Connect with us

DEATH

ಉಪ್ಪಿನಂಗಡಿ: ದ್ವಿಚಕ್ರ ವಾಹನ, ಮೊಬೈಲ್ ಸೇತುವೆ ಮೇಲೆ ಬಿಟ್ಟು ನಾಪತ್ತೆಯಾಗಿದ್ದ ವ್ಯಕ್ತಿ ನೇತ್ರಾವತಿ ನದಿಯಲ್ಲಿ ಶವವಾಗಿ ಪತ್ತೆ

Published

on

ಉಪ್ಪಿನಂಗಡಿ: ಉಪ್ಪಿನಂಗಡಿಯ ಕುಮಾರಧಾರ ಹಳೆ ಸೇತುವೆಯ ಮೇಲೆ ತಮ್ಮ ದ್ವಿಚಕ್ರ ವಾಹನ ಹಾಗೂ ಮೊಬೈಲ್ ಫೋನ್ ಬಿಟ್ಟು ನಾಪತ್ತೆಯಾಗಿದ್ದ ವ್ಯಕ್ತಿಯೊಬ್ಬರು ನೇತ್ರಾವತಿ ನದಿಯಲ್ಲಿ ಶವವಾಗಿ ಪತ್ತೆಯಾಗುವ ಮೂಲಕ ಪ್ರಕರಣ ದುರಂತ ಅಂತ್ಯ ಕಂಡಿದೆ.

ಅಂಗಡಿಗೆಂದು ತೆರಳಿದವರು ವಾಪಸ್ ಬರಲೇ ಇಲ್ಲ:

ಮೃತಪಟ್ಟವರನ್ನು ಹಿರೇಬಂಡಾಡಿ ಪೆರಾಬೆ ನಿವಾಸಿ ಮಾಧವ ಗೌಡ ಎಂದು ಗುರುತಿಸಲಾಗಿದೆ. ಅವರು ಇತ್ತೀಚೆಗೆಷ್ಟೇ ಸಮೀಪದ ಆತೂರಿನಲ್ಲಿ ಟಯರ್ ಪಂಕ್ಚರ್ ಅಂಗಡಿಯೊಂದನ್ನು ಆರಂಭಿಸಿ ವ್ಯವಹಾರ ನಡೆಸುತ್ತಿದ್ದರು. ಅಕ್ಟೋಬರ್ 2 ರಂದು ಎಂದಿನಂತೆ ಮನೆಯಿಂದ ಆತೂರಿನ ಅಂಗಡಿಗೆ ತೆರಳಿದವರು ರಾತ್ರಿಯಾದರೂ ಮನೆಗೆ ವಾಪಸಾಗದೆ ನಾಪತ್ತೆಯಾಗಿದ್ದರು.

ಗಾಬರಿಗೊಂಡ ಕುಟುಂಬಸ್ಥರು ಹುಡುಕಾಟ ನಡೆಸಿದಾಗ, ಉಪ್ಪಿನಂಗಡಿಯ ಕುಮಾರಧಾರ ನದಿಯ ಹಳೆ ಸೇತುವೆಯ ಮೇಲೆ ಅವರ ಮೋಟಾರ್ ಸೈಕಲ್ ಹಾಗೂ ಮೊಬೈಲ್ ಫೋನ್ ಪತ್ತೆಯಾಗಿತ್ತು. ಇದರಿಂದಾಗಿ ಅವರು ನದಿಗೆ ಹಾರಿ ಆತ್ಮಹತ್ಯೆ ಮಾಡಿಕೊಂಡಿರಬಹುದು ಎಂಬ ಶಂಕೆ ವ್ಯಕ್ತವಾದ ಹಿನ್ನೆಲೆಯಲ್ಲಿ, ಕುಟುಂಬಸ್ಥರು ತಕ್ಷಣವೇ ಉಪ್ಪಿನಂಗಡಿ ಪೊಲೀಸ್ ಠಾಣೆಗೆ ಮಾಹಿತಿ ನೀಡಿದ್ದರು.

ಅಗ್ನಿಶಾಮಕ ದಳದಿಂದ ತೀವ್ರ ಶೋಧ:

ಅಕ್ಟೋಬರ್ 4 ರಂದು ಪುತ್ತೂರು ಅಗ್ನಿಶಾಮಕ ದಳದ ಸಿಬ್ಬಂದಿ ಹಾಗೂ ಸ್ಥಳೀಯ ನುರಿತ ಮುಳುಗು ತಜ್ಞರು ದೋಣಿಗಳ ಮೂಲಕ ನದಿಗೆ ಇಳಿದು ಮಧ್ಯಾಹ್ನದಿಂದ ಸಂಜೆಯವರೆಗೆ ನಿರಂತರವಾಗಿ ಜಾಲಾಡಿದ್ದರು. ಆದರೆ ನದಿಯ ಆಳ ಮತ್ತು ನೀರಿನ ಹರಿವಿನಿಂದಾಗಿ ಅಂದು ಯಾವುದೇ ಸುಳಿವು ಸಿಕ್ಕಿರಲಿಲ್ಲ.

ಬೊಳ್ಯಾರ್ ಬಳಿ ತೇಲಿಬಂದ ಮೃತದೇಹ:

ಶೋಧ ಕಾರ್ಯ ಮುಂದುವರಿದಿದ್ದ ನಡುವೆಯೇ, ನಾಪತ್ತೆಯಾದ ಎರಡು ದಿನಗಳ ಬಳಿಕ ನೆಕ್ಕಿಲಾಡಿ ಗ್ರಾಮದ ಬೊಳ್ಯಾರ್ ಸಮೀಪ ನೇತ್ರಾವತಿ ನದಿಯ ನೀರಿನಲ್ಲಿ ಮಾಧವ ಗೌಡ ಅವರ ಶವ ತೇಲುತ್ತಿರುವುದು ಪತ್ತೆಯಾಗಿದೆ. ಸ್ಥಳೀಯರ ನೆರವಿನಿಂದ ಪೊಲೀಸರು ಮೃತದೇಹವನ್ನು ನದಿಯಿಂದ ಮೇಲಕ್ಕೆತ್ತಿ ಮರಣೋತ್ತರ ಪರೀಕ್ಷೆಗೆ ರವಾನಿಸಿದ್ದಾರೆ.

ಸಾವಿಗೆ ನಿಖರವಾದ ಕಾರಣ ಇನ್ನಷ್ಟೇ ತಿಳಿದುಬರಬೇಕಿದ್ದು, ಈ ಕುರಿತು ಉಪ್ಪಿನಂಗಡಿ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದ್ದು, ಪೊಲೀಸರು ಮುಂದಿನ ತನಿಖೆ ಕೈಗೊಂಡಿದ್ದಾರೆ

ಮುಂದಕ್ಕೆ ಓದಲು ಇಲ್ಲಿ ಕ್ಲಿಕ್‌ ಮಾಡಿ
Advertisement

crime

ನಾನಾ ಪಾಟೇಕರ್ ಸಾವಿನಲ್ಲಿ ಬಿಗ್ ಟ್ವಿಸ್ಟ್: ಅಸಹಜ ಸಾವು (UD) ಪ್ರಕರಣ ದಾಖಲು, ತನಿಖೆ ಆರಂಭ!

Published

on

ಭಾರತೀಯ ಚಿತ್ರರಂಗದ ಪ್ರತಿಭಾವಂತ ಹಿರಿಯ ನಟ, ಮೂರು ಬಾರಿ ರಾಷ್ಟ್ರೀಯ ಪ್ರಶಸ್ತಿ ವಿಜೇತ ನಾನಾ ಪಾಟೇಕರ್ (75) ಅವರ ಹಠಾತ್ ನಿಧನವು ದೇಶಾದ್ಯಂತ ಇರುವ ಕೋಟ್ಯಂತರ ಅಭಿಮಾನಿಗಳಿಗೆ ತೀವ್ರ ಆಘಾತವನ್ನುಂಟುಮಾಡಿದೆ. ಗೋವಾದ ಡೋನಾ ಪೌಲಾದಲ್ಲಿರುವ ತಮ್ಮ ನಿವಾಸದಲ್ಲಿ ಅವರು ಗುರುವಾರ ಬೆಳಿಗ್ಗೆ ಹೃದಯಾಘಾತದಿಂದ ನಿಧನರಾಗಿದ್ದಾರೆ ಎಂದು ಪ್ರಾಥಮಿಕವಾಗಿ ತಿಳಿಯಲಾಗಿತ್ತು. ಆದರೆ, ಅವರ ಸಾವಿನ ಬಳಿಕ ಗೋವಾ ಪೊಲೀಸರು ನೀಡಿರುವ ಒಂದು ಹೆಜ್ಜೆಯು ಈ ಸಾವಿನ ಸುತ್ತ ಹೊಸ ಅನುಮಾನಗಳಿಗೆ ಹಾಗೂ ಚರ್ಚೆಗಳಿಗೆ ಕಾರಣವಾಗಿದೆ.

ಪೊಲೀಸರಿಂದ ಯುಡಿ (UD) ಕೇಸ್ ದಾಖಲು:

ನಾನಾ ಪಾಟೇಕರ್ ಅವರ ಸಾವು ಸಹಜವಾದುದಲ್ಲ ಎಂಬ ಶಂಕೆಯ ಹಿನ್ನೆಲೆಯಲ್ಲಿ ಪಣಜಿ ಪೊಲೀಸರು ಭಾರತೀಯ ನಾಗರಿಕ ಸುರಕ್ಷಾ ಸಂಹಿತಾ (BNSS) ಸೆಕ್ಷನ್ 194ರ ಅಡಿಯಲ್ಲಿ ಅಸ್ವಾಭಾವಿಕ ಸಾವು (Unnatural Death – UD) ಪ್ರಕರಣವನ್ನು ದಾಖಲಿಸಿಕೊಂಡಿದ್ದಾರೆ. ಸದ್ಯ PSI ನಿತಿನ್ ನಾಯಕ್ ನೇತೃತ್ವದಲ್ಲಿ ಈ ಕುರಿತು ಹೆಚ್ಚಿನ ತನಿಖೆ ಮುಂದುವರಿದಿದೆ ಎಂದು ಎಎನ್‌ಐ ವರದಿ ಮಾಡಿದೆ.

ಪ್ರಕರಣ ದಾಖಲಿಸಿದ್ದು ಯಾಕೆ? (ಅಸಲಿ ಕಾರಣ):

ಇದು ಯಾವುದೇ ಕ್ರಿಮಿನಲ್ ಹಿನ್ನೆಲೆಯ ಪ್ರಕರಣವಲ್ಲ ಬದಲಿಗೆ ಇದೊಂದು ತನಿಖಾ ಪ್ರಕ್ರಿಯೆಯ ಕಾನೂನು ಕ್ರಮವಷ್ಟೇ ಎಂದು ಮೂಲಗಳು ತಿಳಿಸಿವೆ. ಹಿರಿಯ ನಟ ನಾನಾ ಪಾಟೇಕರ್ ಅವರು ತಮ್ಮ ಮನೆಯಲ್ಲಿ ಒಬ್ಬಂಟಿಯಾಗಿ ವಾಸಿಸುತ್ತಿದ್ದ ಸಂದರ್ಭದಲ್ಲಿ ಅಸ್ವಸ್ಥರಾಗಿದ್ದು, ಆಸ್ಪತ್ರೆಗೆ ಕೊಂಡೊಯ್ಯುವ ಮಾರ್ಗಮಧ್ಯೆ ಅಥವಾ ಆಸ್ಪತ್ರೆಗೆ ತಲುಪಿದಾಗ ಮೃತಪಟ್ಟಿದ್ದಾರೆ.

ಯಾವುದೇ ವ್ಯಕ್ತಿ ಮನೆಯಲ್ಲಿ ಒಂಟಿಯಾಗಿರುವಾಗ ಅಥವಾ ಅನಿರೀಕ್ಷಿತವಾಗಿ ಸಾವನ್ನಪ್ಪಿದಾಗ, ಭವಿಷ್ಯದಲ್ಲಿ ಯಾವುದೇ ಕಾನೂನು ತೊಡಕುಗಳು ಅಥವಾ ಅನುಮಾನಗಳು ಬಾರದಂತೆ ಎಚ್ಚರಿಕೆ ವಹಿಸಲು ಪೊಲೀಸರು ಇಂತಹ ಸಂದರ್ಭಗಳಲ್ಲಿ ಮೆಡಿಕೋ-ಲೀಗಲ್ ಕೇಸ್ (MLC) ಅಥವಾ ಯುಡಿ (UD) ಪ್ರಕರಣವನ್ನು ದಾಖಲಿಸುವುದು ವಾಡಿಕೆ. ಮಣಿಪಾಲ್ ಆಸ್ಪತ್ರೆಯಿಂದ ಸಲ್ಲಿಕೆಯಾದ ವರದಿಯ ಆಧಾರದ ಮೇರೆಗೆ ಗೋವಾ ಪೊಲೀಸರು ಈ ಕ್ರಮ ಕೈಗೊಂಡಿದ್ದಾರೆ.

ಮಣಿಪಾಲ್ ಆಸ್ಪತ್ರೆಯ ವೈದ್ಯರ ಸ್ಪಷ್ಟನೆ:

ಗೋವಾದ ಬಂಬೋಲಿಮ್‌ನಲ್ಲಿರುವ ಮಣಿಪಾಲ್ ಆಸ್ಪತ್ರೆಗೆ ನಾನಾ ಪಾಟೇಕರ್ ಅವರನ್ನು ಕರೆತಂದಾಗ ನಡೆದ ಘಟನೆಗಳ ಬಗ್ಗೆ ಆಸ್ಪತ್ರೆಯ ವೈದ್ಯರು ಮಾಹಿತಿ ನೀಡಿದ್ದಾರೆ. ತೀವ್ರವಾದ ಹೃದಯಾಘಾತದಿಂದ ಪ್ರಜ್ಞಾಹೀನ ಸ್ಥಿತಿಯಲ್ಲಿ ಅವರನ್ನು ಆಸ್ಪತ್ರೆಯ ತುರ್ತು ವಿಭಾಗಕ್ಕೆ ತರಲಾಗಿತ್ತು. ವೈದ್ಯಕೀಯ ತಂಡವು ಸುಮಾರು 45 ನಿಮಿಷಗಳಿಗೂ ಹೆಚ್ಚು ಕಾಲ ಸತತವಾಗಿ ಸಿಪಿಆರ್ (CPR) ನೀಡಿ ಜೀವ ಉಳಿಸಲು ಹರಸಾಹಸ ಪಟ್ಟಿತಾದರೂ, ದುರದೃಷ್ಟವಶಾತ್ ಅವರನ್ನು ಬದುಕಿಸಲು ಸಾಧ್ಯವಾಗಲಿಲ್ಲ ಎಂದು ವೈದ್ಯರು ಸ್ಪಷ್ಟಪಡಿಸಿದ್ದಾರೆ.

ನಂತರ ಮೃತದೇಹವನ್ನು ಮರಣೋತ್ತರ ಪರೀಕ್ಷೆಗಾಗಿ ಗೋವಾ ವೈದ್ಯಕೀಯ ಕಾಲೇಜಿಗೆ (GMC) ರವಾನಿಸಲಾಗಿದ್ದು, ಅಂತಿಮ ವಿಧಿವಿಧಾನಗಳನ್ನು ಪುಣೆಯ ದೋಂಜೆ ಗ್ರಾಮದಲ್ಲಿರುವ ಅವರ ತೋಟದ ಮನೆಯಲ್ಲಿ ಪೂರ್ಣಗೊಳಿಸಲಾಗಿದೆ.

Continue Reading

Belthangady

ಧರ್ಮಸ್ಥಳ: ಅಡಿಕೆ ಮರದಿಂದ ದೊಂಟಿ ತಾಗಿ ವಿದ್ಯುತ್ ಸ್ಪರ್ಶ: ಚಿಕಿತ್ಸೆ ಫಲಕಾರಿಯಾಗದೆ ನಝೀರ್ ನಿಧನ

Published

on

ಬೆಳ್ತಂಗಡಿ: ಅಡಿಕೆ ಕೊಯ್ಯುತ್ತಿದ್ದ ವೇಳೆ ಆಕಸ್ಮಿಕವಾಗಿ ವಿದ್ಯುತ್ ತಂತಿಗೆ ದೊಂಟಿ (ಕೋಲು) ತಾಗಿ ವಿದ್ಯುತ್ ಆಘಾತಕ್ಕೊಳಗಾಗಿದ್ದ ವ್ಯಕ್ತಿಯೊಬ್ಬರು ಚಿಕಿತ್ಸೆ ಫಲಕಾರಿಯಾಗದೆ ಮೃತಪಟ್ಟ ದಾರುಣ ಘಟನೆ ಧರ್ಮಸ್ಥಳ ಗ್ರಾಮದಲ್ಲಿ ಗುರುವಾರ ಸಂಭವಿಸಿದೆ.

ಧರ್ಮಸ್ಥಳ ಗ್ರಾಮದ ಅಜಿಕುರಿ ನಿವಾಸಿ ನಝೀರ್ (38) ಮೃತ ವ್ಯಕ್ತಿ. ಅವರು ಅಡಿಕೆ ಮರದ ಸಮೀಪದಲ್ಲೇ ಹಾದುಹೋಗಿದ್ದ ವಿದ್ಯುತ್ ತಂತಿಗೆ ಅಡಿಕೆ ಕೊಯ್ಯಲು ಬಳಸುತ್ತಿದ್ದ ದೊಂಟಿ ಆಕಸ್ಮಿಕವಾಗಿ ತಗುಲಿದ ಪರಿಣಾಮ ತೀವ್ರ ವಿದ್ಯುತ್ ಆಘಾತಕ್ಕೊಳಗಾಗಿದ್ದರು.

ಗಂಭೀರವಾಗಿ ಗಾಯಗೊಂಡಿದ್ದ ಅವರನ್ನು ತಕ್ಷಣವೇ ಸ್ಥಳೀಯ ಆಸ್ಪತ್ರೆಗೆ ದಾಖಲಿಸಿ, ಹೆಚ್ಚಿನ ಚಿಕಿತ್ಸೆಗಾಗಿ ಮಂಗಳೂರಿನ ಖಾಸಗಿ ಆಸ್ಪತ್ರೆಗೆ ದಾಖಲಿಸಲಾಗಿತ್ತು. ಆದರೆ ಚಿಕಿತ್ಸೆ ಫಲಕಾರಿಯಾಗದೆ ಅವರು ಆಸ್ಪತ್ರೆಯಲ್ಲಿ ಮೃತಪಟ್ಟಿರುತ್ತಾರೆ. ಈ ಕುರಿತು ಧರ್ಮಸ್ಥಳ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

Continue Reading

accident

ಕಾಸರಗೋಡು: ಸಿಡಿಲು ಬಡಿದು ಯುವಕ ಸಾವು – ದಾರುಣ ಘಟನೆ

Published

on

ಕಾಸರಗೋಡು: ಆದುರು ಪೊಲೀಸ್ ಠಾಣಾ ವ್ಯಾಪ್ತಿಯ ದೇಲಂಪಾಡಿ ಪಾಂಡಿ ಬಳವಂತಡ್ಕ ಎಂಬಲ್ಲಿ ಸಿಡಿಲು ಬಡಿದು ಯುವಕನೊಬ್ಬ ಮೃತಪಟ್ಟ ದಾರುಣ ಘಟನೆ ಮಂಗಳವಾರ ರಾತ್ರಿ ಸಂಭವಿಸಿದೆ.

ಕುಂಟಾರು ಉಯಿತಡ್ಕ ಮಾಯಿಲಾಂಕೋಟೆ ನಿವಾಸಿ ಅರಬಿ ಹಾಗೂ ನಫೀಸಾ ದಂಪತಿಯ ಪುತ್ರ ಮುಹಮ್ಮದ್ ನೌಫಲ್ (30) ಮೃತಪಟ್ಟವರು ಎಂದು ಗುರುತಿಸಲಾಗಿದೆ. ನೌಫಲ್ ಅವರು ಪಾಂಡಿ ಬಳವಂತಡ್ಕದಲ್ಲಿರುವ ತನ್ನ ಪತ್ನಿಯ ಮನೆಗೆ ಹೋಗಿದ್ದ ವೇಳೆ ಈ ದುರ್ಘಟನೆ ಸಂಭವಿಸಿದೆ.

ಸಿಡಿಲು ಬಡಿದ ತಕ್ಷಣವೇ ಅವರನ್ನು ಮುಳ್ಳೇರಿಯಾ ಸಹಕಾರಿ ವೈದ್ಯಕೀಯ ಕೇಂದ್ರಕ್ಕೆ ದಾಖಲಿಸಲಾಯಿತಾದರೂ, ಅಷ್ಟರಲ್ಲಾಗಲೇ ಅವರು ಮೃತಪಟ್ಟಿರುವುದಾಗಿ ವೈದ್ಯರು ಘೋಷಿಸಿದ್ದಾರೆ. ಮೃತ ನೌಫಲ್ ಅವರು ತಿರುವನಂತಪುರದ ಜ್ಯೂಸ್ ಅಂಗಡಿಯೊಂದರಲ್ಲಿ ಕೆಲಸ ಮಾಡುತ್ತಿದ್ದರು. ಇವರಿಗೆ ಪತ್ನಿ ಹಾಗೂ ಇಬ್ಬರು ಮಕ್ಕಳಿದ್ದಾರೆ. ಘಟನೆಗೆ ಸಂಬಂಧಿಸಿದಂತೆ ಆದುರು ಪೊಲೀಸರು ಪ್ರಕರಣ ದಾಖಲಿಸಿಕೊಂಡಿದ್ದಾರೆ.

Continue Reading

ads (2)
ads (3)
ads (4)
ads (5)
ads (6)
ads (1)
ads (8)
ads (7)

Trending

Copyright © 2025 Deevatige

error: Content is protected !!