arrest
ಮಂಗಳೂರು: ನೇಪಾಳ ಮೂಲದ ಕುಖ್ಯಾತ ಅಂತರ್-ರಾಜ್ಯ ಮನೆಗಳ್ಳರ ಬಂಧನ; ₹10 ಲಕ್ಷ ಮೌಲ್ಯದ ಚಿನ್ನ, ಬೆಳ್ಳಿ ಆಭರಣ ವಶ!
ಮಂಗಳೂರು: ಮಂಗಳೂರು ನಗರದ ಬರ್ಕೆ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ನಡೆದಿದ್ದ ಸರಣಿ ಕಳ್ಳತನ ಪ್ರಕರಣಕ್ಕೆ ಸಂಬಂಧಿಸಿದಂತೆ, ಭರ್ಜರಿ ಕಾರ್ಯಾಚರಣೆ ನಡೆಸಿರುವ ಬರ್ಕೆ ಪೊಲೀಸರು ನೇಪಾಳ ಮೂಲದ ಮೂವರು ಕುಖ್ಯಾತ ಅಂತರ್-ರಾಜ್ಯ ಮನೆಗಳ್ಳರನ್ನು ಬಂಧಿಸುವಲ್ಲಿ ಯಶಸ್ವಿಯಾಗಿದ್ದಾರೆ. ಬಂಧಿತರಿಂದ ಸುಮಾರು 10 ಲಕ್ಷ ರೂಪಾಯಿ ಮೌಲ್ಯದ ಚಿನ್ನ ಮತ್ತು ಬೆಳ್ಳಿ ಆಭರಣಗಳನ್ನು ವಶಪಡಿಸಿಕೊಳ್ಳಲಾಗಿದೆ.
ಘಟನೆಯ ಹಿನ್ನೆಲೆ:
ಮಂಗಳೂರು ನಗರದ, ಉರ್ವ ಮಾರ್ಕೆಟ್ ಬಳಿ ಮಠದಕಣಿಯ ಮನೆಯಲ್ಲಿ ದಿನಾಂಕ 11-07-2026 ರಂದು ಸಂಜೆ 17-30 ಗಂಟೆಗೆ ಮನೆಯವರು ಮನೆಗೆ ಲಾಕ್ ಮಾಡಿಕೊಂಡು ಬಂಟ್ವಾಳ ತಾಲೂಕಿನ, ವಿಟ್ಲ ಕಡಂಬು ಎಂಬಲ್ಲಿರುವ ಅವರ ಸಂಬಂಧಿಕರ ಮನೆಗೆ ತೆರಳಿದ್ದು ದಿನಾಂಕ 12-07-2026 ರಂದು ಬೆಳಗ್ಗೆ ಬಂದು ನೋಡಿದಾಗ ಮನೆಯ ಹಿಂಬಾಗದ ಬಾಗಿಲು ಒಡೆದು ಯಾರೋ ಕಳ್ಳರು ಮನೆಯಲ್ಲಿದ್ದ ಸುಮಾರು 64 ಗ್ರಾಮ್ ತೂಕದ ಚಿನ್ನಾಭರಣ ಹಾಗೂ ರೂ 25,000/- ಸೇರಿದಂತೆ ಒಟ್ಟು 8,57,000/- ಮೌಲ್ಯದ ವಸ್ತುಗಳನ್ನು ಕಳ್ಳತನ ಮಾಡಿಕೊಂಡು ಹೋಗಿರುವುದಾಗಿ ನೀಡಿದ ದೂರಿನಂತೆ ಬರ್ಕೆ ಪೊಲೀಸ್ ಠಾಣೆಯಲ್ಲಿ ಅ.ಕ್ರ 70/2026 ಕಲಂ:331(4),305 BNS ರಂತೆ ಪ್ರಕರಣ ದಾಖಲಾಗಿ ತನಿಖೆ ನಡೆಯುತ್ತಿತ್ತು.
ಐದೇ ದಿನದಲ್ಲಿ ಕಳ್ಳರ ಹೆಡೆಮುರಿ ಕಟ್ಟಿದ ಪೊಲೀಸರು!
ಪ್ರಕರಣ ದಾಖಲಾದ ಕೇವಲ 5 ದಿನಗಳಲ್ಲಿ ಚುರುಕಿನ ಕಾರ್ಯಾಚರಣೆ ನಡೆಸಿದ ಬರ್ಕೆ ಠಾಣಾ ಅಧಿಕಾರಿ ಹಾಗೂ ಸಿಬ್ಬಂದಿ ವರ್ಗದವರು, ಜುಲೈ 17ರ ಬೆಳಗ್ಗಿನ ಜಾವ ಬೋಳೂರಿನಲ್ಲಿ ಮೂವರು ಆರೋಪಿಗಳನ್ನು ಬಂಧಿಸಿದ್ದಾರೆ.
ಬಂಧಿತ ಆರೋಪಿಗಳ ವಿಚಾರಣೆಯಿಂದ ಮಹಾರಾಷ್ಟ್ರದ ನಾಸಿಕ್ ನಗರದಲ್ಲಿ ಕಳವು ಮಾಡಲಾಗಿದ್ದ 790 ಗ್ರಾಂ ಬೆಳ್ಳಿ ಆಭರಣಗಳು ಸೇರಿದಂತೆ ಒಟ್ಟು ₹10 ಲಕ್ಷ ಮೌಲ್ಯದ ಸೊತ್ತುಗಳನ್ನು ಪೊಲೀಸರು ವಶಪಡಿಸಿಕೊಂಡಿದ್ದಾರೆ.

ಬಂಧಿತ ಆರೋಪಿಗಳ ವಿವರ:
- ತಿಲಕ್ ಕುಮಾರ್ ಖಡ್ಕ @ ತಿಲಕ್ ಖಡ್ಕ (36 ವರ್ಷ) – ತಂದೆ: ದಿ. ಪ್ರೇಮ್ ಖಡ್ಕ, ವಾಸ: ಚೈನ್ಪೂರು ಜಿಲ್ಲೆ, ನೇಪಾಳ.
- ಅಶೋಕ್ ರಾಜ್ @ ಅಶೋಕ್ ಸಿಂಗ್ @ ಅಶೋಕ್ ಸಿಂಗ್ ಠಾಕುರಿ (33 ವರ್ಷ) – ತಂದೆ: ಗಗನ್ ಸಿಂಗ್, ವಾಸ: ಬಜಂಗ್ ಜಿಲ್ಲೆ, ನೇಪಾಳ.
- ದಿಪೆಂದರ್ ರಸೈಲಿ (25 ವರ್ಷ) – ತಂದೆ: ಜವರ್ ಬಹದ್ದೂರ್ ಕಾಮಿ, ವಾಸ: ಕೈಲಾಲಿ ಜಿಲ್ಲೆ, ನೇಪಾಳ.
ಹಲವು ರಾಜ್ಯಗಳಲ್ಲಿ 15ಕ್ಕೂ ಹೆಚ್ಚು ಕಳ್ಳತನ!
ವಿಚಾರಣೆ ವೇಳೆ ಆರೋಪಿಗಳು ಕಳೆದ ಮಾರ್ಚ್ ತಿಂಗಳಿನಲ್ಲಿ ಉರ್ವಾ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ಕಳ್ಳತನಕ್ಕೆ ಯತ್ನಿಸಿರುವುದನ್ನು ಒಪ್ಪಿಕೊಂಡಿದ್ದಾರೆ. ಅಲ್ಲದೆ, ಕರ್ನಾಟಕದ ಬೆಂಗಳೂರು, ದಾವಣಗೆರೆ, ಉಡುಪಿ ಸೇರಿದಂತೆ ವಿವಿಧ ಜಿಲ್ಲೆಗಳಲ್ಲಿ 15ಕ್ಕೂ ಹೆಚ್ಚು ಮನೆಗಳ್ಳತನ ಪ್ರಕರಣಗಳಲ್ಲಿ ಇವರು ಭಾಗಿಯಾಗಿರುವುದು ಬೆಳಕಿಗೆ ಬಂದಿದೆ. ತಮಿಳುನಾಡು, ದೆಹಲಿ ಹಾಗೂ ಹರ್ಯಾಣ ರಾಜ್ಯಗಳಲ್ಲೂ ಇವರ ಮೇಲೆ ಪ್ರಕರಣಗಳಿದ್ದು, ಪೊಲೀಸರು ಹೆಚ್ಚಿನ ಮಾಹಿತಿ ಸಂಗ್ರಹಿಸುತ್ತಿದ್ದಾರೆ. ಆರೋಪಿಗಳನ್ನು ನ್ಯಾಯಾಲಯಕ್ಕೆ ಹಾಜರುಪಡಿಸಲಾಗುವುದು ಎಂದು ಮಂಗಳೂರು ಪೊಲೀಸ್ ಆಯುಕ್ತರು ಪ್ರಕಟಣೆಯಲ್ಲಿ ತಿಳಿಸಿದ್ದಾರೆ.
ಸದರಿ ಯಶಸ್ವಿ ಕಾರ್ಯಾಚರಣೆಯಲ್ಲಿ ಪಾಲ್ಗೊಂಡ ಬರ್ಕೆ ಪೊಲೀಸ್ ಠಾಣೆಯ ಅಧಿಕಾರಿ ಹಾಗೂ ಸಿಬ್ಬಂದಿಗಳ ಕಾರ್ಯಕ್ಷಮತೆಗೆ ಸಾರ್ವಜನಿಕ ವಲಯದಲ್ಲಿ ಶ್ಲಾಘನೆ ವ್ಯಕ್ತವಾಗಿದೆ.
arrest
6 ವರ್ಷಗಳಿಂದ ವಿದೇಶದಲ್ಲಿದ್ದ ವಾರೆಂಟ್ ಆರೋಪಿ ವಿಮಾನ ನಿಲ್ದಾಣದಲ್ಲಿ ಅರೆಸ್ಟ್: ಬಂಟ್ವಾಳ ಪೊಲೀಸರ ಕಾರ್ಯಾಚರಣೆ
ಮಂಗಳೂರು: ನ್ಯಾಯಾಲಯದ ವಿಚಾರಣೆಗೆ ಹಾಜರಾಗದೆ ಕಳೆದ 6 ವರ್ಷಗಳಿಂದ ವಿದೇಶದಲ್ಲಿ ತಲೆಮರೆಸಿಕೊಂಡಿದ್ದ ವಾರೆಂಟ್ ಆರೋಪಿಯನ್ನು ಬಂಟ್ವಾಳ ನಗರ ಪೊಲೀಸರು ಮಂಗಳೂರು ಅಂತಾರಾಷ್ಟ್ರೀಯ ವಿಮಾನ ನಿಲ್ದಾಣದಲ್ಲಿ ವಶಕ್ಕೆ ಪಡೆದಿದ್ದಾರೆ.
ಮಂಗಳೂರು ಬಜಾಲ್‌ನಂತೂರು ನಿವಾಸಿ ಮಹಮ್ಮದ್ ನೌಫಲ್ @ ಸಫಾರಿ ನೌಫಲ್ (34) ದಸ್ತಗಿರಿಯಾದ ಆರೋಪಿ.
ಪ್ರಕರಣದ ವಿವರ: ಬಂಟ್ವಾಳ ನಗರ ಪೊಲೀಸ್ ಠಾಣೆಯಲ್ಲಿ ದಾಖಲಾಗಿದ್ದ ಪ್ರಕರಣಕ್ಕೆ (ಅ.ಕ್ರ: 24/2020, ಐಪಿಸಿ ಕಲಂ: 143, 147, 148, 504, 323, 324, 506, 427 r/w 149 ಮತ್ತು ಕಾವಲು ಕಾಯ್ದೆ) ಸಂಬಂಧಿಸಿದಂತೆ ಈಾತನು ಮಾನ್ಯ ನ್ಯಾಯಾಲಯಕ್ಕೆ ವಿಚಾರಣೆಗೆ ಹಾಜರಾಗದೆ ವಿದೇಶಕ್ಕೆ ಪರಾರಿಯಾಗಿದ್ದ. ಈತನ ವಿರುದ್ಧ ನ್ಯಾಯಾಲಯದಿಂದ ವಾರೆಂಟ್ ಜಾರಿಯಾಗಿತ್ತು.
ಸೆಪ್ಟೆಂಬರ್ 15, 2026ರಂದು ವಿದೇಶದಿಂದ ಮನೆಗೆ ಹಿಂತಿರುಗುತ್ತಿದ್ದ ವೇಳೆ, ಮಂಗಳೂರು ಅಂತಾರಾಷ್ಟ್ರೀಯ ವಿಮಾನ ನಿಲ್ದಾಣದ ಇಮಿಗ್ರೇಷನ್ ವಿಭಾಗದ ಸಹಾಯದಿಂದ ಬಂಟ್ವಾಳ ನಗರ ಪೊಲೀಸರು ಆರೋಪಿಯನ್ನು ಯಶಸ್ವಿಯಾಗಿ ಬಂಧಿಸಿದ್ದಾರೆ.
ಬಂಧಿತ ಆರೋಪಿಯನ್ನು ಮಾನ್ಯ ನ್ಯಾಯಾಲಯಕ್ಕೆ ಹಾಜರುಪಡಿಸಲಾಗಿದ್ದು, ನ್ಯಾಯಾಲಯವು ಸೆಪ್ಟೆಂಬರ್ 29, 2026ರವರೆಗೆ ನ್ಯಾಯಾಂಗ ಬಂಧನ ವಿಧಿಸಿ ಆದೇಶಿಸಿದೆ.
arrest
ಬೆಳ್ತಂಗಡಿ: ದಲಿತ ಕುಟುಂಬದ ಜಮೀನಿಗೆ ಅಕ್ರಮ ಪ್ರವೇಶಿಸಿ ಅಶ್ಲೀಲ ಪ್ರದರ್ಶನ – ಆರೋಪಿ ಬಂಧನ
ಬೆಳ್ತಂಗಡಿ: ದಕ್ಷಿಣ ಕನ್ನಡ ಜಿಲ್ಲೆಯ ಬೆಳ್ತಂಗಡಿ ತಾಲೂಕಿನ ವೇಣೂರು ಸಮೀಪದಲ್ಲಿ ಪರಿಶಿಷ್ಟ ಜಾತಿಯ ಕುಟುಂಬಗಳಿಗೆ ಸೇರಿದ ಜಮೀನಿಗೆ ಅಕ್ರಮ ಪ್ರವೇಶಿಸಿ ಕೃತ್ಯವೆಸಗಿ, ದಲಿತ ಕುಟುಂಬದ ಮಹಿಳೆಯರ ಮುಂದೆ ಪಂಚೆ ಎತ್ತಿ ಮರ್ಮಾಂಗ ಪ್ರದರ್ಶಿಸಿ ವಿಕೃತಿ ಮೆರೆದ ವಿಲಕ್ಷಣ ಪ್ರಕರಣ ನಡೆದಿದ್ದು, ಈ ಬಗ್ಗೆ ವೇಣೂರು ಠಾಣೆಯಲ್ಲಿ ಪ್ರಕರಣ ದಾಖಲಾಗಿ ಆರೋಪಿಯನ್ನು ಪೊಲೀಸರು ಬಂಧಿಸಿದ್ದಾರೆ.
ಬಂಧಿತ ಆರೋಪಿಯನ್ನು ಬೆಳ್ತಂಗಡಿ ತಾಲೂಕಿನ ಹೊಸಂಗಡಿ ಗ್ರಾಮದ ಪಟ್ಟಾಡಿ ಮನೆಯ ಅಬ್ದುಲ್ ಹನೀಫ್ ಹುಸೇನ್ (50) ಎಂದು ಗುರುತಿಸಲಾಗಿದೆ.
ಘಟನೆ ವಿವರ:
ಬೆಳ್ತಂಗಡಿ ತಾಲೂಕಿನ ವೇಣೂರು ಸಮೀಪದ ಪಡ್ಯಾರಬೆಟ್ಟು ಎಂಬಲ್ಲಿ ಸುಮಾರು 40 ವರ್ಷಗಳಿಗಿಂತಲೂ ಹೆಚ್ಚು ಕಾಲದಿಂದ ವಾಸ್ತವ್ಯವಿದ್ದು ಕೃಷಿ ಚಟುವಟಿಕೆ ನಡೆಸಿಕೊಂಡು ಬರುತ್ತಿದ್ದ ಪರಿಶಿಷ್ಟ ಜಾತಿಯ ಕುಟುಂಬದ ಸ್ವಾಧೀನದ ಜಾಗದಲ್ಲಿ ಸಿಮೆಂಟ್ ಕಂಬ ಹಾಗೂ ತಂತಿ ಬೇಲಿ ಹಾಕಿ ಕುಟುಂಬ ಕೃಷಿ ಕಾರ್ಯದಲ್ಲಿ ತೊಡಗಿತ್ತು.
ಸೆ.7 ರಂದು ಸ್ಥಳೀಯ ನಿವಾಸಿ ಹನೀಫ್ ಎಂಬಾತ ಏಕಾಏಕಿ ಆ ಜಾಗಕ್ಕೆ ಅತಿಕ್ರಮ ಪ್ರವೇಶಿಸಿ, ಜಾತಿ ನಿಂದನೆ ಮಾಡಿ ಅವಾಚ್ಯ ಮತ್ತು ಅಶ್ಲೀಲ ಪದಗಳಿಂದ ನಿಂದಿಸಿದ್ದಾನೆ. ಬಡ ಕುಟುಂಬ ಹಾಕಿದ್ದ ಸಿಮೆಂಟ್ ಬೇಲಿ ಕಂಬ ಹಾಗೂ ತಂತಿ ಬೇಲಿಯನ್ನು ಕಿತ್ತೆಸೆದು, ಅಡಿಕೆ ಹಾಗೂ ಬಾಳೆ ಗಿಡಗಳನ್ನು ಮುರಿದು ದಾಂಧಲೆ ನಡೆಸಿ ಕೊಲೆ ಬೆದರಿಕೆ ಹಾಕಿದ್ದಾನೆ ಎಂದು ಆರೋಪಿಸಲಾಗಿದೆ.
ಈ ವೇಳೆ ಕೆಲಸದಲ್ಲಿ ತೊಡಗಿದ್ದ ದಲಿತ ಕುಟುಂಬದ ಮಹಿಳೆಯರು ದಾಂಧಲೆಯ ಘಟನೆಯನ್ನು ತಮ್ಮ ಮೊಬೈಲ್‌ನಲ್ಲಿ ವಿಡಿಯೋ ಚಿತ್ರೀಕರಣ ಮಾಡುತ್ತಿದ್ದಾಗ ಆರೋಪಿ ಹನೀಫ್ ಮಹಿಳೆಯರ ಎದುರು ಬಂದು ತಾನು ಉಟ್ಟಿದ್ದ ಪಂಚೆಯನ್ನು ಎತ್ತಿ ಒಳ ಉಡುಪನ್ನು ಜಾರಿಸಿ ತನ್ನ ಗುಪ್ತಾಂಗವನ್ನು ತೋರಿಸುತ್ತಾ ಸಾರ್ವಜನಿಕವಾಗಿ ವಿಕೃತಿಯನ್ನು ಮೆರೆದಿದ್ದಾನೆ. “ನಿಮ್ಮನ್ನು ಇದರಿಂದಲೇ ಅತ್ಯಾಚಾರ ಮಾಡುತ್ತೇನೆ, ಈ ಜಾಗ ಬಿಟ್ಟು ಹೋಗದಿದ್ದರೆ ನಿಮ್ಮನ್ನು ಕೊಲ್ಲದೆ ಬಿಡುವುದಿಲ್ಲ” ಎಂದು ಬೆದರಿಕೆ ಹಾಕಿ ಮಹಿಳೆಯರನ್ನು ಬೆನ್ನಟ್ಟಿಕೊಂಡು ಬಂದಿದ್ದಾನೆ ಎಂದು ದೂರಿನಲ್ಲಿ ತಿಳಿಸಲಾಗಿದೆ.
ದೂರು ಮತ್ತು ಬಂಧನ:
ಈತನ ವಿಕೃತಿಯಿಂದ ಭಯಗೊಂಡ ಬಡ ಕುಟುಂಬವು ಸ್ಥಳೀಯ ದಲಿತ ಮುಖಂಡರು ಹಾಗೂ ಕಾರ್ಯಕರ್ತರೊಂದಿಗೆ ವೇಣೂರು ಪೊಲೀಸ್ ಠಾಣೆಗೆ ತೆರಳಿ ವಿಡಿಯೋ ಚಿತ್ರೀಕರಣದ ದೃಶ್ಯಾವಳಿ ಸಾಕ್ಷ್ಯಾಧಾರಗಳೊಂದಿಗೆ ಸೆ.8 ರಂದು ದೂರು ನೀಡಿದೆ.
ದೂರಿನ ಅನ್ವಯ ವೇಣೂರು ಠಾಣೆಯಲ್ಲಿ ದಲಿತ ದೌರ್ಜನ್ಯ ಕಾಯ್ದೆ ಅಡಿಯಲ್ಲಿ ಹಾಗೂ ಬಿಎನ್ಎಸ್ 329(3), 352, 351(2), 75(1), 324(4) ರಂತೆ ಪ್ರಕರಣ ದಾಖಲಿಸಲಾಗಿದೆ.
ಪ್ರಕರಣ ದಾಖಲಿಸಿಕೊಂಡ ವೇಣೂರು ಪೊಲೀಸರು ಆರೋಪಿಯನ್ನು ಸಂಜೆ ಬಂಧಿಸಿ ಮಂಗಳೂರು ನ್ಯಾಯಾಲಯಕ್ಕೆ ಹಾಜರುಪಡಿಸಿದ್ದು, ನ್ಯಾಯಾಲಯ ಆರೋಪಿಗೆ ನ್ಯಾಯಾಂಗ ಬಂಧನ ವಿಧಿಸಿದೆ.
40 ವರ್ಷಗಳಿಂದ ಕೃಷಿ ಮಾಡಿಕೊಂಡು ಬಂದಿದ್ದ ಬಡ ಪರಿಶಿಷ್ಟ ಕುಟುಂಬದ ಮೇಲೆ ದೌರ್ಜನ್ಯ ನಡೆಸಿ, ಮಹಿಳೆಯರ ಮುಂದೆ ಅಸಭ್ಯವಾಗಿ ವರ್ತಿಸಿದ ಆರೋಪಿಗೆ ಸ್ಥಳೀಯ ದಲಿತ ಮುಖಂಡರು ಹಾಗೂ ಕಾರ್ಯಕರ್ತರ ಸಂಘಟಿತ ಹೋರಾಟದ ಫಲವಾಗಿ ಕಾನೂನಿನ ತಕ್ಕ ಪಾಠ ಕಲಿಸಿದಂತಾಗಿದ್ದು, ಈ ಹೋರಾಟಕ್ಕೆ ರಾಜ್ಯಾದ್ಯಂತ ಮೆಚ್ಚುಗೆ ವ್ಯಕ್ತವಾಗಿದೆ.
arrest
ಕರಿಕೆ: ಕೇರಳ ಮೀಸಲು ಅರಣ್ಯದಲ್ಲಿ ಕಡವೆ ಬೇಟೆಯಾಡಿ ಮಾಂಸ ಮಾರಾಟ ಮಾಡುತ್ತಿದ್ದ ಜಾಲ ಪತ್ತೆ; ಓರ್ವನ ಬಂಧನ, 40 ಕೆಜಿ ಮಾಂಸ ವಶ
ಕರಿಕೆ ಸಮೀಪದ ಕೇರಳ ಮೀಸಲು ಅರಣ್ಯ ಪ್ರದೇಶದಲ್ಲಿ ಅಕ್ರಮವಾಗಿ ಕಡವೆ ಬೇಟೆಯಾಡಿ, ಮಾಂಸ ಮಾರಾಟ ಮಾಡುತ್ತಿದ್ದ ಜಾಲವನ್ನು ಕೇರಳ ಅರಣ್ಯ ಇಲಾಖೆ ಅಧಿಕಾರಿಗಳು ಯಶಸ್ವಿಯಾಗಿ ಭೇದಿಸಿದ್ದು, ಓರ್ವ ಆರೋಪಿಯನ್ನು ಬಂಧಿಸಿದ್ದಾರೆ.
ಕರಿಕೆ ತೋಟಮ್ ನಿವಾಸಿ ಸಿದ್ದು (35) ಬಂಧಿತ ಆರೋಪಿ. ಈ ಕೃತ್ಯದಲ್ಲಿ ಭಾಗಿಯಾಗಿದ್ದ ಇತರ ಇಬ್ಬರು ಆರೋಪಿಗಳಾದ ಜಿ.ಎಸ್. ವಿನೀಶ್ ಮತ್ತು ವಿಮಲ್ ರಾಜ್ ಪರಾರಿಯಾಗಿದ್ದಾರೆ.
ಕರಿಕೆ ಸಮೀಪದ ತೋಟಮ್ ಬಳಿಯ ಕೇರಳ ಮೀಸಲು ಅರಣ್ಯದ ಗೇರು ತೋಟಿನ ಕಾಟೂರ್ ಕೊಪ್ಪು ಎಂಬಲ್ಲಿ ಈ ಅಕ್ರಮ ಚಟುವಟಿಕೆ ನಡೆಯುತ್ತಿತ್ತು. ಖಚಿತ ಮಾಹಿತಿ ಮೇರೆಗೆ ಕಾರ್ಯಾಚರಣೆ ನಡೆಸಿದ ಅರಣ್ಯ ಇಲಾಖೆ ಅಧಿಕಾರಿಗಳು, ಆರೋಪಿಯಿಂದ ಒಂದು ನಾಡ ಬಂದೂಕು, ಸುಮಾರು 40 ಕೆಜಿ ಕಡವೆ ಮಾಂಸ ಹಾಗೂ ಬೇಟೆಗೆ ಬಳಸಿದ್ದ ಇತರೆ ವಸ್ತುಗಳನ್ನು ವಶಪಡಿಸಿಕೊಂಡಿದ್ದಾರೆ.
ಬಂಧಿತ ಆರೋಪಿ ವಿರುದ್ಧ ವನ್ಯಜೀವಿ ಸಂರಕ್ಷಣಾ ಕಾಯ್ದೆಯಡಿ ಪ್ರಕರಣ ದಾಖಲಿಸಿ, ನ್ಯಾಯಾಂಗ ಬಂಧನಕ್ಕೆ ಒಪ್ಪಿಸಲಾಗಿದೆ. ಕಾಸರಗೋಡು ವಲಯದ ಅರಣ್ಯ ಅಧಿಕಾರಿಗಳಾದ ರಾಜು ಎಂ.ಪಿ., ಪ್ರಕಾಶ್ ವಿ.ಪಿ. ಹಾಗೂ ಪ್ರವೀಣ್ ಕುಮಾರ್ ಅವರನ್ನೊಳಗೊಂಡ ತಂಡ ಈ ಕಾರ್ಯಾಚರಣೆಯಲ್ಲಿ ಯಶಸ್ವಿಯಾಗಿ ಭಾಗವಹಿಸಿತ್ತು
-
accident2 months agoಬಿ.ಸಿ. ರೋಡ್ ಸರ್ಕಲ್ನಲ್ಲಿ ಭೀಕರ ಅಪಘಾತ: ಟಿಪ್ಪರ್-ಆಕ್ಟಿವಾ ನಡುವೆ ಡಿಕ್ಕಿ, ಸವಾರರಿಬ್ಬರೂ ದುರ್ಮರಣ
-
Bantawala2 months agoಬಂಟ್ವಾಳದಲ್ಲಿ ಭೀಕರ ಹತ್ಯಾಕಾಂಡ: ಬಸ್ನಲ್ಲಿ ಕುಳಿತಿದ್ದ ಯುವತಿಯನ್ನು ಸಾರ್ವಜನಿಕರೆದುರೇ ಕೊಚ್ಚಿ ಕೊಂದ ತಲೆಹರಟೆ ಪ್ರೇಮಿ!
-
crime8 months agoಅತ್ಯಾಚಾರ ಯತ್ನಕ್ಕೆ ತಡೆದ ಸೊಸೆಯ ಮುಖಕ್ಕೆ ಕಚ್ಚಿ ಕೊಲೆಗೆ ಯತ್ನಿಸಿದ ಮಾವ..ತಂದೆಯ ರಾಕ್ಷಸೀ ಕೃತ್ಯಕ್ಕೆ ಬೆಂಬಲಿಸಿದ ಗಂಡ..ಸುಳ್ಯ ಠಾಣಾ ವ್ಯಾಪ್ತಿಯಲ್ಲಿ ಅದೃಷ್ಟವಶಾತ್ ಬಚಾವಾದ ಸೊಸೆ..
-
crime6 months agoಧಾರ್ಮಿಕ ನಂಬಿಕೆಗೆ ಅವಮಾನ: ಕೊಡಗಿನ ಎಮ್ಮೆಮಾಡಿನಲ್ಲಿ ದೈವದ ವೇಷದಂತೆ ಧರಿಸಿ ಮದುಮಗನ ಅತಿರೇಕದ ವರ್ತನೆ!
-
Bantawala6 months agoವಿಟ್ಲದಲ್ಲಿ ನಡೆಯಿತೊಂದು ದೈವ ಕಾರಣಿಕ; ಪೊಲೀಸರ ಕಣ್ಣಿಗೆ ಮಣ್ಣೆರಚಿದರೂ ದೈವದ ದೃಷ್ಟಿಗೆ ತತ್ತರಿಸಿದ ದನಕಳ್ಳ..
-
Bantawala8 months agoನಾಗಬನ, ರಕ್ತೇಶ್ವರಿ ತಾಣ, ದೈವದೇವರ ಸಾನಿಧ್ಯ ದ್ವಂಸ ಗೊಳಿಸಿದ ಧರ್ಮದ್ರೋಹಿ ಕೃತ್ಯದ ವಿರುದ್ಧ ಭಕ್ತರ ಆಕ್ರೋಶ ; ನಾಶವಾದ ಸಾನಿಧ್ಯದಲ್ಲಿಯೇ ಸ್ವಾಮೀಜಿಯವರ ಮಾರ್ಗದರ್ಶನದಲ್ಲಿ ಕುಟುಂಬಸ್ತರು, ಸಾರ್ವಜನಿಕರ ಸಾಮೂಹಿಕ ಪ್ರಾರ್ಥನೆ
-
accident2 months agoBreaking: ಬಂಟ್ವಾಳದಲ್ಲಿ ಶಾಲಾ ಬಸ್ ಮೇಲೆ ಉರುಳಿದ ಬೃಹತ್ ಮರ; ಕಲ್ಲಡ್ಕ ಶ್ರೀರಾಮ ಶಾಲೆಯ ಓರ್ವ ವಿದ್ಯಾರ್ಥಿ ಸಾವು, ಕೆಲವರು ಗಂಭೀರ, ಹಲವರಿಗೆ ಗಾಯ!
-
accident4 months agoವಿಟ್ಲ ಆಕಾಶದಲ್ಲಿ ಹಾರಾಡಿದ ವಿಮಾನ: ತಾಂತ್ರಿಕ ದೋಷವಲ್ಲ, ಹವಾಮಾನ ವೈಪರೀತ್ಯದ ಕಾರಣ ! ಸಾರ್ವಜನಿಕರು ಆತಂಕ ಪಡುವ ಅಗತ್ಯವಿಲ್ಲ
