Connect with us

arrest

ಮಂಗಳೂರು: ಪ್ರತ್ಯೇಕ ಕಡೆ ದಾಳಿ; ನಾಲ್ವರು ಎಂಡಿಎಂಎ ಮಾದಕ ವಸ್ತು ಮಾರಾಟಗಾರರ ಬಂಧನ!

Published

on

ಮಂಗಳೂರು: ನಗರದಲ್ಲಿ ನಿಷೇಧಿತ ಮಾದಕ ವಸ್ತುವಾದ ಎಂಡಿಎಂಎ (MDMA) ಮಾರಾಟ ಮಾಡಲು ಯತ್ನಿಸುತ್ತಿದ್ದ ಎರಡು ಪ್ರತ್ಯೇಕ ಜಾಲಗಳನ್ನು ಭೇದಿಸಿರುವ ಪೊಲೀಸರು, ಒಟ್ಟು ನಾಲ್ವರು ಆರೋಪಿಗಳನ್ನು ಬಂಧಿಸಿ, ಅವರಿಂದ ಮಾದಕ ವಸ್ತು ಹಾಗೂ ನಗದನ್ನು ವಶಪಡಿಸಿಕೊಂಡಿದ್ದಾರೆ.

ಬೆಂದೂರು ಲಾಡ್ಜ್ ಮೇಲೆ ಸಿಸಿಬಿ ದಾಳಿ: ಮೂವರ ಬಂಧನ

ಮಂಗಳೂರು ನಗರದ ಪೂರ್ವ ಪೊಲೀಸ್ ಠಾಣಾ ವ್ಯಾಪ್ತಿಯ ಬೆಂದೂರಿನಲ್ಲಿರುವ ಲಾಡ್ಜ್ ಒಂದರಲ್ಲಿ ಸಾರ್ವಜನಿಕರಿಗೆ ಮಾದಕ ವಸ್ತು ಎಂಡಿಎಂಎ ಮಾರಾಟ ಮಾಡಲು ಯತ್ನಿಸುತ್ತಿರುವ ಬಗ್ಗೆ ಮಂಗಳೂರು ಸಿಸಿಬಿ (CCB) ಘಟಕದ ಅಧಿಕಾರಿಗಳು ಮತ್ತು ಸಿಬ್ಬಂದಿಗೆ ಖಚಿತ ಮಾಹಿತಿ ದೊರೆತಿತ್ತು. ತಕ್ಷಣ ಕಾರ್ಯಪ್ರವೃತ್ತರಾದ ಸಿಸಿಬಿ ತಂಡವು ಜೂನ್ 23 ರಂದು ಲಾಡ್ಜ್ ಮೇಲೆ ದಾಳಿ ನಡೆಸಿ ಮೂವರು ಆರೋಪಿಗಳನ್ನು ಬಂಧಿಸಿದೆ.

ಬಂಧಿತ ಆರೋಪಿಗಳು:

ಮೊಹಮ್ಮದ್ ನದೀಂ (27): ತಂದೆ ದಿ. ಮೊಹಮ್ಮದ್ ಫಕ್ರುದ್ದೀನ್, ವಾಸ: ಹಲಸೂರು, ಬೆಂಗಳೂರು.

ಉಮರುಲ್ ಫಾರೂಕ್ (30): ತಂದೆ ಪಿ.ಎ. ಅಬ್ಬಾಸ್, ವಾಸ: ಸೋಮೇಶ್ವರ, ಉಚ್ಚಿಲ, ಮಂಗಳೂರು.

ಇಮ್ಮಿಯಾಜ್ ಇಸ್ಮಾಯಿಲ್ ಕಿನ್ಯಾ (41): ತಂದೆ ಕೆ.ಐ. ಇಸ್ಮಾಯಿಲ್, ವಾಸ: ಕಿನ್ಯಾ, ಕೆ.ಸಿ. ರೋಡ್, ಮಂಗಳೂರು.

ಬಂಧಿತರಿಂದ 35.53 ಗ್ರಾಂ ಎಂಡಿಎಂಎ ಮಾದಕ ವಸ್ತು ಹಾಗೂ ರೂ. 7,030 ನಗದು ಹಣವನ್ನು ಪೊಲೀಸರು ಸ್ವಾಧೀನಪಡಿಸಿಕೊಂಡಿದ್ದಾರೆ. ಆರೋಪಿಗಳ ವಿರುದ್ಧ ಮಂಗಳೂರು ಪೂರ್ವ ಪೊಲೀಸ್ ಠಾಣೆಯಲ್ಲಿ ಎನ್.ಡಿ.ಪಿ.ಎಸ್ (NDPS) ಕಾಯ್ದೆಯಡಿ (ಪ್ರಕರಣ ದಾಖಲು ಸಂಖ್ಯೆ: 66/2026) ಕೇಸ್ ದಾಖಲಿಸಲಾಗಿದೆ. ಜೂನ್ 24 ರಂದು ಆರೋಪಿಗಳನ್ನು ಮಾನ್ಯ ನ್ಯಾಯಾಲಯಕ್ಕೆ ಹಾಜರುಪಡಿಸಲಾಗಿದ್ದು, ನ್ಯಾಯಾಲಯವು ಅವರಿಗೆ ನ್ಯಾಯಾಂಗ ಬಂಧನ ವಿಧಿಸಿದೆ.

ಬೋಳಾರ ಮುಳಿಹಿತ್ತು ಬಳಿ ಮತ್ತೊಬ್ಬನ ಬಂಧನ

ಇನ್ನೊಂದು ಪ್ರತ್ಯೇಕ ಪ್ರಕರಣದಲ್ಲಿ, ಮಂಗಳೂರು ದಕ್ಷಿಣ ಪೊಲೀಸ್ ಠಾಣಾ ವ್ಯಾಪ್ತಿಯ ಬೋಳಾರದ ಮುಳಿಹಿತ್ತು ಬಳಿ ಸಾರ್ವಜನಿಕರಿಗೆ ಮಾದಕ ವಸ್ತು ಮಾರಾಟ ಮಾಡಲು ಯತ್ನಿಸುತ್ತಿದ್ದ ಆರೋಪಿಯನ್ನು ದಕ್ಷಿಣ ಠಾಣೆಯ ಪೊಲೀಸರು ಜೂನ್ 24 ರಂದು ಬಂಧಿಸಿದ್ದಾರೆ.

ಬಂಧಿತ ಆರೋಪಿ:

ಧನುಷ್ (29): ತಂದೆ ಯತೀಶ್, ವಾಸ: ಸುರಕ್ಷಾ ನಗರ, ಕುಂಪಲ, ಮಂಗಳೂರು ನಗರ.

ಬಂಧಿತ ಧನುಷ್‌ನಿಂದ 3.32 ಗ್ರಾಂ ಎಂಡಿಎಂಎ ಮಾದಕ ವಸ್ತುವನ್ನು ವಶಪಡಿಸಿಕೊಳ್ಳಲಾಗಿದೆ. ಈತನ ವಿರುದ್ಧ ಮಂಗಳೂರು ದಕ್ಷಿಣ ಪೊಲೀಸ್ ಠಾಣೆಯಲ್ಲಿ ಎನ್.ಡಿ.ಪಿ.ಎಸ್ ಕಾಯ್ದೆಯಡಿ (ಪ್ರಕರಣ ದಾಖಲು ಸಂಖ್ಯೆ: 131/2026) ಪ್ರಕರಣ ದಾಖಲಾಗಿದ್ದು, ಆರೋಪಿಯನ್ನು ಮಾನ್ಯ ನ್ಯಾಯಾಲಯದ ಮುಂದೆ ಹಾಜರುಪಡಿಸುವ ಪ್ರಕ್ರಿಯೆ ನಡೆಯುತ್ತಿದೆ.




ads (2)
ads (3)
ads (4)
ads (5)
ads (6)
ads (1)
ads (8)
ads (7)
ಮುಂದಕ್ಕೆ ಓದಲು ಇಲ್ಲಿ ಕ್ಲಿಕ್‌ ಮಾಡಿ
Advertisement

arrest

ಮಂಗಳೂರು: ಲಂಚ ಸ್ವೀಕರಿಸುತ್ತಿದ್ದಾಗ ಲೋಕಾಯುಕ್ತ ಬಲೆಗೆ ಬಿದ್ದ ಬಜ್ಪೆ ಇನ್ಸ್‌ಪೆಕ್ಟರ್ ಬಾಲಕೃಷ್ಣ!

Published

on


​ಮಂಗಳೂರು: ವಂಚನೆ ಪ್ರಕರಣವೊಂದರಲ್ಲಿ ವಶಪಡಿಸಿಕೊಂಡಿದ್ದ ಹಣವನ್ನು ಬಿಡುಗಡೆ ಮಾಡಲು ಲಂಚಕ್ಕೆ ಬೇಡಿಕೆ ಇಟ್ಟಿದ್ದ ಬಜ್ಪೆ ಪೊಲೀಸ್‌ ಠಾಣೆಯ ಪೊಲೀಸ್ ಇನ್ಸ್‌ಪೆಕ್ಟರ್ ಬಾಲಕೃಷ್ಣ ಅವರು ಲೋಕಾಯುಕ್ತ ಪೊಲೀಸರ ಬಲೆಗೆ ಬಿದ್ದಿದ್ದಾರೆ.
​ಕಾರ್ಯಾಚರಣೆಯ ವಿವರ:
​ಬಜ್ಜೆ ಪೊಲೀಸ್ ಠಾಣೆಯಲ್ಲಿ ದಾಖಲಾಗಿದ್ದ ವಂಚನೆ ಪ್ರಕರಣದಲ್ಲಿ ಆರೋಪಿಗಳಿಂದ ಪೊಲೀಸರು ಹಣವನ್ನು ವಶಕ್ಕೆ ಪಡೆದುಕೊಂಡಿದ್ದರು. ಈ ಹಣವನ್ನು ದೂರುದಾರರಿಗೆ ಬಿಡುಗಡೆ ಮಾಡಲು ಇನ್ಸ್‌ಪೆಕ್ಟರ್ ಬಾಲಕೃಷ್ಣ ಅವರು ಒಟ್ಟು ₹25,000 ಲಂಚದ ಹಣಕ್ಕೆ ಬೇಡಿಕೆ ಇಟ್ಟಿದ್ದರು.
​ಈ ಪೈಕಿ ಈಗಾಗಲೇ ₹15,000 ಹಣವನ್ನು ಮುಂಗಡವಾಗಿ ಪಡೆದುಕೊಂಡಿದ್ದ ಇನ್ಸ್‌ಪೆಕ್ಟರ್, ಬಳಿಕ ಹೆಚ್ಚುವರಿಯಾಗಿ ಮತ್ತೊಮ್ಮೆ ₹5,000 ಲಂಚ ನೀಡುವಂತೆ ಪಟ್ಟು ಹಿಡಿದಿದ್ದರು. ಇದರಿಂದ ಬೇಸತ್ತ ಫಿರ್ಯಾದುದಾರರು ಮಂಗಳೂರು ಲೋಕಾಯುಕ್ತ ಪೊಲೀಸ್‌ ಠಾಣೆಗೆ ದೂರು ನೀಡಿದ್ದರು.
​ದೂರಿನ ಅನ್ವಯ ಸೆಪ್ಟೆಂಬರ್ 21ರ ಸಂಜೆ ಕಾರ್ಯಾಚರಣೆ ನಡೆಸಿದ ಲೋಕಾಯುಕ್ತ ಪೊಲೀಸರು, ದೂರುದಾರರಿಂದ ₹5,000 ಲಂಚ ಸ್ವೀಕರಿಸುತ್ತಿದ್ದ ವೇಳೆಯಲ್ಲೇ ಇನ್ಸ್‌ಪೆಕ್ಟರ್ ಬಾಲಕೃಷ್ಣ ಅವರನ್ನು ರೆಡ್ ಹ್ಯಾಂಡ್ ಆಗಿ ಹಿಡಿದು ವಶಕ್ಕೆ ಪಡೆದಿದ್ದಾರೆ. ಪ್ರಸ್ತುತ ಲೋಕಾಯುಕ್ತ ಪೊಲೀಸರು ಮುಂದಿನ ಕಾನೂನು ಕ್ರಮ ಹಾಗೂ ತನಿಖೆಯನ್ನು ಕೈಗೊಂಡಿದ್ದಾರೆ.


​ಹಿನ್ನೆಲೆ ಮತ್ತು ಹಳೆಯ ಆರೋಪಗಳು:
​ಈ ಹಿಂದೆ ಉಳ್ಳಾಲ ಠಾಣೆಯಲ್ಲಿದ್ದಾಗಲೂ ಬಾಲಕೃಷ್ಣ ಅವರ ಮೇಲೆ ಭ್ರಷ್ಟಾಚಾರದ ಸಾಲು ಸಾಲು ಆರೋಪಗಳು ಕೇಳಿಬಂದಿದ್ದವು:
​ಕಳ್ಳತನ ಪ್ರಕರಣದಲ್ಲಿ ಲಂಚ: ಉಳ್ಳಾಲದ ಮನೆಯೊಂದರಲ್ಲಿ ₹15 ಲಕ್ಷ ಮೌಲ್ಯದ ಚಿನ್ನಾಭರಣ ಕಳ್ಳತನವಾದ ಪ್ರಕರಣದಲ್ಲಿ ಮಾರಾಟ ಮಾಡಿದ್ದ ಚಿನ್ನಾಭರಣ ವಶಪಡಿಸಿಕೊಳ್ಳುವಾಗಲೂ ಲಂಚ ಪಡೆದ ಆರೋಪವಿತ್ತು.

​ ಪ್ರಕರಣ ಮುಚ್ಚಿಹಾಕಲು ದಂಧೆ:
ಬೆಳ್ತಂಗಡಿ ಮೂಲದ ಯುವಕನೊಬ್ಬನ ತಾಯಿಯಿಂದ ಪ್ರಕರಣ ಮುಚ್ಚಿಹಾಕಲು ₹3 ಲಕ್ಷ ರೂಪಾಯಿ ಪೀಕಿಸಿದ್ದಲ್ಲದೆ, ಮಗನ ಚಿನ್ನಾಭರಣ ಎಗರಿಸಿದ ಆರೋಪ ಕೇಳಿಬಂದಿತ್ತು. ಈ ಕುರಿತು ಅಂದಿನ ಪೊಲೀಸ್ ಕಮಿಷನರ್‌ಗೆ ದೂರು ನೀಡಿದ್ದಾಗ, ಇಲಾಖಾ ವಿಚಾರಣೆ ವೇಳೆ ದೂರುದಾರ ಮಹಿಳೆಗೆ ₹4.5 ಲಕ್ಷ ರೂಪಾಯಿ ನೀಡಿ ಕೇಸ್ ಹಿಂಪಡೆಯುವಂತೆ ಮಾಡಿದ್ದರೆನ್ನಲಾಗಿದೆ.


​ವರ್ಗಾವಣೆ ನಾಟಕ: ಉಳ್ಳಾಲದ ಮರಳು ದಂಧೆಕೋರರ ಸಾಲಿಗೆ ಸಿಲುಕಿ ವರ್ಗಾವಣೆಯಾಗಿದ್ದ ಇವರು, ಬಳಿಕ ಪಾಂಡೇಶ್ವರ ಮಹಿಳಾ ಠಾಣೆಗೆ ಸೇರಿ, ಪ್ರಸ್ತುತ ಬಜ್ಜೆ ಠಾಣೆಯಲ್ಲಿ ಕರ್ತವ್ಯ ನಿರ್ವಹಿಸುತ್ತಿದ್ದರು.


ಮುಖ್ಯಮಂತ್ರಿ ಪದಕದ ವಿವಾದ.! ಕೋಟೆಕಾರು ಬ್ಯಾಂಕ್ ದರೋಡೆ ಪ್ರಕರಣದಲ್ಲಿ ಇತರೆ ತಂಡಗಳು ಶ್ರಮವಹಿಸಿ ಆರೋಪಿಗಳನ್ನು ಬಂಧಿಸಿದ್ದರೂ, ಅದರ ನೆಪದಲ್ಲಿ ಅಂದಿನ ಇನ್ಸ್‌ಪೆಕ್ಟರ್ ಬಾಲಕೃಷ್ಣ ಅವರ ಹೆಸರನ್ನು ಮುಖ್ಯಮಂತ್ರಿ ಪದಕಕ್ಕೆ ಶಿಫಾರಸು ಮಾಡಿದ್ದು ಭಾರೀ ಸುದ್ದಿಯಾಗಿತ್ತು.

Continue Reading

arrest

ಕಾಸರಗೋಡು: ವಿವಾಹಿತ ಮಹಿಳೆಯ ಗೆಳೆಯನ ಜೊತೆ ನಿಲ್ಲಿಸಿ ಗೂಂಡಾಗಿರಿ, ಫೋಟೋ ತೋರಿಸಿ ಬ್ಲ್ಯಾಕ್ ಮೇಲ್ – ಐವರ ಬಂಧನ

Published

on

ಕಾಸರಗೋಡು: ವಿವಾಹಿತ ಮಹಿಳೆಯ ಮನೆಗೆ ಅಕ್ರಮ ಪ್ರವೇಶ ಮಾಡಿ ಗೂಂಡಾಗಿರಿ ನಡೆಸಿ, ಆಕೆ ಮತ್ತು ಆಕೆಯ ಪುರುಷ ಸ್ನೇಹಿತನನ್ನು ಬೆದರಿಸಿ ಹಣ ಮತ್ತು ಚಿನ್ನಾಭರಣ ಸುಲಿಗೆ ಮಾಡಿದ ಪ್ರಕರಣಕ್ಕೆ ಸಂಬಂಧಿಸಿದಂತೆ ಐವರು ಆರೋಪಿಗಳನ್ನು ವಿದ್ಯಾನಗರ ಪೊಲೀಸರು ಬಂಧಿಸಿದ್ದಾರೆ.

ಬಂಧಿತರನ್ನು ಮುಳಿಯಾರು ಪೊವ್ವಲ್ ನ ಬಿ. ಶರೀಫ್ (42), ಚೆಂಗಳ ಸಂತೋಷ್ ನಗರದ ಮೊಹಮ್ಮದ್ ಸಾಲಿಹ್ (22), ನಾಲ್ಕನೇ ಮೈಲ್ ನಿವಾಸಿಗಳಾದ ಉಮರ್ ಮುಖ್ತಾರ್ (18), ಮೊಹಮ್ಮದ್ ಶಿಹಾನ್ (20) ಹಾಗೂ ಆಲಂಪಾಡಿಯ ಅಬ್ದುಲ್ ರಶೀದ್ (36) ಎಂದು ಗುರುತಿಸಲಾಗಿದೆ. ಆರೋಪಿಗಳನ್ನು ನ್ಯಾಯಾಲಯಕ್ಕೆ ಹಾಜರುಪಡಿಸಲಾಗಿದ್ದು, ನ್ಯಾಯಾಂಗ ಬಂಧನಕ್ಕೆ ಒಪ್ಪಿಸಲಾಗಿದೆ.

ಘಟನೆ ಏನು?
ಮಹಿಳೆಯ ಮನೆಗೆ ಆಕೆಯ ಪುರುಷ ಸ್ನೇಹಿತ ಬಂದಿದ್ದ ವೇಳೆ ಆರೋಪಿಗಳ ಗುಂಪು ಅಕ್ರಮವಾಗಿ ಮನೆ ಪ್ರವೇಶ ಮಾಡಿದೆ. ಇಬ್ಬರನ್ನೂ ಒಟ್ಟಿಗೆ ನಿಲ್ಲಿಸಿ ಫೋಟೋ ತೆಗೆದಿರುವ ಆರೋಪಿಗಳು, ಆ ಫೋಟೋವನ್ನು ಬಹಿರಂಗಪಡಿಸುವುದಾಗಿ ಬೆದರಿಸಿ ಹಣಕ್ಕೆ ಬೇಡಿಕೆ ಇಟ್ಟಿದ್ದಾರೆ.

ಮೊದಲಿಗೆ ಮಹಿಳೆಯಿಂದ 2 ಪವನ್ ತೂಕದ ಚಿನ್ನದ ಸರ, ಉಂಗುರ ಹಾಗೂ 15,000 ರೂ. ನಗದನ್ನು ಕಸಿದುಕೊಂಡಿದ್ದಾರೆ. ಬಳಿಕ ಆಕೆಯ ಪುರುಷ ಸ್ನೇಹಿತನಿಂದ 40,000 ರೂ. ಹಣವನ್ನು ಸುಲಿಗೆ ಮಾಡಿದ್ದಾರೆ ಎಂದು ದೂರಿನಲ್ಲಿ ತಿಳಿಸಲಾಗಿದೆ.

ಘಟನೆಯ ನಂತರವೂ ಹೆಚ್ಚಿನ ಹಣ ಮತ್ತು ಚಿನ್ನಾಭರಣ ನೀಡುವಂತೆ ನಿರಂತರ ಬೆದರಿಕೆ ಹಾಕುತ್ತಿದ್ದ ಹಿನ್ನೆಲೆಯಲ್ಲಿ ಮಹಿಳೆ ವಿದ್ಯಾನಗರ ಪೊಲೀಸ್ ಠಾಣೆಗೆ ದೂರು ನೀಡಿದ್ದಾರೆ.

ದೂರು ದಾಖಲಿಸಿಕೊಂಡ ಪೊಲೀಸರು, ಇನ್ಸ್‌ಪೆಕ್ಟರ್ ಪಿ. ಪ್ರಮೋದ್ ಅವರ ನೇತೃತ್ವದಲ್ಲಿ ಕಾರ್ಯಾಚರಣೆ ನಡೆಸಿ ಐವರನ್ನೂ ಬಂಧಿಸಿದ್ದಾರೆ

Continue Reading

arrest

6 ವರ್ಷಗಳಿಂದ ವಿದೇಶದಲ್ಲಿದ್ದ ವಾರೆಂಟ್ ಆರೋಪಿ ವಿಮಾನ ನಿಲ್ದಾಣದಲ್ಲಿ ಅರೆಸ್ಟ್: ಬಂಟ್ವಾಳ ಪೊಲೀಸರ ಕಾರ್ಯಾಚರಣೆ

Published

on

ಮಂಗಳೂರು: ನ್ಯಾಯಾಲಯದ ವಿಚಾರಣೆಗೆ ಹಾಜರಾಗದೆ ಕಳೆದ 6 ವರ್ಷಗಳಿಂದ ವಿದೇಶದಲ್ಲಿ ತಲೆಮರೆಸಿಕೊಂಡಿದ್ದ ವಾರೆಂಟ್ ಆರೋಪಿಯನ್ನು ಬಂಟ್ವಾಳ ನಗರ ಪೊಲೀಸರು ಮಂಗಳೂರು ಅಂತಾರಾಷ್ಟ್ರೀಯ ವಿಮಾನ ನಿಲ್ದಾಣದಲ್ಲಿ ವಶಕ್ಕೆ ಪಡೆದಿದ್ದಾರೆ.

ಮಂಗಳೂರು ಬಜಾಲ್‌ನಂತೂರು ನಿವಾಸಿ ಮಹಮ್ಮದ್ ನೌಫಲ್ @ ಸಫಾರಿ ನೌಫಲ್ (34) ದಸ್ತಗಿರಿಯಾದ ಆರೋಪಿ.

ಪ್ರಕರಣದ ವಿವರ: ಬಂಟ್ವಾಳ ನಗರ ಪೊಲೀಸ್ ಠಾಣೆಯಲ್ಲಿ ದಾಖಲಾಗಿದ್ದ ಪ್ರಕರಣಕ್ಕೆ (ಅ.ಕ್ರ: 24/2020, ಐಪಿಸಿ ಕಲಂ: 143, 147, 148, 504, 323, 324, 506, 427 r/w 149 ಮತ್ತು ಕಾವಲು ಕಾಯ್ದೆ) ಸಂಬಂಧಿಸಿದಂತೆ ಈಾತನು ಮಾನ್ಯ ನ್ಯಾಯಾಲಯಕ್ಕೆ ವಿಚಾರಣೆಗೆ ಹಾಜರಾಗದೆ ವಿದೇಶಕ್ಕೆ ಪರಾರಿಯಾಗಿದ್ದ. ಈತನ ವಿರುದ್ಧ ನ್ಯಾಯಾಲಯದಿಂದ ವಾರೆಂಟ್ ಜಾರಿಯಾಗಿತ್ತು.

ಸೆಪ್ಟೆಂಬರ್ 15, 2026ರಂದು ವಿದೇಶದಿಂದ ಮನೆಗೆ ಹಿಂತಿರುಗುತ್ತಿದ್ದ ವೇಳೆ, ಮಂಗಳೂರು ಅಂತಾರಾಷ್ಟ್ರೀಯ ವಿಮಾನ ನಿಲ್ದಾಣದ ಇಮಿಗ್ರೇಷನ್ ವಿಭಾಗದ ಸಹಾಯದಿಂದ ಬಂಟ್ವಾಳ ನಗರ ಪೊಲೀಸರು ಆರೋಪಿಯನ್ನು ಯಶಸ್ವಿಯಾಗಿ ಬಂಧಿಸಿದ್ದಾರೆ.

ಬಂಧಿತ ಆರೋಪಿಯನ್ನು ಮಾನ್ಯ ನ್ಯಾಯಾಲಯಕ್ಕೆ ಹಾಜರುಪಡಿಸಲಾಗಿದ್ದು, ನ್ಯಾಯಾಲಯವು ಸೆಪ್ಟೆಂಬರ್ 29, 2026ರವರೆಗೆ ನ್ಯಾಯಾಂಗ ಬಂಧನ ವಿಧಿಸಿ ಆದೇಶಿಸಿದೆ.

Continue Reading

Trending

Copyright © 2025 Deevatige