INCIDENT
43 ಅಡಿ ಆಳದ ತೆರೆದ ಬಾವಿಗೆ ಬಿದ್ದ ಗರ್ಭಿಣಿ ಹಸು: 5 ಗಂಟೆಗಳ ರೋಚಕ ಕಾರ್ಯಾಚರಣೆಯ ಮೂಲಕ ಗೋವಿನ ರಕ್ಷಣೆ!
ವಿಟ್ಲ: ಆವರಣ ಗೋಡೆಯಿಲ್ಲದ ತೆರೆದ ಬಾವಿಯೊಂದಕ್ಕೆ ಆಕಸ್ಮಿಕವಾಗಿ ಬಿದ್ದ 8 ತಿಂಗಳ ಗರ್ಭಿಣಿ ಹಸುವನ್ನು ಸಾರ್ವಜನಿಕರು, ಸಾಮಾಜಿಕ ಕಾರ್ಯಕರ್ತರು ಮತ್ತು ಪಶುವೈದ್ಯರ ತಂಡ ಜಂಟಿಯಾಗಿ ನಡೆಸಿದ 5 ಗಂಟೆಗಳ ಸುದೀರ್ಘ ಹಾಗೂ ರೋಚಕ ಕಾರ್ಯಾಚರಣೆಯ ಮೂಲಕ ಸುರಕ್ಷಿತವಾಗಿ ಮೇಲಕ್ಕೆತ್ತಿ ರಕ್ಷಿಸಿದ ಮಾನವೀಯ ಘಟನೆ ಕೇಪು ಗ್ರಾಮದಲ್ಲಿ ನಡೆದಿದೆ.

ಆಕಸ್ಮಿಕವಾಗಿ ಬಾವಿಗೆ ಬಿದ್ದ ಗೋಮಾತೆ
ಕೇಪು ಗ್ರಾಮದ ಕುದ್ದುಪದವು ಎಂಬಲ್ಲಿನ ಕಾಸಿಂ ಎಂಬವರ ಮನೆಯ ಸಮೀಪ ಮೇಯಲು ಬಿಟ್ಟಿದ್ದ ಸ್ಥಳೀಯ ನಿವಾಸಿ ಸದಾನಂದ ಶೆಟ್ಟಿ ಅವರಿಗೆ ಸೇರಿದ ಎಂಟು ತಿಂಗಳ ಗರ್ಭಿಣಿ ಹಸುವು, ಆವರಣ ಗೋಡೆಯಿಲ್ಲದ ಸುಮಾರು 43 ಅಡಿ ಆಳದ ತೆರೆದ ಬಾವಿಗೆ ಆಕಸ್ಮಿಕವಾಗಿ ಬಿದ್ದಿದೆ. ಬಾವಿಯೊಳಗೆ ನೀರಿದ್ದು, ಹಸುವು ಬದುಕುಳಿಯಲು ಸಹಾಯಕ್ಕಾಗಿ ಗೋಳಿಡುತ್ತಿರುವುದನ್ನು ಕಂಡು ಸ್ಥಳೀಯರು ಆತಂಕಗೊಂಡರು. ಬಾವಿಯು ಕುಸಿದು ಬೀಳುವ ಹಂತದಲ್ಲಿದ್ದ ಕಾರಣ ರಕ್ಷಣಾ ಕಾರ್ಯವು ಅತ್ಯಂತ ಸವಾಲಿನಿಂದ ಕೂಡಿತ್ತು

ಪ್ರಾಣದ ಹಂಗು ತೊರೆದು ಬಾವಿಗಿಳಿದ ಮುರಳೀಧರ
ವಿಷಯ ತಿಳಿಯುತ್ತಿದ್ದಂತೆ ಸ್ಥಳಕ್ಕಾಗಮಿಸಿದ “ಫ್ರೆಂಡ್ಸ್ ವಿಟ್ಲ” ತಂಡದ ಮುಖಂಡ, ಸಾಮಾಜಿಕ ಕಾರ್ಯಕರ್ತ ಮುರಳೀಧರ ಅವರು ತಮ್ಮ ಪ್ರಾಣದ ಹಂಗು ತೊರೆದು ಹಗ್ಗದ ಸಹಾಯದಿಂದ ಬಾವಿಯೊಳಗೆ ಇಳಿದರು . ನೀರಿನಲ್ಲಿ ಸುಮಾರು ಐದು ಗಂಟೆಗಳಿಂದ ಒದ್ದಾಡುತ್ತಿದ್ದ ಹಸುವಿನ ಹೊಟ್ಟೆಯ ಭಾಗಕ್ಕೆ ಹಗ್ಗ ಕಟ್ಟಿ ಆಧಾರ ನೀಡುವ ಮೂಲಕ ಅದಕ್ಕೆ ನೈತಿಕ ಶಕ್ತಿ ತುಂಬಿದರು.
ಬಾವಿಯಿಂದ ಕೇವಲ ಹಗ್ಗದ ಮೂಲಕ ಗೋವನ್ನು ಮೇಲಕ್ಕೆತ್ತಲು ಯತ್ನಿಸಿದರೆ ಹೊಟ್ಟೆಯಲ್ಲಿರುವ ಕರುವಿನ ಪ್ರಾಣಕ್ಕೆ ತೊಂದರೆಯಾಗುವ ಸಾಧ್ಯತೆ ಇತ್ತು. ಈ ಸೂಕ್ಷ್ಮತೆಯನ್ನು ಅರಿತು ತಕ್ಷಣವೇ ವಿಟ್ಲದ “ವಿಘ್ನೇಶ್ವರ ಕ್ರೇನ್” ಮಾಲಿಕರನ್ನು ಸಂಪರ್ಕಿಸಿ ಸ್ಥಳಕ್ಕೆ ಕರೆಯಿಸಿಕೊಳ್ಳಲಾಯಿತು.
ಮುರಳೀಧರ ಅವರು ಮೂರು ಬಾರಿ ಬಾವಿಯೊಳಗೆ ಇಳಿದು ಹಸುವಿನ ಹೊಟ್ಟೆ, ಎದೆ ಹಾಗೂ ಕುತ್ತಿಗೆಯ ಭಾಗಕ್ಕೆ ಸುರಕ್ಷಿತವಾಗಿ ಬೆಲ್ಟ್ ಅಳವಡಿಸಿದರು. ತದನಂತರ ಕ್ರೇನ್ ಮೂಲಕ ಹಸುವನ್ನು ಅತ್ಯಂತ ಜಾಗರೂಕತೆಯಿಂದ ಮೇಲಕ್ಕೆತ್ತಿ ರಕ್ಷಿಸುವಲ್ಲಿ ಯಶಸ್ವಿಯಾದರು.

ಸ್ಥಳದಲ್ಲೇ ಪಶುವೈದ್ಯರಿಂದ ತುರ್ತು ಚಿಕಿತ್ಸೆ
ಬಾವಿಯಿಂದ ಹಸುವನ್ನು ಮೇಲಕ್ಕೆತ್ತಿದ ತಕ್ಷಣವೇ ಚಿಕಿತ್ಸೆ ನೀಡಲು ಪಶುಸಂಗೋಪನಾ ಇಲಾಖೆಯ 1962 ತುರ್ತು ಅಂಬ್ಯುಲೆನ್ಸ್ ಸೇವೆಯನ್ನು ಸ್ಥಳಕ್ಕೆ ತರಿಸಲಾಗಿತ್ತು. ಪಶುಗಳ ತುರ್ತು ಚಿಕಿತ್ಸಕರಾದ ಡಾ. ಸುನಿಲ್ ಬಂಟ್ವಾಳ, ಚಾಲಕ ಜಯಗಣೇಶ್ ಹಾಗೂ ಅಡ್ಯನಡ್ಕ ಪಶು ಪರಿವೀಕ್ಷಕರಾದ ಲಕ್ಷ್ಮಣ ಸರವು ಅವರ ತಂಡವು ತಕ್ಷಣವೇ ಹಸುವಿಗೆ ಪ್ರಥಮ ಚಿಕಿತ್ಸೆ (ರಕ್ತನಾಳದ ಮೂಲಕ ಗ್ಲುಕೋಸ್/ಔಷಧಿ ನೀಡಿ) ನೀಡಿ ಪರೀಕ್ಷಿಸಿದರು.

43 ಅಡಿ ಆಳಕ್ಕೆ ಬಿದ್ದಿದ್ದರೂ ಹಸುವಿನ ದೇಹಕ್ಕೆ ಯಾವುದೇ ದೊಡ್ಡ ಪ್ರಮಾಣದ ಗಾಯಗಳಾಗಿಲ್ಲ ಹಾಗೂ ಹೊಟ್ಟೆಯಲ್ಲಿದ್ದ ಕರುವಿಗೂ ಯಾವುದೇ ಹಾನಿಯಾಗಿಲ್ಲ, ಕೇವಲ ಕಾಲುಗಳಿಗೆ ಸಣ್ಣಪುಟ್ಟ ಗಾಯಗಳಾಗಿವೆ ಎಂದು ವೈದ್ಯರ ತಂಡ ಸ್ಪಷ್ಟಪಡಿಸಿದೆ.

ಸಾರ್ವಜನಿಕರ ಶ್ಲಾಘನೆ – ಮಾಲಿಕರಿಂದ ಕೃತಜ್ಞತೆ
ಯಾವುದೇ ಫಲಾಪೇಕ್ಷೆ ಇಲ್ಲದೆ, ಕೇವಲ ಮೂಕ ಜೀವದ ರಕ್ಷಣೆಗಾಗಿ ಸಂಪೂರ್ಣ ಸೇವಾ ಮನೋಭಾವದಿಂದ ಸುದೀರ್ಘ ಕಾರ್ಯಾಚರಣೆ ನಡೆಸಿದ ಫ್ರೆಂಡ್ಸ್ ವಿಟ್ಲದ ಮುರಳೀಧರ ಮತ್ತು ತಂಡ, ವಿಟ್ಲದ ವಿಘ್ನೇಶ್ವರ ಕ್ರೇನ್ ಸಂಸ್ಥೆ, ಹಾಗೂ ಸಕಾಲದಲ್ಲಿ ಸ್ಪಂಧಿಸಿದ ಪಶುವೈದ್ಯರ ತಂಡದ ಮಾನವೀಯ ಕಾರ್ಯವನ್ನು ಗ್ರಾಮಸ್ಥರು ಮುಕ್ತಕಂಠದಿಂದ ಶ್ಲಾಘಿಸಿದ್ದಾರೆ. ಹಸುವಿನ ಮಾಲಿಕರಾದ ಸದಾನಂದ ಶೆಟ್ಟಿಯವರು ರಕ್ಷಣಾ ಕಾರ್ಯದಲ್ಲಿ ಸಹಕರಿಸಿದ ಎಲ್ಲರಿಗೂ ಕೈಮುಗಿದು ಕೃತಜ್ಞತೆ ಸಲ್ಲಿಸಿದ್ದಾರೆ.



Dakshina Kannada
ಕಡಬದಲ್ಲಿ ಭಾರಿ ಗಾಳಿ-ಮಳೆಗೆ ದುರಂತ: ಕೃಷಿಕ ಸಾವು, ಮನೆಗೆ ಮರ ಬಿದ್ದು ಮಹಿಳೆಗೆ ಗಂಭೀರ ಗಾಯ! ಸಂತ್ರಸ್ತರಿಗೆ ತಕ್ಷಣದ ಪರಿಹಾರ ನೀಡಲು ಡಿಸಿಎಂ ಡಾ. ಜಿ. ಪರಮೇಶ್ವರ್ ಸೂಚನೆ
ಅಪಾಯಕಾರಿ ಮರ ತೆರವುಗೊಳಿಸಲು ಸಾರ್ವಜನಿಕರ ಆಗ್ರಹ | ಸಂತ್ರಸ್ತರಿಗೆ ತಕ್ಷಣದ ಪರಿಹಾರ ನೀಡಲು ಡಿಸಿ ಜೊತೆ ಚರ್ಚಿಸಿ ಗೃಹ ಸಚಿವ ಡಾ. ಜಿ. ಪರಮೇಶ್ವರ್ ಸೂಚನೆ
ಕಡಬ: ದಕ್ಷಿಣ ಕನ್ನಡ ಜಿಲ್ಲೆಯಾದ್ಯಂತ ಸುರಿಯುತ್ತಿರುವ ಭಾರಿ ಗಾಳಿ ಮತ್ತು ಮಳೆಗೆ ಕಡಬ ತಾಲೂಕಿನಲ್ಲಿ ಸಾಲು ಸಾಲು ದುರಂತಗಳು ಸಂಭವಿಸಿವೆ. ಅಡಿಕೆ ಮರ ಮುರಿದು ಬಿದ್ದು ಕೃಷಿಕರೊಬ್ಬರು ಸ್ಥಳದಲ್ಲೇ ಸಾವನ್ನಪ್ಪಿದ್ದರೆ, ಮನೆಗೆ ಮರ ಬಿದ್ದು ಮಹಿಳೆಯೊಬ್ಬರು ಗಂಭೀರವಾಗಿ ಗಾಯಗೊಂಡಿದ್ದಾರೆ. ಇನ್ನೊಂದೆಡೆ ರಸ್ತೆಗೆ ಮರ ಬಿದ್ದು ಬೈಕ್ ಸವಾರನೊಬ್ಬ ಗಾಯಗೊಂಡಿರುವ ಘಟನೆಗಳು ವರದಿಯಾಗಿವೆ.
ಅಡಿಕೆ ತೋಟದಲ್ಲಿ ಕೆಲಸ ಮಾಡುತ್ತಿದ್ದಾಗ ಧರೆಗುರುಳಿದ ಅಡಿಕೆ ಮರ!
ಕಡಬ ತಾಲೂಕಿನ ಕುಂತೂರು ಗ್ರಾಮದ ‘ಗುತ್ತುಪಾಲು’ ಎಂಬಲ್ಲಿ ಶುಕ್ರವಾರ ಅಡಿಕೆ ತೋಟದಲ್ಲಿ ಕೆಲಸ ಮಾಡುತ್ತಿದ್ದ ವೇಳೆ, ದಿಢೀರ್ ಬೀಸಿದ ಭಾರಿ ಬಿರುಗಾಳಿಗೆ ಅಡಿಕೆ ಮರವೊಂದು ಮುರಿದುಬಿದ್ದಿದೆ. ತೋಟದಲ್ಲಿದ್ದ ಕೃಷಿ ಕಾರ್ಮಿಕ ಕುಂತೂರು ಗ್ರಾಮದ ಕೇವಳ ನಿವಾಸಿ ಯಾದವ ಗೌಡ (೬೬) ಅವರ ಮೈಮೇಲೆ ಮರ ಬಿದ್ದ ಪರಿಣಾಮ ಅವರು ಸ್ಥಳದಲ್ಲೇ ಕೊನೆಯುಸಿರೆಳೆದಿದ್ದಾರೆ.
ಇವರೊಂದಿಗೆ ಕೆಲಸ ಮಾಡುತ್ತಿದ್ದ ಇತರ ಮೂವರು ಕಾರ್ಮಿಕರು ಕೂದಲೆಳೆ ಅಂತರದಲ್ಲಿ ಅಪಾಯದಿಂದ ಪಾರಾಗಿದ್ದಾರೆ. ಮೃತರು ಪತ್ನಿ ಹಾಗೂ ನಾಲ್ವರು ಪುತ್ರಿಯರನ್ನು ಅಗಲಿದ್ದಾರೆ. ಮೃತದೇಹವನ್ನು ಕಡಬ ಸಮುದಾಯ ಆಸ್ಪತ್ರೆಯ ಶವಾಗಾರಕ್ಕೆ ರವಾನಿಸಲಾಗಿದೆ.
ಮನೆ ಮೇಲೆ ಬಿದ್ದ ಬೃಹತ್ ಮರ: ಸೀತಮ್ಮ ಗಂಭೀರ
ಇನ್ನೊಂದೆಡೆ ಬಳ್ಪ ಗ್ರಾಮದ ನೇರ್ಪು ಎಂಬಲ್ಲಿ ಪರಮೇಶ್ವರ ಗೌಡ ಎಂಬವರ ಮನೆ ಮೇಲೆ ಶುಕ್ರವಾರ ಬೃಹತ್ ಮರವೊಂದು ಧರೆಗುರುಳಿದೆ. ಮರ ಬಿದ್ದ ರಭಸಕ್ಕೆ ಮನೆಯಲ್ಲಿದ್ದ ಅವರ ಪತ್ನಿ ಸೀತಮ್ಮ ಅವರಿಗೆ ಗಂಭೀರ ಗಾಯಗಳಾಗಿದ್ದು, ಅವರನ್ನು ತಕ್ಷಣವೇ ಆಸ್ಪತ್ರೆಗೆ ದಾಖಲಿಸಿ ಚಿಕಿತ್ಸೆ ಕೊಡಿಸಲಾಗುತ್ತಿದೆ.
ಬೈಕ್ ಸವಾರನಿಗೆ ಗಾಯ: ಜೀವಭಯದಲ್ಲೇ ಸಾರ್ವಜನಿಕರ ಸಂಚಾರ!
ಶುಕ್ರವಾರ ಸಂಜೆ ವೇಳೆ ಪೆರಾಬೆ ಗ್ರಾಮದ ಸುರುಳಿ ಕಲ್ಲಡ್ಕ (ಮಾಪಲ) ಬಳಿ ರಸ್ತೆಗೆ ಬೃಹತ್ ಮರ ಬಿದ್ದು, ಆ ಹಾದಿಯಲ್ಲಿ ಬೈಕ್ನಲ್ಲಿ ಸಂಚರಿಸುತ್ತಿದ್ದ ಇಚ್ಚೂರು ನಿವಾಸಿ ಗೀತೇಶ್ ಎಂಬುವರಿಗೆ ಸಣ್ಣಪುಟ್ಟ ಗಾಯಗಳಾಗಿವೆ.
ಸಾರ್ವಜನಿಕರ ಆಕ್ರೋಶ:
ಸುರುಳಿ ಮಾಪಲ ಮೂಲಕ ನೆಲ್ಯಾಡಿಗೆ ಸಂಪರ್ಕಿಸುವ ಮುಖ್ಯ ರಸ್ತೆಯುದ್ದಕ್ಕೂ ಬೃಹತ್ ಗಾತ್ರದ ಅಪಾಯಕಾರಿ ಮರಗಳು ರಸ್ತೆಯತ್ತ ಬಾಗಿವೆ. ಈ ರಸ್ತೆಯಲ್ಲಿ ನಿರಂತರ ವಾಹನ ಸಂಚಾರವಿದ್ದು, ಪ್ರಯಾಣಿಕರು ಜೀವ ಕೈಯಲ್ಲಿಡಿದು ಸಂಚರಿಸಬೇಕಾದ ಪರಿಸ್ಥಿತಿ ನಿರ್ಮಾಣವಾಗಿದೆ. ಅಪಾಯ ಸಂಭವಿಸುವ ಮುನ್ನವೇ ಸಂಬಂಧಪಟ್ಟ ಅಧಿಕಾರಿಗಳು ಇವುಗಳನ್ನು ತೆರವುಗೊಳಿಸಬೇಕೆಂದು ಸಾರ್ವಜನಿಕರು ತೀವ್ರ ಆಗ್ರಹ ವ್ಯಕ್ತಪಡಿಸಿದ್ದಾರೆ.
‘ಎಕ್ಸ್’ನಲ್ಲಿ ಸಾಂತ್ವನ: ಶೀಘ್ರ ಪರಿಹಾರಕ್ಕೆ ಡಾ. ಜಿ. ಪರಮೇಶ್ವರ್ ಸೂಚನೆ
ಕಡಬ ತಾಲೂಕಿನಲ್ಲಿ ಸಂಭವಿಸಿದ ಈ ಸಾಲು ಸಾಲು ಅವಘಡಗಳ ಕುರಿತು ಉಪ ಮುಖ್ಯಮಂತ್ರಿ ಹಾಗೂ ಗೃಹ ಸಚಿವ ಡಾ. ಜಿ. ಪರಮೇಶ್ವರ್ ಅವರು ಸಾಮಾಜಿಕ ಜಾಲತಾಣ ‘ಎಕ್ಸ್’ (ಟ್ವಿಟರ್) ಮೂಲಕ ತೀವ್ರ ಆತಂಕ ಹಾಗೂ ದುಃಖ ವ್ಯಕ್ತಪಡಿಸಿದ್ದಾರೆ.
ಶೀಘ್ರ ಪರಿಹಾರಕ್ಕೆ ಆದೇಶ: ಘಟನೆ ಸಂಬಂಧ ದಕ್ಷಿಣ ಕನ್ನಡ ಜಿಲ್ಲಾಧಿಕಾರಿಗಳೊಂದಿಗೆ ಸುದೀರ್ಘವಾಗಿ ಚರ್ಚಿಸಿರುವುದಾಗಿ ತಿಳಿಸಿದ ಸಚಿವರು, ನೊಂದ ಹಾಗೂ ಸಂತ್ರಸ್ತ ಕುಟುಂಬಗಳಿಗೆ ಸರ್ಕಾರದಿಂದ ತಕ್ಷಣವೇ ಸಿಗಬೇಕಾದ ಸೂಕ್ತ ಪರಿಹಾರ ಧನವನ್ನು ಆದಷ್ಟು ಬೇಗ ವಿತರಿಸುವಂತೆ ಅಧಿಕಾರಿಗಳಿಗೆ ಸ್ಪಷ್ಟ ಸೂಚನೆ ನೀಡಿದ್ದಾರೆ.
ಮರಗಳ ತೆರವುಗೊಳಿಸಿ – ಸಚಿವರ ಕರೆ: ಮಳೆ-ಬಿರುಗಾಳಿ ತೀವ್ರವಾಗಿರುವ ಈ ಸಮಯದಲ್ಲಿ ಮನೆಯ ಸುತ್ತಮುತ್ತ ಅಪಾಯಕಾರಿಯಾಗಿ ನಿಂತಿರುವ ಮರಗಳನ್ನು ತಕ್ಷಣವೇ ತೆರವುಗೊಳಿಸಬೇಕು. ಗಾಳಿ ಜೋರಾಗಿ ಬೀಸುವಾಗ ಮರದ ಕೆಳಗೆ ನಿಲ್ಲದೆ ಸಾರ್ವಜನಿಕರು ಸುರಕ್ಷತೆಗೆ ಹೆಚ್ಚಿನ ಆದ್ಯತೆ ನೀಡಬೇಕೆಂದು ಅವರು ವಿನಂತಿಸಿದ್ದಾರೆ.
ಘಟನಾ ಸ್ಥಳಕ್ಕೆ ಕಡಬ ತಾಲೂಕು ಆಡಳಿತದ ಅಧಿಕಾರಿಗಳು ಭೇಟಿ ನೀಡಿ ಪರಿಶೀಲನೆ ನಡೆಸಿದ್ದು, ಬಾಧಿತ ಕುಟುಂಬಗಳಿಗೆ ಸಾಂತ್ವನ ಹೇಳಿ ಶೀಘ್ರ ಪರಿಹಾರ ದೊರಕಿಸುವ ಭರವಸೆ ನೀಡಿದ್ದಾರೆ.
Bantawala
3 ದಿನಗಳಿಂದ ನಾಪತ್ತೆಯಾಗಿದ್ದ ವೃದ್ಧ ತೋಟದ ಚರಂಡಿಯಲ್ಲಿ ಪತ್ತೆ: ಆಸ್ಪತ್ರೆಗೆ ದಾಖಲು
ವಿಟ್ಲ: ಬಂಟ್ವಾಳ ತಾಲೂಕಿನ ವಿಟ್ಲ ಪಡ್ನೂರು ಗ್ರಾಮದ ಕುಕ್ಕಿಲ ನಿವಾಸಿ ಗಿರಿಯಪ್ಪ ಸಪಲ್ಯ (75) ಎಂಬವರು ಕಳೆದ ಮೂರು ದಿನಗಳಿಂದ ನಿಗೂಢವಾಗಿ ನಾಪತ್ತೆಯಾಗಿದ್ದು, ಇಂದು ಬೆಳಿಗ್ಗೆ ಅಡಿಕೆ ತೋಟದ ಚರಂಡಿಯಲ್ಲಿ ಜೀವನ್ಮರಣ ಸ್ಥಿತಿಯಲ್ಲಿ ಪತ್ತೆಯಾಗಿದ್ದಾರೆ.
ಕಳೆದ ಮೂರು ದಿನಗಳಿಂದ ವೃದ್ಧ ಕಾಣೆಯಾಗಿದ್ದರಿಂದ ಅವರ ಸಂಬಂಧಿಕರು ಹಾಗೂ ಸ್ಥಳೀಯ ಸಾರ್ವಜನಿಕರು ಸುತ್ತಮುತ್ತಲ ಪ್ರದೇಶಗಳಲ್ಲಿ ತೀವ್ರ ಹುಡುಕಾಟ ನಡೆಸಿದ್ದರೂ ಯಾವುದೇ ಸುಳಿವು ಸಿಕ್ಕಿರಲಿಲ್ಲ. ಆದರೆ, ಇಂದು ಬೆಳಿಗ್ಗೆ ಕುಕ್ಕಿಲದ ಪುರಂದರ ಭಟ್ ಎಂಬವರ ಅಡಿಕೆ ತೋಟದ ನೀರು ಹರಿಯುವ ಚರಂಡಿಯಲ್ಲಿ ವೃದ್ಧ ತೀವ್ರ ಅಸ್ವಸ್ಥಗೊಂಡ ಸ್ಥಿತಿಯಲ್ಲಿ ಬಿದ್ದಿರುವುದನ್ನು ಸಾರ್ವಜನಿಕರು ಗಮನಿಸಿದ್ದಾರೆ.
ತಕ್ಷಣವೇ ಕಾರ್ಯಪ್ರವೃತ್ತರಾದ ಸ್ಥಳೀಯರು ಅವರಿಗೆ ಪ್ರಾಥಮಿಕ ಶುಶ್ರೂಷೆ ನೀಡಿ, ವಿಟ್ಲದ ಆಪದ್ಬಾಂಧವ ಮುರಳಿ ವಿಟ್ಲ ಅವರಿಗೆ ಮಾಹಿತಿ ತಲುಪಿಸಿದ್ದಾರೆ. ಬಳಿಕ ಅಂಬ್ಯುಲೆನ್ಸ್ ಮೂಲಕ ಅವರನ್ನು ವಿಟ್ಲಕ್ಕೆ ಕರೆತಂದು, ಹೆಚ್ಚಿನ ಚಿಕಿತ್ಸೆಗೆ ವಿಟ್ಲ ಸರ್ಕಾರಿ ಆಸ್ಪತ್ರೆಗೆ ದಾಖಲಿಸಲಾಗಿದೆ. ಪ್ರಸ್ತುತ ವೃದ್ಧರು ಚಿಕಿತ್ಸೆಗೆ ಸ್ಪಂದಿಸುತ್ತಿದ್ದು, ಪ್ರಾಣಾಪಾಯದಿಂದ ಪಾರಾಗಿದ್ದಾರೆ ಎಂದು ತಿಳಿದುಬಂದಿದೆ.
ಸಾರ್ವಜನಿಕರಲ್ಲಿ ಮೂಡಿದ ಹಲವು ಅನುಮಾನಗಳು: ಆರ್ಥಿಕವಾಗಿ ಸದೃಢವಾಗಿದ್ದ ಗಿರಿಯಪ್ಪ ಸಪಲ್ಯ ಅವರು ಈ ಭಾರಿ ಮಳೆಯ ನಡುವೆ ಬೇರೆಯವರ ತೋಟಕ್ಕೆ ಯಾಕೆ ಹೋದರು? ಅವರನ್ನು ಯಾರಾದರೂ ಅಲ್ಲಿಗೆ ಕರೆದುಕೊಂಡು ಹೋದರೇ? ಅಥವಾ ದಾರಿ ತಪ್ಪಿ ಬಿದ್ದರಾ? ಎಂಬ ಹಲವಾರು ಪ್ರಶ್ನೆಗಳು ಸ್ಥಳೀಯವಾಗಿ ಕಾಡುತ್ತಿವೆ. ಪ್ರಸ್ತುತ ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿರುವ ವೃದ್ಧರು ಚೇತರಿಸಿಕೊಂಡ ನಂತರವಷ್ಟೇ ಈ ಎಲ್ಲಾ ಅನುಮಾನಗಳಿಗೆ ಹಾಗೂ ಘಟನೆಯ ನೈಜತೆಗೆ ಸ್ಪಷ್ಟ ಉತ್ತರ ಸಿಗಬೇಕಿದೆ.
Bantawala
ಖಾಸಗಿ ಬಸ್ಸಿನಲ್ಲಿ ಮಹಿಳೆಯರಿಗೆ ಗುಪ್ತಾಂಗ ಪ್ರದರ್ಶನ: ಅರ್ಚಕನ ವಿಕೃತಿ ಕ್ಯಾಮೆರಾದಲ್ಲಿ ಸೆರೆ, ವೀಡಿಯೋ ವೈರಲ್!
ಬಂಟ್ವಾಳ/ಮಂಗಳೂರು: ಸಮಾಜದಲ್ಲಿ ಗೌರವಾನ್ವಿತ ಸ್ಥಾನದಲ್ಲಿರಬೇಕಾದ ವ್ಯಕ್ತಿಯೊಬ್ಬ ಸಾರ್ವಜನಿಕ ಸಾರಿಗೆಯಲ್ಲಿ ಅಸಭ್ಯವಾಗಿ ವರ್ತಿಸಿ ಸಾರ್ವಜನಿಕರು ತಲೆತಗ್ಗಿಸುವಂತೆ ಮಾಡಿರುವ ಘಟನೆ ಮಂಗಳೂರು-ಉಪ್ಪಿನಂಗಡಿ ಮಾರ್ಗದ ಖಾಸಗಿ ಬಸ್ಸಿನಲ್ಲಿ ನಡೆದಿದೆ. ಚಲಿಸುವ ಬಸ್ಸಿನಲ್ಲಿ ಮಹಿಳೆಯರ ಎದುರಲ್ಲೇ ಗುಪ್ತಾಂಗ ಪ್ರದರ್ಶಿಸಿ ವಿಕೃತ ಕಾಮ ಮೆರೆದ ದೃಶ್ಯಗಳು ಜಾಲತಾಣಗಳಲ್ಲಿ ತೀವ್ರ ವೈರಲ್ ಆಗಿವೆ.
ಘಟನೆಯ ವಿವರ: ಅರ್ಚಕ ವೃತ್ತಿ ಮಾಡುತ್ತಿದ್ದ ವೃದ್ಧ ವ್ಯಕ್ತಿಯೊಬ್ಬ ಬಿಸಿರೋಡಿನಲ್ಲಿ ಮಂಗಳೂರು – ಉಪ್ಪಿನಂಗಡಿ ಮಾರ್ಗದ ಖಾಸಗಿ ಬಸ್ಸನ್ನೇರಿದ್ದಾನೆ. ಚಾಲಕನ ಎಡಬದಿಯಲ್ಲಿದ್ದ ಉದ್ದನೆಯ ಸೀಟಿನಲ್ಲಿ ಕುಳಿತಿದ್ದ ಈತ, ಲುಂಗಿಯನ್ನು ಮಡಚಿಕೊಂಡು ಎದುರಿನ ಸೀಟಿನಲ್ಲಿದ್ದ ಮಹಿಳಾ ಪ್ರಯಾಣಿಕರ ಕಡೆಗೆ ಅಸಹ್ಯಕರ ಹಾಗೂ ವಿಕೃತ ರೀತಿಯಲ್ಲಿ ಗುಪ್ತಾಂಗ ಪ್ರದರ್ಶಿಸಿದ್ದಾನೆ.
ಕ್ಯಾಮೆರಾದಲ್ಲಿ ಸೆರೆಯಾಯ್ತು ವಿಕೃತಿ: ಬಸ್ಸಿನಲ್ಲಿದ್ದ ಈತನ ನೀಚ ಕೃತ್ಯವನ್ನು ಕಂಡು ರೊಚ್ಚಿಗೆದ್ದ ಮಹಿಳೆಯೊಬ್ಬರು ಧೈರ್ಯದಿಂದ ತಮ್ಮ ಮೊಬೈಲ್ನಲ್ಲಿ ಸಂಪೂರ್ಣ ವೀಡಿಯೋ ರೆಕಾರ್ಡ್ ಮಾಡಿದ್ದಾರೆ. ಮಹಿಳೆ ವೀಡಿಯೋ ಮಾಡುತ್ತಿರುವುದನ್ನು ಗಮನಿಸಿದ ಆ ವೃದ್ಧ ಅರ್ಚಕ ತಕ್ಷಣ ಭಯಗೊಂಡು, ಮೆಲ್ಕಾರ್ ಜಂಕ್ಷನ್ ತಲುಪುತ್ತಿದ್ದಂತೆ ಬಸ್ಸಿನಿಂದ ಇಳಿದು ಪರಾರಿಯಾಗಿದ್ದಾನೆ.
ಆರೋಪಿಯ ಗುರುತು ಪತ್ತೆ: ಸಾಮಾಜಿಕ ಜಾಲತಾಣಗಳಲ್ಲಿ ವೀಡಿಯೋ ವೈರಲ್ ಆಗುತ್ತಿದ್ದಂತೆ ಸಾರ್ವಜನಿಕರು ಆರೋಪಿಯ ಗುರುತನ್ನು ಪತ್ತೆ ಹಚ್ಚಿದ್ದಾರೆ. ವಿಕೃತವಾಗಿ ವರ್ತಿಸಿದ ವ್ಯಕ್ತಿಯನ್ನು ಬಂಟ್ವಾಳ ತಾಲೂಕಿನ ಪೆರಾಜೆ ಗ್ರಾಮದ ಸಾದಿಕುಕ್ಕು ಅಂಗನವಾಡಿ ಬಳಿಯ ನಿವಾಸಿ, ವೃತ್ತಿಯಲ್ಲಿ ಅರ್ಚಕ ಎಂದು ಗುರುತಿಸಲಾಗಿದೆ.
ಇತ್ತೀಚೆಗಷ್ಟೇ ಖಾಸಗಿ ಬಸ್ ಕಂಡಕ್ಟರ್ ಒಬ್ಬ ಬಸ್ಸಿನೊಳಗೆ ಇದೇ ರೀತಿ ಅಸಭ್ಯವಾಗಿ ವರ್ತಿಸಿ ಸಾರ್ವಜನಿಕ ಆಕ್ರೋಶಕ್ಕೆ ಈಡಾಗಿದ್ದ. ಇದೀಗ ಪೂಜೆ-ಪುನಸ್ಕಾರಗಳನ್ನು ಮಾಡುವ ಧಾರ್ಮಿಕ ವೃತ್ತಿಯಲ್ಲಿದ್ದುಕೊಂಡು, ಸಮಾಜದಲ್ಲಿ ಗೌರವ ಪಡೆಯುತ್ತಿದ್ದ ವಯೋವೃದ್ಧ ಅರ್ಚಕನೇ ಇಂತಹ ವಿಕೃತ ಕೃತ್ಯಕ್ಕೆ ಕೈಹಾಕಿರುವುದು ಸಾರ್ವಜನಿಕರ ತೀವ್ರ ಆಕ್ರೋಶಕ್ಕೆ ಕಾರಣವಾಗಿದೆ.
ಧೈರ್ಯದಿಂದ ವೀಡಿಯೋ ಮಾಡಿ ಈತನ ನಿಜ ಬಣ್ಣ ಬಯಲು ಮಾಡಿದ ಮಹಿಳೆಯ ನಡೆಗೆ ವ್ಯಾಪಕ ಪ್ರಶಂಸೆ ವ್ಯಕ್ತವಾಗುತ್ತಿದ್ದು, ಈ ವಿಕೃತಕಾಮಿಯ ವಿರುದ್ಧ ಪೊಲೀಸರು ಸ್ವಯಂಪ್ರೇರಿತ ಪ್ರಕರಣ ದಾಖಲಿಸಿಕೊಂಡು ಸೂಕ್ತ ಕಾನೂನು ಕ್ರಮ ಕೈಗೊಳ್ಳಬೇಕೆಂದು ಸಾರ್ವಜನಿಕರು ಆಗ್ರಹಿಸಿದ್ದಾರೆ
-
Bantawala3 weeks agoಬಂಟ್ವಾಳದಲ್ಲಿ ಭೀಕರ ಹತ್ಯಾಕಾಂಡ: ಬಸ್ನಲ್ಲಿ ಕುಳಿತಿದ್ದ ಯುವತಿಯನ್ನು ಸಾರ್ವಜನಿಕರೆದುರೇ ಕೊಚ್ಚಿ ಕೊಂದ ತಲೆಹರಟೆ ಪ್ರೇಮಿ!
-
crime6 months agoಅತ್ಯಾಚಾರ ಯತ್ನಕ್ಕೆ ತಡೆದ ಸೊಸೆಯ ಮುಖಕ್ಕೆ ಕಚ್ಚಿ ಕೊಲೆಗೆ ಯತ್ನಿಸಿದ ಮಾವ..ತಂದೆಯ ರಾಕ್ಷಸೀ ಕೃತ್ಯಕ್ಕೆ ಬೆಂಬಲಿಸಿದ ಗಂಡ..ಸುಳ್ಯ ಠಾಣಾ ವ್ಯಾಪ್ತಿಯಲ್ಲಿ ಅದೃಷ್ಟವಶಾತ್ ಬಚಾವಾದ ಸೊಸೆ..
-
crime4 months agoಧಾರ್ಮಿಕ ನಂಬಿಕೆಗೆ ಅವಮಾನ: ಕೊಡಗಿನ ಎಮ್ಮೆಮಾಡಿನಲ್ಲಿ ದೈವದ ವೇಷದಂತೆ ಧರಿಸಿ ಮದುಮಗನ ಅತಿರೇಕದ ವರ್ತನೆ!
-
Bantawala4 months agoವಿಟ್ಲದಲ್ಲಿ ನಡೆಯಿತೊಂದು ದೈವ ಕಾರಣಿಕ; ಪೊಲೀಸರ ಕಣ್ಣಿಗೆ ಮಣ್ಣೆರಚಿದರೂ ದೈವದ ದೃಷ್ಟಿಗೆ ತತ್ತರಿಸಿದ ದನಕಳ್ಳ..
-
accident2 weeks agoBreaking: ಬಂಟ್ವಾಳದಲ್ಲಿ ಶಾಲಾ ಬಸ್ ಮೇಲೆ ಉರುಳಿದ ಬೃಹತ್ ಮರ; ಕಲ್ಲಡ್ಕ ಶ್ರೀರಾಮ ಶಾಲೆಯ ಓರ್ವ ವಿದ್ಯಾರ್ಥಿ ಸಾವು, ಕೆಲವರು ಗಂಭೀರ, ಹಲವರಿಗೆ ಗಾಯ!
-
Bantawala7 months agoನಾಗಬನ, ರಕ್ತೇಶ್ವರಿ ತಾಣ, ದೈವದೇವರ ಸಾನಿಧ್ಯ ದ್ವಂಸ ಗೊಳಿಸಿದ ಧರ್ಮದ್ರೋಹಿ ಕೃತ್ಯದ ವಿರುದ್ಧ ಭಕ್ತರ ಆಕ್ರೋಶ ; ನಾಶವಾದ ಸಾನಿಧ್ಯದಲ್ಲಿಯೇ ಸ್ವಾಮೀಜಿಯವರ ಮಾರ್ಗದರ್ಶನದಲ್ಲಿ ಕುಟುಂಬಸ್ತರು, ಸಾರ್ವಜನಿಕರ ಸಾಮೂಹಿಕ ಪ್ರಾರ್ಥನೆ
-
accident3 months agoವಿಟ್ಲ ಆಕಾಶದಲ್ಲಿ ಹಾರಾಡಿದ ವಿಮಾನ: ತಾಂತ್ರಿಕ ದೋಷವಲ್ಲ, ಹವಾಮಾನ ವೈಪರೀತ್ಯದ ಕಾರಣ ! ಸಾರ್ವಜನಿಕರು ಆತಂಕ ಪಡುವ ಅಗತ್ಯವಿಲ್ಲ
-
Bantawala4 weeks agoಮಂಚಿ ಮೋಂತಿಮಾರು: ಬಸ್ಸಿಗಾಗಿ ಕಾಯುತ್ತಿದ್ದ ಅಪ್ರಾಪ್ತ ವಿದ್ಯಾರ್ಥಿನಿ ಮೇಲೆ ಕತ್ತಿಯಿಂದ ಮಾರಣಾಂತಿಕ ದಾಳಿ; ಯುವತಿ ಗಂಭೀರ
