health
ರಾಜ್ಯಾದ್ಯಂತ ನಕಲಿ ವೈದ್ಯರ ಜಾಲ ಭೇದಿಸಿದ ಆರೋಗ್ಯ ಇಲಾಖೆ: 582ಕ್ಕೂ ಹೆಚ್ಚು ಅಕ್ರಮ ಕ್ಲಿನಿಕ್‌ಗಳು ಬಂದ್!
ಬೆಂಗಳೂರು: “ವೈದ್ಯೋ ನಾರಾಯಣೋ ಹರಿ” ಎನ್ನುತ್ತಾ ವೈದ್ಯರನ್ನು ದೇವರ ಸ್ಥಾನದಲ್ಲಿಟ್ಟು ಪೂಜಿಸುವ ಪರಂಪರೆ ನಮ್ಮದು. ಆದರೆ, ಜನರ ಈ ನಂಬಿಕೆಯನ್ನೇ ಬಂಡವಾಳ ಮಾಡಿಕೊಂಡ ಕೆಲ ಕಿಡಿಗೇಡಿಗಳು ವೈದ್ಯರ ಸೋಗಿನಲ್ಲಿ ಅಕ್ರಮ ಕ್ಲಿನಿಕ್ ನಡೆಸುತ್ತಾ ಜನರ ಪ್ರಾಣದ ಜೊತೆ ಆಟವಾಡುತ್ತಿರುವುದು ಬೆಳಕಿಗೆ ಬಂದಿದೆ. ರಾಜ್ಯಾದ್ಯಂತ ಕಾರ್ಯಾಚರಣೆ ನಡೆಸಿದ ಆರೋಗ್ಯ ಇಲಾಖೆಯು ಬರೋಬ್ಬರಿ 582ಕ್ಕೂ ಹೆಚ್ಚು ನಕಲಿ ವೈದ್ಯರನ್ನು ಪತ್ತೆಹಚ್ಚಿ ಕಠಿಣ ಕ್ರಮ ಕೈಗೊಂಡಿದೆ.
ಹೈಕೋರ್ಟ್ ಚಾಟಿ ನಂತ್ರ ಕಾರ್ಯಾಚರಣೆ ತೀವ್ರ! 2024ರಿಂದ ಈವರೆಗೆ ನಡೆಸಿದ ತನಿಖೆಯಲ್ಲಿ 582 ನಕಲಿ ವೈದ್ಯರ ಜಾಲ ಪತ್ತೆಯಾಗಿದೆ. ಈ ಕುರಿತು ಹೈಕೋರ್ಟ್ ಚಾಟಿ ಬೀಸಿದ ಬಳಿಕ 2025ರಲ್ಲಿ ಕಾರ್ಯಾಚರಣೆ ಮತ್ತಷ್ಟು ತೀವ್ರಗೊಂಡಿದ್ದು, ನಕಲಿ ಔಷಧ ಜಾಲ ಹಾಗೂ ಅರ್ಹತೆ ಇಲ್ಲದ ಚಿಕಿತ್ಸಕರ ವಿರುದ್ಧ ಸಮರ ಸಾರಲಾಗಿದೆ. 2024 ರಿಂದ 2026ರ ಅವಧಿಯಲ್ಲಿ ರಾಜ್ಯಾದ್ಯಂತ ನಿಯಮ ಬಾಹಿರವಾಗಿ ನಡೆಯುತ್ತಿದ್ದ 582 ಕ್ಲಿನಿಕ್‌ಗಳನ್ನು ಸಂಪೂರ್ಣವಾಗಿ ಮುಚ್ಚಿಸಲಾಗಿದೆ. ಇವರಲ್ಲಿ 87 ಮಂದಿಗೆ ಭಾರಿ ದಂಡ ವಿಧಿಸಲಾಗಿದ್ದು, 29 ಜನರ ವಿರುದ್ಧ ನ್ಯಾಯಾಲಯದಲ್ಲಿ ಕಾನೂನು ಪ್ರಕ್ರಿಯೆಗಳು ಜಾರಿಯಲ್ಲಿವೆ.
ಕಲಬುರಗಿಯಲ್ಲೇ ಗರಿಷ್ಠ ಪ್ರಕರಣ: ಗ್ರಾಮೀಣ ಭಾಗದಲ್ಲೇ ನಕಲಿಗಳ ಹಾವಳಿ! ಪತ್ತೆಯಾದ ಬಹುತೇಕ ಪ್ರಕರಣಗಳು ಗ್ರಾಮೀಣ ಪ್ರದೇಶಗಳಲ್ಲೇ ಕಂಡುಬಂದಿರುವುದು ಆತಂಕಕಾರಿ ಸಂಗತಿಯಾಗಿದೆ. ಜಿಲ್ಲಾವಾರು ಅಂಕಿಅಂಶಗಳು ಹೀಗಿವೆ:
- ಕಲಬುರಗಿ: 127 (ಅತಿ ಹೆಚ್ಚು)
- ರಾಯಚೂರು: 124
- ಧಾರವಾಡ: 75
- ಕೋಲಾರ: 31
- ವಿಜಯಪುರ: 24
- ಬಳ್ಳಾರಿ: 23
- ದಕ್ಷಿಣ ಕನ್ನಡ: 20
- ಚಿಕ್ಕಬಳ್ಳಾಪುರ: 17
- ಬೆಂಗಳೂರು ನಗರ: 16
- ಕೊಪ್ಪಳ: 14
ನರ್ಸ್, ವಾರ್ಡ್ ಬಾಯ್‌ಗಳೇ ಇಲ್ಲಿ ‘ಡಾಕ್ಟರ್’! ತನಿಖೆಯ ವೇಳೆ ನಕಲಿ ವೈದ್ಯರ ಹಿನ್ನೆಲೆ ಕಂಡು ಅಧಿಕಾರಿಗಳೇ ಆಘಾತಕ್ಕೊಳಗಾಗಿದ್ದಾರೆ. ಈ ಪೈಕಿ ಬಹುತೇಕರು ಯಾವುದೇ ಅಧಿಕೃತ ಮೆಡಿಕಲ್ ಪದವಿ ಪಡೆದವರಲ್ಲ! ಆಸ್ಪತ್ರೆಗಳಲ್ಲಿ ನರ್ಸ್, ವಾರ್ಡ್ ಬಾಯ್ ಹಾಗೂ ಕಾಂಪೌಂಡರ್‌ಗಳಾಗಿ ಕೆಲಸ ಮಾಡುತ್ತಾ, ನೈಜ ವೈದ್ಯರು ಚಿಕಿತ್ಸೆ ನೀಡುವುದನ್ನು ನೋಡಿ ಕೇವಲ ಪ್ರಾಕ್ಟಿಕಲ್ ಜ್ಞಾನ ಬೆಳೆಸಿಕೊಂಡಿದ್ದರು. ಅದೇ ‘ಅನುಭವ’ದ ಆಧಾರದಲ್ಲಿ ಹಳ್ಳಿಗಳಲ್ಲಿ ಕ್ಲಿನಿಕ್ ತೆರೆದು ಅಲೋಪತಿ ಚಿಕಿತ್ಸೆ, ಇಂಜೆಕ್ಷನ್ ಹಾಗೂ ಗ್ಲುಕೋಸ್ ಬಾಟಲಿಗಳನ್ನು ಹಾಕುತ್ತಿದ್ದರು. ಇನ್ನು ಕೆಲವರು ಆಯುರ್ವೇದ ಅಥವಾ ಹೋಮಿಯೋಪತಿ ಪದವಿ ಹೊಂದಿದ್ದರೂ, ಕಾನೂನುಬಾಹಿರವಾಗಿ ಅಲೋಪತಿ ಚಿಕಿತ್ಸೆ ನೀಡುತ್ತಿದ್ದುದು ಪತ್ತೆಯಾಗಿದೆ.
ಆರೋಗ್ಯ ಇಲಾಖೆಯಿಂದ ಸಾರ್ವಜನಿಕರಿಗೆ ಎಚ್ಚರಿಕೆ: ಜ್ವರ, ಕೆಮ್ಮು ಅಥವಾ ಯಾವುದೇ ಸಣ್ಣಪುಟ್ಟ ಕಾಯಿಲೆ ಬಂದರೂ ಸಿಕ್ಕಸಿಕ್ಕ ಕ್ಲಿನಿಕ್‌ಗಳಿಗೆ ತೆರಳಿ ಚಿಕಿತ್ಸೆ ಪಡೆಯದಂತೆ ಆರೋಗ್ಯ ಇಲಾಖೆ ಸಾರ್ವಜನಿಕರಲ್ಲಿ ಮನವಿ ಮಾಡಿದೆ. ಚಿಕಿತ್ಸೆಗೆ ತೆರಳುವ ಮುನ್ನ ಆಯಾ ಕ್ಲಿನಿಕ್‌ಗಳಲ್ಲಿ ವೈದ್ಯರ ಅಧಿಕೃತ ‘ಮೆಡಿಕಲ್ ಕೌನ್ಸಿಲ್ ನೋಂದಣಿ ಪ್ರಮಾಣಪತ್ರ’ (Medical Council Registration Certificate) ಇದೆಯೇ ಎಂಬುದನ್ನು ಕಡ್ಡಾಯವಾಗಿ ಪರಿಶೀಲಿಸಿಕೊಳ್ಳಲು ಸೂಚಿಸಲಾಗಿದೆ.
Bantawala
ವಿಟ್ಲದ ಖ್ಯಾತ ವೈದ್ಯ ಡಾ. ವಿ.ಕೆ. ಹೆಗ್ಡೆ ಅವರಿಗೆ ಜಿಲ್ಲಾ ರಾಜ್ಯೋತ್ಸವ ಪ್ರಶಸ್ತಿ
ವಿಟ್ಲದ ಖ್ಯಾತ ವೈದ್ಯ, ಪುಷ್ಪಾಕ್ ಹೆಲ್ತ್ ಸೆಂಟರ್ ಸಂಸ್ಥಾಪಕ *ಡಾ. ವಿ.ಕೆ. ಹೆಗ್ಡೆ* ಅವರಿಗೆ ದಕ್ಷಿಣ ಕನ್ನಡ ಜಿಲ್ಲಾ ರಾಜ್ಯೋತ್ಸವ ಪ್ರಶಸ್ತಿ ಲಭಿಸಿದೆ.1987 ರಿಂದ ವಿಟ್ಲದಲ್ಲಿ ನಿರಂತರವಾಗಿ ವೈದ್ಯಕೀಯ ಸೇವೆ ಸಲ್ಲಿಸುತ್ತಾ ಬಂದಿರುವ ಡಾ. ವಿ.ಕೆ. ಹೆಗ್ಡೆ ಅವರ ವೃತ್ತಿಪರ ಪಯಣವು ಗ್ರಾಮೀಣ ಪ್ರದೇಶದಲ್ಲಿ ದೀರ್ಘಕಾಲದ ಪ್ರಾಥಮಿಕ ಆರೋಗ್ಯ ಸೇವೆಯ ನಿರಂತರ ಅಧ್ಯಾಯವಾಗಿದೆ.ವೈದ್ಯಕೀಯ ವೃತ್ತಿಯನ್ನು ಕೇವಲ ಉದ್ಯೋಗವಾಗಿ ಪರಿಗಣಿಸದೆ, ಜನರ ಆರೋಗ್ಯದ ಅಗತ್ಯಗಳಿಗೆ ಸ್ಪಂದಿಸುವ ಮಾನವೀಯ ಸೇವೆಯಾಗಿ ಅವರು ಅಳವಡಿಸಿಕೊಂಡಿದ್ದಾರೆ. ಗ್ರಾಮೀಣ ಹಾಗೂ ಅರೆನಗರ ಪ್ರದೇಶದ ಜನರಿಗೆ ಸಮಗ್ರ ಪ್ರಾಥಮಿಕ ಆರೋಗ್ಯ ಸೇವೆ, ವೈಯಕ್ತಿಕ ವೈದ್ಯಕೀಯ ಕಾಳಜಿ ಮತ್ತು ಮಾನವೀಯ ಸ್ಪಂದನೆಯನ್ನು ನೀಡುತ್ತಾ ಬಂದಿದ್ದಾರೆ.ವೈದ್ಯಕೀಯ ವೃತ್ತಿಯ ಜೊತೆಗೆ ರೋಟರಿ ಹಾಗೂ ವಿವಿಧ ಸಮಾಜಮುಖಿ ಚಟುವಟಿಕೆಗಳ ಮೂಲಕ ಆರೋಗ್ಯ ಮತ್ತು ಸಾಮಾಜಿಕ ಕಲ್ಯಾಣ ಕ್ಷೇತ್ರಗಳಲ್ಲಿಯೂ ದೀರ್ಘಕಾಲದ ಕೊಡುಗೆ ನೀಡಿದ್ದಾರೆ.ವಿಶೇಷವಾಗಿ ಕೋವಿಡ್-19 ಮಹಾಮಾರಿಯ ಸಂಕಷ್ಟದ ಅವಧಿಯಲ್ಲಿ ವೈದ್ಯಕೀಯ ಸೇವೆಯ ನಿರಂತರತೆಯನ್ನು ಕಾಪಾಡಿ, ಅಗತ್ಯವಿರುವ ರೋಗಿಗಳಿಗೆ ಸಲಹೆ, ಚಿಕಿತ್ಸೆ, ಮಾರ್ಗದರ್ಶನ ಮತ್ತು ಸೂಕ್ತ ರೆಫರಲ್ ನೆರವು ನೀಡಿದ ಅವರ ಸೇವಾ ಬದ್ಧತೆಯು ಈ ನಾಮನಿರ್ದೇಶನದ ಪ್ರಮುಖ ಅಂಶವಾಗಿದೆ.
Bantawala
ಒಕ್ಕೆತ್ತೂರು ಸರಕಾರಿ ಶಾಲೆಯ ಮುಖ್ಯ ಶಿಕ್ಷಕಿ ಯಮುನಾ ನಿಧನ: ಶಾಲೆಯಿಂದ ಸಂತಾಪ
ವಿಟ್ಲ: ಬಂಟ್ವಾಳ ತಾಲೂಕು ವಿಟ್ಲ ಕಸಬಾ ಗ್ರಾಮದ ಒಕ್ಕೆತ್ತೂರು ಸರಕಾರಿ ಉನ್ನತೀಕರಿಸಿದ ಹಿರಿಯ ಪ್ರಾಥಮಿಕ ಶಾಲೆಯ ಮುಖ್ಯ ಶಿಕ್ಷಕಿ, ಒಕ್ಕೆತ್ತೂರು ಕೊಣಾಜೆ ನಿವಾಸಿ ಯುಮುನಾ (59) ಅವರು ಇಂದು ಮಧ್ಯಾಹ್ನ ಮಂಗಳೂರಿನ ಆಸ್ಪತ್ರೆಯಲ್ಲಿ ನಿಧನರಾಗಿದ್ದಾರೆ.
ಅನಾರೋಗ್ಯದಿಂದ ನಿಧನ: ಈ ಶೈಕ್ಷಣಿಕ ವರ್ಷದ ಆರಂಭದಲ್ಲಿ ಒಕ್ಕೆತ್ತೂರು ಶಾಲೆಗೆ ಮುಖ್ಯ ಶಿಕ್ಷಕಿಯಾಗಿ ನಿಯುಕ್ತಿಗೊಂಡಿದ್ದ ಯಮುನಾ ಅವರು, ತದನಂತರ ಅನಾರೋಗ್ಯದಿಂದ ಬಳಲುತ್ತಿದ್ದರು. ಹಲವು ಸಮಯಗಳಿಂದ ಅನಾರೋಗ್ಯದ ನಿಮಿತ್ತ ಕರ್ತವ್ಯಕ್ಕೆ ಗೈರುಹಾಜರಾಗಿದ್ದ ಅವರು, ಚಿಕಿತ್ಸೆಗೆ ಸ್ಪಂದಿಸದೆ ಇಂದು ಮಂಗಳೂರಿನ ಆಸ್ಪತ್ರೆಯಲ್ಲಿ ಕೊನೆಯುಸಿರೆಳೆದಿದ್ದಾರೆ.
ಸೇವಾ ವಿವರ: ಉತ್ತಮ ಶಿಕ್ಷಕಿಯಾಗಿ ಹೆಸರಾಗಿದ್ದ ಇವರು ಈ ಹಿಂದೆ ಕಡಂಬು, ಅನಿಲಕಟ್ಟೆ ಸರಕಾರಿ ಶಾಲೆಗಳಲ್ಲಿ ಹಾಗೂ ವಿಟ್ಲದ ಮಾದರಿ ಹಿರಿಯ ಪ್ರಾಥಮಿಕ ಶಾಲೆಯಲ್ಲಿ ಶಿಕ್ಷಕಿಯಾಗಿ ಸೇವೆ ಸಲ್ಲಿಸಿದ್ದರು. ಅಲ್ಲಿಂದ 2026ರ ಎಪ್ರಿಲ್ 19 ರಂದು ಒಕ್ಕೆತ್ತೂರು ಸರಕಾರಿ ಉನ್ನತೀಕರಿಸಿದ ಹಿರಿಯ ಪ್ರಾಥಮಿಕ ಶಾಲೆಗೆ ಮುಖ್ಯ ಶಿಕ್ಷಕಿಯಾಗಿ ವರ್ಗಾವಣೆಗೊಂಡು ಬಂದಿದ್ದರು. ಆದರೆ ಅನಾರೋಗ್ಯದ ಕಾರಣದಿಂದ ಅವರಿಗೆ ಪೂರ್ಣಾವಧಿಯಲ್ಲಿ ಕರ್ತವ್ಯ ನಿರ್ವಹಿಸಲು ಸಾಧ್ಯವಾಗಿರಲಿಲ್ಲ.
ಪರಿವಾರ ಹಾಗೂ ಗಣ್ಯರ ಸಂತಾಪ: ಮೃತರು ಪತಿ, ನಿವೃತ್ತ ಶಿಕ್ಷಕರಾದ ದಾಮೋದರ ಮಾಸ್ಟ್ರು, ಇಬ್ಬರು ಪ್ರತಿಭಾನ್ವಿತ ಮಕ್ಕಳು ಮತ್ತು ಅಪಾರ ಬಂಧು-ಬಳಗ, ವಿದ್ಯಾರ್ಥಿವೃಂದ ಹಾಗೂ ಹಿತೈಷಿಗಳನ್ನು ಅಗಲಿದ್ದಾರೆ. ಶಿಕ್ಷಕಿಯ ನಿಧನಕ್ಕೆ ಶಾಲಾ ಆಡಳಿತ ಮಂಡಳಿಯ ಅಧ್ಯಕ್ಷರಾದ C. H. ಮಹಮ್ಮದ್ ಹಾರೀಸ್ ಮತ್ತು ಸದಸ್ಯರು ತೀವ್ರ ಸಂತಾಪ ಸೂಚಿಸಿದ್ದಾರೆ.

ಶಾಲೆಗೆ ಮಧ್ಯಾಹ್ನದ ಬಳಿಕ ರಜೆ ಮತ್ತು ಅಂತಿಮ ಸಂಸ್ಕಾರ: ಶಿಕ್ಷಕಿಯ ಅಂತಿಮ ಕಾರ್ಯಕ್ರಮದ ನಿಮಿತ್ತ ಪ್ರಭಾರ ಮುಖ್ಯ ಶಿಕ್ಷಕರಾದ ಜಯಪ್ರಕಾಶ್ ಅವರು ಮಧ್ಯಾಹ್ನದ ನಂತರ ಶಾಲೆಗೆ ರಜೆ ಘೋಷಿಸಿದ್ದರು. ಮೃತರ ಅಂತಿಮ ಸಂಸ್ಕಾರವು ಅವರ ತಾಯಿ ಮನೆಯಾದ ಮೂಡಬಿದ್ರೆಯಲ್ಲಿ ನಡೆಯಲಿದ್ದು, ಪಾರ್ಥಿವ ಶರೀರವನ್ನು ಅಲ್ಲಿಗೆ ರವಾನಿಸಲಾಗಿದೆ. ಶಾಲಾ ಶಿಕ್ಷಕ ವೃಂದ ಹಾಗೂ ಆಡಳಿತ ಮಂಡಳಿಯವರು ಅಂತಿಮ ಸಂಸ್ಕಾರದಲ್ಲಿ ಭಾಗವಹಿಸಲು ತೆರಳಿದ್ದಾರೆ
Article
ಬಂಟ್ವಾಳ ಸರ್ಕಾರಿ ಆಸ್ಪತ್ರೆಯ ಶವಾಗಾರದ ದುಸ್ಥಿತಿ: ಹೆಸರಿಗಷ್ಟೇ ತಾಲೂಕು ಆಸ್ಪತ್ರೆ, ಆಧುನಿಕ ಶೈತ್ಯಾಗಾರ, ಮೂಲಭೂತ ಸೌಕರ್ಯಗಳೇ ಇಲ್ಲದ ಶವಾಗಾರ.!
ಬಂಟ್ವಾಳ: ಹೆಸರಿಗೇನೋ ತಾಲೂಕು ಸರ್ಕಾರಿ ಆಸ್ಪತ್ರೆ, ಆದರೆ ಮೂಲಭೂತ ಸೌಕರ್ಯವಿಲ್ಲದೇ ಮೃತರ ವಾರಸುದಾರರು, ಪೊಲೀಸ್ ಸಿಬ್ಬಂದಿ ನರಕಯಾತನೆ ಅನುಭವಿಸುತ್ತಿರುವ ದುಸ್ಥಿತಿ ಬಂಟ್ವಾಳ ಸರ್ಕಾರಿ ಆಸ್ಪತ್ರೆಯ ಶವಾಗಾರದ್ದು.
ಪ್ರತಿನಿತ್ಯ ಅಪಘಾತ, ಆತ್ಮಹತ್ಯೆ ಪ್ರಕರಣಗಳು ಸಂಭವಿಸಿದರೆ ಮರಣೋತ್ತರ ಪರೀಕ್ಷೆ ನಡೆಯುವುದು ಬಂಟ್ವಾಳ ಸರ್ಕಾರಿ ಆಸ್ಪತ್ರೆಯಲ್ಲಿಯೇ. ಆದರೆ ಇಲ್ಲಿ ಪೊಲೀಸರು ಪ್ರಕರಣ ದಾಖಲಿಸಿ ವರದಿ ಬರೆಯಲು ಕುಳಿತುಕೊಳ್ಳಲು ಒಂದು ಬೆಂಚ್ ಕೂಡ ಇಲ್ಲ. ಮೃತರ ಸಂಬಂಧಿಕರು ಗಂಟೆಗಟ್ಟಲೆ ನಿಂತುಕೊಂಡೇ ಕಾಲಹರಣ ಮಾಡಬೇಕಾದ ಸ್ಥಿತಿ.
ಪೊಲೀಸರು ವರದಿ ಬರೆಯಬೇಕಾದರೆ ನೆಲದಲ್ಲಿ ಕುಳಿತುಕೊಳ್ಳಬೇಕು, ಇಲ್ಲದಿದ್ದರೆ ಸಹೋದ್ಯೋಗಿಯ ಬೆನ್ನ ಮೇಲೆ ಫೈಲ್ ಇಟ್ಟು ಬರೆಯುವ ಅನಿವಾರ್ಯತೆ ಇದೆ. ಗ್ರಾಮೀಣ ಆಸ್ಪತ್ರೆಗಳ ಶವಾಗಾರದ ಮುಂದೆ ಕನಿಷ್ಠ ತಗಡಿನ ಮೇಲ್ಛಾವಣಿ, ಕಲ್ಲಿನ ಬೆಂಚ್ ಆದರೂ ಇರುತ್ತದೆ. ಆದರೆ ತಾಲೂಕು ಕೇಂದ್ರದ ಆಸ್ಪತ್ರೆಯಲ್ಲಿ ಅದೂ ಇಲ್ಲ ಎಂದು ಮೃತರ ಸಂಬಂಧಿಕರು ಶಾಸಕರು, ವೈದ್ಯಾಧಿಕಾರಿಗಳಿಗೆ ಹಿಡಿಶಾಪ ಹಾಕುತ್ತಿದ್ದಾರೆ. ಇಲ್ಲಿನ ಸರ್ಕಾರಿ ಆಸ್ಪತ್ರೆಯ ವಠಾರದಲ್ಲಿ ಹುಲ್ಲು, ಗಿಡ-ಪೊದೆಗಳು ಬೆಳೆದು ಇದೇನು ಸಫಾರಿಗೆ ಹೋಗುವ ಮೃಗಾಲಯವೋ ಆಥವಾ ತಾಲೂಕು ಸರ್ಕಾರಿ ಆಸ್ಪತ್ರೆಯೋ ಎಂಬುದು ಅರ್ಥವಾಗುತ್ತಿಲ್ಲ. ಡ್ರೈನೇಜ್ ಕಚಳಚೆ ನೀರು ರಸ್ತೆಯ ಮೇಲೆಯೇ ಬಂದು ಬೀಳುತ್ತಿದೆ. ಇಲ್ಲಿ ಕರ್ತವ್ಯ ನಿರ್ವಹಿಸುವುದು ವೈದ್ಯರೋ ಅಥವಾ ಅನಕ್ಷರಸ್ಥರೋ ಎಂಬುದು ಪ್ರಶ್ನಿಸುವಂತಾಗಿದೆ.
ಇಂತಹ ಅವ್ಯವಸ್ಥೆಯ ಬಗ್ಗೆ ಈವರೆಗೆ ಬೆಳಕು ಚೆಲ್ಲದ ಮಾಧ್ಯಮಗಳ ವಿರುದ್ಧವೂ ಜನ ಆಕ್ರೋಶ ವ್ಯಕ್ತಪಡಿಸುತ್ತಿದ್ದಾರೆ. ಇನ್ನಾದರೂ ತಾಲೂಕು ವೈದ್ಯಾಧಿಕಾರಿಗಳು, ಜನಪ್ರತಿನಿಧಿಗಳು ಎಚ್ಚೆತ್ತುಕೊಂಡು ಶವಾಗಾರದ ಮುಂದೆ ಕುಳಿತುಕೊಳ್ಳುವ ವ್ಯವಸ್ಥೆ ಮಾಡುತ್ತಾರೋ ಕಾದು ನೋಡಬೇಕಾಗಿದೆ
-
accident3 months agoಬಿ.ಸಿ. ರೋಡ್ ಸರ್ಕಲ್ನಲ್ಲಿ ಭೀಕರ ಅಪಘಾತ: ಟಿಪ್ಪರ್-ಆಕ್ಟಿವಾ ನಡುವೆ ಡಿಕ್ಕಿ, ಸವಾರರಿಬ್ಬರೂ ದುರ್ಮರಣ
-
Bantawala4 months agoಬಂಟ್ವಾಳದಲ್ಲಿ ಭೀಕರ ಹತ್ಯಾಕಾಂಡ: ಬಸ್ನಲ್ಲಿ ಕುಳಿತಿದ್ದ ಯುವತಿಯನ್ನು ಸಾರ್ವಜನಿಕರೆದುರೇ ಕೊಚ್ಚಿ ಕೊಂದ ತಲೆಹರಟೆ ಪ್ರೇಮಿ!
-
crime9 months agoಅತ್ಯಾಚಾರ ಯತ್ನಕ್ಕೆ ತಡೆದ ಸೊಸೆಯ ಮುಖಕ್ಕೆ ಕಚ್ಚಿ ಕೊಲೆಗೆ ಯತ್ನಿಸಿದ ಮಾವ..ತಂದೆಯ ರಾಕ್ಷಸೀ ಕೃತ್ಯಕ್ಕೆ ಬೆಂಬಲಿಸಿದ ಗಂಡ..ಸುಳ್ಯ ಠಾಣಾ ವ್ಯಾಪ್ತಿಯಲ್ಲಿ ಅದೃಷ್ಟವಶಾತ್ ಬಚಾವಾದ ಸೊಸೆ..
-
crime7 months agoಧಾರ್ಮಿಕ ನಂಬಿಕೆಗೆ ಅವಮಾನ: ಕೊಡಗಿನ ಎಮ್ಮೆಮಾಡಿನಲ್ಲಿ ದೈವದ ವೇಷದಂತೆ ಧರಿಸಿ ಮದುಮಗನ ಅತಿರೇಕದ ವರ್ತನೆ!
-
Bantawala7 months agoವಿಟ್ಲದಲ್ಲಿ ನಡೆಯಿತೊಂದು ದೈವ ಕಾರಣಿಕ; ಪೊಲೀಸರ ಕಣ್ಣಿಗೆ ಮಣ್ಣೆರಚಿದರೂ ದೈವದ ದೃಷ್ಟಿಗೆ ತತ್ತರಿಸಿದ ದನಕಳ್ಳ..
-
Bantawala10 months agoನಾಗಬನ, ರಕ್ತೇಶ್ವರಿ ತಾಣ, ದೈವದೇವರ ಸಾನಿಧ್ಯ ದ್ವಂಸ ಗೊಳಿಸಿದ ಧರ್ಮದ್ರೋಹಿ ಕೃತ್ಯದ ವಿರುದ್ಧ ಭಕ್ತರ ಆಕ್ರೋಶ ; ನಾಶವಾದ ಸಾನಿಧ್ಯದಲ್ಲಿಯೇ ಸ್ವಾಮೀಜಿಯವರ ಮಾರ್ಗದರ್ಶನದಲ್ಲಿ ಕುಟುಂಬಸ್ತರು, ಸಾರ್ವಜನಿಕರ ಸಾಮೂಹಿಕ ಪ್ರಾರ್ಥನೆ
-
accident4 months agoBreaking: ಬಂಟ್ವಾಳದಲ್ಲಿ ಶಾಲಾ ಬಸ್ ಮೇಲೆ ಉರುಳಿದ ಬೃಹತ್ ಮರ; ಕಲ್ಲಡ್ಕ ಶ್ರೀರಾಮ ಶಾಲೆಯ ಓರ್ವ ವಿದ್ಯಾರ್ಥಿ ಸಾವು, ಕೆಲವರು ಗಂಭೀರ, ಹಲವರಿಗೆ ಗಾಯ!
-
accident6 months agoವಿಟ್ಲ ಆಕಾಶದಲ್ಲಿ ಹಾರಾಡಿದ ವಿಮಾನ: ತಾಂತ್ರಿಕ ದೋಷವಲ್ಲ, ಹವಾಮಾನ ವೈಪರೀತ್ಯದ ಕಾರಣ ! ಸಾರ್ವಜನಿಕರು ಆತಂಕ ಪಡುವ ಅಗತ್ಯವಿಲ್ಲ
