crime
ಸಾಕು ನಾಯಿಯ ಅನಾರೋಗ್ಯವನ್ನು ಸಹಿಸದೆ ಮಸಣದ ಹಾದಿ ಹಿಡಿದ ಸಹೋದರಿಯರು
ಕೆಲವರಿಗೆ ಹಾಗೆ ಪ್ರಾಣಿಗಳೆಂದರೆ ಪಂಚಪ್ರಾಣ, ಅದರಲ್ಲೂ ನಾಯಿಗಳೆಂದರೆ ಅದನ್ನು ಬಿಟ್ಟು ಇರಲಾರದಷ್ಟು ಪ್ರೀತಿಯಲ್ಲಿರುತ್ತಾರೆ. ಅವುಗಳಿಗೆ ಅನಾರೋಗ್ಯ ಹಿಡಿದು ಏನನ್ನೂ ತಿನ್ನದೆ ಇದ್ದರೆ ಅದರ ಪ್ರೀತಿ ಪಾತ್ರರೂ ಏನೂ ತಿನ್ನಲಾರರು. ಹಾಗೆಂದು ಸಾಕು ನಾಯಿಯ ಅನಾರೋಗ್ಯವನ್ನು ಸಹಿಸದೆ ಮಸಣದ ಹಾದಿ ಹಿಡಿಯುವವರು ಇದ್ದಾರೆಯೇ ? ಎಂದರೆ ದೀರ್ಘಕಾಲದ ಖಿನ್ನತೆಯಲ್ಲಿದ್ದ ವಿದ್ಯಾವಂತ ಸಹೋದರಿಯರಿಬ್ಬರು ತಮಗೆ ಆಸರೆಯಾಗಿದ್ದ ಸಾಕುನಾಯಿಗೆ ಒದಗಿರುವ ಆಪತ್ತಿಗೆ ಮನನೊಂದು ಆತ್ಮಹತ್ಯೆ ಮಾಡಿಕೊಂಡ ಘಟನೆ ಉತ್ತರ ಪ್ರದೇಶದ ಲಕ್ನೋದಲ್ಲಿ ನಡೆದಿರುವುದು ವರದಿಯಗಿದೆ.

ಲಕ್ನೋದ ದೌಡಾ ಪ್ರದೇಶದ ನಿವಾಸಿಗಳಾದ ರಾಧಾ ಸಿಂಗ್ ಮತ್ತು ಜಿಯಾ ಸಿಂಗ್ ಎಂಬ ಸಹೋದರಿರು ಈ ಘಟನೆಯಲ್ಲಿ ಸಾವನ್ನಪ್ಪಿದ್ದಾರೆ. ಇಬ್ಬರೂ ವಿದ್ಯಾವಂತರಾಗಿದ್ದು, ಪದವಿ ಪೂರೈಸಿದ್ದಾರೆ. ಆದರೆ, 2014ರಿಂದಲೇ ಇಬ್ಬರೂ ತೀವ್ರತರವಾದ ಮಾನಸಿಕ ಆರೋಗ್ಯ ಸಮಸ್ಯೆಗಳಿಂದ ಬಳಲುತ್ತಿದ್ದರು. ಹತ್ತು ವರ್ಷಗಳಿಂದ ಚಿಕಿತ್ಸೆ ಪಡೆಯುತ್ತಿದ್ದರೂ, ಯಾವುದೇ ಚೇತರಿಕೆ ಕಂಡಿರಲಿಲ್ಲ. ಇಂತಹ ಪರಿಸ್ಥಿತಿಯಲ್ಲಿ ಅವರ ಮನೆಯಲ್ಲಿದ್ದ ಸಾಕುನಾಯಿ ಅವರಿಗೆ ದೊಡ್ಡ ಆಸರೆಯಾಗಿತ್ತು.
ಕಳೆದ ಕೆಲವು ದಿನಗಳಿಂದ ಈ ಸಹೋದರಿಯರ ಪ್ರೀತಿಯ ಸಾಕುನಾಯಿ ತೀವ್ರವಾಗಿ ಅಸ್ವಸ್ಥಗೊಂಡಿತ್ತು. ದಿನದಿಂದ ದಿನಕ್ಕೆ ನಾಯಿಯ ಸ್ಥಿತಿ ಹದಗೆಡುತ್ತಿರುವುದನ್ನು ಕಂಡು ಈ ಸೋದರಿಯರು ಮಾನಸಿಕವಾಗಿ ಜರ್ಜರಿತರಾಗಿದ್ದರು. ನಾಯಿ ಗುಣಮುಖವಾಗುವ ಯಾವುದೇ ಲಕ್ಷಣಗಳು ಕಾಣದಿದ್ದಾಗ, ಇಬ್ಬರೂ ತೀವ್ರ ಮನನೊಂದಿದ್ದರು. ಈಗಾಗಲೇ ಖಿನ್ನತೆಯಲ್ಲಿದ್ದ ಅವರಿಗೆ ಇದು ಹೆಚ್ಚು ಆಘಾತವಾಗಿತ್ತು.
ಬುಧವಾರ ಬೆಳಿಗ್ಗೆ 11 ಗಂಟೆಯ ಸುಮಾರಿಗೆ ಇವರ ತಾಯಿ ಗುಲಾಬ್ ದೇವಿ ಅವರು ಮನೆಗೆ ಬೇಕಾದ ದಿನಸಿ ವಸ್ತುಗಳನ್ನು ತರಲು ಇಬ್ಬರನ್ನೂ ಅಂಗಡಿಗೆ ಕಳುಹಿಸಿದ್ದರು. ಸಾಮಾನು ತರಲು ಹೋದವರು ಹತಾಶೆಯಿಂದ ಫಿನಾಯಿಲ್ ಸೇವಿಸಿ ಮನೆಗೆ ಮರಳಿದ್ದಾರೆ. ತಾಯಿಯ ಮುಂದೆ ಬಂದು ನಾವು ಫಿನಾಯಿಲ್ ಕುಡಿದಿದ್ದೇವೆ ಎಂದಿದ್ದಾರೆ. ಕೂಡಲೇ ಮಗನನ್ನು ಕರೆಸಿ, ಇಬ್ಬರನ್ನೂ ರಾಣಿ ಲಕ್ಷ್ಮಿಬಾಯಿ ಆಸ್ಪತ್ರೆಗೆ ದಾಖಲಿಸಿದ್ದಾರೆ.

ಅಲ್ಲಿಂದ ಹೆಚ್ಚಿನ ಚಿಕಿತ್ಸೆಗಾಗಿ ಲಕ್ನೋದ ಟ್ರಾಮಾ ಸೆಂಟರ್‌ಗೆ ಸ್ಥಳಾಂತರಿಸಲಾಯಿತು. ದುರದೃಷ್ಟವಶಾತ್, ರಾಧಾ ಸಿಂಗ್ ಆಸ್ಪತ್ರೆಗೆ ತಲುಪುವಷ್ಟರಲ್ಲೇ ಮೃತಪಟ್ಟಿದ್ದರು. ಜಿಯಾ ಸಿಂಗ್ ಚಿಕಿತ್ಸೆಗೆ ಸ್ಪಂದಿಸದೆ ಸ್ವಲ್ಪ ಸಮಯದ ನಂತರ ಸಾವನ್ನಪ್ಪಿದ್ದಾರೆ. ಪೊಲೀಸರು ಸದ್ಯ ಪ್ರಕರಣ ದಾಖಲಿಸಿಕೊಂಡು ಮರಣೋತ್ತರ ಪರೀಕ್ಷೆಗೆ ಮೃತದೇಹಗಳನ್ನು ರವಾನಿಸಿದ್ದಾರೆ.
, ಆದರೆ ಅವುಗಳ ಮೇಲಿನ ಅತೀವ ಅವಲಂಬನೆ ಮಾನಸಿಕವಾಗಿ ದುರ್ಬಲರಾದವರ ಮೇಲೆ ತೀವ್ರ ಪರಿಣಾಮ ಬೀರುತ್ತದೆ. ಖಿನ್ನತೆಯಿಂದ ಬಳಲುತ್ತಿರುವವರ ಬಗ್ಗೆ ಕುಟುಂಬಸ್ಥರು ಸದಾ ನಿಗಾ ಇಡುವುದು ಅನಿವಾರ್ಯ. ಮನೆಯಲ್ಲಿ ಮಾನಸಿಕ ಅಸ್ವಸ್ತರು ಇದ್ದರೆ ಅವರ ಬಗ್ಗೆ ಅತೀವ ಕಾಳಜಿವಹಿಸಿ ಅಥವಾ ಹೆಚ್ಚಿನ ಸಹಾಯಕ್ಕಾಗಿ ಸ್ಥಳೀಯ ಚಿಕಿತ್ಸಾಲಕ್ಕೆ ಭೇಟಿ ಮಾಡಿ, ಚಿಕಿತ್ಸೆ ಪಡೆಯಿರಿ.
Bantawala
ಐಟಿಐ ವಿದ್ಯಾರ್ಥಿಗಳ ಬಡಿದಾಟ; ಇಬ್ಬರಿಗೆ ಚೂರಿ ಇರಿತ; ವಿಟ್ಲ ಪೊಲೀಸರ ವಶದಲ್ಲಿ ಆರೋಪಿ ವಿದ್ಯಾರ್ಥಿ..
ವಿಟ್ಲದ ಖಾಸಗಿ ಐಟಿಐ ವಿದ್ಯಾಸಂಸ್ಥೆಯಲ್ಲಿ ಒಂದೇ ತರಗತಿಯ ವಿದ್ಯಾರ್ಥಿಗಳ ನಡುವೆ ಕ್ಷುಲ್ಲಕ ವಿಚಾರಕ್ಕಾಗಿ ಬಡಿದಾಟ ನಡೆದಿದ್ದು ಮುಂದುವರಿದ ಭಾಗವಾಗಿ ವಿದ್ಯಾರ್ಥಿಯೊಬ್ಬ ತನ್ನ ಸಹಪಾಠಿಗಳಿಬ್ಬರಿಗೆ ಚೂರಿಯಿಂದ ಇರಿದು ಗಾಯಗೊಳಿಸಿದ್ದಾನೆ.

ಪ್ರಥಮ ವರ್ಷದ ವಿದ್ಯಾರ್ಥಿಗಳ ನಡುವೆ ಘರ್ಷಣೆ ನಡೆದಿದ್ದು ಪುತ್ತೂರು ಬನ್ನೂರು ನಿವಾಸಿ ಮಹಮ್ಮದ್ ರಿಹಾನ್(18) ಮತ್ತು ಮಂಜೇಶ್ವರ ದೈಗೋಳಿ ನಿವಾಸಿ ಯಜ್ಞೇಶ್ (18) ಎಂಬಿಬ್ಬರ ಮೇಲೆ ಅದೇ ತರಗತಿಯ ವಿಟ್ಲ ನಿವಾಸಿ ಹೇಮಂತ್ (18) ಎಂಬಾತ ಚೂರಿಯಿಂದ ಇರಿದು ಘಾಸಿಗೊಳಿಸಿದ್ದಾನೆ.

ಫುಲ್ ಶೇವ್ ಮಾಡಿಕೊಂಡು ತರಗತಿ ಬರುತ್ತಿದ್ದ ಮಹಮ್ಮದ್ ರಿಹಾನ್ ನನ್ನು ಕೆಲದಿನಗಳಿಂದ ಹೇಮಂತ್ ತಮಾಷೆ ಮಾಡುತ್ತಾ ಇತರ ವಿದ್ಯಾರ್ಥಿಗಳ ಮುಂದೆ ಅವಮಾನ ಮಾಡುತ್ತಿದ್ದನೆನ್ನಲಾಗಿದೆ.

ಈ ಬಗ್ಗೆ ಎರಡು, ಮೂರು ದಿನಗಳಿಂದ ಮೊಹಮ್ಮದ್ ರಿಹಾನ್ ಹೇಮಂತ್ ನಲ್ಲಿ ತನ್ನನ್ನು ಗೇಲಿ ಮಾಡದಂತೆ ವಿನಂತಿಸುತ್ತಿದ್ದ. ಆದರೂ ಆತ ಮುಂದುವರಿಸಿದ್ದು ಇಂದು ಬೆಳಗ್ಗೆ ಮತ್ತೆ ಗೇಲಿ ಮಾಡಿದಾಗ ಇಬ್ಬರ ಮಧ್ಯೆ ಮಾತಿನ ಚಕಮಕಿ ನಡೆದಿತ್ತೆನ್ನಲಾಗಿದೆ.

ಇದೇ ಮತ್ತಷ್ಟು ಮುಂದುವರಿದು ತರಗತಿಯೊಳಗೆ ಪರಸ್ಪರ ನೂಕಾಟ, ತಳ್ಳಾಟ ನಡೆದು ಆಕ್ರೋಶಗೊಂಡ ಹೇಮಂತ್ ತನ್ನಲ್ಲಿದ್ದ ಚೂರಿಯಿಂದ ಮಹಮ್ಮದ್ ರಿಹಾನ್ ಹೊಟ್ಟೆಯ ಹಿಂಭಾಗಕ್ಕೆ ಇರಿದಿದ್ದಾನೆ. ತಡೆಯಲು ಹೋದ ಅದೇ ತರಗತಿಯ ವಿದ್ಯಾರ್ಥಿ ದೈಗೋಳಿ ನಿವಾಸಿ ಯಜ್ಞೇಶ್ ಎಂಬಾತನ ತೊಡೆಗೂ ಚೂರಿ ಇರಿದಿದ್ದಾನೆ.

ಗಾಯಾಳುಗಳಿಬ್ಬರನ್ನೂ ವಿಟ್ಲದ ಸರ್ಕಾರಿ ಆಸ್ಪತ್ರೆಗೆ ದಾಖಲಿಸಲಾಗಿದೆ. ಮಹಮ್ಮದ್ ರಿಹಾನ್ ಗೆ ಹನ್ನೊಂದು ಹೊಲಿಗೆ ಹಾಕಲಾಗಿದ್ದು, ಮತ್ತೋರ್ವ ಗಾಯಾಳು ಯಜ್ಞೇಶ್ ಗೆ ನಾಲ್ಕು ಹೊಲಿಗೆ ಹಾಕಲಾಗಿದೆ ಎಂದು ವೈದ್ಯರು ತಿಳಿಸಿದ್ದಾರೆ.
crime
ಹಣ ಒಡವೆಯೊಂದಿಗೆ ಪರಾರಿಯಾಗುತ್ತಿದ್ದ ವಧುವಂಚಕನ ಹೆಡೆಮುರಿ ಕಟ್ಟಿದ ಪೊಲೀಸರು
ಆನ್ ಲೈನ್ ಪ್ಲಾಟ್ ಫಾರಂ ಮ್ಯಾಟ್ರಮೋನಿ ಮೂಲಕ ಹಲವಾರು ಮಹಿಳೆಯರನ್ನು ಮದುವೆಯಾಗುವುದಾಗಿ ನಂಬಿಸಿ ಹಣ ಒಡವೆಯೊಂದಿಗೆ ಪರಾರಿಯಾಗುತ್ತಿದ್ದ ವಧುವಂಚಕನ ಹೆಡೆಮುರಿ ಕಟ್ಟಿದ ಪೊಲೀಸರು. ಆರೋಪಿತನಾದ ಸುಶಾಂತ್ ಪೂಜಾರಿ @ ಸುಶಾಂತ್ ಅಂಕುಶ್ ಪೂಜಾರಿ @ ಸುಶಾಂತ್ ಜಿ ಕರ್ಕೇರಾ (32) ಎಂಬಾತನನ್ನು ದಿನಾಂಕ:05/02/2026 ರಂದು ಪತ್ತೆ ಹಚ್ಚಿ ದಸ್ತಗಿರಿ ಮಾಡಿ ವಿಚಾರಣೆ ನಡೆಸಿದಾಗ ಆಪಾದಿತನು ಮ್ಯಾಟ್ರಮೋನಿ ಆನ್ ಲೈನ್ ಪ್ಲಾಟ್ ಫಾರಂ ಮೂಲಕ ಪರಿಚಯಮಾಡಿಕೊಂಡು ಇಬ್ಬರನ್ನು ಮದುವೇಯಾಗಿ ವಂಚಿಸಿ ಪರಾರಿಯಾಗಿದ್ದರೆ, 5 ಜನ ಮಹಿಳೆಯರನ್ನು ಮದುವೆಯಾಗುತ್ತೇನೆ ಎಂದು ನಂಬಿಸಿ ಮೋಸ ಮಾಡಿರುವುದಾಗಿ ತನಿಖೆಯಲ್ಲಿ ಬೇಳಕಿಗೆ ಬಂದಿದೆ. ಈತನ ವಂಚನಾ ಮದುವೆ ವ್ಯವಹಾರಕ್ಕೆ ಮುಲ್ಕಿ ನಿವಾಸಿ ಭಾಸ್ಕರ್ ಎಂಬಾತನೂ ಸಹಕರಿಸುತ್ತಿದ್ದು, ಸದ್ರಿ ಆರೋಪಿತರನ್ನು ಬಂಧಿಸಿ ನ್ಯಾಯಾಲಯಕ್ಕೆ ಹಾಜರು ಪಡಿಸಲಾಗಿದ್ದು, ಮಾನ್ಯ ನ್ಯಾಯಾಲಯವು ನ್ಯಾಯಾಂಗ ಬಂಧನವನ್ನು ವಿಧಿಸಿರುತ್ತದೆ.
ಆರೋಪಿತ ಸುಶಾಂತ್ ಪೂಜಾರಿ ವಿರುದ್ದ ಮಂಗಳೂರು ಊರ್ವಾ ಪೊಲೀಸ್ ಠಾಣಾಅ.ಕ್ರ: 202/2017 ಕಲಂ: 406, 420 ಐಪಿಸಿ, ಉಡುಪಿ ಜಿಲ್ಲೆಯ ಕೋಟಾ ಪೊಲೀಸ್ ಠಾಣಾ ಅ.ಕ್ರ: 132/2022 ಕಲಂ: 379 ಐಪಿಸಿ ಮತ್ತು ಮಹಾರಾಷ್ಟ್ರ ರಾಜ್ಯದ ಅರ್ನಾಲ್ ಪೊಲೀಸ್ ಠಾಣಾ ಅ.ಕ್ರ:354/2022 ಕಲಂ:336(ಎ), 370, 370(4), 376(2),(ಎನ್) 342, ಜೊತೆಗೆ 34 ಐಪಿಸಿ ಕಲಂ:3,4,5 ಇಮ್ಮೋರಲ್ ಟ್ರಾಫಿಕಿಂಗ್ ಆ್ಯಕ್ಟ್, ಕಲಂ:4,8,12 ಪೋಕ್ಸೋ ಕಾಯ್ದೆ ರಂತೆ ಪ್ರಕರಣಗಳು ದಾಖಲಾಗಿರುತ್ತದೆ.
ನೊಂದ ಮಹಿಳೆಗೆ ಸುಶಾಂತ್ ಪೂಜಾರಿ ಎಂಬ ವ್ಯಕ್ತಿಯು ಮ್ಯಾಟ್ರಮೋನಿ ಆನ್ ಲೈನ್ ಪ್ಲಾಟ್ ಫಾರಂ ಮೂಲಕ ಪರಿಚಯವಾಗಿ ಮಹಾರಾಷ್ಟ್ರದ ಘನಸೋಳಿಯ ನವ ಮುಂಬೈ ನಲ್ಲಿ 02/02/2025 ರಲ್ಲಿ ಮದುವೆಯಾಗಿದ್ದಲ್ಲದೆ ನಂಬಿಸಿ ಹಂತ ಹಂತವಾಗಿ 6,60,000/- ಹಣವನ್ನು ಪಡೆದುಕೊಂಡು ಮೋಸ ಮಾಡುವ ಉದ್ದೇಶದಿಂದ ದಿನಾಂಕ 15/11/2025 ರಂದು ನಾಪತ್ತೆ ಯಾಗಿರುತ್ತಾನೆ. ನಂತರದ ದಿನಗಳಲ್ಲಿ ಪಿರ್ಯಾದುದಾರರು ಅನುಮಾನಗೊಂಡ ಆತನ ಬಗ್ಗೆ ವಿಚಾರಿಸಿದಾಗ ಇದೇ ರೀತಿ ಸುಮಾರು ಕಡೆ ಮದುವೆ ಮಾಡಿಕೊಳ್ಳುತ್ತೇನೆಂದು ನಂಬಿಸಿ ಮೋಸ ಮಾಡಿರುವ ಹಾಗೂ ಈ ಮೊದಲು ಒಂದು ಮದುವೆ ಆಗಿರುವ ವಿಚಾರ ತಿಳಿದ ಮೇರೆಗೆ ಪಿ ನೊಂದ ಮಹಿಳೆಯು ಕಾವೂರು ಪೊಲೀಸು ಠಾಣಾ ಅಕ್ರ: 184/2025 ಕಲಂ: 318(4), 316(2), 316(1), 336(3), 340(1) ಬಿ ಎನ್ ಎಸ್ ರಂತೆ ಪ್ರಕರಣ ದಾಖಲಿಸಿ ಕೊಂಡಿರುತ್ತಾರೆ.
ಸದ್ರಿ ಪ್ರಕರಣದಲ್ಲಿನ ಆರೋಪಿತನಾದ ಸುಶಾಂತ್ ಪೂಜಾರಿ @ ಸುಶಾಂತ್ ಅಂಕುಶ್ ಪೂಜಾರಿ @ ಸುಶಾಂತ್ ಜಿ ಕರ್ಕೇರಾ (32) ಎಂಬಾತನನ್ನು ದಿನಾಂಕ:05/02/2026 ರಂದು ಪತ್ತೆ ಹಚ್ಚಿ ದಸ್ತಗಿರಿ ಮಾಡಿ ವಿಚಾರಣೆ ನಡೆಸಿದಾಗ ಆಪಾದಿತನು ಮ್ಯಾಟ್ರಮೋನಿ ಆನ್ ಲೈನ್ ಪ್ಲಾಟ್ ಫಾರಂ ಮೂಲಕ ಪರಿಚಯಮಾಡಿಕೊಂಡು ಈ ಮೊದಲು 2021 ರಲ್ಲಿ ಉಡುಪಿಯ ಹುಡುಗಿಯೊಬ್ಬಳನ್ನು ಮದುವೆ ಆಗಿರುತ್ತಾನೆ. ಹಾಗೂ ಉಡುಪಿ 2 ಜನ ಹುಡುಗಿಯರನ್ನು ಮದುವೆಯಾಗುವುದಾಗಿ ನಂಬಿಸಿ ಹಣ ಪಡೆದುಕೊಂಡಿರುತ್ತಾನೆ, ಮುಂಬೈನ 2 ಜನ ಹುಡುಗಿಯರನ್ನು ಮದುವೆಯಾಗುವುದಾಗಿ ನಂಬಿಸಿ ಹಣ ಪಡೆದು ಮೋಸ ಮಾಡಿರುತ್ತಾನೆ. ಬೆಂಗಳೂರಿನಲ್ಲಿ 2 ಜನ ಹುಡುಗಿಯರನ್ನು ಮದುವೆಯಾಗುವುದಾಗಿ ನಂಬಿಸಿ ಮೋಸ ಮಾಡಿರುತ್ತಾನೆ ಕಾರ್ಕಳದ ಒಂದು ಹುಡುಗಿಗೆ ಮದುವೆ ಆಗುವುದಾಗಿ ನಂಬಿಸಿ ಮೊಸ ಮಾಡಿರುವ ಬಗ್ಗೆ ಒಪ್ಪಿಕೊಂಡಿರುತ್ತಾನೆ. ನಂತರ ಸದ್ರಿ ಪ್ರಕರಣದಲ್ಲಿ ಆರೋಪಿತ ಸುಶಾಂತ್ ಪೂಜಾರಿ ಯವನೊಂದಿಗೆ ಮುಲ್ಕಿ ನಿವಾಸಿ ಭಾಸ್ಕರ್ ಎಂಬಾತನು ಪಿರ್ಯಾದಿದಾರರಿಗೆ ಮತ್ತು ಕುಟುಂಬದವರಿಗೆ ನಂಬಿಸುವ ಉದ್ದೇಶದಿಂದ ಆರೋಪಿತ ಸುಶಾಂತ್ ನನ್ನ ಅಳಿಯ ಎಂದು ಹೇಳಿಕೊಂಡು ನಂಬಿಸಿ ಆರೋಪಿತ ಸುಶಾಂತ್ ಪೂಜಾರಿಯ ಕುಟುಂಬಸ್ಥರ ಪರವಾಗಿ ಮುಂಬೈನಲ್ಲಿ ಧಾರ್ಮಿಕ ವಿಧಿವಿಧಾನದಲ್ಲಿ ಪಾಲ್ಗೊಂಡು ಮದುವೆ ನಡೆಸಿದವರಾಗಿರುತ್ತಾನೆ.
Belthangady
ಬೆಳ್ತಂಗಡಿ ವಿದ್ಯಾರ್ಥಿನಿಯ ಅಪಹರಣಯತ್ನ ಪ್ರಕರಣ ; ಬಯಲಾದ ನಿಜಾಂಶ
ಬೆಳ್ತಂಗಡಿ ಅಪ್ರಾಪ್ತ ವಿದ್ಯಾರ್ಥಿನಿಯ ಅಪಹರಣಯತ್ನ ಪ್ರಕರಣದ ನಿಜಾಂಶ ಕೊನೆಗೂ ಬಯಲಾಗಿದೆ.
ಬೆಳ್ತಂಗಡಿ ಠಾಣಾ ವ್ಯಾಪ್ತಿಯಲ್ಲಿ ಶಾಲಾ ವಿದ್ಯಾರ್ಥಿನಿಯ ಅಪಹರಣ, ಚೂರಿ ಇರಿತ ಪ್ರಕರಣಕ್ಕೆ ಸಂಬಂಧಿಸಿದಂತೆ CCTV ದೃಶ್ಯಗಳನ್ನು ಪರಿಶೀಲಿಸಿದ ಬಳಿಕ, ದೂರಿನಲ್ಲಿ ಉಲ್ಲೇಖಿಸಿದಂತೆ ಯಾವುದೇ ವಾಹನ ಕಂಡುಬಂದಿಲ್ಲ. ಮತ್ತು ವೈದ್ಯಕೀಯ ಪರೀಕ್ಷೆಯಲ್ಲಿ ಪ್ರಥಮವಾಗಿ ಇದು ಸ್ವಯಂ ಉಂಟುಮಾಡಿಕೊಂಡ ಗಾಯ (Self inflicted wound) ಎಂದು ತಿಳಿಸಲಾಗಿದ್ದು, ನಂತರ ಬಾಲಕಿಯ ಹೇಳಿಕೆಯನ್ನು ಮತ್ತೊಮ್ಮೆ ದಾಖಲಿಸಲಾಗಿದ್ದು, ಈ ಘಟನೆ ಕುರಿತು ತಾನು ಸುಳ್ಳು ಹೇಳಿಕೆ ನೀಡಿದ್ದೆನೆಂದು ತಿಳಿಸಿರುವುದರ ಮೂಲಕ ಪ್ರಕರಣದ ನಿಜಾಂಶ ಬಯಲಾಗಿದೆ. ಬಾಲಕಿಯು ಅಪ್ರಾಪ್ತೆಯಾಗಿರುವುದರಿಂದ ಆಕೆಯ ಹಿತದೃಷ್ಠಿಯಿಂದ ಸದ್ರಿ ಘಟನೆಯನ್ನು ಸೂಕ್ಷ್ಮವಾಗಿ ಪರಿಗಣಿಸಿ ಶಿಶು ಅಭಿವೃದ್ಧಿ ಯೋಜನಾ ಅಧಿಕಾರಿ (CDPO) ಅವರಿಂದ ಬಾಲಕಿಗೆ ಕೌನ್ಸೆಲಿಂಗ್ ನೀಡಲಾಗುವುದು ಹಾಗೂ ಮುಂದಿನ ಕಾನೂನು ಕ್ರಮವನ್ನು ನಿರ್ಧರಿಸಲಾಗುವುದು ಎಂದು ಪೊಲೀಸ್ ವರಿಷ್ಠರು ಮಾಹಿತಿ ನೀಡಿದ್ದು, ಅಪ್ರಾಪ್ತೆಗೆ ಚಲಾಯಿಸಲು ವಾಹನ ನೀಡಿರುವ ಕುರುತು ಮುಂದಿನ ಕಾನೂನು ಕ್ರಮ ಕೈಗೊಳ್ಳಲಾಗುವುದು ಎಂದು ತಿಳಿಸಿದ್ದಾರೆ.

ಶಾಲೆಗೆ ಹೋಗಲು ಮನಸ್ಸಿಲ್ಲದೆ ಕಿಡ್ನಾಪ್ ನಾಟಕ ಸೃಷ್ಟಿಸುವ ಕಿಡಿಗೇಡಿತನದ ಪ್ರಕರಣಗಳು ಆಗಾಗ ಕೇಳಿಬರುತ್ತಲೇ ಇದೆ. ಇತ್ತೀಚೆಗೆ ಶಾಲಾ ಮಕ್ಕಳು ಶಾಲೆಗೆ ಹೋಗುವುದನ್ನು ತಪ್ಪಿಸಲು ಅಥವಾ ಪೋಷಕರಿಂದ ತಪ್ಪಿಸಿಕೊಳ್ಳಲು ತಮ್ಮನ್ನು ತಾವೇ ಕಿಡ್ನಾಪ್ ಮಾಡಿಕೊಳ್ಳಲಾಗಿದೆ ಎಂದು ನಾಟಕವಾಡುತ್ತಿರುವ ಘಟನೆಗಳು ನಡೆಯುತ್ತಲೇ ಇದೆ. ಇಂತಹುದೆ ಒಂದು ಘಟನೆ ಫೆ.9 ರಂದು ಬೆಳಿಗ್ಗೆ ಬೆಳ್ತಂಗಡಿಯಲ್ಲಿ ನಡೆದಿದೆ. ಈ ಗಂಭೀರ ಘಟನೆಗೆ ರಾಜಕೀಯ ಪ್ರವೇಶ ಮಾಡುವ ಮುನ್ನವೇ ಪೊಲೀಸರು ತನಿಖೆ ನಡೆಸಿ ವಿದ್ಯಾರ್ಥಿನಿಯ ಸುಳ್ಳು ಕಥೆಯನ್ನು ಬಯಲುಗೊಳಿಸಿದ್ದಾರೆ ಎಂಬ ಮಾಹಿತಿಯೊಂದರಿಂದ ಸಾರ್ವಜನಿಕರು ನಿಟ್ಟುಸಿರು ಬಿಟ್ಟಿದ್ದಾರೆ

ದಿನಾಂಕ 09-02-20206 ರ ಬೆಳಿಗ್ಗೆ ಸುಮಾರು 8.30 ಗಂಟೆಗೆ 16 ವರ್ಷದ ಶಾಲಾ ಬಾಲಕಿ ಕಾಲೇಜಿಗೆ ಸ್ಕೂಟಿಯಲ್ಲಿ ತೆರಳಿದ್ದಾಳೆ. ಕಾಲೇಜಿಗೆ ತೆರಳುತ್ತಿದ್ದ ವೇಳೆ, ತನ್ನ ಮನೆಯಿಂದ ಸುಮಾರು 300 ಮೀಟರ್ ದೂರದಲ್ಲಿ ಮಾರುತಿ ಒಮ್ನಿ ಬಂದಿದೆ. ಮಾರುತಿ ಒಮ್ನಿಯ ನಂಬರ್ ಪ್ಲೇಟ್ ಮುಚ್ಚಲಾಗಿತ್ತು, ಮಾರುತಿ ಓಮ್ನಿ ವಾಹನದಲ್ಲಿ ಬಂದ ಮೂವರು ಮುಖ ಮುಚ್ಚಿಕೊಂಡಿದ್ದ ಮುಸುಕುದಾರಿ ವ್ಯಕ್ತಿಗಳು ಇದ್ದರು, ಸ್ಕೂಟಿಗೆ ಅಡ್ಡ ಇಟ್ಟು ಮೂವರು ಮುಸುಕುದಾರಿಗಳು ವಿದ್ಯಾರ್ಥಿನಿಯನ್ನು ತಡೆದು ಅಪಹರಿಸಲು ಪ್ರಯತ್ನಿಸಿದ್ದಾರೆ, ಅವರು ಒಮ್ನಿಯಲ್ಲಿ ವಿದ್ಯಾರ್ಥಿನಿಯನ್ನು ಹಾಕಿಕೊಂಡು ಅಪಹರಿಸಲು ಯತ್ನಿಸಿದಾಗ ಅವಳು ಪ್ರತಿರೋಧಿಸಿ ಬೊಬ್ಬೆ ಹೊಡೆದಿದ್ದಾಳೆ. ಹಿಂದಿನಿಂದ ಒಂದು ದ್ವಿಚಕ್ರ ವಾಹನವೂ ಬಂದಿದೆ. ಇದರಿಂದ ಬೆದರಿದ ಅಪಹರಣಕಾರರು ತಮ್ಮಲ್ಲಿದ್ದ ಚಾಕುವಿನಿಂದ ಅವಳ ಎಡ ಕೈಗೆ ನಾಲ್ಕು ಬಾರಿ ಇರಿದಿದ್ದಾರೆ. ಅಪಹರಣಕಾರರು ಬೆದರಿ ಓಡಿಹೋಗಿ ತಪ್ಪಿಸಿಕೊಂಡಿದ್ದಾರೆ. ಇದು ಬೆಳ್ತಂಗಡಿ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ನಡೆದ ಘಟನೆಯ ವಿವರಣೆಯ ವಿದ್ಯಾರ್ಥಿನಿಯ ಹೇಳಿಕೆ.
ಈ ಬಗ್ಗೆ ಬಾಲಕಿಯು ತನ್ನ ಪೋಷಕರೊಂದಿಗೆ ಠಾಣೆಗೆ ಹಾಜರಾಗಿ ನೀಡಿದ ದೂರಿನ ಅನ್ವಯ ಪ್ರಕರಣ ದಾಖಲಿಸಿಕೊಂಡು ಬೆಳ್ತಂಗಡಿ ಪೊಲೀಸರು ತನಿಖೆ ಆರಂಭಿಸಿದ್ದಾರೆ. ಸ್ಕೂಟಿಯಲ್ಲಿ ಕಾಲೇಜಿಗೆ ತೆರಳುತ್ತಿದ್ದ ಅಪ್ರಾಪ್ತ ವಿದ್ಯಾರ್ಥಿನಿಯನ್ನು ಕಾರಿನಲ್ಲಿ ಬಂದ ಮೂವರು ಅಪರಿಚಿತರು ಅಪಹರಿಸಲು ಯತ್ನಿಸಿದ ಆತಂಕಕಾರಿ ಘಟನೆ ಸೋಮವಾರ ಬೆಳಿಗ್ಗೆ ತಾಲೂಕಿನ ಸುದೇಮುಗೇರು ಎಂಬಲ್ಲಿ ನಡೆದಿದ್ದು, ವಿದ್ಯಾರ್ಥಿನಿಯ ಸಮಯಪ್ರಜ್ಞೆ ಹಾಗೂ ಪ್ರತಿರೋಧದಿಂದಾಗಿ ಭಾರಿ ಅನಾಹುತವೊಂದು ತಪ್ಪಿದಂತಾಗಿದೆ ಎಂಬ ಸುದ್ದಿಯಿಂದ ದಕ್ಷಿಣಕನ್ನಡ ಜಿಲ್ಲೆಯಾದ್ಯಂತ ಆತಂಕದ ವಾತಾವರಣ ನಿರ್ಮಾಣವಾಗಿತ್ತು. ಘಟನೆಯ ಬೆನ್ನಲ್ಲೇ ಬೆಳ್ತಂಗಡಿ ಶಾಸಕ ಹರೀಶ್ ಪೂಂಜಾ ಅವರು ಆಸ್ಪತ್ರೆಗೆ ಭೇಟಿ ನೀಡಿ ವಿದ್ಯಾರ್ಥಿನಿಯ ಯೋಗಕ್ಷೇಮ ವಿಚಾರಿಸಿದ್ದಾರೆ. ಘಟನೆಯ ಬಗ್ಗೆ ಸರಕಾರ ಮತ್ತು ಗೃಹ ಇಲಾಖೆಯ ವಿರುದ್ಧ ಆಕ್ರೋಶ ವ್ಯಕ್ತ ಪಡಿಸಿದ್ದು ಆಯ್ತು. ಮದ್ಯಾಹ್ನ ನಂತರ ಘಟನೆಯ ಸತ್ಯಾಂಶ ಒಂದೊಂದಾಗಿ ಹೊರಬರುತ್ತಲೇ ಆತಂಕದ ವಾತಾವರಣ ಕಡಿಮೆಯಾಗುತ್ತಾ ಬಂದಿದೆ. ಈವರೆಗೆ ಅಪಹರಣಕಾರರ ಪತ್ತೆಯಾಗಿಲ್ಲ, ಮಾರುತಿ ಒಮ್ನಿ ಯಾವ ಸಿಸಿ ಕ್ಯಾಮಾರದಲ್ಲೂ ಕಂಡುಬರಲೇ ಇಲ್ಲ. ಅಂದರೆ ವಿದ್ಯಾರ್ಥಿನಿಯ ಸುತ್ತಲೇ ಅಪಹರಣದ ಕಥೆ ಕಂಡುಬರುತ್ತಿತ್ತು.ಕೊನೆಗೂ ಬೆಳ್ತಂಗಡಿ ವಿದ್ಯಾರ್ಥಿನಿಯ ಅಪಹರಣಯತ್ನ ಪ್ರಕರಣದ ನಿಜಾಂಶ ಬಯಲಾಗಿದೆ.
-
crime7 days agoಅತ್ಯಾಚಾರ ಯತ್ನಕ್ಕೆ ತಡೆದ ಸೊಸೆಯ ಮುಖಕ್ಕೆ ಕಚ್ಚಿ ಕೊಲೆಗೆ ಯತ್ನಿಸಿದ ಮಾವ..ತಂದೆಯ ರಾಕ್ಷಸೀ ಕೃತ್ಯಕ್ಕೆ ಬೆಂಬಲಿಸಿದ ಗಂಡ..ಸುಳ್ಯ ಠಾಣಾ ವ್ಯಾಪ್ತಿಯಲ್ಲಿ ಅದೃಷ್ಟವಶಾತ್ ಬಚಾವಾದ ಸೊಸೆ..
-
Bantawala1 month agoನಾಗಬನ, ರಕ್ತೇಶ್ವರಿ ತಾಣ, ದೈವದೇವರ ಸಾನಿಧ್ಯ ದ್ವಂಸ ಗೊಳಿಸಿದ ಧರ್ಮದ್ರೋಹಿ ಕೃತ್ಯದ ವಿರುದ್ಧ ಭಕ್ತರ ಆಕ್ರೋಶ ; ನಾಶವಾದ ಸಾನಿಧ್ಯದಲ್ಲಿಯೇ ಸ್ವಾಮೀಜಿಯವರ ಮಾರ್ಗದರ್ಶನದಲ್ಲಿ ಕುಟುಂಬಸ್ತರು, ಸಾರ್ವಜನಿಕರ ಸಾಮೂಹಿಕ ಪ್ರಾರ್ಥನೆ
-
Dakshina Kannada2 months agoಶಾಸಕರ ಉಪಸ್ಥಿತಿಯಲ್ಲಿ ಪೊಲೀಸರ ನಿರಾಕರಣೆ ಮಧ್ಯೆಯೇ ಕೇಪುವಿನಲ್ಲಿ ನಡೆದ ಕೋಳಿಅಂಕ
-
Bantawala1 month agoವಿಟ್ಲದಲ್ಲಿ ಶಾರ್ಟ್ ಸರ್ಕ್ಯೂಟ್..ಶ್ರೀ ಎಲೆಕ್ಟ್ರಾನಿಕ್ಸ್ ,ಅಮಿತ್ ಹೋಟೆಲ್..ಸೇರಿ ಐದಾರು ಕಟ್ಟಡಗಳು ಸಂಪೂರ್ಣ ಬೆಂಕಿಗಾಹುತಿ..
-
crime3 weeks agoಸಂತ ಫಿಲೋಮಿನಾ ಕಾಲೇಜು ದೈಹಿಕ ಶಿಕ್ಷಣ ನಿರ್ದೇಶಕ ಎಲಿಯಾಸ್ ಪಿಂಟೋಗೆ ಐದು ವರ್ಷ ಜೈಲು ಶಿಕ್ಷೆ: ಪುತ್ತೂರು ಪೋಕ್ಸೋ ನ್ಯಾಯಾಲಯ ಆದೇಶ
-
Bantawala2 months agoಕೇಪು ಅಕ್ರಮ ಕೋಳಿ ಅಂಕಕ್ಕೆ ಧಾಳಿ; 16ಜನ, 22ಹುಂಜಗಳ ಸಹಿತ ಬಾಳು ಕತ್ತಿ ವಶಕ್ಕೆ ಪಡೆದ ವಿಟ್ಲ ಪೊಲೀಸರು.. ಪುತ್ತೂರು ಶಾಸಕರ ಸಹಿತ ಜಾಗ ನೀಡಿದ ಮಾಲಿಕನ ಮೇಲೂ ಬಿತ್ತು ಕೇಸು.
-
DEATH2 weeks agoವಿಟ್ಲದ ಜನಪ್ರಿಯ ಚಾಲಕ ಕುಮಾರಣ್ಣ ಹೃದಯಾಘಾತಕ್ಕೆ ಬಲಿ
-
Bantawala4 weeks agoನಿನ್ನೆಯಿಂದ ನಿಗೂಢವಾಗಿ ನಾಪತ್ತೆಯಾಗಿದ್ದ ತಲೆಕ್ಕಿ ಮಹಮ್ಮದ್ ಹಾಜಿ.. ; ಇಂದು ಸಂಜೆ ನೇತ್ರಾವತಿ ನದಿಯಲ್ಲಿ ಪತ್ತೆ.. ಬಂಟ್ವಾಳ ನಗರ ಠಾಣಾ ವ್ಯಾಪ್ತಿಯಲ್ಲಿ ಪ್ರಕರಣ..

