INCIDENT
ಪುತ್ತೂರು ಚಾಕು ಪ್ರಕರಣಕ್ಕೆ ರಾಜಕೀಯ ಬಣ್ಣ; ಸುಳ್ಳು ಸುದ್ದಿ ಹರಡಿದ 7 ವೆಬ್ ಮಾಧ್ಯಮಗಳ ವಿರುದ್ಧ ಎಫ್ಐಆರ್! ಬಿಜೆಪಿ ಮತ್ತು ಹಿಂದೂ ಸಂಘಟನೆಗಳಿಂದ ರಾಜ್ಯ ಸರ್ಕಾರದ ವಿರುದ್ಧ ಉಗ್ರ ಪ್ರತಿಭಟನೆಗೆ ಸಿದ್ಧತೆ !!
ಪುತ್ತೂರು: ತಾಲೂಕಿನ ಪುರುಷರಕಟ್ಟೆಯಲ್ಲಿ ಜುಲೈ 8ರಂದು ನಡೆದ ಚಾಕು ತೋರಿಸಿ ಬೆದರಿಕೆ ಹಾಕಿದ ಆರೋಪದ ಪ್ರಕರಣವು ಇದೀಗ ತೀವ್ರ ರಾಜಕೀಯ ಸ್ವರೂಪ ಪಡೆದುಕೊಂಡಿದ್ದು, ಘಟನೆಗೆ ಸಂಬಂಧಿಸಿದಂತೆ ಬಿಜೆಪಿ ಮತ್ತು ಹಿಂದೂ ಸಂಘಟನೆಗಳಿಂದ ರಾಜ್ಯ ಸರ್ಕಾರದ ವಿರುದ್ಧ ಉಗ್ರ ಪ್ರತಿಭಟನೆಗೆ ಸಿದ್ಧತೆ ನಡೆಯುತ್ತಿದೆ. ಸುಳ್ಳು ಸುದ್ದಿ ಪ್ರಸಾರ ಮಾಡಿದ 7 ವೆಬ್ ಮಾಧ್ಯಮಗಳ ವಿರುದ್ಧ ಪುತ್ತೂರು ನಗರ ಪೊಲೀಸ್ ಠಾಣೆಯಲ್ಲಿ ಎಫ್ಐಆರ್ ದಾಖಲಾಗಿದೆ.
ಘಟನೆಯ ಹಿನ್ನೆಲೆ ಮತ್ತು ಬಿಗ್ ಟ್ವಿಸ್ಟ್:
ಜುಲೈ 8ರಂದು ಬೆಳಗ್ಗೆ 6:45 ರ ಸುಮಾರಿಗೆ ಆನಡ್ಕದ ತನ್ನ ಮನೆಯಿಂದ ದೂರುದಾರೆ ಸ್ಕೂಟಿಯಲ್ಲಿ ಬಂದು ನರಿಮೊಗರು ಸಹಕಾರಿ ಬ್ಯಾಂಕ್ ಬಳಿ ಪಾರ್ಕ್ ಮಾಡಿ ಪುತ್ತೂರಿಗೆ ತೆರಳುತ್ತಿರುವ ಸಂದರ್ಭ ಯುವಕನೋರ್ವ ಚಾಕು ತೋರಿಸಿ ಬೆದರಿಕೆ ಹಾಕಿ, ವಾಹನದಲ್ಲಿ ಹಿಂಬಾಲಿಸಿದ್ದಾನೆ ಎಂದು ಯುವತಿ ಪುತ್ತೂರು ಮಹಿಳಾ ಪೊಲೀಸ್ ಠಾಣೆಗೆ ದೂರು ನೀಡಿದ್ದರು. ಆದರೆ, ಇದಕ್ಕೆ ತೀವ್ರ ಟ್ವಿಸ್ಟ್ ನೀಡಿದ ಆರೋಪಿತ ಯುವಕ, ಮುರಳಿ ಕೃಷ್ಣ ಎಂಬವರ ಹಾಗೂ ಇತರರ ಮಾರ್ಗದರ್ಶನದಲ್ಲಿ ಸದ್ರಿ ಯುವತಿ ಹಾಗೂ ಆಕೆಯ ತಂದೆಯವರು ಸುಳ್ಳು ದೂರು ದಾಖಲಿಸಿರುತ್ತಾರೆ ಎಂಬುದಾಗಿ ನೀಡಿದ ದೂರಿನಂತೆ ಎಫ್.ಐ.ಆರ್ನಲ್ಲಿ ಸದ್ರಿ ಯುವತಿ ಹಾಗೂ ಆಕೆಯ ತಂದೆಯ ಮೇಲೆ ಪ್ರತಿದೂರು ದಾಖಲಾಗಿದೆ.”ತಾನು ಬೇಕರಿಯಿಂದ ಬ್ರೆಡ್ಗೆ ಚೀಸ್ ಹಾಕಲು ತಂದಿದ್ದ ಚಾಕುವನ್ನು ವಾಪಸ್ ನೀಡಲು ಹೋಗುತ್ತಿದ್ದೆ ಅಷ್ಟೆ. ಧಾರ್ಮಿಕ ದ್ವೇಷಭಾವನೆಯಿಂದ ತನ್ನ ವಿರುದ್ಧ ಸುಳ್ಳು ದೂರು ನೀಡಲಾಗಿದೆ” ಎಂದು ದೂರಿನಲ್ಲಿ ತಿಳಿಸಿದ್ದನು.

ಇದರ ಬೆನ್ನಲ್ಲೇ ಈ ಪ್ರಕರಣವು ಇದೀಗ ತೀವ್ರ ರಾಜಕೀಯ ಸ್ವರೂಪ ಪಡೆದುಕೊಂಡಿದ್ದು ಪುರುಷರಕಟ್ಟೆಯಲ್ಲಿ ನಡೆದ ಘಟನೆಯ ಭಾಗವಾಗಿ ನಿನ್ನೆ ( ಜುಲೈ 09) ಸಂಜೆ ರಾಜಕೀಯ ನೇತಾರ ಹಿಂದೂ ಮುಖಂಡ ಅರುಣ್ ಕುಮಾರ್ ಪುತ್ತಿಲ ದೂರುದಾರೆಯ ಮನೆಗೆ ಭೇಟಿ ನೀಡಿ ಧೈರ್ಯ ತುಂಬಿದ್ದಾರೆ.
ಬಿಜೆಪಿ ಮತ್ತು ಹಿಂದೂ ಸಂಘಟನೆಗಳಿಂದ ರಾಜ್ಯ ಸರ್ಕಾರದ ವಿರುದ್ಧ ಉಗ್ರ ಪ್ರತಿಭಟನೆಗೆ ಸಿದ್ಧತೆ
ಇಂದು ಬೆಳಿಗ್ಗೆ (ಜುಲೈ 10ರಂದು) ಮಾಜಿ ಶಾಸಕ ಸಂಜೀವ ಮಠಂದೂರು, ಬಿಜೆಪಿ ಗ್ರಾಮಾಂತರ ಮಂಡಲದ ಅಧ್ಯಕ್ಷ ದಯಾನಂದ ಶೆಟ್ಟಿ ಉಜಿರೆಮಾರು, ನಗರ ಮಂಡಲದ ಅಧ್ಯಕ್ಷ ಶಿವಕುಮಾರ್, ಜಿಲ್ಲಾ ಬಿಜೆಪಿ ಉಪಾಧ್ಯಕ್ಷ ಪ್ರಸನ್ನ ಕುಮಾರ್ ಮಾರ್ತ ಸೇರಿದಂತೆ ಹಲವು ಪ್ರಮುಖರು ಈಗಾಗಲೇ ಯುವತಿಯ ಮನೆಗೆ ಭೇಟಿ ನೀಡಿ ಆಕೆಯ ತಂದೆ ಶಾಂತಪ್ಪ ಗೌಡ ಅವರೊಂದಿಗೆ ಮಾತುಕತೆ ನಡೆಸಿದ್ದಾರೆ.

ಬಿಜೆಪಿ ಹಾಗೂ ಹಿಂದೂ ಸಂಘಟನೆಗಳ ಆಕ್ರೋಶ:
ದೂರು ನೀಡಿದ ಯುವತಿಯ ಮೇಲೆಯೇ ಪ್ರತಿದೂರು ದಾಖಲಿಸಿಕೊಂಡಿರುವುದನ್ನು ಖಂಡಿಸಿ ಬಿಜೆಪಿ ಮತ್ತು ಹಿಂದೂ ಸಂಘಟನೆಗಳು ರಾಜ್ಯ ಸರ್ಕಾರದ ವಿರುದ್ಧ ಉಗ್ರ ಪ್ರತಿಭಟನೆಗೆ ಸಿದ್ಧತೆ ನಡೆಸಿವೆ. “ಹೆಣ್ಣುಮಗಳೊಬ್ಬಳು ತನಗಾದ ಭಯಕ್ಕೆ ದೂರು ನೀಡಿದ್ದೇ ತಪ್ಪಾ?” ಎಂದು ಮಾಜಿ ಶಾಸಕ ಸಂಜೀವ ಮಠಂದೂರು ಆಕ್ರೋಶ ವ್ಯಕ್ತಪಡಿಸಿದ್ದಾರೆ.
7 ವೆಬ್ ಮಾಧ್ಯಮಗಳ ವಿರುದ್ಧ ಪೊಲೀಸ್ ಕ್ರಮ:
ಈ ಘಟನೆಯ ನೈಜ ಸತ್ಯಾಸತ್ಯತೆ ತಿಳಿಯದೆ, ಇದನ್ನು ಹಿಂದೂ-ಮುಸ್ಲಿಂ ನಡುವಿನ ಸಂಘರ್ಷ ಎಂಬಂತೆ ಬಿಂಬಿಸಿ ಕೋಮು ಸೌಹಾರ್ದತೆಗೆ ಧಕ್ಕೆ ತರುವ ರೀತಿಯಲ್ಲಿ ಸುಳ್ಳು ಸುದ್ದಿ ಹರಡಿದ ಆರೋಪದ ಮೇಲೆ ನೊಂದ ವ್ಯಕ್ತಿಗಳು ದೂರು ನೀಡಿದ್ದಾರೆ. ಈ ಹಿನ್ನೆಲೆಯಲ್ಲಿ ಪ್ರಮುಖ 2 ದಿನಪತ್ರಿಕೆಗಳ ವೆಬ್ ಮಾಧ್ಯಮ ಸೇರಿದಂತೆ ಒಟ್ಟು 7 ವೆಬ್ ಮಾಧ್ಯಮಗಳು ಹಾಗೂ ಇನ್ಸ್ಟಾಗ್ರಾಮ್/ಟ್ವಿಟ್ಟರ್ ಪೇಜ್ಗಳ ವಿರುದ್ಧ ಭಾರತೀಯ ನ್ಯಾಯ ಸಂಹಿತೆ (BNS-2023) ಅಡಿಯಲ್ಲಿ ಪ್ರತ್ಯೇಕ ಮೊಕದ್ದಮೆಗಳನ್ನು ದಾಖಲಿಸಲಾಗಿದೆ. ಜಿಲ್ಲೆಯಲ್ಲಿ ಶಾಂತಿ ಕದಡುವ ಇಂತಹ ಪ್ರಯತ್ನಗಳ ವಿರುದ್ಧ ಕಠಿಣ ಕ್ರಮ ಕೈಗೊಳ್ಳಲಾಗುವುದು ಎಂದು ದಕ್ಷಿಣ ಕನ್ನಡ ಜಿಲ್ಲಾ ಎಸ್ಪಿ ಎಚ್ಚರಿಸಿದ್ದಾರೆ.
ಪರಿಸ್ಥಿತಿ ತೀವ್ರಗೊಳ್ಳುತ್ತಿರುವ ಬೆನ್ನಲ್ಲೇ, ಇಂದು (ಜುಲೈ 10) ಸಂಜೆ ಸಂಸದ ಕ್ಯಾಪ್ಟನ್ ಬ್ರಿಜೇಶ್ ಚೌಟ ಹಾಗೂ ಬಿಜೆಪಿ ಜಿಲ್ಲಾಧ್ಯಕ್ಷ ಸತೀಶ್ ಕುಂಪಲ ನೇತೃತ್ವದ ತಂಡವು ಪುರುಷರಕಟ್ಟೆಯ ಸಂತ್ರಸ್ತ ಯುವತಿಯ ಮನೆಗೆ ಭೇಟಿ ನೀಡಿ ಧೈರ್ಯ ತುಂಬಲಿದೆ. ಸದ್ಯ ಪ್ರಕರಣಕ್ಕೆ ರಾಜಕೀಯ ಹಾಗೂ ಧಾರ್ಮಿಕ ಬಣ್ಣ ಬಂದಿರುವುದರಿಂದ ಜಿಲ್ಲೆಯಲ್ಲಿ ಪೊಲೀಸ್ ಬಂದೋಬಸ್ತ್ ಹೆಚ್ಚಿಸಲಾಗಿದ್ದು, ತನಿಖೆ ಚುರುಕುಗೊಂಡಿದೆ.
crime
ಕುಕ್ಕೆ ಸುಬ್ರಹ್ಮಣ್ಯ: ನದಿಗೆ ಹಾರಿದ ಮಹಿಳೆಗೆ ಮೊಸಳೆ ಕಚ್ಚಿದ್ದೇ ಜೀವದಾನ!
ಆತ್ಮಹತ್ಯೆಗೆ ಯತ್ನಿಸಿದ ಮಹಿಳೆ ಮೊಸಳೆ ದಾಳಿಯಿಂದ ಭಯಗೊಂಡು ಚೀರಾಟ – ಸ್ಥಳೀಯರ ಸಮಯಪ್ರಜ್ಞೆಯಿಂದ ಸುರಕ್ಷಿತ ರಕ್ಷಣೆ
ಮಂಗಳೂರು: ಕೌಟುಂಬಿಕ ಮನಸ್ತಾಪದಿಂದ ಬೇಸತ್ತು ಕುಮಾರಧಾರ ನದಿಗೆ ಹಾರಿ ಆತ್ಮಹತ್ಯೆಗೆ ಯತ್ನಿಸಿದ ಮಹಿಳೆಯೊಬ್ಬರು ಮೊಸಳೆಯ ದಾಳಿಯಿಂದಾಗಿ ಜೀವ ಉಳಿಸಿಕೊಂಡಿರುವ ಅಚ್ಚರಿಯ ಘಟನೆ ದಕ್ಷಿಣ ಕನ್ನಡ ಜಿಲ್ಲೆಯ ಪ್ರಸಿದ್ಧ ಧಾರ್ಮಿಕ ಕ್ಷೇತ್ರ ಕುಕ್ಕೆ ಸುಬ್ರಹ್ಮಣ್ಯದ ಕುಮಾರಧಾರ ಸೇತುವೆ ಬಳಿ ನವೆಂಬರ್ 4ರ ತಡರಾತ್ರಿ ನಡೆದಿದೆ.
ಉಡುಪಿ ಮೂಲದ ಮಹಿಳೆಯೊಬ್ಬರು ಕೌಟುಂಬಿಕ ವಿಚಾರಗಳಿಂದ ಮನನೊಂದು ನವೆಂಬರ್ 4ರ ತಡರಾತ್ರಿ ಕುಮಾರಧಾರ ಸೇತುವೆಯ ಮೇಲಿನಿಂದ ನದಿಗೆ ಹಾರಿದ್ದಾರೆ. ಆದರೆ, ನೀರಿಗೆ ಧುಮುಕಿದ ತಕ್ಷಣವೇ ನದಿಯಲ್ಲಿದ್ದ ಮೊಸಳೆಯೊಂದು ಮಹಿಳೆಗೆ ಕಚ್ಚಿದೆ ಎನ್ನಲಾಗಿದೆ. ಮೊಸಳೆಯ ದಾಳಿಯಿಂದ ತೀವ್ರ ಭಯ ಹಾಗೂ ನೋವಿನಿಂದ ಕಂಗಾಲಾದ ಮಹಿಳೆ ನದಿಯ ಮಧ್ಯದಲ್ಲೇ ಜೋರಾಗಿ ಚೀರಾಡಲು ಆರಂಭಿಸಿದ್ದಾರೆ.
ಮಹಿಳೆಯ ಕಿರುಚಾಟ ಕೇಳಿದ ಸೇತುವೆ ಸಮೀಪದ ವಸತಿಗೃಹದ ಸಿಬ್ಬಂದಿ ಹಾಗೂ ಸ್ಥಳೀಯರು ತಕ್ಷಣ ಟಾರ್ಚ್ ಹಿಡಿದು ನದಿಯ ದಂಡೆಯತ್ತ ಧಾವಿಸಿದ್ದಾರೆ. ಮಹಿಳೆಯ ನಿರಂತರ ಚೀರಾಟ ಹಾಗೂ ಜನರ ಆಗಮನದಿಂದ ಗಾಬರಿಗೊಂಡ ಮೊಸಳೆ ಆಕೆಯನ್ನು ಬಿಟ್ಟು ನೀರಿನಲ್ಲಿ ಮರೆಯಾಗಿದೆ. ತಕ್ಷಣ ಕಾರ್ಯಪ್ರವೃತ್ತರಾದ ಸ್ಥಳೀಯರು ಮಹಿಳೆಯನ್ನು ಸುರಕ್ಷಿತವಾಗಿ ನೀರಿನಿಂದ ಹೊರತೆಗೆದು ದಂಡೆಗೆ ಕರೆತಂದಿದ್ದಾರೆ.
ವಿಶೇಷವೆಂದರೆ, ಆತ್ಮಹತ್ಯೆ ಮಾಡಿಕೊಳ್ಳುವ ಉದ್ದೇಶದಿಂದ ನದಿಗೆ ಹಾರಿದ್ದ ಮಹಿಳೆ ಮೊಸಳೆಯ ದಾಳಿಯಿಂದ ಭಯಭೀತರಾಗಿ ಚೀರಾಡಿದ್ದೇ ಸ್ಥಳೀಯರ ಗಮನ ಸೆಳೆಯಲು ಕಾರಣವಾಗಿದೆ. ಹೀಗಾಗಿ ಮೊಸಳೆಯ ದಾಳಿಯೇ ಆಕೆಯ ಜೀವ ಉಳಿಸಲು ಪರೋಕ್ಷವಾಗಿ ಕಾರಣವಾಯಿತು ಎಂಬ ಅಚ್ಚರಿ ಸ್ಥಳೀಯರಲ್ಲಿ ವ್ಯಕ್ತವಾಗಿದೆ.
ಘಟನೆಯ ಮಾಹಿತಿ ಪಡೆದ ಸುಬ್ರಹ್ಮಣ್ಯ ಪೊಲೀಸರು ಸ್ಥಳಕ್ಕೆ ಆಗಮಿಸಿ ಮಹಿಳೆಯನ್ನು ವಿಚಾರಣೆ ನಡೆಸಿದ್ದಾರೆ. ಈ ವೇಳೆ ಕೌಟುಂಬಿಕ ಮನಸ್ತಾಪದಿಂದ ಬೇಸತ್ತು ಉಡುಪಿಯಿಂದ ಕುಕ್ಕೆ ಸುಬ್ರಹ್ಮಣ್ಯಕ್ಕೆ ಬಂದು ನದಿಗೆ ಹಾರಿರುವುದಾಗಿ ಮಹಿಳೆ ತಿಳಿಸಿದ್ದಾರೆ.
ಬಳಿಕ ಪೊಲೀಸರು ಉಡುಪಿಯಲ್ಲಿದ್ದ ಮಹಿಳೆಯ ಕುಟುಂಬಸ್ಥರನ್ನು ಸಂಪರ್ಕಿಸಿ ಸ್ಥಳಕ್ಕೆ ಕರೆಸಿಕೊಂಡಿದ್ದಾರೆ. ಮಹಿಳೆಗೆ ಸೂಕ್ತ ಸಮಾಲೋಚನೆ ಹಾಗೂ ಕೌನ್ಸೆಲಿಂಗ್ ವ್ಯವಸ್ಥೆ ಕಲ್ಪಿಸಿ, ಕುಟುಂಬಸ್ಥರೊಂದಿಗೆ ಸುರಕ್ಷಿತವಾಗಿ ಊರಿಗೆ ಕಳುಹಿಸಿಕೊಟ್ಟಿದ್ದಾರೆ.
ಸಾವಿನ ದವಡೆಯಿಂದ ಪಾರಾದ ಮಹಿಳೆ! ಮೊಸಳೆಯ ದಾಳಿ, ಮಹಿಳೆಯ ಚೀರಾಟ, ಸ್ಥಳೀಯರ ಸಮಯಪ್ರಜ್ಞೆ ಹಾಗೂ ಪೊಲೀಸರ ಮಧ್ಯಸ್ಥಿಕೆಯಿಂದಾಗಿ ಕೊನೆಗೂ ಮಹಿಳೆಯ ಜೀವ ಉಳಿದಿದೆ.
AWARNESS
ಗೋಕರ್ಣ ಬೀಚಿನಲ್ಲಿ ರಜೆಯ ಮೋಜು..ಬೆಂಗಳೂರಿನ ಮೂವರು ಟೆಕ್ಕಿಗಳ ದುರ್ಮರಣ..
ಉತ್ತರ ಕನ್ನಡ :
ಗೋಕರ್ಣದ ದುಬ್ಬಣಶಶಿ (ಡಬ್ಬನಶಶಿ) ಕಡಲತೀರದಲ್ಲಿ ಭಾನುವಾರ ಸಂಭವಿಸಿದ ಭೀಕರ ದುರಂತದಲ್ಲಿ ಬೆಂಗಳೂರು ಮೂಲದ ಖಾಸಗಿ ಕಂಪನಿಯ ಮೂವರು ಪ್ರವಾಸಿಗರು ಸಮುದ್ರದ ಅಲೆಗೆ ಸಿಲುಕಿ ಸಾವನ್ನಪ್ಪಿದ್ದಾರೆ.
ಮೃತರ ವಿವರ:
ಮೃತರನ್ನು ಬೆಂಗಳೂರಿನ ಬೆಳ್ಳಂದೂರಿನ ‘ಅಲೋರಿಕಾ’ ಕಂಪನಿಯ ಉದ್ಯೋಗಿಗಳಾದ ಶೋಭಾ ದಾಸ್ (22) (ಮೂಲತಃ ಜಾರ್ಖಂಡ್), ಮಹಮ್ಮದ್ ಅಕ್ರಮ್ (27) ಮತ್ತು ಸಮುದ್ರದಲ್ಲಿ ಕೊಚ್ಚಿ ಹೋಗಿ ನಾಪತ್ತೆಯಾಗಿದ್ದ ವಿಶ್ವೇಶ್ ಎ.ಕೆ. (24) ಎಂದು ಗುರುತಿಸಲಾಗಿದೆ. ಸೋಮವಾರದ ಹುಡುಕಾಟದ ಬಳಿಕ ವಿಶ್ವೇಶ್ ಅವರ ಮೃತದೇಹವೂ ಪತ್ತೆಯಾಗಿದೆ.
ಘಟನೆ ನಡೆದ ಹಿನ್ನೆಲೆ.
ಕಂಪನಿಯಿಂದ ಸಿಕ್ಕ ಬೋನಸ್ ಪಾರ್ಟಿ ಆಚರಿಸಲು ಈ ತಂಡ ಗೋಕರ್ಣಕ್ಕೆ ಪ್ರವಾಸ ಬಂದಿತ್ತು. ಭಾನುವಾರ ಬೆಳಿಗ್ಗೆ ಸುಮಾರು 7:30 ರ ಸುಮಾರಿಗೆ ತಂಡದ ಐವರು ಸದಸ್ಯರು ಸಮುದ್ರದಲ್ಲಿ ಈಜಲು ಇಳಿದಾಗ ಏಕಾಏಕಿ ಅಪ್ಪಳಿಸಿದ ಬಲವಾದ ಅಲೆಗಳ ಸುಳಿಗೆ ಸಿಲುಕಿ ಕೊಚ್ಚಿಕೊಂಡು ಹೋಗಿದ್ದಾರೆ.
ರಕ್ಷಣೆ ಮತ್ತು ಚಿಕಿತ್ಸೆ:
ಘಟನೆಯನ್ನು ಗಮನಿಸಿದ ರೆಸಾರ್ಟ್ನ ಜೀವರಕ್ಷಕ (ಲೈಫ್ಗಾರ್ಡ್) ಸಿಬ್ಬಂದಿ ಹಾಗೂ ಸ್ಥಳೀಯ ಮೀನುಗಾರರು ತಕ್ಷಣ ಕಾರ್ಯಾಚರಣೆ ನಡೆಸಿ ನಾಲ್ವರನ್ನು ದಡಕ್ಕೆ ತಂದಿದ್ದರು. ಆದರೆ ಶೋಭಾ ದಾಸ್ ಆಸ್ಪತ್ರೆಯಲ್ಲಿ ಚಿಕಿತ್ಸೆ ಫಲಿಸದೆ ಮೃತಪಟ್ಟರೆ, ಮಹಮ್ಮದ್ ಅಕ್ರಮ್ ಅವರನ್ನು ಹೆಚ್ಚಿನ ಚಿಕಿತ್ಸೆಗೆ ಮಣಿಪಾಲ ಆಸ್ಪತ್ರೆಗೆ ಸಾಗಿಸುವ ಮಾರ್ಗಮಧ್ಯೆ ಕೊನೆಯುಸಿರೆಳೆದರು.
ಬದುಕುಳಿದವರು.
ಇದೇ ಘಟನೆಯಲ್ಲಿ ಸಿಲುಕಿದ್ದ ನಿಶಾಂತ್ ಡಿ.ವಿ. (26) ಮತ್ತು ಮಹಮದ್ ಖಾಸಿಂ ಎಂಬ ಇಬ್ಬರು ಪ್ರವಾಸಿಗರು ಪ್ರಾಣಾಪಾಯದಿಂದ ಪಾರಾಗಿದ್ದು, ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆದು ಚೇತರಿಸಿಕೊಂಡಿದ್ದಾರೆ.
ಘಟನೆಗೆ ಸಂಬಂಧಿಸಿದಂತೆ ಗೋಕರ್ಣ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದ್ದು, ಪೊಲೀಸರು ಮುಂದಿನ ಕಾನೂನು ಕ್ರಮ ಕೈಗೊಂಡಿದ್ದಾರೆ.
BANGALORE
ಪ್ರವಾಸಕ್ಕೆಂದು ಹೊರಟ ಸ್ನೇಹಿತರ ಗುಂಪು ಶವವಾಗಿ ವಾಪಸ್..ಉತ್ತರಾಖಂಡ ಹೆಲಿಕಾಪ್ಟರ್ ಪತನದಲ್ಲಿ ಸಿಸಿಬಿ ಇನ್ಸ್ಪೆಕ್ಟರ್ ದುರಂತ ಅಂತ್ಯ
ಬೆಂಗಳೂರು: ಉತ್ತರಾಖಂಡದ ಜೋಶಿಮಠ ಸಮೀಪ ಸಂಭವಿಸಿದ ಭೀಕರ ಹೆಲಿಕಾಪ್ಟರ್ ಅಪಘಾತದಲ್ಲಿ ಬೆಂಗಳೂರಿನ ಸಿಸಿಬಿ ಇನ್ಸ್ಪೆಕ್ಟರ್ ಸೇರಿದಂತೆ ಐವರು ಕನ್ನಡಿಗರು ಹಾಗೂ ಪೈಲಟ್ ಸೇರಿ ಒಟ್ಟು ಆರು ಮಂದಿ ದುರ್ಮರಣಕ್ಕೀಡಾಗಿದ್ದಾರೆ.ಕೇದಾರನಾಥ ಮತ್ತು ಬದರಿನಾಥ ದೇವಾಲಯಗಳ ದರ್ಶನಕ್ಕಾಗಿ ಬೆಂಗಳೂರಿನಿಂದ ಪ್ರವಾಸ ಕೈಗೊಂಡಿದ್ದ ಸ್ನೇಹಿತರ ಗುಂಪು ಈ ದುರಂತಕ್ಕೆ ಬಲಿಯಾಗಿದೆ. ಮೃತರನ್ನು ಸಿಸಿಬಿ ಇನ್ಸ್ಪೆಕ್ಟರ್ ಅರುಣ್ ಸಾಲಂಕೆ, ಹೆಚ್.ಎಸ್. ನಾಗರಾಜ್, ಪ್ರತಾಪ್, ಸುಧೀರ್ ಕೆ., ಶಂಕರೇಗೌಡ ಹಾಗೂ ಹೆಲಿಕಾಪ್ಟರ್ ಪೈಲಟ್ ಹಿಮಾಂಶು ಎಂದು ಗುರುತಿಸಲಾಗಿದೆ.
ಬೆಂಗಳೂರಿನಿಂದ ಧಾರ್ಮಿಕ ಪ್ರವಾಸಕ್ಕೆ ತೆರಳಿದ್ದ ಈ ಸ್ನೇಹಿತರ ತಂಡ ಕೇದಾರನಾಥ ಮತ್ತು ಬದರಿನಾಥ ದರ್ಶನ ಪೂರೈಸಿ, ಬದರಿನಾಥದಿಂದ ಡೆಹ್ರಾಡೂನ್ನ ಸಹಸ್ರಧಾರಕ್ಕೆ ಟ್ರಾನ್ಸ್ ಭಾರತ್ ಏವಿಯೇಷನ್ಗೆ ಸೇರಿದ ಹೆಲಿಕಾಪ್ಟರ್ನಲ್ಲಿ ಪ್ರಯಾಣಿಸುತ್ತಿತ್ತು. ಮಧ್ಯಾಹ್ನ 1:14 ಕ್ಕೆ ಬದರಿನಾಥದಿಂದ ಟೇಕಾಫ್ ಆದ ಹೆಲಿಕಾಪ್ಟರ್, ಜೋಶಿಮಠ ಕಣಿವೆಯ ಮೇಲೆ ಹಾರಾಟ ನಡೆಸುತ್ತಿದ್ದಾಗ ಏಕಾಏಕಿ ರೇಡಾರ್ ಸಂಪರ್ಕ ಕಳೆದುಕೊಂಡಿದೆ. ಅಲ್ಲದೆ ಹೆಲಿಕಾಪ್ಟರ್ನ ಟ್ರ್ಯಾಕಿಂಗ್ ವ್ಯವಸ್ಥೆಯೂ ಸ್ಥಗಿತಗೊಂಡು, ಕೆಲವೇ ಕ್ಷಣಗಳಲ್ಲಿ ಪತನಗೊಂಡಿದೆ.ಅಪಘಾತದ ಕುರಿತು ಮಾಹಿತಿ ಪಡೆದ ಉತ್ತರಾಖಂಡ ಪೊಲೀಸರು ಸ್ಥಳಕ್ಕೆ ಧಾವಿಸಿ ಮೃತರ ಗುರುತು ಪತ್ತೆಹಚ್ಚಿದ್ದು, ಕುಟುಂಬಸ್ಥರಿಗೆ ಮಾಹಿತಿ ರವಾನಿಸಿದ್ದಾರೆ. ಪ್ರವಾಸದ ಸಂಭ್ರಮದಲ್ಲಿದ್ದ ಸ್ನೇಹಿತರ ದುರಂತ ಸಾವು ಅವರ ಕುಟುಂಬಸ್ಥರು ಹಾಗೂ ಆಪ್ತರ ವಲಯದಲ್ಲಿ ತೀವ್ರ ಶೋಕವನ್ನುಂಟುಮಾಡಿದೆ.
ತನಿಖೆಗೆ ಆದೇಶ – ಹಾರಾಟ ಸ್ಥಗಿತ:
ಘಟನೆ ಬೆನ್ನಲ್ಲೇ ಮುನ್ನೆಚ್ಚರಿಕೆ ಕ್ರಮವಾಗಿ ಟ್ರಾನ್ಸ್ ಭಾರತ್ ಏವಿಯೇಷನ್ ಸಂಸ್ಥೆಯ ಎಲ್ಲಾ ಹೆಲಿಕಾಪ್ಟರ್ಗಳ ಹಾರಾಟವನ್ನು ತಕ್ಷಣದಿಂದಲೇ ಜಾರಿಗೆ ಬರುವಂತೆ ಸ್ಥಗಿತಗೊಳಿಸಲಾಗಿದೆ ಎಂದು ಉತ್ತರಾಖಂಡ ನಾಗರಿಕ ವಿಮಾನಯಾನ ಅಭಿವೃದ್ಧಿ ಪ್ರಾಧಿಕಾರ (UCADA) ತಿಳಿಸಿದೆ. ಹೆಲಿಕಾಪ್ಟರ್ ಪತನಕ್ಕೆ ನಿಖರ ಕಾರಣವೇನು ಎಂಬುದು ತನಿಖೆಯ ನಂತರವಷ್ಟೇ ತಿಳಿದುಬರಬೇಕಿದೆ.
-
accident3 months agoಬಿ.ಸಿ. ರೋಡ್ ಸರ್ಕಲ್ನಲ್ಲಿ ಭೀಕರ ಅಪಘಾತ: ಟಿಪ್ಪರ್-ಆಕ್ಟಿವಾ ನಡುವೆ ಡಿಕ್ಕಿ, ಸವಾರರಿಬ್ಬರೂ ದುರ್ಮರಣ
-
Bantawala4 months agoಬಂಟ್ವಾಳದಲ್ಲಿ ಭೀಕರ ಹತ್ಯಾಕಾಂಡ: ಬಸ್ನಲ್ಲಿ ಕುಳಿತಿದ್ದ ಯುವತಿಯನ್ನು ಸಾರ್ವಜನಿಕರೆದುರೇ ಕೊಚ್ಚಿ ಕೊಂದ ತಲೆಹರಟೆ ಪ್ರೇಮಿ!
-
crime9 months agoಅತ್ಯಾಚಾರ ಯತ್ನಕ್ಕೆ ತಡೆದ ಸೊಸೆಯ ಮುಖಕ್ಕೆ ಕಚ್ಚಿ ಕೊಲೆಗೆ ಯತ್ನಿಸಿದ ಮಾವ..ತಂದೆಯ ರಾಕ್ಷಸೀ ಕೃತ್ಯಕ್ಕೆ ಬೆಂಬಲಿಸಿದ ಗಂಡ..ಸುಳ್ಯ ಠಾಣಾ ವ್ಯಾಪ್ತಿಯಲ್ಲಿ ಅದೃಷ್ಟವಶಾತ್ ಬಚಾವಾದ ಸೊಸೆ..
-
crime7 months agoಧಾರ್ಮಿಕ ನಂಬಿಕೆಗೆ ಅವಮಾನ: ಕೊಡಗಿನ ಎಮ್ಮೆಮಾಡಿನಲ್ಲಿ ದೈವದ ವೇಷದಂತೆ ಧರಿಸಿ ಮದುಮಗನ ಅತಿರೇಕದ ವರ್ತನೆ!
-
Bantawala7 months agoವಿಟ್ಲದಲ್ಲಿ ನಡೆಯಿತೊಂದು ದೈವ ಕಾರಣಿಕ; ಪೊಲೀಸರ ಕಣ್ಣಿಗೆ ಮಣ್ಣೆರಚಿದರೂ ದೈವದ ದೃಷ್ಟಿಗೆ ತತ್ತರಿಸಿದ ದನಕಳ್ಳ..
-
Bantawala10 months agoನಾಗಬನ, ರಕ್ತೇಶ್ವರಿ ತಾಣ, ದೈವದೇವರ ಸಾನಿಧ್ಯ ದ್ವಂಸ ಗೊಳಿಸಿದ ಧರ್ಮದ್ರೋಹಿ ಕೃತ್ಯದ ವಿರುದ್ಧ ಭಕ್ತರ ಆಕ್ರೋಶ ; ನಾಶವಾದ ಸಾನಿಧ್ಯದಲ್ಲಿಯೇ ಸ್ವಾಮೀಜಿಯವರ ಮಾರ್ಗದರ್ಶನದಲ್ಲಿ ಕುಟುಂಬಸ್ತರು, ಸಾರ್ವಜನಿಕರ ಸಾಮೂಹಿಕ ಪ್ರಾರ್ಥನೆ
-
accident4 months agoBreaking: ಬಂಟ್ವಾಳದಲ್ಲಿ ಶಾಲಾ ಬಸ್ ಮೇಲೆ ಉರುಳಿದ ಬೃಹತ್ ಮರ; ಕಲ್ಲಡ್ಕ ಶ್ರೀರಾಮ ಶಾಲೆಯ ಓರ್ವ ವಿದ್ಯಾರ್ಥಿ ಸಾವು, ಕೆಲವರು ಗಂಭೀರ, ಹಲವರಿಗೆ ಗಾಯ!
-
accident6 months agoವಿಟ್ಲ ಆಕಾಶದಲ್ಲಿ ಹಾರಾಡಿದ ವಿಮಾನ: ತಾಂತ್ರಿಕ ದೋಷವಲ್ಲ, ಹವಾಮಾನ ವೈಪರೀತ್ಯದ ಕಾರಣ ! ಸಾರ್ವಜನಿಕರು ಆತಂಕ ಪಡುವ ಅಗತ್ಯವಿಲ್ಲ
