Connect with us

accident

ಬಸ್ಸು ದುರಂತದಲ್ಲಿ 32 ಪ್ರಯಾಣಿಕರ ಪೈಕಿ 25 ಜನರನ್ನು ಟ್ರೇಸ್ ಮಾಡಲಾಗಿದೆ. ಅಸಲಿಗೆ ಸಾವನ್ನಪ್ಪಿದವರ ಸಂಖ್ಯೆ ಎಷ್ಟು? ಮಿಸ್ಸಿಂಗ್ ಆದವರು ಎಷ್ಟು ? ಜಿಲ್ಲಾ ಎಸ್ಪಿಯಿಂದ ಮಾಹಿತಿ

Published

on

ಚಿತ್ರದುರ್ಗ: ತಡರಾತ್ರಿ ನಡೆದ ಭೀಕರ ಅಪಘಾತದಲ್ಲಿ ಬಸ್ಸು ಬೆಂಕಿಗಾಹುತಿಯಾದ ಪ್ರಕರಣದಲ್ಲಿ ನಾಪತ್ತೆಯಾದವರು ಮೃತರಾಗಿದ್ದಾರೆ ಎಂದು ಊಹಿಸಿ ಸಾವನ್ನಪ್ಪಿದವರ ಸಂಖ್ಯೆಯಲ್ಲಿ ಗೊಂದಲ ಮೂಡಿತ್ತು. ಇದೀಗ ಘಟನೆಗೆ ಸಂಬoಧ ಪಟ್ಟಂತೆ ಎಸ್‌ಪಿ ರಂಜೀತ್ ಕುಮಾರ್ ಸ್ಪಷ್ಟ ಮಾಹಿತಿ ನೀಡಿದ್ದಾರೆ ಎಂದು ತಿಳಿದು ಬಂದಿದೆ.
ಹಿರಿಯೂರು ಬಳಿಯ ರಾಷ್ಟ್ರೀಯ ಹೆದ್ದಾರಿ 48ರಲ್ಲಿ ಭೀಕರ ರಸ್ತೆ ಅಪಘಾತ ಸಂಭವಿಸಿದೆ. ಈ ಘನಘೋರ ದುರಂತದಲ್ಲಿ ಕೆಲವರು ಸಾವನ್ನಪ್ಪಿದ್ದಾರೆ ಎಂದು ತಿಳಿದು ಬಂದಿದೆ. ಬೆಂಗಳೂರಿನಿoದ ಗೋಕರ್ಣಕ್ಕೆ ಹೊರಟಿದ್ದ ಸೀಬರ್ಡ್ ಸ್ಲೀಪರ್ ಕೋಚ್ ಬಸ್‌ಗೆ ಕಂಟೇನರ್ ಡಿಕ್ಕಿ ಹೊಡೆದ ಪರಿಣಾಮ ಬಸ್ ಸಂಪೂರ್ಣವಾಗಿ ಬೆಂಕಿಯಲ್ಲಿ ಭಸ್ಮಗೊಂಡಿದೆ. ಈ ಭೀಕರ ಅಪಘಾತದಲ್ಲಿ ಸಾವನ್ನಪ್ಪಿದವರ ಸಂಖ್ಯೆಯಲ್ಲಿ ಗೊಂದಲ ಮೂಡಿತ್ತು. ಇದೀಗ ಘಟನೆ ಸಂಬoಧ ಪೊಲೀಸರು ಸ್ಪಷ್ಟ ಮಾಹಿತಿ ನೀಡಿದ್ದಾರೆ ಎಂದು ತಿಳಿದು ಬಂದಿದೆ.


ಐವರು ಪ್ರಯಾಣಿಕರ ಸಜೀವ ದಹನ
ಆರಂಭದಲ್ಲಿ ಈ ದುರ್ಘಟನೆಯಲ್ಲಿ 15ಕ್ಕಿಂತಲೂ ಹೆಚ್ಚು ಮಂದಿ ಸಾವನ್ನಪ್ಪಿದ್ದಾರೆ ಎಂದು ಹೇಳಲಾಗಿತ್ತು, ಮತ್ತೆ ಕೆಲವರು ಪ್ರತ್ಯಕ್ಷವಾಗಿದ್ದು, 10 ಮಂದಿ ಮಾತ್ರ ಮೃತಪಟ್ಟಿದ್ದಾರೆ ಎನ್ನಲಾಗಿತ್ತು, ಇದೀಗ ಪ್ರಯಾಣಿಕರನ್ನು ಟ್ರೇಸ್ ಮಾಡಲಾಗಿದ್ದು, ಬಳಿಕ ಕೆಲ ಮೂಲಗಳ ಮಾಹಿತಿ ಆಧರಿಸಿ ಐವರು ಪ್ರಯಾಣಿಕರು ಮಾತ್ರ ಸಜೀವ ದಹನಗೊಂಡಿದ್ದಾರೆ ಎಂದು ತಿಳಿದುಬಂದಿದೆ. ಅಲ್ಲದೇ ಸಾರಿಗೆ ಸಚಿವ ರಾಮಲಿಂಗಾರೆಡ್ಡಿ ಅವರು ಕೂಡ ಐವರು ಪ್ರಯಾಣಿಕರು ಮಾತ್ರ ಸಾವನ್ನಪ್ಪಿದ್ದಾರೆ ಎಂದು ಹೇಳಿಕೆ ನೀಡಿದ್ದಾರೆ.
ಎಸ್‌ಪಿ ರಂಜೀತ್ ಕುಮಾರ್ ಮಾಹಿತಿ
ಹಿರಿಯೂರು ತಾಲೂಕು ಆಸ್ಪತ್ರೆಗೆ ಚಿತ್ರದುರ್ಗ ಎಸ್‌ಪಿ ರಂಜೀತ್‌ಕುಮಾರ್ ಬಂಡಾರು ಭೇಟಿ ಮಾಡಿದ್ದು, ಗಾಯಾಳು ಮಿಲನ ಸೇರಿದಂತೆ ಅನೇಕರ ಆರೋಗ್ಯ ವಿಚಾರಿಸಿದ್ದಾರೆ. ಇದೇ ವೇಳೆ ಮಾತಾಡಿದ ಎಸ್ಪಿ, ಬಸ್‌ನಲ್ಲಿದ್ದ 32 ಪ್ರಯಾಣಿಕರ ಪೈಕಿ 25 ಪ್ರಯಾಣಿಕರ ಟ್ರೇಸ್ ಮಾಡಿರುವುದಾಗಿ ತಿಳಿಸಿದ್ದಾರೆ.

ಮುಂದಕ್ಕೆ ಓದಲು ಇಲ್ಲಿ ಕ್ಲಿಕ್‌ ಮಾಡಿ
Advertisement

accident

ಮಾಣಿ ಸಮೀಪ ನಿಯಂತ್ರಣ ತಪ್ಪಿ ಚರಂಡಿಗೆ ಜಿಗಿದ ಇನ್ನೋವಾ ಕಾರು;ತಪ್ಪಿದ ಭೀಕರ ಪ್ರಾಣಾಪಾಯ

Published

on

ಮಾಣಿ: ಮಂಗಳೂರು-ಬೆಂಗಳೂರು ರಾಷ್ಟ್ರೀಯ ಹೆದ್ದಾರಿಯ ಮಾಣಿ ಸಮೀಪದ ಅಳಿರಾ ಎಂಬಲ್ಲಿ ಇಂದು ಮಧ್ಯಾಹ್ನ ಭೀಕರ ರಸ್ತೆ ಅಪಘಾತವೊಂದು ಸಂಭವಿಸಿದ್ದು, ಪ್ರಯಾಣಿಕರು ಅದೃಷ್ಟವಶಾತ್ ಪ್ರಾಣಾಪಾಯದಿಂದ ಪಾರಾಗಿದ್ದಾರೆ.

ಇಂದು ಮಧ್ಯಾಹ್ನ ಸುಮಾರು 2 ಗಂಟೆಯ ವೇಳೆಗೆ ಈ ಘಟನೆ ನಡೆದಿದೆ. ಉಪ್ಪಿನಂಗಡಿ ಕಡೆಯಿಂದ ಮಂಗಳೂರು ಕಡೆಗೆ ಪ್ರಯಾಣಿಸುತ್ತಿದ್ದ ಇನ್ನೋವಾ ಕಾರು ಚಾಲಕನ ನಿಯಂತ್ರಣ ತಪ್ಪಿ ರಸ್ತೆ ಬದಿಯ ಫುಟ್‌ಪಾತ್ ಡಿವೈಡರ್‌ಗೆ ಡಿಕ್ಕಿ ಹೊಡೆದಿದೆ. ಡಿಕ್ಕಿಯ ರಭಸಕ್ಕೆ ಕಾರು ರಸ್ತೆ ಬದಿಯ ಆಳವಾದ ಚರಂಡಿಯನ್ನು ಜಿಗಿದು, ಪಕ್ಕದಲ್ಲಿದ್ದ ಬಾಳೆ ಗಿಡಗಳ ಗುಂಟೆಗೆ ಬಡಿದು ನಿಂತಿದೆ.

ಅದೃಷ್ಟವಶಾತ್ ಬಚಾವ್

ಅಪಘಾತದ ಸಮಯದಲ್ಲಿ ಕಾರಿನಲ್ಲಿ ನಾಲ್ಕು ಮಂದಿ ಪ್ರಯಾಣಿಕರಿದ್ದರು ಎನ್ನಲಾಗಿದ್ದು, ಯಾರಿಗೂ ಯಾವುದೇ ಪ್ರಾಣಾಪಾಯ ಸಂಭವಿಸಿಲ್ಲ ಎಂದು ತಿಳಿದುಬಂದಿದೆ. ಆದರೆ, ಅಪಘಾತದ ತೀವ್ರತೆಗೆ ಇನ್ನೋವಾ ಕಾರಿನ ಮುಂಭಾಗ ಸಂಪೂರ್ಣವಾಗಿ ನುಜ್ಜುಗುಜ್ಜಾಗಿದೆ. ಸದ್ಯ ಕ್ರೇನ್ ಮುಖಾಂತರ ಕಾರನ್ನು ಮೇಲಕ್ಕೆತ್ತಿ ರಸ್ತೆಗೆ ತರುವ ಕಾರ್ಯಾಚರಣೆ ನಡೆಯುತ್ತಿದೆ.

ಒಂದೇ ದಿನ ಎರಡು ಅಪಘಾತ: ಸವಾರರಲ್ಲಿ ಆತಂಕ

ಇದೇ ರಾಷ್ಟ್ರೀಯ ಹೆದ್ದಾರಿಯ ಕೇವಲ 3 ಕಿಲೋಮೀಟರ್ ವ್ಯಾಪ್ತಿಯಲ್ಲಿ ಇಂದು ಬೆಳಿಗ್ಗೆಯಷ್ಟೇ ಮತ್ತೊಂದು ಕಾರು ಡಿವೈಡರ್‌ಗೆ ಡಿಕ್ಕಿ ಹೊಡೆದು ಚಾಲಕ ಮೃತಪಟ್ಟ ಘಟನೆ ನಡೆದಿತ್ತು. ಈ ಬೆನ್ನಲ್ಲೇ ಮಧ್ಯಾಹ್ನ ಮತ್ತೊಂದು ಭೀಕರ ಅಪಘಾತ ಸಂಭವಿಸಿರುವುದು ಸ್ಥಳೀಯ ಹಾಗೂ ಹೆದ್ದಾರಿ ಪ್ರಯಾಣಿಕರಲ್ಲಿ ತೀವ್ರ ಆತಂಕ ಮೂಡಿಸಿದೆ. ಮಾಣಿ ಪರಿಸರದಲ್ಲಿ ಹೆದ್ದಾರಿ ಸಂಚಾರದ ವೇಳೆ ಚಾಲಕರು ಹೆಚ್ಚಿನ ಜಾಗ್ರತೆ ವಹಿಸುವ ಅಗತ್ಯವಿದೆ ಎಂದು ಸಾರ್ವಜನಿಕರು ಒತ್ತಾಯಿಸಿದ್ದಾರೆ.




Continue Reading

accident

ಗಡಿಯಾರದಲ್ಲಿ ಭೀಕರ ಅಪಘಾತ: ಡಿವೈಡರ್‌ಗೆ ಡಿಕ್ಕಿ ಹೊಡೆದ ಕಾರು; ನಾಲ್ವರಿಗೆ ಗಂಭೀರ ಗಾಯ, ಚಾಲಕ ದುರ್ಮರಣ

Published

on

ಬಂಟ್ವಾಳ/ಉಪ್ಪಿನಂಗಡಿ: ಮಂಗಳೂರು-ಬೆಂಗಳೂರು ರಾಷ್ಟ್ರೀಯ ಹೆದ್ದಾರಿಯ ಮಾಣಿ ಮತ್ತು ಉಪ್ಪಿನಂಗಡಿ ಮಧ್ಯದ ಗಡಿಯಾರ ಎಂಬಲ್ಲಿ ಇಂದು ಮಧ್ಯಾಹ್ನ ಭೀಕರ ಕಾರು ಅಪಘಾತವೊಂದು ಸಂಭವಿಸಿದ್ದು, ಚಾಲಕ ಸಾವನ್ನಪ್ಪಿದ್ದಾರೆ. ಮಂಗಳೂರಿನಿಂದ ಹಾಸನ ಕಡೆಗೆ ಪ್ರಯಾಣಿಸುತ್ತಿದ್ದ ಕಾರು ನಿಯಂತ್ರಣ ತಪ್ಪಿ ಹೆದ್ದಾರಿಯ ಡಿವೈಡರ್‌ಗೆ ಬಲವಾಗಿ ಡಿಕ್ಕಿ ಹೊಡೆದಿದೆ.

ಹೆದ್ದಾರಿಯಲ್ಲಿ ಕೇಳಿಬಂದ ಭೀಕರ ಸದ್ದು: ಮಧ್ಯಾಹ್ನ ಸುಮಾರು 12 ಗಂಟೆಯ ವೇಳೆಗೆ ಈ ಘಟನೆ ನಡೆದಿದ್ದು, ಡಿಕ್ಕಿಯ ರಭಸಕ್ಕೆ ದೊಡ್ಡ ಮಟ್ಟದ ಸದ್ದು ಕೇಳಿಬಂದಿದೆ ಎನ್ನಲಾಗಿದೆ. ಅಪಘಾತದ ತೀವ್ರತೆಗೆ ಕಾರು (ನಂಬರ್: KA 12 N 6668) ಸಂಪೂರ್ಣವಾಗಿ ನುಜ್ಜುಗುಜ್ಜಾಗಿದೆ. ಸದ್ದು ಕೇಳಿ ಸ್ಥಳೀಯರು ಹಾಗೂ ಹೆದ್ದಾರಿಯಲ್ಲಿ ಸಂಚರಿಸುತ್ತಿದ್ದ ಸಾರ್ವಜನಿಕರು ತಕ್ಷಣವೇ ಸ್ಥಳಕ್ಕೆ ಧಾವಿಸಿ, ಕಾರಿನಲ್ಲಿದ್ದವರ ರಕ್ಷಣೆಗೆ ಮುಂದಾಗಿದ್ದಾರೆ.

ಹಾಸನ ಮೂಲದ ಪ್ರಯಾಣಿಕರು: ಕಾರಿನಲ್ಲಿ ಹಾಸನ ಮೂಲದ ನಾಲ್ಕು ಮಂದಿ ಪ್ರಯಾಣಿಸುತ್ತಿದ್ದರು ಎಂದು ತಿಳಿದುಬಂದಿದೆ. ಅಪಘಾತದಲ್ಲಿ ನಾಲ್ವರಿಗೂ ಗಂಭೀರ ಗಾಯಗಳಾಗಿದ್ದು, ತಕ್ಷಣವೇ ಅವರನ್ನು ಮಂಗಳೂರಿನ ಫಾದರ್ ಮುಲ್ಲರ್ಸ್ ಆಸ್ಪತ್ರೆಗೆ ದಾಖಲಿಸಿ ಚಿಕಿತ್ಸೆ ನೀಡಲಾಗುತ್ತಿದೆ. ಗಾಯಾಳುಗಳ ಪೈಕಿ ಕಾರು ಚಾಲಕನ ಸ್ಥಿತಿ ಅತ್ಯಂತ ಚಿಂತಾಜನಕವಾಗಿದ್ದು ಆಸ್ಪತ್ರೆಯಲ್ಲಿ ಸಾವನ್ನಪ್ಪಿರುವುದಾಗಿ ಮಾಹಿತಿ ಲಭ್ಯವಾಗಿದೆ.

ಸ್ಥಳಕ್ಕೆ ಭೇಟಿ ನೀಡಿದ ಪೊಲೀಸರು ಪರಿಶೀಲನೆ ನಡೆಸಿದ್ದು, ಸುಗಮ ಸಂಚಾರಕ್ಕೆ ವ್ಯವಸ್ಥೆ ಕಲ್ಪಿಸಿದ್ದಾರೆ. ಗಾಯಾಳುಗಳ ಸಂಪೂರ್ಣ ವಿವರ ಹಾಗೂ ಅಪಘಾತಕ್ಕೆ ನಿಖರ ಕಾರಣ ಇನ್ನಷ್ಟೇ ತಿಳಿದುಬರಬೇಕಿದೆ.




Continue Reading

accident

ಬೆಳ್ತಂಗಡಿ: ಚಾಲಕನ ನಿಯಂತ್ರಣ ತಪ್ಪಿ ರಸ್ತೆಬದಿಯ ಚರಂಡಿಗೆ ಉರುಳಿದ ಕಾರು; ಮೂವರಿಗೆ ಗಾಯ

Published

on

ಬೆಳ್ತಂಗಡಿ: ಚಾಲಕನ ನಿಯಂತ್ರಣ ತಪ್ಪಿದ ಕಾರೊಂದು ರಸ್ತೆಬದಿಯ ಆಳವಾದ ಚರಂಡಿಗೆ ಬಿದ್ದ ಘಟನೆ ಬೆಳ್ತಂಗಡಿ ಸಮೀಪದ ರಾಷ್ಟ್ರೀಯ ಹೆದ್ದಾರಿಯ ಕಾಶಿಬೆಟ್ಟು ಎಂಬಲ್ಲಿ ಮಂಗಳವಾರ ಬೆಳಿಗ್ಗೆ ಸಂಭವಿಸಿದೆ.

ಅಪಘಾತದ ಸಮಯದಲ್ಲಿ ಕಾರಿನಲ್ಲಿ ಮೂವರು ಪ್ರಯಾಣಿಕರಿದ್ದು, ಕಾರು ನಿಯಂತ್ರಣ ತಪ್ಪಿ ನೇರವಾಗಿ ಚರಂಡಿಗೆ ಇಳಿದಿದೆ. ಪರಿಣಾಮವಾಗಿ ಕಾರಿನಲ್ಲಿದ್ದ ಮೂವರಿಗೂ ಗಾಯಗಳಾಗಿದ್ದು, ಅವರನ್ನು ತಕ್ಷಣವೇ ಸ್ಥಳೀಯ ಆಸ್ಪತ್ರೆಗೆ ದಾಖಲಿಸಿ ಚಿಕಿತ್ಸೆ ಕೊಡಿಸಲಾಗುತ್ತಿದೆ ಎಂದು ತಿಳಿದುಬಂದಿದೆ.

ಅಪಘಾತದ ತೀವ್ರತೆಗೆ ಕಾರಿನ ಮುಂಭಾಗ ಜಖಂಗೊಂಡಿದೆ. ಸ್ಥಳಕ್ಕೆ ಸ್ಥಳೀಯರು ಧಾವಿಸಿ ಗಾಯಾಳುಗಳ ರಕ್ಷಣೆಗೆ ನೆರವಾಗಿದ್ದಾರೆ. ಸ್ಥಳೀಯ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ಈ ಘಟನೆ ನಡೆದಿದೆ.

Continue Reading

Trending

Copyright © 2025 Deevatige

error: Content is protected !!