Connect with us

Bantawala

ವಿಟ್ಲ ಪೊಲೀಸ್ ಸಸ್ಪೆಂಡ್ ; ಪಾಸ್ ಪೋರ್ಟ್ ಪಡೆಯಲು ಯತ್ನಿಸಿದ.ಪಶ್ಚಿಮ ಬಂಗಾಳದ ನಿವಾಸಿ ಪೊಲೀಸ್ ವಶಕ್ಕೆ

Published

on

ವಿಟ್ಲ : ಪೊಲೀಸ್ ಠಾಣೆಯಲ್ಲಿ ಸುಳ್ಳು ದಾಖಲೆಗಳನ್ನು ಸೃಷ್ಠಿಸಿ ಪಾಸ್ ಪೋರ್ಟ್ ಪಡೆಯಲು ಯತ್ನಿಸಿದ ಆರೋಪಿ ಪಶ್ಚಿಮ ಬಂಗಾಳದ ನಿವಾಸಿಯೆಂದು ಒಪ್ಪಿಕೊಂಡಿದ್ದು, ಆತನಿಗೆ ಪಾಸ್ ಪೋರ್ಟ್ ಮಾಡಿಕೊಡುವ ಸಲುವಾಗಿ ಫೋರ್ಜರಿ ಸಹಿ ಮಾಡಿ ಪಾಸ್ ಪೋರ್ಟ್ ಹಾಗೂ ಕ್ಲಿಯೆರೆನ್ಸ್ ಸರ್ಟಿಫಿಕೇಟ್ ಸಿಗುವಂತೆ ದೇಶದ್ರೋಹ ಬಗೆದು ಲಾಕ್ ಆಗಿ ಜೈಲು ಪಾಲಾಗಿರುವ ಆರೋಪಿ ವಿಟ್ಲ ಪೊಲೀಸ್ ಠಾಣಾ ಸಿಬ್ಬಂದಿ ಪ್ರದೀಪ್‌ನನ್ನು ಪೊಲೀಸ್ ಇಲಾಖಾ ಕರ್ತವ್ಯದಿಂದ ಅಮಾನತು ಗೊಳಿಸಲಾಗಿದೆ.


ಪ್ರಕರಣದ ಆರೋಪಿತನಾದ ಶಕ್ತಿದಾಸ್ ಹಲವಾರು ವರ್ಷಗಳಿಂದ ವಿಟ್ಲದಲ್ಲಿದ್ದು,ಆತನು ಪಶ್ಚಿಮಭಾಂಗ್ಲಾ ನಿವಾಸಿಯೆಂದು ಯಾರಿಗೂ ತಿಳಿದಿರಲಿಲ್ಲ. ಇದೀಗ ಪ್ರಕರಣದಲ್ಲಿ ಪೊಲೀಸರ ವಶದಲ್ಲಿದ್ದು, ತಾನು ಪಶ್ಚಿಮಬಾಂಗ್ಲಾ ನಿವಾಸಿಯೆಂದು ಒಪ್ಪಿ ಕೊಂಡಿರುತ್ತಾನೆ. ಈ ಬಗ್ಗೆ ಪರಿಶೀಲಿಸಲಾಗುತ್ತಿದ್ದು, ಆತನ ವಿರುದ್ಧ ಮುಂದಿನ ಕಾನೂನು ಕ್ರಮ ಕೈಗೊಳ್ಳಲಾಗುವುದು ಮತ್ತು ಪ್ರಕರಣದ ಮತ್ತೋರ್ವ ಆರೋಪಿತ ಪ್ರದೀಪ್ ಎಂಬಾತನನ್ನು ದಿನಾಂಕ:22.02.2025 ರಂದು ಇಲಾಖಾ ಕರ್ತವ್ಯದಿಂದ ಅಮಾನತ್ತುಗೊಳಿಸಲಾಗಿರುತ್ತದೆ ಎಂದು ಪೊಲೀಸ್ ವರಿಷ್ಠರು ಮಾಹಿತಿ ನೀಡಿದ್ದಾರೆ.

ವಿಟ್ಲ ಪೊಲೀಸ್ ಠಾಣಾ ವ್ಯಾಪ್ತಿಯ ವಿಳಾಸದಲ್ಲಿ ವಾಸಿಸುತ್ತಿರುವುದಾಗಿ ಶಕ್ತಿದಾಸ್ ಎಂಬ ಹೆಸರಿನ ವ್ಯಕ್ತಿಯು 2025ನೇ ಫೆಬ್ರವರಿ ತಿಂಗಳಲ್ಲಿ ಪಾಸ್ ಪೊರ್ಟ್ ಗಾಗಿ ಅರ್ಜಿ ಸಲ್ಲಿಸಿದ್ದು, ಸದ್ರಿ ಅರ್ಜಿಯ ಬಗ್ಗೆ ಪೊಲೀಸ್ ವೆರಿಫಿಕೇಶನ್ ಮಾಡುವ ವೇಳೆ ಅರ್ಜಿದಾರರ ವಿಳಾಸವು ದಾಖಲಾತಿಗಳಲ್ಲಿನ ವಿಳಾಸಕ್ಕೆ ತಾಳೆಯಾಗದಿರುವುದರಿಂದ ತಿರಸ್ಕರಿಸಲಾಗಿತ್ತು.


ಸದ್ರಿ ವ್ಯಕ್ತಿಯು ಮತ್ತೆ 2025ನೇ ಇಸವಿಯ ಜೂನ್ ತಿಂಗಳಲ್ಲಿ ಮರು ಅರ್ಜಿಯನ್ನು ಸಲ್ಲಿಸಿದ ಸಂದರ್ಭ ಸದ್ರಿ ಮರುಅರ್ಜಿಯನ್ನು ವಿಟ್ಲ ಪೊಲೀಸ್ ಠಾಣಾ ಸಿಬ್ಬಂದಿಯಾದ ಆರೋಪಿತ ಪ್ರದೀಪ್ ಎಂಬವರು, ಸದ್ರಿ ಅರ್ಜಿದಾರರ ವಿಳಾಸವಿರುವ ಬೀಟ್ ಸಿಬ್ಬಂದಿ ಸಾಬು ಮಿರ್ಜಿ ಎಂಬವರ ಅರಿವಿಗೆ ಬಾರದಂತೆ, ಬೀಟ್ ಸಿಬ್ಬಂದಿ ಸಾಬು ಮಿರ್ಜಿ ಎಂಬವರ ಹೆಸರಿನಲ್ಲಿ ವರದಿ ತಯಾರಿಸಿ, ಬೀಟ್ ಸಿಬ್ಬಂದಿಯ ಸಹಿಯನ್ನು ಫೋರ್ಜರಿ ಮಾಡಿ, ಮೇಲಾಧಿಕಾರಿಯವರಿಂದ ಶಿಫಾರಸ್ಸು ಮಾಡಿಸಿ ಕಳುಹಿಸಿ ಕೊಟ್ಟಿರುವುದು ಅಲ್ಲದೆ ಪರಿಶೀಲನಾ ದಾಖಲೆಗಳನ್ನು ಯಾರಿಗೂ ಗೊತ್ತಾಗಬಾರದೆಂದು ನಾಶಪಡಿಸುವ ಮೂಲಕ ಇಲಾಖೆಯ ನಿಯಮಗಳನ್ನು ಉಲ್ಲಂಘಿಸಿ ದ್ರೋಹ ಎಸಗಿರುವುದು ಕಂಡುಬoದಿದೆ.


ಶಕ್ತಿದಾಸ್ ಎಂಬವರಿಗೆ ಪಾಸ್‌ಪೋರ್ಟ್ ಹಾಗೂ ಪೊಲೀಸ್ ಕ್ಲೀಯರೆನ್ಸ್ ಸರ್ಟಿಫಿಕೇಟ್ ಸಿಗುವಂತೆ ಮಾಡಿ ಕಡತವನ್ನು ನಾಶಪಡಿಸಿದ ಹಿನ್ನೆಲೆಯಲ್ಲಿ ವಿಟ್ಲ ಪೊಲೀಸ್ ಠಾಣಾ ಸಿಬ್ಬಂದಿ ಪ್ರದೀಪ್ ಹಾಗೂ ಸುಳ್ಳು ದಾಖಲೆಗಳನ್ನು ನೀಡಿ ಪಾಸ್ ಪೊರ್ಟ ಪಡೆದ ಶಕ್ತಿದಾಸ್ ಎಂಬವರ ವಿರುದ್ದ ವಿಟ್ಲ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿರುತ್ತದೆ.
ಆರೋಪಿತ ಪ್ರದೀಪ್ ರವರನ್ನು ವಶಕ್ಕೆ ಪಡೆದು ಮಾನ್ಯ ನ್ಯಾಯಾಲಯಕ್ಕೆ ಹಾಜರುಪಡಿಸಲಾಗಿದ್ದು, ನ್ಯಾಯಾಲಯವು ಇಗಾಗಲೇ ನ್ಯಾಯಾಂಗ ಬಂಧನ ವಿಧಿಸಿರುತ್ತದೆ

ಸುಳ್ಳು ದಾಖಲೆಗಳ ಮೂಲಕ ಪಾಸ್ ಪೋರ್ಟ್ ಮಾಡಲು ಯತ್ನಿಸಿದ ವಿಟ್ಲ ಪೊಲೀಸ್ ಪ್ರದೀಪ್ ಅವರ ದೇಶದ್ರೋಹ ಕೆಲಸಕ್ಕೆ ಸಾರ್ವಜನಿಕರು ಆಕ್ರೋಶಿತರಾಗಿದ್ದು, ಕೃತ್ಯವನ್ನು ಬಯಲಿಗೆಳೆದು ನ್ಯಾಯದ ಕಟಕಟೆಯ ಮೇಲೆ ಆರೋಪಿಯನ್ನು ನಿಲ್ಲಿಸಿದ ಪೊಲೀಸ್ ಇಲಾಖೆಯನ್ನು ಅಭಿನಂದಿಸಿದ್ದಾರೆ.

Continue Reading
Advertisement

Bantawala

ಐಟಿಐ ವಿದ್ಯಾರ್ಥಿಗಳ ಬಡಿದಾಟ; ಇಬ್ಬರಿಗೆ ಚೂರಿ ಇರಿತ; ವಿಟ್ಲ ಪೊಲೀಸರ ವಶದಲ್ಲಿ ಆರೋಪಿ ವಿದ್ಯಾರ್ಥಿ..

Published

on

ವಿಟ್ಲದ ಖಾಸಗಿ ಐಟಿಐ ವಿದ್ಯಾಸಂಸ್ಥೆಯಲ್ಲಿ ಒಂದೇ ತರಗತಿಯ ವಿದ್ಯಾರ್ಥಿಗಳ ನಡುವೆ ಕ್ಷುಲ್ಲಕ ವಿಚಾರಕ್ಕಾಗಿ ಬಡಿದಾಟ ನಡೆದಿದ್ದು ಮುಂದುವರಿದ ಭಾಗವಾಗಿ ವಿದ್ಯಾರ್ಥಿಯೊಬ್ಬ ತನ್ನ ಸಹಪಾಠಿಗಳಿಬ್ಬರಿಗೆ ಚೂರಿಯಿಂದ ಇರಿದು ಗಾಯಗೊಳಿಸಿದ್ದಾನೆ.


ಪ್ರಥಮ ವರ್ಷದ ವಿದ್ಯಾರ್ಥಿಗಳ ನಡುವೆ ಘರ್ಷಣೆ ನಡೆದಿದ್ದು ಪುತ್ತೂರು ಬನ್ನೂರು ನಿವಾಸಿ ಮಹಮ್ಮದ್ ರಿಹಾನ್(18) ಮತ್ತು ಮಂಜೇಶ್ವರ ದೈಗೋಳಿ ನಿವಾಸಿ ಯಜ್ಞೇಶ್ (18) ಎಂಬಿಬ್ಬರ ಮೇಲೆ ಅದೇ ತರಗತಿಯ ವಿಟ್ಲ ನಿವಾಸಿ ಹೇಮಂತ್ (18) ಎಂಬಾತ ಚೂರಿಯಿಂದ ಇರಿದು ಘಾಸಿಗೊಳಿಸಿದ್ದಾನೆ.


ಫುಲ್ ಶೇವ್ ಮಾಡಿಕೊಂಡು ತರಗತಿ ಬರುತ್ತಿದ್ದ ಮಹಮ್ಮದ್ ರಿಹಾನ್ ನನ್ನು ಕೆಲದಿನಗಳಿಂದ ಹೇಮಂತ್ ತಮಾಷೆ ಮಾಡುತ್ತಾ ಇತರ ವಿದ್ಯಾರ್ಥಿಗಳ ಮುಂದೆ ಅವಮಾನ ಮಾಡುತ್ತಿದ್ದನೆನ್ನಲಾಗಿದೆ.

ಈ ಬಗ್ಗೆ ಎರಡು, ಮೂರು ದಿನಗಳಿಂದ ಮೊಹಮ್ಮದ್ ರಿಹಾನ್ ಹೇಮಂತ್ ನಲ್ಲಿ ತನ್ನನ್ನು ಗೇಲಿ ಮಾಡದಂತೆ ವಿನಂತಿಸುತ್ತಿದ್ದ. ಆದರೂ ಆತ ಮುಂದುವರಿಸಿದ್ದು ಇಂದು ಬೆಳಗ್ಗೆ ಮತ್ತೆ ಗೇಲಿ ಮಾಡಿದಾಗ ಇಬ್ಬರ ಮಧ್ಯೆ ಮಾತಿನ ಚಕಮಕಿ ನಡೆದಿತ್ತೆನ್ನಲಾಗಿದೆ.

ಇದೇ ಮತ್ತಷ್ಟು ಮುಂದುವರಿದು ತರಗತಿಯೊಳಗೆ ಪರಸ್ಪರ ನೂಕಾಟ, ತಳ್ಳಾಟ ನಡೆದು ಆಕ್ರೋಶಗೊಂಡ ಹೇಮಂತ್ ತನ್ನಲ್ಲಿದ್ದ ಚೂರಿಯಿಂದ ಮಹಮ್ಮದ್ ರಿಹಾನ್ ಹೊಟ್ಟೆಯ ಹಿಂಭಾಗಕ್ಕೆ ಇರಿದಿದ್ದಾನೆ. ತಡೆಯಲು ಹೋದ ಅದೇ ತರಗತಿಯ ವಿದ್ಯಾರ್ಥಿ ದೈಗೋಳಿ ನಿವಾಸಿ ಯಜ್ಞೇಶ್ ಎಂಬಾತನ ತೊಡೆಗೂ ಚೂರಿ ಇರಿದಿದ್ದಾನೆ.

ಗಾಯಾಳುಗಳಿಬ್ಬರನ್ನೂ ವಿಟ್ಲದ ಸರ್ಕಾರಿ ಆಸ್ಪತ್ರೆಗೆ ದಾಖಲಿಸಲಾಗಿದೆ. ಮಹಮ್ಮದ್ ರಿಹಾನ್ ಗೆ ಹನ್ನೊಂದು ಹೊಲಿಗೆ ಹಾಕಲಾಗಿದ್ದು, ಮತ್ತೋರ್ವ ಗಾಯಾಳು ಯಜ್ಞೇಶ್ ಗೆ ನಾಲ್ಕು ಹೊಲಿಗೆ ಹಾಕಲಾಗಿದೆ ಎಂದು ವೈದ್ಯರು ತಿಳಿಸಿದ್ದಾರೆ.

Continue Reading

Bantawala

ವಿಟ್ಲದಲ್ಲಿ ಬಡಕಾರ್ಮಿಕೆ ರಾಜೇಶ್ವರಿಯವರ ಮನೆ ಬೆಂಕಿಗಾಹುತಿ

Published

on

ವಿಟ್ಲ ಸಮೀಪದ ವೀರಕಂಬ ಗ್ರಾಮದ ಗಣೇಶ್ ಕೋಡಿ ನಿವಾಸಿ ಕಾರ್ಮಿಕೆಯಾಗಿರುವ ರಾಜೇಶ್ವರಿ ಎಂಬವರ ಮನೆ ಆಕಸ್ಮಿಕ ಬೆಂಕಿ ಅನಾಹುತಕ್ಕೆ ಹೊತ್ತಿ ಉರಿದ ಘಟನೆಯೊಂದು ಪೆ.10ರಂದು ಸಂಭವಿಸಿದ್ದು, ಬಡ ನಿರ್ಗತಿಕ ಕುಟುಂಬದ ಸ್ಥಿತಿ ಬಾಣಲೆಯಿಂದ ಬೆಂಕಿಗೆ ಬಿದ್ದಂತಾಗಿದೆ.


ಮನೆಯೊಡತಿ ರಾಜೇಶ್ವರಿ ಅವರು ಎಂದಿನಂತೆ ಬೆಳಗ್ಗೆ ಬೀಗ ಹಾಕಿ ಅಡಿಕೆ ಗಾರ್ಬನ್ ಕೆಲಸಕ್ಕೆ ಹೋಗಿದ್ದರೆ ಮಕ್ಕಳಿಬ್ಬರು ಶಾಲೆಗೆ ತೆರಳಿದ್ದರು. ಮನೆಯಲ್ಲಿ ಯಾರೂ ಇಲ್ಲದ ಸಂದರ್ಭದಲ್ಲಿ ವಿದ್ಯುತ್‌ ಶಾರ್ಟ್ ಸರ್ಕ್ಯೂಟ್ ಸಂಭವಿಸಿ ಬೆಂಕಿ ಹೊತ್ತಿಕೊಂಡು ಮನೆಯನ್ನು ಭಸ್ಮ ಮಾಡಿದೆ.

ಮನೆಯಿಂದ ವಿಪರೀತ ಹೊಗೆ ಬರುತ್ತಿರುವುದನ್ನು ಕಂಡ ಸ್ಥಳೀಯರು ತಕ್ಷಣ ಜಮಾಯಿಸಿ ಬೆಂಕಿಯನ್ನು ನಂದಿಸುವಷ್ಟರಲ್ಲಿಯೇ ಮನೆಯೊಳಗಿದ್ದ ಮಕ್ಕಳ ಬಟ್ಟೆಬರೆ ಶಾಲಾ ಪುಸ್ತಕಗಳು, ಮನೆಯ ದಾಖಲೆಪತ್ರಗಳು ಸೇರಿದಂತೆ ಮನೆಯೊಳಗಿದ್ದ ವಸ್ತುಗಳು ಕರಟಿಹೋಗಿದೆ ಎಂದು ಸ್ಥಳೀಯರು ತಿಳಿಸಿದ್ದಾರೆ.


ಬಡ ಕಾರ್ಮಿಕೆ ಗಾರ್ಬಲ್‌ ಕೆಲಸಕ್ಕೆ ಹೋಗಿ ದುಡಿದು ಜೀವನ ಸಾಗಿಸುತ್ತಿದ್ದು, ಮನೆ ಬೆಂಕಿಗಾಹುತಿಯಾದ ಘಟನೆಯಿಂದ ತೀವ್ರ ಅಸ್ವಸ್ಥರಾಗಿದ್ದು, ಅವರ ಕುಟುಂಬದ ಸ್ಥಿತಿ ಬಾಣಲೆಯಿಂದ ಬೆಂಕಿಗೆ ಬಿದ್ದಂತಾಗಿದೆ.

Continue Reading

accident

ರಾಷ್ಟ್ರ ಮಟ್ಟದ ಕಬಡ್ಡಿ ಆಟಗಾರ, ಪುಣಚ ನಿವಾಸಿ ನಿಶಿತ್ ನಾಯ್ಕ್ (25)ರೈಲಿನಿಂದ ಬಿದ್ದು ದುರ್ಮರಣ..

Published

on

ರಾಷ್ಟ್ರ ಮಟ್ಟದ ಕಬಡ್ಡಿ ಆಟಗಾರ, ಪುಣಚ ನಿವಾಸಿ ನಿಶಿತ್ ನಾಯ್ಕ್ (25)ರೈಲಿನಿಂದ ಬಿದ್ದು ನಿಧನರಾಗಿದ್ದಾರೆ. ಬೆಂಗಳೂರಿನ ಕಲ್ಯಾಣ್ ಜ್ಯುವೆಲ್ಲರ್ಸ್ ನಲ್ಲಿ ಉದ್ಯೋಗದಲ್ಲಿದ್ದ ನಿಶಿತ್ ಊರಿಗೆ ಬರಲು ಸೋಮವಾರ ರಾತ್ರಿ ಬೆಂಗಳೂರಿನಿಂದ ರೈಲಿನಲ್ಲಿ ಪ್ರಯಾಣ ಬೆಳೆಸಿದ್ದರು. ಜನರಲ್ ವಿಭಾಗದಲ್ಲಿ ಪ್ರಯಾಣಿಸುತ್ತಿದ್ದ ಅವರು ತಡರಾತ್ರಿ 2-30ರ ಸುಮಾರಿಗೆ ಚೆನ್ನರಾಯಪಟ್ಟಣ ಹೊರವಲಯದಲ್ಲಿ ರೈಲಿನಿಂದ ಹೊರಕ್ಕೆಸೆಯಲ್ಪಟ್ಟು ಮೃತಪಟ್ಟಿದ್ದಾರೆ ಎಂದು ತಿಳಿದುಬಂದಿದೆ. ಪುತ್ತೂರು ವಿವೇಕಾನಂದ ಕಾಲೇಜಿನ ಹಳೆ ವಿದ್ಯಾರ್ಥಿಯಾಗಿದ್ದ ನಿಶಿತ್ ನಾಯ್ಕ್ ರಾಷ್ಟ್ರ ಮಟ್ಟದ ಕಬಡ್ಡಿ ಆಟಗಾರರಾಗಿ ಗುರುತಿಸಿಕೊಂಡಿದ್ದರು.


ಪುಣಚ ಗ್ರಾಮದ ಬುಡಲೆ ನಿವಾಸಿ, ಮಾಜಿ ಸೈನಿಕರಾಗಿರುವ ಕುಂಞಣ್ಣ ನಾಯ್ಕ್ ಪುತ್ರ ನಿಧನದ ಸುದ್ದಿ ಗ್ರಾಮಸ್ಥರ ಅತೀವ ದು:ಖಕ್ಕೆ ಕಾರಣವಾಗಿದೆ. ಮೃತರು ತಂದೆ ಕುಂಞಣ್ಣ ನಾಯ್ಕ, ತಾಯಿ ರಾಧಾ ಹಾಗೂ ಓರ್ವ ಸಹೋದರಿ ನಿಶಾ ಹಾಗೂ ಅಪಾರ ಬಂಧು ಬಳಗವನ್ನು ಅಗಲಿದ್ದಾರೆ. ಇದೀಗ ಹಾಸನದಲ್ಲಿ ಮರಣೋತ್ತರ ಪರೀಕ್ಷೆ ನಡೆಯುತ್ತಿದ್ದು ರಾತ್ರಿ ಹತ್ತು ಗಂಟೆಯ ಸುಮಾರಿಗೆ ಪ್ರಾರ್ಥಿವ ಶರೀರ ಪುಣಚ ಗ್ರಾಮ ತಲುಪಲಿದೆ ಎಂದು ಮೂಲಗಳು ತಿಳಿಸಿವೆ.

Continue Reading

Trending

Copyright © 2025 Deevatige