Connect with us

arrest

ಪುತ್ತೂರು: ಅಕ್ರಮ ಗೋಸಾಗಾಟ ಪತ್ತೆ; ಹಳೇ ಆಸಾಮಿ, ಕುಖ್ಯಾತ ಗೋಕಳ್ಳ ‘ಹಾಫಿಲ್’ ಸೇರಿದಂತೆ ಇಬ್ಬರು ವಶಕ್ಕೆ!

Published

on

ಪುತ್ತೂರು: ಉಪನಿರೀಕ್ಷಕಿ ಸುಷ್ಮಾ ಜಿ. ಭಂಡಾರಿ ನೇತೃತ್ವದ ಪುತ್ತೂರು ಗ್ರಾಮಾಂತರ ಠಾಣಾ ಪೊಲೀಸರು ಕಾರ್ಯಾಚರಣೆ ನಡೆಸಿ, ದಾಖಲೆಗಳಿಲ್ಲದೆ ಹಿಂಸಾತ್ಮಕವಾಗಿ ಜಾನುವಾರು ಸಾಗಿಸುತ್ತಿದ್ದ ಪಿಕ್‌ಅಪ್ ವಾಹನವನ್ನು ತಡೆದು ಇಬ್ಬರು ಆರೋಪಿಗಳನ್ನು ಬಂಧಿಸುವಲ್ಲಿ ಯಶಸ್ವಿಯಾಗಿದ್ದಾರೆ.

ಬಂಧಿತರನ್ನು ಕಬಕ ಸಮೀಪದ ಕಲ್ಲಂದಡ್ಕ ನಿವಾಸಿ ಶರೀಫ್ ಎಂಬವರ ಪುತ್ರ ಮೊಯಿದುಕುಂಞ ಯಾನೆ ಹಾಫಿಲ್ (20) ಮತ್ತು ಪಿಕ್‌ಅಪ್ ಚಾಲಕ ನಾರಾಯಣ ಎಂದು ಗುರುತಿಸಲಾಗಿದೆ. ಈ ಪೈಕಿ ಮೊಯಿದುಕುಂಞ ಯಾನೆ ಹಾಫಿಲ್ ಹಳೆಯ ಗೋಸಾಗಾಟದ ಪ್ರಕರಣದಲ್ಲೂ ಶಾಮೀಲಾಗಿದ್ದ ಕುಖ್ಯಾತ ಆರೋಪಿಯಾಗಿದ್ದಾನೆ.

ಕಾರ್ಯಾಚರಣೆಯ ವಿವರ:

ಜೂನ್ 25ರಂದು ಸಂಜೆ ಪುತ್ತೂರು ಗ್ರಾಮಾಂತರ ಠಾಣಾ ಪೊಲೀಸ್‌ ಉಪನಿರೀಕ್ಷಕರಾದ ಸುಷ್ಮಾ ಜಿ. ಭಂಡಾರಿ ಅವರಿಗೆ ಅಕ್ರಮ ಗೋಸಾಗಾಟದ ಕುರಿತು ಖಚಿತ ಮಾಹಿತಿ ಲಭಿಸಿತ್ತು. ತಕ್ಷಣ ಕಾರ್ಯಪ್ರವೃತ್ತರಾದ ಪಿಎಸ್‌ಐ ಮತ್ತು ಸಿಬ್ಬಂದಿಗಳ ತಂಡ, ಪುತ್ತೂರು ಆರ್ಯಾಪು ಗ್ರಾಮದ ಮರಕ್ಕ ಎಂಬಲ್ಲಿ ವಾಹನ ತಪಾಸಣೆ ನಡೆಸುತ್ತಿತ್ತು. ಈ ವೇಳೆ ಆ ಮಾರ್ಗವಾಗಿ ಬಂದ KA 21 5450 ನೊಂದಣಿಯ ಪಿಕ್‌ ಅಪ್‌ ವಾಹನವನ್ನು ತಡೆದು ಪರಿಶೀಲಿಸಿದಾಗ, ಅದರಲ್ಲಿ ಯಾವುದೇ ಪೂರ್ವಾನುಮತಿ ಅಥವಾ ಅಗತ್ಯ ದಾಖಲಾತಿಗಳಿಲ್ಲದೆ ಒಂದು ಜಾನುವಾರನ್ನು ಅತ್ಯಂತ ಹಿಂಸಾತ್ಮಕವಾಗಿ ಸಾಗಿಸುತ್ತಿರುವುದು ಬೆಳಕಿಗೆ ಬಂದಿದೆ.

ಪೊಲೀಸರು ತಕ್ಷಣವೇ ಜಾನುವಾರು ಹಾಗೂ ಸಾಗಾಟಕ್ಕೆ ಬಳಸಿದ ಪಿಕ್‌ಅಪ್ ವಾಹನವನ್ನು ಸ್ವಾಧೀನಪಡಿಸಿಕೊಂಡಿದ್ದಾರೆ.

ಅಪ್ರಾಪ್ತನಾಗಿದ್ದಾಗಲೂ ಸಿಕ್ಕಿಬಿದ್ದಿದ್ದ ಕುಖ್ಯಾತ ಆರೋಪಿ!

ಈ ಪ್ರಕರಣದಲ್ಲಿ ಬಂಧಿತನಾಗಿರುವ ಕಲ್ಲಂದಡ್ಕದ ಮೊಯಿದುಕುಂಞ ಯಾನೆ ಹಾಫಿಲ್ ಹಳೆಯ ಗೋಗಳ್ಳತನದ ಹಿನ್ನೆಲೆ ಹೊಂದಿದ್ದಾನೆ. ಸುಮಾರು ಎರಡು ವರ್ಷಗಳ ಹಿಂದೆ ಕಬಕ ಬಳಿ ಮಾರುತಿ ಸ್ವಿಫ್ಟ್ ಕಾರಿನಲ್ಲಿ ಗೋವುಗಳನ್ನು ಹಿಂಸಾತ್ಮಕ ರೀತಿಯಲ್ಲಿ ಕಸಾಯಿಖಾನೆಗೆ ಸಾಗಿಸುತ್ತಿದ್ದಾಗ ಬಜರಂಗದಳದ ಕಾರ್ಯಕರ್ತರು ಈತನನ್ನು ಬೆನ್ನಟ್ಟಿ ಹಿಡಿದು ಪೊಲೀಸರ ವಶಕ್ಕೆ ಒಪ್ಪಿಸಿದ್ದರು. ಆದರೆ, ಆ ಸಂದರ್ಭದಲ್ಲಿ ಈತ ಅಪ್ರಾಪ್ತ ವಯಸ್ಕನಾಗಿದ್ದ (ಮೈನರ್) ಕಾರಣ ಕಾನೂನಿನಿಂದ ಬಚಾವಾಗಿದ್ದ. ಆದರೂ ತನ್ನ ಹಳೇ ಚಾಳಿಯನ್ನು ಮುಂದುವರಿಸಿದ್ದ ಈತ, ಇದೀಗ ಮತ್ತೆ ಗ್ರಾಮಾಂತರ ಪೊಲೀಸರ ಬಲೆಗೆ ಬಿದ್ದಿದ್ದಾನೆ.

ಮೊಕದ್ದಮೆ ದಾಖಲು:

ಆರೋಪಿಗಳ ವಿರುದ್ಧ ಪುತ್ತೂರು ಗ್ರಾಮಾಂತರ ಪೊಲೀಸ್ ಠಾಣೆಯಲ್ಲಿ ಅಪರಾಧ ಕ್ರಮಾಂಕ: 95/2026 ರಂತೆ, ಕರ್ನಾಟಕ ಜಾನುವಾರು ಹತ್ಯೆ ಪ್ರತಿಬಂಧಕ ಮತ್ತು ಸಂರಕ್ಷಣಾ ಕಾಯ್ದೆ 2020 ರ ಕಲಂ 5, 7, 12 ಹಾಗೂ ಪ್ರಾಣಿ ಹಿಂಸೆ ನಿಷೇಧ ಕಾಯ್ದೆ 1960 ರ ಕಲಂ 11(ಡಿ) ಅಡಿಯಲ್ಲಿ ಪ್ರಕರಣ ದಾಖಲಿಸಿಕೊಂಡು ಮುಂದಿನ ತನಿಖೆ ಕೈಗೊಳ್ಳಲಾಗಿದೆ.





ads (2)
ads (3)
ads (4)
ads (5)
ads (6)
ads (1)
ads (8)
ads (7)
ಮುಂದಕ್ಕೆ ಓದಲು ಇಲ್ಲಿ ಕ್ಲಿಕ್‌ ಮಾಡಿ
Advertisement

arrest

ಬೆಳ್ತಂಗಡಿ: ಅಕ್ರಮ ಕೋಳಿಅಂಕ ಜೂಜಾಟದ ಅಡ್ಡೆಗೆ ಪೋಲಿಸ್ ದಾಳಿ – ಇಬ್ಬರ ಬಂಧನ, ಸೊತ್ತುಗಳು ಜಪ್ತಿ

Published

on

ಬೆಳ್ತಂಗಡಿ: ತಾಲೂಕಿನ ಬಂದಾರು ಗ್ರಾಮದ ನಿರ್ಮಡ ಎಂಬಲ್ಲಿ ಅಕ್ರಮವಾಗಿ ನಡೆಯುತ್ತಿದ್ದ ಕೋಳಿಅಂಕ ಜೂಜಾಟದ ಸ್ಥಳಕ್ಕೆ ಧರ್ಮಸ್ಥಳ ಪೊಲೀಸರು ದಾಳಿ ನಡೆಸಿ, ಇಬ್ಬರು ಆರೋಪಿಗಳನ್ನು ಬಂಧಿಸಿರುವ ಘಟನೆ ಸಂಭವಿಸಿದೆ.

ಧರ್ಮಪ್ಪ ಗೌಡ (38) (ಬಂದಾರು ಗ್ರಾಮದ ನಿರ್ಮಡ ನಿವಾಸಿ) ಮತ್ತು ಹರೀಶ್ ಎಸ್. (30) (ಪುತ್ತೂರು ತಾಲೂಕಿನ ನೆಕ್ಕಿಲಾಡಿ ಗ್ರಾಮದ ಬೆಳ್ಳೂರು ನಿವಾಸಿ) ಬಂಧಿತ ಆರೋಪಿಗಳು.

ದಾಳಿಯ ವಿವರ:

ಆಗಸ್ಟ್ 3ರಂದು ಸಂಜೆ ಸುಮಾರು 5:15ರ ವೇಳೆಗೆ ಲಭಿಸಿದ ಖಚಿತ ಮಾಹಿತಿಯ ಮೇರೆಗೆ ಧರ್ಮಸ್ಥಳ ಸಬ್ ಇನ್ಸ್‌ಪೆಕ್ಟರ್ ಸಮರ್ಥ್ ಆರ್. ಗಾಣಿಗೇರ ಅವರ ನೇತೃತ್ವದ ಪೊಲೀಸ್ ತಂಡ ನಿರ್ಮಡ ಪ್ರದೇಶಕ್ಕೆ ದಾಳಿ ನಡೆಸಿತು. ಈ ವೇಳೆ ಆರೋಪಿಗಳು ಕೋಳಿಗಳ ಕಾಲಿಗೆ ಬಾಳು (ಸಣ್ಣ ಕತ್ತಿ) ಕಟ್ಟಿ, ಪರಸ್ಪರ ಕಾದಾಟಕ್ಕೆ ಬಿಟ್ಟು ಹಣವನ್ನು ಪಣವಾಗಿಟ್ಟುಕೊಂಡು ಜೂಜಾಟದಲ್ಲಿ ತೊಡಗಿರುವುದು ಪತ್ತೆಯಾಗಿದೆ.

ಪೊಲೀಸರನ್ನು ಕಂಡ ತಕ್ಷಣವೇ ಸ್ಥಳದಲ್ಲಿದ್ದ ಕೆಲವರು ಕಾಲ್ಕಿತ್ತಿದ್ದು, ಇಬ್ಬರು ಆರೋಪಿಗಳನ್ನು ಪೊಲೀಸರು ವಶಕ್ಕೆ ಪಡೆಯುವಲ್ಲಿ ಯಶಸ್ವಿಯಾಗಿದ್ದಾರೆ.

ವಶಪಡಿಸಿಕೊಂಡ ಸೊತ್ತುಗಳು:

ದಾಳಿಯ ವೇಳೆ ಪೊಲೀಸರು ಜೂಜಾಟಕ್ಕೆ ಬಳಸಿದ್ದ ₹350 ನಗದು, 2 ಬಾಳುಗಳು (ಸಣ್ಣ ಕತ್ತಿ), ವಿವಿಧ ತಳಿಯ 4 ಕೋಳಿಗಳು ಹಾಗೂ 3 ದ್ವಿಚಕ್ರ ವಾಹನಗಳು ಸೇರಿದಂತೆ ಒಟ್ಟು ₹74,370 ಮೌಲ್ಯದ ಸ್ವತ್ತುಗಳನ್ನು ಜಪ್ತಿ ಮಾಡಿದ್ದಾರೆ.

ಪ್ರಕರಣ ದಾಖಲು:

ಈ ಕುರಿತು ಧರ್ಮಸ್ಥಳ ಪೊಲೀಸ್ ಠಾಣೆಯಲ್ಲಿ BNS ಕಲಂ 112, ಕರ್ನಾಟಕ ಪೊಲೀಸ್ ಕಾಯ್ದೆ ಕಲಂ 87 ಹಾಗೂ ಪ್ರಾಣಿಗಳ ಮೇಲಿನ ಕ್ರೌರ್ಯ ತಡೆ ಕಾಯ್ದೆ – 1960ರ ಕಲಂ 11(1) ರ ಅಡಿಯಲ್ಲಿ ಪ್ರಕರಣ ದಾಖಲಿಸಿಕೊಂಡು ಮುಂದಿನ ಕಾನೂನು ಕ್ರಮ ಕೈಗೊಳ್ಳಲಾಗಿದೆ\

Continue Reading

arrest

7 ವರ್ಷಗಳಿಂದ ತಲೆಮರೆಸಿಕೊಂಡಿದ್ದ ಖ್ಯಾತ ವಾರಂಟ್ ಆರೋಪಿ ಉಮ್ಮರ್ ನವಾಫ್ ಬಂಧನ: ಮಂಗಳೂರು ಪೊಲೀಸರ ಕಾರ್ಯಾಚರಣೆ

Published

on

ಮಂಗಳೂರು: ಕಳೆದ 7 ವರ್ಷಗಳಿಂದ ನ್ಯಾಯಾಲಯದ ವಿಚಾರಣೆಗೆ ಹಾಜರಾಗದೆ ತಲೆಮರೆಸಿಕೊಂಡಿದ್ದ, 30ಕ್ಕೂ ಹೆಚ್ಚು ವಾರಂಟ್ ಹಾಗೂ 13ಕ್ಕೂ ಅಧಿಕ ಗಂಭೀರ ಕ್ರಿಮಿನಲ್ ಪ್ರಕರಣಗಳಲ್ಲಿ ಭಾಗಿಯಾಗಿದ್ದ ವಾರಂಟ್ ಆರೋಪಿಯನ್ನು ಮಂಗಳೂರು ದಕ್ಷಿಣ ಉಪವಿಭಾಗದ ವಿಶೇಷ ಕರ್ತವ್ಯ ಪಡೆ ಪೊಲೀಸರು ಸೆರೆಹಿಡಿಯುವಲ್ಲಿ ಯಶಸ್ವಿಯಾಗಿದ್ದಾರೆ.

ಉಳ್ಳಾಲ ತಾಲೂಕಿನ ಮಾರ್ಗತಲೆ ಮೂಲದ, ಪ್ರಸ್ತುತ ಕೇರಳ ರಾಜ್ಯದ ಕಾಸರಗೋಡು ಜಿಲ್ಲೆಯ ಮಂಜೇಶ್ವರ ತಾಲೂಕಿನ ಕುಂಡಪ್ಪು ನಿವಾಸಿ ಉಮ್ಮರ್ ನವಾಫ್ (33) ಬಂಧಿತ ಆರೋಪಿ.

30ಕ್ಕೂ ಹೆಚ್ಚು ವಾರಂಟ್, ಪ್ರೋಕ್ಲಮೇಷನ್ ಜಾರಿ

ಬಂಧಿತ ಉಮ್ಮರ್ ನವಾಫ್ ವಿರುದ್ಧ ಕೊಲೆ ಯತ್ನ, ಅಪಹರಣ, ದರೋಡೆ, ಹಫ್ತಾ ವಸೂಲಿ, ಸಾರ್ವಜನಿಕ ಆಸ್ತಿಗೆ ಹಾನಿ ಹಾಗೂ ಸರ್ಕಾರಿ ನೌಕರರ ಕರ್ತವ್ಯಕ್ಕೆ ಅಡ್ಡಿಪಡಿಸಿದ ವಿಚಾರಗಳಿಗೆ ಸಂಬಂಧಿಸಿದಂತೆ ಉಳ್ಳಾಲ, ಪಣಂಬೂರು ಹಾಗೂ ಬರ್ಕೆ ಪೊಲೀಸ್ ಠಾಣೆಗಳಲ್ಲಿ 13ಕ್ಕೂ ಹೆಚ್ಚು ಪ್ರಕರಣಗಳು ದಾಖಲಾಗಿದ್ದವು.

ಪ್ರಕರಣಗಳ ವಿಚಾರಣೆಗೆ ನ್ಯಾಯಾಲಯಕ್ಕೆ ಹಾಜರಾಗದೆ ಕಳೆದ 7 ವರ್ಷಗಳಿಂದ ತಲೆಮರೆಸಿಕೊಂಡಿದ್ದ ಈತನ ವಿರುದ್ಧ ಘನ ನ್ಯಾಯಾಲಯವು 30ಕ್ಕೂ ಹೆಚ್ಚು ವಾರಂಟ್‌ಗಳನ್ನು ಹೊರಡಿಸಿತ್ತು. ಅಲ್ಲದೆ, ಉಳ್ಳಾಲ ಠಾಣೆಯ ಮೂರು ಪ್ರಕರಣಗಳಲ್ಲಿ ಈತನ ವಿರುದ್ಧ ನ್ಯಾಯಾಲಯದ ಆದೇಶದಂತೆ ‘ಪ್ರೋಕ್ಲಮೇಷನ್’ ಜಾರಿಗೊಳಿಸಲಾಗಿತ್ತು ಹಾಗೂ ಒಂದು ಪ್ರಕರಣದಲ್ಲಿ ಎಲ್.ಪಿ.ಸಿ (LPC) ಮಾಡಲಾಗಿತ್ತು.

ಆರೋಪಿ ಉಮ್ಮರ್ ನವಾಫ್ ಮೇಲಿರುವ ಪ್ರಕರಣಗಳ ವಿವರಗಳು:

  1. ಉಳ್ಳಾಲ ಪೊಲೀಸ್ ಠಾಣೆ (ಮೊ.ನಂ 222/17):
    • ಕಲಂಗಳು: 143, 147, 148 (ಕಾನೂನುಬಾಹಿರ ಗುಂಪುಗಾರಿಕೆ, ಗಲಭೆ), 341 (ಅಕ್ರಮ ತಡೆ), 504, 506 (ಶಾಂತಿ ಭಂಗ, ಜೀವ ಬೆದರಿಕೆ), 324 (ಹಾಕಾಹಾಕಿ/ಹೊಡೆದಾಟ) ಮತ್ತು 307 (ಕೊಲೆ ಯತ್ನ).
  2. ಉಳ್ಳಾಲ ಪೊಲೀಸ್ ಠಾಣೆ (ಮೊ.ನಂ 23/17):
    • ಕಲಂಗಳು: 427 IPC (ಆಸ್ತಿಗೆ ಹಾನಿ) ಮತ್ತು KPDLP ಕಾಯ್ದೆಯ 2(a), 2(b) (ಸಾರ್ವಜನಿಕ ಆಸ್ತಿ ನಷ್ಟ ತಡೆ ಕಾಯ್ದೆ).
  3. ಉಳ್ಳಾಲ ಪೊಲೀಸ್ ಠಾಣೆ (ಮೊ.ನಂ 247/14):
    • ಕಲಂಗಳು: 448 (ಅಕ್ರಮ ಪ್ರವೇಶ) ಮತ್ತು 395 (ದರೋಡೆ).
  4. ಉಳ್ಳಾಲ ಪೊಲೀಸ್ ಠಾಣೆ (ಮೊ.ನಂ 289/17):
    • ಕಲಂಗಳು: 504, 506, 364(a) (ಅಪಹರಣ ಮತ್ತು ಕಪ್ಪಕ್ಕೆ ಬೇಡಿಕೆ), 387 (ಹಫ್ತಾ ವಸೂಲಿಗೆ ಬೆದರಿಕೆ), 395 (ದರೋಡೆ), 149 IPC.
  5. ಉಳ್ಳಾಲ ಪೊಲೀಸ್ ಠಾಣೆ (ಮೊ.ನಂ 276/15) – (ನ್ಯಾಯಾಲಯದಿಂದ LPC ಮಾಡಲಾದ ಪ್ರಕರಣ):
    • ಕಲಂಗಳು: 143, 144, 148, 448, 451, 452 (ಅಕ್ರಮ ಮನೆ ಪ್ರವೇಶ), 326, 307 (ಕೊಲೆ ಯತ್ನ), 397 (ಮಾರಕ ಆಯುಧದೊಂದಿಗೆ ದರೋಡೆ/ಕಳವು), 506, 149 IPC.
  6. ಉಳ್ಳಾಲ ಪೊಲೀಸ್ ಠಾಣೆ (ಮೊ.ನಂ 206/2012) – (ಪ್ರೋಕ್ಲಮೇಷನ್ ಜಾರಿಯಾದ ಪ್ರಕರಣ):
    • ಕಲಂಗಳು: 143, 147, 148, 323, 427, 504, 506, 149 IPC.
  7. ಉಳ್ಳಾಲ ಪೊಲೀಸ್ ಠಾಣೆ (ಮೊ.ನಂ 27/2017) – (ಪ್ರೋಕ್ಲಮೇಷನ್ ಜಾರಿಯಾದ ಪ್ರಕರಣ):
    • ಕಲಂಗಳು: 387 IPC (ಭಯ ಹುಟ್ಟಿಸಿ ಹಣ/ಆಸ್ತಿ ವಸೂಲಿ ಮಾಡುವುದು).
  8. ಉಳ್ಳಾಲ ಪೊಲೀಸ್ ಠಾಣೆ (ಮೊ.ನಂ 103/2021):
    • ಕಲಂಗಳು: 364 IPC (ಕೊಲೆ ಮಾಡುವ ಉದ್ದೇಶದಿಂದ ಅಪಹರಣ).
  9. ಉಳ್ಳಾಲ ಪೊಲೀಸ್ ಠಾಣೆ (ಮೊ.ನಂ 71/23):
    • ಕಲಂಗಳು: 504, 506, 307 (ಕೊಲೆ ಯತ್ನ), 324, 427 IPC.
  10. ಉಳ್ಳಾಲ ಪೊಲೀಸ್ ಠಾಣೆ (ಮೊ.ನಂ 183/17) – (ಪ್ರೋಕ್ಲಮೇಷನ್ ಜಾರಿಯಾದ ಪ್ರಕರಣ):
    • ಕಲಂಗಳು: 143, 147, 148, 448, 504, 324, 323, 506, 427 R/w 149 IPC.
  11. ಉಳ್ಳಾಲ ಪೊಲೀಸ್ ಠಾಣೆ (ಮೊ.ನಂ 159/23):
    • ಕಲಂಗಳು: 341, 394 (ಕಳವು ಮಾಡುವಾಗ ಗಾಯಗೊಳಿಸುವುದು), 307 (ಕೊಲೆ ಯತ್ನ) R/w 34 IPC.
  12. ಪಣಂಬೂರು ಪೊಲೀಸ್ ಠಾಣೆ (PNB ಮೊ.ನಂ 158/2012):
    • ಕಲಂಗಳು: 379 IPC (ಕಳವು).
  13. ಬರ್ಕೆ ಪೊಲೀಸ್ ಠಾಣೆ (ಮೊ.ನಂ 04/15):
    • ಕಲಂಗಳು: 353 (ಸರ್ಕಾರಿ ನೌಕರರ ಕರ್ತವ್ಯಕ್ಕೆ ಅಡ್ಡಿ), 427 R/w 34 IPC.

ಪೊಲೀಸರ ಸಕಾಲಿಕ ಕಾರ್ಯಾಚರಣೆ

ಮಂಗಳೂರು ದಕ್ಷಿಣ ಉಪವಿಭಾಗದ ಸಹಾಯಕ ಪೊಲೀಸ್ ಆಯುಕ್ತರ (ACP) ಮಾರ್ಗದರ್ಶನದಲ್ಲಿ, ದಕ್ಷಿಣ ಉಪವಿಭಾಗ ಕಚೇರಿಯ ವಿಶೇಷ ಕರ್ತವ್ಯ ಪಡೆಯ ಅಧಿಕಾರಿಗಳು ಮತ್ತು ಸಿಬ್ಬಂದಿಗಳು ದಿನಾಂಕ 02-08-2026 ರಂದು ಸುಳಿವು ಆಧರಿಸಿ ಆರೋಪಿಯನ್ನು ಪತ್ತೆಹಚ್ಚಿ ವಶಕ್ಕೆ ಪಡೆದುಕೊಂಡಿದ್ದಾರೆ. ಬಂಧಿತ ಆರೋಪಿಯನ್ನು ನ್ಯಾಯಾಲಯಕ್ಕೆ ಹಾಜರುಪಡಿಸಲಾಗುವುದು ಎಂದು ನಗರ ಪೊಲೀಸ್ ಕಮಿಷನರ್ ಕಚೇರಿಯ ಪತ್ರಿಕಾ ಪ್ರಕಟಣೆ ತಿಳಿಸಿದೆ.

Continue Reading

arrest

ಮಂಗಳೂರು ಹಾಗೂ ದಕ್ಷಿಣ ಕನ್ನಡ ಜಿಲ್ಲೆ: ಪೊಲೀಸ್ ಇಲಾಖೆಯ ವಿವಿಧ ಪ್ರಮುಖ ಕಾರ್ಯಾಚರಣೆಗಳು – ಮೂವರು ಆರೋಪಿಗಳ ಬಂಧನ, ಪ್ರಕರಣಗಳಲ್ಲಿ ಮಹತ್ವದ ಬೆಳವಣಿಗೆ

Published

on

ಮಂಗಳೂರು: ದಕ್ಷಿಣ ಕನ್ನಡ ಜಿಲ್ಲೆ ಹಾಗೂ ಮಂಗಳೂರು ನಗರ ಪೊಲೀಸ್ ಕಮಿಷನರೇಟ್ ವ್ಯಾಪ್ತಿಯಲ್ಲಿ ಇತ್ತೀಚೆಗೆ ನಡೆದ ಮೂರು ಪ್ರಮುಖ ಕಾರ್ಯಾಚರಣೆಗಳು ಹಾಗೂ ನ್ಯಾಯಾಂಗ ಪ್ರಕ್ರಿಯೆಗಳಲ್ಲಿ ಪೊಲೀಸರು ಮಹತ್ವದ ಯಶಸ್ಸು ಸಾಧಿಸಿದ್ದಾರೆ. ನಿಷೇಧಿತ ಮಾದಕ ವಸ್ತು ಮಾರಾಟ ಮಾಡುತ್ತಿದ್ದ ಆರೋಪಿಯ ಬಂಧನ, 11 ವರ್ಷಗಳಿಂದ ತಲೆಮರೆಸಿಕೊಂಡಿದ್ದ ಕೊಲೆಯತ್ನ ಪ್ರಕರಣದ ಪ್ರಮುಖ ಆರೋಪಿಯ ಬಂಧನ ಹಾಗೂ ಅಪ್ರಾಪ್ತೆಯ ಮೇಲಿನ ಅತ್ಯಾಚಾರ ಪ್ರಕರಣದ ಆರೋಪಿಗೆ ಕಠಿಣ ಶಿಕ್ಷೆ ವಿಧಿಸಿದ ಘಟನೆಗಳು ನಡೆದಿವೆ.

ವರದಿಗಳ ವಿವರ ಇಲ್ಲಿದೆ:

1. ಬೆಳ್ತಂಗಡಿಯಲ್ಲಿ 7.60 ಲಕ್ಷ ರೂ. ಮೌಲ್ಯದ ಎಂಡಿಎಂಎ, ಗಾಂಜಾ ಜಪ್ತಿ: ಓರ್ವನ ಬಂಧನ

ಬೆಳ್ತಂಗಡಿ: ತಾಲೂಕಿನ ಕುವೆಟ್ಟು ಗ್ರಾಮದ ಪಿಲಿಚಂಡಿಕಲ್ಲು ಎಂಬಲ್ಲಿ ಜುಲೈ 29ರ ರಾತ್ರಿ ಬೆಳ್ತಂಗಡಿ ಠಾಣಾ ಪೊಲೀಸ್ ಉಪ ನಿರೀಕ್ಷಕರಾದ ಆನಂದ ಎಂ ಹಾಗೂ ಸಿಬ್ಬಂದಿ ರೌಂಡ್ಸ್ ಕರ್ತವ್ಯದಲ್ಲಿದ್ದಾಗ, ಅನುಮಾನಾಸ್ಪದವಾಗಿ ಆಟೋ ರಿಕ್ಷಾ (KA18 A 7203) ಬಳಿ ನಿಂತಿದ್ದ ಬೆಳ್ತಂಗಡಿ ಕುವೆಟ್ಟು ನಿವಾಸಿ ತ್ವಲಹ್ ಯಾನೆ ಅನ್ವರ್ ಯಾನೆ ಅನ್ಸರ್‌ (21) ಎಂಬಾತನನ್ನು ವಶಕ್ಕೆ ಪಡೆದಿದ್ದಾರೆ.

ಆತನ ತಪಾಸಣೆ ನಡೆಸಿದಾಗ 27 ಗ್ರಾಂ ಗಾಂಜಾ ಹಾಗೂ ಮೊಬೈಲ್ ಪತ್ತೆಯಾಗಿದೆ. ಸ್ಥಳದಲ್ಲಿದ್ದ ರಿಕ್ಷಾ ಹಾಗೂ ಕಾರನ್ನು ಪರಿಶೀಲಿಸಿದಾಗ ಸುಮಾರು 7,60,000 ರೂಪಾಯಿ ಮೌಲ್ಯದ 76.59 ಗ್ರಾಂ ತೂಕದ ನಿಷೇಧಿತ ಮಾದಕ ವಸ್ತುವಾದ MDMA (ಎಂಡಿಎಂಎ) ಪತ್ತೆಯಾಗಿದೆ. ಮಾದಕ ವಸ್ತು ಸರಬರಾಜು ಮಾಡಲು ಬಂದಿದ್ದ ಮತ್ತೋರ್ವ ಆರೋಪಿ ಅಮ್ಜತ್‌ ಖರಾರ್‌ ಎಂಬಾತ ತನ್ನ KA21 MA 4990 ಕಾರನ್ನು ಸ್ಥಳದಲ್ಲೇ ಬಿಟ್ಟು ಪರಾರಿಯಾಗಿದ್ದಾನೆ.

ಈ ಸಂಬಂಧ ಬೆಳ್ತಂಗಡಿ ಪೊಲೀಸ್ ಠಾಣೆಯಲ್ಲಿ NDPS ಕಾಯ್ದೆಯಡಿ (ಅಕ್ರ 82/2026) ಪ್ರಕರಣ ದಾಖಲಾಗಿದ್ದು, ಬಂಧಿತ ಆರೋಪಿಯನ್ನು ನ್ಯಾಯಾಲಯಕ್ಕೆ ಹಾಜರುಪಡಿಸಲಾಗಿದ್ದು, ಆತನಿಗೆ 14 ದಿನಗಳ ನ್ಯಾಯಾಂಗ ಬಂಧನ ವಿಧಿಸಲಾಗಿದೆ.

2. 11 ವರ್ಷಗಳಿಂದ ತಲೆಮರೆಸಿಕೊಂಡಿದ್ದ ಕೊಲೆಯತ್ನ ಪ್ರಕರಣದ ಪ್ರಮುಖ ಆರೋಪಿ ಸಿಸಿಬಿ ವಶಕ್ಕೆ

ಮಂಗಳೂರು: 2015ರಲ್ಲಿ ಮಂಗಳೂರಿನ ಕಾವೂರು ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ನಡೆದ ಕೊಲೆಯತ್ನ (307) ಪ್ರಕರಣದಲ್ಲಿ ಭಾಗಿಯಾಗಿ, ಸುಮಾರು 11 ವರ್ಷಗಳಿಂದ ತಲೆಮರೆಸಿಕೊಂಡಿದ್ದ ಪ್ರಮುಖ ಆರೋಪಿಯನ್ನು ಮಂಗಳೂರು ಸಿಸಿಬಿ ಪೊಲೀಸರು ಹಾವೇರಿಯಲ್ಲಿ ಬಂಧಿಸಿದ್ದಾರೆ.

ಬಂಧಿತ ಆರೋಪಿಯನ್ನು ಶಿವಮೊಗ್ಗ ಜಿಲ್ಲೆ ಶಿಕಾರಿಪುರ ತಾಲೂಕಿನ ಚುಂಕಿ ಆಕಾಶಭವನ ಅಲಿಯಾಸ್ ಸಂತೋಷ್ ಎಸ್ (34) ಎಂದು ಗುರುತಿಸಲಾಗಿದೆ. ಈತನು 2015ರಲ್ಲಿ ಮಂಗಳೂರಿನ ಆಕಾಶಭವನದಲ್ಲಿ ನಡೆದ ಮದುವೆಯೊಂದರ ಮದುರಂಗಿ ಶಾಸ್ತ್ರದ ವೇಳೆ ನಡೆದ ಗಲಾಟೆಯಲ್ಲಿ ಅಶೋಕ ಕುಮಾರ ಕೊಟ್ಟಾರಿ ಎಂಬುವರ ಮೇಲೆ ಇತರ ಆರೋಪಿಗಳೊಂದಿಗೆ ಸೇರಿ ತಲವಾರಿನಿಂದ ಕಡಿದು ಮಾರಣಾಂತಿಕ ಹಲ್ಲೆ ನಡೆಸಿದ್ದನು (ಕಾವೂರು ಠಾಣೆ ಅ.ಕ್ರ 135/2015).

ಪ್ರಕರಣ ದಾಖಲಾದ ದಿನದಿಂದ ದಸ್ತಗಿರಿಗೆ ಸಿಗದೆ ತಲೆಮರೆಸಿಕೊಂಡಿದ್ದ ಈತನ ವಿರುದ್ಧ ನ್ಯಾಯಾಲಯವು ಎಲ್ಪಿಸಿ (LPC) ವಾರಂಟ್ (25/2025) ಹೊರಡಿಸಿತ್ತು. ಸಿಸಿಬಿ ಪೊಲೀಸರಿಗೆ ದೊರೆತ ಖಚಿತ ಮಾಹಿತಿ ಮೇರೆಗೆ ಜುಲೈ 29, 2026 ರಂದು ಹಾವೇರಿ ಜಿಲ್ಲೆಯ ಚಿಕ್ಕೆರೂರು ಎಂಬಲ್ಲಿ ಈತನನ್ನು ವಶಕ್ಕೆ ಪಡೆದು, ಮುಂದಿನ ಕಾನೂನು ಕ್ರಮಕ್ಕಾಗಿ ಕಾವೂರು ಪೊಲೀಸ್ ಠಾಣೆಗೆ ಹಸ್ತಾಂತರಿಸಲಾಗಿದೆ.

3. ಅಪ್ರಾಪ್ತೆಯ ಮೇಲಿನ ದೌರ್ಜನ್ಯ, ನಗ್ನ ವಿಡಿಯೋ ಸ್ಕ್ರೀನ್‌ಶಾಟ್ ಇಟ್ಟು ಬೆದರಿಕೆ: ಆರೋಪಿಗೆ 20 ವರ್ಷ ಕಠಿಣ ಜೈಲು ಶಿಕ್ಷೆ

ಮಂಗಳೂರು: ಅಪ್ರಾಪ್ತ ಬಾಲಕಿ ಮೇಲೆ ಅತ್ಯಾಚಾರ ನಡೆಸಿ, ನಗ್ನ ಚಿತ್ರಗಳನ್ನು ವೈರಲ್ ಮಾಡುವುದಾಗಿ ಜೀವ ಬೆದರಿಕೆಯೊಡ್ಡಿದ್ದ ಕಂಕನಾಡಿ ನಗರ ಪೊಲೀಸ್ ಠಾಣಾ ವ್ಯಾಪ್ತಿಯ ಪ್ರಕರಣದ (ಅ.ಕ್ರ. 130/2025) ಆರೋಪಿಗೆ ಮಂಗಳೂರಿನ ಎಫ್‌ಟಿಎಸ್‌ಸಿ-2 (FTSC-2) ಹೆಚ್ಚುವರಿ ಜಿಲ್ಲಾ ಮತ್ತು ಸತ್ರ ನ್ಯಾಯಾಲಯವು 20 ವರ್ಷ ಕಠಿಣ ಕಾರಾಗೃಹ ಶಿಕ್ಷೆ ವಿಧಿಸಿ ತೀರ್ಪು ನೀಡಿದೆ.

ಕುಂಜತ್ತಬೈಲ್ ದೇವಿ ನಗರ ನಿವಾಸಿ ಸೋನು ಮ್ಯಾಕ್ಲಿನ್ ನೊರೊನ್ಹ (20) ಶಿಕ್ಷೆಗೆ ಒಳಗಾದ ಆರೋಪಿ. ಈತನು 2024ರಿಂದ ಅಪ್ರಾಪ್ತ ಬಾಲಕಿಯನ್ನು ಪ್ರೀತಿಸುವಂತೆ ನಂಬಿಸಿ, ಶಕ್ತಿನಗರ ಹಾಗೂ ಅಳಪೆ ಗ್ರಾಮದ ಮನೆಗಳಲ್ಲಿ ಹಲವು ಬಾರಿ ಅತ್ಯಾಚಾರ ಎಸಗಿದ್ದನು. ಅಲ್ಲದೆ, ಬಾಲಕಿ ಸ್ನಾನ ಮಾಡುತ್ತಿದ್ದಾಗ ವಿಡಿಯೋ ಕಾಲ್ ಮಾಡಿ ಅದರ ಸ್ಕ್ರೀನ್‌ಶಾಟ್ ತೆಗೆದುಕೊಂಡು, ದೈಹಿಕ ಸಂಪರ್ಕಕ್ಕೆ ಬರದಿದ್ದರೆ ಚಿತ್ರಗಳನ್ನು ವೈರಲ್ ಮಾಡುವುದಾಗಿ ಹಾಗೂ ಕುಟುಂಬಸ್ಥರನ್ನು ಕೊಲೆ ಮಾಡುವುದಾಗಿ ಬೆದರಿಕೆಯೊಡ್ಡಿದ್ದನು.

ಕಂಕನಾಡಿ ನಗರ ಠಾಣೆಯ ಅಂದಿನ ಪೊಲೀಸ್ ಇನ್‌ಸ್ಪೆಕ್ಟರ್ ಟಿ.ಡಿ. ನಾಗರಾಜ್ ತನಿಖೆ ನಡೆಸಿ ದೋಷಾರೋಪಣೆ ಪಟ್ಟಿ ಸಲ್ಲಿಸಿದ್ದರು. ವಿಶೇಷ ಸರ್ಕಾರಿ ಅಭಿಯೋಜಕರಾದ ಸಹನಾ ದೇವಿ ಸರ್ಕಾರದ ಪರ ವಾದ ಮಂಡಿಸಿದ್ದರು.

ಪ್ರಕರಣದ ವಿಚಾರಣೆ ನಡೆಸಿದ ಗೌರವಾನ್ವಿತ ನ್ಯಾಯಾಧೀಶರಾದ ಮಾನು ಕೆ.ಎಸ್. ರವರು ಆರೋಪಿಗೆ:

ಪೋಕ್ಸೋ ಕಲಂ 6 ಹಾಗೂ BNS ಕಲಂ 64(2)(m) ಅಡಿಯಲ್ಲಿ 20 ವರ್ಷ ಕಠಿಣ ಕಾರಾಗೃಹ ಶಿಕ್ಷೆ ಮತ್ತು ₹50,000 ದಂಡ,

BNS ಕಲಂ 77, ಪೋಕ್ಸೋ ಕಲಂ 15 ಹಾಗೂ IT ಕಾಯ್ದೆಯ ಕಲಂ 66(E) ಅಡಿಯಲ್ಲಿ ತಲಾ 1 ವರ್ಷ ಜೈಲು ಶಿಕ್ಷೆ ಮತ್ತು ದಂಡ ವಿಧಿಸಿ ತೀರ್ಪು ನೀಡಿದ್ದಾರೆ.

Continue Reading

Trending

Copyright © 2025 Deevatige

error: Content is protected !!