education
ಸೈನಿಕರು ಇನ್ನು ಮುಂದೆ ಸಾಮಾಜಿಕ ಜಾಲತಾಣದಲ್ಲಿ ಪೋಸ್ಟ್ ಹಾಕುವಂತಿಲ್ಲ ! ವೀಕ್ಷಣೆಗೆ ಮಾತ್ರ ಮೀಸಲು – ಭಾರತೀಯ ಸೇನೆ ಆದೇಶ
ಯೋಧರು ಇನ್ನು ಮುಂದೆ ಇನ್‌ಸ್ಟಾಗ್ರಾಮ್ ಮತ್ತು ಎಕ್ಸ್ \ ತಾಣಗಳನ್ನು. ಕೇವಲ ಮಾಹಿತಿ ಪಡೆಯಲು ಅಥವಾ ವಿಡಿಯೋ/ಪೋಸ್ಟ್ಗಳನ್ನು ನೋಡಲು ಮಾತ್ರ ಬಳಸಬಹುದಾಗಿರುತ್ತದೆ. ಯೋಧರು ಯಾವುದೇ ಪೋಸ್ಟ್ಗಳನ್ನು ಹಾಕುವಂತಿಲ್ಲ, ಯಾವುದೇ ವಿಚಾರಕ್ಕೆ ಪ್ರತಿಕ್ರಿಯೆ ನೀಡುವಂತಿಲ್ಲ ಅಥವಾ ಲೈಕ್ ಮಾಡುವಂತಿಲ್ಲ. ಕೇವಲ ಆ ಪೋಸ್ಟ್ಗಳನ್ನ ಮಾತ್ರ ವೀಕ್ಷಿಸಬಹುದು ಎಂಬುವುದಾಗಿ ಭಾರತೀಯ ಸೇನೆಯ ಇತ್ತೀಚಿನ ಆದೇಶದಲ್ಲಿ ತಿಳಿಸಲಾಗಿದೆ.

ದೇಶದ ರಕ್ಷಣೆ ಮಾಡುವ ಯೋಧರ ಶಿಸ್ತು ಮತ್ತು ಭದ್ರತೆಯ ದೃಷ್ಟಿಯಿಂದ ಭಾರತೀಯ ಸೇನೆಯು ತನ್ನ ಸಾಮಾಜಿಕ ಮಾಧ್ಯಮ ಬಳಕೆಯ ನೀತಿಯಲ್ಲಿ ಮಹತ್ವದ ತಿದ್ದುಪಡಿ ಮಾಡಿದೆ. ದಶಕಗಳಿಂದಲೂ ಯೋಧರು ಸಾರ್ವಜನಿಕವಾಗಿ ಸೋಶಿಯಲ್ ಮೀಡಿಯಾ ಬಳಸುವುದರ ಮೇಲೆ ಕಟ್ಟುನಿಟ್ಟಿನ ನಿಷೇಧವಿತ್ತು. ಈಗ ಆ ನಿಯಮದಲ್ಲಿ ಸಣ್ಣ ಸಡಿಲಿಕೆ ಮಾಡಲಾಗಿದ್ದು, ಜ್ಞಾನಾರ್ಜನೆಯ ಉದ್ದೇಶಕ್ಕಾಗಿ ಕೆಲವು ಸಾಮಾಜಿಕ ಜಾಲತಾಣಗಳನ್ನು ಬಳಸಲು ಅನುಮತಿ ನೀಡಲಾಗಿದೆ.
ಶತ್ರು ರಾಷ್ಟ್ರಗಳ ಗುಪ್ತಚರ ಸಂಸ್ಥೆಗಳು ಸುಂದರ ಯುವತಿಯರ ಹೆಸರಿನಲ್ಲಿ ಫೇಕ್ ಪ್ರೊಫೈಲ್ ಸೃಷ್ಟಿಸಿ ಯೋಧರನ್ನು ಸ್ನೇಹದ ಜಾಲಕ್ಕೆ ಬೀಳಿಸುತ್ತವೆ. ಈ ಮೂಲಕ ಸೇನೆಯ ರಹಸ್ಯ ಮಾಹಿತಿಗಳನ್ನು ಕದಿಯುವ ಅಪಾಯವಿರುತ್ತದೆ. ತಿಳಿಯದೆಯೇ ಯೋಧರು ತಮ್ಮ ಸ್ಥಳ ಅಥವಾ ಸೇನಾ ನೆಲೆಯ ಫೋಟೋಗಳನ್ನು ಹಂಚಿಕೊoಡಾಗ, ಅದು ದೇಶದ ಭದ್ರತೆಗೆ ದೊಡ್ಡ ಸಂಚಕಾರ ತರಬಲ್ಲದು ಎಂಬ ಎರಡು ಕಾರಣಗಳು ಈ ಕಠಿಣ ನಿರ್ಧಾರಕ್ಕೆ ಕಾರಣವಾಗಿದೆ.

ಫೇಸ್‌ಬುಕ್ ಸೇರಿದಂತೆ ಚೀನಾ ಮೂಲದ ಆಪ್‌ಗಳು ಮತ್ತು ಇತರ ಮೆಸೇಜಿಂಗ್ ಆಪ್‌ಗಳ ಮೇಲಿನ ಸಂಪೂರ್ಣ ನಿಷೇಧ ಹಾಗೆಯೇ ಮುಂದುವರಿಯಲಿದೆ. ಸೂಕ್ಷ್ಮ ಪ್ರದೇಶಗಳಲ್ಲಿ ಕಾರ್ಯನಿರ್ವಹಿಸುವ ಯೋಧರಿಗೆ ಸ್ಮಾರ್ಟ್ಫೋನ್ ಬಳಕೆಯ ಮೇಲೂ ಮಿತಿ ಹೇರಲಾಗಿದೆ. ಈ ಹೊಸ ಬದಲಾವಣೆಯು ಕೇವಲ ಯೋಧರು ಜಾಗತಿಕ ವಿದ್ಯಮಾನಗಳನ್ನು ತಿಳಿದುಕೊಳ್ಳಲಿ ಎಂಬ ಉದ್ದೇಶವನ್ನು ಹೊಂದಿದೆ.
ತoತ್ರಜ್ಞಾನದ ಯುಗದಲ್ಲಿ ಮಾಹಿತಿ ಎಲ್ಲರಿಗೂ ಅಗತ್ಯ. ಆದರೆ ದೇಶದ ಭದ್ರತೆಯ ವಿಷಯ ಬಂದಾಗ ಶಿಸ್ತು ಅತಿ ಮುಖ್ಯ. ಭಾರತೀಯ ಸೇನೆಯ ಈ ಸಮತೋಲಿತ ನಿರ್ಧಾರವು ಯೋಧರಿಗೆ ಬಾಹ್ಯ ಪ್ರಪಂಚದ ಅರಿವು ಮೂಡಿಸುವ ಜೊತೆಗೆ ರಾಷ್ಟ್ರೀಯ ಭದ್ರತೆಯನ್ನು ಕಾಪಾಡುವಲ್ಲಿ ಯಶಸ್ವಿಯಾಗಲಿದೆ ಎಂದು ನಿರೀಕ್ಷಿಸಲಾಗಿದೆ
Bantawala
ಬಂಟ್ವಾಳದ ಏಮಾಜೆ ಸರ್ಕಾರಿ ಶಾಲೆ: ಗ್ರಾಮೀಣ ಶಿಕ್ಷಣ ರಂಗದ ವಿಶಿಷ್ಟ ಯಶೋಗಾಥೆ
ದಕ್ಷಿಣ ಕನ್ನಡ ಜಿಲ್ಲೆಯ ಬಂಟ್ವಾಳ ತಾಲೂಕಿನ ನೆಟ್ಲಮುಡ್ನೂರು ಗ್ರಾಮದಲ್ಲಿರುವ ಏಮಾಜೆ ಸರ್ಕಾರಿ ಹಿರಿಯ ಪ್ರಾಥಮಿಕ ಶಾಲೆಯು ಇಂದು ಕೇವಲ ಒಂದು ಶಿಕ್ಷಣ ಸಂಸ್ಥೆಯಷ್ಟೇ ಅಲ್ಲ, ಬದಲಿಗೆ ರಾಜ್ಯದ ಇಡೀ ಸರ್ಕಾರಿ ಶಾಲಾ ವ್ಯವಸ್ಥೆಗೆ ದಾರಿದೀಪವಾಗಿರುವ ಒಂದು ಅದ್ಭುತ ಮಾದರಿಯಾಗಿದೆ. ಗ್ರಾಮೀಣ ಪ್ರದೇಶದ ಸರ್ಕಾರಿ ಶಾಲೆಗಳೆಂದರೆ ಮೂಲಸೌಕರ್ಯಗಳ ಕೊರತೆ ಮತ್ತು ಮಕ್ಕಳ ಸಂಖ್ಯೆ ಇಳಿಕೆ ಎಂಬ ನಕಾರಾತ್ಮಕ ಧೋರಣೆಯನ್ನು ಈ ಶಾಲೆ ತನ್ನ ಸೃಜನಶೀಲ ಹೆಜ್ಜೆಗಳಿಂದ ಸುಳ್ಳಾಗಿಸಿದೆ.

ಶಾಲೆಯ ಪ್ರಮುಖ ಮೈಲುಗಲ್ಲುಗಳು ಮತ್ತು ವಿಶೇಷತೆಗಳು
ಭದ್ರವಾದ ಬುನಾದಿ: 1982-83ರಲ್ಲಿ ಸ್ಥಾಪನೆಗೊಂಡ ಈ ಶಾಲೆ, ಇಂದು ಎಲ್‌ಕೆಜಿಯಿಂದ (LKG) 5ನೇ ತರಗತಿಯವರೆಗೆ ಒಟ್ಟು 104 ವಿದ್ಯಾರ್ಥಿಗಳನ್ನು ಒಳಗೊಂಡು ಹೆಮ್ಮೆಯಿಂದ ಬೆಳೆದು ನಿಂತಿದೆ.
ಗುಣಮಟ್ಟದ ಬೋಧನೆ: ಇಲ್ಲಿ 2 ಜನ ಸಮರ್ಪಿತ ಸರ್ಕಾರಿ ಶಿಕ್ಷಕರು ಹಾಗೂ 3 ಜನ ಗೌರವ ಶಿಕ್ಷಕಿಯರು ಮಕ್ಕಳ ಸರ್ವತೋಮುಖ ಬೆಳವಣಿಗೆಗೆ ಶ್ರಮಿಸುತ್ತಿದ್ದಾರೆ.

ಉಚಿತ ಆಟೋ ಸಾರಿಗೆ ಸೇವೆ: ದೂರದ ಊರುಗಳಿಂದ ಬರುವ ಪುಟಾಣಿ ಮಕ್ಕಳ ಅನುಕೂಲಕ್ಕಾಗಿ 2013-14ನೇ ಸಾಲಿನಿಂದಲೇ ಸ್ವಂತ ಶಾಲಾ ಆಟೋ ಮೂಲಕ ಸಂಪೂರ್ಣ ಉಚಿತ ಸಾರಿಗೆ ವ್ಯವ ಕಲ್ಪಿಸಲಾಗಿದೆ. ಇದು ಮಕ್ಕಳ ದಾಖಲಾತಿ ಹೆಚ್ಚಳಕ್ಕೆ ಪ್ರಮುಖ ಕಾರಣವಾಗಿದೆ.
ಕೃಷಿ ಮತ್ತು ಪರಿಸರ ಪಾಠ: ಶಾಲೆಯ ಹೆಸರಿನಲ್ಲಿ 2 ಎಕರೆ ಕೃಷಿ ಜಮೀನಿದ್ದು, ನೂರಕ್ಕೂ ಅಧಿಕ ತೆಂಗಿನ ಮರಗಳು, ಔಷಧೀಯ ಗಿಡಗಳು, ಹಣ್ಣು-ಹಂಪಲು ಮತ್ತು ತರಕಾರಿಗಳನ್ನು ಬೆಳೆಸಲಾಗಿದೆ. ಇದು ಮಕ್ಕಳಿಗೆ ಪ್ರಾಯೋಗಿಕ ಕೃಷಿ ಜ್ಞಾನ ನೀಡುತ್ತದೆ.
ತಂತ್ರಜ್ಞಾನ ಮತ್ತು ನಾವೀನ್ಯತೆ: ಇನ್ಫೋಸಿಸ್ ಸಂಸ್ಥೆಯ ಕೊಡುಗೆಯಾದ ಕಂಪ್ಯೂಟರ್‌ಗಳ ಮೂಲಕ 1ನೇ ತರಗತಿಯಿಂದಲೇ ಗಣಕಯಂತ್ರ ಶಿಕ್ಷಣ ನೀಡಲಾಗುತ್ತಿದೆ. ಜತೆಗೆ ಮಳೆ ಕೊಯ್ಲು, ಇಂಗು ಗುಂಡಿ ಮತ್ತು ಎರೆಹುಳ ಗೊಬ್ಬರ ಘಟಕಗಳನ್ನು ಅಳವಡಿಸಲಾಗಿದೆ.
ಪ್ರಶಸ್ತಿ ಹಾಗೂ ಗೌರವಗಳ ಗರಿ
ಶಾಲೆ ಮತ್ತು ಸಮಿತಿಯ ನಿರಂತರ ಪರಿಶ್ರಮಕ್ಕೆ ಸರಕಾರ ಹಾಗೂ ಪ್ರತಿಷ್ಠಿತ ಸಂಸ್ಥೆಗಳಿಂದ ಹಲವು ಪ್ರಮುಖ ಪ್ರಶಸ್ತಿಗಳು ಒಲಿದುಬಂದಿವೆ:
- ಜಿಲ್ಲಾ ಅತ್ಯುತ್ತಮ ಶಿಕ್ಷಕಿ ಪ್ರಶಸ್ತಿ: ಮುಖ್ಯ ಶಿಕ್ಷಕಿ ಶ್ರೀಮತಿ ತ್ರಿವೇಣಿ ಅವರಿಗೆ 2019-20ರಲ್ಲಿ ಲಭಿಸಿದೆ.
- ರಾಜ್ಯ ಮಟ್ಟದ ಉತ್ತಮ SDMC ಪ್ರಶಸ್ತಿ: ಶಾಲಾ ಅಭಿವೃದ್ಧಿ ಮತ್ತು ಮೇಲ್ವಿಚಾರಣಾ ಸಮಿತಿಗೆ 2024-25ರಲ್ಲಿ ಸಂದಿದೆ.
- ಹಸಿರು ನೈರ್ಮಲ್ಯ ಶಾಲಾ ಪ್ರಶಸ್ತಿ: 2024ರಲ್ಲಿ ಶ್ರೀ ಸತ್ಯಸಾಯಿ ಅನ್ನಪೂರ್ಣ ಟ್ರಸ್ಟ್‌ನಿಂದ ಇದು ಲಭಿಸಿದೆ.
ಮುಂದಿನ ಕನಸುಗಳು ಮತ್ತು ದಾನಿಗಳ ಸಹಕಾರದ ಅಪೇಕ್ಷೆ
ಹಳೆ ವಿದ್ಯಾರ್ಥಿ ಸಂಘ, ಎಸ್‌ಡಿಎಂಸಿ (SDMC), ಪೋಷಕರು ಹಾಗೂ ನೇರಳಕಟ್ಟೆ ಸಹಕಾರಿ ಸಂಘದ ಜಂಟಿ ಸಹಕಾರದಿಂದ ಮುನ್ನಡೆಯುತ್ತಿರುವ ಈ ಶಾಲೆಗೆ ಪ್ರಸ್ತುತ ಕೆಲವು ತುರ್ತು ಅವಶ್ಯಕತೆಗಳಿವೆ. ಮಕ್ಕಳ ಸುರಕ್ಷಿತ ಪ್ರಯಾಣಕ್ಕಾಗಿ ಒಂದು ಶಾಲಾ ವಾಹನ ಹಾಗೂ ಶಾಲೆಯ ಸಾಂಸ್ಕೃತಿಕ ಕಾರ್ಯಕ್ರಮಗಳಿಗೆ ಒಂದು ಸುಸಜ್ಜಿತ ಸಭಾಂಗಣದ (Auditorium) ಕೊರತೆ ಇದೆ.
ಗ್ರಾಮೀಣ ಮಕ್ಕಳ ಭವಿಷ್ಯವನ್ನು ಉಜ್ವಲಗೊಳಿಸುವ ಈ ಮಾದರಿ ಶಾಲೆಗೆ ಸಹೃದಯಿ ದಾನಿಗಳು ಹಾಗೂ ವಿದ್ಯಾಭಿಮಾನಿಗಳು ಕೈಜೋಡಿಸಿ, ಮತ್ತಷ್ಟು ಎತ್ತರಕ್ಕೆ ಬೆಳೆಯಲು ಸಹಕರಿಸಬೇಕಾಗಿ ವಿನಂತಿ.
Dakshina Kannada
ದಕ್ಷಿಣ ಕನ್ನಡ ಜಿಲ್ಲೆಯಾದ್ಯಂತ ಭಾರಿ ಮಳೆ: ಜುಲೈ 24ರಂದು ಶಾಲೆ, ಪಿಯು ಮತ್ತು ಐಟಿಐ ಕಾಲೇಜುಗಳಿಗೆ ರಜೆ ಘೋಷಣೆ!
ಮಂಗಳೂರು: ದಕ್ಷಿಣ ಕನ್ನಡ ಜಿಲ್ಲೆಯಾದ್ಯಂತ ಭಾರಿ ಮಳೆಯಾಗುತ್ತಿದ್ದು, ಹವಾಮಾನ ಇಲಾಖೆ ಹಾಗೂ ಕರ್ನಾಟಕ ರಾಜ್ಯ ನೈಸರ್ಗಿಕ ವಿಕೋಪ ಉಸ್ತುವಾರಿ ಕೇಂದ್ರದ (KSNDMC) ಮುನ್ಸೂಚನೆಯಂತೆ ಮಳೆ ಮುಂದುವರಿಯುವ ಸಾಧ್ಯತೆ ಇದೆ. ಈ ಹಿನ್ನೆಲೆಯಲ್ಲಿ ಮುನ್ನೆಚ್ಚರಿಕಾ ಕ್ರಮವಾಗಿ ಜಿಲ್ಲಾ ವಿಪತ್ತು ನಿರ್ವಹಣಾ ಪ್ರಾಧಿಕಾರವು ಜುಲೈ 24, 2026 (ಶುಕ್ರವಾರ) ರಂದು ಜಿಲ್ಲೆಯ ಪ್ರಮುಖ ಶಿಕ್ಷಣ ಸಂಸ್ಥೆಗಳಿಗೆ ರಜೆ ಘೋಷಿಸಿ ಆದೇಶ ಹೊರಡಿಸಿದೆ.
ಯಾವುದಕ್ಕೆಲ್ಲಾ ರಜೆ?
ಜಿಲ್ಲಾಧಿಕಾರಿಗಳು ಹಾಗೂ ಜಿಲ್ಲಾ ವಿಪತ್ತು ನಿರ್ವಹಣಾ ಪ್ರಾಧಿಕಾರದ ಅಧ್ಯಕ್ಷರು ಹೊರಡಿಸಿರುವ ಪ್ರಕಟಣೆಯಂತೆ ಈ ಕೆಳಗಿನ ಸಂಸ್ಥೆಗಳಿಗೆ ರಜೆ ಅನ್ವಯವಾಗಲಿದೆ:
- ಎಲ್ಲಾ ಅಂಗನವಾಡಿ ಕೇಂದ್ರಗಳು
- ಎಲ್ಲಾ ಸರ್ಕಾರಿ, ಅನುದಾನಿತ ಮತ್ತು ಖಾಸಗಿ ಶಾಲೆಗಳು (ಎಲ್ಲಾ ವಸತಿ ಶಾಲೆಗಳೂ ಸೇರಿದಂತೆ)
- ಎಲ್ಲಾ ಪದವಿ ಪೂರ್ವ ಕಾಲೇಜುಗಳು / 12ನೇ ತರಗತಿವರೆಗೆ (ಎಲ್ಲಾ ವಸತಿ ಕಾಲೇಜುಗಳೂ ಸೇರಿದಂತೆ)
- ಎಲ್ಲಾ ITI ಮತ್ತು ಡಿಪ್ಲೊಮಾ ಕಾಲೇಜುಗಳು (ಎಲ್ಲಾ ವಸತಿ ಕಾಲೇಜುಗಳೂ ಸೇರಿದಂತೆ)
ಸೂಚನೆ: ಈ ರಜೆ ಆದೇಶವನ್ನು ಕಡ್ಡಾಯವಾಗಿ ಪಾಲಿಸತಕ್ಕದ್ದು. ನಿಯಮ ಉಲ್ಲಂಘಿಸಿದವರ ವಿರುದ್ಧ ವಿಪತ್ತು ನಿರ್ವಹಣಾ ಕಾಯ್ದೆ-2005 ರ ಪ್ರಕಾರ ಕಾನೂನು ಕ್ರಮ ಜರುಗಿಸಲಾಗುವುದು ಎಂದು ತಿಳಿಸಲಾಗಿದೆ.
ಸಾರ್ವಜನಿಕರು ಮತ್ತು ಪ್ರವಾಸಿಗರಿಗೆ ಜಿಲ್ಲಾಡಳಿತ ನೀಡಿದ ಮುನ್ನೆಚ್ಚರಿಕೆಗಳು:
- ಪಾಲಕರಿಗೆ ಜಾಗ್ರತೆ: ನೀರಿರುವ ತಗ್ಗು ಪ್ರದೇಶ, ಕೆರೆ, ನದಿ ತೀರ ಮತ್ತು ಸಮುದ್ರ ತೀರಕ್ಕೆ ಮಕ್ಕಳು ಹೋಗದಂತೆ ಪಾಲಕರು ಜಾಗ್ರತೆ ವಹಿಸಬೇಕು.
- ಮೀನುಗಾರರಿಗೆ ಎಚ್ಚರಿಕೆ: ಮೀನುಗಾರರು ಈ ಸಮಯದಲ್ಲಿ ಸಮುದ್ರಕ್ಕೆ ಇಳಿಯಬಾರದು ಎಂದು ಸೂಚಿಸಲಾಗಿದೆ.
- ಪ್ರವಾಸಿಗರಿಗೆ ನಿರ್ಬಂಧ: ಪ್ರವಾಸಿಗರು ಮತ್ತು ಸಾರ್ವಜನಿಕರು ನದಿ ತೀರ ಹಾಗೂ ಸಮುದ್ರ ತೀರಕ್ಕೆ ತೆರಳದಂತೆ ಕಟ್ಟುನಿಟ್ಟಿನ ಸೂಚನೆ ನೀಡಲಾಗಿದೆ.
- ಕಾಳಜಿ ಕೇಂದ್ರಗಳು ಸಜ್ಜು: ತಾಲೂಕು ಮಟ್ಟದಲ್ಲಿ ಪ್ರಕೃತಿ ವಿಕೋಪ ಎದುರಿಸಲು ಕಾಲೇಜು / ಕಾಳಜಿ ಕೇಂದ್ರಗಳನ್ನು ಸಜ್ಜಾಗಿಡಲು ಸೂಚಿಸಲಾಗಿದೆ.
ತುರ್ತು ಸಹಾಯವಾಣಿ (Helpline Numbers):
ಮಳೆಯಿಂದ ಉಂಟಾಗುವ ಪ್ರಕೃತಿ ವಿಕೋಪಕ್ಕೆ ಸಂಬಂಧಿಸಿದ ಯಾವುದೇ ತುರ್ತು ಪರಿಸ್ಥಿತಿಯಲ್ಲಿ ಜಿಲ್ಲಾಡಳಿತದ ಈ ಕೆಳಗಿನ ದೂರವಾಣಿ ಸಂಖ್ಯೆಗಳನ್ನು ಸಂಪರ್ಕಿಸಬಹುದು:
- ಟೋಲ್ ಫ್ರೀ ಸಂಖ್ಯೆ (Toll-Free No):
1077 - ದೂರವಾಣಿ ಸಂಖ್ಯೆ:
0824-2442590
Bantawala
ಕನ್ಯಾನ ಸರ್ಕಾರಿ ಕಾಲೇಜಿನಲ್ಲಿ ಸ್ಪರ್ಧಾತ್ಮಕ ಪರೀಕ್ಷೆಗಳ ಕುರಿತು ಮಾಹಿತಿ ಕಾರ್ಯಾಗಾರ
ಕನ್ಯಾನ: ಇಲ್ಲಿನ ಸರ್ಕಾರಿ ಪ್ರಥಮ ದರ್ಜೆ ಕಾಲೇಜಿನ ಆಂತರಿಕ ಗುಣಮಟ್ಟ ಭರವಸಾ ಕೋಶ (IQAC) ಹಾಗೂ ಪ್ಲೇಸ್‌ಮೆಂಟ್ ಸೆಲ್ ವತಿಯಿಂದ ವಿದ್ಯಾರ್ಥಿಗಳಿಗಾಗಿ ‘ಸ್ಪರ್ಧಾತ್ಮಕ ಪರೀಕ್ಷೆಗಳು ಹಾಗೂ ಅವಕಾಶಗಳು’ ಎಂಬ ವಿಷಯದ ಕುರಿತು ಇತ್ತೀಚೆಗೆ ವಿಶೇಷ ಕಾರ್ಯಾಗಾರವನ್ನು ಆಯೋಜಿಸಲಾಗಿತ್ತು.

ಕಾರ್ಯಕ್ರಮದಲ್ಲಿ ಸಂಪನ್ಮೂಲ ವ್ಯಕ್ತಿಯಾಗಿ ಭಾಗವಹಿಸಿ ಮಾತನಾಡಿದ ಕಾಲೇಜಿನ ನಿಕಟಪೂರ್ವ ಉಪನ್ಯಾಸಕ ಕಿರಣ್ ಪ್ರಸಾದ್ ಅವರು, “ನಮ್ಮ ಬದುಕಿನ ಪಥವನ್ನು ರೂಪಿಸಿಕೊಳ್ಳಬೇಕಾದವರು ನಾವೇ. ಆದ್ದರಿಂದ ನಮಗೆ ಸಿಗುವ ಪ್ರತಿಯೊಂದು ಸಣ್ಣ ಅವಕಾಶವನ್ನೂ ಸದುಪಯೋಗ ಪಡಿಸಿಕೊಳ್ಳಬೇಕು,” ಎಂದು ವಿದ್ಯಾರ್ಥಿಗಳಿಗೆ ಕಿವಿಮಾತು ಹೇಳಿದರು. ಅಲ್ಲದೆ, ವಿವಿಧ ಉದ್ಯೋಗಾವಕಾಶಗಳು ಹಾಗೂ ಸ್ಪರ್ಧಾತ್ಮಕ ಪರೀಕ್ಷೆಗಳ ತಯಾರಿಯ ಬಗ್ಗೆ ಉಪಯುಕ್ತ ಮಾಹಿತಿಯನ್ನು ಹಂಚಿಕೊಂಡರು.

ವೇದಿಕೆಯಲ್ಲಿ ಇತಿಹಾಸ ವಿಭಾಗದ ಸಹಾಯಕ ಪ್ರಾಧ್ಯಾಪಕಿ ಶ್ರೀಮತಿ ಸವಿತಾ, ವಾಣಿಜ್ಯಶಾಸ್ತ್ರ ವಿಭಾಗದ ಸಹಾಯಕ ಪ್ರಾಧ್ಯಾಪಕಿ ಶ್ರೀಮತಿ ಚೈತ್ರಾ ಉಪಸ್ಥಿತರಿದ್ದರು. ಕಾರ್ಯಕ್ರಮದಲ್ಲಿ ಕಾಲೇಜಿನ ಎಲ್ಲಾ ವಿಭಾಗದ ಉಪನ್ಯಾಸಕರು ಹಾಗೂ ನೂರಾರು ವಿದ್ಯಾರ್ಥಿಗಳು ಪಾಲ್ಗೊಂಡಿದ್ದರು.

ವಿದ್ಯಾರ್ಥಿ ಖಲೀಲ್ ಇಬ್ರಾಹಿಂ ಸ್ವಾಗತಿಸಿ, ಸ್ನೇಹಾ ಎನ್. ವಂದಿಸಿದರು. ಶರಣ್ಯ ಕಾರ್ಯಕ್ರಮ ನಿರೂಪಿಸಿದರೆ, ಇಶ್ಮಿತಾ ಮತ್ತು ಬಳಗದವರು ಪ್ರಾರ್ಥನೆ ನೆರವೇರಿಸಿದರು.
-
accident1 month agoಬಿ.ಸಿ. ರೋಡ್ ಸರ್ಕಲ್ನಲ್ಲಿ ಭೀಕರ ಅಪಘಾತ: ಟಿಪ್ಪರ್-ಆಕ್ಟಿವಾ ನಡುವೆ ಡಿಕ್ಕಿ, ಸವಾರರಿಬ್ಬರೂ ದುರ್ಮರಣ
-
Bantawala2 months agoಬಂಟ್ವಾಳದಲ್ಲಿ ಭೀಕರ ಹತ್ಯಾಕಾಂಡ: ಬಸ್ನಲ್ಲಿ ಕುಳಿತಿದ್ದ ಯುವತಿಯನ್ನು ಸಾರ್ವಜನಿಕರೆದುರೇ ಕೊಚ್ಚಿ ಕೊಂದ ತಲೆಹರಟೆ ಪ್ರೇಮಿ!
-
crime8 months agoಅತ್ಯಾಚಾರ ಯತ್ನಕ್ಕೆ ತಡೆದ ಸೊಸೆಯ ಮುಖಕ್ಕೆ ಕಚ್ಚಿ ಕೊಲೆಗೆ ಯತ್ನಿಸಿದ ಮಾವ..ತಂದೆಯ ರಾಕ್ಷಸೀ ಕೃತ್ಯಕ್ಕೆ ಬೆಂಬಲಿಸಿದ ಗಂಡ..ಸುಳ್ಯ ಠಾಣಾ ವ್ಯಾಪ್ತಿಯಲ್ಲಿ ಅದೃಷ್ಟವಶಾತ್ ಬಚಾವಾದ ಸೊಸೆ..
-
crime6 months agoಧಾರ್ಮಿಕ ನಂಬಿಕೆಗೆ ಅವಮಾನ: ಕೊಡಗಿನ ಎಮ್ಮೆಮಾಡಿನಲ್ಲಿ ದೈವದ ವೇಷದಂತೆ ಧರಿಸಿ ಮದುಮಗನ ಅತಿರೇಕದ ವರ್ತನೆ!
-
Bantawala6 months agoವಿಟ್ಲದಲ್ಲಿ ನಡೆಯಿತೊಂದು ದೈವ ಕಾರಣಿಕ; ಪೊಲೀಸರ ಕಣ್ಣಿಗೆ ಮಣ್ಣೆರಚಿದರೂ ದೈವದ ದೃಷ್ಟಿಗೆ ತತ್ತರಿಸಿದ ದನಕಳ್ಳ..
-
Bantawala8 months agoನಾಗಬನ, ರಕ್ತೇಶ್ವರಿ ತಾಣ, ದೈವದೇವರ ಸಾನಿಧ್ಯ ದ್ವಂಸ ಗೊಳಿಸಿದ ಧರ್ಮದ್ರೋಹಿ ಕೃತ್ಯದ ವಿರುದ್ಧ ಭಕ್ತರ ಆಕ್ರೋಶ ; ನಾಶವಾದ ಸಾನಿಧ್ಯದಲ್ಲಿಯೇ ಸ್ವಾಮೀಜಿಯವರ ಮಾರ್ಗದರ್ಶನದಲ್ಲಿ ಕುಟುಂಬಸ್ತರು, ಸಾರ್ವಜನಿಕರ ಸಾಮೂಹಿಕ ಪ್ರಾರ್ಥನೆ
-
accident2 months agoBreaking: ಬಂಟ್ವಾಳದಲ್ಲಿ ಶಾಲಾ ಬಸ್ ಮೇಲೆ ಉರುಳಿದ ಬೃಹತ್ ಮರ; ಕಲ್ಲಡ್ಕ ಶ್ರೀರಾಮ ಶಾಲೆಯ ಓರ್ವ ವಿದ್ಯಾರ್ಥಿ ಸಾವು, ಕೆಲವರು ಗಂಭೀರ, ಹಲವರಿಗೆ ಗಾಯ!
-
accident4 months agoವಿಟ್ಲ ಆಕಾಶದಲ್ಲಿ ಹಾರಾಡಿದ ವಿಮಾನ: ತಾಂತ್ರಿಕ ದೋಷವಲ್ಲ, ಹವಾಮಾನ ವೈಪರೀತ್ಯದ ಕಾರಣ ! ಸಾರ್ವಜನಿಕರು ಆತಂಕ ಪಡುವ ಅಗತ್ಯವಿಲ್ಲ
