ್ವಾಖಾ ಅಹ್ಮದ್ ಅಲ್ ಅಝ್‌ಹರಿ ಉಸ್ತಾದರು ಮಂಗಳೂರಿನ ಹೃದಯವನ್ನು ಗೆದ್ದ ಜನಪ್ರಿಯ ಖಾಝಿಯಾಗಿದ್ದಾರೆ.
1947 ರ ಆಗಸ್ಟ್ 10 ರಂದು ಖಾಝಿಯಾರಕತ್ತ್ ಮುಹಮ್ಮದ್ ಕುಂಞಿ ಮತ್ತು ಆಯಿಷಾ (ಚೆಂಬರಿಕ ಸಿ.ಎಂ. ಉಸ್ತಾದ್ ಅವರ ಸಹೋದರಿ) ದಂಪತಿಗಳ ಪುತ್ರನಾಗಿ ತ್ವಾಖಾ ಅಹ್ಮದ್ ಅಲ್ ಅಝ್‌ಹರಿ ಉಸ್ತಾದರು ಜನಿಸಿದರು. ಇವರ ಕುಟುಂಬವು ಅನೇಕ ಖಾಝಿಗಳ ವಂಶಪರಂಪರೆಯನ್ನು ಹೊಂದಿದ್ದು, ಅದೇ ಕಾರಣದಿಂದ ‘ಖಾಝಿಯಾರಗಂ’ ಎಂಬ ಘನತೆಯ ಹೆಸರನ್ನು ಪಡೆದುಕೊಂಡಿದೆ.
ತಳಂಗರ ಮುಸ್ಲಿಂ ಹೈಸ್ಕೂಲ್‌ನಲ್ಲಿ ಶೈಖುನಾ ಪ್ರಾಥಮಿಕ ಶಿಕ್ಷಣ ಪಡೆದರು. ನಂತರ ಪಡನ್ನ ಮಾವಿಲಾಡ್ ಕಡಪ್ಪುರದಲ್ಲಿ ಯು.ಕೆ. ಆಟ್ಟಕ್ಕೋಯ ತಂಙಳ್ ಅವರ ದರ್ಸ್‌ಗೆ ಸೇರಿದರು. ಒಂದು ವರ್ಷದ ನಂತರ ಸಿ.ಎಂ. ಅಬ್ದುಲ್ಲಾ ಮುಸ್ಲಿಯಾರ್ ಅವರ ದರ್ಸ್ ಗೆ ಸೇರಿ ಕಲಿಕೆ ಮುಂದುವರೆಸಿದರು. ಆ ಬಳಿಕ ಕೆ.ಕೆ. ಅಬ್ದುಲ್ಲಾ ಮುಸ್ಲಿಯಾರ್ ಪೊನ್ನಾನಿ ಮಊನತ್ತಿನಲ್ಲಿ ಪ್ರಾಂಶುಪಾಲರಾಗಿದ್ದ ಸಮಯದಲ್ಲಿ ಎರಡು ತಿಂಗಳ ಕಾಲ ಅವರ ಬಳಿ ಜ್ಞಾನಾರ್ಜನೆ ಮಾಡಿದರು.
ಮಿತ್ತಬೈಲ್ ಉಸ್ತಾದ್, ನಾಟ್ಟಿಗ ವಿ. ಮೂಸಾ ಮುಸ್ಲಿಯಾರ್ ಪೊನ್ನಾನಿಯಲ್ಲಿ ತ್ವಾಖಾ ಉಸ್ತಾದರ ಸಹಪಾಠಿಗಳಾಗಿದ್ದರು. ನಂತರ ಕೊಡಂಙಲ್ಲೂರ್ ಅಝೀಕೋಡ್‌ನ ಅಲ್ ಇರ್ಷಾದ್ ಕಾಲೇಜಿನಲ್ಲಿ ಸುಮಾರು ಒಂದೂವರೆ ವರ್ಷಗಳ ಕಾಲ ಜ್ಞಾನಾರ್ಜನೆಯಲ್ಲಿ ಮುಳುಗಿದರು.
ಉನ್ನತ ಧಾರ್ಮಿಕ ಶಿಕ್ಷಣವನ್ನು ವಿದೇಶದಲ್ಲಿ ಕಲಿಯಬೇಕು ಎಂಬುದು ತ್ವಾಖಾ ಉಸ್ತಾದರ ಮನದಾಸೆಯಾಗಿತ್ತು. ಅಲ್ ಇರ್ಷಾದ್‌ನಲ್ಲಿ ಕಲಿತ ನಂತರ, ಅವರು ದಿಯೋಬಂದ್‌ನ ಪ್ರಸಿದ್ಧ ದಾರುಲ್ ಉಲೂಮ್‌ಗೆ ಪ್ರವೇಶ ಪಡೆದರು. ಅಲ್ಲಿ ಅಧ್ಯಯನ ಮುಗಿಸಿ ಖಾಸಿಮಿ ಬಿರುದನ್ನು ಪಡೆದರು.
ದಿಯೋಬಂದ್‌ನಿಂದ ಹುಟ್ಟೂರಿಗೆ ಮರಳಿದ ಬಳಿಕ , ಕೋಟ್ಟಯಂ ತಿರುನಕ್ಕರ ಮಸೀದಿಯಲ್ಲಿ ಖತೀಬ್ ಮತ್ತು ಮುದರ್ರಿಸ್ ಆಗಿ ಮೂರು ವರ್ಷಗಳ ಕಾಲ ಪ್ರಶಂಸನೀಯ ಸೇವೆಗೈದರು . ನಂತರ ತಮ್ಮ ಭಾವನ ಸಹಕಾರದಿಂದ ಉಮ್ರಾ ನಿರ್ವಹಿಸುವ ಸೌಭಾಗ್ಯ ದೊರೆಯಿತು. ಸೌದಿ ಅರೇಬಿಯಾಗೆ ಅಂದು ನೇರ ವಿಮಾನ ಸಂಪರ್ಕ ಲಭ್ಯವಿಲ್ಲದ ಕಾರಣ ಈಜಿಪ್ಟ್ ಮೂಲಕ ಪ್ರಯಾಣದ ಮಾರ್ಗವನ್ನು ಆರಿಸಬೇಕಾಯಿತು. ಈ ಸಂದರ್ಭದಲ್ಲಿ ಉಸ್ತಾದರು ತಮ್ಮ ಕನಸಿನ ತೀರ್ಥಕ್ಷೇತ್ರವಾಗಿದ್ದ ಈಜಿಪ್ಟ್‌ನ ವಿಶ್ವವಿಖ್ಯಾತ ಅಲ್ ಅಝ್‌ಹರ್ ವಿಶ್ವವಿದ್ಯಾಲಯಕ್ಕೆ ತೆರಳುವ ದೃಢ ನಿರ್ಧಾರವನ್ನು ತೆಗೆದುಕೊಂಡರು. ಅಲ್ಲಿ ಅವರು ಉಸೂಲುಲ್ ಫಿಖ್ಹ್ (Usul al-Fiqh) ವಿಷಯದಲ್ಲಿ ಸ್ನಾತಕೋತ್ತರ ಪದವಿಯನ್ನು ಪಡೆದು, ಪ್ರತಿಷ್ಠಿತ ‘ಅಲ್ ಅಝ್‌ಹರಿ’ ಬಿರುದಿನೊಂದಿಗೆ ತೇರ್ಗಡೆ ಹೊಂದಿದರು.
ಅಲ್ ಅಝ್ ಹರ್ ನಲ್ಲಿ ಶಿಕ್ಷಣದ ಬಳಿಕ ಉಸ್ತಾದರು ಉದ್ಯೋಗಾವಕಾಶಗಳ ಹುಡುಕಾಟದಲ್ಲಿ ಅಲ್ಲಿಂದಲೇ ಒಮಾನ್‌ನ ಸಲಾಲ ಕಡೆಗೆ ಪ್ರಯಾಣ ಬೆಳೆಸಿದರು. ಅಲ್ಲಿ ಪೆಟ್ರೋಲಿಯಂ ಸಚಿವರ ಕಂಪನಿಯಲ್ಲಿ ನೌಕರಿ ಜೊತೆಗೆ ಸಮೀಪದ ಮಸೀದಿಯಲ್ಲಿ ಖುತುಬಾ ನಿರ್ವಹಿಸುವ ಭಾಗ್ಯವೂ ದೊರಕಿತ್ತು.ವರ್ಷ ಕಳೆದಾಗ ಅಲ್ಲಿನ ಸುಲ್ತಾನರು ಅವರ ತಾಯಿಯ ಸ್ಮರಣಾರ್ಥ ಸಲಾಲಾದಲ್ಲಿ ತ್ವಾಖಾ ಎಂಬ ಪ್ರದೇಶದಲ್ಲಿ ಮಸೀದಿಯನ್ನು ನಿರ್ಮಾಣ ಮಾಡಿದಾಗ,ಅದಾಗಲೇ ಉಸ್ತಾದರ ಹೃದಯಸ್ಪರ್ಶಿ ಖುತುಬಾಗಳಿಂದ ಆಕರ್ಷಿತರಾಗಿದ್ದ ಸುಲ್ತಾನ್ , ಅವರನ್ನು ಆ ಮಸೀದಿಯ ಖತೀಬ್ ಆಗಿ ನೇಮಿಸುವ ಮೂಲಕ ಗೌರವವನ್ನು ನೀಡಿದರು. ಅಂದಿನಿಂದ ಈ ಪ್ರದೇಶದ ಹೆಸರಿನಿಂದಲೇ ಅವರು ‘ತ್ವಾಖಾ’ ಉಸ್ತಾದ್ ಎಂಬ ಖ್ಯಾತಿಯನ್ನು ಪಡೆದು, ಸುಮಾರು 28 ವರ್ಷಗಳ ಕಾಲ ಅಲ್ಲಿ ಅಮೂಲ್ಯ ಸೇವೆಯನ್ನು ನಿರ್ವಹಿಸಿದರು.
ಸಲಾಲಾದ ಪ್ರವಾಸಿ ಜೀವನದಲ್ಲಿ ಕೆ.ಕೆ. ಅಬೂಬಕರ್ ಹಝ್ರತ್, ಮೌಲಾನಾ ಕೆ.ವಿ. ಉಸ್ತಾದ್, ಕೆ.ಟಿ. ಮಾನು ಮುಸ್ಲಿಯಾರ್ ಅವರಂತಹ ದಿಗ್ಗಜ ವಿದ್ವಾಂಸರೊಂದಿಗೆ ಆತ್ಮೀಯ ಸಂಬಂಧವನ್ನು ಬೆಳೆಸಿಕೊಂಡರು.
ಸಲಾಲಾದ ಪ್ರವಾಸಿ ಜೀವನದ ಅಧ್ಯಾಯವನ್ನು ಮುಕ್ತಾಯಗೊಳಿಸಿ ಸ್ವದೇಶಕ್ಕೆ ಮರಳಿದ ನಂತರ, ಶಹೀದೇ ಮಿಲ್ಲತ್ ಸಿ.ಎಂ. ಉಸ್ತಾದರ ನಿಧನದ ನಂತರ,ತೆರವಾಗಿದ್ದ ಪ್ರತಿಷ್ಠಿತ ಮಂಗಳೂರು ಖಾಝಿ ಸ್ಥಾನಕ್ಕೆ ಆಯ್ಕೆಯಾಗುವ ಸೌಭಾಗ್ಯ ದೊರೆಯಿತು.ನಂತರ ಟಿ.ಕೆ.ಎಂ. ಬಾವಾ ಮುಸ್ಲಿಯಾರ್ ಅವರ ಮರಣದ ಬಳಿಕ, ಸಮಸ್ತ ಕಾಸರಗೋಡು ಜಿಲ್ಲಾ ಜಿಲ್ಲಾಧ್ಯಕ್ಷ ಮತ್ತು ಸಮಸ್ತ ಕೇಂದ್ರ ಮುಶಾವರ ಸದಸ್ಯ ಸೇರಿದಂತೆ ಹಲವಾರು ಗೌರವಯುತ ಸ್ಥಾನಗಳನ್ನು ಅಲಂಕರಿಸಿದರು.
ಕರ್ನಾಟಕದ ಕಾಶಿಪಟ್ನದಲ್ಲಿ ಚೆಮ್ಮಾಡ್ ದಾರುಲ್ ಹುದಾ ಇಸ್ಲಾಮಿಕ್ ಯೂನಿವರ್ಸಿಟಿಯ ಅಧೀನದಲ್ಲಿ ಕಾರ್ಯಾಚರಿಸುತ್ತಿರುವ ದಾರುನ್ನೂರ್ ವಿದ್ಯಾ ಸಂಸ್ಥೆಯ ಪ್ರಧಾನ ಮಾರ್ಗದರ್ಶಕರಾಗಿದ್ದಾರೆ ಶೈಖುನಾ ತ್ವಾಖಾ ಉಸ್ತಾದ್.
ವಿದ್ವಾಂಸರು ಹಾಗೂ ವಾಗ್ಮಿಯೂ ಆಗಿರುವ ಅವರು ತಮ್ಮ ಗಾಂಭೀರ್ಯ ತುಂಬಿದ ಭಾಷಣಗಳಿಂದ ಗಮನ ಸೆಳೆದಿದ್ದಾರೆ.
ಮಂಗಳೂರು, ದಕ್ಷಿಣ ಕನ್ನಡ, ಕೀಝೂರು, ಚೆಂಬರಿಕ ಸಂಯುಕ್ತ ಜಮಾಅತ್ ಸೇರಿದಂತೆ ಸುಮಾರು 200ಕ್ಕೂ ಅಧಿಕ ಮೊಹಲ್ಲಾಗಳ ಖಾಝಿ ಸ್ಥಾನವನ್ನು ಅಲಂಕರಿಸಿದ್ದಾರೆ



accident
ಬ್ರೇಕಿಂಗ್ ನ್ಯೂಸ್: ಕಾರ್ಕಳ – ಮೂಡುಬಿದ್ರೆ ಹೆದ್ದಾರಿಯಲ್ಲಿ ಭೀಕರ ರಸ್ತೆ ಅಪಘಾತ; ಮಾಜಿ ಸಚಿವ ರಮಾನಾಥ ರೈ ಹಾಗೂ ಕಾರು ಚಾಲಕ ಪ್ರಾಣಾಪಾಯದಿಂದ ಪಾರು
ಕಾರ್ಕಳ: ಕಾರ್ಕಳ-ಮೂಡುಬಿದ್ರೆ ಹೆದ್ದಾರಿಯ ಸಾಣೂರು ಜಂಕ್ಷನ್ ಬಳಿ ಸಂಭವಿಸಿದ ಭೀಕರ ರಸ್ತೆ ಅಪಘಾತದಲ್ಲಿ ಮಾಜಿ ಸಚಿವ ಹಾಗೂ ಹಿರಿಯ ಕಾಂಗ್ರೆಸ್ ಮುಖಂಡ ಬಿ. ರಮಾನಾಥ ರೈ ಹಾಗೂ ಅವರ ಕಾರು ಚಾಲಕ ಪ್ರಾಣಾಪಾಯದಿಂದ ಪಾರಾಗಿದ್ದಾರೆ.

ಕಾರ್ಕಳದಿಂದ ಮೂಡುಬಿದ್ರೆಯತ್ತ ವೇಗವಾಗಿ ಸಾಗುತ್ತಿದ್ದ ಖಾಸಗಿ ಬಸ್ ಮತ್ತು ರಮಾನಾಥ ರೈ ಅವರು ಪ್ರಯಾಣಿಸುತ್ತಿದ್ದ ಇನ್ನೋವಾ ಕಾರಿನ (KA 70 A 0099) ನಡುವೆ ಮುಖಾಮುಖಿ ಭೀಕರ ಡಿಕ್ಕಿ ಸಂಭವಿಸಿದೆ.

ಘಟನೆಯ ವಿವರ ಹಾಗೂ ರಕ್ಷಣಾ ಕಾರ್ಯ: ಅಪಘಾತದ ರಭಸಕ್ಕೆ ಕಾರಿನ ಮುಂಭಾಗ ಸಂಪೂರ್ಣ ನಜ್ಜುಗುಜ್ಜಾಗಿದ್ದು, ಗಾಜುಗಳು ಪುಡಿಯಾಗಿವೆ. ಕಾರಿನ ಒಳಗೆ ಏರ್‌ಬ್ಯಾಗ್‌ಗಳು ತೆರೆದುಕೊಂಡಿದ್ದರೂ ಸಹ, ಡಿಕ್ಕಿಯ ತೀವ್ರತೆಯಿಂದಾಗಿ ಮುಂಭಾಗದಲ್ಲಿ ಕುಳಿತಿದ್ದ ಮಾಜಿ ಸಚಿವ ರಮಾನಾಥ ರೈ ಹಾಗೂ ಕಾರು ಚಾಲಕ ಒಳಗೆ ಸಿಲುಕಿಕೊಂಡಿದ್ದರು. ಘಟನಾ ಸ್ಥಳದಲ್ಲಿದ್ದ ಸ್ಥಳೀಯರು ಮತ್ತು ಸಾರ್ವಜನಿಕರು ತಕ್ಷಣವೇ ಧಾವಿಸಿ ಬಂದು, ಅತ್ಯಂತ ಪ್ರಯಾಸಪಟ್ಟು ಅವರನ್ನ ಕಾರಿನಿಂದ ಹೊರತೆಗೆದಿದ್ದಾರೆ.

ಆಸ್ಪತ್ರೆಗೆ ದಾಖಲು: ಅಪಘಾತದಲ್ಲಿ ಗಾಯಗೊಂಡಿರುವ ರಮಾನಾಥ ರೈ ಹಾಗೂ ಕಾರು ಚಾಲಕರನ್ನು ತಕ್ಷಣವೇ ಪ್ರಾಥಮಿಕ ಚಿಕಿತ್ಸೆ ನೀಡಿ, ಹೆಚ್ಚಿನ ಚಿಕಿತ್ಸೆಗಾಗಿ ಮಂಗಳೂರಿನ ಆಸ್ಪತ್ರೆಗೆ ದಾಖಲಿಸಲಾಗಿದೆ. ಅದೃಷ್ಟವಶಾತ್ ಇಬ್ಬರೂ ಪ್ರಾಣಾಪಾಯದಿಂದ ಪಾರಾಗಿದ್ದಾರೆ ಎಂದು ತಿಳಿದುಬಂದಿದೆ. ಬಸ್ ಹಾಗೂ ಕಾರಿನಲ್ಲಿದ್ದ ಇತರೆ ಕೆಲವು ಪ್ರಯಾಣಿಕರಿಗೂ ಸಣ್ಣಪುಟ್ಟ ಗಾಯಗಳಾಗಿದ್ದು, ಸ್ಥಳೀಯರು ಅವರನ್ನು ಆಸ್ಪತ್ರೆಗೆ ಸೇರಿಸಲು ನೆರವಾಗಿದ್ದಾರೆ.
ರಮಾನಾಥ ರೈಯವರು ಒಡಿಯೂರಿನಲ್ಲಿ ನಡೆದ ಒಡಿಯೂರು ಶ್ರೀ ವಿಕಾಸವಾಹಿನಿ ಸಂಭ್ರಮ ಹಾಗೂ ನೇರಳಕಟ್ಟೆಯ ಕಾರ್ಯಕ್ರಮದಲ್ಲಿ ಪಾಲ್ಗೊಂಡು, ಮಂಗಳೂರಿನ ಕಾರ್ಯಕ್ರಮದ ಮುಗಿಸಿ ಕಾರ್ಕಳದ ಮತ್ತೊಂದು ಸಮಾರಂಭಕ್ಕೆ ತೆರಳುತ್ತಿದ್ದ ವೇಳೆ ಈ ದುರ್ಘಟನೆ ಸಂಭವಿಸಿದೆ.
ಘಟನಾ ಸ್ಥಳಕ್ಕೆ ಪೊಲೀಸರು ಭೇಟಿ ನೀಡಿ ಪರಿಶೀಲನೆ ನಡೆಸುತ್ತಿದ್ದು, ಪ್ರಕರಣ ದಾಖಲಿಸಿಕೊಂಡಿದ್ದಾರೆ.
CONGRESS
ಮಂಗಳೂರು ಹಳೆ ಬಂದರು ಪ್ರದೇಶಕ್ಕೆ ಸಿಎಂ ಭೇಟಿ: ಮೀನುಗಾರಿಕೆ ವ್ಯವಹಾರ ಸ್ಥಗಿತಗೊಳಿಸಿದ್ದಕ್ಕೆ ಆಕ್ರೋಶ, ತನಿಖೆಗೆ ಆದೇಶ
ಮಂಗಳೂರು, ಸೆ. 19: ಸಚಿವ ಸಂಪುಟ ಸಭೆಯ ಹಿನ್ನೆಲೆಯಲ್ಲಿ ಶನಿವಾರ ಬೆಳಗ್ಗೆ ಮಂಗಳೂರು ಮೀನುಗಾರಿಕಾ ಧಕ್ಕೆ ಹಳೆ ಬಂದರು ಪ್ರದೇಶಕ್ಕೆ ಭೇಟಿ ನೀಡಿದ ಮುಖ್ಯಮಂತ್ರಿ ಡಿ.ಕೆ. ಶಿವಕಮಾರ್ ಅವರು, ತಮ್ಮ ಭೇಟಿಯ ವೇಳೆ ಮೀನುಗಾರಿಕಾ ವ್ಯವಹಾರ ಹಾಗೂ ಚಟುವಟಿಕೆಗಳನ್ನು ಸ್ಥಗಿತಗೊಳಿಸಿರುವುದಕ್ಕೆ ತೀವ್ರ ಅಸಮಾಧಾನ ವ್ಯಕ್ತಪಡಿಸಿ, ಈ ಬಗ್ಗೆ ಕೂಡಲೇ ತನಿಖೆ ನಡೆಸಿ ವರದಿ ನೀಡುವಂತೆ ಜಿಲ್ಲಾಧಿಕಾರಿ ಹಾಗೂ ಪೊಲೀಸ್ ಕಮಿಷನರ್‌ಗೆ ಸೂಚನೆ ನೀಡಿದ್ದಾರೆ.
ಈ ವೇಳೆ ಮಾತನಾಡಿದ ಅವರು, ಅಧಿಕಾರಿಗಳೇ ಅಥವಾ ಪೊಲೀಸರೇ ಚಟುವಟಿಕೆಗಳನ್ನು ನಿಲ್ಲಿಸಿದ್ದರೆ ಅವರನ್ನು ಇಂದೇ ಅಮಾನತು ಮಾಡಲಾಗುವುದು ಎಂದು ಎಚ್ಚರಿಸಿದರು. ರಾಜ್ಯ ಹಾಗೂ ಹೊರರಾಜ್ಯಗಳಿಂದ ಬರುವ ಮೀನುಗಾರರು ಮತ್ತು ವ್ಯಾಪಾರಸ್ಥರಿಗೆ ತೊಂದರೆಯಾಗದಂತೆ ವ್ಯವಹಾರಗಳು ಎಂದಿನಂತೆ ಸುಗಮವಾಗಿ ನಡೆಯಬೇಕು ಎಂದು ಸಿಎಂ ತಿಳಿಸಿದರು. ಮೀನುಗಾರಿಕೆಯು ಆರ್ಥಿಕತೆಯ ದೊಡ್ಡ ಶಕ್ತಿಯಾಗಿದ್ದು, ಧಕ್ಕೆಯಲ್ಲಿ ವಾಹನಗಳ ಸಂಚಾರಕ್ಕೆ ಅನುಕೂಲ ಕಲ್ಪಿಸುವುದು, ಸುರಕ್ಷತೆ ಒದಗಿಸುವುದು ಹಾಗೂ ಸಣ್ಣ ದೋಣಿ ಮೀನುಗಾರರಿಗೆ ನೆರವು ನೀಡುವುದು ಸರ್ಕಾರದ ಕರ್ತವ್ಯ ಎಂದರು.
ಇದೇ ಸಂದರ್ಭದಲ್ಲಿ ಮಾತನಾಡಿದ ಅವರು, ಕಳೆದ 35 ವರ್ಷಗಳಿಂದ ಅಳಿವೆ ಬಾಗಿಲಿಗೆ ಹೂಳೆತ್ತದೆ ಇರುವುದು ಅಪಾಯಕಾರಿಯಾಗಿದೆ ಎಂಬ ಮೀನುಗಾರರ ಅಳಲಿಗೆ ಸ್ಪಂದಿಸಿ, ಡ್ರೆಜಿಂಗ್ ಕಾರ್ಯ ಕೈಗೊಳ್ಳಲು ಕೇಂದ್ರ ಸರ್ಕಾರದ ತಾಂತ್ರಿಕ ಸಮಿತಿಯ ಸಲಹೆ ಪಡೆದು ಶೀಘ್ರವೇ ಸರ್ಕಾರವೇ ಸ್ವಂತ ಡ್ರೆಜಿಂಗ್ ಯಂತ್ರ ಖರೀದಿಸುವುದೋ ಅಥವಾ ಲೀಸ್‌ಗೆ ಪಡೆಯುವುದೋ ಎಂಬ ಬಗ್ಗೆ ತೀರ್ಮಾನಿಸುವುದಾಗಿ ಭರವಸೆ ನೀಡಿದರು. ಅಲ್ಲದೆ, ಕರಾವಳಿಯ ಅಭಿವೃದ್ಧಿಗೆ ಹೊಸ ಪಥದ ಚಿಂತನೆ ನಡೆಸಲಾಗಿದ್ದು, ಹೂಡಿಕೆದಾರರನ್ನು ಆಕರ್ಷಿಸಲು ಮೂಲಭೂತ ಸೌಕರ್ಯಗಳನ್ನು ಒದಗಿಸಲಾಗುವುದು ಎಂದರು.

ಕಸ್ತೂರಿ ರಂಗನ್ ವರದಿ ವಿಚಾರವಾಗಿ ಪ್ರತಿಕ್ರಿಯಿಸಿದ ಮುಖ್ಯಮಂತ್ರಿಗಳು, ಜನಸಾಮಾನ್ಯರ ಬದುಕು ನಮಗೆ ಮುಖ್ಯವಾಗಿದ್ದು, ಹಿಂದೆಯೂ ನಾವು ಈ ವರದಿಯನ್ನು ತಿರಸ್ಕರಿಸಿದ್ದೇವೆ ಎಂದರು. ಕಾನೂನು ಚೌಕಟ್ಟಿನಲ್ಲಿ ಜನರಿಗೆ ಆಗುವ ಅನ್ಯಾಯ ತಪ್ಪಿಸಲು ವಾಸ್ತವ ಅಂಶಗಳನ್ನು ಅರಿಯಲು ಜನರ ಬಳಿಗೆ ಬಂದಿರುವುದಾಗಿ ತಿಳಿಸಿದರು. ಸಚಿವ ಸಂಪುಟದ ಅನುಮೋದನೆ ಕುರಿತು ಬಿಜೆಪಿ ಟೀಕೆಗಳಿಗೆ ಉತ್ತರಿಸಿ, “ನಾವು ನುಡಿದಂತೆ ನಡೆಯುತ್ತೇವೆ, ಅದೇ ನಮ್ಮ ಶಕ್ತಿ” ಎಂದು ಸ್ಪಷ್ಟಪಡಿಸಿದರು. ಈ ಭೇಟಿಯ ವೇಳೆ ಸಚಿವ ಯು.ಟಿ. ಖಾದರ್, ವಿವಿಧ ಸ್ಥಳೀಯ ಕಾಂಗ್ರೆಸ್ ಮುಖಂಡರು ಹಾಗೂ ಮೀನುಗಾರಿಕಾ ಸಂಘದ ಪದಾಧಿಕಾರಿಗಳು ಉಪಸ್ಥಿತರಿದ್ದರು.
award
ತುಳು ಭಾಷೆಗೆ ಕರ್ನಾಟಕದ ಎರಡನೇ ಅಧಿಕೃತ ಭಾಷೆಯ ಐತಿಹಾಸಿಕ ಮಾನ್ಯತೆ: ಕರಾವಳಿಯಲ್ಲಿ ಹಬ್ಬದ ವಾತಾವರಣ
ಮಂಗಳೂರು: ತುಳು ಭಾಷಿಕರ ಹಲವು ದಶಕಗಳ ಹೋರಾಟ ಹಾಗೂ ಬಹುದಿನಗಳ ನಿರೀಕ್ಷೆಗೆ ಕೊನೆಗೂ ಐತಿಹಾಸಿಕ ಜಯ ಸಿಕ್ಕಿದೆ. ಶ್ರೀಮಂತ ಪರಂಪರೆಯ ತುಳು ಭಾಷೆಗೆ ಕರ್ನಾಟಕದ ಎರಡನೇ ಅಧಿಕೃತ ಭಾಷೆಯ ಮಾನ್ಯತೆ ನೀಡುವುದಾಗಿ ರಾಜ್ಯ ಸರ್ಕಾರ ಅಧಿಕೃತವಾಗಿ ಘೋಷಿಸಿದೆ.
ಮಂಗಳೂರಿನ ಜಿಲ್ಲಾಧಿಕಾರಿ ಕಚೇರಿ ಸಭಾಂಗಣದಲ್ಲಿ ನಡೆದ ಮಹತ್ವದ ಸಚಿವ ಸಂಪುಟ ಸಭೆಯ ಬಳಿಕ, ಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್ ಅವರು ಸುದ್ದಿಗೋಷ್ಠಿಯಲ್ಲಿ ಈ ಮಹತ್ವದ ತೀರ್ಮಾನವನ್ನು ಪ್ರಕಟಿಸಿದರು.

ಸಂವಿಧಾನದ 8ನೇ ಪರಿಚ್ಛೇದ ಸೇರ್ಪಡೆಗೆ ಬಲ: ಪಂಚ ದ್ರಾವಿಡ ಭಾಷೆಗಳಲ್ಲಿ ಒಂದಾಗಿರುವ ತುಳು, ಪ್ರಾಚೀನ ಹಾಗೂ ಆಧುನಿಕ ಸಾಹಿತ್ಯಿಕ ಸಮೃದ್ಧತೆಯನ್ನು ಹೊಂದಿರುವ ಅಪೂರ್ವ ಭಾಷೆಯಾಗಿದೆ. ರಾಜ್ಯ ಸರ್ಕಾರದಿಂದ ಎರಡನೇ ಅಧಿಕೃತ ಭಾಷಾ ಸ್ಥಾನಮಾನ ಲಭಿಸಿರುವುದು, ಭಾರತೀಯ ಸಂವಿಧಾನದ 8ನೇ ಪರಿಚ್ಛೇದಕ್ಕೆ ತುಳು ಭಾಷೆಯನ್ನು ಸೇರ್ಪಡೆಗೊಳಿಸುವ ಹೋರಾಟಕ್ಕೆ ಮತ್ತಷ್ಟು ಪ್ರಬಲ ವೇದಿಕೆಯಾಗಲಿದೆ.
ನಿರಂತರ ಹೋರಾಟಕ್ಕೆ ಸಿಕ್ಕ ಫಲ: ಕರಾವಳಿ ಭಾಗದ ದಕ್ಷಿಣ ಕನ್ನಡ ಮತ್ತು ಉಡುಪಿ ಜಿಲ್ಲೆಗಳಲ್ಲಿ ಪ್ರಮುಖವಾಗಿ ಮಾತನಾಡುವ ತುಳುವಿಗೆ ಹೆಚ್ಚುವರಿ ಅಧಿಕೃತ ಭಾಷಾ ಮಾನ್ಯತೆ ನೀಡಬೇಕೆಂದು ದಶಕಗಳಿಂದ ತುಳು ಸಾಹಿತ್ಯ ಅಕಾಡೆಮಿ, ತುಳು ಪರ ಸಂಘಟನೆಗಳು, ಸಾಹಿತಿಗಳು ಹಾಗೂ ಸ್ಥಳೀಯ ಜನಪ್ರತಿನಿಧಿಗಳು ಸರ್ಕಾರದ ಮೇಲೆ ನಿರಂತರವಾಗಿ ಒತ್ತಡ ಹೇರುತ್ತ ಬಂದಿದ್ದರು.
ತಜ್ಞರ ಸಮಿತಿಯ ವರದಿ ಆಧಾರ: ತುಳು ಭಾಷೆಗೆ ಅಧಿಕೃತ ಸ್ಥಾನಮಾನ ನೀಡುವ ಸಾಧಕ-ಬಾಧಕಗಳನ್ನು ಕೂಲಂಕಷವಾಗಿ ಪರಿಶೀಲಿಸಲು ಹಿರಿಯ ಶಿಕ್ಷಣ ತಜ್ಞ ಡಾ. ಎಂ. ಮೋಹನ್ ಆಳ್ವ ಅವರ ಅಧ್ಯಕ್ಷತೆಯಲ್ಲಿ ತಜ್ಞರ ಸಮಿತಿಯನ್ನು ರಚಿಸಲಾಗಿತ್ತು. ಈ ಸಮಿತಿಯು ಹೊರ ರಾಜ್ಯಗಳಲ್ಲಿನ ಭಾಷಾ ನೀತಿ ಮಾದರಿಗಳನ್ನು ಅಧ್ಯಯನ ಮಾಡಿ ಸರ್ಕಾರಕ್ಕೆ ವಿಸ್ತೃತ ವರದಿಯನ್ನು ಸಲ್ಲಿಸಿತ್ತು. ಈ ಎಲ್ಲಾ ಬೆಳವಣಿಗೆಗಳ ಹಿನ್ನೆಲೆಯಲ್ಲಿ ಈಗ ತುಳುವರ ಬಹುಕಾಲದ ಕನಸು ನನಸಾಗಿದ್ದು, ಕರಾವಳಿ ಭಾಗದಲ್ಲಿ ಹರ್ಷೋದ್ಗಾರ ವ್ಯಕ್ತವಾಗಿದೆ.
-
accident2 months agoಬಿ.ಸಿ. ರೋಡ್ ಸರ್ಕಲ್ನಲ್ಲಿ ಭೀಕರ ಅಪಘಾತ: ಟಿಪ್ಪರ್-ಆಕ್ಟಿವಾ ನಡುವೆ ಡಿಕ್ಕಿ, ಸವಾರರಿಬ್ಬರೂ ದುರ್ಮರಣ
-
Bantawala2 months agoಬಂಟ್ವಾಳದಲ್ಲಿ ಭೀಕರ ಹತ್ಯಾಕಾಂಡ: ಬಸ್ನಲ್ಲಿ ಕುಳಿತಿದ್ದ ಯುವತಿಯನ್ನು ಸಾರ್ವಜನಿಕರೆದುರೇ ಕೊಚ್ಚಿ ಕೊಂದ ತಲೆಹರಟೆ ಪ್ರೇಮಿ!
-
crime8 months agoಅತ್ಯಾಚಾರ ಯತ್ನಕ್ಕೆ ತಡೆದ ಸೊಸೆಯ ಮುಖಕ್ಕೆ ಕಚ್ಚಿ ಕೊಲೆಗೆ ಯತ್ನಿಸಿದ ಮಾವ..ತಂದೆಯ ರಾಕ್ಷಸೀ ಕೃತ್ಯಕ್ಕೆ ಬೆಂಬಲಿಸಿದ ಗಂಡ..ಸುಳ್ಯ ಠಾಣಾ ವ್ಯಾಪ್ತಿಯಲ್ಲಿ ಅದೃಷ್ಟವಶಾತ್ ಬಚಾವಾದ ಸೊಸೆ..
-
crime6 months agoಧಾರ್ಮಿಕ ನಂಬಿಕೆಗೆ ಅವಮಾನ: ಕೊಡಗಿನ ಎಮ್ಮೆಮಾಡಿನಲ್ಲಿ ದೈವದ ವೇಷದಂತೆ ಧರಿಸಿ ಮದುಮಗನ ಅತಿರೇಕದ ವರ್ತನೆ!
-
Bantawala6 months agoವಿಟ್ಲದಲ್ಲಿ ನಡೆಯಿತೊಂದು ದೈವ ಕಾರಣಿಕ; ಪೊಲೀಸರ ಕಣ್ಣಿಗೆ ಮಣ್ಣೆರಚಿದರೂ ದೈವದ ದೃಷ್ಟಿಗೆ ತತ್ತರಿಸಿದ ದನಕಳ್ಳ..
-
Bantawala8 months agoನಾಗಬನ, ರಕ್ತೇಶ್ವರಿ ತಾಣ, ದೈವದೇವರ ಸಾನಿಧ್ಯ ದ್ವಂಸ ಗೊಳಿಸಿದ ಧರ್ಮದ್ರೋಹಿ ಕೃತ್ಯದ ವಿರುದ್ಧ ಭಕ್ತರ ಆಕ್ರೋಶ ; ನಾಶವಾದ ಸಾನಿಧ್ಯದಲ್ಲಿಯೇ ಸ್ವಾಮೀಜಿಯವರ ಮಾರ್ಗದರ್ಶನದಲ್ಲಿ ಕುಟುಂಬಸ್ತರು, ಸಾರ್ವಜನಿಕರ ಸಾಮೂಹಿಕ ಪ್ರಾರ್ಥನೆ
-
accident2 months agoBreaking: ಬಂಟ್ವಾಳದಲ್ಲಿ ಶಾಲಾ ಬಸ್ ಮೇಲೆ ಉರುಳಿದ ಬೃಹತ್ ಮರ; ಕಲ್ಲಡ್ಕ ಶ್ರೀರಾಮ ಶಾಲೆಯ ಓರ್ವ ವಿದ್ಯಾರ್ಥಿ ಸಾವು, ಕೆಲವರು ಗಂಭೀರ, ಹಲವರಿಗೆ ಗಾಯ!
-
accident4 months agoವಿಟ್ಲ ಆಕಾಶದಲ್ಲಿ ಹಾರಾಡಿದ ವಿಮಾನ: ತಾಂತ್ರಿಕ ದೋಷವಲ್ಲ, ಹವಾಮಾನ ವೈಪರೀತ್ಯದ ಕಾರಣ ! ಸಾರ್ವಜನಿಕರು ಆತಂಕ ಪಡುವ ಅಗತ್ಯವಿಲ್ಲ
