escape
ಶಾರ್ಜಾದಲ್ಲಿ ಉಡುಪಿ ವ್ಯಕ್ತಿಯ ಬರ್ಬರ ಹತ್ಯೆ: 9 ತುಂಡುಗಳಾಗಿ ಕಾರಿನ ಡಿಕ್ಕಿಯಲ್ಲಿ ಶವ, ಪತ್ನಿ-ಮಗ ನಾಪತ್ತೆ!
ಉಡುಪಿ ಮೂಲದ ವ್ಯಕ್ತಿ ಶಾರ್ಜಾದಲ್ಲಿ ಹತ್ಯೆ? ಅಧಿಕೃತ ದೃಢೀಕರಣ ಇಲ್ಲ ಎಂದ ಉಡುಪಿ ಜಿಲ್ಲಾ ಪೊಲೀಸರು
ಉಡುಪಿ: ಉಡುಪಿ ಮೂಲದ ವ್ಯಕ್ತಿಯೊಬ್ಬರು ಯುಎಇಯ ಶಾರ್ಜಾದಲ್ಲಿ ಹತ್ಯೆಯಾಗಿದ್ದಾರೆ ಎಂಬ ವರದಿಗಳು ಕೆಲವು ಸ್ಥಳೀಯ ಮಾಧ್ಯಮಗಳು ಮತ್ತು ಸಾಮಾಜಿಕ ಜಾಲತಾಣಗಳಲ್ಲಿ ಪ್ರಸಾರವಾಗುತ್ತಿವೆ. ಆದರೆ ಈ ಘಟನೆಗೆ ಸಂಬಂಧಿಸಿದಂತೆ ಇದುವರೆಗೆ ಶಾರ್ಜಾ ಪೊಲೀಸ್ ಇಲಾಖೆ ಅಥವಾ ಯುಎಇಯಲ್ಲಿರುವ ಭಾರತೀಯ ರಾಯಭಾರ ಕಚೇರಿ / ಕಾನ್ಸುಲೇಟ್ ವತಿಯಿಂದ ಉಡುಪಿ ಜಿಲ್ಲಾ ಪೊಲೀಸರಿಗೆ ಯಾವುದೇ ಅಧಿಕೃತ ಮಾಹಿತಿ ಅಥವಾ ದೃಢೀಕರಣ ಲಭ್ಯವಾಗಿಲ್ಲ ಎಂದು ಜಿಲ್ಲಾ ಪೊಲೀಸ್ ಇಲಾಖೆ ಸ್ಪಷ್ಟಪಡಿಸಿದೆ.
ಸಾಮಾಜಿಕ ಜಾಲತಾಣಗಳಲ್ಲಿ ಹರಿದಾಡುತ್ತಿರುವ ವರದಿಗಳ ಅಧಿಕೃತತೆಯನ್ನು ಸದ್ಯಕ್ಕೆ ದೃಢೀಕರಿಸಲು ಸಾಧ್ಯವಿಲ್ಲ. ಈ ಪ್ರಕರಣಕ್ಕೆ ಸಂಬಂಧಿಸಿದಂತೆ ಯಾವುದೇ ಅಧಿಕೃತ ಮಾಹಿತಿ ಲಭ್ಯವಾದಲ್ಲಿ ಪರಿಶೀಲಿಸಿದ ಬಳಿಕ ಮಾಧ್ಯಮಗಳೊಂದಿಗೆ ಹಂಚಿಕೊಳ್ಳಲಾಗುವುದು ಎಂದು ಪೊಲೀಸರು ತಿಳಿಸಿದ್ದಾರೆ.
ಸಹೋದರನ ಆರೋಪ ಏನು?
ಹತ್ಯೆಯಾಗಿರುವ ವ್ಯಕ್ತಿಯನ್ನು ಕುಂದಾಪುರ ನಗರದ ಪಾರಿಜಾತ ಸಮೀಪದ ಹೊನ್ನನಕೇರಿ ನಿವಾಸಿ ಪ್ರಕಾಶ್ ಕುಂದರ್ (50) ಎಂದು ಗುರುತಿಸಲಾಗಿದೆ. ಅವರು ಕಳೆದ 14 ವರ್ಷಗಳಿಂದ ಶಾರ್ಜಾದ ಖಾಸಗಿ ವಿಮಾನ ಕಂಪೆನಿಯಲ್ಲಿ ಟರ್ಮಿನಲ್-2ರಲ್ಲಿ ಸೀನಿಯರ್ ಮ್ಯಾನೇಜರ್ ಆಗಿ ಕೆಲಸ ಮಾಡುತ್ತಿದ್ದರು.
ಮೃತರ ಸಹೋದರ ಅನಿಲ್ ಪ್ರಶಾಂತ್ ಕುಂದರ್ ಅವರು ಇಂದು ಉಡುಪಿ ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿಯನ್ನು ಭೇಟಿ ಮಾಡಿ ಮನವಿ ಸಲ್ಲಿಸಿದ್ದಾರೆ.
ಬಳಿಕ ಮಾಧ್ಯಮಗಳೊಂದಿಗೆ ಮಾತನಾಡಿದ ಅವರು ನೀಡಿದ ಮಾಹಿತಿ ಹೀಗಿದೆ
“ಜುಲೈ 20 ರಂದು ನಾನು ಪ್ರಕಾಶ್‌ಗೆ ಕರೆ ಮಾಡಿದ್ದೆ. ಆದರೆ ಆತ ಕರೆ ಸ್ವೀಕರಿಸಲಿಲ್ಲ. ಬದಲಿಗೆ ‘ನಾನು ಸೌಖ್ಯವಾಗಿದ್ದೇನೆ’ ಎಂದು ಟೈಪಿಂಗ್ ಮೆಸೇಜ್ ಕಳುಹಿಸಿದ್ದ. ಅವನು ಯಾವತ್ತಿಗೂ ಹೀಗೆ ಟೈಪಿಂಗ್ ಮೆಸೇಜ್ ಕಳುಹಿಸುವುದಿಲ್ಲ. ನಾವು ಯಾವಾಗಲೂ ಕರೆ ಅಥವಾ ವಾಟ್ಸಪ್ ವಾಯ್ಸ್ ಮೆಸೇಜ್ ಮೂಲಕವೇ ಮಾತನಾಡುತ್ತಿದ್ದೆವು. ಒಂದು ವಾರ ಬಿಟ್ಟು ಮತ್ತೆ ಕರೆ ಮಾಡಿದಾಗಲೂ ಸ್ವೀಕರಿಸಲಿಲ್ಲ. ಹಳೆ ಮೆಸೇಜ್‌ಗಳನ್ನೇ ಮತ್ತೆ ಕಳುಹಿಸುತ್ತಿದ್ದ ಕಾರಣ ಅನುಮಾನ ಬಂದಿತು.”
“ಅನುಮಾನದಿಂದ ಶಾರ್ಜಾದಲ್ಲೇ ಇರುವ ಪ್ರಕಾಶ್‌ನ ಕ್ಲಾಸ್‌ಮೇಟ್ ಮನೋಹರ್ ಅವರಿಗೆ ಕರೆ ಮಾಡಿದೆ. ಅವರು ಕಂಪನಿ ನೀಡಿದ್ದ ಫ್ಲ್ಯಾಟ್‌ಗೆ ಹೋಗಿ ವಿಚಾರಿಸಿದಾಗ ಅಲ್ಲಿನ ವಾಚ್‌ಮನ್ ಅವರು ಭಾರತಕ್ಕೆ ಹೋಗಿದ್ದಾರೆ ಎಂದು ಹೇಳಿದ್ದಾರೆ. ನಾನೇ ಕಂಪನಿಯ ಎಚ್‌ಆರ್‌ಗೆ ಕರೆ ಮಾಡಿದಾಗಲೂ ಅವರು ಭಾರತಕ್ಕೆ ಹೋಗಿದ್ದಾರೆ ಎಂದರು. ಮರುದಿನ ಮತ್ತೆ ಕರೆ ಮಾಡಿ ‘ಅವರು ಭಾರತಕ್ಕೆ ಬಂದಿಲ್ಲ, ಪರಿಶೀಲಿಸಿ’ ಎಂದು ಹೇಳಿದಾಗ ಪಾಸ್‌ಪೋರ್ಟ್ ಚೆಕ್ ಮಾಡಿದಾಗ ಪ್ರಕಾಶ್ ಶಾರ್ಜಾದಲ್ಲಿಯೇ ಇರುವುದು ಕಂಡುಬಂದಿದೆ.”
ಈ ಹಿನ್ನೆಲೆಯಲ್ಲಿ ನಾಪತ್ತೆ ದೂರು ನೀಡಲಾಗಿತ್ತು. ತನಿಖೆ ನಡೆಸಿದಾಗ ಒಮನ್‌ಗೆ ಹೋಗುವ ಮಾರ್ಗದ ಬದಿ ಕಾರಿನ ಡಿಕ್ಕಿಯಲ್ಲಿ ಎರಡು ಬ್ಯಾಗ್‌ಗಳಲ್ಲಿ ಒಂಬತ್ತು ತುಂಡುಗಳಾಗಿ ಕತ್ತರಿಸಿಟ್ಟಿದ್ದ ಮೃತದೇಹ ಪತ್ತೆಯಾಗಿದೆ. ಆ.12ಕ್ಕೆ ಶಾರ್ಜಾ ಪೊಲೀಸರಿಗೆ ಮೃತದೇಹ ಸಿಕ್ಕಿದ್ದು, ಅಲ್ಲಿದ್ದ ಸಂಬಂಧಿಕರೊಬ್ಬರ ಮೂಲಕ ಡಿಎನ್ಎ ಪರೀಕ್ಷೆ ನಡೆಸಿದಾಗ ಅದು ಪ್ರಕಾಶ್ ಅವರದ್ದೇ ಎಂದು ದೃಢಪಟ್ಟಿದೆ. ಮರಣೋತ್ತರ ಪರೀಕ್ಷೆಯ ವರದಿ ಮತ್ತು ಸೆ.21ರಂದು ಡೆತ್ ಸರ್ಟಿಫಿಕೇಟ್ ಕುಟುಂಬಕ್ಕೆ ಸಿಕ್ಕಿದೆ, ಆದರೆ ಎಫ್‌ಐಆರ್ ಇನ್ನೂ ಕೈಸೇರಿಲ್ಲ ಎಂದು ಸಹೋದರ ತಿಳಿಸಿದ್ದಾರೆ.
ಪತ್ನಿ, ಪುತ್ರ ನಾಪತ್ತೆ
ಉಡುಪಿಯ ಬಲಾಯಿಪಾದೆಯ 20 ವರ್ಷಗಳ ಹಿಂದೆ ಟೀನಾ ಕುಂದರ್ ಎಂಬುವರನ್ನು ಮದುವೆಯಾಗಿದ್ದ ಪ್ರಕಾಶ್ ಅವರಿಗೆ 10ನೇ ತರಗತಿಯಲ್ಲಿ ಓದುತ್ತಿರುವ ಮಗನಿದ್ದಾನೆ. ಪತ್ನಿ ಶಾರ್ಜಾದಲ್ಲೇ ಶಿಕ್ಷಕಿಯಾಗಿ ಕೆಲಸ ಮಾಡುತ್ತಿದ್ದರು. ಕೃತ್ಯದ ಬಳಿಕ ಪತ್ನಿ ಹಾಗೂ ಪುತ್ರ ಇಬ್ಬರೂ ನಾಪತ್ತೆಯಾಗಿದ್ದಾರೆ. ಶಾರ್ಜಾ ಪೊಲೀಸರ ತನಿಖೆಯಲ್ಲೂ ಅವರು ಪತ್ತೆಯಾಗಿಲ್ಲ ಎಂದು ಕುಟುಂಬಸ್ಥರು ಆರೋಪಿಸಿದ್ದಾರೆ.
ಪತ್ನಿ ಟೀನಾ ಅವರ ತಾಯಿ ಮಗಳಿಗೆ ಕರೆ ಮಾಡಿದಾಗ ಕರೆ ಸ್ವೀಕರಿಸುತ್ತಿಲ್ಲ ಎಂದು ನಗರ ಪೊಲೀಸ್ ಠಾಣೆಗೆ ದೂರು ನೀಡಿದ್ದಾರೆ. ಕುಂದಾಪುರ ಪೊಲೀಸರು ಮೃತರ ಸಹೋದರನ ಮನೆಗೆ ಭೇಟಿ ನೀಡಿ ಮಾಹಿತಿ ಸಂಗ್ರಹಿಸುತ್ತಿದ್ದಾರೆ.
“ಈ ಕುರಿತು ಸಮಗ್ರ ತನಿಖೆಯಾಗಬೇಕು, ಆರೋಪಿಗಳಿಗೆ ತಕ್ಕ ಶಿಕ್ಷೆಯಾಗಬೇಕು” ಎಂದು ಅನಿಲ್ ಪ್ರಶಾಂತ್ ಕುಂದರ್ ಒತ್ತಾಯಿಸಿದ್ದಾರೆ.



arrest
8 ತಿಂಗಳ ಹಿಂದೆ ನಾಪತ್ತೆಯಾಗಿದ್ದ ಬೆಂಗಳೂರಿನ ವಿದ್ಯಾರ್ಥಿನಿಯರು ಪತ್ತೆ: ಒಬ್ಬಳು ಗರ್ಭಿಣಿ !
ಬೆಂಗಳೂರು: ರಾಜಧಾನಿಯ ವಿದ್ಯಾರಣ್ಯಪುರದಿಂದ ಕಳೆದ 8 ತಿಂಗಳ ಹಿಂದೆ ನಾಪತ್ತೆಯಾಗಿದ್ದ ಇಬ್ಬರು ಕಾಲೇಜು ವಿದ್ಯಾರ್ಥಿನಿಯರನ್ನು ಸಿಐಡಿ (CID) ಅಧಿಕಾರಿಗಳು ಸುರಕ್ಷಿತವಾಗಿ ಪತ್ತೆಹಚ್ಚುವಲ್ಲಿ ಯಶಸ್ವಿಯಾಗಿದ್ದಾರೆ.
ನಾಪತ್ತೆಯಾಗಿದ್ದ ಪ್ರಥಮ ಪಿಯುಸಿ ವಿದ್ಯಾರ್ಥಿನಿ ತೇಜಸ್ವಿನಿ ಹಾಗೂ ದ್ವಿತೀಯ ಪಿಯುಸಿ ವಿದ್ಯಾರ್ಥಿನಿ ತನಿಷ್ಕಾ ಪತ್ತೆಯಾದ ಯುವತಿಯರು.
ಪ್ರಕರಣದ ಹಿನ್ನೆಲೆ: ಕಳೆದ ಜನವರಿ 31 ರಂದು ಕಾಲೇಜಿಗೆ ತೆರಳುವುದಾಗಿ ಹೇಳಿ ಮನೆಯಿಂದ ಹೊರಟಿದ್ದ ಇಬ್ಬರೂ ವಿದ್ಯಾರ್ಥಿನಿಯರು ಬಳಿಕ ನಾಪತ್ತೆಯಾಗಿದ್ದರು. ಈ ಕುರಿತು ವಿದ್ಯಾರಣ್ಯಪುರ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿತ್ತು. ಆದರೆ, ಸ್ಥಳೀಯ ಪೊಲೀಸರ ಆರಂಭಿಕ ತನಿಖೆಯಲ್ಲಿ ಯಾವುದೇ ಮಹತ್ವದ ಸುಳಿವು ಸಿಗಲಿಲ್ಲ. ಈ ನಡುವೆ ಇಬ್ಬರೂ ಮಲೆ ಮಹದೇಶ್ವರ ಬೆಟ್ಟಕ್ಕೆ ತೆರಳಿದ್ದಾಗ ಅಲ್ಲಿನ ಮಹಿಳೆಯೊಬ್ಬರ ಜೊತೆ ಸೆಲ್ಫಿ ತೆಗೆಸಿಕೊಂಡಿದ್ದ ಫೋಟೋ ಲಭ್ಯವಾಗಿತ್ತು.
ತನಿಖೆ ವಿಳಂಬವಾದ ಹಿನ್ನೆಲೆಯಲ್ಲಿ ತನಿಷ್ಕಾ ಅವರ ಕುಟುಂಬಸ್ಥರು ಹೈಕೋರ್ಟ್ ಮೆಟ್ಟಿಲೇರಿದ್ದರು. ಪ್ರಕರಣದ ಗಂಭೀರತೆಯನ್ನು ಪರಿಗಣಿಸಿದ ಹೈಕೋರ್ಟ್, ತನಿಖೆಯ ಜವಾಬ್ದಾರಿಯನ್ನು ಸಿಐಡಿಗೆ ವರ್ಗಾಯಿಸಿ ಆದೇಶಿಸಿತ್ತು.
ಸುಳ್ಳು ಹೇಳಿ ಯುವಕನ ಜೊತೆ ತೆರಳಿದ್ದ ಯುವತಿಯರು: ಮನೆಯಲ್ಲಿದ್ದ ಕೌಟುಂಬಿಕ ಒತ್ತಡಕ್ಕೆ ಹೆದರಿ ಹೊರಬಂದಿದ್ದ ತನಿಷ್ಕಾ ಮತ್ತು ತೇಜಸ್ವಿನಿಗೆ ಮಲೆ ಮಹದೇಶ್ವರ ಬೆಟ್ಟದ ಆವರಣದಲ್ಲಿ ಕನಕಪುರ ಮೂಲದ ಯುವಕನೊಬ್ಬನ ಪರಿಚಯವಾಗಿತ್ತು. “ನಾವಿಬ್ಬರೂ ಅನಾಥ ಅಕ್ಕ-ತಂಗಿಯರು, ನಮಗೆ ಯಾರೂ ಇಲ್ಲ” ಎಂದು ಯುವತಿಯರು ಸುಳ್ಳು ಹೇಳಿದ್ದರು. ಇದನ್ನು ನಂಬಿದ ಯುವಕ ಇಬ್ಬರನ್ನೂ ತನ್ನ ಮನೆಗೆ ಕರೆದೊಯ್ದಿದ್ದನು. ಬಳಿಕ ಯುವಕ ತನಿಷ್ಕಾಳನ್ನು ಮದುವೆಯಾಗಿದ್ದು, ತೇಜಸ್ವಿನಿಯನ್ನು ತಂಗಿಯಂತೆ ತನ್ನ ಮನೆಯಲ್ಲೇ ಇರಿಸಿಕೊಂಡಿದ್ದನು.
ಸಿಐಡಿ ಬಲೆಗೆ ಬಿದ್ದಿದ್ದು ಹೇಗೆ? ಇತ್ತೀಚೆಗೆ ತನಿಷ್ಕಾ ಹೊಸ ಸಿಮ್ ಕಾರ್ಡ್ ಪಡೆಯಲು ತನ್ನ ಮೂಲ ಆಧಾರ್ ಕಾರ್ಡ್ ನೀಡಿದ್ದಳು. ಸಿಐಡಿ ಅಧಿಕಾರಿಗಳು ಈಗಾಗಲೇ ಈ ಆಧಾರ್ ಸಂಖ್ಯೆಯ ಮೇಲೆ ತೀವ್ರ ನಿಗಾ ವಹಿಸಿದ್ದರಿಂದ, ಟೆಲಿಕಾಂ ಸರ್ವಿಸ್ ಪ್ರೊವೈಡರ್ ಮೂಲಕ ಅಧಿಕಾರಿಗಳಿಗೆ ತಕ್ಷಣ ಮಾಹಿತಿ ರವಾನೆಯಾಯಿತು. ಆಧಾರ್ ಮಾಹಿತಿ ಹಾಗೂ ನೆಟ್‌ವರ್ಕ್ ಲೊಕೇಶನ್ ಬೆನ್ನತ್ತಿದ ಸಿಐಡಿ ತಂಡ, ಇಬ್ಬರೂ ಯುವತಿಯರಿದ್ದ ಜಾಗವನ್ನು ಪತ್ತೆಹಚ್ಚಿ ಅವರನ್ನು ವಶಕ್ಕೆ ಪಡೆದಿದೆ.
ಪ್ರಸ್ತುತ ತನಿಷ್ಕಾ ಗರ್ಭಿಣಿಯಾಗಿದ್ದು, ಸಿಐಡಿ ಪೊಲೀಸರು ಇಬ್ಬರೂ ಯುವತಿಯರನ್ನು ಇಂದು ಹೈಕೋರ್ಟ್ ಮುಂದೆ ಹಾಜರುಪಡಿಸಲಿದ್ದಾರೆ.
Bantawala
ಪುಣಚ: ಉದ್ಯಮಿ ಜಾಫರ್ ಕಾರು ಸಹಿತ ನಾಪತ್ತೆ – ವಿಟ್ಲ ಪೊಲೀಸ್ ಠಾಣೆಗೆ ದೂರು, ಆತಂಕದಲ್ಲಿ ಕುಟುಂಬಸ್ಥರು
ವಿಟ್ಲ: ಪುಣಚ ಗ್ರಾಮದ ಉದ್ಯಮಿಯೊಬ್ಬರು ಕಾರು ಸಹಿತ ದಿಢೀರ್ ನಾಪತ್ತೆಯಾಗಿರುವ ಘಟನೆ ಇಂದು ಬೆಳಿಗ್ಗೆ ನಡೆದಿದೆ.
ಪುಣಚ ಗ್ರಾಮದ ಅಚ್ಚಿಲ ನಿವಾಸಿ ಇಬ್ರಾಹಿಂ ಮುಸ್ಲಿಯಾರ್ ಅವರ ಪುತ್ರ, ಉದ್ಯಮಿ ಜಾಫರ್ ನಾಪತ್ತೆಯಾದವರಾಗಿದ್ದಾರೆ. ಇವರು ಪುಣಚದಲ್ಲಿ ‘ಅಚ್ಚಿಲ ಮೊಬೈಲ್ ಶಾಪ್’ ಹಾಗೂ ಟೂರಿಸ್ಟ್ ವಾಹನಗಳ ಉದ್ಯಮವನ್ನು ನಡೆಸುತ್ತಿದ್ದರು.
ಇಂದು (ಸೆ. 9) ಬೆಳಿಗ್ಗೆ ಸುಮಾರು 10 ಗಂಟೆಯ ವೇಳೆಗೆ ಮಂಗಳೂರಿಗೆ ಹೋಗಿ ಬರುವುದಾಗಿ ಮನೆಯಲ್ಲಿ ತಿಳಿಸಿ ಹೊರಟಿದ್ದ ಜಾಫರ್, ತದನಂತರ ಸಂಪರ್ಕಕ್ಕೆ ಸಿಕ್ಕಿಲ್ಲ. ಅವರ ಬಳಿಯಿದ್ದ ಎರಡೂ ಮೊಬೈಲ್ ಫೋನ್‌ಗಳು ಸ್ವಿಚ್ಡ್ ಆಫ್ ಆಗಿದ್ದು, ಕುಟುಂಬಸ್ಥರು ತೀವ್ರ ಆತಂಕಕ್ಕೀಡಾಗಿದ್ದಾರೆ.

ಈ ಕುರಿತು ವಿಟ್ಲ ಪೊಲೀಸ್ ಠಾಣೆಗೆ ದೂರು ನೀಡಲಾಗಿದ್ದು, ಪೊಲೀಸರು ಮೊಬೈಲ್ ನೆಟ್‌ವರ್ಕ್ ಲೊಕೇಶನ್ ಆಧಾರದ ಮೇಲೆ ತನಿಖೆ ಚುರುಕುಗೊಳಿಸಿದ್ದಾರೆ.
ವಾಹನದ ವಿವರ:
- ವಾಹನ: ಸ್ವಿಫ್ಟ್ ಡಿಸೈರ್ ಕಾರು (SWIFT DZIRE)
- ನೊಂದಣಿ ಸಂಖ್ಯೆ: KA 19 AE 1216
ಸಾರ್ವಜನಿಕರಲ್ಲಿ ವಿನಂತಿ: ಈ ಕಾರು ಅಥವಾ ಜಾಫರ್ ಅವರ ಬಗ್ಗೆ ಯಾವುದೇ ಸುಳಿವು ಲಭಿಸಿದಲ್ಲಿ ಕೂಡಲೇ ತುರ್ತು ಸಹಾಯವಾಣಿ 112 ಅಥವಾ ಹತ್ತಿರದ ಪೊಲೀಸ್ ಠಾಣೆಗೆ ಮಾಹಿತಿ ನೀಡುವಂತೆ ಕೋರಲಾಗಿದೆ.
arrest
ವರ್ಷಗಳಿಂದ ತಲೆಮರೆಸಿಕೊಂಡಿದ್ದ ವಾರಂಟ್ ಆಸಾಮಿಗಳು ಪೊಲೀಸ್ ವಶಕ್ಕೆ: ವಂಚನೆ ಹಾಗೂ ಕೊಲೆ ಪ್ರಕರಣದ ಆರೋಪಿಗಳು ಜೈಲಿಗೆ
ಮಂಗಳೂರು / ಸುಳ್ಯ: ನ್ಯಾಯಾಲಯಕ್ಕೆ ಹಾಜರಾಗದೇ ಹಲವು ವರ್ಷಗಳಿಂದ ತಲೆಮರೆಸಿಕೊಂಡಿದ್ದ ಇಬ್ಬರು ಆರೋಪಿಗಳನ್ನು ಪೊಲೀಸರು ಬಂಧಿಸಿ ನ್ಯಾಯಾಂಗ ಬಂಧನಕ್ಕೆ ಒಪ್ಪಿಸಿರುವ ಪ್ರತ್ಯೇಕ ಘಟನೆಗಳು ವರದಿಯಾಗಿವೆ.
1. ಹಣಕಾಸು ಸಂಸ್ಥೆಗೆ ವಂಚನೆ: 2012ರ ಪ್ರಕರಣದ ಆರೋಪಿ ಬಂಧನ
ಶ್ರೀರಾಮ್ ಫೈನಾನ್ಸ್ ಸಂಸ್ಥೆಯಿಂದ ಸಾಲ ಪಡೆದು ವಂಚಿಸಿದ ಪ್ರಕರಣದಲ್ಲಿ ನ್ಯಾಯಾಲಯಕ್ಕೆ ಹಾಜರಾಗದೇ ತಲೆಮರೆಸಿಕೊಂಡಿದ್ದ ಆರೋಪಿಯನ್ನು ಮಂಗಳೂರು ಉತ್ತರ ಉಪವಿಭಾಗದ ಅಪರಾಧ ಪತ್ತೆ ತಂಡವು ಬಂಧಿಸಿದೆ.
ಸುಳ್ಯ ತಾಲೂಕಿನ ಜಾಲ್ಸೂರು ಗ್ರಾಮದ ಬೈತಡ್ಕ ಮನೆ ನಿವಾಸಿ ಶ್ರೀನಿವಾಸ ಬಿ.ಆರ್ (48) ಬಂಧಿತ ಆರೋಪಿ.
ಪ್ರಕರಣದ ಹಿನ್ನೆಲೆ: ಆರೋಪಿ ಶ್ರೀನಿವಾಸ ಬಿ.ಆರ್. 2009ರ ಮೇ ತಿಂಗಳಲ್ಲಿ ಶ್ರೀರಾಮ್ ಫೈನಾನ್ಸ್ ಸಂಸ್ಥೆಯಿಂದ ಟೆಲ್ಕಾನ್ ಇ ಎಕ್ಸ್ 70 ಮೆಶಿನ್ ವಾಹನ ಖರೀದಿಸಲು ₹10,00,000 ಸಾಲ ಪಡೆದಿದ್ದರು. ಆದರೆ, ಷರತ್ತಿನಂತೆ ಸಾಲದ ಕಂತುಗಳನ್ನು ಮರುಪಾವತಿಸದೇ, ವಾಹನವನ್ನೂ ತಪಾಸಣೆಗೆ ಹಾಜರುಪಡಿಸದೇ ಸಂಸ್ಥೆಗೆ ವಂಚಿಸಿದ್ದರು. ಈ ಬಗ್ಗೆ ಮೂಡಬಿದ್ರೆ ಪೊಲೀಸ್ ಠಾಣೆಯಲ್ಲಿ ಅ.ಕ್ರ. 59/2012, ಕಲಂ 406, 420, 421 ಜೊತೆಗೆ 34 ಐಪಿಸಿ ಅಡಿ ಪ್ರಕರಣ ದಾಖಲಾಗಿತ್ತು.
ಈ ಪ್ರಕರಣದಲ್ಲಿ ಮಾನ್ಯ ನ್ಯಾಯಾಲಯವು ಜಾರಿಗೊಳಿಸಿದ್ದ ಜಾಮೀನು ರಹಿತ ವಾರಂಟ್‌ಗೆ (ಸಿಸಿ ನಂಬ್ರ 526/2025) ಹಾಜರಾಗದೇ ತಲೆಮರೆಸಿಕೊಂಡಿದ್ದ ಆರೋಪಿಯನ್ನು, ದಿನಾಂಕ 02-09-2026 ರಂದು ಜಾಲ್ಸೂರು ಗ್ರಾಮದ ಬೈತಡ್ಕ ಜಂಕ್ಷನ್‌ನಲ್ಲಿ ವಶಕ್ಕೆ ಪಡೆದು ನ್ಯಾಯಾಲಯಕ್ಕೆ ಹಾಜರುಪಡಿಸಲಾಗಿದೆ.
ಬಂಧಿತ ಆರೋಪಿ ಶ್ರೀನಿವಾಸ ವಿರುದ್ಧ ಮೂಡಬಿದ್ರೆ ಠಾಣೆಯ ವಂಚನೆ ಪ್ರಕರಣದ ಜೊತೆಗೆ, ಮಂಗಳೂರಿನ ಮಾನ್ಯ ಜೆಎಂಎಫ್‌ಸಿ 5ನೇ ನ್ಯಾಯಾಲಯದಲ್ಲಿ ಚೆಕ್ ಬೌನ್ಸ್ ಪ್ರಕರಣವೂ (ಸಿಸಿ ನಂಬ್ರ 1453/2024) ಬಾಕಿ ಉಳಿದಿದೆ.
2. ಪಶ್ಚಿಮ ಬಂಗಾಳದಲ್ಲಿ ಸುಳ್ಯ ಕೊಲೆ ಪ್ರಕರಣದ ಆರೋಪಿ ದಸ್ತಗಿರಿ
ಸುಳ್ಯ ಪೊಲೀಸ್ ಠಾಣಾ ವ್ಯಾಪ್ತಿಯ ಕೊಲೆ ಪ್ರಕರಣದಲ್ಲಿ ಹೈಕೋರ್ಟ್‌ನಿಂದ ಜಾಮೀನು ಪಡೆದು, ಕಳೆದ 2 ವರ್ಷಗಳಿಂದ ನ್ಯಾಯಾಲಯಕ್ಕೆ ಹಾಜರಾಗದೇ ತಲೆಮರೆಸಿಕೊಂಡಿದ್ದ ಪಶ್ಚಿಮ ಬಂಗಾಳ ಮೂಲದ ಆರೋಪಿಯನ್ನು ಸುಳ್ಯ ಪೊಲೀಸರು ಪಶ್ಚಿಮ ಬಂಗಾಳದಲ್ಲಿ ಬಂಧಿಸಿದ್ದಾರೆ.
ಪಶ್ಚಿಮ ಬಂಗಾಳ ರಾಜ್ಯದ ನಾದಿಯಾ ಜಿಲ್ಲೆಯ ಶ್ರೀಮಾಯಾಪುರ ಅಂಚೆಯ ಬಾಮನ್ ಪುಕೂರ್ ಗ್ರಾಮದ ನಿವಾಸಿ ಇಮ್ರಾನ್ ಶೇಖ್ ಬಂಧಿತ ಆರೋಪಿ.
ಪ್ರಕರಣದ ಹಿನ್ನೆಲೆ: ಈತನ ವಿರುದ್ಧ ಸುಳ್ಯ ಪೊಲೀಸ್ ಠಾಣೆಯಲ್ಲಿ ಅ.ಕ್ರ. 138/2022, ಕಲಂ 302, 316 IPC ಅಡಿ ಕೊಲೆ ಪ್ರಕರಣ ದಾಖಲಾಗಿದ್ದು, ಮಾನ್ಯ ಪುತ್ತೂರು ನ್ಯಾಯಾಲಯದಲ್ಲಿ (SC NO-5024/2023) ವಿಚಾರಣೆ ಚಾಲ್ತಿಯಲ್ಲಿದೆ. ಉಚ್ಚ ನ್ಯಾಯಾಲಯದಿಂದ ಜಾಮೀನು ಪಡೆದ ಬಳಿಕ ಈತ ಕೋರ್ಟ್‌ಗೆ ಹಾಜರಾಗದೇ ತಲೆಮರೆಸಿಕೊಂಡಿದ್ದ.
ಸುಳ್ಯ ವೃತ್ತ ನಿರೀಕ್ಷಕರಾದ ತಿಮ್ಮಪ್ಪ ನಾಯಕ ಹಾಗೂ ಸುಳ್ಯ ಠಾಣಾ ಪಿಎಸ್‌ಐ ಉದಯ ರವಿ ಎಂ.ವೈ. ಅವರ ಮಾರ್ಗದರ್ಶನದಂತೆ, ಠಾಣಾ ಸಿಬ್ಬಂದಿಗಳಾದ ಹೆಚ್.ಸಿ.368 ರಾಜು ನಾಯ್ಕ ಡಿ, ಪಿ.ಸಿ.2283 ಶ್ರೀಶೈಲ ಎಂ.ಕೆ. ಮತ್ತು ಪಿ.ಸಿ.1020 ಸೋಮಯ್ಯ ಹಿರೇಮಠ ಅವರ ತಂಡವು ಪಶ್ಚಿಮ ಬಂಗಾಳದ 24 ನೋರ್ಥ್ ಪರಗಣ ಜಿಲ್ಲೆಯ ಹಾದಿಪುರ್ ಗ್ರಾಮದಲ್ಲಿ ಸೆಪ್ಟೆಂಬರ್ 01, 2026 ರಂದು ಆರೋಪಿಯನ್ನು ದಸ್ತಗಿರಿ ಮಾಡಿದೆ.
ಬಂಧಿತ ಆರೋಪಿಯನ್ನು ನ್ಯಾಯಾಲಯಕ್ಕೆ ಹಾಜರುಪಡಿಸಲಾಗಿದ್ದು, ಮಾನ್ಯ ನ್ಯಾಯಾಲಯವು ಆರೋಪಿಗೆ ನ್ಯಾಯಾಂಗ ಬಂಧನ ವಿಧಿಸಿದೆ
-
accident2 months agoಬಿ.ಸಿ. ರೋಡ್ ಸರ್ಕಲ್ನಲ್ಲಿ ಭೀಕರ ಅಪಘಾತ: ಟಿಪ್ಪರ್-ಆಕ್ಟಿವಾ ನಡುವೆ ಡಿಕ್ಕಿ, ಸವಾರರಿಬ್ಬರೂ ದುರ್ಮರಣ
-
Bantawala2 months agoಬಂಟ್ವಾಳದಲ್ಲಿ ಭೀಕರ ಹತ್ಯಾಕಾಂಡ: ಬಸ್ನಲ್ಲಿ ಕುಳಿತಿದ್ದ ಯುವತಿಯನ್ನು ಸಾರ್ವಜನಿಕರೆದುರೇ ಕೊಚ್ಚಿ ಕೊಂದ ತಲೆಹರಟೆ ಪ್ರೇಮಿ!
-
crime8 months agoಅತ್ಯಾಚಾರ ಯತ್ನಕ್ಕೆ ತಡೆದ ಸೊಸೆಯ ಮುಖಕ್ಕೆ ಕಚ್ಚಿ ಕೊಲೆಗೆ ಯತ್ನಿಸಿದ ಮಾವ..ತಂದೆಯ ರಾಕ್ಷಸೀ ಕೃತ್ಯಕ್ಕೆ ಬೆಂಬಲಿಸಿದ ಗಂಡ..ಸುಳ್ಯ ಠಾಣಾ ವ್ಯಾಪ್ತಿಯಲ್ಲಿ ಅದೃಷ್ಟವಶಾತ್ ಬಚಾವಾದ ಸೊಸೆ..
-
crime6 months agoಧಾರ್ಮಿಕ ನಂಬಿಕೆಗೆ ಅವಮಾನ: ಕೊಡಗಿನ ಎಮ್ಮೆಮಾಡಿನಲ್ಲಿ ದೈವದ ವೇಷದಂತೆ ಧರಿಸಿ ಮದುಮಗನ ಅತಿರೇಕದ ವರ್ತನೆ!
-
Bantawala6 months agoವಿಟ್ಲದಲ್ಲಿ ನಡೆಯಿತೊಂದು ದೈವ ಕಾರಣಿಕ; ಪೊಲೀಸರ ಕಣ್ಣಿಗೆ ಮಣ್ಣೆರಚಿದರೂ ದೈವದ ದೃಷ್ಟಿಗೆ ತತ್ತರಿಸಿದ ದನಕಳ್ಳ..
-
Bantawala9 months agoನಾಗಬನ, ರಕ್ತೇಶ್ವರಿ ತಾಣ, ದೈವದೇವರ ಸಾನಿಧ್ಯ ದ್ವಂಸ ಗೊಳಿಸಿದ ಧರ್ಮದ್ರೋಹಿ ಕೃತ್ಯದ ವಿರುದ್ಧ ಭಕ್ತರ ಆಕ್ರೋಶ ; ನಾಶವಾದ ಸಾನಿಧ್ಯದಲ್ಲಿಯೇ ಸ್ವಾಮೀಜಿಯವರ ಮಾರ್ಗದರ್ಶನದಲ್ಲಿ ಕುಟುಂಬಸ್ತರು, ಸಾರ್ವಜನಿಕರ ಸಾಮೂಹಿಕ ಪ್ರಾರ್ಥನೆ
-
accident2 months agoBreaking: ಬಂಟ್ವಾಳದಲ್ಲಿ ಶಾಲಾ ಬಸ್ ಮೇಲೆ ಉರುಳಿದ ಬೃಹತ್ ಮರ; ಕಲ್ಲಡ್ಕ ಶ್ರೀರಾಮ ಶಾಲೆಯ ಓರ್ವ ವಿದ್ಯಾರ್ಥಿ ಸಾವು, ಕೆಲವರು ಗಂಭೀರ, ಹಲವರಿಗೆ ಗಾಯ!
-
accident4 months agoವಿಟ್ಲ ಆಕಾಶದಲ್ಲಿ ಹಾರಾಡಿದ ವಿಮಾನ: ತಾಂತ್ರಿಕ ದೋಷವಲ್ಲ, ಹವಾಮಾನ ವೈಪರೀತ್ಯದ ಕಾರಣ ! ಸಾರ್ವಜನಿಕರು ಆತಂಕ ಪಡುವ ಅಗತ್ಯವಿಲ್ಲ
