DEATH
ಮಂಗಳೂರಿನಲ್ಲಿ ಭೀಕರ ದುರಂತ: ಭಾರಿ ಮಳೆಗೆ ಧರೆ ಕುಸಿದು ತಾಯಿ, ಇಬ್ಬರು ಮಕ್ಕಳು ಸಾವು!
ಮಂಗಳೂರು: ದಕ್ಷಿಣ ಕನ್ನಡ ಜಿಲ್ಲೆಯಾದ್ಯಂತ ಮಂಗಳವಾರ ರಾತ್ರಿಯಿಂದ ಸುರಿಯುತ್ತಿರುವ ಭಾರಿ ಮಳೆಗೆ ನಗರದ ಕಂಕನಾಡಿ ನಾಗುರಿ ಬಳಿ ಭೀಕರ ದುರಂತವೊಂದು ಸಂಭವಿಸಿದೆ. ನಿರಂತರ ಮಳೆಯಿಂದಾಗಿ ಎತ್ತರದ ಜಾಗದ ಧರೆಯು ಕೆಳಗಿದ್ದ ಹಳೇ ಮನೆಯೊಂದರ ಮೇಲೆ ಕುಸಿದು ಬಿದ್ದ ಪರಿಣಾಮ, ಮನೆಯಲ್ಲಿದ್ದ ಬಿಹಾರ ಮೂಲದ ತಾಯಿ ಮತ್ತು ಇಬ್ಬರು ಮಕ್ಕಳು ಮಣ್ಣಿನಡಿ ಸಿಲುಕಿ ಮೃತಪಟ್ಟಿದ್ದಾರೆ.
ಮೃತಪಟ್ಟವರು ಬಿಹಾರ ಮೂಲದವರಾಗಿದ್ದು, ಮಂಗಳೂರಿನಲ್ಲಿ ಕಟ್ಟಡ ಕಾರ್ಮಿಕರಾಗಿ ಕೆಲಸ ಮಾಡುತ್ತಿದ್ದರು ಎಂದು ತಿಳಿದುಬಂದಿದೆ. ನಾಗುರಿಯಲ್ಲಿರುವ ಕಂಕನಾಡಿ ನಗರ ಪೊಲೀಸ್ ಠಾಣೆಯ ಸಮೀಪದಲ್ಲೇ ಈ ಘಟನೆ ನಡೆದಿದೆ.

ಮೂವರ ರಕ್ಷಣೆ – ಮುಂದುವರಿದ ಕಾರ್ಯಾಚರಣೆ: ಘಟನೆಯ ಮಾಹಿತಿ ಲಭ್ಯವಾಗುತ್ತಿದ್ದಂತೆಯೇ ರಾಷ್ಟ್ರೀಯ ವಿಪತ್ತು ನಿರ್ವಹಣಾ ಪಡೆ (ಎನ್ಡಿಆರ್ಎಫ್) ಹಾಗೂ ಸ್ಥಳೀಯ ರಕ್ಷಣಾ ಸಿಬ್ಬಂದಿ ತುರ್ತು ಕಾರ್ಯಾಚರಣೆ ಆರಂಭಿಸಿದರು. ಹಲವು ಗಂಟೆಗಳ ಕಾರ್ಯಾಚರಣೆಯ ಬಳಿಕ ಅವಶೇಷಗಳಡಿ ಸಿಲುಕಿದ್ದ ಅಲ್ಕಾ (14), ಅನುಷಾ (11) ಹಾಗೂ ಬಾಲಕೃಷ್ಣ (48) ಅವರನ್ನು ಜೀವಂತವಾಗಿ ರಕ್ಷಿಸಿ ಆಸ್ಪತ್ರೆಗೆ ದಾಖಲಿಸಲಾಯಿತು. ಅವರ ಆರೋಗ್ಯದ ಮೇಲೆ ವೈದ್ಯರು ನಿಗಾ ವಹಿಸಿದ್ದಾರೆ.
ಆದರೆ, ಅವಶೇಷಗಳಡಿ ತೀವ್ರವಾಗಿ ಸಿಲುಕಿಕೊಂಡಿದ್ದ ಶಾಂತಾ (46), ಅನಾಮಿಕ ಚೌರಾಸಿಯಾ (8) ಹಾಗೂ ಪರಿ (4) ಅವರನ್ನು ಹೊರತೆಗೆದಾಗ ಅವರು ಮೃತಪಟ್ಟಿರುವುದು ದೃಢಪಟ್ಟಿದೆ.
ಮೂಲತಃ ಬಿಹಾರ ರಾಜ್ಯದವರಾದ ಬಾಲಕೃಷ್ಣ ಅವರ ಕುಟುಂಬ ಕಳೆದ ಸುಮಾರು 20 ವರ್ಷಗಳಿಂದ ನಾಗುರಿ ಪ್ರದೇಶದಲ್ಲಿ ಬಾಡಿಗೆ ಮನೆಯಲ್ಲಿ ವಾಸಿಸುತ್ತಿತ್ತು ಎಂದು ತಿಳಿದುಬಂದಿದೆ. ಜೀವನೋಪಾಯಕ್ಕಾಗಿ ಮಂಗಳೂರಿಗೆ ಬಂದಿದ್ದ ಕುಟುಂಬದ ಮೇಲೆ ಪ್ರಕೃತಿ ಈ ರೀತಿಯ ದುರ್ಘಟನೆ ಎಸಗಿರುವುದು ಮನಕಲಕುವಂತಾಗಿದೆ.
ದುರಂತದ ಸುದ್ದಿ ತಿಳಿಯುತ್ತಿದ್ದಂತೆಯೇ ದಕ್ಷಿಣ ಕನ್ನಡ ಜಿಲ್ಲಾಧಿಕಾರಿ ದರ್ಶನ್ ಅವರು ಘಟನಾ ಸ್ಥಳಕ್ಕೆ ಭೇಟಿ ನೀಡಿ ಪರಿಶೀಲನೆ ನಡೆಸಿದರು. ಸಂತ್ರಸ್ತ ಕುಟುಂಬದ ಸದಸ್ಯರಿಗೆ ಸಾಂತ್ವನ ಹೇಳಿದ ಅವರು, ಘಟನೆಯ ಕುರಿತು ಅಧಿಕಾರಿಗಳಿಂದ ಮಾಹಿತಿ ಪಡೆದು, ರಕ್ಷಣಾ ಕಾರ್ಯಾಚರಣೆ, ಪರಿಹಾರ ಹಾಗೂ ಅಗತ್ಯ ಕಾನೂನು ಕ್ರಮಗಳನ್ನು ತ್ವರಿತವಾಗಿ ಕೈಗೊಳ್ಳುವಂತೆ ಸಂಬಂಧಿಸಿದ ಅಧಿಕಾರಿಗಳಿಗೆ ಸೂಚನೆ ನೀಡಿದರು.
.https://deevatigenews.com/wp-content/uploads/2026/07/VID-20260701-WA0147.mp4
ಜಿಲ್ಲೆಯಾದ್ಯಂತ ಕೃತಕ ನೆರೆ: ದಕ್ಷಿಣ ಕನ್ನಡ ಜಿಲ್ಲೆಯಾದ್ಯಂತ ಮಂಗಳವಾರ ರಾತ್ರಿಯಿಂದ ಬಿಡುವಿಲ್ಲದೆ ಮಳೆ ಸುರಿಯುತ್ತಿದ್ದು, ಹಲವೆಡೆ ಕೃತಕ ನೆರೆ ಸೃಷ್ಟಿಯಾಗಿದೆ. ತಗ್ಗು ಪ್ರದೇಶಗಳು ಜಲಾವೃತಗೊಂಡಿದ್ದು, ಸಾರ್ವಜನಿಕರ ಜನಜೀವನ ಸಂಪೂರ್ಣ ಅಸ್ತವ್ಯಸ್ತಗೊಂಡಿದೆ.



accident
ಬಂಟ್ವಾಳ: ಉಪ್ಪಿನಂಗಡಿ ಪೊಲೀಸ್ ಠಾಣಾ ವ್ಯಾಪ್ತಿಯ ಪೆರ್ಣೆಯಲ್ಲಿ ದುರ್ಘಟನೆ; ಕೌಟುಂಬಿಕ ಕಲಹದ ಹಿನ್ನೆಲೆ ಮಕ್ಕಳನ್ನು ಬಾವಿಗೆ ಎಸೆದ ತಾಯಿ – ಒಂದು ಮಗು ಸಾವು, ಮತ್ತೊಂದು ಮಗು ಆಸ್ಪತ್ರೆಗೆ ದಾಖಲು
ಬಂಟ್ವಾಳ: ದಿನಾಂಕ: 19.09.2026ರಂದು ಮಧ್ಯಾಹ್ನ ಉಪ್ಪಿನಂಗಡಿ ಠಾಣಾ ವ್ಯಾಪ್ತಿಯ ಪೆರ್ಣೆ ಮೈರಕಟ್ಟೆಯಲ್ಲಿ ನಡೆದ ದೊಡ್ಡ ದುರಂತವೊಂದು ಬೆಳಕಿಗೆ ಬಂದಿದೆ. ಪೆರ್ಣೆಯಲ್ಲಿ ವಾಸ್ತವವಿರುವ ಸಿನಾನ್ (32) ಹಾಗೂ ನೂರುನ್ನಿಸಾ (28) ಎಂಬ ದಂಪತಿಗಳ ನಡುವೆ ಫೋನ್ ಕರೆಯಲ್ಲಿ ವೈವಾಹಿಕ ಕಲಹ ನಡೆದಿದ್ದು, ಈ ವೇಳೆ ಕೋಪಗೊಂಡ ಆರೋಪಿತೆ ನೂರುನ್ನಿಸಾ ಮನೆಯಲ್ಲಿದ್ದ ಆಕೆಯ ಸುಮಾರು ಮೂರುವರೆ ವರ್ಷದ ಮಗು ಹಾಗೂ ಗಂಡನ ತಂಗಿಯ ಮಗುವನ್ನು ಮನೆ ಸಮೀಪದ ಕುಡಿಯುವ ನೀರಿನ ಬಾವಿಗೆ ಎಸೆದಿರುವುದಾಗಿ ಎಸ್ಪಿ ಮಾಹಿತಿ ನೀಡಿದ್ದಾರೆ.

ಆದರೆ, ಬೆಳಿಗ್ಗೆ ಸ್ಥಳೀಯ ವಾಹಿನಿಗಳಲ್ಲಿ ಹಾಗೂ ಆರಂಭಿಕ ವರದಿಗಳಲ್ಲಿ ಮಕ್ಕಳು ಆಟವಾಡುತ್ತಾ ಆಕಸ್ಮಿಕವಾಗಿ ಬಾವಿಗೆ ಬಿದ್ದಿವೆ ಎಂದು ಪ್ರಸಾರವಾಗಿತ್ತು. ಪ್ರತ್ಯಕ್ಷದರ್ಶಿಗಳು ಹಾಗೂ ಆರಂಭಿಕ ಮಾಹಿತಿಯಂತೆ, ಪೆರ್ಣೆ ಮೈರಕಟ್ಟೆಯಲ್ಲಿ ಮಕ್ಕಳು ಬಾವಿಯ ಸಮೀಪವಿದ್ದ ವೇಳೆ ಆಲಿಯಾ (4) ಆಕಸ್ಮಿಕವಾಗಿ ಬಾವಿಗೆ ಬಿದ್ದಿದ್ದು, ಇದನ್ನು ಗಮನಿಸಿದ ಸ್ಥಳೀಯರು ತಕ್ಷಣ ರಕ್ಷಿಸಿ ಮೇಲಕ್ಕೆ ಕರೆತಂದಿದ್ದರು. ಬಳಿಕ ಮತ್ತೊಂದು ಮಗು ಕೂಡ ಬಾವಿಗೆ ಬಿದ್ದಿರುವ ಬಗ್ಗೆ ಆಲಿಯಾ ಮಾಹಿತಿ ನೀಡಿದ್ದಾಳೆ ಎನ್ನಲಾಗಿದ್ದು, ಸ್ಥಳೀಯರು ಪರಿಶೀಲಿಸಿದಾಗ ರಬೀಹ್ (2) ಬಾವಿಯಲ್ಲಿ ಬಿದ್ದಿರುವುದು ಗಮನಕ್ಕೆ ಬಂದಿತ್ತು. ತಕ್ಷಣ ಮೇಲಕ್ಕೆತ್ತಿ ಆಸ್ಪತ್ರೆಗೆ ಕರೆದೊಯ್ದರೂ ರಬೀಹ್ ಚಿಕಿತ್ಸೆ ಫಲಕಾರಿಯಾಗದೆ ಮೃತಪಟ್ಟಿರುವುದಾಗಿ ಪ್ರಸಾರವಾಗಿತ್ತು.

ನೈಜ ಸತ್ಯ ಬಯಲುಗೊಳಿಸಿದ ಪೊಲೀಸರು:
ಸ್ಥಳೀಯ ಮಾದ್ಯಮಗಳಲ್ಲಿ ಆರಂಭದಲ್ಲಿ ಆಕಸ್ಮಿಕ ಸಾವು ಎಂದು ಬಿತ್ತರವಾಗಿದ್ದರೂ, ಪೊಲೀಸ್ ತನಿಖೆಯಿಂದ ಅಸಲಿ ವಿಚಾರ ಹೊರಬಂದಿದೆ. ದಂಪತಿಗಳ ನಡುವಿನ ಫೋನ್ ಕರೆಯ ಕೌಟುಂಬಿಕ ಕಲಹದ ರಭಸದಲ್ಲಿ ಕೋಪಗೊಂಡ ಆರೋಪಿತೆ ನೂರುನ್ನಿಸಾ ತಾನೇ ಸ್ವತಃ ಮಕ್ಕಳನ್ನು ಬಾವಿಗೆ ಎಸೆದಿರುವುದು ಎಸ್ಪಿ ನೀಡಿರುವ ಅಧಿಕೃತ ಮಾಹಿತಿಯಿಂದ ತಿಳಿದುಬಂದಿದೆ. ಸ್ಥಳೀಯರು ಸ್ಥಳಕ್ಕೆ ಆಗಮಿಸಿ ಮಕ್ಕಳನ್ನು ಮೇಲಕ್ಕೆ ಎತ್ತಿದ1ರ ಪೈಕಿ ಗಂಡನ ತಂಗಿಯ ಮಗು (ರಬೀಹ್ – 3) ಮೃತಪಟ್ಟಿದ್ದು, ಆರೋಪಿತೆಯ ಮಗು (ಆಲಿಯಾ – 4) ಗಾಯಗೊಂಡು ಮಂಗಳೂರಿನ ಖಾಸಗಿ ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿದೆ.
ಈ ಬಗ್ಗೆ ಉಪ್ಪಿನಂಗಡಿ ಪೊಲೀಸ್ ಠಾಣೆಯಲ್ಲಿ ಅ.ಕ್ರ: 121/2026 ರಡಿಯಲ್ಲಿ ಪ್ರಕರಣ ದಾಖಲಿಸಿಕೊಳ್ಳಲಾಗಿದ್ದು, ಆರೋಪಿತೆ ನೂರುನ್ನಿಸಾಳನ್ನು ಪೊಲೀಸರು ವಶಕ್ಕೆ ಪಡೆದು ತೀವ್ರ ವಿಚಾರಣೆ ನಡೆಸುತ್ತಿದ್ದಾರೆ. ಘಟನಾ ಸ್ಥಳಕ್ಕೆ ಉಪ್ಪಿನಂಗಡಿ ಪೊಲೀಸರು ಭೇಟಿ ನೀಡಿ ಪರಿಶೀಲನೆ ನಡೆಸಿದ್ದು, ಹೆಚ್ಚಿನ ತನಿಖೆ ಮುಂದುವರಿದಿದೆ.
DEATH
ಬೆಳಗಾವಿ: ಆಸ್ತಿಗಾಗಿ ಆಕ್ರೋಶ; ಗ್ರಾಮ ಪಂಚಾಯಿತಿ ಕಚೇರಿಯಲ್ಲೇ ತಂದೆ-ಮಗಳ ಬರ್ಬರ ಹತ್ಯೆ
ಬೆಳಗಾವಿ: ಆಸ್ತಿ ದಾಖಲೆಗಳನ್ನು ಪಡೆದುಕೊಳ್ಳಲು ಗ್ರಾಮ ಪಂಚಾಯಿತಿಗೆ ಬಂದಿದ್ದ ಮಾಜಿ ಯೋಧ ಹಾಗೂ ಅವರ ಪುತ್ರಿಯನ್ನು ಸಂಬಂಧಿಕರೇ ಮಾರಕಾಸ್ತ್ರಗಳಿಂದ ಕೊಚ್ಚಿ ಬರ್ಬರವಾಗಿ ಹತ್ಯೆ ಮಾಡಿರುವ ದಾರುಣ ಘಟನೆ ಬೆಳಗಾವಿ ಜಿಲ್ಲೆಯ ಕಿತ್ತೂರು ತಾಲೂಕಿನ ಅವರಾದಿ ಗ್ರಾಮದಲ್ಲಿ ನಡೆದಿದೆ.
ಮಾಜಿ ಯೋಧ ರುದ್ರಪ್ಪ ಕುಂದರಗಿ (67) ಮತ್ತು ಅವರ ಪುತ್ರಿ ಶಶಿಕಲಾ ಕುಂದರಗಿ (26) ಹತ್ಯೆಗೀಡಾದ ದುರ್ದೈವಿಗಳು. ಈ ಭೀಕರ ದಾಳಿಯಲ್ಲಿ ರುದ್ರಪ್ಪ ಅವರ ಕಾರು ಚಾಲಕ ಗಂಭೀರವಾಗಿ ಗಾಯಗೊಂಡಿದ್ದು, ಅವರನ್ನು ಸ್ಥಳೀಯ ಆಸ್ಪತ್ರೆಗೆ ದಾಖಲಿಸಿ ಚಿಕಿತ್ಸೆ ನೀಡಲಾಗುತ್ತಿದೆ.
ಘಟನೆಯ ಹಿನ್ನೆಲೆ:
ಮೃತರಾದ ರುದ್ರಪ್ಪ ಹಾಗೂ ಅವರ ಅಣ್ಣತಮ್ಮಂದಿರ ನಡುವೆ 38 ಗುಂಟೆ ಆಸ್ತಿಗೆ ಸಂಬಂಧಿಸಿದಂತೆ ದೀರ್ಘಕಾಲದಿಂದ ವ್ಯಾಜ್ಯವಿತ್ತು ಎನ್ನಲಾಗಿದೆ. ಈ ಆಸ್ತಿಯನ್ನು ಮೂವರಿಗೆ ಹಂಚಿಕೆ ಮಾಡುವಂತೆ ನ್ಯಾಯಾಲಯವೂ ಆದೇಶ ನೀಡಿತ್ತು. ಆದರೆ, ರುದ್ರಪ್ಪ ಅವರಿಗೆ ಸೇರಿದ್ದ ಜಮೀನನ್ನು ಅವರು ಈಗಾಗಲೇ ಮಾರಿಕೊಂಡಿದ್ದು, ಉಳಿದ ಜಮೀನಿನಲ್ಲೂ ತಮಗೆ ಪಾಲು ಬೇಕು ಎಂದು ಸಹೋದರರು ಪಟ್ಟು ಹಿಡಿದಿದ್ದರು. ರುದ್ರಪ್ಪ ಅವರ ಹೆಸರಿನಲ್ಲಿ ಆಸ್ತಿ ಮುಂದುವರಿದಿರುವ ವಿಚಾರವೇ ಈ ಮಾರಣಾಹೋಮಕ್ಕೆ ಪ್ರಮುಖ ಕಾರಣ ಎಂದು ತಿಳಿದುಬಂದಿದೆ.
ಪಂಚಾಯಿತಿ ಒಳಗಡೆಯೇ ಕೃತ್ಯ:
ಧಾರವಾಡದಿಂದ ಬಾಡಿಗೆ ಕಾರಿನಲ್ಲಿ ಗ್ರಾಮಕ್ಕೆ ಬಂದಿದ್ದ ರುದ್ರಪ್ಪ, ಆಸ್ತಿ ಪಾಲುದಾರಿಕೆ ಹಾಗೂ ದಾಖಲೆಗಳನ್ನು ಪಡೆದುಕೊಳ್ಳಲು ಅವರಾದಿ ಗ್ರಾಮ ಪಂಚಾಯಿತಿಗೆ ತೆರಳಿದ್ದರು. ರುದ್ರಪ್ಪ ಪಂಚಾಯಿತಿಗೆ ಬಂದಿರುವ ಸುದ್ಧಿ ತಿಳಿದು ಸ್ಥಳಕ್ಕೆ ಆಗಮಿಸಿದ ಅವರ ಸಹೋದರರಾದ ಬಸಪ್ಪ ಕುಂದರಗಿ, ಸಂಗಪ್ಪ ಕುಂದರಗಿ ಹಾಗೂ ಸಂಗಪ್ಪ ಅವರ ಪುತ್ರ ಮಡಿವಾಳಪ್ಪ ಕುಂದರಗಿ ಏಕಾಏಕಿ ದಾಳಿ ನಡೆಸಿದ್ದಾರೆ.
ಗ್ರಾಮ ಪಂಚಾಯಿತಿ ಕಚೇರಿಯ ಒಳಗಡೆಯೇ ಕೊಡಲಿ, ಕುಡಗೋಲು ಸೇರಿದಂತೆ ಮಾರಕಾಸ್ತ್ರಗಳಿಂದ ರುದ್ರಪ್ಪ ಅವರ ಮೇಲೆ ಹಲ್ಲೆ ನಡೆಸಲಾಗಿದೆ. ಈ ವೇಳೆ ತಂದೆಯನ್ನು ರಕ್ಷಿಸಲು ಮುಂದಾದ ಪುತ್ರಿ ಶಶಿಕಲಾ ಅವರ ಮೇಲೂ ದುಷ್ಕರ್ಮಿಗಳು ಮಾರಕಾಸ್ತ್ರಗಳಿಂದ ದಾಳಿ ನಡೆಸಿ ಇಬ್ಬರನ್ನೂ ನಿರ್ದಯವಾಗಿ ಹತ್ಯೆ ಮಾಡಿದ್ದಾರೆ.
ಈ ಸಂಬಂಧ ಕಿತ್ತೂರು ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದ್ದು, ಪೊಲೀಸರು ತನಿಖೆ ಮುಂದುವರಿಸಿದ್ದಾರೆ. ಪಂಚಾಯಿತಿ ಕಚೇರಿಯಲ್ಲೇ ನಡೆದ ಈ ಜೋಡಿ ಹತ್ಯೆಯು ಇಡೀ ಗ್ರಾಮದಲ್ಲಿ ತೀವ್ರ ಆತಂಕ ಹಾಗೂ ಶೋಕಮೂಡಿಸಿದೆ.
ಇಬ್ಬರ ಆಸ್ತಿಯಲ್ಲೂ ಪಾಲು ಕೇಳಿದ್ದಕ್ಕೆ ಕುಪಿತಗೊಂಡಿದ್ದ ಇಬ್ಬರು ಸಹೋದರರು, ಇಂದು ಜಮೀನು ದಾಖಲು ಮಾಡಲು ಗ್ರಾಮ ಪಂಚಾಯತ್ಗೆ ರುದ್ರಪ್ಪ ಬಂದಿದ್ದರು. ಈ ವೇಳೆಯೇ ದಾಳಿ ಮಾಡಿ ತಂದೆ-ಮಗಳನ್ನು ಕೊಲೆ ಮಾಡಿದ್ದಾರೆ. ಬಳಿಕ ಆರೋಪಿಗಳು ಅಲ್ಲಿಂದ ಪರಾರಿ ಆಗಿದ್ದಾರೆ ಅಂತಾ ಸ್ಥಳೀಯರು ಹೇಳಿದ್ದಾರೆ.
ತಂದೆ-ಮಗಳ ಕೊಲೆ ಹಿನ್ನೆಲೆಯಲ್ಲಿ ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ ಕೆ. ರಾಮರಾಜನ್ ಅವರು ಕೂಡ ಘಟನಾ ಸ್ಥಳಕ್ಕೆ ಭೇಟಿ ನೀಡಿ ಸ್ಥಳೀಯ ಪೊಲೀಸರಿಂದ ಮಾಹಿತಿ ಪಡೆದುಕೊಳ್ಳುತ್ತಿದ್ದಾರೆ. ಆರೋಪಿಗಳ ಪತ್ತೆಗೆ ಬಲೆ ಬೀಸಿದ್ದು, ಮುಂದಿನ ತನಿಖೆ ಕೈಗೊಂಡಿದ್ದಾರೆ. ಮೃತದೇಹಗಳನ್ನು ತಾಲೂಕಾಸ್ಪತ್ರೆಗೆ ರವಾನಿಸಲಾಗಿದೆ. ಜೋಡಿ ಕೊಲೆಯಿಂದ ಅವರಾದಿ ಗ್ರಾಮದಲ್ಲಿ ಜನರು ಬೆಚ್ಚಿಬಿದ್ದಿದ್ದಾರೆ. ಸ್ಥಳದಲ್ಲಿ ನೂರಾರು ಜನರು ಜಮಾವಣೆಗೊಂಡಿದ್ದಾರೆ.
Bantawala
ವಿಟ್ಲ ಕಸಬಾ ಗ್ರಾಮದ ಕೈಂತಿಲ ನಿವಾಸಿ, ಮಾಜಿ ಎಪಿಎಂಸಿ ಅಧ್ಯಕ್ಷ ಸಂಕಪ್ಪ ಗೌಡ ನಿಧನ
ವಿಟ್ಲ: ವಿಟ್ಲ ಕಸಬಾ ಗ್ರಾಮದ ಕೈಂತಿಲ ನಿವಾಸಿ, ಮಾಜಿ ಎಪಿಎಂಸಿ ಅಧ್ಯಕ್ಷರೂ ಹಾಗೂ ಮಾಜಿ ಗ್ರಾಮ ಪಂಚಾಯತ್ ಸದಸ್ಯರೂ ಆಗಿರುವ ಸಂಕಪ್ಪ ಗೌಡ (67) ಅವರು ಇಂದು ಮುಂಜಾನೆ ತಮ್ಮ ಸ್ವಗೃಹದಲ್ಲಿ ನಿಧನರಾದರು.
ಅವರು ಕಳೆದ ಕೆಲವು ದಿನಗಳಿಂದ ಅಲ್ಪಕಾಲದ ಅನಾರೋಗ್ಯದಿಂದ ಬಳಲುತ್ತಿದ್ದರು. ಭಾರತೀಯ ಜನತಾ ಪಕ್ಷದ (BJP) ನಿಷ್ಠಾವಂತ ಕಾರ್ಯಕರ್ತರಾಗಿ ಗುರುತಿಸಿಕೊಂಡಿದ್ದ ಅವರು, ಸಾರ್ವಜನಿಕ ಹಾಗೂ ರಾಜಕೀಯ ಕ್ಷೇತ್ರದಲ್ಲಿ ಸಕ್ರಿಯವಾಗಿ ತೊಡಗಿಸಿಕೊಂಡು ಜನಪರ ಕಾಳಜಿಯೊಂದಿಗೆ ಸೇವೆ ಸಲ್ಲಿಸಿದ್ದರು. ಅವರ ಅಗಲಿಕೆಯಿಂದ ಪಕ್ಷಕ್ಕೆ ಹಾಗೂ ಸ್ಥಳೀಯ ಸಮುದಾಯಕ್ಕೆ ತುಂಬಲಾರದ ನಷ್ಟ ಉಂಟಾಗಿದೆ.
ಮೃತರು ಪತ್ನಿ, ನಾಲ್ವರು ಪುತ್ರರು ಹಾಗೂ ಅಪಾರ ಬಂಧು-ಬಳಗವನ್ನು ಅಗಲಿದ್ದಾರೆ.
-
accident2 months agoಬಿ.ಸಿ. ರೋಡ್ ಸರ್ಕಲ್ನಲ್ಲಿ ಭೀಕರ ಅಪಘಾತ: ಟಿಪ್ಪರ್-ಆಕ್ಟಿವಾ ನಡುವೆ ಡಿಕ್ಕಿ, ಸವಾರರಿಬ್ಬರೂ ದುರ್ಮರಣ
-
Bantawala2 months agoಬಂಟ್ವಾಳದಲ್ಲಿ ಭೀಕರ ಹತ್ಯಾಕಾಂಡ: ಬಸ್ನಲ್ಲಿ ಕುಳಿತಿದ್ದ ಯುವತಿಯನ್ನು ಸಾರ್ವಜನಿಕರೆದುರೇ ಕೊಚ್ಚಿ ಕೊಂದ ತಲೆಹರಟೆ ಪ್ರೇಮಿ!
-
crime8 months agoಅತ್ಯಾಚಾರ ಯತ್ನಕ್ಕೆ ತಡೆದ ಸೊಸೆಯ ಮುಖಕ್ಕೆ ಕಚ್ಚಿ ಕೊಲೆಗೆ ಯತ್ನಿಸಿದ ಮಾವ..ತಂದೆಯ ರಾಕ್ಷಸೀ ಕೃತ್ಯಕ್ಕೆ ಬೆಂಬಲಿಸಿದ ಗಂಡ..ಸುಳ್ಯ ಠಾಣಾ ವ್ಯಾಪ್ತಿಯಲ್ಲಿ ಅದೃಷ್ಟವಶಾತ್ ಬಚಾವಾದ ಸೊಸೆ..
-
crime6 months agoಧಾರ್ಮಿಕ ನಂಬಿಕೆಗೆ ಅವಮಾನ: ಕೊಡಗಿನ ಎಮ್ಮೆಮಾಡಿನಲ್ಲಿ ದೈವದ ವೇಷದಂತೆ ಧರಿಸಿ ಮದುಮಗನ ಅತಿರೇಕದ ವರ್ತನೆ!
-
Bantawala6 months agoವಿಟ್ಲದಲ್ಲಿ ನಡೆಯಿತೊಂದು ದೈವ ಕಾರಣಿಕ; ಪೊಲೀಸರ ಕಣ್ಣಿಗೆ ಮಣ್ಣೆರಚಿದರೂ ದೈವದ ದೃಷ್ಟಿಗೆ ತತ್ತರಿಸಿದ ದನಕಳ್ಳ..
-
Bantawala9 months agoನಾಗಬನ, ರಕ್ತೇಶ್ವರಿ ತಾಣ, ದೈವದೇವರ ಸಾನಿಧ್ಯ ದ್ವಂಸ ಗೊಳಿಸಿದ ಧರ್ಮದ್ರೋಹಿ ಕೃತ್ಯದ ವಿರುದ್ಧ ಭಕ್ತರ ಆಕ್ರೋಶ ; ನಾಶವಾದ ಸಾನಿಧ್ಯದಲ್ಲಿಯೇ ಸ್ವಾಮೀಜಿಯವರ ಮಾರ್ಗದರ್ಶನದಲ್ಲಿ ಕುಟುಂಬಸ್ತರು, ಸಾರ್ವಜನಿಕರ ಸಾಮೂಹಿಕ ಪ್ರಾರ್ಥನೆ
-
accident2 months agoBreaking: ಬಂಟ್ವಾಳದಲ್ಲಿ ಶಾಲಾ ಬಸ್ ಮೇಲೆ ಉರುಳಿದ ಬೃಹತ್ ಮರ; ಕಲ್ಲಡ್ಕ ಶ್ರೀರಾಮ ಶಾಲೆಯ ಓರ್ವ ವಿದ್ಯಾರ್ಥಿ ಸಾವು, ಕೆಲವರು ಗಂಭೀರ, ಹಲವರಿಗೆ ಗಾಯ!
-
accident4 months agoವಿಟ್ಲ ಆಕಾಶದಲ್ಲಿ ಹಾರಾಡಿದ ವಿಮಾನ: ತಾಂತ್ರಿಕ ದೋಷವಲ್ಲ, ಹವಾಮಾನ ವೈಪರೀತ್ಯದ ಕಾರಣ ! ಸಾರ್ವಜನಿಕರು ಆತಂಕ ಪಡುವ ಅಗತ್ಯವಿಲ್ಲ
