Connect with us

suicide

ಅನಾರೋಗ್ಯಕ್ಕೆ ಬೇಸತ್ತು ಬಾವಿಗೆ ಹಾರಿ ವೃದ್ಧೆ ಆತ್ಮಹತ್ಯೆ

Published

on

ವಿಟ್ಲ: ದೀರ್ಘಕಾಲದ ಅನಾರೋಗ್ಯದಿಂದ ನೊಂದ ವೃದ್ಧೆಯೊಬ್ಬರು ಮನೆ ಮುಂಭಾಗದ ಬಾವಿಗೆ ಹಾರಿ ಆತ್ಮಹತ್ಯೆ ಮಾಡಿಕೊಂಡ ಘಟನೆ ಅಳಿಕೆ ಗ್ರಾಮದ ಪಡಿಬಾಗಿಲು ಎಂಬಲ್ಲಿ ನಡೆದಿದೆ.

ಪುತ್ತೂರಿನ ಆಟೋ ಚಾಲಕ ನಾರಾಯಣ ಗೌಡ ಎಂಬವರ ತಾಯಿ ಗಿರಿಜಾ ಗೌಡ (78) ಆತ್ಮಹತ್ಯೆ ಮಾಡಿಕೊಂಡ ವೃದ್ಧೆ.

ಕೆಲವು ದಿನಗಳ ಹಿಂದೆ ತೀವ್ರ ಉಸಿರಾಟದ ತೊಂದರೆಯಿಂದ ಬಳಲುತ್ತಿದ್ದ ಗಿರಿಜಾ ಗೌಡ ಅವರು ಪುತ್ತೂರಿನ ಖಾಸಗಿ ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆದು ಮನೆಗೆ ಮರಳಿದ್ದರು. ಆದರೆ ಅನಾರೋಗ್ಯ ಸುಧಾರಿಸದ ಹಿನ್ನೆಲೆಯಲ್ಲಿ ಸೋಮವಾರ ಸಂಜೆ ಅವರನ್ನು ಮತ್ತೆ ಆಸ್ಪತ್ರೆಗೆ ದಾಖಲಿಸಲು ಕುಟುಂಬಸ್ಥರು ಸಿದ್ಧತೆ ನಡೆಸಿದ್ದರು.

ಮಗ ನಾರಾಯಣ ಗೌಡ ಅವರು ಪುತ್ತೂರಿನಲ್ಲಿ ಆಟೋ ಚಾಲನೆಗೆ ತೆರಳಿದ್ದ ವೇಳೆ, ಸೊಸೆ ಪುಷ್ಪಲತಾ ಅವರು ಮಗುವನ್ನು ಕರೆತರಲು ಪಡಿಬಾಗಿಲು ಅಂಗನವಾಡಿಗೆ ಹೋಗಿದ್ದರು. ಈ ಸಂದರ್ಭದಲ್ಲಿ ಮನೆಯಲ್ಲಿ ಯಾರೂ ಇಲ್ಲದಿರುವುದನ್ನು ಗಮನಿಸಿದ ವೃದ್ಧೆ ಬಾವಿಗೆ ಹಾರಿದ್ದಾರೆ. ಅಂಗನವಾಡಿಯಿಂದ ವಾಪಸ್ ಬಂದ ಸೊಸೆಗೆ ಅತ್ತೆ ಮನೆಯಲ್ಲಿ ಕಾಣಿಸದಿದ್ದಾಗ ಹುಡುಕಾಟ ನಡೆಸಿದ್ದು, ಬಾವಿಯಲ್ಲಿ ಇಣುಕಿ ನೋಡಿದಾಗ ಮೃತದೇಹ ನೀರಿನಲ್ಲಿ ತೇಲುತ್ತಿರುವುದು ಕಂಡುಬಂದಿದೆ.

ಅನಾರೋಗ್ಯದ ತೀವ್ರ ನೋವ ತಾಳಲಾರದೆ ಅವರು ಈ ನಿರ್ಧಾರ ಕೈಗೊಂಡಿರಬಹುದು ಎಂದು ಶಂಕಿಸಲಾಗಿದೆ.

ಘಟನಾ ಸ್ಥಳಕ್ಕೆ ವಿಟ್ಲ ಪೊಲೀಸ್ ನಿರೀಕ್ಷಕ ಪ್ರಕಾಶ್ ದೇವಾಡಿಗ ಹಾಗೂ ಸಿಬ್ಬಂದಿ ಭೇಟಿ ನೀಡಿ ಪರಿಶೀಲನೆ ನಡೆಸಿದ್ದಾರೆ. ‘ಫ್ರೆಂಡ್ಸ್ ವಿಟ್ಲ’ ಸ್ವಯಂಸೇವಕ ಮುರಳೀಧರ ಅವರ ನೇತೃತ್ವದ ತಂಡ ಬಾವಿಯಿಂದ ಮೃತದೇಹವನ್ನು ಮೇಲಕ್ಕೆತ್ತಿ ಮರಣೋತ್ತರ ಪರೀಕ್ಷೆಗೆ ರವಾನಿಸಿದೆ. ವಿಟ್ಲ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

ಮುಂದಕ್ಕೆ ಓದಲು ಇಲ್ಲಿ ಕ್ಲಿಕ್‌ ಮಾಡಿ
Advertisement

DEATH

ಪ್ರದೀಪ್ ಪೂಜಾರಿ ಹಲ್ಲೆ ಮತ್ತು ಆತ್ಮಹತ್ಯೆಗೆ ಪ್ರಚೋದನೆ ಪ್ರಕರಣ:  ಸಿಓಡಿ ತನಿಖೆಗೆ ಬಿಲ್ಲವ ಯುವ ವೇದಿಕೆ ಆಗ್ರಹ

Published

on

ನ. 4ರಂದು ( ಇಂದು) ಬೃಹತ್ ಪ್ರತಿಭಟನೆಗೆ ಸಿದ್ಧತೆ; ಮಧ್ಯಪ್ರದೇಶದಲ್ಲಿ ಇಬ್ಬರು ಆರೋಪಿಗಳು ಪೊಲೀಸ್ ವಶಕ್ಕೆ

ಉಡುಪಿ: ಪೆರ್ಡೂರಿನ ಪ್ರದೀಪ್ ಪೂಜಾರಿ ಅವರ ಮೇಲಿನ ಹಲ್ಲೆ ಹಾಗೂ ಆತ್ಮಹತ್ಯೆ ಪ್ರಕರಣ ಇದೀಗ ತೀವ್ರ ಸ್ವರೂಪ ಪಡೆದುಕೊಂಡಿದ್ದು, ಪೊಲೀಸ್ ತನಿಖೆಯ ಬಗ್ಗೆ ಸಾರ್ವಜನಿಕ ವಲಯದಲ್ಲಿ ಹಲವು ಅನುಮಾನಗಳು ವ್ಯಕ್ತವಾಗಿವೆ. ಪ್ರಕರಣವನ್ನು ಅಪರಾಧ ತನಿಖಾ ಇಲಾಖೆಗೆ (ಸಿಓಡಿ) ವಹಿಸಿ ನಿಷ್ಪಕ್ಷಪಾತ ತನಿಖೆ ನಡೆಸುವಂತೆ ಬಿಲ್ಲವ ಯುವ ವೇದಿಕೆ ಆಗ್ರಹಿಸಿದೆ.

ಪ್ರಕರಣದ ತನಿಖೆಯ ಹಂತದಲ್ಲೇ ಆರೋಪಿಗಳಿಗೆ ಕ್ಲೀನ್‌ಚಿಟ್ ನೀಡಿದ ರೀತಿಯಲ್ಲಿ ಮಾಧ್ಯಮಗಳಿಗೆ ಮಾಹಿತಿ ಹಾಗೂ ವಿಡಿಯೋ ಬಿಡುಗಡೆ ಮಾಡಿರುವುದರ ಕುರಿತು ಸಾರ್ವಜನಿಕ ವಲಯದಲ್ಲಿ ಚರ್ಚೆ ನಡೆಯುತ್ತಿದೆ. ಪೊಲೀಸ್ ಇಲಾಖೆಯ ತನಿಖಾ ಕ್ರಮಗಳ ಬಗ್ಗೆ ಹಲವು ಪ್ರಶ್ನೆಗಳು ಉದ್ಭವಿಸಿದ್ದು, ಪ್ರಕರಣದ ಸತ್ಯಾಸತ್ಯತೆ ಸಂಪೂರ್ಣವಾಗಿ ಹೊರಬರಬೇಕಾದರೆ ಉನ್ನತ ಮಟ್ಟದ ತನಿಖೆ ಅಗತ್ಯ ಎಂದು ವೇದಿಕೆ ಅಭಿಪ್ರಾಯಪಟ್ಟಿದೆ.

ಆರೋಪಿಗಳ ವಿರುದ್ಧ ಸೂಕ್ತ ಕ್ರಮ ಕೈಗೊಳ್ಳದೆ ಪ್ರಕರಣವನ್ನು ಮುಕ್ತಾಯಗೊಳಿಸಿದರೆ ಸಂತ್ರಸ್ತರಿಗೆ ನ್ಯಾಯ ದೊರಕಿಸುವವರು ಯಾರು ಎಂಬ ಪ್ರಶ್ನೆಯೂ ಎದುರಾಗಿದೆ. ಯಾವುದೇ ರಾಜಕೀಯ ಅಥವಾ ಇತರ ಪ್ರಭಾವ, ಒತ್ತಡಗಳಿಗೆ ಮಣಿಯದೆ ತನಿಖೆ ನಡೆಸಬೇಕು. ಈ ಹಿನ್ನೆಲೆಯಲ್ಲಿ ಪ್ರಕರಣವನ್ನು ಸಿಓಡಿ ಅಥವಾ ಉನ್ನತ ಮಟ್ಟದ ತನಿಖಾ ಸಂಸ್ಥೆಗೆ ವಹಿಸಬೇಕು ಎಂದು ಬಿಲ್ಲವ ಯುವ ವೇದಿಕೆ ಒತ್ತಾಯಿಸಿದೆ.

ಈ ನಡುವೆ, ಪ್ರದೀಪ್ ಪೂಜಾರಿ ಅವರಿಗೆ ನ್ಯಾಯ ದೊರಕಿಸುವ ಉದ್ದೇಶದಿಂದ ಜಿಲ್ಲೆಯ ನ್ಯಾಯಪರ ಹೋರಾಟಗಾರರು ಹಾಗೂ ವಿವಿಧ ಸಾಮಾಜಿಕ ಸಂಘಟನೆಗಳ ಸಹಭಾಗಿತ್ವದಲ್ಲಿ ನವೆಂಬರ್ 4ರಂದು ಬುಧವಾರ ಬೃಹತ್ ಪ್ರತಿಭಟನೆ ಮತ್ತು ಜನಾಗ್ರಹ ಕಾರ್ಯಕ್ರಮ ಹಮ್ಮಿಕೊಳ್ಳಲು ಸಿದ್ಧತೆ ನಡೆಸಲಾಗಿದೆ. ಪ್ರತಿಭಟನೆಯ ಮೂಲಕ ಪ್ರಕರಣದ ಸಮಗ್ರ ತನಿಖೆಗೆ ಒತ್ತಡ ಹೇರಲು ವೇದಿಕೆ ಮುಂದಾಗಿದೆ.

ಮಧ್ಯಪ್ರದೇಶದಲ್ಲಿ ಇಬ್ಬರು ಆರೋಪಿಗಳು ಪೊಲೀಸ್ ವಶಕ್ಕೆ

ಇನ್ನೊಂದೆಡೆ, ಪ್ರದೀಪ್ ಪೂಜಾರಿ ಮೇಲಿನ ಹಲ್ಲೆ ಹಾಗೂ ಆತ್ಮಹತ್ಯೆಗೆ ಪ್ರಚೋದನೆ ನೀಡಿದ ಆರೋಪಕ್ಕೆ ಸಂಬಂಧಿಸಿದಂತೆ ಉಡುಪಿ ಪೊಲೀಸರು ಮಧ್ಯಪ್ರದೇಶದಲ್ಲಿ ಇಬ್ಬರು ಆರೋಪಿಗಳನ್ನು ವಶಕ್ಕೆ ಪಡೆದಿದ್ದಾರೆ.

ಈ ಕುರಿತು ಮಾಹಿತಿ ನೀಡಿರುವ ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ ಹರಿರಾಮ್ ಶಂಕರ್ ಅವರು, ಪ್ರಕರಣಕ್ಕೆ ಸಂಬಂಧಿಸಿದಂತೆ ಇಬ್ಬರು ಆರೋಪಿಗಳನ್ನು ಮಧ್ಯಪ್ರದೇಶದಲ್ಲಿ ವಶಕ್ಕೆ ಪಡೆಯಲಾಗಿದೆ ಎಂದು ತಿಳಿಸಿದ್ದಾರೆ.

ವಶಕ್ಕೆ ಪಡೆದಿರುವ ಆರೋಪಿಗಳನ್ನು ಉಡುಪಿಗೆ ಕರೆತರಲಾಗುತ್ತಿದ್ದು, ಬಂಧನಕ್ಕೆ ಸಂಬಂಧಿಸಿದ ಅಧಿಕೃತ ಪ್ರಕ್ರಿಯೆ ಪೂರ್ಣಗೊಂಡ ಬಳಿಕ ಆರೋಪಿಗಳ ಸಂಪೂರ್ಣ ವಿವರಗಳನ್ನು ಬಹಿರಂಗಪಡಿಸಲಾಗುವುದು ಎಂದು ಅವರು ಸ್ಪಷ್ಟಪಡಿಸಿದ್ದಾರೆ.

ಒಂದೆಡೆ ಸಿಓಡಿ ತನಿಖೆಗೆ ಆಗ್ರಹಿಸಿ ಬೃಹತ್ ಪ್ರತಿಭಟನೆಗೆ ಸಿದ್ಧತೆ ನಡೆಯುತ್ತಿದ್ದರೆ, ಮತ್ತೊಂದೆಡೆ ಇಬ್ಬರು ಆರೋಪಿಗಳು ಪೊಲೀಸ್ ವಶಕ್ಕೆ ಸಿಕ್ಕಿರುವುದು ಪ್ರಕರಣಕ್ಕೆ ಮಹತ್ವದ ತಿರುವು ನೀಡಿದೆ. ಮುಂದಿನ ಪೊಲೀಸ್ ತನಿಖೆ ಹಾಗೂ ಪ್ರತಿಭಟನೆಯ ಬೆಳವಣಿಗೆಗಳ ಮೇಲೆ ಸಾರ್ವಜನಿಕರ ಗಮನ ನೆಟ್ಟಿದೆ.

Continue Reading

DEATH

ವಿಟ್ಲ: ಆರ್ಥಿಕ ಮುಗ್ಗಟ್ಟು; ಟಿಪ್ಪರ್‌ ಚಾಲಕ ನೇಣಿಗೆ ಶರಣು

Published

on

ವಿಟ್ಲ: ಬಡ್ಡಿಗೆ ಪಡೆದ ಸಾಲ ತೀರಿಸಲಾಗದೆ ಆರ್ಥಿಕ ಮುಗ್ಗಟ್ಟಿನಿಂದ ನೊಂದುಕೊಂಡಿದ್ದ ಟಿಪ್ಪರ್‌ ಚಾಲಕರೊಬ್ಬರು ನೇಣು ಬಿಗಿದು ಆತ್ಮಹತ್ಯೆ ಮಾಡಿಕೊಂಡಿಧ್ದಾರೆ.

ಕೇಪು ಗ್ರಾಮದ ನೀರ್ಕಜೆ ನಿವಾಸಿ ಹರೀಶ್ಚಂದ್ರ ಬೆಳ್ಚಡ ಅವರ ಮಗ ದಿನೇಶ್‌ (35) ಆತ್ಮಹತ್ಯೆ ಮಾಡಿಕೊಂಡ ದುರ್ದೈವಿ. ಉಕ್ಕುಡ ಸೂರಜ್‌ ಅವರ ಗಜಾನನ ಟಿಪ್ಪರ್‌ ಲಾರಿಯಲ್ಲಿ ದಿನೇಶ್‌ ಬಹಳ ಸಮಯದಿಂದ ಚಾಲಕರಾಗಿ ಕೆಲಸ ಮಾಡುತ್ತಿದ್ದರು.

ಬಡ್ಡಿಗೆ ಹಣ ಪಡೆದು ಅದನ್ನು ಕಟ್ಟಲಾಗದೆ, ಆರ್ಥಿಕ ಮುಗ್ಗಟ್ಟಿನಿಂದ ಹೊರಬರಲಾಗದೆ ಅವರು ತೀವ್ರವಾಗಿ ನೊಂದುಕೊಂಡಿದ್ದರು ಎಂದು ಸ್ನೇಹಿತರು ತಿಳಿಸಿದ್ದಾರೆ.

ಮೃತ ದಿನೇಶ್‌ ಅವರಿಗೆ ಎರಡು ವರ್ಷಗಳ ಹಿಂದೆ ವಿಚ್ಛೇಧನವಾಗಿದ್ದ ಮಹಿಳೆಯ ಜತೆ ಮದುವೆಯಾಗಿದ್ದು, ಹಿಂದಿನ ವಿವಾಹದ ಒಂದು ಗಂಡು ಹಾಗೂ ಒಂದು ಹೆಣ್ಣು ಮಕ್ಕಳಿವೆ. ಅಲ್ಲದೆ, ಪ್ರಸ್ತುತ ಪತ್ನಿಯೊಂದಿಗೆ ‘ನಮಸ್ವೀ’ ಎಂಬ ಒಂದು ವರ್ಷದ ಹಸುಗೂಸಿದೆ. ಮೇಲ್ನೋಟಕ್ಕೆ ಅವರು ತೀವ್ರ ಆರ್ಥಿಕ ಸಂಕಷ್ಟದಲ್ಲಿದ್ದರು ಎಂಬುದು ತಿಳಿದುಬಂದಿದೆ.

ಮೃತರು ಪತ್ನಿ ರಂಜಿತಾ, ಒಂದು ವರ್ಷದ ಮಗು ನಮಸ್ವಿ ಹಾಗೂ ತಂದೆ, ತಂಗಿ ಮತ್ತು ತಮ್ಮನನ್ನು ಅಗಲಿದ್ದಾರೆ

Continue Reading

Belthangady

ಸರ್ಕಾರಿ ಕಾಲೇಜಿನ ಗುಮಾಸ್ತೆ ಯುವತಿ ಬಾವಿಗೆ ಹಾರಿ ಆತ್ಮಹತ್ಯೆ – ಅನಾರೋಗ್ಯವೇ ಕಾರಣವೆಂಬ ಶಂಕೆ; ಪುದುವೆಟ್ಟು ಗ್ರಾಮದ ಮಿಯಾರು ಕಲ್ಲಂಡದಲ್ಲಿ ದಾರುಣ ಘಟನೆ

Published

on

ಬೆಳ್ತಂಗಡಿ: ಬೆಳ್ತಂಗಡಿ ತಾಲೂಕಿನ ನಡ ಸರ್ಕಾರಿ ಕಾಲೇಜಿನಲ್ಲಿ ದ್ವಿತೀಯ ದರ್ಜೆ ಗುಮಾಸ್ತೆ (ಕ್ಲರ್ಕ್) ಆಗಿ ಕರ್ತವ್ಯ ನಿರ್ವಹಿಸುತ್ತಿದ್ದ ಯುವತಿಯೊಬ್ಬಳು ಮನೆಯ ಬಾವಿಗೆ ಹಾರಿ ಆತ್ಮಹತ್ಯೆ ಮಾಡಿಕೊಂಡಿರುವ ದಾರುಣ ಘಟನೆ ಪುದುವೆಟ್ಟು ಗ್ರಾಮದ ಮಿಯಾರು ಎಂಬಲ್ಲಿ ಸೆಪ್ಟೆಂಬರ್ 9 ರಂದು ಸಂಜೆ ಸಂಭವಿಸಿದೆ.

ಆತ್ಮಹತ್ಯೆಗೆ ಶರಣಾದ ಯುವತಿಯನ್ನು ಪುದುವೆಟ್ಟು ಗ್ರಾಮದ ಮಿಯಾರು ಕಲ್ಲಂಡ ಮನೆ ನಿವಾಸಿಗಳಾದ ಅಣ್ಣಿ ಗೌಡ ಮತ್ತು ಮಾಲತಿ ದಂಪತಿಯ ಪುತ್ರಿ ಲಿಶ್ಮಿತಾ ಗೌಡ (20) ಎಂದು ಗುರುತಿಸಲಾಗಿದೆ.

ಘಟನೆಯ ವಿವರ:

ಲಿಶ್ಮಿತಾ ಗೌಡ ಅವರು ನಡ ಸರ್ಕಾರಿ ಕಾಲೇಜಿನಲ್ಲಿ ಕ್ಲರ್ಕ್ ಆಗಿ ಕೆಲಸ ಮಾಡುತ್ತಿದ್ದರು. ಸೆಪ್ಟೆಂಬರ್ 9 ರಂದು ಸಂಜೆ ವೇಳೆಗೆ ಮನೆಯ ಸಮೀಪವೇ ಇದ್ದ ಕುಡಿಯುವ ನೀರಿನ ಬಾವಿಗೆ ಏಕಾಏಕಿ ಹಾರಿದ್ದಾರೆ.

ವಿಷಯ ಗಮನಕ್ಕೆ ಬಂದ ತಕ್ಷಣ ಸ್ಥಳೀಯರು ಹಾಗೂ ಕುಟುಂಬಸ್ಥರು ಆಕೆಯನ್ನು ರಕ್ಷಿಸಲು ಮುಂದಾದರೂ, ಅಷ್ಟರಲ್ಲಾಗಲೇ ಆಕೆ ನೀರಿನಲ್ಲಿ ಮುಳುಗಿ ಉಸಿರುಗಟ್ಟಿ ಮೃತಪಟ್ಟಿದ್ದಾರೆ. ಬಳಿಕ ಸ್ಥಳೀಯರ ನೆರವಿನೊಂದಿಗೆ ಮೃತದೇಹವನ್ನು ಬಾವಿಯಿಂದ ಮೇಲೆತ್ತಿ, ಮರಣೋತ್ತರ ಪರೀಕ್ಷೆಗೆ ರವಾನಿಸಲಾಗಿದೆ.

ಅನಾರೋಗ್ಯದ ಹಿನ್ನೆಲೆ ಶಂಕೆ:

ಪ್ರಾಥಮಿಕ ಮಾಹಿತಿಯ ಪ್ರಕಾರ, ಲಿಶ್ಮಿತಾ ಗೌಡ ಅವರು ಕಳೆದ ಕೆಲವು ಸಮಯದಿಂದ ತೀವ್ರ ಅನಾರೋಗ್ಯ ಸಮಸ್ಯೆಯಿಂದ ಬಳಲುತ್ತಿದ್ದರು ಎನ್ನಲಾಗಿದೆ. ಅನಾರೋಗ್ಯದ ಬಾಧೆ ತಾಳಲಾರದೆ, ಮಾನಸಿಕವಾಗಿ ನೊಂದು ಈ ದುಡುಕಿನ ನಿರ್ಧಾರ ಕೈಗೊಂಡಿರಬಹುದು ಎಂದು ಶಂಕಿಸಲಾಗಿದೆ.

ಧರ್ಮಸ್ಥಳ ಠಾಣೆಯಲ್ಲಿ ಪ್ರಕರಣ ದಾಖಲು:

ವಿಷಯ ತಿಳಿದು ಧರ್ಮಸ್ಥಳ ಪೊಲೀಸ್ ಠಾಣಾ ಅಧಿಕಾರಿಗಳು ಹಾಗೂ ಸಿಬ್ಬಂದಿ ಸ್ಥಳಕ್ಕೆ ಭೇಟಿ ನೀಡಿ ಮಹಜರು ನಡೆಸಿದ್ದಾರೆ. ಮೃತದೇಹದ ಮರಣೋತ್ತರ ಪರೀಕ್ಷೆ ನಡೆಸಲಾಗಿದ್ದು, ಧರ್ಮಸ್ಥಳ ಪೊಲೀಸ್ ಠಾಣೆಯಲ್ಲಿ ಅಸ್ವಾಭಾವಿಕ ಸಾವು (UDR / Suicide Case) ಪ್ರಕರಣ ದಾಖಲಿಸಿಕೊಂಡು ಮುಂದಿನ ತನಿಖೆ ಮುಂದುವರಿಸಲಾಗಿದೆ.

Continue Reading

ads (2)
ads (3)
ads (4)
ads (5)
ads (6)
ads (1)
ads (8)
ads (7)

Trending

Copyright © 2025 Deevatige

error: Content is protected !!