Dakshina Kannada
ಮಂಗಳೂರಿನಲ್ಲಿ ಕರಾವಳಿ ಉತ್ಸವ; ಪೊಲೀಸರಿಂದ ಸಂಚಾರಿ ಸಲಹೆಗಳು ಜಾರಿ
ದಕ್ಷಿಣಕನ್ನಡ ಜಿಲ್ಲಾಡಳಿತದಿಂದ ಎರಡು ವಾರಗಳ ಕಾಲ ನಡೆಯುವ ಕರಾವಳಿ ಉತ್ಸವದಲ್ಲಿ ಸೇರಬಹುದಾದ ಜನ ಮತ್ತು ವಾಹನದಟ್ಟಣೆಯ ಹಿನ್ನೆಲೆಯಲ್ಲಿ ಸುರಕ್ಷತೆಯ ದೃಷ್ಟಿಯಿಂದ ಮಂಗಳೂರು ಪೊಲೀಸ್ ಇಲಾಖೆ ಸಂಚಾರಿ ಸಲಹೆಗಳನ್ನು ಹೊರಡಿಸಿದೆ.
ಜಿಲ್ಲಾಡಳಿತದ ವತಿಯಿಂದ ಹಮ್ಮಿಕೊಂಡಿರುವ ಕರಾವಳಿ ಉತ್ಸವ ಕಾರ್ಯಕ್ರಮದ ಉದ್ಘಾಟನೆಯು ಡಿ. 21 ರಂದು ಸಂಜೆ ಮಂಗಳೂರು ನಗರದ ಕರಾವಳಿ ಮೈದಾನದಲ್ಲಿ ನೆರವೇರಲಿದೆ. ನಂತರ ಹೊಸ ವರ್ಷದ ಜನವರಿ 2ರವರೆಗೆ ಸಂಜೆ ವೇಳೆಯಲ್ಲಿ ವಿವಿಧ ಕಾರ್ಯಕ್ರಮಗಳು ನಡೆಯಲಿರುತ್ತದೆ. ಸದರಿ ಉದ್ಘಾಟನಾ ಕಾರ್ಯಕ್ರಮಕ್ಕೆ ಗಣ್ಯರು, ಹೆಚ್ಚಿನ ಸಂಖ್ಯೆಯಲ್ಲಿ ಸಾರ್ವಜನಿಕರು ಮತ್ತು ವಾಹನಗಳು ಸೇರಲಿದ್ದು, ಈ ಸಮಯ ನಗರದ ಕೆಲವೊಂದು ರಸ್ತೆಗಳಲ್ಲಿ ಸಾರ್ವಜನಿಕ ವಾಹನಗಳ ಸಂಚಾರದಲ್ಲಿ ದಟ್ಟಣೆ ಉಂಟಾಗುವ ಸಾಧ್ಯತೆಗಳು ಇರುವುದರಿಂದ ಸಂಚಾರ ನಿಯಮಗಳಲ್ಲಿ ಬದಲಾದ ಮಾರ್ಗ ಸೂಚಿ ಈ ರೀತಿ ಇದ್ದು-

👉ಲಾಲ್ ಬಾಗ್ ನಿಂದ – ಕರಾವಳಿ ಮೈದಾನದ ವರೆಗಿನ ರಸ್ತೆಯ ಎರಡು ಬದಿಗಳಲ್ಲಿ ಯಾವುದೇ ವಾಹನಗಳನ್ನು ಪಾರ್ಕ್ ಮಾಡುವಂತಿಲ್ಲ.
👉ಕಾರ್ಯಕ್ರಮಗಳಿಗೆ ಬರುವ ಸಾರ್ವಜನಿಕರು ತಮ್ಮ ವಾಹನಗಳನ್ನು ನಿಗಧಿಪಡಿಸಿದ ಸ್ಥಳಗಳಲ್ಲಿ ಮಾತ್ರ ನಿಲ್ಲಿಸತಕ್ಕದ್ದು.
👉ಕಾರ್ಯಕ್ರಮದ ಮಾರ್ಗದಲ್ಲಿ ವಾಹನ ನಿಲುಗಡೆಯ ಸೂಚನಾ ಫಲಕದ ಪ್ಲಾಕ್ಸ್ ಗಳನ್ನು ಅಳವಡಿಸಿದ್ದು, ಮಾರ್ಗಸೂಚಿಯನ್ನು ಅನುಸರಿಸುವುದು.
ಕಾರ್ಯಕ್ರಮಕ್ಕೆ ಬರುವ ವಾಹನಗಳಿಗೆ ನಿಗದಿಪಡಿಸಲಾದ ಪಾರ್ಕಿಂಗ್ ಸ್ಥಳಗಳು
-ಉರ್ವ ಮಾರ್ಕೆಟ್ ಮೈದಾನ –(ಕಾರು)
-ಗಾಂಧಿನಗರ ಸರಕಾರಿ ಶಾಲೆ (ಪ್ರೆಸ್ ಕ್ಲಬ್ನ ಬಳಿ) – (ದ್ವಿಚಕ್ರ/ಕಾರು)
-ಲೇಡಿಹಿಲ್ ಚರ್ಚ್ ಪಾರ್ಕಿಂಗ್ – (ದ್ವಿಚಕ್ರ/ಕಾರು)
-ಕೆನರಾ ಸ್ಕೂಲ್ ಮೈದಾನ, ಮಣ್ಣಗುಡ್ಡೆ – (ದ್ವಿಚಕ್ರ/ಕಾರು)
-ತಿಮ್ಮಪ್ಪ ಹೋಟೆಲ್ ಅವರಣ – (ದ್ವಿಚಕ್ರ/ಕಾರು)
-ಸ್ಕೌಟ್ & ಗೈಡ್ ಹಾಲ್ ಅವರಣ (ಕರಾವಳಿ ಮೈದಾನ ಹಿಂಭಾಗ)- (ದ್ವಿಚಕ್ರ)
-ಉರ್ವ ಮಾರ್ಕೆಟ್ ರಸ್ತೆ – (ದ್ವಿಚಕ್ರ)
-ಹ್ಯಾಟ್ ಹಿಲ್ ರಸ್ತೆ – (ದ್ವಿಚಕ್ರ)

ಸದರಿ ಕಾರ್ಯಕ್ರಮಗಳ ಸಮಯ ವಾಹನ ಸಂಚಾರಕ್ಕೆ ಅಡಚಣೆ ಉಂಟಾಗುವ ಸಾದ್ಯತೆಗಳು ಇರುವುದರಿಂದ ಸಾರ್ವಜನಿಕರು ಪೊಲೀಸ್ ಇಲಾಖೆಯೊಂದಿಗೆ ಸಹಕರಿಸಿ
ಸಂಚಾರ ನಿಯಮಗಳನ್ನು ಪಾಲಿಸಿ, ಸುರಕ್ಷಿತರಾಗಿರ ಬೇಕೆಂದು ಜಿಲ್ಲಾ ಪೊಲೀಸ್ ಇಲಾಖೆ ವಿನಂತಿದೆ.
Bantawala
ದಕ್ಷಿಣ ಕನ್ನಡ ಜಿಲ್ಲಾ ಕಾಂಗ್ರೆಸ್ ಅಧ್ಯಕ್ಷತೆಗೆ ಹನೀಫ್ ಬಗ್ಗುಮೂಲೆ ಅರ್ಜಿ
ಮಂಗಳೂರು: ದಕ್ಷಿಣ ಕನ್ನಡ ಜಿಲ್ಲಾ ರಾಷ್ಟ್ರೀಯ ಕಾಂಗ್ರೆಸ್ ಸಮಿತಿಯ ಸಾರಥ್ಯ ವಹಿಸಲು ಪಕ್ಷದ ಹಿರಿಯ, ನಿಷ್ಠಾವಂತ ಹಾಗೂ ನೇರ ನಡೆ-ನುಡಿಯ ಪ್ರಭಾವಿ ನಾಯಕ ಹನೀಫ್ ಬಗ್ಗುಮೂಲೆ ಅವರು ಅಧಿಕೃತವಾಗಿ ಅರ್ಜಿ ಸಲ್ಲಿಸಿದ್ದಾರೆ. ಕಳೆದ ಮೂರು ದಶಕಗಳಿಂದ ಪಕ್ಷ ಹಾಗೂ ಸಮಾಜಸೇವೆಯಲ್ಲಿ ತಮ್ಮನ್ನು ಸಕ್ರಿಯವಾಗಿ ತೊಡಗಿಸಿಕೊಂಡಿರುವ ಇವರು, ಜಿಲ್ಲಾ ಕಾಂಗ್ರೆಸ್ ಅಧ್ಯಕ್ಷ ಗಾದಿಗೆ ಪ್ರಬಲ ಆಕಾಂಕ್ಷಿಯಾಗಿದ್ದಾರೆ.
ಮೂರು ದಶಕಗಳ ಸುದೀರ್ಘ ರಾಜಕೀಯ ಪಯಣ
ಬಂಟ್ವಾಳ ತಾಲೂಕು ಕುಳ ಗ್ರಾಮದ ಬಗ್ಗುಮೂಲೆ ನಿವಾಸಿಯಾಗಿರುವ ಹನೀಫ್ ಅವರು ಕಳೆದ 30 ವರ್ಷಗಳಿಂದ ಕಾಂಗ್ರೆಸ್ ಪಕ್ಷದ ಸಿದ್ಧಾಂತಗಳಿಗೆ ಬದ್ಧರಾಗಿ ನಿರಂತರವಾಗಿ ಶ್ರಮಿಸಿದವರು. ಬಾಲ್ಯದಿಂದಲೇ ಸಾಮಾಜಿಕ ಕಳಕಳಿ ಬೆಳೆಸಿಕೊಂಡಿದ್ದ ಇವರು, ಪಕ್ಷದ ಧ್ವಜದಡಿಯಲ್ಲಿ ಉಚಿತ ಮೆಡಿಕಲ್ ಕ್ಯಾಂಪ್‌ಗಳು, ರಕ್ತದಾನ ಶಿಬಿರಗಳು, ಕ್ರೀಡಾ ಕೂಟಗಳು ಹಾಗೂ ಧಾರ್ಮಿಕ ಸಮಾರಂಭಗಳನ್ನು ಯಶಸ್ವಿಯಾಗಿ ಆಯೋಜಿಸುವ ಮೂಲಕ ಜನಮಾನಸದಲ್ಲಿ ಆಪತ್ಬಾಂಧವನಾಗಿ ನೆಲೆಸಿದ್ದಾರೆ.
ಸಂಸ್ಥಾಪನಾ ಹೆಜ್ಜೆಗಳು ಮತ್ತು ವಹಿಸಿದ ಜವಾಬ್ದಾರಿಗಳು
ಇವರ ನಿಸ್ಪಕ್ಷಪಾತ ಸೇವೆ ಮತ್ತು ಸಂಘಟನಾ ಚತುರತೆಯನ್ನು ಗುರುತಿಸಿದ ಕಾಂಗ್ರೆಸ್ ಪಕ್ಷ, ಇವರಿಗೆ ವಿವಿಧ ಹಂತಗಳಲ್ಲಿ ಜವಾಬ್ದಾರಿಗಳನ್ನು ನೀಡಿ ಗೌರವಿಸಿದೆ:
ವಿಟ್ಲ-ಉಪ್ಪಿನಂಗಡಿ ಬ್ಲಾಕ್ ಕಾಂಗ್ರೆಸ್ ಸೇವಾದಳ: ಅಧ್ಯಕ್ಷರಾಗಿ 3 ವರ್ಷಗಳ ಕಾಲ ಯಶಸ್ವಿ ಸೇವೆ.
ಜಿಲ್ಲಾ ಕಾಂಗ್ರೆಸ್ ಸೇವಾದಳ: ಸಂಘಟನಾ ಕಾರ್ಯದರ್ಶಿಯಾಗಿ ಪಕ್ಷದ ತಳಮಟ್ಟದ ಸಂಘಟನೆ.
ಕೆಪಿಸಿಸಿ (KPCC): ರಾಜ್ಯ ಮಟ್ಟದ ಕಾರ್ಮಿಕ ವಿಭಾಗದ ಕಾರ್ಯದರ್ಶಿಯಾಗಿ ಶ್ರಮಿಕರ ಪರ ಧ್ವನಿ.
ರಾಷ್ಟ್ರೀಯ ರಾಜೀವ ಗಾಂಧಿ ಜ್ಯೋತಿಯಾತ್ರೆ ಸಮಿತಿ: ಪ್ರಸ್ತುತ ಪ್ರಧಾನ ಕಾರ್ಯದರ್ಶಿಯಾಗಿ ದೇಶಾದ್ಯಂತ ವ್ಯಾಪಕ ಕಾರ್ಯಾಚರಣೆ ಹಾಗೂ ಪಕ್ಷದ ಸಿದ್ಧಾಂತಗಳ ಪ್ರಚಾರ.
ಪ್ರಶಸ್ತಿ ಹಾಗೂ ಪುರಸ್ಕಾರ
ಸಾಮಾಜಿಕ, ಧಾರ್ಮಿಕ ಮತ್ತು ಶೈಕ್ಷಣಿಕ ಕ್ಷೇತ್ರದಲ್ಲಿ ಅಪಾರ ಜನಸೇವೆ ಸಲ್ಲಿಸಿರುವ ಹನೀಫ್ ಬಗ್ಗುಮೂಲೆ ಅವರ ನಿರಂತರ ಸಮಾಜಮುಖಿ ಕಾರ್ಯಗಳನ್ನು ಗುರುತಿಸಿ “ಗಡಿನಾಡ ರಾಜ್ಯ ಪ್ರಶಸ್ತಿ” ನೀಡಿ ಗೌರವಿಸಲಾಗಿದೆ.
ಜಿಲ್ಲೆಯಲ್ಲಿ ಕಾಂಗ್ರೆಸ್ ಪಕ್ಷವನ್ನು ತಳಮಟ್ಟದಿಂದ ಮತ್ತಷ್ಟು ಬಲಪಡಿಸಲು ಮತ್ತು ಎಲ್ಲರನ್ನೂ ಒಟ್ಟಿಗೆ ಕೊಂಡೊಯ್ಯಲು ತಮ್ಮ ಅನುಭವ ಮತ್ತು ಬದ್ಧತೆ ಸಹಕಾರಿಯಾಗಲಿದೆ ಎಂಬ ವಿಶ್ವಾಸದೊಂದಿಗೆ ಅವರು ಜಿಲ್ಲಾಧ್ಯಕ್ಷ ಸ್ಥಾನಕ್ಕೆ ಆಕಾಂಕ್ಷಿಯಾಗಿದ್ದಾರೆ.

Dakshina Kannada
ಭಾರಿ ಮಳೆ ಹಿನ್ನೆಲೆ: ಆಗಸ್ಟ್ 3ರಂದು ದಕ್ಷಿಣ ಕನ್ನಡ ಜಿಲ್ಲೆಯ ಶಾಲೆ, ಕಾಲೇಜುಗಳಿಗೆ ರಜೆ ಘೋಷಣೆ
ಮಂಗಳೂರು: ದಕ್ಷಿಣ ಕನ್ನಡ ಜಿಲ್ಲೆಯಾದ್ಯಂತ ಭಾರಿ ಮಳೆಯಾಗುತ್ತಿರುವ ಹಿನ್ನೆಲೆಯಲ್ಲಿ ಮುನ್ನೆಚ್ಚರಿಕಾ ಕ್ರಮವಾಗಿ ಜಿಲ್ಲಾಡಳಿತವು ಆಗಸ್ಟ್ 3, 2026 ರಂದು ಜಿಲ್ಲೆಯ ಪ್ರಮುಖ ತಾಲೂಕುಗಳ ಶಾಲೆ ಮತ್ತು ಕಾಲೇಜುಗಳಿಗೆ ರಜೆ ಘೋಷಿಸಿ ಆದೇಶ ಹೊರಡಿಸಿದೆ.
ಭಾರತೀಯ ಹವಾಮಾನ ಇಲಾಖೆ ಹಾಗೂ ಕರ್ನಾಟಕ ರಾಜ್ಯ ನೈಸರ್ಗಿಕ ವಿಕೋಪ ಉಸ್ತುವಾರಿ ಕೇಂದ್ರದ ಮುನ್ಸೂಚನೆಯಂತೆ ಮಳೆ ಮುಂದುವರಿಯುವ ಸಾಧ್ಯತೆ ಇರುವುದರಿಂದ, ಜಿಲ್ಲಾ ವಿಪತ್ತು ನಿರ್ವಹಣಾ ಪ್ರಾಧಿಕಾರ ಹಾಗೂ ಜಿಲ್ಲಾಧಿಕಾರಿಗಳು ಈ ತುರ್ತು ಕ್ರಮ ಕೈಗೊಂಡಿದ್ದಾರೆ.
ಎಲ್ಲೆಲ್ಲಿ ರಜೆ ಅನ್ವಯ?
ಮಂಗಳೂರು ಉಪವಿಭಾಗ: ಮಂಗಳೂರು, ಬಂಟ್ವಾಳ, ಮೂಡಬಿದ್ರೆ, ಮುಲ್ಕಿ ಮತ್ತು ಉಳ್ಳಾಲ ತಾಲೂಕುಗಳ ಎಲ್ಲಾ ಅಂಗನವಾಡಿ ಕೇಂದ್ರಗಳು, ಹಾಗೂ ಸರಕಾರಿ, ಅನುದಾನಿತ ಮತ್ತು ಖಾಸಗಿ ಪ್ರಾಥಮಿಕ ಮತ್ತು ಪ್ರೌಢಶಾಲೆಗಳಿಗೆ (10 ನೇ ತರಗತಿವರೆಗೆ) ರಜೆ ಇರಲಿದೆ (ಎಲ್ಲಾ ವಸತಿ ಶಾಲೆಗಳೂ ಸೇರಿದಂತೆ).ಪುತ್ತೂರು ಉಪವಿಭಾಗ: ಪುತ್ತೂರು, ಬೆಳ್ತಂಗಡಿ, ಸುಳ್ಯ ಮತ್ತು ಕಡಬ ತಾಲೂಕುಗಳ ಅಂಗನವಾಡಿ ಕೇಂದ್ರಗಳು, ಪ್ರಾಥಮಿಕ ಹಾಗೂ ಪ್ರೌಢಶಾಲೆಗಳು, ಪದವಿ ಪೂರ್ವ (PUC), ITI ಮತ್ತು ಡಿಪ್ಲೊಮಾ ಕಾಲೇಜುಗಳಿಗೆ (12 ನೇ ತರಗತಿವರೆಗೆ) ರಜೆ ಘೋಷಿಸಲಾಗಿದೆ.
ಎಚ್ಚರಿಕೆ: ಈ ರಜೆ ಆದೇಶವನ್ನು ಉಲ್ಲಂಘಿಸುವ ಸಂಸ್ಥೆಗಳ ವಿರುದ್ಧ ವಿಪತ್ತು ನಿರ್ವಹಣಾ ಕಾಯ್ದೆ, 2005 ರ ಪ್ರಕಾರ ಸೂಕ್ತ ಕಾನೂನು ಕ್ರಮ ಜರುಗಿಸಲಾಗುವುದು ಎಂದು ತಿಳಿಸಲಾಗಿದೆ.
ಸಾರ್ವಜನಿಕರು ಹಾಗೂ ಪ್ರವಾಸಿಗರಿಗೆ ಮುಖ್ಯ ಸೂಚನೆಗಳು:
- ಮಕ್ಕಳ ಸುರಕ್ಷತೆ: ನೀರಿರುವ ತಗ್ಗು ಪ್ರದೇಶ, ಕೆರೆ, ನದಿತೀರ ಹಾಗೂ ಸಮುದ್ರತೀರಕ್ಕೆ ಮಕ್ಕಳು ತೆರಳದಂತೆ ಪೋಷಕರು ಜಾಗ್ರತೆ ವಹಿಸಬೇಕು.
- ಮೀನುಗಾರರಿಗೆ ತಡೆ: ಮೀನುಗಾರರು ಈ ಸಮಯದಲ್ಲಿ ಸಮುದ್ರಕ್ಕೆ ಇಳಿಯದಂತೆ ಕಟ್ಟುನಿಟ್ಟಿನ ಸೂಚನೆ ನೀಡಲಾಗಿದೆ.
- ಸಾರ್ವಜನಿಕರಿಗೆ ಮನವಿ: ನದಿತೀರ ಮತ್ತು ಸಮುದ್ರತೀರಕ್ಕೆ ಪ್ರವಾಸಿಗರು ಹಾಗೂ ಸಾರ್ವಜನಿಕರು ಭೇಟಿ ನೀಡಬಾರದು.
- ಅಧಿಕಾರಿಗಳ ಸಜ್ಜು: ತಾಲೂಕು ಮಟ್ಟದ ಅಧಿಕಾರಿಗಳು ಕೇಂದ್ರ ಸ್ಥಾನದಲ್ಲಿದ್ದು ತಕ್ಷಣ ಸ್ಪಂದಿಸಲು ಸೂಚಿಸಲಾಗಿದೆ. ಅಲ್ಲದೆ ಅಗತ್ಯವಿದ್ದಲ್ಲಿ ಕಾಳಜಿ ಕೇಂದ್ರಗಳನ್ನು ತೆರೆಯಲು ಸಿದ್ಧರಾಗಿರಲು ಆದೇಶಿಸಲಾಗಿದೆ.
ತುರ್ತು ಸಹಾಯವಾಣಿ (Emergency Helpline)
ನೈಸರ್ಗಿಕ ವಿಕೋಪಕ್ಕೆ ಸಂಬಂಧಿಸಿದ ಯಾವುದೇ ತುರ್ತು ಸಮಸ್ಯೆಗಳಿಗೆ ಸಾರ್ವಜನಿಕರು ಈ ಕೆಳಗಿನ ಸಂಖ್ಯೆಗಳನ್ನು ಸಂಪರ್ಕಿಸಬಹುದು:
- ಉಚಿತ ಟೋಲ್ ಫ್ರೀ ಸಂಖ್ಯೆ:
1077 - ದೂರವಾಣಿ ಸಂಖ್ಯೆ:
0824-2442590
Bantawala
ಕರಾವಳಿಯಲ್ಲಿ ಭೋರ್ಗರೆಯುತ್ತಿರುವ ಮುಂಗಾರು: ನದಿಗಳ ಆರ್ಭಟಕ್ಕೆ ಕಂಗೆಟ್ಟ ದಕ್ಷಿಣ ಕನ್ನಡ, ರೈತರಲ್ಲಿ ಹರ್ಷ – ಜನರಲ್ಲಿ ನೆರೆ ಆತಂಕ
ದಕ್ಷಿಣ ಕನ್ನಡ: ಕರಾವಳಿ ಹಾಗೂ ಪಶ್ಚಿಮ ಘಟ್ಟ ಭಾಗದಲ್ಲಿ ನಿರಂತರವಾಗಿ ಸುರಿಯುತ್ತಿರುವ ಭಾರೀ ಮಳೆಯಿಂದಾಗಿ ದಕ್ಷಿಣ ಕನ್ನಡ ಜಿಲ್ಲೆಯಾದ್ಯಂತ ಭೀಕರ ಪರಿಸ್ಥಿತಿ ನಿರ್ಮಾಣವಾಗಿದೆ. ಘಟ್ಟ ಪ್ರದೇಶದಲ್ಲಿ ಮಳೆ ಧಾರೆ ಎರೆಯುತ್ತಿರುವುದರಿಂದ ನದಿ, ಕಳೆಗಳು ಅಪಾಯದ ಮಟ್ಟ ಮೀರಿ ಉಕ್ಕಿ ಹರಿಯುತ್ತಿದ್ದು, ಜನಜೀವನ ಸಂಪೂರ್ಣವಾಗಿ ಅಸ್ತವ್ಯಸ್ತಗೊಂಡಿದೆ. ಒಂದೆಡೆ ದೀರ್ಘಾವಧಿಯ ನಂತರ ನದಿಗಳು ತುಂಬಿ ಹರಿಯುತ್ತಿರುವುದು ಕೃಷಿಕರಲ್ಲಿ ಹರ್ಷ ತಂದಿದ್ದರೆ, ಇನ್ನೊಂದೆಡೆ ಪ್ರವಾಹ, ಸೇತುವೆ ಕೊಚ್ಚಿಹೋಗಿರುವುದು ಹಾಗೂ ಮನೆ ಹಾನಿಯಂತಹ ಸಾಲು ಸಾಲು ದುರಂತಗಳು ಸಾರ್ವಜನಿಕರಲ್ಲಿ ಭಾರೀ ಆತಂಕ ಮೂಡಿಸಿವೆ.
1. ಸುಬ್ರಹ್ಮಣ್ಯ: ಕುಮಾರಧಾರಾ ಆರ್ಭಟ, ಮುಳುಗಿದ ಸ್ನಾನಘಟ್ಟ
ಕುಕ್ಕೆ ಸುಬ್ರಹ್ಮಣ್ಯ ಹಾಗೂ ಘಾಟಿ ಪ್ರದೇಶದಲ್ಲಿ ಸುರಿಯುತ್ತಿರುವ ಎಡೆಬಿಡದ ಮಳೆಯಿಂದಾಗಿ ಕುಮಾರಧಾರಾ ನದಿಯಲ್ಲಿ ನೀರಿನ ಮಟ್ಟ ತೀವ್ರವಾಗಿ ಏರಿಕೆಯಾಗಿದೆ.
ಸ್ನಾನಘಟ್ಟ ಮುಳುಗಡೆ: ಪ್ರಸಿದ್ಧ ಕುಕ್ಕೆ ಸುಬ್ರಹ್ಮಣ್ಯದ ಸ್ನಾನಘಟ್ಟ ಸಂಪೂರ್ಣವಾಗಿ ಜಲಾವೃತಗೊಂಡಿದೆ.
ಪರ್ಯಾಯ ವ್ಯವಸ್ಥೆ: ಭಕ್ತರು ನದಿಗೆ ಇಳಿಯದಂತೆ ಪೊಲೀಸರು ಹಾಗೂ ಆಡಳಿತ ಮಂಡಳಿ ಕಟ್ಟುನಿಟ್ಟಿನ ಕಾವಲು ಕಾಯುತ್ತಿದ್ದು, ಪ್ರವಾಸಿಗರ ಭದ್ರತೆಗಾಗಿ ದೊಡ್ಡ ಡ್ರಮ್‌ಗಳಲ್ಲಿ ನೀರು ತುಂಬಿಸಿ ಪರ್ಯಾಯ ಸ್ನಾನದ ವ್ಯವಸ್ಥೆ ಕಲ್ಪಿಸಲಾಗಿದೆ.
2. ಜೀವ ಕಳೆ ಪಡೆದ ನೇತ್ರಾವತಿ
ಬಂಟ್ವಾಳ ಹಾಗೂ ಧರ್ಮಸ್ಥಳ ಭಾಗದಲ್ಲಿ ನೇತ್ರಾವತಿ ನದಿ ಈ ವರ್ಷದಲ್ಲಿಯೇ ಮೊದಲ ಬಾರಿಗೆ ಭಾರೀ ಮಟ್ಟದಲ್ಲಿ ಏರಿಕೆ ಕಂಡಿದೆ.
ಬಂಟ್ವಾಳದ ಕಂಚಿಕಾರಪೇಟೆಯಲ್ಲಿ ನದಿಯ ಮಟ್ಟ 5.6 ರಿಂದ 5.88 ಮೀಟರ್‌ಗೆ ಏರಿಕೆಯಾಗಿದ್ದು (ಅಪಾಯದ ಮಟ್ಟ: 8.5 ರಿಂದ 9.0 ಮೀ), ಕೃಷಿಕರ ಮುಖದಲ್ಲಿ ಮಂದಹಾಸ ಮೂಡಿಸಿದೆ.
ಬಂಟ್ವಾಳದ ಎಎಂಆರ್ (AMR) ಡ್ಯಾಂ ಗರಿಷ್ಠ ಮಟ್ಟ (18.90 ಮೀ) ತಲುಪಿದ್ದು, ತುಂಬೆ ಡ್ಯಾಂನ 8 ಗೇಟ್‌ಗಳನ್ನು ತೆರೆದು ನೀರನ್ನು ಹೊರಬಿಡಲಾಗುತ್ತಿದೆ.
ಉಪ್ಪಿನಂಗಡಿ ಸಂಗಮಕ್ಕೆ ಇನ್ನೆರಡು ದಿನ ಬೇಕು
ಪ್ರಸಿದ್ಧ ಉಪ್ಪಿನಂಗಡಿ ಶ್ರೀ ಸಹಸ್ರಲಿಂಗೇಶ್ವರ ಸನ್ನಿಧಿಯಲ್ಲಿ ನೇತ್ರಾವತಿಯಲ್ಲಿ ನೀರಿನ ಹರಿವು ಹೆಚ್ಚಿದ್ದರೂ, ಕುಮಾರಧಾರಾದಲ್ಲಿ ನೀರು ಕಡಿಮೆಯಿರುವುದರಿಂದ ‘ಸಂಗಮ’ಕ್ಕೆ ಇನ್ನು ಎರಡು ದಿನಗಳ ನಿರಂತರ ಮಳೆಯ ಅಗತ್ಯವಿದೆ. ಈಗ ಸುರಿಯುತ್ತಿರುವಂತೆಯೇ ನಿರಂತರವಾಗಿ ಮಳೆ ಸುರಿಯುತ್ತಲೇ ಇದ್ದರೆ ಇನ್ನೆರಡು ದಿನಗಳಲ್ಲಿ ಸಂಗಮದ ಸೂಚನೆ ಸಿಗಬಹುದು.

3. ಬೆಳ್ತಂಗಡಿಯಲ್ಲಿ ನೆರೆ ಅಭಯ: ಮುಳುಗಿದ ದೇವಾಲಯಗಳು, ಕಡಿತಗೊಂಡ ಸಂಪರ್ಕ
ಬೆಳ್ತಂಗಡಿ ತಾಲೂಕಿನಲ್ಲಿ ಮುಂಗಾರಿನ ಆರ್ಭಟ ತೀವ್ರವಾಗಿದ್ದು, ಕಪಿಲ, ಫಲ್ಗುಣಿ, ಮೃತ್ಯುಂಜಯ ಹಾಗೂ ಸೋಮವತಿ ನದಿಗಳು ಉಕ್ಕಿ ಹರಿಯುತ್ತಿವೆ.
ದೇವಸ್ಥಾನಗಳು ಜಲಾವೃತ: ಕಪಿಲ ನದಿ ಉಕ್ಕಿ ಹರಿದ ಪರಿಣಾಮ ಪ್ರಸಿದ್ಧ ಶ್ರೀ ಶಿಶಿಲೇಶ್ವರ ದೇವಸ್ಥಾನ ಹಾಗೂ ಅಮ್ಮುಂಜೆ ದೇವಸ್ಥಾನಗಳು ಜಲಾವೃತಗೊಂಡಿವೆ.
ಸೇತುವೆ ಕೊಚ್ಚಿ ಸಾವು-ನೋವಿನ ಭೀತಿ: ಉಜಿರೆ-ಕನ್ಯಾಡಿ ವ್ಯಾಪ್ತಿಯ ಅಂಬಡಬೆಟ್ಟದಲ್ಲಿ ಹಳ್ಳಕ್ಕೆ ನಿರ್ಮಿಸಿದ್ದ ತಾತ್ಕಾಲಿಕ ಸೇತುವೆ ಕೊಚ್ಚಿಹೋಗಿ ಸಾಕಷ್ಟು ಕುಟುಂಬಗಳ ಸಂಪರ್ಕ ಕಡಿತಗೊಂಡಿದೆ. ಮಾಲಾಡಿ ಸೊಣಂದೂರಿನಲ್ಲಿ ಕಿರು ಸೇತುವೆ ಕುಸಿದಿದೆ.
ಅಣೆಕಟ್ಟು ಹಲಗೆ ತೆರವು ಮಾಡದೆ ಅನಾಹುತ: ಪಜಿರಡ್ಕ ಕಿಂಡಿ ಅಣೆಕಟ್ಟಿನಲ್ಲಿ ಹಲಗೆಗಳನ್ನು ಸರಿಯಾದ ಸಮಯಕ್ಕೆ ತೆರವುಗೊಳಿಸದ ಕಾರಣ 5 ಕಿ.ಮೀ ವ್ಯಾಪ್ತಿಯಲ್ಲಿ ಕಾಯರ್ತೋಡಿ, ಕುಡೆಂಚಿ, ಆನಂಗಳ್ಳಿ ಸೇರಿದಂತೆ ಹಲವು ತೋಟಗಳಿಗೆ ನೀರು ನುಗ್ಗಿ ಬೆಳೆ ನಾಶವಾಗಿದೆ.
ವೇಣೂರಿನಲ್ಲಿ ಹಲವು ಬಸ್‌ಗಳು ನೆರೆ ನೀರಿನಲ್ಲಿ ಸಿಲುಕಿಕೊಂಡರೆ, ಗಾಳಿ-ಮಳೆಗೆ ನೂರಾರು ಅಡಕೆ, ರಬ್ಬರ್ ಮರಗಳು ಧರಾಶಾಹಿಯಾಗಿವೆ.
4. ಸಾಲು ಸಾಲು ಮನೆ ಕುಸಿತ, ವಿದ್ಯುತ್ ವ್ಯತ್ಯಯ
ಬಂಟ್ವಾಳ ತಾಲೂಕಿನ ತೆಂಕಬೆಳ್ಳೂರಿನ ಜಯ ಸಪಲ್ಯ, ರಾಯಿ ಗ್ರಾಮದ ಸೀತಾವತಿ ವಿಶ್ವನಾಥ ಪೂಜಾರಿ ಹಾಗೂ ನರಿಕೊಂಬುವಿನ ಪ್ರಶಾಂತ್ ಎಂಬುವವರ ಮನೆಗಳ ಮೇಲೆ ಚಾವಣಿ ಮತ್ತು ತೆಂಗಿನ ಮರಗಳು ಬಿದ್ದು ಮನೆಗಳಿಗೆ ಹಾನಿಯಾಗಿದೆ. ಸುदैವಶಾತ್ ಯಾವುದೇ ಪ್ರಾಣಹಾನಿ ಸಂಭವಿಸಿಲ್ಲ.

🚨 ಭಾರೀ ಮಳೆ ಮುನ್ಸೂಚನೆ: ತುರ್ತು ಕಾರ್ಯಾಚರಣೆಗೆ ಅಧಿಕಾರಿಗಳಿಗೆ ಜಿಲ್ಲಾಧಿಕಾರಿ ದರ್ಶನ್ ಎಚ್.ವಿ. ಕಟ್ಟುನಿಟ್ಟಿನ ಸೂಚನೆ!
ದಕ್ಷಿಣ ಕನ್ನಡ ಜಿಲ್ಲೆಯಲ್ಲಿ ಮುಂಬರುವ ದಿನಗಳಲ್ಲಿ ಭಾರೀ ಮಳೆಯಾಗುವ ಮುನ್ಸೂಚನೆ ಇರುವ ಹಿನ್ನೆಲೆಯಲ್ಲಿ, ಎಲ್ಲ ತಾಲೂಕು ಆಡಳಿತಗಳು ಹಾಗೂ ಸಂಬಂಧಪಟ್ಟ ಅಧಿಕಾರಿಗಳು ಸಂಪೂರ್ಣ ಸನ್ನದ್ಧರಾಗಿರುವಂತೆ ಜಿಲ್ಲಾಧಿಕಾರಿ ದರ್ಶನ್ ಎಚ್.ವಿ. ಅವರು ಸೂಚಿಸಿದ್ದಾರೆ. ಹವಾಮಾನ ಇಲಾಖೆಯು ದಕ್ಷಿಣ ಕನ್ನಡ,ಶಿವಮೊಗ್ಗ ಮತ್ತು ಚಿಕ್ಕಮಗಳೂರು ಜಿಲ್ಲೆಯಲ್ಲಿ ರೆಡ್ ಆಲರ್ಟ್ ಘೋಷಿಸಿದೆ
ಶನಿವಾರ (ಆಗಸ್ಟ್ 1) ಅಧಿಕಾರಿಗಳೊಂದಿಗೆ ಆನ್‌ಲೈನ್ ಮೂಲಕ ಪರಿಶೀಲನಾ ಸಭೆ ನಡೆಸಿದ ಅವರು, ಮಳೆ ಅನಾಹುತಗಳನ್ನು ಸಮರ್ಥವಾಗಿ ನಿಭಾಯಿಸಲು ಹಾಗೂ ಸಾರ್ವಜನಿಕರಿಗೆ ತಕ್ಷಣ ಸ್ಪಂದಿಸಲು ಹಲವು ಪ್ರಮುಖ ನಿರ್ದೇಶನಗಳನ್ನು ನೀಡಿದರು.
🚨 ಜಿಲ್ಲಾಧಿಕಾರಿಗಳು ನೀಡಿದ ಪ್ರಮುಖ ಅಭಯ ಹಾಗೂ ಕಟ್ಟುನಿಟ್ಟಿನ ಸೂಚನೆಗಳು:
24 ಗಂಟೆ ಕಂಟ್ರೋಲ್ ರೂಂ ಸಕ್ರಿಯ: ಮಳೆ ಅನಾಹುತಗಳನ್ನು ನಿವರ್ಹಿಸಲು ಜಿಲ್ಲೆಯ ಎಲ್ಲ ತಾಲೂಕು ಆಡಳಿತಗಳು ದಿನದ 24 ಗಂಟೆಯೂ ಸಾರ್ವಜನಿಕರ ಸೇವೆಗೆ ಲಭ್ಯವಿರಬೇಕು. ಕಂಟ್ರೋಲ್ ರೂಂಗಳು ದಿನಪೂರ್ತಿ ಕಾರ್ಯನಿರ್ವಹಿಸಬೇಕು.
ಗುಡ್ಡ ಕುಸಿತ ಸ್ಥಳಗಳಲ್ಲಿ ನಿಗಾ – ಜನರ ಸ್ಥಳಾಂತರ: ಜಿಲ್ಲೆಯಲ್ಲಿ ಗುಡ್ಡ ಕುಸಿತ ಮತ್ತು ಮಣ್ಣು ಜರಿತ ಪ್ರಕರಣಗಳು ವರದಿಯಾಗುತ್ತಿವೆ. ಈಗಾಗಲೇ ಗುರುತಿಸಿರುವ ಸಂಭಾವ್ಯ ಕುಸಿತ ಸ್ಥಳಗಳಲ್ಲಿ ತೀವ್ರ ನಿಗಾ ವಹಿಸಬೇಕು. ಅಪಾಯದ ಸಾಧ್ಯತೆ ಇರುವ ಮನೆಗಳಲ್ಲಿ ವಾಸಿಸುತ್ತಿರುವವರನ್ನು ಮುಂಜಾಗ್ರತಾ ಕ್ರಮವಾಗಿ ತಕ್ಷಣವೇ ಸುರಕ್ಷಿತ ಸ್ಥಳಗಳಿಗೆ ಸ್ಥಳಾಂತರಿಸಬೇಕು.
ತಾತ್ಕಾಲಿಕ ತಡೆಗೋಡೆ ವ್ಯವಸ್ಥೆ: ಮಣ್ಣು ಜರಿಯುವ ಸಾಧ್ಯತೆ ಇರುವ ಸ್ಥಳಗಳಲ್ಲಿ ಮರಳು ಚೀಲಗಳನ್ನು ಇಟ್ಟು ತಾತ್ಕಾಲಿಕ ಕ್ರಮ ಕೈಗೊಳ್ಳಬೇಕು. ಅಗತ್ಯಬಿದ್ದರೆ ಖಾಸಗಿ ಜಮೀನುಗಳಲ್ಲೂ ಇಂತಹ ತುರ್ತು ಕ್ರಮಗಳನ್ನು ಕೈಗೊಳ್ಳಬಹುದು.
24 ಗಂಟೆಯೊಳಗೆ ಪರಿಹಾರ ವಿತರಣೆ: ಪ್ರಾಕೃತಿಕ ವಿಕೋಪದಿಂದ ಸಾವುನಪ್ಪಿದವರ ಕುಟುಂಬಗಳಿಗೆ 24 ಗಂಟೆಯೊಳಗೆ ಪರಿಹಾರ ಚೆಕ್ ನೀಡಬೇಕು. ಮಳೆ ಅನಾಹುತದಿಂದ ಸ್ಥಳಾಂತರಗೊಂಡ ಜನರಿಗೆ ಮೂಲಭೂತ ಸೌಲಭ್ಯಗಳನ್ನು ಒದಗಿಸಲು ಗಮನಹರಿಸಬೇಕು.
ಹೆದ್ದಾರಿ ತಡೆ ತೆರವಿಗೆ ಜೆಸಿಬಿ/ಯಂತ್ರೋಪಕರಣ ಸಿದ್ಧ: ಚಾರ್ಮಾಡಿ, ಸಂಪಾಜೆ, ಶಿರಾಡಿ ಸೇರಿದಂತೆ ಜಿಲ್ಲೆಯ ಪ್ರಮುಖ ಹೆದ್ದಾರಿಗಳಲ್ಲಿ ಭೂಕುಸಿತ, ಗುಡ್ಡ ಜರಿತದಂತಹ ಪ್ರಕರಣಗಳು ಸಂಭವಿಸಿದಲ್ಲಿ ತಕ್ಷಣವೇ ರಸ್ತೆ ತೆರವುಗೊಳಿಸಲು ಅಗತ್ಯ ಯಂತ್ರೋಪಕರಣಗಳನ್ನು ಸಿದ್ಧವಾಗಿಟ್ಟುಕೊಳ್ಳಬೇಕು. (ಇದುವರೆಗೆ ಜಿಲ್ಲೆಯಲ್ಲಿ ಹೆದ್ದಾರಿ ತಡೆಯಾದ ಯಾವುದೇ ಪ್ರಕರಣ ವರದಿಯಾಗಿಲ್ಲ ಎಂದು ಡಿಸಿ ತಿಳಿಸಿದ್ದಾರೆ).
ರಕ್ಷಣಾ ಪಡೆಗಳು ಹೈ ಅಲರ್ಟ್: ಅಗ್ನಿಶಾಮಕ ದಳ, ಎಸ್‌ಡಿಆರ್‌ಎಫ್ (SDRF) ಮತ್ತು ಎನ್‌ಡಿಆರ್‌ಎಫ್ (NDRF) ತಂಡಗಳು ಯಾವುದೇ ತುರ್ತು ಪರಿಸ್ಥಿತಿಯನ್ನು ಎದುರಿಸಲು ಸದಾ ಸನ್ನದ್ಧವಾಗಿರಬೇಕು.
ರಕ್ಷಣಾ ಪಡೆ ರಂಗಕ್ಕೆ: ಮುಳುಗು ತಜ್ಞರು, NDRF ಹಾಗೂ SDRF ನ 65 ಸಿಬ್ಬಂದಿಗಳನ್ನು 28 ಬೋಟ್‌ಗಳೊಂದಿಗೆ ಹೈ ಅಲರ್ಟ್‌ನಲ್ಲಿ ಇರಿಸಲಾಗಿದೆ.
ಎಚ್ಚರಿಕೆ ಸಂದೇಶ: ನದಿ ತೀರದ ನಿವಾಸಿಗಳು, ಮೀನುಗಾರರು ಮತ್ತು ಪ್ರವಾಸಿಗರು ಸಮುದ್ರ ಹಾಗೂ ಜಲಾಶಯದ ಕಡೆಗೆ ತೆರಳದಂತೆ ಕಟ್ಟುನಿಟ್ಟಿನ ಆಡಳಿತಾತ್ಮಕ ಸೂಚನೆ ನೀಡಲಾಗಿದೆ.
ಮುನ್ಸೂಚನೆ: ಮುಂದಿನ ಎರಡು ದಿನಗಳ ಕಾಲ ಭಾರೀ ಮಳೆಯಾಗುವ ಸಾಧ್ಯತೆಯಿದೆ ಎಂದು ಹವಾಮಾನ ಇಲಾಖೆ ಎಚ್ಚರಿಸಿದ್ದು, ಪರಿಸ್ಥಿತಿ ತಿಳಿಯಾಗುವವರೆಗೆ ಸಾರ್ವಜನಿಕರು ಅಗತ್ಯ ಮುನ್ನೆಚ್ಚರಿಕೆ ವಹಿಸಲು ಕೋರಲಾಗಿದೆ.
ಸಭೆಯಲ್ಲಿ ಉಪಸ್ಥಿತಿ: ಈ ಆನ್‌ಲೈನ್ ಸಭೆಯಲ್ಲಿ ಜಿಲ್ಲಾ ಪಂಚಾಯತ್ ಮುಖ್ಯ ಕಾರ್ಯನಿರ್ವಹಣಾಧಿಕಾರಿ ನರಸಿಂಹಮೂರ್ತಿ , ಅಪರ ಜಿಲ್ಲಾಧಿಕಾರಿ ರಾಜು ಕೆ. ಹಾಗೂ ವಿವಿಧ ಇಲಾಖೆಗಳ ಜಿಲ್ಲಾಮಟ್ಟದ ಅಧಿಕಾರಿಗಳು ಭಾಗವಹಿಸಿದ್ದರು

-
Bantawala3 weeks agoಬಂಟ್ವಾಳದಲ್ಲಿ ಭೀಕರ ಹತ್ಯಾಕಾಂಡ: ಬಸ್ನಲ್ಲಿ ಕುಳಿತಿದ್ದ ಯುವತಿಯನ್ನು ಸಾರ್ವಜನಿಕರೆದುರೇ ಕೊಚ್ಚಿ ಕೊಂದ ತಲೆಹರಟೆ ಪ್ರೇಮಿ!
-
crime6 months agoಅತ್ಯಾಚಾರ ಯತ್ನಕ್ಕೆ ತಡೆದ ಸೊಸೆಯ ಮುಖಕ್ಕೆ ಕಚ್ಚಿ ಕೊಲೆಗೆ ಯತ್ನಿಸಿದ ಮಾವ..ತಂದೆಯ ರಾಕ್ಷಸೀ ಕೃತ್ಯಕ್ಕೆ ಬೆಂಬಲಿಸಿದ ಗಂಡ..ಸುಳ್ಯ ಠಾಣಾ ವ್ಯಾಪ್ತಿಯಲ್ಲಿ ಅದೃಷ್ಟವಶಾತ್ ಬಚಾವಾದ ಸೊಸೆ..
-
crime4 months agoಧಾರ್ಮಿಕ ನಂಬಿಕೆಗೆ ಅವಮಾನ: ಕೊಡಗಿನ ಎಮ್ಮೆಮಾಡಿನಲ್ಲಿ ದೈವದ ವೇಷದಂತೆ ಧರಿಸಿ ಮದುಮಗನ ಅತಿರೇಕದ ವರ್ತನೆ!
-
Bantawala4 months agoವಿಟ್ಲದಲ್ಲಿ ನಡೆಯಿತೊಂದು ದೈವ ಕಾರಣಿಕ; ಪೊಲೀಸರ ಕಣ್ಣಿಗೆ ಮಣ್ಣೆರಚಿದರೂ ದೈವದ ದೃಷ್ಟಿಗೆ ತತ್ತರಿಸಿದ ದನಕಳ್ಳ..
-
accident2 weeks agoBreaking: ಬಂಟ್ವಾಳದಲ್ಲಿ ಶಾಲಾ ಬಸ್ ಮೇಲೆ ಉರುಳಿದ ಬೃಹತ್ ಮರ; ಕಲ್ಲಡ್ಕ ಶ್ರೀರಾಮ ಶಾಲೆಯ ಓರ್ವ ವಿದ್ಯಾರ್ಥಿ ಸಾವು, ಕೆಲವರು ಗಂಭೀರ, ಹಲವರಿಗೆ ಗಾಯ!
-
Bantawala7 months agoನಾಗಬನ, ರಕ್ತೇಶ್ವರಿ ತಾಣ, ದೈವದೇವರ ಸಾನಿಧ್ಯ ದ್ವಂಸ ಗೊಳಿಸಿದ ಧರ್ಮದ್ರೋಹಿ ಕೃತ್ಯದ ವಿರುದ್ಧ ಭಕ್ತರ ಆಕ್ರೋಶ ; ನಾಶವಾದ ಸಾನಿಧ್ಯದಲ್ಲಿಯೇ ಸ್ವಾಮೀಜಿಯವರ ಮಾರ್ಗದರ್ಶನದಲ್ಲಿ ಕುಟುಂಬಸ್ತರು, ಸಾರ್ವಜನಿಕರ ಸಾಮೂಹಿಕ ಪ್ರಾರ್ಥನೆ
-
accident3 months agoವಿಟ್ಲ ಆಕಾಶದಲ್ಲಿ ಹಾರಾಡಿದ ವಿಮಾನ: ತಾಂತ್ರಿಕ ದೋಷವಲ್ಲ, ಹವಾಮಾನ ವೈಪರೀತ್ಯದ ಕಾರಣ ! ಸಾರ್ವಜನಿಕರು ಆತಂಕ ಪಡುವ ಅಗತ್ಯವಿಲ್ಲ
-
Bantawala4 weeks agoಮಂಚಿ ಮೋಂತಿಮಾರು: ಬಸ್ಸಿಗಾಗಿ ಕಾಯುತ್ತಿದ್ದ ಅಪ್ರಾಪ್ತ ವಿದ್ಯಾರ್ಥಿನಿ ಮೇಲೆ ಕತ್ತಿಯಿಂದ ಮಾರಣಾಂತಿಕ ದಾಳಿ; ಯುವತಿ ಗಂಭೀರ
