crime
ಮನೆಗೆ ನುಗ್ಗಿ ವೃದ್ಧ ವೈದ್ಯರ ಮೇಲೆ ಹಲ್ಲೆ, ದರೋಡೆ; ಆಕ್ಟಿವಾ ಕಳ್ಳತನ: ಇಡ್ಕಿದು ಗ್ರಾಮದಲ್ಲಿ ಸರಣಿ ಕಳ್ಳತನದಿಂದ ಬೆಚ್ಚಿಬಿದ್ದ ಜನತೆ
ವಿಟ್ಲ: ದಕ್ಷಿಣ ಕನ್ನಡ ಜಿಲ್ಲೆಯ ವಿಟ್ಲ ಪೊಲೀಸ್ ಠಾಣಾ ವ್ಯಾಪ್ತಿಯ ಇಡ್ಕಿದು ಗ್ರಾಮದಲ್ಲಿ ಶನಿವಾರ ರಾತ್ರಿ ಭೀಕರ ದರೋಡೆ ಹಾಗೂ ಸರಣಿ ಕಳ್ಳತನ ಪ್ರಕರಣಗಳು ಜರುಗಿದ್ದು, ಸ್ಥಳೀಯ ಗ್ರಾಮಸ್ಥರಲ್ಲಿ ತೀವ್ರ ಆತಂಕ ಹಾಗೂ ಭೀತಿಯ ವಾತಾವರಣ ನಿರ್ಮಾಣವಾಗಿದೆ.
ವೃದ್ಧ ವೈದ್ಯರ ಮೇಲೆ ಹಲ್ಲೆ ನಡೆಸಿ ಚಿನ್ನಾಭರಣ ದೋಚಿದ ಕಳ್ಳರು
ಇಡ್ಕಿದು ಗ್ರಾಮದ ಕೋಲ್ಪೆ ಕೊಡಂಗೆ ನಿವಾಸಿಯಾದ ನಿವೃತ್ತ ವೈದ್ಯ ಡಾ. ಪುಂಡಿಕಾಯಿ ಸೂರ್ಯನಾರಾಯಣ ಭಟ್ (75) ಅವರ ಮನೆಗೆ ಶನಿವಾರ ರಾತ್ರಿ ಹಿಂಭಾಗದಿಂದ ನುಗ್ಗಿದ ದುಷ್ಕರ್ಮಿಗಳ ತಂಡವೊಂದು ಕೃತ್ಯ ಎಸಗಿದೆ. ಘಟನೆ ನಡೆದ ಸಮಯದಲ್ಲಿ ಸೂರ್ಯನಾರಾಯಣ ಭಟ್ ಅವರು ಕೆಳ ಅಂತಸ್ತಿನಲ್ಲಿ ಟಿವಿ ವೀಕ್ಷಿಸುತ್ತಿದ್ದರು. ಮನೆ ಮೇಲಿನ ಅಂತಸ್ತಿನಲ್ಲಿ ಅವರ ಪುತ್ರ (ಪುತ್ತೂರಿನ ಬಿಂದು ಕಂಪನಿ ಉದ್ಯೋಗಿ ಕಿಶನ್), ಸೊಸೆ ಹಾಗೂ ಕುಟುಂಬಸ್ಥರು ಇದ್ದರು.
ಅದೇ ಸಮಯಕ್ಕೆ ಹಿಂಭಾಗದಿಂದ ಮನೆ ಪ್ರವೇಶಿಸಿದ ಕಳ್ಳರು, ವೃದ್ಧ ವೈದ್ಯರ ಮೇಲೆ ಭೀಕರವಾಗಿ ಹಲ್ಲೆ ನಡೆಸಿ, ಅವರ ಕುತ್ತಿಗೆಯಲ್ಲಿದ್ದ ಚಿನ್ನದ ಅಭರಣಗಳನ್ನು ಕಸಿದುಕೊಂಡು ಪರಾರಿಯಾಗಿದ್ದಾರೆ. ಭಟ್ ಅವರು ಗಾಯಗೊಂಡು ಜೋರಾಗಿ ಬೊಬ್ಬೆ ಹೊಡೆದ ತಕ್ಷಣ ಕಳ್ಳರು ಸ್ಥಳದಿಂದ ಕಾಲ್ಕಿತ್ತಿದ್ದಾರೆ.
ಫಿರ್ಯಾದಿದಾರರ ಕುತ್ತಿಗೆಯಲ್ಲಿದ್ದ ಸುಮಾರು 20 ಗ್ರಾಂ ತೂಕದ 2,60,000/- ಮೌಲ್ಯದ ಚಿನ್ನದ ಸರವನ್ನು ಕಸಿದುಕೊಂಡು ಸುಲಿಗೆ ಮಾಡಿ, ಮನೆಯ ಹಿಂಬಾಗಿಲಿನ ಮುಲಕ ಪರಾರಿಯಾಗಿರುತ್ತಾರೆ ಎಂಬುದಾಗಿ ನೀಡಿದ ದೂರಿನ ಮೇರೆಗೆ ವಿಟ್ಲ ಪೊಲೀಸ್ ಠಾಣೆಯಲ್ಲಿ ಅ.ಕ್ರ: 163/2026, ಕಲಂ: 329(4), 115(2), 309(4) ಜೊತೆಗೆ 3(5) BNS 2023 ರಂತೆ ಪ್ರಕರಣ ದಾಖಲಿಸಿಕೊಂಡು ತನಿಖೆ ನಡೆಸಲಾಗುತ್ತಿದೆ.

ಆಕ್ಟಿವಾ ಸ್ಕೂಟರ್ ಕಳ್ಳತನ, ಬೈಕ್ ಕಳವಿಗೆ ಯತ್ನ
ಈ ಘಟನೆ ನಡೆದ ಕೇವಲ ಅರ್ಧ ಕಿಲೋಮೀಟರ್ ದೂರದಲ್ಲಿರುವ ಕೋಲ್ಪೆ ಕೊಡಂಚರಪಾಲು ನಿವಾಸಿ ಆನಂದ ಸಫಲ್ಯ ಎಂಬುವರ ಮನೆಯ ಅಂಗಳದಲ್ಲಿದ್ದ ಆಕ್ಟಿವಾ ಸ್ಕೂಟರ್ ಅನ್ನು ದುಷ್ಕರ್ಮಿಗಳು ಕದ್ದೊಯ್ಯುವಲ್ಲಿ ಯಶಸ್ವಿಯಾಗಿದ್ದಾರೆ. ಇದಷ್ಟೇ ಅಲ್ಲದೆ, ಸಮೀಪದ ಮತ್ತೊಂದು ಮನೆಯ ಅಂಗಳದಲ್ಲಿದ್ದ ಬೈಕ್ ಒಂದರ ಲಾಕ್ ಮುರಿದು ಕಳವು ಮಾಡಲು ಯತ್ನಿಸಿದ್ದು, ಅದು ಸಾಧ್ಯವಾಗದೆ ಸ್ಥಳದಿಂದ ಕಾಲ್ಕಿತ್ತಿದ್ದಾರೆ.

ಅಂಗಳದಲ್ಲಿ ನಿಲ್ಲಿಸಿದ್ದ KA-19-EY-6282ನೇ ನೋಂದಣಿಯ ದ್ವಿಚಕ್ರ ವಾಹನವು (ಅಂದಾಜು ಮೌಲ್ಯ 30,000/- ರೂ), ಮರುದಿನ ದಿನಾಂಕ: 26.07.2026 ರಂದು ಬೆಳಿಗ್ಗೆ ನೋಡಿದಾಗ ಕಾಣೆಯಾಗಿದ್ದು, ಈ ಬಗ್ಗೆ ಸುತ್ತಮುತ್ತಲಿನ ಪರಿಸರದಲ್ಲಿ ವಿಚಾರಿಸಿದರೂ ಪತ್ತೆಯಾಗದಿದ್ದು, ಈ ಹಿನ್ನೆಲೆಯಲ್ಲಿ ಸದ್ರಿಯವರು ನೀಡಿದ ದೂರಿನ ಮೇರೆಗೆ ವಿಟ್ಲ ಪೊಲೀಸ್ ಠಾಣೆಯಲ್ಲಿ ಅ.ಕ್ರ: 162/2026, ಕಲಂ:303(2) BNS 2023 ರಂತೆ ಪ್ರಕರಣ ದಾಖಲಾಗಿರುತ್ತದೆ. ಸದ್ರಿ ಪ್ರಕರಣಕ್ಕೆ ಸಂಬಂಧಿಸಿದ ದ್ವಿಚಕ್ರ ವಾಹನ ಬಿ.ಸಿ ರೋಡ್ ಬಳಿ ಪತ್ತೆಯಾಗಿದ್ದು, ತನಿಖೆ ಮುಂದುವರಿದಿರುತ್ತದೆ.

ಸ್ಥಳಕ್ಕೆ ಬೆರಳಚ್ಚು ತಜ್ಞರು, ಶ್ವಾನದಳ ಭೇಟಿ: ಪೊಲೀಸ್ ತನಿಖೆ ಚುರುಕು
ಘಟನೆಯ ಮಾಹಿತಿ ತಿಳಿಯುತ್ತಿದ್ದಂತೆಯೇ ವಿಟ್ಲ ಪೊಲೀಸ್ ಠಾಣಾ ಸಿಬ್ಬಂದಿ, ಬಂಟ್ವಾಳ ಡಿವೈಎಸ್ಪಿ ಹಾಗೂ ಉನ್ನತಾಧಿಕಾರಿಗಳು ಸ್ಥಳಕ್ಕೆ ಭೇಟಿ ನೀಡಿ ಪರಿಶೀಲನೆ ನಡೆಸಿದ್ದಾರೆ. ಘಟನಾ ಸ್ಥಳಕ್ಕೆ ಶ್ವಾನದಳ ಹಾಗೂ ಬೆರಳಚ್ಚು ತಜ್ಞರ ತಂಡ ಆಗಮಿಸಿ ಪ್ರಮುಖ ಸಾಕ್ಷ್ಯಾಧಾರಗಳನ್ನು ಸಂಗ್ರಹಿಸಿದೆ. ವಿಟ್ಲ ಠಾಣೆಯಲ್ಲಿ ಪ್ರಕರಣ ದಾಖಲಾಗಿದ್ದು, ಪೊಲೀಸರು ತನಿಖೆಯನ್ನು ಚುರುಕುಗೊಳಿಸಿದ್ದಾರೆ.
ಸರಣಿ ಕಳ್ಳತನಕ್ಕೆ ಗ್ರಾಮಸ್ಥರ ಆಕ್ರೋಶ: ರಾತ್ರಿ ಗಸ್ತಿಗೆ ಆಗ್ರಹ
ಇಡ್ಕಿದು ಗ್ರಾಮದಲ್ಲಿ ಕಳೆದ ಕೆಲವು ಸಮಯದಿಂದ ಸರಣಿ ಕಳ್ಳತನ ಪ್ರಕರಣಗಳು ಮರುಕಳಿಸುತ್ತಿದ್ದರೂ, ಕಳ್ಳರನ್ನು ಬಂಧಿಸುವಲ್ಲಿ ಪೊಲೀಸರು ವಿಫಲರಾಗಿದ್ದಾರೆ ಎಂದು ಸ್ಥಳೀಯರು ತೀವ್ರ ಆಕ್ರೋಶ ವ್ಯಕ್ತಪಡಿಸಿದ್ದಾರೆ. ಹಿರಿಯ ನಾಗರಿಕರ ಮೇಲೆಯೇ ಹಲ್ಲೆ ನಡೆಸಿ ದರೋಡೆ ಮಾಡಿರುವುದು ಗ್ರಾಮಸ್ಥರನ್ನು ಬೆಚ್ಚಿಬೀಳಿಸಿದೆ. ತಕ್ಷಣವೇ ಈ ಭಾಗದಲ್ಲಿ ರಾತ್ರಿ ವೇಳೆ ಪೊಲೀಸ್ ಗಸ್ತು ಹೆಚ್ಚಿಸಬೇಕು ಮತ್ತು ಕಳ್ಳರನ್ನು ಬಂಧಿಸಿ ಕಠಿಣ ಕ್ರಮ ಕೈಗೊಳ್ಳಬೇಕು ಎಂದು ಸಾರ್ವಜನಿಕರು ಒತ್ತಾಯಿಸಿದ್ದಾರೆ.
Bantawala
ಬಸ್ನಲ್ಲಿ ಅಸಭ್ಯ ವರ್ತನೆ: ವಿಕೃತಕಾಮಿ ವೃದ್ಧ ಅರ್ಚಕನ ವಿರುದ್ಧ ಬಂಟ್ವಾಳ ಠಾಣೆಯಲ್ಲಿ ಕೇಸ್ ದಾಖಲು!
ಬಂಟ್ವಾಳ: ಸಾರ್ವಜನಿಕ ಸಾರಿಗೆಯಲ್ಲಿ ಮಹಿಳೆಯರ ಎದುರು ಖಾಸಗಿ ಅಂಗ ಪ್ರದರ್ಶಿಸಿ ಅಸಭ್ಯವಾಗಿ ವರ್ತಿಸಿದ ಆರೋಪದ ಮೇಲೆ ವೃದ್ಧನೊಬ್ಬನ ವಿರುದ್ಧ ಬಂಟ್ವಾಳ ನಗರ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.
ಘಟನೆಯ ವಿವರ:
ಜುಲೈ 30ರಂದು ಮಂಗಳೂರಿನ ಸ್ಟೇಟ್ ಬ್ಯಾಂಕ್ನಿಂದ ಉಪ್ಪಿನಂಗಡಿಗೆ ಹೊರಟಿದ್ದ ಖಾಸಗಿ ಬಸ್ನಲ್ಲಿ ಈ ಘಟನೆ ನಡೆದಿದೆ. ಮಧ್ಯಾಹ್ನ 2.10ರ ಸುಮಾರಿಗೆ ಬಿ.ಸಿ. ರೋಡ್ ಬಸ್ ನಿಲ್ದಾಣದಲ್ಲಿ ಬಸ್ ಏರಿದ್ದ ಸುಮಾರು 60–70 ವರ್ಷ ಪ್ರಾಯದ ವ್ಯಕ್ತಿಯೊಬ್ಬ, ಚಾಲಕನ ಎಡಭಾಗದ ಅಡ್ಡ ಸೀಟಿನಲ್ಲಿ ಕುಳಿತುಕೊಂಡಿದ್ದ. ಪ್ರಯಾಣದ ವೇಳೆ ಎದುರಿನ ಸೀಟಿನಲ್ಲಿದ್ದ ಮಹಿಳೆಯರಿಗೆ ಕಾಣುವಂತೆ ಅಸಭ್ಯವಾಗಿ ಗುಪ್ತಾಂಗ ಪ್ರದರ್ಶಿಸಿ ವಿಕೃತಿ ಮೆರೆದಿದ್ದಾನೆ.
ಮಹಿಳೆಯ ಧೈರ್ಯ, ವೈರಲ್ ವೀಡಿಯೋ:
ವೃದ್ಧನ ನೀಚ ಕೃತ್ಯವನ್ನು ಕಂಡು ಆಕ್ರೋಶಗೊಂಡ ಬಸ್ನಲ್ಲಿದ್ದ ಮಹಿಳೆಯೊಬ್ಬರು ಧೈರ್ಯದಿಂದ ತಮ್ಮ ಮೊಬೈಲ್ನಲ್ಲಿ ಆತನ ವಿಕೃತಿಯನ್ನು ವೀಡಿಯೋ ರೆಕಾರ್ಡ್ ಮಾಡಿದ್ದಾರೆ. ಇದನ್ನು ಗಮನಿಸಿದ ವೃದ್ಧ, ಮೆಲ್ಕಾರ್ ಜಂಕ್ಷನ್ ತಲುಪುತ್ತಿದ್ದಂತೆ ಗಾಬರಿಯಿಂದ ಬಸ್ನಿಂದ ಇಳಿದು ಪರಾರಿಯಾಗಿದ್ದ. ಬಳಿಕ ಈ ವಿಷಯ ಬಸ್ ಚಾಲಕನ ಗಮನಕ್ಕೂ ಬಂದಿತ್ತು. ವೀಡಿಯೋ ಸಾಮಾಜಿಕ ಜಾಲತಾಣಗಳಲ್ಲಿ ವೈರಲ್ ಆಗುತ್ತಿದ್ದಂತೆ ಸಾರ್ವಜನಿಕರು ಆರೋಪಿಯ ಗುರುತು ಪತ್ತೆ ಹಚ್ಚಿದ್ದು, ಆತ ಬಂಟ್ವಾಳ ತಾಲೂಕಿನ ಪೆರಾಜೆ ಗ್ರಾಮದ ಸಾದಿಕುಕ್ಕು ಅಂಗನವಾಡಿ ಬಳಿಯ ನಿವಾಸಿ ಹಾಗೂ ವೃತ್ತಿಯಲ್ಲಿ ಅರ್ಚಕ ಎಂದು ತಿಳಿದುಬಂದಿದೆ.
ಬಂಟ್ವಾಳ ಠಾಣೆಯಲ್ಲಿ ದೂರು:
ಸಾಮಾಜಿಕ ಜಾಲತಾಣಗಳಲ್ಲಿ ವ್ಯಾಪಕ ಆಕ್ರೋಶ ವ್ಯಕ್ತವಾದ ಬೆನ್ನಲ್ಲೇ ಇದೀಗ ಬಂಟ್ವಾಳ ನಗರ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ. ಅ.ಕ್ರ. 107/2026ರಂತೆ ಭಾರತೀಯ ನ್ಯಾಯ ಸಂಹಿತೆ (BNS)-2023ರ ಕಲಂ 75(2)ರ ಅಡಿಯಲ್ಲಿ ಎಫ್ಐಆರ್ ದಾಖಲಿಸಿಕೊಂಡಿರುವ ಪೊಲೀಸರು ಮುಂದಿನ ತನಿಖೆ ಕೈಗೊಂಡಿದ್ದಾರೆ.
arrest
7 ವರ್ಷಗಳಿಂದ ತಲೆಮರೆಸಿಕೊಂಡಿದ್ದ ಖ್ಯಾತ ವಾರಂಟ್ ಆರೋಪಿ ಉಮ್ಮರ್ ನವಾಫ್ ಬಂಧನ: ಮಂಗಳೂರು ಪೊಲೀಸರ ಕಾರ್ಯಾಚರಣೆ
ಮಂಗಳೂರು: ಕಳೆದ 7 ವರ್ಷಗಳಿಂದ ನ್ಯಾಯಾಲಯದ ವಿಚಾರಣೆಗೆ ಹಾಜರಾಗದೆ ತಲೆಮರೆಸಿಕೊಂಡಿದ್ದ, 30ಕ್ಕೂ ಹೆಚ್ಚು ವಾರಂಟ್ ಹಾಗೂ 13ಕ್ಕೂ ಅಧಿಕ ಗಂಭೀರ ಕ್ರಿಮಿನಲ್ ಪ್ರಕರಣಗಳಲ್ಲಿ ಭಾಗಿಯಾಗಿದ್ದ ವಾರಂಟ್ ಆರೋಪಿಯನ್ನು ಮಂಗಳೂರು ದಕ್ಷಿಣ ಉಪವಿಭಾಗದ ವಿಶೇಷ ಕರ್ತವ್ಯ ಪಡೆ ಪೊಲೀಸರು ಸೆರೆಹಿಡಿಯುವಲ್ಲಿ ಯಶಸ್ವಿಯಾಗಿದ್ದಾರೆ.
ಉಳ್ಳಾಲ ತಾಲೂಕಿನ ಮಾರ್ಗತಲೆ ಮೂಲದ, ಪ್ರಸ್ತುತ ಕೇರಳ ರಾಜ್ಯದ ಕಾಸರಗೋಡು ಜಿಲ್ಲೆಯ ಮಂಜೇಶ್ವರ ತಾಲೂಕಿನ ಕುಂಡಪ್ಪು ನಿವಾಸಿ ಉಮ್ಮರ್ ನವಾಫ್ (33) ಬಂಧಿತ ಆರೋಪಿ.
30ಕ್ಕೂ ಹೆಚ್ಚು ವಾರಂಟ್, ಪ್ರೋಕ್ಲಮೇಷನ್ ಜಾರಿ
ಬಂಧಿತ ಉಮ್ಮರ್ ನವಾಫ್ ವಿರುದ್ಧ ಕೊಲೆ ಯತ್ನ, ಅಪಹರಣ, ದರೋಡೆ, ಹಫ್ತಾ ವಸೂಲಿ, ಸಾರ್ವಜನಿಕ ಆಸ್ತಿಗೆ ಹಾನಿ ಹಾಗೂ ಸರ್ಕಾರಿ ನೌಕರರ ಕರ್ತವ್ಯಕ್ಕೆ ಅಡ್ಡಿಪಡಿಸಿದ ವಿಚಾರಗಳಿಗೆ ಸಂಬಂಧಿಸಿದಂತೆ ಉಳ್ಳಾಲ, ಪಣಂಬೂರು ಹಾಗೂ ಬರ್ಕೆ ಪೊಲೀಸ್ ಠಾಣೆಗಳಲ್ಲಿ 13ಕ್ಕೂ ಹೆಚ್ಚು ಪ್ರಕರಣಗಳು ದಾಖಲಾಗಿದ್ದವು.
ಪ್ರಕರಣಗಳ ವಿಚಾರಣೆಗೆ ನ್ಯಾಯಾಲಯಕ್ಕೆ ಹಾಜರಾಗದೆ ಕಳೆದ 7 ವರ್ಷಗಳಿಂದ ತಲೆಮರೆಸಿಕೊಂಡಿದ್ದ ಈತನ ವಿರುದ್ಧ ಘನ ನ್ಯಾಯಾಲಯವು 30ಕ್ಕೂ ಹೆಚ್ಚು ವಾರಂಟ್ಗಳನ್ನು ಹೊರಡಿಸಿತ್ತು. ಅಲ್ಲದೆ, ಉಳ್ಳಾಲ ಠಾಣೆಯ ಮೂರು ಪ್ರಕರಣಗಳಲ್ಲಿ ಈತನ ವಿರುದ್ಧ ನ್ಯಾಯಾಲಯದ ಆದೇಶದಂತೆ ‘ಪ್ರೋಕ್ಲಮೇಷನ್’ ಜಾರಿಗೊಳಿಸಲಾಗಿತ್ತು ಹಾಗೂ ಒಂದು ಪ್ರಕರಣದಲ್ಲಿ ಎಲ್.ಪಿ.ಸಿ (LPC) ಮಾಡಲಾಗಿತ್ತು.
ಆರೋಪಿ ಉಮ್ಮರ್ ನವಾಫ್ ಮೇಲಿರುವ ಪ್ರಕರಣಗಳ ವಿವರಗಳು:
- ಉಳ್ಳಾಲ ಪೊಲೀಸ್ ಠಾಣೆ (ಮೊ.ನಂ 222/17):
- ಕಲಂಗಳು: 143, 147, 148 (ಕಾನೂನುಬಾಹಿರ ಗುಂಪುಗಾರಿಕೆ, ಗಲಭೆ), 341 (ಅಕ್ರಮ ತಡೆ), 504, 506 (ಶಾಂತಿ ಭಂಗ, ಜೀವ ಬೆದರಿಕೆ), 324 (ಹಾಕಾಹಾಕಿ/ಹೊಡೆದಾಟ) ಮತ್ತು 307 (ಕೊಲೆ ಯತ್ನ).
- ಉಳ್ಳಾಲ ಪೊಲೀಸ್ ಠಾಣೆ (ಮೊ.ನಂ 23/17):
- ಕಲಂಗಳು: 427 IPC (ಆಸ್ತಿಗೆ ಹಾನಿ) ಮತ್ತು KPDLP ಕಾಯ್ದೆಯ 2(a), 2(b) (ಸಾರ್ವಜನಿಕ ಆಸ್ತಿ ನಷ್ಟ ತಡೆ ಕಾಯ್ದೆ).
- ಉಳ್ಳಾಲ ಪೊಲೀಸ್ ಠಾಣೆ (ಮೊ.ನಂ 247/14):
- ಕಲಂಗಳು: 448 (ಅಕ್ರಮ ಪ್ರವೇಶ) ಮತ್ತು 395 (ದರೋಡೆ).
- ಉಳ್ಳಾಲ ಪೊಲೀಸ್ ಠಾಣೆ (ಮೊ.ನಂ 289/17):
- ಕಲಂಗಳು: 504, 506, 364(a) (ಅಪಹರಣ ಮತ್ತು ಕಪ್ಪಕ್ಕೆ ಬೇಡಿಕೆ), 387 (ಹಫ್ತಾ ವಸೂಲಿಗೆ ಬೆದರಿಕೆ), 395 (ದರೋಡೆ), 149 IPC.
- ಉಳ್ಳಾಲ ಪೊಲೀಸ್ ಠಾಣೆ (ಮೊ.ನಂ 276/15) – (ನ್ಯಾಯಾಲಯದಿಂದ LPC ಮಾಡಲಾದ ಪ್ರಕರಣ):
- ಕಲಂಗಳು: 143, 144, 148, 448, 451, 452 (ಅಕ್ರಮ ಮನೆ ಪ್ರವೇಶ), 326, 307 (ಕೊಲೆ ಯತ್ನ), 397 (ಮಾರಕ ಆಯುಧದೊಂದಿಗೆ ದರೋಡೆ/ಕಳವು), 506, 149 IPC.
- ಉಳ್ಳಾಲ ಪೊಲೀಸ್ ಠಾಣೆ (ಮೊ.ನಂ 206/2012) – (ಪ್ರೋಕ್ಲಮೇಷನ್ ಜಾರಿಯಾದ ಪ್ರಕರಣ):
- ಕಲಂಗಳು: 143, 147, 148, 323, 427, 504, 506, 149 IPC.
- ಉಳ್ಳಾಲ ಪೊಲೀಸ್ ಠಾಣೆ (ಮೊ.ನಂ 27/2017) – (ಪ್ರೋಕ್ಲಮೇಷನ್ ಜಾರಿಯಾದ ಪ್ರಕರಣ):
- ಕಲಂಗಳು: 387 IPC (ಭಯ ಹುಟ್ಟಿಸಿ ಹಣ/ಆಸ್ತಿ ವಸೂಲಿ ಮಾಡುವುದು).
- ಉಳ್ಳಾಲ ಪೊಲೀಸ್ ಠಾಣೆ (ಮೊ.ನಂ 103/2021):
- ಕಲಂಗಳು: 364 IPC (ಕೊಲೆ ಮಾಡುವ ಉದ್ದೇಶದಿಂದ ಅಪಹರಣ).
- ಉಳ್ಳಾಲ ಪೊಲೀಸ್ ಠಾಣೆ (ಮೊ.ನಂ 71/23):
- ಕಲಂಗಳು: 504, 506, 307 (ಕೊಲೆ ಯತ್ನ), 324, 427 IPC.
- ಉಳ್ಳಾಲ ಪೊಲೀಸ್ ಠಾಣೆ (ಮೊ.ನಂ 183/17) – (ಪ್ರೋಕ್ಲಮೇಷನ್ ಜಾರಿಯಾದ ಪ್ರಕರಣ):
- ಕಲಂಗಳು: 143, 147, 148, 448, 504, 324, 323, 506, 427 R/w 149 IPC.
- ಉಳ್ಳಾಲ ಪೊಲೀಸ್ ಠಾಣೆ (ಮೊ.ನಂ 159/23):
- ಕಲಂಗಳು: 341, 394 (ಕಳವು ಮಾಡುವಾಗ ಗಾಯಗೊಳಿಸುವುದು), 307 (ಕೊಲೆ ಯತ್ನ) R/w 34 IPC.
- ಪಣಂಬೂರು ಪೊಲೀಸ್ ಠಾಣೆ (PNB ಮೊ.ನಂ 158/2012):
- ಕಲಂಗಳು: 379 IPC (ಕಳವು).
- ಬರ್ಕೆ ಪೊಲೀಸ್ ಠಾಣೆ (ಮೊ.ನಂ 04/15):
- ಕಲಂಗಳು: 353 (ಸರ್ಕಾರಿ ನೌಕರರ ಕರ್ತವ್ಯಕ್ಕೆ ಅಡ್ಡಿ), 427 R/w 34 IPC.
ಪೊಲೀಸರ ಸಕಾಲಿಕ ಕಾರ್ಯಾಚರಣೆ
ಮಂಗಳೂರು ದಕ್ಷಿಣ ಉಪವಿಭಾಗದ ಸಹಾಯಕ ಪೊಲೀಸ್ ಆಯುಕ್ತರ (ACP) ಮಾರ್ಗದರ್ಶನದಲ್ಲಿ, ದಕ್ಷಿಣ ಉಪವಿಭಾಗ ಕಚೇರಿಯ ವಿಶೇಷ ಕರ್ತವ್ಯ ಪಡೆಯ ಅಧಿಕಾರಿಗಳು ಮತ್ತು ಸಿಬ್ಬಂದಿಗಳು ದಿನಾಂಕ 02-08-2026 ರಂದು ಸುಳಿವು ಆಧರಿಸಿ ಆರೋಪಿಯನ್ನು ಪತ್ತೆಹಚ್ಚಿ ವಶಕ್ಕೆ ಪಡೆದುಕೊಂಡಿದ್ದಾರೆ. ಬಂಧಿತ ಆರೋಪಿಯನ್ನು ನ್ಯಾಯಾಲಯಕ್ಕೆ ಹಾಜರುಪಡಿಸಲಾಗುವುದು ಎಂದು ನಗರ ಪೊಲೀಸ್ ಕಮಿಷನರ್ ಕಚೇರಿಯ ಪತ್ರಿಕಾ ಪ್ರಕಟಣೆ ತಿಳಿಸಿದೆ.

crime
ಮಣಿಪಾಲ: ಬಾರ್, ಪಬ್ಗಳ ಮೇಲೆ ಪೊಲೀಸರ ಮಿಂಚಿನ ದಾಳಿ; ಮದ್ಯ ಸೇವಿಸುತ್ತಿದ್ದ 64 ಯುವಕರು, 23 ಯುವತಿಯರು
ಮಣಿಪಾಲ: 21 ವರ್ಷದೊಳಗಿನವರಿಗೆ ಅಕ್ರಮವಾಗಿ ಮದ್ಯ ಹಾಗೂ ಹುಕ್ಕಾ ಪೂರೈಸುತ್ತಿದ್ದ ಆರೋಪದ ಹಿನ್ನೆಲೆಯಲ್ಲಿ ಮಣಿಪಾಲ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿರುವ ಪ್ರಮುಖ ಬಾರ್ ಮತ್ತು ಪಬ್ಗಳ ಮೇಲೆ ಪೊಲೀಸರು ದಿಢೀರ್ ದಾಳಿ ನಡೆಸಿದ್ದಾರೆ. ಕಾರ್ಯಾಚರಣೆಯ ವೇಳೆ ಮದ್ಯ ಸೇವನೆಯಲ್ಲಿ ತೊಡಗಿದ್ದ 64 ಯುವಕರು, 23 ಯುವತಿಯರು ಹಾಗೂ ಒಬ್ಬ ಅಪ್ರಾಪ್ತ ಬಾಲಕ ಸೇರಿದಂತೆ ಒಟ್ಟು 87 ಮಂದಿ ಸಿಕ್ಕಿಬಿದ್ದಿದ್ದಾರೆ.
ಉಡುಪಿ ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ (SP) ಹರಿರಾಮ್ ಶಂಕರ್ ಅವರ ನಿರ್ದೇಶನದಂತೆ, ಮಣಿಪಾಲ ಪೊಲೀಸ್ ಇನ್ಸ್ಪೆಕ್ಟರ್ ಮಹೇಶ್ ಪ್ರಸಾದ್ ಅವರ ನೇತೃತ್ವದಲ್ಲಿ ಈ ವಿಶೇಷ ತಪಾಸಣಾ ಕಾರ್ಯಾಚರಣೆ ನಡೆಯಿತು. ಕಾರ್ಯಾಚರಣೆಗಾಗಿ 50ಕ್ಕೂ ಹೆಚ್ಚು ಪೊಲೀಸ್ ಸಿಬ್ಬಂದಿಯನ್ನೊಳಗೊಂಡ 6 ಪ್ರತ್ಯೇಕ ತಂಡಗಳನ್ನು ರಚಿಸಲಾಗಿತ್ತು.
ದಾಳಿಗೊಳಗಾದ ಬಾರ್ ಮತ್ತು ಪಬ್ಗಳು:
ಪೊಲೀಸರು ಮಣಿಪಾಲ ವ್ಯಾಪ್ತಿಯ ಒಟ್ಟು ಆರು ಪ್ರಮುಖ ಸ್ಥಳಗಳಲ್ಲಿ ಪರಿಶೀಲನೆ ನಡೆಸಿದರು:
- ಎಕ್ಸ್ಟಸಿ 7ನೇ ಹೆವೆನ್ ಪಬ್, ಮಣಿಪಾಲ್
- ಸಾಯಿ ಸಾಗರ್ ಬಾರ್ ಮತ್ತು ರೆಸ್ಟೋರೆಂಟ್, ಈಶ್ವರ್ ನಗರ
- ಡೌನ್ ದಿ ರೋಡ್ ಬಾರ್ ಮತ್ತು ರೆಸ್ಟೋರೆಂಟ್, ಮಣಿಪಾಲ್
- ಡೆಕ್ಸ್ಟರ್ ಬಾರ್ ಮತ್ತು ರೆಸ್ಟೋರೆಂಟ್
- ಡೀ ಟೀ ಬಾರ್ ಮತ್ತು ರೆಸ್ಟೋರೆಂಟ್, ಈಶ್ವರ್ ನಗರ
- ಜನನಿ ಬಾರ್ ಮತ್ತು ರೆಸ್ಟೋರೆಂಟ್ (ಎಡ್ಜ್ ಬಾರ್ ಮತ್ತು ರೆಸ್ಟೋರೆಂಟ್), ಈಶ್ವರ್ ನಗರ
ಕಾನೂನು ಉಲ್ಲಂಘನೆ ಮತ್ತು ಪ್ರಕರಣ ದಾಖಲು:
ಕರ್ನಾಟಕ ಅಬಕಾರಿ ಪರವಾನಗಿ ನಿಯಮಗಳ 10(1)(ಇ), ಕರ್ನಾಟಕ ಅಬಕಾರಿ ಕಾಯ್ದೆಯ ಸೆಕ್ಷನ್ 36(1)(ಬಿ) ಹಾಗೂ ತಂಬಾಕು ಉತ್ಪನ್ನಗಳ ನಿಯಂತ್ರಣ (COTPA) ಕಾಯ್ದೆಯನ್ನು ಉಲ್ಲಂಘಿಸಿ, 21 ವರ್ಷಕ್ಕಿಂತ ಕಡಿಮೆ ವಯಸ್ಸಿನ ಯುವಕ-ಯುವತಿಯರಿಗೆ ಮದ್ಯ ಹಾಗೂ ಹುಕ್ಕಾ ಮಾರಾಟ ಮಾಡುತ್ತಿದ್ದದ್ದು ತಪಾಸಣೆ ವೇಳೆ ದೃಢಪಟ್ಟಿದೆ.
ಈ ಹಿನ್ನೆಲೆಯಲ್ಲಿ, ನಿಯಮ ಉಲ್ಲಂಘಿಸಿದ ಆಯಾ ಪಬ್ ಮತ್ತು ಬಾರ್ಗಳ ಮಾಲೀಕರು ಹಾಗೂ ವ್ಯವಸ್ಥಾಪಕರ (ಮ್ಯಾನೇಜರ್) ವಿರುದ್ಧ ಮಣಿಪಾಲ ಪೊಲೀಸ್ ಠಾಣೆಯಲ್ಲಿ 6 ಪ್ರತ್ಯೇಕ ಕ್ರಿಮಿನಲ್ ಪ್ರಕರಣಗಳನ್ನು ದಾಖಲಿಸಲಾಗಿದೆ.
ಪೊಲೀಸರ ಎಚ್ಚರಿಕೆ:
“21 ವರ್ಷಕ್ಕಿಂತ ಕಡಿಮೆ ವಯಸ್ಸಿನ ವಿದ್ಯಾರ್ಥಿಗಳಿಗೆ ಪ್ರವೇಶ ನೀಡುವ, ಮದ್ಯ/ಹುಕ್ಕಾ ಪೂರೈಸುವ ಅಥವಾ ಅಬಕಾರಿ ಕಾಯ್ದೆ ಹಾಗೂ COTPA ಕಾಯ್ದೆಗಳನ್ನು ಉಲ್ಲಂಘಿಸುವ ಬಾರ್ ಮತ್ತು ರೆಸ್ಟೋರೆಂಟ್ಗಳ ವಿರುದ್ಧ ಮುಂಬರುವ ದಿನಗಳಲ್ಲೂ ಇಂತಹುದೇ ಕಠಿಣ ಕಾನೂನು ಕ್ರಮಗಳು ಮುಂದುವರಿಯಲಿವೆ.” ಎಂದು ಪೊಲೀಸರು ಸ್ಪಷ್ಟ ಎಚ್ಚರಿಕೆ ನೀಡಿದ್ದಾರೆ.
-
Bantawala3 weeks agoಬಂಟ್ವಾಳದಲ್ಲಿ ಭೀಕರ ಹತ್ಯಾಕಾಂಡ: ಬಸ್ನಲ್ಲಿ ಕುಳಿತಿದ್ದ ಯುವತಿಯನ್ನು ಸಾರ್ವಜನಿಕರೆದುರೇ ಕೊಚ್ಚಿ ಕೊಂದ ತಲೆಹರಟೆ ಪ್ರೇಮಿ!
-
crime6 months agoಅತ್ಯಾಚಾರ ಯತ್ನಕ್ಕೆ ತಡೆದ ಸೊಸೆಯ ಮುಖಕ್ಕೆ ಕಚ್ಚಿ ಕೊಲೆಗೆ ಯತ್ನಿಸಿದ ಮಾವ..ತಂದೆಯ ರಾಕ್ಷಸೀ ಕೃತ್ಯಕ್ಕೆ ಬೆಂಬಲಿಸಿದ ಗಂಡ..ಸುಳ್ಯ ಠಾಣಾ ವ್ಯಾಪ್ತಿಯಲ್ಲಿ ಅದೃಷ್ಟವಶಾತ್ ಬಚಾವಾದ ಸೊಸೆ..
-
crime4 months agoಧಾರ್ಮಿಕ ನಂಬಿಕೆಗೆ ಅವಮಾನ: ಕೊಡಗಿನ ಎಮ್ಮೆಮಾಡಿನಲ್ಲಿ ದೈವದ ವೇಷದಂತೆ ಧರಿಸಿ ಮದುಮಗನ ಅತಿರೇಕದ ವರ್ತನೆ!
-
Bantawala4 months agoವಿಟ್ಲದಲ್ಲಿ ನಡೆಯಿತೊಂದು ದೈವ ಕಾರಣಿಕ; ಪೊಲೀಸರ ಕಣ್ಣಿಗೆ ಮಣ್ಣೆರಚಿದರೂ ದೈವದ ದೃಷ್ಟಿಗೆ ತತ್ತರಿಸಿದ ದನಕಳ್ಳ..
-
accident2 weeks agoBreaking: ಬಂಟ್ವಾಳದಲ್ಲಿ ಶಾಲಾ ಬಸ್ ಮೇಲೆ ಉರುಳಿದ ಬೃಹತ್ ಮರ; ಕಲ್ಲಡ್ಕ ಶ್ರೀರಾಮ ಶಾಲೆಯ ಓರ್ವ ವಿದ್ಯಾರ್ಥಿ ಸಾವು, ಕೆಲವರು ಗಂಭೀರ, ಹಲವರಿಗೆ ಗಾಯ!
-
Bantawala7 months agoನಾಗಬನ, ರಕ್ತೇಶ್ವರಿ ತಾಣ, ದೈವದೇವರ ಸಾನಿಧ್ಯ ದ್ವಂಸ ಗೊಳಿಸಿದ ಧರ್ಮದ್ರೋಹಿ ಕೃತ್ಯದ ವಿರುದ್ಧ ಭಕ್ತರ ಆಕ್ರೋಶ ; ನಾಶವಾದ ಸಾನಿಧ್ಯದಲ್ಲಿಯೇ ಸ್ವಾಮೀಜಿಯವರ ಮಾರ್ಗದರ್ಶನದಲ್ಲಿ ಕುಟುಂಬಸ್ತರು, ಸಾರ್ವಜನಿಕರ ಸಾಮೂಹಿಕ ಪ್ರಾರ್ಥನೆ
-
accident3 months agoವಿಟ್ಲ ಆಕಾಶದಲ್ಲಿ ಹಾರಾಡಿದ ವಿಮಾನ: ತಾಂತ್ರಿಕ ದೋಷವಲ್ಲ, ಹವಾಮಾನ ವೈಪರೀತ್ಯದ ಕಾರಣ ! ಸಾರ್ವಜನಿಕರು ಆತಂಕ ಪಡುವ ಅಗತ್ಯವಿಲ್ಲ
-
Bantawala4 weeks agoಮಂಚಿ ಮೋಂತಿಮಾರು: ಬಸ್ಸಿಗಾಗಿ ಕಾಯುತ್ತಿದ್ದ ಅಪ್ರಾಪ್ತ ವಿದ್ಯಾರ್ಥಿನಿ ಮೇಲೆ ಕತ್ತಿಯಿಂದ ಮಾರಣಾಂತಿಕ ದಾಳಿ; ಯುವತಿ ಗಂಭೀರ
