arrest
ಅಪರಾಧಕ್ಕೇಕೆ ಜಾತಿ-ಧರ್ಮದ ಬಣ್ಣ? ಸುರತ್ಕಲ್ ಬಾಲಕಿ ಆತ್ಮಹತ್ಯೆ ಪ್ರಕರಣ ಮತ್ತು ನಮ್ಮ ಸಮಾಜದ ದ್ವಂದ್ವ ನಿಲುವು!
ಮಂಗಳೂರು: ಇತ್ತೀಚೆಗೆ ಸುರತ್ಕಲ್‌ನಲ್ಲಿ ನಡೆದ 17 ವರ್ಷದ ಅಪ್ರಾಪ್ತ ಬಾಲಕಿಯ ಆತ್ಮಹತ್ಯೆ ಪ್ರಕರಣವು ಕೇವಲ ಒಂದು ದುರಂತ ಸಾವಲ್ಲ; ಬದಲಾಗಿ ಇದು ನಮ್ಮ ಇಡೀ ಸಮಾಜದ ಆಕ್ರೋಶ ಮತ್ತು ನ್ಯಾಯದ ಪರಿಕಲ್ಪನೆ ಎಷ್ಟು ದ್ವಂದ್ವಗಳಿಂದ ಕೂಡಿದೆ ಎಂಬುದನ್ನು ಬೆತ್ತಲಾಗಿಸಿದೆ. ಈ ನಡುವೆ ಮಂಗಳೂರು ಪೊಲೀಸ್ ಕಮಿಷನರ್ ಅವರು ಮಾಧ್ಯಮಗಳ ಮುಂದೆ ಹಂಚಿಕೊಂಡಿರುವ ವಿಚಾರಗಳು ಸಮಾಜದ ಕಣ್ಣು ತೆರೆಸುವಂತಿವೆ.
ಕಮಿಷನರ್ ಹಂಚಿಕೊಂಡ ಸತ್ಯ ಸಂಗತಿಗಳು:
ಪ್ರಕರಣದ ತನಿಖೆಯ ಕುರಿತು ಮಾಧ್ಯಮಗಳೊಂದಿಗೆ ಪೊಲೀಸ್ ಕಮಿಷನರ್ ಹಂಚಿಕೊಂಡಿರುವ ಅತ್ಯಂತ ಸ್ಪಷ್ಟ ಮತ್ತು ಕಟು ಸತ್ಯದ ಮಾತುಗಳು ಎಂತಹ ಕಟುಕರ ಮನಸ್ಸನ್ನೂ ತೆರೆಸುವಂತಿದೆ.
ಆಕೆ ತನ್ನ ಪೋಷಕರಿಗೆ ಬರೆದಿಟ್ಟಿರುವ ಡೆತ್ ನೋಟ್‌ನಲ್ಲಿ, ತಾನು ಒಂದು ತಪ್ಪು ಮಾಡಿರುವುದಾಗಿ ಹಾಗೂ “ಅವನು ಸಂತೋಷವಾಗಿದ್ದಾನೆ” ಎಂದು ಉಲ್ಲೇಖಿಸಿದ್ದಾಳೆ. ಅಲ್ಲದೆ, ಅವನು ಹಿಂದೂ ಸಂಘಟನೆಗಳೊಂದಿಗೆ ಇದ್ದರೂ, ಆ ಸಂಘಟನೆಗಳು ತನಗೆ ಯಾವುದೇ ಸಹಾಯ ಮಾಡಲಿಲ್ಲ ಎಂದು ಬರೆದಿದ್ದಳು.
ತಕ್ಷಣದ ಬಂಧನ: ಘಟನೆ ನಡೆದ ಅದೇ ದಿನ ಪೊಲೀಸರು ಚುರುಕಾಗಿ ಕಾರ್ಯಪ್ರವೃತ್ತರಾಗಿ ಆರೋಪಿಯನ್ನು ವಶಕ್ಕೆ ಪಡೆದಿದ್ದಾರೆ.
ವೈಜ್ಞಾನಿಕ ಸಾಕ್ಷ್ಯ: ಮರಣೋತ್ತರ ಪರೀಕ್ಷೆ ಪೂರ್ಣಗೊಂಡಿದ್ದು, ಡಿಎನ್‌ಎ (DNA) ತನಿಖೆಗಾಗಿ ಭ್ರೂಣದ ಮಾದರಿಯನ್ನು ವೈದ್ಯರು ಸಂಗ್ರಹಿಸಿದ್ದಾರೆ. ಈ ಡಿಎನ್‌ಎ ಸಾಕ್ಷ್ಯವು ಅತ್ಯಂತ ಬಲವಾಗಿದ್ದು, ಇದು ಆರೋಪಿಗೆ ಖಂಡಿತವಾಗಿಯೂ ಕಠಿಣ ಶಿಕ್ಷೆ (Conviction) ಕೊಡಿಸಲು ದಾರಿಯಾಗುತ್ತದೆ.
ಪೊಲೀಸರ ಕರ್ತವ್ಯ: ಯಾವುದೇ ಬಾಹ್ಯ ಒತ್ತಡಗಳಿಗೆ ಮಣಿಯದೆ ಪೊಲೀಸರು ತಮ್ಮ ಕರ್ತವ್ಯವನ್ನು ಅತ್ಯಂತ ಜವಾಬ್ದಾರಿಯಿಂದ ನಿಭಾಯಿಸುತ್ತಿದ್ದಾರೆ. ಪೋಷಕರ ದೂರಿನನ್ವಯ ಸುರತ್ಕಲ್ ಪೊಲೀಸರು ಏಪ್ರಿಲ್ 24ರ ಮುಂಜಾನೆ 1.00 ಗಂಟೆಗೆ ಆರೋಪಿ ಅನೀಶ್ ಪೂಜಾರಿ ವಿರುದ್ಧ ಪೋಕ್ಸೊ (POCSO) ಕಾಯ್ದೆ, ಅತ್ಯಾಚಾರ (Rape) ಹಾಗೂ ಆತ್ಮಹತ್ಯೆಗೆ ಪ್ರಚೋದನೆ (Abetment to Suicide) ಕರಾರುಗಳಡಿ ಎಫ್‌ಐಆರ್ ದಾಖಲಿಸಿಕೊಂಡಿದ್ದಾರೆ.
ನಮ್ಮ ಆಕ್ರೋಶದ ಹಿಂದಿರುವ ‘ಮೂಲಭೂತ ವಿರೋಧಾಭಾಸ’ ಮತ್ತು ದ್ವಂದ್ವ ನಿಲುವು
ಕಮಿಷನರ್ ಅವರು ಪ್ರಕರಣದ ಸತ್ಯಾಸತ್ಯತೆಗಳನ್ನು ಬಿಚ್ಚಿಟ್ಟು ತನಿಖೆ ನಡೆಸುತ್ತಿದ್ದರೂ, ಸಮಾಜದ ಕೆಲವೊಂದು ವರ್ಗಗಳು ಮಾತ್ರ ಈ ಬಾಲಕಿಗೆ ನ್ಯಾಯ ಸಿಗಬೇಕು ಎಂದು ಅತ್ಯಂತ ಉತ್ಸಾಹದಿಂದ ಧ್ವನಿಯೆತ್ತುತ್ತಿವೆ. ಆದರೆ, ಇಲ್ಲಿ ಅಪರಾಧಗಳ ಬಗ್ಗೆ ಜನರು ಪ್ರತಿಕ್ರಿಯಿಸುವ ರೀತಿಯಲ್ಲಿ ಒಂದು ಮೂಲಭೂತ ವಿರೋಧಾಭಾಸ ಎದ್ದು ಕಾಣುತ್ತಿದೆ.
ನಾವು ಕೇಳಿಕೊಳ್ಳಬೇಕಾದ ಪ್ರಶ್ನೆ: ಆರೋಪಿ ಬೇರೆ ಸಮುದಾಯಕ್ಕೆ ಸೇರಿದವನಾಗಿದ್ದರೆ ನಾವು ತಕ್ಷಣವೇ ಬೀದಿಗಿಳಿದು ನ್ಯಾಯಕ್ಕಾಗಿ ಆಗ್ರಹಿಸುತ್ತೇವೆ; ಆದರೆ ಅದೇ ಆರೋಪಿ ನಮ್ಮದೇ ಸಮುದಾಯಕ್ಕೆ ಸೇರಿದವನಾಗಿದ್ದರೆ ನಾವು ಮೌನವಾಗುತ್ತೇವೆ. ಏಕೆ?
ಈ ದ್ವಂದ್ವ ನಿಲುವು ಏನನ್ನು ಸೂಚಿಸುತ್ತದೆ ಎಂದರೆ, ನಮ್ಮ ಆಕ್ರೋಶವು ನಿಜವಾಗಿ ಸಂತ್ರಸ್ತರ ಪರವಾದ ನ್ಯಾಯಕ್ಕಾಗಿ ಹೊರಹೊಮ್ಮುತ್ತಿಲ್ಲ! ಬದಲಾಗಿ, ಆ ಆಕ್ರೋಶವನ್ನು ನಾವು ನಮ್ಮ ಸಮುದಾಯದ ಗುರುತನ್ನು (Communal Signaling) ಪ್ರದರ್ಶಿಸುವ ಸಾಧನವಾಗಿಯೇ ಬಳಸಿಕೊಳ್ಳುತ್ತಿದ್ದೇವೆ. ಆರೋಪಿಯ ಧರ್ಮ ನೋಡಿ ನಮ್ಮ ಧ್ವನಿಯ ತೀವ್ರತೆ ನಿರ್ಧಾರವಾಗುತ್ತಿರುವುದು ನಿಜಕ್ಕೂ ದುರಂತ.
ನ್ಯಾಯಕ್ಕೆ ಧರ್ಮದ ಗಡಿ ಇರಬಾರದು
ನಾವು ನಿಜವಾಗಿಯೂ ನ್ಯಾಯ ಮತ್ತು ಮಾನವೀಯತೆಗೆ ಬದ್ಧರಾಗಿದ್ದರೆ, ಎಲ್ಲಾ ಅಪರಾಧಿಗಳನ್ನು ಒಂದೇ ಮಾನದಂಡದಲ್ಲಿ ನೋಡಬೇಕು. ಅಪರಾಧವು ಎಲ್ಲೆಡೆ ಇರುವ ಸಾಮಾನ್ಯ ಸಮಸ್ಯೆಯಾಗಿದೆ. ಯಾವುದೇ ಸಮುದಾಯವೂ ಅಪರಾಧಿಗಳ ಅಸ್ತಿತ್ವದಿಂದ ಹೊರತಾಗಿಲ್ಲ; ಅಪರಾಧಿಗಳು ಎಲ್ಲಾ ಧರ್ಮ, ಜಾತಿ ಮತ್ತು ವರ್ಗಗಳಲ್ಲೂ ಇದ್ದಾರೆ.
ಪರಿಸ್ಥಿತಿ ಹೀಗಿರುವಾಗ, ಕಾನೂನು ತನ್ನ ಕೆಲಸವನ್ನು ಮಾಡುತ್ತಿರುವಾಗ, ನಾವು ಅಪರಾಧಿಗೆ ಜಾತಿಯ ಬಣ್ಣ ಹಚ್ಚಿ ರಾಜಕೀಯ ಮಾಡುವುದನ್ನು ನಿಲ್ಲಿಸಬೇಕಿದೆ.
ಸುರತ್ಕಲ್‌ನ ಬಾಲಕಿಗೆ ನ್ಯಾಯ ಸಿಗಬೇಕಿದೆ. ಪೊಲೀಸರು ಕಮಿಷನರ್ ನೇತೃತ್ವದಲ್ಲಿ ಬಲವಾದ ವೈಜ್ಞಾನಿಕ ಸಾಕ್ಷ್ಯಗಳೊಂದಿಗೆ ತನಿಖೆ ನಡೆಸುತ್ತಿರುವುದು ಸ್ವಾಗತಾರ್ಹ. ಆದರೆ ಇದರ ಜೊತೆಗೆ, ಅಪರಾಧ ನಡೆದಾಗ ಅಪರಾಧಿಯ ಮುಖವಾಡ ಕಳಚಿ ಆತನ ಧರ್ಮ ಹುಡುಕುವ ನಮ್ಮ ಸಮಾಜದ ವಿಕೃತ ಹೈಪೋಕ್ರಸಿಗೂ (ಪರಮಾವಧಿ ದ್ವಂದ್ವ) ಚಿಕಿತ್ಸೆಯಾಗಬೇಕಿದೆ. ಸಂತ್ರಸ್ತೆ ಯಾವುದೇ ಧರ್ಮದವಳಾಗಿರಲಿ, ಆರೋಪಿ ಯಾರೇ ಆಗಿರಲಿ — ‘ಅಪರಾಧಿ ಅಪರಾಧಿಯೇ, ನ್ಯಾಯ ಎಲ್ಲರಿಗೂ ಒಂದೇ’.



arrest
6 ವರ್ಷಗಳಿಂದ ವಿದೇಶದಲ್ಲಿದ್ದ ವಾರೆಂಟ್ ಆರೋಪಿ ವಿಮಾನ ನಿಲ್ದಾಣದಲ್ಲಿ ಅರೆಸ್ಟ್: ಬಂಟ್ವಾಳ ಪೊಲೀಸರ ಕಾರ್ಯಾಚರಣೆ
ಮಂಗಳೂರು: ನ್ಯಾಯಾಲಯದ ವಿಚಾರಣೆಗೆ ಹಾಜರಾಗದೆ ಕಳೆದ 6 ವರ್ಷಗಳಿಂದ ವಿದೇಶದಲ್ಲಿ ತಲೆಮರೆಸಿಕೊಂಡಿದ್ದ ವಾರೆಂಟ್ ಆರೋಪಿಯನ್ನು ಬಂಟ್ವಾಳ ನಗರ ಪೊಲೀಸರು ಮಂಗಳೂರು ಅಂತಾರಾಷ್ಟ್ರೀಯ ವಿಮಾನ ನಿಲ್ದಾಣದಲ್ಲಿ ವಶಕ್ಕೆ ಪಡೆದಿದ್ದಾರೆ.
ಮಂಗಳೂರು ಬಜಾಲ್‌ನಂತೂರು ನಿವಾಸಿ ಮಹಮ್ಮದ್ ನೌಫಲ್ @ ಸಫಾರಿ ನೌಫಲ್ (34) ದಸ್ತಗಿರಿಯಾದ ಆರೋಪಿ.
ಪ್ರಕರಣದ ವಿವರ: ಬಂಟ್ವಾಳ ನಗರ ಪೊಲೀಸ್ ಠಾಣೆಯಲ್ಲಿ ದಾಖಲಾಗಿದ್ದ ಪ್ರಕರಣಕ್ಕೆ (ಅ.ಕ್ರ: 24/2020, ಐಪಿಸಿ ಕಲಂ: 143, 147, 148, 504, 323, 324, 506, 427 r/w 149 ಮತ್ತು ಕಾವಲು ಕಾಯ್ದೆ) ಸಂಬಂಧಿಸಿದಂತೆ ಈಾತನು ಮಾನ್ಯ ನ್ಯಾಯಾಲಯಕ್ಕೆ ವಿಚಾರಣೆಗೆ ಹಾಜರಾಗದೆ ವಿದೇಶಕ್ಕೆ ಪರಾರಿಯಾಗಿದ್ದ. ಈತನ ವಿರುದ್ಧ ನ್ಯಾಯಾಲಯದಿಂದ ವಾರೆಂಟ್ ಜಾರಿಯಾಗಿತ್ತು.
ಸೆಪ್ಟೆಂಬರ್ 15, 2026ರಂದು ವಿದೇಶದಿಂದ ಮನೆಗೆ ಹಿಂತಿರುಗುತ್ತಿದ್ದ ವೇಳೆ, ಮಂಗಳೂರು ಅಂತಾರಾಷ್ಟ್ರೀಯ ವಿಮಾನ ನಿಲ್ದಾಣದ ಇಮಿಗ್ರೇಷನ್ ವಿಭಾಗದ ಸಹಾಯದಿಂದ ಬಂಟ್ವಾಳ ನಗರ ಪೊಲೀಸರು ಆರೋಪಿಯನ್ನು ಯಶಸ್ವಿಯಾಗಿ ಬಂಧಿಸಿದ್ದಾರೆ.
ಬಂಧಿತ ಆರೋಪಿಯನ್ನು ಮಾನ್ಯ ನ್ಯಾಯಾಲಯಕ್ಕೆ ಹಾಜರುಪಡಿಸಲಾಗಿದ್ದು, ನ್ಯಾಯಾಲಯವು ಸೆಪ್ಟೆಂಬರ್ 29, 2026ರವರೆಗೆ ನ್ಯಾಯಾಂಗ ಬಂಧನ ವಿಧಿಸಿ ಆದೇಶಿಸಿದೆ.
arrest
ಬೆಳ್ತಂಗಡಿ: ದಲಿತ ಕುಟುಂಬದ ಜಮೀನಿಗೆ ಅಕ್ರಮ ಪ್ರವೇಶಿಸಿ ಅಶ್ಲೀಲ ಪ್ರದರ್ಶನ – ಆರೋಪಿ ಬಂಧನ
ಬೆಳ್ತಂಗಡಿ: ದಕ್ಷಿಣ ಕನ್ನಡ ಜಿಲ್ಲೆಯ ಬೆಳ್ತಂಗಡಿ ತಾಲೂಕಿನ ವೇಣೂರು ಸಮೀಪದಲ್ಲಿ ಪರಿಶಿಷ್ಟ ಜಾತಿಯ ಕುಟುಂಬಗಳಿಗೆ ಸೇರಿದ ಜಮೀನಿಗೆ ಅಕ್ರಮ ಪ್ರವೇಶಿಸಿ ಕೃತ್ಯವೆಸಗಿ, ದಲಿತ ಕುಟುಂಬದ ಮಹಿಳೆಯರ ಮುಂದೆ ಪಂಚೆ ಎತ್ತಿ ಮರ್ಮಾಂಗ ಪ್ರದರ್ಶಿಸಿ ವಿಕೃತಿ ಮೆರೆದ ವಿಲಕ್ಷಣ ಪ್ರಕರಣ ನಡೆದಿದ್ದು, ಈ ಬಗ್ಗೆ ವೇಣೂರು ಠಾಣೆಯಲ್ಲಿ ಪ್ರಕರಣ ದಾಖಲಾಗಿ ಆರೋಪಿಯನ್ನು ಪೊಲೀಸರು ಬಂಧಿಸಿದ್ದಾರೆ.
ಬಂಧಿತ ಆರೋಪಿಯನ್ನು ಬೆಳ್ತಂಗಡಿ ತಾಲೂಕಿನ ಹೊಸಂಗಡಿ ಗ್ರಾಮದ ಪಟ್ಟಾಡಿ ಮನೆಯ ಅಬ್ದುಲ್ ಹನೀಫ್ ಹುಸೇನ್ (50) ಎಂದು ಗುರುತಿಸಲಾಗಿದೆ.
ಘಟನೆ ವಿವರ:
ಬೆಳ್ತಂಗಡಿ ತಾಲೂಕಿನ ವೇಣೂರು ಸಮೀಪದ ಪಡ್ಯಾರಬೆಟ್ಟು ಎಂಬಲ್ಲಿ ಸುಮಾರು 40 ವರ್ಷಗಳಿಗಿಂತಲೂ ಹೆಚ್ಚು ಕಾಲದಿಂದ ವಾಸ್ತವ್ಯವಿದ್ದು ಕೃಷಿ ಚಟುವಟಿಕೆ ನಡೆಸಿಕೊಂಡು ಬರುತ್ತಿದ್ದ ಪರಿಶಿಷ್ಟ ಜಾತಿಯ ಕುಟುಂಬದ ಸ್ವಾಧೀನದ ಜಾಗದಲ್ಲಿ ಸಿಮೆಂಟ್ ಕಂಬ ಹಾಗೂ ತಂತಿ ಬೇಲಿ ಹಾಕಿ ಕುಟುಂಬ ಕೃಷಿ ಕಾರ್ಯದಲ್ಲಿ ತೊಡಗಿತ್ತು.
ಸೆ.7 ರಂದು ಸ್ಥಳೀಯ ನಿವಾಸಿ ಹನೀಫ್ ಎಂಬಾತ ಏಕಾಏಕಿ ಆ ಜಾಗಕ್ಕೆ ಅತಿಕ್ರಮ ಪ್ರವೇಶಿಸಿ, ಜಾತಿ ನಿಂದನೆ ಮಾಡಿ ಅವಾಚ್ಯ ಮತ್ತು ಅಶ್ಲೀಲ ಪದಗಳಿಂದ ನಿಂದಿಸಿದ್ದಾನೆ. ಬಡ ಕುಟುಂಬ ಹಾಕಿದ್ದ ಸಿಮೆಂಟ್ ಬೇಲಿ ಕಂಬ ಹಾಗೂ ತಂತಿ ಬೇಲಿಯನ್ನು ಕಿತ್ತೆಸೆದು, ಅಡಿಕೆ ಹಾಗೂ ಬಾಳೆ ಗಿಡಗಳನ್ನು ಮುರಿದು ದಾಂಧಲೆ ನಡೆಸಿ ಕೊಲೆ ಬೆದರಿಕೆ ಹಾಕಿದ್ದಾನೆ ಎಂದು ಆರೋಪಿಸಲಾಗಿದೆ.
ಈ ವೇಳೆ ಕೆಲಸದಲ್ಲಿ ತೊಡಗಿದ್ದ ದಲಿತ ಕುಟುಂಬದ ಮಹಿಳೆಯರು ದಾಂಧಲೆಯ ಘಟನೆಯನ್ನು ತಮ್ಮ ಮೊಬೈಲ್‌ನಲ್ಲಿ ವಿಡಿಯೋ ಚಿತ್ರೀಕರಣ ಮಾಡುತ್ತಿದ್ದಾಗ ಆರೋಪಿ ಹನೀಫ್ ಮಹಿಳೆಯರ ಎದುರು ಬಂದು ತಾನು ಉಟ್ಟಿದ್ದ ಪಂಚೆಯನ್ನು ಎತ್ತಿ ಒಳ ಉಡುಪನ್ನು ಜಾರಿಸಿ ತನ್ನ ಗುಪ್ತಾಂಗವನ್ನು ತೋರಿಸುತ್ತಾ ಸಾರ್ವಜನಿಕವಾಗಿ ವಿಕೃತಿಯನ್ನು ಮೆರೆದಿದ್ದಾನೆ. “ನಿಮ್ಮನ್ನು ಇದರಿಂದಲೇ ಅತ್ಯಾಚಾರ ಮಾಡುತ್ತೇನೆ, ಈ ಜಾಗ ಬಿಟ್ಟು ಹೋಗದಿದ್ದರೆ ನಿಮ್ಮನ್ನು ಕೊಲ್ಲದೆ ಬಿಡುವುದಿಲ್ಲ” ಎಂದು ಬೆದರಿಕೆ ಹಾಕಿ ಮಹಿಳೆಯರನ್ನು ಬೆನ್ನಟ್ಟಿಕೊಂಡು ಬಂದಿದ್ದಾನೆ ಎಂದು ದೂರಿನಲ್ಲಿ ತಿಳಿಸಲಾಗಿದೆ.
ದೂರು ಮತ್ತು ಬಂಧನ:
ಈತನ ವಿಕೃತಿಯಿಂದ ಭಯಗೊಂಡ ಬಡ ಕುಟುಂಬವು ಸ್ಥಳೀಯ ದಲಿತ ಮುಖಂಡರು ಹಾಗೂ ಕಾರ್ಯಕರ್ತರೊಂದಿಗೆ ವೇಣೂರು ಪೊಲೀಸ್ ಠಾಣೆಗೆ ತೆರಳಿ ವಿಡಿಯೋ ಚಿತ್ರೀಕರಣದ ದೃಶ್ಯಾವಳಿ ಸಾಕ್ಷ್ಯಾಧಾರಗಳೊಂದಿಗೆ ಸೆ.8 ರಂದು ದೂರು ನೀಡಿದೆ.
ದೂರಿನ ಅನ್ವಯ ವೇಣೂರು ಠಾಣೆಯಲ್ಲಿ ದಲಿತ ದೌರ್ಜನ್ಯ ಕಾಯ್ದೆ ಅಡಿಯಲ್ಲಿ ಹಾಗೂ ಬಿಎನ್ಎಸ್ 329(3), 352, 351(2), 75(1), 324(4) ರಂತೆ ಪ್ರಕರಣ ದಾಖಲಿಸಲಾಗಿದೆ.
ಪ್ರಕರಣ ದಾಖಲಿಸಿಕೊಂಡ ವೇಣೂರು ಪೊಲೀಸರು ಆರೋಪಿಯನ್ನು ಸಂಜೆ ಬಂಧಿಸಿ ಮಂಗಳೂರು ನ್ಯಾಯಾಲಯಕ್ಕೆ ಹಾಜರುಪಡಿಸಿದ್ದು, ನ್ಯಾಯಾಲಯ ಆರೋಪಿಗೆ ನ್ಯಾಯಾಂಗ ಬಂಧನ ವಿಧಿಸಿದೆ.
40 ವರ್ಷಗಳಿಂದ ಕೃಷಿ ಮಾಡಿಕೊಂಡು ಬಂದಿದ್ದ ಬಡ ಪರಿಶಿಷ್ಟ ಕುಟುಂಬದ ಮೇಲೆ ದೌರ್ಜನ್ಯ ನಡೆಸಿ, ಮಹಿಳೆಯರ ಮುಂದೆ ಅಸಭ್ಯವಾಗಿ ವರ್ತಿಸಿದ ಆರೋಪಿಗೆ ಸ್ಥಳೀಯ ದಲಿತ ಮುಖಂಡರು ಹಾಗೂ ಕಾರ್ಯಕರ್ತರ ಸಂಘಟಿತ ಹೋರಾಟದ ಫಲವಾಗಿ ಕಾನೂನಿನ ತಕ್ಕ ಪಾಠ ಕಲಿಸಿದಂತಾಗಿದ್ದು, ಈ ಹೋರಾಟಕ್ಕೆ ರಾಜ್ಯಾದ್ಯಂತ ಮೆಚ್ಚುಗೆ ವ್ಯಕ್ತವಾಗಿದೆ.
arrest
ಕರಿಕೆ: ಕೇರಳ ಮೀಸಲು ಅರಣ್ಯದಲ್ಲಿ ಕಡವೆ ಬೇಟೆಯಾಡಿ ಮಾಂಸ ಮಾರಾಟ ಮಾಡುತ್ತಿದ್ದ ಜಾಲ ಪತ್ತೆ; ಓರ್ವನ ಬಂಧನ, 40 ಕೆಜಿ ಮಾಂಸ ವಶ
ಕರಿಕೆ ಸಮೀಪದ ಕೇರಳ ಮೀಸಲು ಅರಣ್ಯ ಪ್ರದೇಶದಲ್ಲಿ ಅಕ್ರಮವಾಗಿ ಕಡವೆ ಬೇಟೆಯಾಡಿ, ಮಾಂಸ ಮಾರಾಟ ಮಾಡುತ್ತಿದ್ದ ಜಾಲವನ್ನು ಕೇರಳ ಅರಣ್ಯ ಇಲಾಖೆ ಅಧಿಕಾರಿಗಳು ಯಶಸ್ವಿಯಾಗಿ ಭೇದಿಸಿದ್ದು, ಓರ್ವ ಆರೋಪಿಯನ್ನು ಬಂಧಿಸಿದ್ದಾರೆ.
ಕರಿಕೆ ತೋಟಮ್ ನಿವಾಸಿ ಸಿದ್ದು (35) ಬಂಧಿತ ಆರೋಪಿ. ಈ ಕೃತ್ಯದಲ್ಲಿ ಭಾಗಿಯಾಗಿದ್ದ ಇತರ ಇಬ್ಬರು ಆರೋಪಿಗಳಾದ ಜಿ.ಎಸ್. ವಿನೀಶ್ ಮತ್ತು ವಿಮಲ್ ರಾಜ್ ಪರಾರಿಯಾಗಿದ್ದಾರೆ.
ಕರಿಕೆ ಸಮೀಪದ ತೋಟಮ್ ಬಳಿಯ ಕೇರಳ ಮೀಸಲು ಅರಣ್ಯದ ಗೇರು ತೋಟಿನ ಕಾಟೂರ್ ಕೊಪ್ಪು ಎಂಬಲ್ಲಿ ಈ ಅಕ್ರಮ ಚಟುವಟಿಕೆ ನಡೆಯುತ್ತಿತ್ತು. ಖಚಿತ ಮಾಹಿತಿ ಮೇರೆಗೆ ಕಾರ್ಯಾಚರಣೆ ನಡೆಸಿದ ಅರಣ್ಯ ಇಲಾಖೆ ಅಧಿಕಾರಿಗಳು, ಆರೋಪಿಯಿಂದ ಒಂದು ನಾಡ ಬಂದೂಕು, ಸುಮಾರು 40 ಕೆಜಿ ಕಡವೆ ಮಾಂಸ ಹಾಗೂ ಬೇಟೆಗೆ ಬಳಸಿದ್ದ ಇತರೆ ವಸ್ತುಗಳನ್ನು ವಶಪಡಿಸಿಕೊಂಡಿದ್ದಾರೆ.
ಬಂಧಿತ ಆರೋಪಿ ವಿರುದ್ಧ ವನ್ಯಜೀವಿ ಸಂರಕ್ಷಣಾ ಕಾಯ್ದೆಯಡಿ ಪ್ರಕರಣ ದಾಖಲಿಸಿ, ನ್ಯಾಯಾಂಗ ಬಂಧನಕ್ಕೆ ಒಪ್ಪಿಸಲಾಗಿದೆ. ಕಾಸರಗೋಡು ವಲಯದ ಅರಣ್ಯ ಅಧಿಕಾರಿಗಳಾದ ರಾಜು ಎಂ.ಪಿ., ಪ್ರಕಾಶ್ ವಿ.ಪಿ. ಹಾಗೂ ಪ್ರವೀಣ್ ಕುಮಾರ್ ಅವರನ್ನೊಳಗೊಂಡ ತಂಡ ಈ ಕಾರ್ಯಾಚರಣೆಯಲ್ಲಿ ಯಶಸ್ವಿಯಾಗಿ ಭಾಗವಹಿಸಿತ್ತು
-
accident2 months agoಬಿ.ಸಿ. ರೋಡ್ ಸರ್ಕಲ್ನಲ್ಲಿ ಭೀಕರ ಅಪಘಾತ: ಟಿಪ್ಪರ್-ಆಕ್ಟಿವಾ ನಡುವೆ ಡಿಕ್ಕಿ, ಸವಾರರಿಬ್ಬರೂ ದುರ್ಮರಣ
-
Bantawala2 months agoಬಂಟ್ವಾಳದಲ್ಲಿ ಭೀಕರ ಹತ್ಯಾಕಾಂಡ: ಬಸ್ನಲ್ಲಿ ಕುಳಿತಿದ್ದ ಯುವತಿಯನ್ನು ಸಾರ್ವಜನಿಕರೆದುರೇ ಕೊಚ್ಚಿ ಕೊಂದ ತಲೆಹರಟೆ ಪ್ರೇಮಿ!
-
crime8 months agoಅತ್ಯಾಚಾರ ಯತ್ನಕ್ಕೆ ತಡೆದ ಸೊಸೆಯ ಮುಖಕ್ಕೆ ಕಚ್ಚಿ ಕೊಲೆಗೆ ಯತ್ನಿಸಿದ ಮಾವ..ತಂದೆಯ ರಾಕ್ಷಸೀ ಕೃತ್ಯಕ್ಕೆ ಬೆಂಬಲಿಸಿದ ಗಂಡ..ಸುಳ್ಯ ಠಾಣಾ ವ್ಯಾಪ್ತಿಯಲ್ಲಿ ಅದೃಷ್ಟವಶಾತ್ ಬಚಾವಾದ ಸೊಸೆ..
-
crime6 months agoಧಾರ್ಮಿಕ ನಂಬಿಕೆಗೆ ಅವಮಾನ: ಕೊಡಗಿನ ಎಮ್ಮೆಮಾಡಿನಲ್ಲಿ ದೈವದ ವೇಷದಂತೆ ಧರಿಸಿ ಮದುಮಗನ ಅತಿರೇಕದ ವರ್ತನೆ!
-
Bantawala6 months agoವಿಟ್ಲದಲ್ಲಿ ನಡೆಯಿತೊಂದು ದೈವ ಕಾರಣಿಕ; ಪೊಲೀಸರ ಕಣ್ಣಿಗೆ ಮಣ್ಣೆರಚಿದರೂ ದೈವದ ದೃಷ್ಟಿಗೆ ತತ್ತರಿಸಿದ ದನಕಳ್ಳ..
-
Bantawala8 months agoನಾಗಬನ, ರಕ್ತೇಶ್ವರಿ ತಾಣ, ದೈವದೇವರ ಸಾನಿಧ್ಯ ದ್ವಂಸ ಗೊಳಿಸಿದ ಧರ್ಮದ್ರೋಹಿ ಕೃತ್ಯದ ವಿರುದ್ಧ ಭಕ್ತರ ಆಕ್ರೋಶ ; ನಾಶವಾದ ಸಾನಿಧ್ಯದಲ್ಲಿಯೇ ಸ್ವಾಮೀಜಿಯವರ ಮಾರ್ಗದರ್ಶನದಲ್ಲಿ ಕುಟುಂಬಸ್ತರು, ಸಾರ್ವಜನಿಕರ ಸಾಮೂಹಿಕ ಪ್ರಾರ್ಥನೆ
-
accident2 months agoBreaking: ಬಂಟ್ವಾಳದಲ್ಲಿ ಶಾಲಾ ಬಸ್ ಮೇಲೆ ಉರುಳಿದ ಬೃಹತ್ ಮರ; ಕಲ್ಲಡ್ಕ ಶ್ರೀರಾಮ ಶಾಲೆಯ ಓರ್ವ ವಿದ್ಯಾರ್ಥಿ ಸಾವು, ಕೆಲವರು ಗಂಭೀರ, ಹಲವರಿಗೆ ಗಾಯ!
-
accident4 months agoವಿಟ್ಲ ಆಕಾಶದಲ್ಲಿ ಹಾರಾಡಿದ ವಿಮಾನ: ತಾಂತ್ರಿಕ ದೋಷವಲ್ಲ, ಹವಾಮಾನ ವೈಪರೀತ್ಯದ ಕಾರಣ ! ಸಾರ್ವಜನಿಕರು ಆತಂಕ ಪಡುವ ಅಗತ್ಯವಿಲ್ಲ
