Connect with us

crime

ಅನಾಮಧೇಯ ಪತ್ರ ನೀಡಿದ ಮಾಹಿತಿ ಸುಳಿವು; ಗೃಹ ಬಂಧನದಲ್ಲಿದ್ದ Mcom ಪದವೀಧರೆ ಮಾನಸಿಕ ಅಸ್ವಸ್ಥ ಯುವತಿಯ ರಕ್ಷಣೆ.

Published

on

ಮಂಗಳೂರು: ಬಡ ಕುಟುಂಬದ ಎಂ.ಕಾಂ ಪದವೀಧರೆ, ಗೃಹ ಬಂಧನದಲ್ಲಿ ಮಾನಸಿಕ ಅಸ್ವಸ್ಥತೆಯಿಂದ ಬಳಲುತ್ತಿದ್ದ ಯುವತಿ(25)ಯನ್ನು ಸಮಾಜ ಸೇವಕ ಅಂಬಲಪಾಡಿ ವಿಶು ಶೆಟ್ಟಿ ಸಹಕಾರದಲ್ಲಿ ದೈಗೋಳಿ ಶ್ರೀ ಸಾಯಿ ಸೇವಾಶ್ರಮಕ್ಕೆ ದಾಖಲಿಸಲಾಗಿದೆ.
ಕಾರ್ಕಳ ಮೂಲದ ಅರ್ಪಿತಾ ಭಟ್(25, ಹೆಸರು ಬದಲಿಸಿದೆ) ಎಂಬಾಕೆ ಗೃಹಬಂಧನದಲ್ಲಿ ಇರುವ ಬಗ್ಗೆ
ಮಹಿಳಾ ಪರ ಇಲಾಖೆಗೆ ಅನಾಮಧೇಯ ಪತ್ರವೊಂದು ಬಂದಿತ್ತು. ಕಾರ್ಕಳ ತಾಲೂಕು ಶಿಶು ಅಭಿವೃದ್ಧಿ ಇಲಾಖೆಯ ಯೋಜನಾಧಿಕಾರಿ ಶ್ರೀಮತಿ ಶ್ರೀಲತಾ ಅವರು ಈ ಬಗ್ಗೆ ಸ್ಥಳಕ್ಕಾಗಮಿಸಿ ಪರಿಶೀಲನೆ ನಡೆಸಿದರು. ವಿದ್ಯಾವಂತ ಯುವತಿಯ ಪರಿಸ್ಥಿತಿ ಹಾಗೂ ಪೋಷಕರ ಅಸಹಾಯಕತೆ ಬಗ್ಗೆ ವಿವರವಾದ ಮಾಹಿತಿ ಪಡೆದ ಅಧಿಕಾರಿಗಳು ಸಮಾಜ ಸೇವಕ ಅಂಬಲಪಾಡಿ ವಿಶು ಶೆಟ್ಟಿಯವರಿಗೆ ಮಾಹಿತಿ ನೀಡಿದ್ದರು. ತಕ್ಷಣವೇ ಸ್ಪಂದಿಸಿದ ಸಮಾಜ ಸೇವಕ ವಿಶು ಶೆಟ್ಟಿ ಅಂಬಲಪಾಡಿಯವರು
ಸಾವಿರಾರು ಅತಂತ್ರ ಬಡ ಜೀವಗಳ ಪಾಲಿಗೆ ನಡೆದಾಡುವ ಭಗವಂತನಂತಿರುವ ದೈಗೋಳಿ ಸಾಯಿ ನಿಕೇತನ ಆಶ್ರಮದ ಡಾ.ಉದಯ ಕುಮಾರ್ ದಂಪತಿಗಳಿಗೆ ಮಾಹಿತಿ ನೀಡಿ ಮಾತುಕತೆ ನಡೆಸಿದರು. ವಿಶು ಶೆಟ್ಟಿಯವರ ಮನವಿಗೆ ಸ್ಪಂದಿಸಿದ ಉದಯಕುಮಾರ್ ದಂಪತಿಗಳು ಕಾರ್ಕಳಕ್ಕೆ ತೆರಳಿ ಯುವತಿಯ ಗೃಹಬಂಧನದಿಂದ ಬಂಧಮುಕ್ತಗೊಳಿಸಿ ಪುನರ್ವಸತಿ ಕೇಂದ್ರಕ್ಕೆ ಕರೆತಂದು ದಾಖಲಿಸಿದ್ದಾರೆ.


ಪುನರ್ವಸತಿ ಕೇಂದ್ರದಲ್ಲಿ ದಾಖಲಾಗಿರುವ ಯುವತಿಗೆ ತಜ್ಞ ವೈದ್ಯರಿಂದ ಚಿಕಿತ್ಸೆ, ಆಪ್ತ ಸಮಾಲೋಚನೆ, ಧ್ಯಾನ, ಯೋಗಗಳ ಮೂಲಕ ಆರೋಗ್ಯವಂತಳನ್ನಾಗಿ ಮಾಡಲಾಗುವುದು. ಸಾಯಿ ನಿಕೇತನ ಸೇವಾಶ್ರಮವು ಕಳೆದ ಹಲವು ವರ್ಷಗಳಿಂದ ಅತಂತ್ರದಲ್ಲಿರುವ ಸಾವಿರಾರು ಬಡ ಜೀವಗಳ ಪಾಲಿಗೆ ಪುನರ್ಜನ್ಮ ನೀಡುವ ಕೇಂದ್ರವಾಗಿದೆ. ಆರೋಗ್ಯವಂತರಾದ ಬಳಿಕ ತಮ್ಮ ಕುಟುಂಬದವರ ಜೊತೆ ಸೇರಿಸುವ ಮೂಲಕ ಉತ್ತಮ ರೀತಿಯಲ್ಲಿ ಮುಂದಿನ ಜೀವನ ನಡೆಸಲು ಶ್ರೀ ಸಾಯಿ ನಿಕೇತನ ಸೇವಾಶ್ರಮವು ಮಾನವ ಧರ್ಮ ಸಾರುತ್ತಿದೆ. ಈ ಸಂದರ್ಭದಲ್ಲಿ ಸಮಾಜ ಸೇವಕ ಅಂಬಲಪಾಡಿ ವಿಶು ಶೆಟ್ಟಿಯವರು ವೈಯಕ್ತಿಕ ನೆಲೆಯಲ್ಲಿ ಹತ್ತು ಸಾವಿರ ಸಹಾಯ ನೀಡುವ ಮೂಲಕ ಮಹತ್ಕಾರ್ಯದಲ್ಲಿ ಕೈಜೋಡಿಸಿದ್ದಾರೆ

Continue Reading
Advertisement
Click to comment

Leave a Reply

Your email address will not be published. Required fields are marked *

Bantawala

ಕಬಕ: ಅಕ್ರಮ ಕೇರಳ ಲಾಟರಿ ಮಾರಾಟ ಜಾಲಕ್ಕೆ ಪೊಲೀಸರ ಲಗ್ಗೆ – ಮಂಗಳೂರು ತಂಡದಿಂದ ಮಿಂಚಿನ ದಾಳಿ

Published

on

ಪುತ್ತೂರು: ಕರ್ನಾಟಕದಲ್ಲಿ ಸಂಪೂರ್ಣವಾಗಿ ನಿಷೇಧಿತವಾಗಿರುವ ಕೇರಳ ರಾಜ್ಯದ ಲಾಟರಿ ಟಿಕೆಟ್‌ಗಳನ್ನು ಅಕ್ರಮವಾಗಿ ಮಾರಾಟ ಮಾಡುತ್ತಿದ್ದ ಜಾಲವನ್ನು ಮಂಗಳೂರು ಪೊಲೀಸರ ವಿಶೇಷ ತಂಡ ಭೇದಿಸಿದೆ. ಪುತ್ತೂರು ನಗರ ಪೊಲೀಸ್ ಠಾಣಾ ವ್ಯಾಪ್ತಿಯ ಕಬಕ ಜಂಕ್ಷನ್‌ನಲ್ಲಿ ಕಾರ್ಯಾಚರಿಸುತ್ತಿದ್ದ ಪಾನ್ ಬೀಡಾ ಅಂಗಡಿಯ ಮೇಲೆ ದಾಳಿ ನಡೆಸಿದ ಪೊಲೀಸರು, ಮಾಲೀಕ ಸೇರಿದಂತೆ ಗ್ರಾಹಕರನ್ನು ವಶಕ್ಕೆ ಪಡೆದಿದ್ದಾರೆ.

ಕಬಕ ಜಂಕ್ಷನ್‌ನಲ್ಲಿರುವ ಪಾನ್ ಬೀಡಾ ಅಂಗಡಿಯೊಂದರಲ್ಲಿ ಯಾವುದೇ ಅಧಿಕೃತ ಪರವಾನಿಗೆ ಇಲ್ಲದೆ, ಗುಪ್ತವಾಗಿ ಕೇರಳ ಲಾಟರಿ ಮಾರಾಟ ಮಾಡಲಾಗುತ್ತಿದೆ ಎಂಬ ಖಚಿತ ಮಾಹಿತಿ ಪೊಲೀಸರಿಗೆ ಲಭ್ಯವಾಗಿತ್ತು. ರಾಜ್ಯದಲ್ಲಿ ಲಾಟರಿ ನಿಷೇಧವಿದ್ದರೂ ಗಡಿ ಭಾಗಗಳಲ್ಲಿ ಈ ದಂಧೆ ಎಗ್ಗಿಲ್ಲದೆ ನಡೆಯುತ್ತಿದೆ ಎಂಬ ದೂರುಗಳು ಕೇಳಿಬಂದ ಹಿನ್ನೆಲೆಯಲ್ಲಿ, ಮಂಗಳೂರಿನಿಂದ ಆಗಮಿಸಿದ ವಿಶೇಷ ತಂಡವು ಕಾರ್ಯಾಚರಣೆ ರೂಪಿಸಿತ್ತು.

ಕಾರ್ಯಾಚರಣೆ ನಡೆದ ರೀತಿ:
ನಿಗಾ ಇರಿಸಿದ ತಂಡ: ಮಂಗಳೂರಿನಿಂದ ಬಂದ ವಿಶೇಷ ತಂಡದ ಪೊಲೀಸರು ಸುಮಾರು ಒಂದು ಗಂಟೆಗೂ ಹೆಚ್ಚು ಕಾಲ ಸಾಮಾನ್ಯ ನಾಗರಿಕರಂತೆ ಪಾನ್ ಬೀಡಾ ಅಂಗಡಿಯ ಮಾಲೀಕನ ಚಲನವಲನಗಳ ಮೇಲೆ ನಿಗಾ ಇಟ್ಟಿದ್ದರು. ಇದೇ ಸಂದರ್ಭದಲ್ಲಿ ಇಬ್ಬರು ಯುವಕರು ಲಾಟರಿ ಖರೀದಿಸಲು ಬಂದಾಗ, ಪೊಲೀಸರು ಹಠಾತ್ ದಾಳಿ ನಡೆಸಿ ಲಾಟರಿ ಟಿಕೆಟ್‌ಗಳ ಸಮೇತ ಮಾಲೀಕ ಮತ್ತು ಗ್ರಾಹಕರನ್ನು ರೆಡ್ ಹ್ಯಾಂಡ್ ಆಗಿ ಹಿಡಿದಿದ್ದಾರೆ. ಬಂಧಿತ ಆರೋಪಿಯನ್ನು ಕಬಕ ವಿದ್ಯಾಪುರ ನಿವಾಸಿ ಜಗದೀಶ ಯಾನೆ ಜಗ್ಗ ಎಂದು ಗುರುತಿಸಲಾಗಿದೆ. ಈತ ತನ್ನ ಅಂಗಡಿಯಲ್ಲಿ ಅಕ್ರಮ ವ್ಯವಹಾರ ನಡೆಸುತ್ತಿದ್ದ ಬಗ್ಗೆ ಸ್ಥಳೀಯರು ಹಿರಿಯ ಅಧಿಕಾರಿಗಳಿಗೆ ನೀಡಿದ ದೂರು ಕಾರ್ಯಾಚರಣೆಗೆ ಪ್ರಮುಖ ಕಾರಣವಾಗಿದೆ.

ಕಾನೂನು ಕ್ರಮ ಮತ್ತು ತನಿಖೆ:
ದಾಳಿಯ ವೇಳೆ ಅಂಗಡಿಯಲ್ಲಿದ್ದ ಅಕ್ರಮ ಕೇರಳ ಲಾಟರಿ ಟಿಕೆಟ್‌ಗಳನ್ನು ಪೊಲೀಸರು ವಶಪಡಿಸಿಕೊಂಡಿದ್ದಾರೆ. ಮಾಹಿತಿ ತಿಳಿದು ಪುತ್ತೂರು ನಗರ ಪೊಲೀಸರು ಸ್ಥಳಕ್ಕೆ ಧಾವಿಸಿದ್ದು, ಆರೋಪಿಗಳ ವಿರುದ್ಧ ಪ್ರಕರಣ ದಾಖಲಿಸಿಕೊಳ್ಳುವ ಪ್ರಕ್ರಿಯೆ ನಡೆಯುತ್ತಿದೆ.

ಕರ್ನಾಟಕದಲ್ಲಿ ಲಾಟರಿ ಮಾರಾಟ ಮಾಡುವುದು ಕಾನೂನುಬಾಹಿರ. ಗಡಿ ಭಾಗದ ಮೂಲಕ ಅಕ್ರಮವಾಗಿ ಲಾಟರಿ ತಂದು ಮಾರಾಟ ಮಾಡುವವರ ವಿರುದ್ಧ ಕಠಿಣ ಕ್ರಮ ಕೈಗೊಳ್ಳಲಾಗುವುದು. ಈ ಜಾಲದ ಹಿಂದೆ ಬೇರೆ ಯಾರಾದರೂ ಪ್ರಭಾವಿಗಳು ಅಥವಾ ದೊಡ್ಡ ವಿತರಕರು ಇದ್ದಾರೆಯೇ ಎಂಬ ಬಗ್ಗೆ ಸ್ಥಳೀಯ ಪೊಲೀಸರು ಹೆಚ್ಚಿನ ತನಿಖೆ ಕೈಗೊಂಡಿದ್ದಾರೆ. ಈ ಕಾರ್ಯಾಚರಣೆಯು ಗಡಿ ಭಾಗದ ಅಕ್ರಮ ದಂಧೆಕೋರರಿಗೆ ಎಚ್ಚರಿಕೆಯ ಸಂದೇಶ ನೀಡಿದೆ.

Continue Reading

crime

ದೈವಕ್ಕೆ ಅವಮಾನ: ಎಮ್ಮೆಮಾಡು ಜಮಾಅತ್‌ನಿಂದ ತಪ್ಪಿತಸ್ಥರಿಗೆ ಎಚ್ಚರಿಕೆ ಹಾಗೂ ಕ್ಷಮಾಪಣೆ

Published

on

ಮಡಿಕೇರಿ: ಕೊಡಗು ಜಿಲ್ಲೆಯ ಎಮ್ಮೆಮಾಡು ಗ್ರಾಮದಲ್ಲಿ ಇತ್ತೀಚೆಗೆ ನಡೆದ ಮದುವೆ ಸಮಾರಂಭವೊಂದರಲ್ಲಿ ಸ್ಥಳೀಯ ದೈವವೊಂದಕ್ಕೆ ಅವಮಾನ ಮಾಡಿದ ಘಟನೆ ಜಿಲ್ಲೆಯಾದ್ಯಂತ ಚರ್ಚೆಗೆ ಕಾರಣವಾಗಿತ್ತು. ಈ ವಿಚಾರವನ್ನು ಗಂಭೀರವಾಗಿ ಪರಿಗಣಿಸಿರುವ ಎಮ್ಮೆಮಾಡುವಿನ ತಾಜೂಲ್ ಇಸ್ಲಾಂ ಮುಸ್ಲಿಂ ಜಮಾಅತ್, ಘಟನೆಯಲ್ಲಿ ಭಾಗಿಯಾದವರಿಗೆ ಕಠಿಣ ಎಚ್ಚರಿಕೆ ನೀಡಿದೆ.

ಘಟನೆಯ ಹಿನ್ನೆಲೆ ಮತ್ತು ಜಮಾಅತ್ ಕ್ರಮ

ಮದುವೆ ಸಮಾರಂಭ ಮುಗಿದ ನಂತರ ಕೆಲವು ಯುವಕರು ದೈವದ ಆಚರಣೆಯನ್ನು ಅಪಹಾಸ್ಯ ಮಾಡುವ ರೀತಿಯಲ್ಲಿ ವರ್ತಿಸಿದ್ದರು. ಈ ವಿಡಿಯೋ ಸಾಮಾಜಿಕ ಜಾಲತಾಣಗಳಲ್ಲಿ ಹರಿದಾಡಿ ಸಾರ್ವಜನಿಕ ಆಕ್ರೋಶಕ್ಕೆ ಕಾರಣವಾಗಿತ್ತು.

ವಿಷಯ ತಿಳಿಯುತ್ತಿದ್ದಂತೆಯೇ ಎಮ್ಮೆಮಾಡು ಜಮಾಅತ್ ಕಚೇರಿಯಲ್ಲಿ ತುರ್ತು ಸಭೆ ನಡೆಸಲಾಯಿತು. ಈ ಕುರಿತು ಪ್ರಧಾನ ಕಾರ್ಯದರ್ಶಿ ಸೈಯದ್ ಝಕರಿಯ ಸಅದಿ ಅಲ್ ಐದರೂಸಿ ಅವರು ಮಾಧ್ಯಮಗಳಿಗೆ ಮಾಹಿತಿ ನೀಡಿದ್ದಾರೆ:

ಸಭೆಯ ಬಳಿಕ ಜಮಾಅತ್ ಪ್ರಧಾನ ಕಾರ್ಯದರ್ಶಿ ಸೈಯದ್ ಝಕರಿಯ ಸಅದಿ ಅಲ್ ಐದರೂಸಿ ಅವರು ಮಾಧ್ಯಮಗಳೊಂದಿಗೆ ಮಾತನಾಡಿ “ಮದುವೆ ಸಮಾರಂಭ ಮುಗಿದ ಬಳಿಕ ಸ್ನೇಹಿತರೆಲ್ಲರೂ ಒಗ್ಗೂಡಿದಾಗ ಕೇವಲ ತಮಾಷೆಗಾಗಿ ಈ ರೀತಿ ವರ್ತಿಸಿದ್ದೇವೆ ಎಂದು ಯುವಕರು ವಿಚಾರಣೆ ವೇಳೆ ಒಪ್ಪಿಕೊಂಡಿದ್ದಾರೆ. ಯಾವುದೇ ಜಾತಿ, ಧರ್ಮ ಅಥವಾ ಧಾರ್ಮಿಕ ಆಚರಣೆಗಳನ್ನು ನಿಂದಿಸುವ ಉದ್ದೇಶ ತಮಗಿರಲಿಲ್ಲ ಎಂದು ಅವರು ಸ್ಪಷ್ಟಪಡಿಸಿದ್ದಾರೆ. ತಮ್ಮ ನಡವಳಿಕೆಯಿಂದ ತಪ್ಪಾಗಿರುವುದನ್ನು ಅರಿತ ಯುವಕರು ಜಮಾಅತ್ ಮುಂದೆ ಸಭೆಯಲ್ಲಿ ಬಹಿರಂಗವಾಗಿ ಕ್ಷಮೆ ಯಾಚಿಸಿದ್ದಾರೆ. ಇದರಿಂದ ಯಾರ ಮನಸ್ಸಾದರೂ ನೊಂದಿದ್ದರೆ ಅವರೆಲ್ಲರಲ್ಲೂ ಯುವಕರು ಕ್ಷಮೆಯನ್ನ ಕೋರಿದ್ದಾರೆ. ಎಂದು ತಿಳಿಸಿದ್ದು, ಯುವಕರು ಈಗಾಗಲೇ ತಮ್ಮ ತಪ್ಪಿನ ಅರಿವಾಗಿ ಕ್ಷಮೆ ಕೇಳಿರುವುದರಿಂದ, ಸಾರ್ವಜನಿಕರು ಕೂಡ ಅವರಿಗೆ ಕ್ಷಮೆಯನ್ನು ನೀಡಿ ಎಲ್ಲರೂ ಸೌಹಾರ್ದತೆಯಿಂದ ಬಾಳಬೇಕೆಂದು ಸೈಯದ್ ಝಕರಿಯ ಅವರು ಈ ಸಂದರ್ಭದಲ್ಲಿ ಮನವಿ ಮಾಡಿದರು.

ಜಮಾಅತ್ ನೀಡಿದ ಕಠಿಣ ಎಚ್ಚರಿಕೆ

ಈ ಪ್ರಕರಣವನ್ನು ಇಲ್ಲಿಗೆ ಅಂತ್ಯಗೊಳಿಸದ ಜಮಾಅತ್ ಮಂಡಳಿಯು, ಭವಿಷ್ಯದಲ್ಲಿ ಇಂತಹ ಘಟನೆಗಳು ಮರುಕಳಿಸದಂತೆ ಕಟ್ಟುನಿಟ್ಟಿನ ಸೂಚನೆ ನೀಡಿದೆ.

“ಯಾವುದೇ ಧರ್ಮ ಅಥವಾ ದೈವದ ಬಗ್ಗೆ ಅವಹೇಳನ ಮಾಡುವುದು ಜಮಾಅತ್‌ನ ಆಶಯಕ್ಕೆ ವಿರುದ್ಧವಾಗಿದೆ. ಇನ್ನು ಮುಂದೆ ಎಮ್ಮೆಮಾಡು ಜಮಾಅತ್ ವ್ಯಾಪ್ತಿಯಲ್ಲಿ ಇಂತಹ ಕೃತ್ಯಗಳು ನಡೆದರೆ, ಸಂಬಂಧಪಟ್ಟ ವ್ಯಕ್ತಿಗಳ ವಿರುದ್ಧ ಜಮಾಅತ್ ನಿಯಮಾವಳಿಗಳ ಪ್ರಕಾರ ಕಠಿಣ ನಿಯಮಗಳನ್ನು ಎದುರಿಸಬೇಕಾಗುತ್ತದೆ.”

ಸೈಯದ್ ಝಕರಿಯ ಸಅದಿ ಅಲ್ ಐದರೂಸಿ,

ಪ್ರಧಾನ ಕಾರ್ಯದರ್ಶಿ.

ಕೋಮು ಸೌಹಾರ್ದತೆಗೆ ಆದ್ಯತೆ

ಜಿಲ್ಲೆಯಲ್ಲಿ ಸೌಹಾರ್ದತೆ ಕಾಪಾಡುವ ನಿಟ್ಟಿನಲ್ಲಿ ಜಮಾಅತ್ ತೆಗೆದುಕೊಂಡ ಈ ತ್ವರಿತ ನಿರ್ಧಾರವು ಮಹತ್ವದ್ದಾಗಿದೆ. ಈ ಮಹತ್ವದ ಸಭೆಯಲ್ಲಿ ಜಮಾಅತ್ ಅಧ್ಯಕ್ಷರಾದ ಹುಸೈನ್ ಸಖಾಫಿ, ಸಹ ಕಾರ್ಯದರ್ಶಿ ಹನೀಫಾ ಸೇರಿದಂತೆ ಜಮಾಅತ್‌ನ ಪ್ರಮುಖ ಪದಾಧಿಕಾರಿಗಳು ಉಪಸ್ಥಿತರಿದ್ದರು., ಧಾರ್ಮಿಕ ಭಾವನೆಗಳಿಗೆ ಗೌರವ ನೀಡುವಂತೆ ಸಮುದಾಯದ ಯುವಕರಿಗೆ ಕರೆ ನೀಡಿದರು.

Continue Reading

crime

ಪುತ್ತೂರಿನ ಕುಖ್ಯಾತ ಗಾಂಜಾ ಪೆಡ್ಲರ್ ‘ಗಾಂಜಾ ಫಾರೂಕ್’ ಬಂಧನ: ಗೂಂಡಾ ಕಾಯ್ದೆಯಡಿ ಪರಪ್ಪನ ಅಗ್ರಹಾರ ಜೈಲಿಗೆ

Published

on

ಪುತ್ತೂರು ನಗರ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ಸಮಾಜಘಾತುಕ ಕೃತ್ಯಗಳಲ್ಲಿ ತೊಡಗಿದ್ದ ಕುಖ್ಯಾತ ಮಾದಕವಸ್ತು ಮಾರಾಟಗಾರ ಉಮ್ಮರ್ ಫಾರೂಕ್ ಅಲಿಯಾಸ್ ‘ಗಾಂಜಾ ಫಾರೂಕ್’ (38) ನನ್ನು ಪೊಲೀಸರು ಗೂಂಡಾ ಕಾಯ್ದೆಯಡಿ (Goonda Act) ಬಂಧಿಸಿ ಜೈಲಿಗೆ ಅಟ್ಟಿದ್ದಾರೆ.

ಕೊಡಿಪ್ಪಾಡಿ ಗ್ರಾಮದ ಕಲ್ಲಂದಡ್ಕ ನಿವಾಸಿ ಮೊಯಿದುಕುಂಞ ಎಂಬವರ ಪುತ್ರನಾದ ಈತ, ದಕ್ಷಿಣ ಕನ್ನಡ ಜಿಲ್ಲೆಯ ಹಲವು ಗಾಂಜಾ ಪ್ರಕರಣಗಳಲ್ಲಿ ಪ್ರಮುಖ ಆರೋಪಿಯಾಗಿದ್ದಾನೆ. ಯುವ ಪೀಳಿಗೆಗೆ ಮಾದಕವಸ್ತುಗಳನ್ನು ಪೂರೈಸಿ ಅವರ ಜೀವನವನ್ನು ಹಾಳುಗೆಡವುತ್ತಿದ್ದ ಈತನ ವಿರುದ್ಧ ಪುತ್ತೂರು ನಗರ ಠಾಣಾ ಪೊಲೀಸರು ವರದಿ ಸಲ್ಲಿಸಿದ್ದರು.

ಈ ವರದಿಯನ್ನು ಆಧರಿಸಿ, ಸಮಾಜದ ಹಿತದೃಷ್ಟಿಯಿಂದ ಆರೋಪಿಯ ವಿರುದ್ಧ ಗೂಂಡಾ ಕಾಯ್ದೆ ಜಾರಿಗೊಳಿಸಿ ಬಂಧನಕ್ಕೆ ಆದೇಶಿಸಲಾಯಿತು. ಸದ್ಯ ಈತನನ್ನು ಬೆಂಗಳೂರಿನ ಪರಪ್ಪನ ಅಗ್ರಹಾರ ಕೇಂದ್ರ ಕಾರಾಗೃಹಕ್ಕೆ ಸ್ಥಳಾಂತರಿಸಲಾಗಿದೆ. ದೀರ್ಘಕಾಲದ ಬಳಿಕ ಈ ಅಪಾಯಕಾರಿ ಪೆಡ್ಲರ್‌ನನ್ನು ಪೊಲೀಸರು ಜೈಲಿಗಟ್ಟಿದ್ದು, ಪುತ್ತೂರಿನ ನಾಗರಿಕರು ನೆಮ್ಮದಿಯ ನಿಟ್ಟುಸಿರು ಬಿಟ್ಟಿದ್ದಾರೆ.

Continue Reading

Trending

Copyright © 2025 Deevatige