Dakshina Kannada
ದ.ಕ. ಜಿಲ್ಲೆಯಲ್ಲಿ ಇನ್‌ಫ್ಲುಯೆಂಜಾ ಆತಂಕ: 87 ಪ್ರಕರಣ ದೃಢ, ಮಂಗಳೂರಿನಲ್ಲೇ 60 ಕೇಸ್
ದಕ್ಷಿಣ ಕನ್ನಡ ಜಿಲ್ಲೆಯಲ್ಲಿ ಇನ್‌ಫ್ಲುಯೆಂಜಾ (ಋತುಮಾನದ ಜ್ವರ) ಭೀತಿ ಎದುರಾಗಿದ್ದು, ಜಿಲ್ಲೆಯಲ್ಲಿ ಒಟ್ಟು 87 ಪ್ರಕರಣಗಳು ದೃಢಪಟ್ಟಿವೆ. ಅದರಲ್ಲಿಯೂ ಮಂಗಳೂರು ನಗರದಲ್ಲೇ ಅತಿ ಹೆಚ್ಚು ಅಂದರೆ 60 ಪ್ರಕರಣಗಳು ದಾಖಲಾಗಿರುವುದು ಆತಂಕ ಮೂಡಿಸಿದೆ.
ಬಾಡದ ಬಿಸಿಲು ಹಾಗೂ ಮಳೆಯ ಅಸ್ಥಿರ ವಾತಾವರಣದ ವೈಪರೀತ್ಯದಿಂದಾಗಿ ಸಾಂಕ್ರಾಮಿಕ ರೋಗಗಳು ಹರಡುತ್ತಿದ್ದು, ರಾಜ್ಯದಲ್ಲಿ ಈಗಾಗಲೇ 4,000ಕ್ಕೂ ಅಧಿಕ ಎಚ್1ಎನ್1 ಪ್ರಕರಣಗಳು ವರದಿಯಾಗಿವೆ. ಉಡುಪಿ ಜಿಲ್ಲೆಯಲ್ಲೂ 300ಕ್ಕೂ ಹೆಚ್ಚು ಪ್ರಕರಣಗಳು ಪತ್ತೆಯಾಗಿವೆ. ಇದಕ್ಕೆ ಹೋಲಿಸಿದರೆ ದಕ್ಷಿಣ ಕನ್ನಡ ಜಿಲ್ಲೆಯಲ್ಲಿ ಪರಿಸ್ಥಿತಿ ತುಸು ನಿಯಂತ್ರಣದಲ್ಲಿದ್ದರೂ, ತಾಲೂಕುವಾರು ಪ್ರಕರಣಗಳು ಆತಂಕ ಹುಟ್ಟಿಸುವಂತಿವೆ.
ತಾಲೂಕುವಾರು ಪ್ರಕರಣಗಳ ವಿವರ:
- ಮಂಗಳೂರು: 60
- ಬಂಟ್ವಾಳ: 14
- ಪುತ್ತೂರು: 7
- ಬೆಳ್ತಂಗಡಿ: 5
- ಸುಳ್ಯ: 1
ಸಾಮಾನ್ಯವಾಗಿ ‘ಫ್ಲೂ’ ಎಂದೇ ಕರೆಯಲ್ಪಡುವ ಈ ಋತುಮಾನದ ಜ್ವರವು ವೈರಸ್‌ನಿಂದ ಹರಡುವ ಸಾಂಕ್ರಾಮಿಕ ಕಾಯಿಲೆಯಾಗಿದೆ. ಇದು ಪ್ರತಿವರ್ಷ ಜನವರಿಯಿಂದ ಮಾರ್ಚ್ ಹಾಗೂ ಜುಲೈನಿಂದ ಸೆಪ್ಟೆಂಬರ್ ಅವಧಿಯಲ್ಲಿ ಹೆಚ್ಚಾಗಿ ಕಾಣಿಸಿಕೊಳ್ಳುತ್ತದೆ ಎಂದು ಆರೋಗ್ಯ ಇಲಾಖೆ ಎಚ್ಚರಿಸಿದೆ.
ಶಾಲೆಗಳ ಮೇಲೆ ವಿಶೇಷ ನಿಗಾ: ರೋಗನಿರೋಧಕ ಶಕ್ತಿ ಕಡಿಮೆ ಇರುವ ಕಾರಣ ಮಕ್ಕಳಿಗೆ ಈ ಜ್ವರ ಬೇಗನೆ ತಗುಲುವ ಸಾಧ್ಯತೆಯಿದೆ. ಮಕ್ಕಳಲ್ಲಿ ಸತತ ಜ್ವರ ಅಥವಾ ಚಳಿ ಕಂಡುಬಂದ ಕೂಡಲೇ ಪೋಷಕರು ವೈದ್ಯರನ್ನು ಸಂಪರ್ಕಿಸಬೇಕು. ಜ್ವರ ಸಂಪೂರ್ಣವಾಗಿ ಗುಣಮುಖವಾಗುವವರೆಗೆ ಅಂಥ ಮಕ್ಕಳನ್ನು ಶಾಲೆಗೆ ಕಳುಹಿಸದಂತೆ ಸೂಚಿಸಲಾಗಿದೆ. ಈ ನಿಟ್ಟಿನಲ್ಲಿ ಶಾಲಾ-ಕಾಲೇಜು ಹಾಗೂ ವಸತಿ ನಿಲಯಗಳಲ್ಲಿ ವಿಶೇಷ ನಿಗಾ ವಹಿಸುವಂತೆ ಆರೋಗ್ಯ ಇಲಾಖೆಯು ಶಿಕ್ಷಣ ಇಲಾಖೆಗೆ ಪತ್ರ ಬರೆದಿದೆ.
ಜಿಲ್ಲೆಯಲ್ಲಿ ಐಎಲ್‌ಐ (ಇನ್‌ಫ್ಲುಯೆಂಜಾ ಲೈಕ್ ಇಲ್ನೆಸ್) ಮತ್ತು ಸಾರಿ (ತೀವ್ರ ಉಸಿರಾಟದ ಸೋಂಕು) ಪ್ರಕರಣಗಳ ಮೇಲೂ ಹದ್ದಿನ ಕಣ್ಣಿಡಲಾಗಿದೆ. ಆಶಾ ಕಾರ್ಯಕರ್ತೆಯರು ಮನೆ ಮನೆಗೆ ಭೇಟಿ ನೀಡಿ ರೋಗಿಗಳ ಪಟ್ಟಿ ಸಿದ್ಧಪಡಿಸುತ್ತಿದ್ದು, ಸ್ಥಳೀಯ ಪ್ರಾಥಮಿಕ ಆರೋಗ್ಯ ಕೇಂದ್ರಗಳ ಮೂಲಕ ಸೂಕ್ತ ಜಾಗೃತಿ ಮತ್ತು ಚಿಕಿತ್ಸೆ ನೀಡಲಾಗುತ್ತಿದೆ ಎಂದು ಆರೋಗ್ಯ ಇಲಾಖೆ ತಿಳಿಸಿದೆ.
ಆರೋಗ್ಯಾಧಿಕಾರಿಗಳ ಮಾತು: “ಸಾರ್ವಜನಿಕರು ಆತಂಕಪಡುವ ಅಗತ್ಯವಿಲ್ಲ, ಆದರೆ ಮುನ್ನೆಚ್ಚರಿಕೆ ವಹಿಸುವುದು ಕಡ್ಡಾಯ. ಆರೋಗ್ಯ ಇಲಾಖೆಯಿಂದ ಅಗತ್ಯವಿರುವ ಎಲ್ಲಾ ಮುನ್ನೆಚ್ಚರಿಕೆ ಕೈಗೊಳ್ಳಲಾಗಿದ್ದು, ಆಸ್ಪತ್ರೆಗಳಲ್ಲಿ ಸಾಕಷ್ಟು ಔಷಧ ದಾಸ್ತಾನು ಲಭ್ಯವಿದೆ” ಎಂದು ದ.ಕ. ಜಿಲ್ಲಾ ಆರೋಗ್ಯಾಧಿಕಾರಿ ಡಾ. ಎಚ್.ಆರ್. ತಿಮ್ಮಯ್ಯ ಸ್ಪಷ್ಟಪಡಿಸಿದ್ದಾರೆ.
ಅನುಸರಿಸಬೇಕಾದ ಮುನ್ನೆಚ್ಚರಿಕೆ ಕ್ರಮಗಳು:
- ರೋಗ ಲಕ್ಷಣಗಳಿರುವ ವ್ಯಕ್ತಿಗಳೊಂದಿಗೆ ಕೈಕುಲುಕುವುದನ್ನು ತಪ್ಪಿಸಿ.
- ಹೆಚ್ಚು ಜನಸಂದಣಿ ಇರುವ ಪ್ರದೇಶಗಳಿಗೆ ತೆರಳುವುದನ್ನು ಆದಷ್ಟುAvoiding ಮಾಡಿ.
- ಬಳಸಿದ ಕರವಸ್ತ್ರ ಅಥವಾ ನ್ಯಾಪ್‌ಕಿನ್‌ಗಳನ್ನು ಮರುಬಳಕೆ ಮಾಡಬೇಡಿ.
- ಮಕ್ಕಳು, ಗರ್ಭಿಣಿಯರು, ಬಾಣಂತಿಯರು ಮತ್ತು ಹಿರಿಯರು ಹೆಚ್ಚಿನ ಜಾಗರೂಕತೆ ವಹಿಸಿ.
- ಸೀನುವಾಗ ಅಥವಾ ಕೆಮ್ಮುವಾಗ ಬಾಯಿ ಹಾಗೂ ಮೂಗಿಗೆ ಕರವಸ್ತ್ರ ಅಡ್ಡವಿಟ್ಟುಕೊಳ್ಳಿ.
- ಸಾಬೂನು ಮತ್ತು ಬಳಸಿ ಕೈಗಳನ್ನು ಆಗಾಗ್ಗೆ ಸ್ವಚ್ಛವಾಗಿ ತೊಳೆದುಕೊಳ್ಳಿ.
- ದಿನವಿಡೀ ಸಾಕಷ್ಟು ಪ್ರಮಾಣದಲ್ಲಿ ನೀರು ಕುಡಿಯಿರಿ.
- ಕಣ್ಣು, ಮೂಗು ಮತ್ತು ಬಾಯಿಯನ್ನು ಪದೇ ಪದೇ ಕೈಯಿಂದ ಮುಟ್ಟಿಕೊಳ್ಳಬೇಡಿ.
- ಎರಡರಿಂದ ಮೂರು ದಿನ ಕಳೆದರೂ ಜ್ವರ ಕಡಿಮೆSಆದರೆ ನಿರ್ಲಕ್ಷಿಸದೆ ವೈದ್ಯಕೀಯ ತಪಾಸಣೆ ಮಾಡಿಸಿಕೊಳ್ಳಿ.
- ವೈದ್ಯರ ಸಲಹೆಯಿಲ್ಲದೆ ಯಾವುದೇ ಸ್ವಯಂ ಔಷಧೋಪಚಾರ (ಮೆಡಿಕಲ್ ಸ್ಟೋರ್‌ಗಳಲ್ಲಿ ಮಾತ್ರೆ ಪಡೆದು ನುಂಗುವುದು) ಮಾಡಿಕೊಳ್ಳಬೇಡಿ
award
ಮುಂಬೈನಲ್ಲಿ ಸಾರ್ವಜನಿಕ ಸೇವೆ ಮತ್ತು ಫಿಟ್ನೆಸ್ ಸಾಧನೆಯ ಹೈರಾಕ್ಸ್: ದಕ್ಷಿಣ ಕನ್ನಡ ಜಿಲ್ಲಾಧಿಕಾರಿ ದರ್ಶನ್ ಎಚ್.ವಿ. ಯಶಸ್ಸು
ಮುಂಬೈ: ಆಡಳಿತದ ಬಿಡುವಿಲ್ಲದ ಜವಾಬ್ದಾರಿಗಳ ನಡುವೆಯೂ ದಕ್ಷಿಣ ಕನ್ನಡ ಜಿಲ್ಲಾಧಿಕಾರಿ ದರ್ಶನ್ ಎಚ್.ವಿ. ಅವರು ಜಾಗತಿಕ ಮಟ್ಟದ ಪ್ರತಿಷ್ಠಿತ ‘ಹೈರಾಕ್ಸ್’ (HYROX) ಫಿಟ್ನೆಸ್ ರೇಸ್ ಅನ್ನು ಯಶಸ್ವಿಯಾಗಿ ಪೂರ್ಣಗೊಳಿಸುವ ಮೂಲಕ ಮಾದರಿಯಾಗಿದ್ದಾರೆ.
ಮುಂಬೈನ ಎನ್‌ಇಎಸ್‌ಸಿಒ (NESCO) ಹಾಲ್‌ನಲ್ಲಿ ಆಯೋಜನೆಗೊಂಡಿದ್ದ ಈ ಕಠಿಣ ಸ್ಪರ್ಧೆಯಲ್ಲಿ ದೇಶ-ವಿದೇಶಗಳ ಸಾವಿರಾರು ಫಿಟ್ನೆಸ್ ಉತ್ಸಾಹಿಗಳು ಭಾಗವಹಿಸಿದ್ದರು. ಈ ಸಾಹಸಮಯ ರೇಸ್‌ನಲ್ಲಿ ದಕ್ಷಿಣ ಕನ್ನಡ ಜಿಲ್ಲಾಧಿಕಾರಿಗಳೊಂದಿಗೆ ಮಂಗಳೂರಿನ ಖ್ಯಾತ ಫಿಟ್ನೆಸ್ ತರಬೇತುದಾರ ಹಾಗೂ ಪವರ್‌ಲಿಫ್ಟರ್ ಪ್ರದೀಪ್ ಕುಮಾರ್ ಆಚಾರ್ಯ ಕೂಡ ಸಾಥ್ ನೀಡಿ ಯಶಸ್ಸು ಸಾಧಿಸಿದ್ದಾರೆ.
ಏನಿದು ಹೈರಾಕ್ಸ್ (HYROX)?
ವಿಶ್ವದ ಅತಿದೊಡ್ಡ ಫಿಟ್ನೆಸ್ ರೇಸ್ ಎಂದು ಖ್ಯಾತಿ ಪಡೆದಿರುವ ಹೈರಾಕ್ಸ್, ಅತ್ಯಂತ ಕಠಿಣ ಹಾಗೂ ಸವಾಲಿನ ಸ್ಪರ್ಧೆಯಾಗಿದೆ. ಇದು ಒಟ್ಟು 8 ಕಿ.ಮೀ. ಓಟ ಮತ್ತು 8 ವಿವಿಧ ಫಂಕ್ಷನಲ್ ವರ್ಕೌಟ್ ಸ್ಟೇಷನ್‌ಗಳನ್ನು ಒಳಗೊಂಡಿರುತ್ತದೆ.
ಈ ಸವಾಲಿನಲ್ಲಿ ಸ್ಪರ್ಧಾಳುಗಳು ಸ್ಕೀ ಎರ್ಗ್ (SkiErg), ಸ್ಲೆಡ್ ಪುಶ್, ಸ್ಲೆಡ್ ಪುಲ್, ಬರ್ಪಿ ಬ್ರಾಡ್ ಜಂಪ್, ರೋಯಿಂಗ್, ಫಾರ್ಮರ್ಸ್ ಕ್ಯಾರಿ, ಸ್ಯಾಂಡ್‌ಬ್ಯಾಗ್ ಲುಂಜಸ್ ಮತ್ತು ವಾಲ್ ಬಾಲ್‌ನಂತಹ ಕಠಿಣ ಹಂತಗಳನ್ನು ಪೂರ್ಣಗೊಳಿಸಬೇಕಾಗುತ್ತದೆ. ಜಾಗತಿಕ ಮಟ್ಟದಲ್ಲಿ ಜನಪ್ರಿಯಗೊಂಡಿರುವ ಈ ರೇಸ್, 2025ರ ಮೇ ತಿಂಗಳಲ್ಲಿ ಮುಂಬೈ ಮೂಲಕ ಭಾರತಕ್ಕೆ ಪಾದಾರ್ಪಣೆ ಮಾಡಿತ್ತು.
ಆಡಳಿತದ ಜೊತೆ ಫಿಟ್ನೆಸ್‌ಗೆ ಒತ್ತು
2016ನೇ ಬ್ಯಾಚ್‌ನ ಐಎಎಸ್ ಅಧಿಕಾರಿಯಾದ ದರ್ಶನ್ ಎಚ್.ವಿ. ಅವರು 2025ರ ಜೂನ್ 18ರಂದು ದಕ್ಷಿಣ ಕನ್ನಡ ಜಿಲ್ಲೆಯ 134ನೇ ಜಿಲ್ಲಾಧಿಕಾರಿಯಾಗಿ ಅಧಿಕಾರ ವಹಿಸಿಕೊಂಡಿದ್ದರು. ದೈನಂದಿನ ಕಚೇರಿ ಕೆಲಸಗಳು, ಸಾರ್ವಜನಿಕ ಸಮಸ್ಯೆಗಳ ನಿವಾರಣೆ ಹಾಗೂ ಆಡಳಿತಾತ್ಮಕ ಬಿಡುವಿಲ್ಲದ ಒತ್ತಡದ ನಡುವೆಯೂ ಫಿಟ್ನೆಸ್ ಕಾಯ್ದುಕೊಂಡಿರುವ ಇವರ ಹೈರಾಕ್ಸ್ ಸಾಧನೆ ಎಲ್ಲೆಡೆ ಮೆಚ್ಚುಗೆಗೆ ಪಾತ್ರವಾಗಿದೆ.
ಇವರೊಂದಿಗೆ ಹೆಜ್ಜೆಹಾಕಿದ ಪ್ರದೀಪ್ ಕುಮಾರ್ ಆಚಾರ್ಯ ಅವರು ಮಂಗಳೂರಿನ ಹೆಸರಾಂತ ಪವರ್‌ಲಿಫ್ಟರ್ ಆಗಿದ್ದು, ಕಾಮನ್‌ವೆಲ್ತ್ ಪವರ್‌ಲಿಫ್ಟಿಂಗ್ ಮತ್ತು ಬೆಂಚ್ ಪ್ರೆಸ್ ಚಾಂಪಿಯನ್‌ಶಿಪ್‌ನಲ್ಲಿ ಚಿನ್ನದ ಪದಕ ಗೆದ್ದು ದೇಶಕ್ಕೆ ಕೀರ್ತಿ ತಂದವರು. ಪ್ರಸ್ತುತ ಮಂಗಳೂರಿನಲ್ಲಿ ನೂರಾರು ಯುವಕರಿಗೆ ಫಿಟ್ನೆಸ್ ತರಬೇತುದಾರರಾಗಿ ಮಾರ್ಗದರ್ಶನ ನೀಡುತ್ತಿದ್ದಾರೆ.
ಜಿಲ್ಲಾ ಆಡಳಿತದ ಚುಕ್ಕಾಣಿ ಹಿಡಿದು ಆರೋಗ್ಯಕರ ಬದುಕಿಗೆ ಮುಂಚೂಣಿಯಲ್ಲಿ ನಿಂತಿರುವ ಜಿಲ್ಲಾಧಿಕಾರಿ ದರ್ಶನ್ ಎಚ್.ವಿ. ಅವರ ಈ ಸಾಧನೆ, ದಕ್ಷಿಣ ಕನ್ನಡ ಜಿಲ್ಲೆಯ ಯುವಜನತೆಗೆ ಫಿಟ್ನೆಸ್ ಮತ್ತು ಶಿಸ್ತಿನ ಬಗ್ಗೆ ದೊಡ್ಡ ಮಟ್ಟದ ಪ್ರೇರಣೆ ನೀಡಿದೆ
accident
ಬ್ರೇಕಿಂಗ್ ನ್ಯೂಸ್: ಕಾರ್ಕಳ – ಮೂಡುಬಿದ್ರೆ ಹೆದ್ದಾರಿಯಲ್ಲಿ ಭೀಕರ ರಸ್ತೆ ಅಪಘಾತ; ಮಾಜಿ ಸಚಿವ ರಮಾನಾಥ ರೈ ಹಾಗೂ ಕಾರು ಚಾಲಕ ಪ್ರಾಣಾಪಾಯದಿಂದ ಪಾರು
ಕಾರ್ಕಳ: ಕಾರ್ಕಳ-ಮೂಡುಬಿದ್ರೆ ಹೆದ್ದಾರಿಯ ಸಾಣೂರು ಜಂಕ್ಷನ್ ಬಳಿ ಸಂಭವಿಸಿದ ಭೀಕರ ರಸ್ತೆ ಅಪಘಾತದಲ್ಲಿ ಮಾಜಿ ಸಚಿವ ಹಾಗೂ ಹಿರಿಯ ಕಾಂಗ್ರೆಸ್ ಮುಖಂಡ ಬಿ. ರಮಾನಾಥ ರೈ ಹಾಗೂ ಅವರ ಕಾರು ಚಾಲಕ ಪ್ರಾಣಾಪಾಯದಿಂದ ಪಾರಾಗಿದ್ದಾರೆ.

ಕಾರ್ಕಳದಿಂದ ಮೂಡುಬಿದ್ರೆಯತ್ತ ವೇಗವಾಗಿ ಸಾಗುತ್ತಿದ್ದ ಖಾಸಗಿ ಬಸ್ ಮತ್ತು ರಮಾನಾಥ ರೈ ಅವರು ಪ್ರಯಾಣಿಸುತ್ತಿದ್ದ ಇನ್ನೋವಾ ಕಾರಿನ (KA 70 A 0099) ನಡುವೆ ಮುಖಾಮುಖಿ ಭೀಕರ ಡಿಕ್ಕಿ ಸಂಭವಿಸಿದೆ.

ಘಟನೆಯ ವಿವರ ಹಾಗೂ ರಕ್ಷಣಾ ಕಾರ್ಯ: ಅಪಘಾತದ ರಭಸಕ್ಕೆ ಕಾರಿನ ಮುಂಭಾಗ ಸಂಪೂರ್ಣ ನಜ್ಜುಗುಜ್ಜಾಗಿದ್ದು, ಗಾಜುಗಳು ಪುಡಿಯಾಗಿವೆ. ಕಾರಿನ ಒಳಗೆ ಏರ್‌ಬ್ಯಾಗ್‌ಗಳು ತೆರೆದುಕೊಂಡಿದ್ದರೂ ಸಹ, ಡಿಕ್ಕಿಯ ತೀವ್ರತೆಯಿಂದಾಗಿ ಮುಂಭಾಗದಲ್ಲಿ ಕುಳಿತಿದ್ದ ಮಾಜಿ ಸಚಿವ ರಮಾನಾಥ ರೈ ಹಾಗೂ ಕಾರು ಚಾಲಕ ಒಳಗೆ ಸಿಲುಕಿಕೊಂಡಿದ್ದರು. ಘಟನಾ ಸ್ಥಳದಲ್ಲಿದ್ದ ಸ್ಥಳೀಯರು ಮತ್ತು ಸಾರ್ವಜನಿಕರು ತಕ್ಷಣವೇ ಧಾವಿಸಿ ಬಂದು, ಅತ್ಯಂತ ಪ್ರಯಾಸಪಟ್ಟು ಅವರನ್ನ ಕಾರಿನಿಂದ ಹೊರತೆಗೆದಿದ್ದಾರೆ.

ಆಸ್ಪತ್ರೆಗೆ ದಾಖಲು: ಅಪಘಾತದಲ್ಲಿ ಗಾಯಗೊಂಡಿರುವ ರಮಾನಾಥ ರೈ ಹಾಗೂ ಕಾರು ಚಾಲಕರನ್ನು ತಕ್ಷಣವೇ ಪ್ರಾಥಮಿಕ ಚಿಕಿತ್ಸೆ ನೀಡಿ, ಹೆಚ್ಚಿನ ಚಿಕಿತ್ಸೆಗಾಗಿ ಮಂಗಳೂರಿನ ಆಸ್ಪತ್ರೆಗೆ ದಾಖಲಿಸಲಾಗಿದೆ. ಅದೃಷ್ಟವಶಾತ್ ಇಬ್ಬರೂ ಪ್ರಾಣಾಪಾಯದಿಂದ ಪಾರಾಗಿದ್ದಾರೆ ಎಂದು ತಿಳಿದುಬಂದಿದೆ. ಬಸ್ ಹಾಗೂ ಕಾರಿನಲ್ಲಿದ್ದ ಇತರೆ ಕೆಲವು ಪ್ರಯಾಣಿಕರಿಗೂ ಸಣ್ಣಪುಟ್ಟ ಗಾಯಗಳಾಗಿದ್ದು, ಸ್ಥಳೀಯರು ಅವರನ್ನು ಆಸ್ಪತ್ರೆಗೆ ಸೇರಿಸಲು ನೆರವಾಗಿದ್ದಾರೆ.
ರಮಾನಾಥ ರೈಯವರು ಒಡಿಯೂರಿನಲ್ಲಿ ನಡೆದ ಒಡಿಯೂರು ಶ್ರೀ ವಿಕಾಸವಾಹಿನಿ ಸಂಭ್ರಮ ಹಾಗೂ ನೇರಳಕಟ್ಟೆಯ ಕಾರ್ಯಕ್ರಮದಲ್ಲಿ ಪಾಲ್ಗೊಂಡು, ಮಂಗಳೂರಿನ ಕಾರ್ಯಕ್ರಮದ ಮುಗಿಸಿ ಕಾರ್ಕಳದ ಮತ್ತೊಂದು ಸಮಾರಂಭಕ್ಕೆ ತೆರಳುತ್ತಿದ್ದ ವೇಳೆ ಈ ದುರ್ಘಟನೆ ಸಂಭವಿಸಿದೆ.
ಘಟನಾ ಸ್ಥಳಕ್ಕೆ ಪೊಲೀಸರು ಭೇಟಿ ನೀಡಿ ಪರಿಶೀಲನೆ ನಡೆಸುತ್ತಿದ್ದು, ಪ್ರಕರಣ ದಾಖಲಿಸಿಕೊಂಡಿದ್ದಾರೆ.
CONGRESS
ಮಂಗಳೂರು ಹಳೆ ಬಂದರು ಪ್ರದೇಶಕ್ಕೆ ಸಿಎಂ ಭೇಟಿ: ಮೀನುಗಾರಿಕೆ ವ್ಯವಹಾರ ಸ್ಥಗಿತಗೊಳಿಸಿದ್ದಕ್ಕೆ ಆಕ್ರೋಶ, ತನಿಖೆಗೆ ಆದೇಶ
ಮಂಗಳೂರು, ಸೆ. 19: ಸಚಿವ ಸಂಪುಟ ಸಭೆಯ ಹಿನ್ನೆಲೆಯಲ್ಲಿ ಶನಿವಾರ ಬೆಳಗ್ಗೆ ಮಂಗಳೂರು ಮೀನುಗಾರಿಕಾ ಧಕ್ಕೆ ಹಳೆ ಬಂದರು ಪ್ರದೇಶಕ್ಕೆ ಭೇಟಿ ನೀಡಿದ ಮುಖ್ಯಮಂತ್ರಿ ಡಿ.ಕೆ. ಶಿವಕಮಾರ್ ಅವರು, ತಮ್ಮ ಭೇಟಿಯ ವೇಳೆ ಮೀನುಗಾರಿಕಾ ವ್ಯವಹಾರ ಹಾಗೂ ಚಟುವಟಿಕೆಗಳನ್ನು ಸ್ಥಗಿತಗೊಳಿಸಿರುವುದಕ್ಕೆ ತೀವ್ರ ಅಸಮಾಧಾನ ವ್ಯಕ್ತಪಡಿಸಿ, ಈ ಬಗ್ಗೆ ಕೂಡಲೇ ತನಿಖೆ ನಡೆಸಿ ವರದಿ ನೀಡುವಂತೆ ಜಿಲ್ಲಾಧಿಕಾರಿ ಹಾಗೂ ಪೊಲೀಸ್ ಕಮಿಷನರ್‌ಗೆ ಸೂಚನೆ ನೀಡಿದ್ದಾರೆ.
ಈ ವೇಳೆ ಮಾತನಾಡಿದ ಅವರು, ಅಧಿಕಾರಿಗಳೇ ಅಥವಾ ಪೊಲೀಸರೇ ಚಟುವಟಿಕೆಗಳನ್ನು ನಿಲ್ಲಿಸಿದ್ದರೆ ಅವರನ್ನು ಇಂದೇ ಅಮಾನತು ಮಾಡಲಾಗುವುದು ಎಂದು ಎಚ್ಚರಿಸಿದರು. ರಾಜ್ಯ ಹಾಗೂ ಹೊರರಾಜ್ಯಗಳಿಂದ ಬರುವ ಮೀನುಗಾರರು ಮತ್ತು ವ್ಯಾಪಾರಸ್ಥರಿಗೆ ತೊಂದರೆಯಾಗದಂತೆ ವ್ಯವಹಾರಗಳು ಎಂದಿನಂತೆ ಸುಗಮವಾಗಿ ನಡೆಯಬೇಕು ಎಂದು ಸಿಎಂ ತಿಳಿಸಿದರು. ಮೀನುಗಾರಿಕೆಯು ಆರ್ಥಿಕತೆಯ ದೊಡ್ಡ ಶಕ್ತಿಯಾಗಿದ್ದು, ಧಕ್ಕೆಯಲ್ಲಿ ವಾಹನಗಳ ಸಂಚಾರಕ್ಕೆ ಅನುಕೂಲ ಕಲ್ಪಿಸುವುದು, ಸುರಕ್ಷತೆ ಒದಗಿಸುವುದು ಹಾಗೂ ಸಣ್ಣ ದೋಣಿ ಮೀನುಗಾರರಿಗೆ ನೆರವು ನೀಡುವುದು ಸರ್ಕಾರದ ಕರ್ತವ್ಯ ಎಂದರು.
ಇದೇ ಸಂದರ್ಭದಲ್ಲಿ ಮಾತನಾಡಿದ ಅವರು, ಕಳೆದ 35 ವರ್ಷಗಳಿಂದ ಅಳಿವೆ ಬಾಗಿಲಿಗೆ ಹೂಳೆತ್ತದೆ ಇರುವುದು ಅಪಾಯಕಾರಿಯಾಗಿದೆ ಎಂಬ ಮೀನುಗಾರರ ಅಳಲಿಗೆ ಸ್ಪಂದಿಸಿ, ಡ್ರೆಜಿಂಗ್ ಕಾರ್ಯ ಕೈಗೊಳ್ಳಲು ಕೇಂದ್ರ ಸರ್ಕಾರದ ತಾಂತ್ರಿಕ ಸಮಿತಿಯ ಸಲಹೆ ಪಡೆದು ಶೀಘ್ರವೇ ಸರ್ಕಾರವೇ ಸ್ವಂತ ಡ್ರೆಜಿಂಗ್ ಯಂತ್ರ ಖರೀದಿಸುವುದೋ ಅಥವಾ ಲೀಸ್‌ಗೆ ಪಡೆಯುವುದೋ ಎಂಬ ಬಗ್ಗೆ ತೀರ್ಮಾನಿಸುವುದಾಗಿ ಭರವಸೆ ನೀಡಿದರು. ಅಲ್ಲದೆ, ಕರಾವಳಿಯ ಅಭಿವೃದ್ಧಿಗೆ ಹೊಸ ಪಥದ ಚಿಂತನೆ ನಡೆಸಲಾಗಿದ್ದು, ಹೂಡಿಕೆದಾರರನ್ನು ಆಕರ್ಷಿಸಲು ಮೂಲಭೂತ ಸೌಕರ್ಯಗಳನ್ನು ಒದಗಿಸಲಾಗುವುದು ಎಂದರು.

ಕಸ್ತೂರಿ ರಂಗನ್ ವರದಿ ವಿಚಾರವಾಗಿ ಪ್ರತಿಕ್ರಿಯಿಸಿದ ಮುಖ್ಯಮಂತ್ರಿಗಳು, ಜನಸಾಮಾನ್ಯರ ಬದುಕು ನಮಗೆ ಮುಖ್ಯವಾಗಿದ್ದು, ಹಿಂದೆಯೂ ನಾವು ಈ ವರದಿಯನ್ನು ತಿರಸ್ಕರಿಸಿದ್ದೇವೆ ಎಂದರು. ಕಾನೂನು ಚೌಕಟ್ಟಿನಲ್ಲಿ ಜನರಿಗೆ ಆಗುವ ಅನ್ಯಾಯ ತಪ್ಪಿಸಲು ವಾಸ್ತವ ಅಂಶಗಳನ್ನು ಅರಿಯಲು ಜನರ ಬಳಿಗೆ ಬಂದಿರುವುದಾಗಿ ತಿಳಿಸಿದರು. ಸಚಿವ ಸಂಪುಟದ ಅನುಮೋದನೆ ಕುರಿತು ಬಿಜೆಪಿ ಟೀಕೆಗಳಿಗೆ ಉತ್ತರಿಸಿ, “ನಾವು ನುಡಿದಂತೆ ನಡೆಯುತ್ತೇವೆ, ಅದೇ ನಮ್ಮ ಶಕ್ತಿ” ಎಂದು ಸ್ಪಷ್ಟಪಡಿಸಿದರು. ಈ ಭೇಟಿಯ ವೇಳೆ ಸಚಿವ ಯು.ಟಿ. ಖಾದರ್, ವಿವಿಧ ಸ್ಥಳೀಯ ಕಾಂಗ್ರೆಸ್ ಮುಖಂಡರು ಹಾಗೂ ಮೀನುಗಾರಿಕಾ ಸಂಘದ ಪದಾಧಿಕಾರಿಗಳು ಉಪಸ್ಥಿತರಿದ್ದರು.
-
accident2 months agoಬಿ.ಸಿ. ರೋಡ್ ಸರ್ಕಲ್ನಲ್ಲಿ ಭೀಕರ ಅಪಘಾತ: ಟಿಪ್ಪರ್-ಆಕ್ಟಿವಾ ನಡುವೆ ಡಿಕ್ಕಿ, ಸವಾರರಿಬ್ಬರೂ ದುರ್ಮರಣ
-
Bantawala2 months agoಬಂಟ್ವಾಳದಲ್ಲಿ ಭೀಕರ ಹತ್ಯಾಕಾಂಡ: ಬಸ್ನಲ್ಲಿ ಕುಳಿತಿದ್ದ ಯುವತಿಯನ್ನು ಸಾರ್ವಜನಿಕರೆದುರೇ ಕೊಚ್ಚಿ ಕೊಂದ ತಲೆಹರಟೆ ಪ್ರೇಮಿ!
-
crime8 months agoಅತ್ಯಾಚಾರ ಯತ್ನಕ್ಕೆ ತಡೆದ ಸೊಸೆಯ ಮುಖಕ್ಕೆ ಕಚ್ಚಿ ಕೊಲೆಗೆ ಯತ್ನಿಸಿದ ಮಾವ..ತಂದೆಯ ರಾಕ್ಷಸೀ ಕೃತ್ಯಕ್ಕೆ ಬೆಂಬಲಿಸಿದ ಗಂಡ..ಸುಳ್ಯ ಠಾಣಾ ವ್ಯಾಪ್ತಿಯಲ್ಲಿ ಅದೃಷ್ಟವಶಾತ್ ಬಚಾವಾದ ಸೊಸೆ..
-
crime6 months agoಧಾರ್ಮಿಕ ನಂಬಿಕೆಗೆ ಅವಮಾನ: ಕೊಡಗಿನ ಎಮ್ಮೆಮಾಡಿನಲ್ಲಿ ದೈವದ ವೇಷದಂತೆ ಧರಿಸಿ ಮದುಮಗನ ಅತಿರೇಕದ ವರ್ತನೆ!
-
Bantawala6 months agoವಿಟ್ಲದಲ್ಲಿ ನಡೆಯಿತೊಂದು ದೈವ ಕಾರಣಿಕ; ಪೊಲೀಸರ ಕಣ್ಣಿಗೆ ಮಣ್ಣೆರಚಿದರೂ ದೈವದ ದೃಷ್ಟಿಗೆ ತತ್ತರಿಸಿದ ದನಕಳ್ಳ..
-
Bantawala8 months agoನಾಗಬನ, ರಕ್ತೇಶ್ವರಿ ತಾಣ, ದೈವದೇವರ ಸಾನಿಧ್ಯ ದ್ವಂಸ ಗೊಳಿಸಿದ ಧರ್ಮದ್ರೋಹಿ ಕೃತ್ಯದ ವಿರುದ್ಧ ಭಕ್ತರ ಆಕ್ರೋಶ ; ನಾಶವಾದ ಸಾನಿಧ್ಯದಲ್ಲಿಯೇ ಸ್ವಾಮೀಜಿಯವರ ಮಾರ್ಗದರ್ಶನದಲ್ಲಿ ಕುಟುಂಬಸ್ತರು, ಸಾರ್ವಜನಿಕರ ಸಾಮೂಹಿಕ ಪ್ರಾರ್ಥನೆ
-
accident2 months agoBreaking: ಬಂಟ್ವಾಳದಲ್ಲಿ ಶಾಲಾ ಬಸ್ ಮೇಲೆ ಉರುಳಿದ ಬೃಹತ್ ಮರ; ಕಲ್ಲಡ್ಕ ಶ್ರೀರಾಮ ಶಾಲೆಯ ಓರ್ವ ವಿದ್ಯಾರ್ಥಿ ಸಾವು, ಕೆಲವರು ಗಂಭೀರ, ಹಲವರಿಗೆ ಗಾಯ!
-
accident4 months agoವಿಟ್ಲ ಆಕಾಶದಲ್ಲಿ ಹಾರಾಡಿದ ವಿಮಾನ: ತಾಂತ್ರಿಕ ದೋಷವಲ್ಲ, ಹವಾಮಾನ ವೈಪರೀತ್ಯದ ಕಾರಣ ! ಸಾರ್ವಜನಿಕರು ಆತಂಕ ಪಡುವ ಅಗತ್ಯವಿಲ್ಲ
