Connect with us

arrest

ಪುತ್ತೂರು ಘಟನೆ ಹಿಂದೂ ಸಮಾಜಕ್ಕೆ ಮುನ್ಸೂಚನೆ: ಅಂಜನಾ ಪೈ ಮೇಲೆ ಕೇಸ್ ದಾಖಲಿಸಿದ್ದು ಸರಿಯಲ್ಲ – ಕಲ್ಲಡ್ಕ ಪ್ರಭಾಕರ ಭಟ್

Published

on

ಪುತ್ತೂರು: ಪುತ್ತೂರಿನಲ್ಲಿ ಇತ್ತೀಚೆಗೆ ನಡೆದ ಘಟನೆಯು ಅತ್ಯಂತ ದೌರ್ಭಾಗ್ಯಕರ ಹಾಗೂ ಇಡೀ ಹಿಂದೂ ಸಮಾಜಕ್ಕೆ ಎಚ್ಚರಿಕೆಯ ಸಂಗತಿಯಾಗಿದೆ. ಇದೊಂದು ಸಣ್ಣ ಘಟನೆಯಲ್ಲ, ಬದಲಿಗೆ ಮುಂದೆ ನಡೆಯಬಹುದಾದ ಅನಾಹುತಗಳ ಸೂಚನೆಯಾಗಿದೆ ಎಂದು ಆರ್‌ಎಸ್‌ಎಸ್ ಮುಖಂಡ ಡಾ. ಕಲ್ಲಡ್ಕ ಪ್ರಭಾಕರ ಭಟ್ ಹೇಳಿದ್ದಾರೆ.

ದರ್ಬೆಯಲ್ಲಿ ನಡೆದ ಗಲಾಟೆಯಲ್ಲಿ ಗಾಯಗೊಂಡು ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿರುವ ಅಂಜನಾ ಪೈ ಹಾಗೂ ಅವರ ಪತಿಯನ್ನು ಗುರುವಾರ ಆಸ್ಪತ್ರೆಯಲ್ಲಿ ಭೇಟಿಯಾಗಿ ಆರೋಗ್ಯ ವಿಚಾರಿಸಿದ ಬಳಿಕ ಅವರು ಮಾಧ್ಯಮಗಳೊಂದಿಗೆ ಮಾತನಾಡಿದರು.

ಪ್ರಭಾಕರ್ ಭಟ್ ಅವರ ಹೇಳಿಕೆಯ ಪ್ರಮುಖ ಅಂಶಗಳು:

ಆತ್ಮರಕ್ಷಣೆಯ ಹಕ್ಕು: ಹೆಣ್ಣುಮಗಳೊಬ್ಬಳ ಮೇಲೆ ಅಕ್ರಮ ನಡೆದಾಗ ಸರ್ಕಾರ ಮತ್ತು ಪೊಲೀಸರು ಯಾರಿಗೆ ಸಹಾಯ ಮಾಡಬೇಕು? ತಂದೆ-ತಾಯಿಯ ಮೇಲೆ ಹಲ್ಲೆಯಾದಾಗ ಮಕ್ಕಳು ಸುಮ್ಮನೆ ಕುಳಿತುಕೊಳ್ಳಲು ಸಾಧ್ಯವೇ? ಹೆಣ್ಣುಮಕ್ಕಳಿಗೆ ಆತ್ಮರಕ್ಷಣೆ ಮಾಡಿಕೊಳ್ಳುವ ವಾತಾವರಣ ಇಲ್ಲದಂತಾಗಿದೆ ಎಂದು ಆಕ್ರೋಶ ವ್ಯಕ್ತಪಡಿಸಿದರು.

ಕೇಸ್ ವಾಪಸ್‌ಗೆ ಆಗ್ರಹ: ಹಿಂದೂಗಳು ಯಾರ ಮೇಲೆಯೂ ಆಕ್ರಮಣಕ್ಕೆ ಹೋಗುವುದಿಲ್ಲ. ಆದರೆ ನಮ್ಮ ಮೇಲೆ ದಾಳಿಯಾದಾಗ ದೂರು ನೀಡುವುದು ನಮ್ಮ ಹಕ್ಕು. ದೂರು ನೀಡಿದ ಅಂಜನಾ ಪೈ ಅವರ ಪುತ್ರನ ಮೇಲೆಯೇ ಪೊಲೀಸರು ಸೆಕ್ಷನ್ 307 (ಕೊಲೆ ಯತ್ನ) ಕೇಸು ದಾಖಲಿಸಿರುವುದು ದೊಡ್ಡ ತಪ್ಪು. ಜಿಲ್ಲೆಯಲ್ಲಿ ಒಳ್ಳೆಯ ಎಸ್‌ಪಿ ಇದ್ದು, ತಕ್ಷಣವೇ ಈ ಕೇಸನ್ನು ಹಿಂಪಡೆಯಬೇಕು ಎಂದು ಆಗ್ರಹಿಸಿದರು.

ಆಗಸ್ಟ್ 31ರ ಮೆರವಣಿಗೆಗೆ ಬೆಂಬಲ: ಆ.31ರಂದು ನಡೆಯಲಿರುವ ಮೆರವಣಿಗೆಗೆ ತಮ್ಮ ಸಂಪೂರ್ಣ ಬೆಂಬಲವಿದೆ ಎಂದ ಅವರು, ಪೊಲೀಸರು ಸೂಕ್ತ ಅನುಮತಿ ಹಾಗೂ ರಕ್ಷಣೆ ನೀಡಬೇಕು ಎಂದು ಒತ್ತಾಯಿಸಿದರು.

ಪೊಲೀಸ್ ಇಲಾಖೆಗೆ ಎಚ್ಚರಿಕೆ: ಕಾನೂನು ಮತ್ತು ಸೌಹಾರ್ದತೆ ಎಲ್ಲರಿಗೂ ಸಮಾನವಾಗಿರಬೇಕು. ಪೊಲೀಸರು ನ್ಯಾಯಯುತವಾಗಿ ನಡೆದುಕೊಳ್ಳದಿದ್ದರೆ ಪರಿಸ್ಥಿತಿ ಭಸ್ಮಾಸುರನ ಕಥೆಯಾಗಲಿದೆ ಎಂದು ಎಚ್ಚರಿಸಿದರು.

ಈ ಸಂದರ್ಭದಲ್ಲಿ ಬಿಜೆಪಿ ನಗರ ಮಂಡಲ ಅಧ್ಯಕ್ಷ ಶಿವಕುಮಾರ್ ಕಲ್ಲಿಮಾರ್, ನಗರಸಭೆಯ ಮಾಜಿ ಸದಸ್ಯ ಭಾಮಿ ಅಶೋಕ್ ಶೆಣೈ ಸೇರಿದಂತೆ ಹಲವು ಪ್ರಮುಖರು ಉಪಸ್ಥಿತರಿದ್ದರು.

ads (2)
ads (3)
ads (4)
ads (5)
ads (6)
ads (1)
ads (8)
ads (7)
ಮುಂದಕ್ಕೆ ಓದಲು ಇಲ್ಲಿ ಕ್ಲಿಕ್‌ ಮಾಡಿ
Advertisement

arrest

6 ವರ್ಷಗಳಿಂದ ವಿದೇಶದಲ್ಲಿದ್ದ ವಾರೆಂಟ್ ಆರೋಪಿ ವಿಮಾನ ನಿಲ್ದಾಣದಲ್ಲಿ ಅರೆಸ್ಟ್: ಬಂಟ್ವಾಳ ಪೊಲೀಸರ ಕಾರ್ಯಾಚರಣೆ

Published

on

ಮಂಗಳೂರು: ನ್ಯಾಯಾಲಯದ ವಿಚಾರಣೆಗೆ ಹಾಜರಾಗದೆ ಕಳೆದ 6 ವರ್ಷಗಳಿಂದ ವಿದೇಶದಲ್ಲಿ ತಲೆಮರೆಸಿಕೊಂಡಿದ್ದ ವಾರೆಂಟ್ ಆರೋಪಿಯನ್ನು ಬಂಟ್ವಾಳ ನಗರ ಪೊಲೀಸರು ಮಂಗಳೂರು ಅಂತಾರಾಷ್ಟ್ರೀಯ ವಿಮಾನ ನಿಲ್ದಾಣದಲ್ಲಿ ವಶಕ್ಕೆ ಪಡೆದಿದ್ದಾರೆ.

ಮಂಗಳೂರು ಬಜಾಲ್‌ನಂತೂರು ನಿವಾಸಿ ಮಹಮ್ಮದ್ ನೌಫಲ್ @ ಸಫಾರಿ ನೌಫಲ್ (34) ದಸ್ತಗಿರಿಯಾದ ಆರೋಪಿ.

ಪ್ರಕರಣದ ವಿವರ: ಬಂಟ್ವಾಳ ನಗರ ಪೊಲೀಸ್ ಠಾಣೆಯಲ್ಲಿ ದಾಖಲಾಗಿದ್ದ ಪ್ರಕರಣಕ್ಕೆ (ಅ.ಕ್ರ: 24/2020, ಐಪಿಸಿ ಕಲಂ: 143, 147, 148, 504, 323, 324, 506, 427 r/w 149 ಮತ್ತು ಕಾವಲು ಕಾಯ್ದೆ) ಸಂಬಂಧಿಸಿದಂತೆ ಈಾತನು ಮಾನ್ಯ ನ್ಯಾಯಾಲಯಕ್ಕೆ ವಿಚಾರಣೆಗೆ ಹಾಜರಾಗದೆ ವಿದೇಶಕ್ಕೆ ಪರಾರಿಯಾಗಿದ್ದ. ಈತನ ವಿರುದ್ಧ ನ್ಯಾಯಾಲಯದಿಂದ ವಾರೆಂಟ್ ಜಾರಿಯಾಗಿತ್ತು.

ಸೆಪ್ಟೆಂಬರ್ 15, 2026ರಂದು ವಿದೇಶದಿಂದ ಮನೆಗೆ ಹಿಂತಿರುಗುತ್ತಿದ್ದ ವೇಳೆ, ಮಂಗಳೂರು ಅಂತಾರಾಷ್ಟ್ರೀಯ ವಿಮಾನ ನಿಲ್ದಾಣದ ಇಮಿಗ್ರೇಷನ್ ವಿಭಾಗದ ಸಹಾಯದಿಂದ ಬಂಟ್ವಾಳ ನಗರ ಪೊಲೀಸರು ಆರೋಪಿಯನ್ನು ಯಶಸ್ವಿಯಾಗಿ ಬಂಧಿಸಿದ್ದಾರೆ.

ಬಂಧಿತ ಆರೋಪಿಯನ್ನು ಮಾನ್ಯ ನ್ಯಾಯಾಲಯಕ್ಕೆ ಹಾಜರುಪಡಿಸಲಾಗಿದ್ದು, ನ್ಯಾಯಾಲಯವು ಸೆಪ್ಟೆಂಬರ್ 29, 2026ರವರೆಗೆ ನ್ಯಾಯಾಂಗ ಬಂಧನ ವಿಧಿಸಿ ಆದೇಶಿಸಿದೆ.

Continue Reading

arrest

ಬೆಳ್ತಂಗಡಿ: ದಲಿತ ಕುಟುಂಬದ ಜಮೀನಿಗೆ ಅಕ್ರಮ ಪ್ರವೇಶಿಸಿ ಅಶ್ಲೀಲ ಪ್ರದರ್ಶನ – ಆರೋಪಿ ಬಂಧನ

Published

on

ಬೆಳ್ತಂಗಡಿ: ದಕ್ಷಿಣ ಕನ್ನಡ ಜಿಲ್ಲೆಯ ಬೆಳ್ತಂಗಡಿ ತಾಲೂಕಿನ ವೇಣೂರು ಸಮೀಪದಲ್ಲಿ ಪರಿಶಿಷ್ಟ ಜಾತಿಯ ಕುಟುಂಬಗಳಿಗೆ ಸೇರಿದ ಜಮೀನಿಗೆ ಅಕ್ರಮ ಪ್ರವೇಶಿಸಿ ಕೃತ್ಯವೆಸಗಿ, ದಲಿತ ಕುಟುಂಬದ ಮಹಿಳೆಯರ ಮುಂದೆ ಪಂಚೆ ಎತ್ತಿ ಮರ್ಮಾಂಗ ಪ್ರದರ್ಶಿಸಿ ವಿಕೃತಿ ಮೆರೆದ ವಿಲಕ್ಷಣ ಪ್ರಕರಣ ನಡೆದಿದ್ದು, ಈ ಬಗ್ಗೆ ವೇಣೂರು ಠಾಣೆಯಲ್ಲಿ ಪ್ರಕರಣ ದಾಖಲಾಗಿ ಆರೋಪಿಯನ್ನು ಪೊಲೀಸರು ಬಂಧಿಸಿದ್ದಾರೆ.

ಬಂಧಿತ ಆರೋಪಿಯನ್ನು ಬೆಳ್ತಂಗಡಿ ತಾಲೂಕಿನ ಹೊಸಂಗಡಿ ಗ್ರಾಮದ ಪಟ್ಟಾಡಿ ಮನೆಯ ಅಬ್ದುಲ್ ಹನೀಫ್ ಹುಸೇನ್ (50) ಎಂದು ಗುರುತಿಸಲಾಗಿದೆ.

ಘಟನೆ ವಿವರ:

ಬೆಳ್ತಂಗಡಿ ತಾಲೂಕಿನ ವೇಣೂರು ಸಮೀಪದ ಪಡ್ಯಾರಬೆಟ್ಟು ಎಂಬಲ್ಲಿ ಸುಮಾರು 40 ವರ್ಷಗಳಿಗಿಂತಲೂ ಹೆಚ್ಚು ಕಾಲದಿಂದ ವಾಸ್ತವ್ಯವಿದ್ದು ಕೃಷಿ ಚಟುವಟಿಕೆ ನಡೆಸಿಕೊಂಡು ಬರುತ್ತಿದ್ದ ಪರಿಶಿಷ್ಟ ಜಾತಿಯ ಕುಟುಂಬದ ಸ್ವಾಧೀನದ ಜಾಗದಲ್ಲಿ ಸಿಮೆಂಟ್ ಕಂಬ ಹಾಗೂ ತಂತಿ ಬೇಲಿ ಹಾಕಿ ಕುಟುಂಬ ಕೃಷಿ ಕಾರ್ಯದಲ್ಲಿ ತೊಡಗಿತ್ತು.

ಸೆ.7 ರಂದು ಸ್ಥಳೀಯ ನಿವಾಸಿ ಹನೀಫ್ ಎಂಬಾತ ಏಕಾಏಕಿ ಆ ಜಾಗಕ್ಕೆ ಅತಿಕ್ರಮ ಪ್ರವೇಶಿಸಿ, ಜಾತಿ ನಿಂದನೆ ಮಾಡಿ ಅವಾಚ್ಯ ಮತ್ತು ಅಶ್ಲೀಲ ಪದಗಳಿಂದ ನಿಂದಿಸಿದ್ದಾನೆ. ಬಡ ಕುಟುಂಬ ಹಾಕಿದ್ದ ಸಿಮೆಂಟ್ ಬೇಲಿ ಕಂಬ ಹಾಗೂ ತಂತಿ ಬೇಲಿಯನ್ನು ಕಿತ್ತೆಸೆದು, ಅಡಿಕೆ ಹಾಗೂ ಬಾಳೆ ಗಿಡಗಳನ್ನು ಮುರಿದು ದಾಂಧಲೆ ನಡೆಸಿ ಕೊಲೆ ಬೆದರಿಕೆ ಹಾಕಿದ್ದಾನೆ ಎಂದು ಆರೋಪಿಸಲಾಗಿದೆ.

ಈ ವೇಳೆ ಕೆಲಸದಲ್ಲಿ ತೊಡಗಿದ್ದ ದಲಿತ ಕುಟುಂಬದ ಮಹಿಳೆಯರು ದಾಂಧಲೆಯ ಘಟನೆಯನ್ನು ತಮ್ಮ ಮೊಬೈಲ್‌ನಲ್ಲಿ ವಿಡಿಯೋ ಚಿತ್ರೀಕರಣ ಮಾಡುತ್ತಿದ್ದಾಗ ಆರೋಪಿ ಹನೀಫ್ ಮಹಿಳೆಯರ ಎದುರು ಬಂದು ತಾನು ಉಟ್ಟಿದ್ದ ಪಂಚೆಯನ್ನು ಎತ್ತಿ ಒಳ ಉಡುಪನ್ನು ಜಾರಿಸಿ ತನ್ನ ಗುಪ್ತಾಂಗವನ್ನು ತೋರಿಸುತ್ತಾ ಸಾರ್ವಜನಿಕವಾಗಿ ವಿಕೃತಿಯನ್ನು ಮೆರೆದಿದ್ದಾನೆ. “ನಿಮ್ಮನ್ನು ಇದರಿಂದಲೇ ಅತ್ಯಾಚಾರ ಮಾಡುತ್ತೇನೆ, ಈ ಜಾಗ ಬಿಟ್ಟು ಹೋಗದಿದ್ದರೆ ನಿಮ್ಮನ್ನು ಕೊಲ್ಲದೆ ಬಿಡುವುದಿಲ್ಲ” ಎಂದು ಬೆದರಿಕೆ ಹಾಕಿ ಮಹಿಳೆಯರನ್ನು ಬೆನ್ನಟ್ಟಿಕೊಂಡು ಬಂದಿದ್ದಾನೆ ಎಂದು ದೂರಿನಲ್ಲಿ ತಿಳಿಸಲಾಗಿದೆ.

ದೂರು ಮತ್ತು ಬಂಧನ:

ಈತನ ವಿಕೃತಿಯಿಂದ ಭಯಗೊಂಡ ಬಡ ಕುಟುಂಬವು ಸ್ಥಳೀಯ ದಲಿತ ಮುಖಂಡರು ಹಾಗೂ ಕಾರ್ಯಕರ್ತರೊಂದಿಗೆ ವೇಣೂರು ಪೊಲೀಸ್ ಠಾಣೆಗೆ ತೆರಳಿ ವಿಡಿಯೋ ಚಿತ್ರೀಕರಣದ ದೃಶ್ಯಾವಳಿ ಸಾಕ್ಷ್ಯಾಧಾರಗಳೊಂದಿಗೆ ಸೆ.8 ರಂದು ದೂರು ನೀಡಿದೆ.

ದೂರಿನ ಅನ್ವಯ ವೇಣೂರು ಠಾಣೆಯಲ್ಲಿ ದಲಿತ ದೌರ್ಜನ್ಯ ಕಾಯ್ದೆ ಅಡಿಯಲ್ಲಿ ಹಾಗೂ ಬಿಎನ್ಎಸ್ 329(3), 352, 351(2), 75(1), 324(4) ರಂತೆ ಪ್ರಕರಣ ದಾಖಲಿಸಲಾಗಿದೆ.

ಪ್ರಕರಣ ದಾಖಲಿಸಿಕೊಂಡ ವೇಣೂರು ಪೊಲೀಸರು ಆರೋಪಿಯನ್ನು ಸಂಜೆ ಬಂಧಿಸಿ ಮಂಗಳೂರು ನ್ಯಾಯಾಲಯಕ್ಕೆ ಹಾಜರುಪಡಿಸಿದ್ದು, ನ್ಯಾಯಾಲಯ ಆರೋಪಿಗೆ ನ್ಯಾಯಾಂಗ ಬಂಧನ ವಿಧಿಸಿದೆ.

40 ವರ್ಷಗಳಿಂದ ಕೃಷಿ ಮಾಡಿಕೊಂಡು ಬಂದಿದ್ದ ಬಡ ಪರಿಶಿಷ್ಟ ಕುಟುಂಬದ ಮೇಲೆ ದೌರ್ಜನ್ಯ ನಡೆಸಿ, ಮಹಿಳೆಯರ ಮುಂದೆ ಅಸಭ್ಯವಾಗಿ ವರ್ತಿಸಿದ ಆರೋಪಿಗೆ ಸ್ಥಳೀಯ ದಲಿತ ಮುಖಂಡರು ಹಾಗೂ ಕಾರ್ಯಕರ್ತರ ಸಂಘಟಿತ ಹೋರಾಟದ ಫಲವಾಗಿ ಕಾನೂನಿನ ತಕ್ಕ ಪಾಠ ಕಲಿಸಿದಂತಾಗಿದ್ದು, ಈ ಹೋರಾಟಕ್ಕೆ ರಾಜ್ಯಾದ್ಯಂತ ಮೆಚ್ಚುಗೆ ವ್ಯಕ್ತವಾಗಿದೆ.

Continue Reading

arrest

ಕರಿಕೆ: ಕೇರಳ ಮೀಸಲು ಅರಣ್ಯದಲ್ಲಿ ಕಡವೆ ಬೇಟೆಯಾಡಿ ಮಾಂಸ ಮಾರಾಟ ಮಾಡುತ್ತಿದ್ದ ಜಾಲ ಪತ್ತೆ; ಓರ್ವನ ಬಂಧನ, 40 ಕೆಜಿ ಮಾಂಸ ವಶ

Published

on

ಕರಿಕೆ ಸಮೀಪದ ಕೇರಳ ಮೀಸಲು ಅರಣ್ಯ ಪ್ರದೇಶದಲ್ಲಿ ಅಕ್ರಮವಾಗಿ ಕಡವೆ ಬೇಟೆಯಾಡಿ, ಮಾಂಸ ಮಾರಾಟ ಮಾಡುತ್ತಿದ್ದ ಜಾಲವನ್ನು ಕೇರಳ ಅರಣ್ಯ ಇಲಾಖೆ ಅಧಿಕಾರಿಗಳು ಯಶಸ್ವಿಯಾಗಿ ಭೇದಿಸಿದ್ದು, ಓರ್ವ ಆರೋಪಿಯನ್ನು ಬಂಧಿಸಿದ್ದಾರೆ.

ಕರಿಕೆ ತೋಟಮ್ ನಿವಾಸಿ ಸಿದ್ದು (35) ಬಂಧಿತ ಆರೋಪಿ. ಈ ಕೃತ್ಯದಲ್ಲಿ ಭಾಗಿಯಾಗಿದ್ದ ಇತರ ಇಬ್ಬರು ಆರೋಪಿಗಳಾದ ಜಿ.ಎಸ್. ವಿನೀಶ್ ಮತ್ತು ವಿಮಲ್ ರಾಜ್ ಪರಾರಿಯಾಗಿದ್ದಾರೆ.

ಕರಿಕೆ ಸಮೀಪದ ತೋಟಮ್ ಬಳಿಯ ಕೇರಳ ಮೀಸಲು ಅರಣ್ಯದ ಗೇರು ತೋಟಿನ ಕಾಟೂರ್ ಕೊಪ್ಪು ಎಂಬಲ್ಲಿ ಈ ಅಕ್ರಮ ಚಟುವಟಿಕೆ ನಡೆಯುತ್ತಿತ್ತು. ಖಚಿತ ಮಾಹಿತಿ ಮೇರೆಗೆ ಕಾರ್ಯಾಚರಣೆ ನಡೆಸಿದ ಅರಣ್ಯ ಇಲಾಖೆ ಅಧಿಕಾರಿಗಳು, ಆರೋಪಿಯಿಂದ ಒಂದು ನಾಡ ಬಂದೂಕು, ಸುಮಾರು 40 ಕೆಜಿ ಕಡವೆ ಮಾಂಸ ಹಾಗೂ ಬೇಟೆಗೆ ಬಳಸಿದ್ದ ಇತರೆ ವಸ್ತುಗಳನ್ನು ವಶಪಡಿಸಿಕೊಂಡಿದ್ದಾರೆ.

ಬಂಧಿತ ಆರೋಪಿ ವಿರುದ್ಧ ವನ್ಯಜೀವಿ ಸಂರಕ್ಷಣಾ ಕಾಯ್ದೆಯಡಿ ಪ್ರಕರಣ ದಾಖಲಿಸಿ, ನ್ಯಾಯಾಂಗ ಬಂಧನಕ್ಕೆ ಒಪ್ಪಿಸಲಾಗಿದೆ. ಕಾಸರಗೋಡು ವಲಯದ ಅರಣ್ಯ ಅಧಿಕಾರಿಗಳಾದ ರಾಜು ಎಂ.ಪಿ., ಪ್ರಕಾಶ್ ವಿ.ಪಿ. ಹಾಗೂ ಪ್ರವೀಣ್ ಕುಮಾರ್ ಅವರನ್ನೊಳಗೊಂಡ ತಂಡ ಈ ಕಾರ್ಯಾಚರಣೆಯಲ್ಲಿ ಯಶಸ್ವಿಯಾಗಿ ಭಾಗವಹಿಸಿತ್ತು

Continue Reading

Trending

Copyright © 2025 Deevatige

error: Content is protected !!