Cinema
‘ಮಿಸೆಸ್ ಇಂಡಿಯಾ –ಸೀಸನ್ 15’ ಪುತ್ತೂರು ಮೂಲದ ವೈದ್ಯೆ ಡಾ. ರಶ್ಮಾ ಮೋಹಿತ್ ಶೆಟ್ಟಿ ವಿಜೇತೆ
- Share
- Tweet /home/u338848369/domains/deevatigenews.com/public_html/wp-content/plugins/mvp-social-buttons/mvp-social-buttons.php on line 72
https://deevatigenews.com/wp-content/uploads/2025/12/WhatsApp-Image-2025-12-26-at-23.45.18-1000x600.jpg&description=‘ಮಿಸೆಸ್ ಇಂಡಿಯಾ –ಸೀಸನ್ 15’ ಪುತ್ತೂರು ಮೂಲದ ವೈದ್ಯೆ ಡಾ. ರಶ್ಮಾ ಮೋಹಿತ್ ಶೆಟ್ಟಿ ವಿಜೇತೆ', 'pinterestShare', 'width=750,height=350'); return false;" title="Pin This Post">
ಜೈಪುರ: ರಾಜಸ್ಥಾನದ ಜೈಪುರದ ಐತಿಹಾಸಿಕ ಜೈ ಬಾಗ್ ಅರಮನೆಯಲ್ಲಿ ಇತ್ತೀಚೆಗೆ ನಡೆದ ಪ್ರತಿಷ್ಠಿತ ‘ಮಿಸೆಸ್ ಇಂಡಿಯಾ – ಸೀಸನ್ 15’ ಸೌಂದರ್ಯ ಸ್ಪರ್ಧೆಯ ಗ್ರ‍್ಯಾಂಡ್ ಫಿನಾಲೆಯಲ್ಲಿ ಪುತ್ತೂರು ಮೂಲದ ವೈದ್ಯೆ ಡಾ. ರಶ್ಮಾ ಮೋಹಿತ್ ಶೆಟ್ಟಿ ಅವರು ವಿಜೇತರಾಗಿ ಹೊರಹೊಮ್ಮಿದ್ದಾರೆ.

ರಾಷ್ಟ್ರೀಯ ನಿರ್ದೇಶಕಿ ದೀಪಾಲಿ ಫಡ್ನಿಸ್ ಆಯೋಜಿಸಿದ್ದ ಈ ಪ್ರತಿಷ್ಠಿತ ಸ್ಪರ್ಧೆಯು ದೇಶದ ಅತ್ಯಂತ ಪ್ರಸಿದ್ಧ ಮತ್ತು ದೀರ್ಘಕಾಲೀನ ಸೌಂದರ್ಯ ಸ್ಪರ್ಧೆಗಳಲ್ಲಿ ಒಂದೆoದು ಗುರುತಿಸಿಕೊಂಡಿದೆ. ಡಿಸೆಂಬರ್ 18 ರಿಂದ 21 ರವರೆಗೆ ನಡೆದ ನಾಲ್ಕು ದಿನಗಳ ಈ ಕಠಿಣ ಸ್ಪರ್ಧೆಯಲ್ಲಿ ಭಾರತದಾದ್ಯಂತ ನಲವತ್ತು ಫೈನಲಿಸ್ಟ್ಗಳು ಭಾಗವಹಿಸಿದ್ದು, ಪ್ರತಿಭಾ ಸುತ್ತುಗಳು, ಸ್ಪೂರ್ತಿದಾಯಕ ಜೀವನ ಕಥೆಗಳು, ವೈಯಕ್ತಿಕ ಸಂದರ್ಶನಗಳು ಹಾಗೂ ಸಾಂಪ್ರದಾಯಿಕ ಮತ್ತು ಪಾಶ್ಚಿಮಾತ್ಯ ಉಡುಪುಗಳ ವಿವಿಧ ವಿಭಾಗಗಳಲ್ಲಿ ಡಾ. ರಶ್ಮಾ ಅವರು ಅತ್ಯುತ್ತಮ ಪ್ರದರ್ಶನ ನೀಡುವ ಮೂಲಕ ಕಿರೀಟವನ್ನು ತಮ್ಮದಾಗಿಸಿಕೊಂಡಿದ್ದಾರೆ.

ಈ ಮಹೋನ್ನತ ಸಾಧನೆಗೂ ಮೊದಲು ಮುಂಬೈ ಮುಲುಂಡ್ ನಿವಾಸಿ ಹಾಗೂ ಮೂಲತಃ ಪುತ್ತೂರಿನವರಾದ ಡಾ. ರಶ್ಮಾ ಅವರು ಮಿಸೆಸ್ ಇಂಡಿಯಾ ಕರ್ನಾಟಕ 2024 ಸ್ಪರ್ಧೆಯಲ್ಲಿ ಮೊದಲ ರನ್ನರ್ ಅಪ್ ಪ್ರಶಸ್ತಿಯನ್ನು ಪಡೆದುಕೊಂಡಿದ್ದರು. ಆ ಸ್ಪರ್ಧೆಯಲ್ಲಿ ಅವರು ಪ್ರತಿಭಾ ಸುತ್ತು, ರ‍್ಯಾಂಪ್ ವಾಕ್ ಮತ್ತು ಟಾಸ್ಕ್ ವಿಭಾಗಗಳಲ್ಲಿ ಪ್ರಥಮ ಬಹುಮಾನ ಗೆದ್ದು ಗಮನ ಸೆಳೆದಿದ್ದರು. ಅಲ್ಲದೆ ಮಂಗಳೂರಿನಲ್ಲಿ ನಡೆದ ಮಿಸೆಸ್ ಇಂಡಿಯಾ ಕರ್ನಾಟಕ ಮಂಗಳೂರು ಹಾಗೂ ಮುಂಬೈ ಬಂಟ್ಸ್ ಸಂಘದ ಆಕಾಂಕ್ಷಾ ಮಿಸೆಸ್ ಬಂಟ್ಸ್ 2023 ಸ್ಪರ್ಧೆಗಳಲ್ಲೂ ಮೊದಲ ರನ್ನರ್ ಅಪ್ ಆಗಿ ಆಯ್ಕೆಯಾಗುವ ಮೂಲಕ ಸೌಂದರ್ಯ ಮತ್ತು ಪ್ರತಿಭೆಯ ಕ್ಷೇತ್ರದಲ್ಲಿ ತಮ್ಮ ಛಾಪು ಮೂಡಿಸಿದ್ದರು.
ವೃತ್ತಿಯಲ್ಲಿ ವೈದ್ಯೆಯಾಗಿರುವ ಇವರು ಶೈಕ್ಷಣಿಕವಾಗಿಯೂ ಅಪ್ರತಿಮ ಸಾಧನೆ ಮಾಡಿದವರು. ಪುತ್ತೂರು ತಾಲ್ಲೂಕಿನ ಮುಂಡೂರು ಗ್ರಾಮದ ಪೊನೋನಿಯಾದಲ್ಲಿ ಬೆಳೆದು, ಪಾಪೆಮಜಲು ಸರ್ಕಾರಿ ಶಾಲೆ ಮತ್ತು ಪುತ್ತೂರು ಕೊಂಬೆಟ್ಟು ಸರ್ಕಾರಿ ಕಾಲೇಜಿನಲ್ಲಿ ಶಿಕ್ಷಣ ಪೂರೈಸಿದ ಇವರು, ಮೂಡುಬಿದಿರೆಯ ಆಳ್ವಾಸ್ ಕಾಲೇಜಿನಿಂದ ಪ್ರಕೃತಿ ಚಿಕಿತ್ಸೆಯಲ್ಲಿ ಪದವಿ ಪಡೆದಿದ್ದಾರೆ. ಪದವಿಯಲ್ಲಿ ರಾಜೀವ್ ಗಾಂಧಿ ವಿಶ್ವವಿದ್ಯಾಲಯಕ್ಕೆ ಎರಡನೇ ರ‍್ಯಾಂಕ್ ಪಡೆದಿದ್ದ ಇವರು ತಮ್ಮ ಕಾಲೇಜಿನ ಅತ್ಯುತ್ತಮ ವಿದ್ಯಾರ್ಥಿನಿ ಎಂಬ ಹೆಗ್ಗಳಿಕೆಗೂ ಪಾತ್ರರಾಗಿದ್ದರು. ವೈದ್ಯಕೀಯ ವೃತ್ತಿಯ ಜೊತೆಗೆ ಸಮಾಜ ಸೇವೆಯಲ್ಲೂ ತೊಡಗಿಸಿಕೊಂಡಿರುವ ಇವರು, ಮುಲುಂಡ್ ಹಿಲ್ಸ್ ಇನ್ನರ್ ವೀಲ್ ಕ್ಲಬ್‌ನ ಸಮಿತಿ ಕಾರ್ಯದರ್ಶಿಯಾಗಿ ಮಹಿಳೆಯರ ಆರೋಗ್ಯದ ಕುರಿತು ಹಲವಾರು ಜಾಗೃತಿ ಕಾರ್ಯಕ್ರಮಗಳನ್ನು ನಡೆಸುತ್ತಿದ್ದಾರೆ.

ಕಲೆ ಮತ್ತು ಕ್ರೀಡಾ ಕ್ಷೇತ್ರದಲ್ಲೂ ಸಕ್ರಿಯರಾಗಿರುವ ಡಾ. ರಶ್ಮಾ ಅವರು ರಾಜ್ಯ ಮಟ್ಟದ ಥ್ರೋಬಾಲ್ ಆಟಗಾರ್ತಿಯಾಗಿದ್ದಾರೆ. ರಂಗಭೂಮಿ ಕಲಾವಿದೆಯೂ ಆಗಿರುವ ಇವರು, ಕಲಾ ಸ್ಪಂದನ ಮುಂಬೈ ತಂಡದ “ಸ್ವಾಮಿ ಕೊರಗಜ್ಜ” ನಾಟಕದ ಅಭಿನಯಕ್ಕಾಗಿ 2024ರ ಡಾ. ಶಿವರಾಮ ಕಾರಂತ್ ಥಿಯೇಟರ್ ಫೆಸ್ಟಿವಲ್‌ನಲ್ಲಿ ಅತ್ಯುತ್ತಮ ನಟಿ ಪ್ರಶಸ್ತಿಯನ್ನು ಮುಡಿಗೇರಿಸಿಕೊಂಡಿದ್ದಾರೆ. ನಾರ್ಯಗುತ್ತು ರಘುನಾಥ್ ಶೆಟ್ಟಿ ಮತ್ತು ಅಮ್ಟೂರ್ ಬಾಲಿಕೆ ಕಸ್ತೂರಿ ಶೆಟ್ಟಿ ದಂಪತಿಯ ಪುತ್ರಿಯಾಗಿರುವ ಇವರಿಗೆ ಪತಿ ಮೋಹಿತ್ ಶೆಟ್ಟಿ ಮತ್ತು ಏಳು ವರ್ಷದ ಪುತ್ರಿ ನೇಸರ ಅವರ ಸಂಪೂರ್ಣ ಬೆಂಬಲವಿದೆ. ಗ್ರಾಮೀಣ ಭಾಗದ ಸರ್ಕಾರಿ ಶಾಲೆಯಲ್ಲಿ ಓದಿ ಇಂದು ರಾಷ್ಟ್ರಮಟ್ಟದ ವೇದಿಕೆಯಲ್ಲಿ ಕನ್ನಡಿಗರ ಕೀರ್ತಿ ಹೆಚ್ಚಿಸಿರುವ ಇವರ ಸಾಧನೆಗೆ ವ್ಯಾಪಕ ಪ್ರಶಂಸೆ ವ್ಯಕ್ತವಾಗಿದೆ.
Bantawala
ಕೊರಗಜ್ಜ ರೀಲ್ಸಿಗೆ ದೈವಾರಾಧಕರಿಂದ ವಿರೋಧ ; ಕಾನೂನು ಹೋರಾಟಕ್ಕೂ ಸಿದ್ಧ
ಮಡಿಕೇರಿ : ತುಳುನಾಡ ಜನರ ನಂಬುಗೆಯ ದೈವಗಳಲ್ಲಿ ಒಂದಾದ ಕೊರಗಜ್ಜ ದೈವದ ಕುರಿತಾದ ಸಿನಿಮಾವೊಂದು ನಿರ್ದೇಶಕ ಸುಧೀರ್ ಅತ್ತಾವರ ಅವರ ನಿರ್ದೇಶನದಲ್ಲಿ ಮೂಡಿಬರುತ್ತಿದೆ. ಸಿನೇಮಾದ ಪ್ರಚಾರಕ್ಕಾಗಿ ಕೊರಗಜ್ಜ ಚಿತ್ರದಲ್ಲಿರುವ ೬ ಹಾಡುಗಳ ಕುರಿತ ಕೊರಗಜ್ಜ ರೀಲ್ಸ್ ಎಂಬ ಸ್ಪರ್ಧೆಯನ್ನು ಚಿತ್ರತಂಡ ಆಯೋಜಿಸಿದೆ. ಇದನ್ನು ಕೊಡಗು ಜಿಲ್ಲಾ ದೈವರಾಧಕರು ಹಾಗೂ ದೈವ ನರ್ತಕರ ಸಂಘ ತೀವ್ರವಾಗಿ ವಿರೋಧಿಸಿದೆ.

ಈ ನಿರ್ಧಾರದಿಂದ ಚಿತ್ರತಂಡ ಹಿಂದೆ ಸರಿಯದಿದ್ದರೆ ಕಾನೂನು ಹೋರಾಟಕ್ಕೂ ಸಿದ್ಧವೆಂದು ನಗರದಲ್ಲಿ ಸುದ್ದಿಗಾರರೊಂದಿಗೆ ಮಾತನಾಡಿದ ಸಂಘದ ಸ್ಥಾಪಕ ಅಧ್ಯಕ್ಷ ಪಿ.ಎಂ. ರವಿ ಎಚ್ಚರಿಕೆ ನೀಡಿದ್ದಾರೆ. ಕೊರಗಜ್ಜ ದೈವದ ಸಿನಿಮಾ ಮಾಡುವುದಕ್ಕೆ ನಮ್ಮ ಅಭ್ಯಂತರವಿಲ್ಲ ಆದರೆ ದೈವದ ಶಕ್ತಿ ಮತ್ತು ಆಚಾರ ವಿಚಾರಗಳ ಕುರಿತು ಅರಿವಿಲ್ಲದ ವಿದ್ಯಾರ್ಥಿಗಳು ಯುವ ಸಮೂಹ ಹಾಗೂ ಸಾರ್ವಜನಿಕರು ಬಹುಮಾನಕ್ಕಾಗಿ ರೀಲ್ಸ್ ಮಾಡುವುದರಿಂದ ದೈವಕ್ಕೆ ಅಪಚಾರವಾಗುವ ಸಾಧ್ಯತೆಗಳಿವೆ ಮಾತ್ರವಲ್ಲದೆ ಸಾಮಾಜಿಕ ಜಾಲತಾಣಗಳಲ್ಲಿ ದೈವ ನಿಂದನೆ ಆಗುವ ಆತಂಕವು ಇದೆ ಎಂದು ತೀವ್ರ ಅಸಮಾಧಾನ ವ್ಯಕ್ತಪಡಿಸಿದರು.

ರಾಜ್ಯ ಸರ್ಕಾರ ಮತ್ತು ಕರ್ನಾಟಕ ಫಿಲಂ ಚೇಂಬರ್ ಆಫ್ ಕಾಮರ್ಸ್ ಈ ಬಗ್ಗೆ ಸೂಕ್ತ ಕ್ರಮ ಕೈಗೊಳ್ಳಬೇಕೆಂದು ಅವರು ಮನವಿ ಮಾಡಿದರು. ಸುದ್ದಿಗೋಷ್ಠಿಯಲ್ಲಿ ಸಂಘದ ಅಧ್ಯಕ್ಷ ಸದಾಶಿವ ರೈ ಪ್ರಧಾನ ಕಾರ್ಯದರ್ಶಿ ಪಿ.ಕೆ ದಿನೇಶ್ ಹಾಗೂ ಇತರರು ಉಪಸ್ಥಿತರಿದ್ದರು.
Cinema
ಕನ್ನಡ-ತಮಿಳು ಕಿರುತೆರೆಯ ಜನಪ್ರಿಯ ನಟಿ ನಂದಿನಿ ಆತ್ಮಹತ್ಯೆ !
ಬೆಂಗಳೂರು : ಕನ್ನಡ ಮತ್ತು ತಮಿಳು ಧಾರಾವಾಹಿಗಳಲ್ಲಿ ಪೋಷಕ ನಟಿಯಾಗಿ ಜನಪ್ರಿಯರಾಗಿದ್ದ ಕೊಟ್ಟೂರು ನಿವಾಸಿ ನಂದಿನಿ ಸಿ.ಎಂ. ವಾಸವಾಗಿದ್ದ ಆರ್.ಆರ್.ನಗರದ ಪಿಜಿಯೊಂದರಲ್ಲಿ ತಾಯಿಗೆ ಡೆತ್ ನೋಟ್ ಬರೆದಿಟ್ಟು
ನೇಣು ಬಿಗಿದು ಆತ್ಮಹತ್ಯೆಕೊಂಡಿದ್ದಾರೆ.

ಕನ್ನಡದ ‘ಜೀವ ಹೂವಾಗಿದೆ’, ‘ನೀನಾದೆ ನಾ’, ‘ಸಂಘರ್ಷ’, ‘ಮಧುಮಗಳು’ ಮುಂತಾದ ಸೀರಿಯಲ್‌ನಲ್ಲಿ ನಟಿಸಿ ಜನಪ್ರಿಯರಾಗಿದ್ದರು.
ಕನ್ನಡ ಮಾತ್ರವಲ್ಲದೇ ತಮಿಳಿನ ಜನಪ್ರಿಯ ಧಾರಾವಾಹಿ ʼಗೌರಿ’ಯಲ್ಲಿ ನಂದಿನಿ ಅವರು ನಾಯಕಿಯ ಪಾತ್ರವನ್ನು ಯಶಸ್ವಿಯಾಗಿ ಮಾಡಿದ್ದರು. ಅಲ್ಲೂ ಕೂಡ ಅವರಿಗೆ ಸಾಕಷ್ಟು ಸಂಖ್ಯೆಯಲ್ಲಿ ಅಭಿಮಾನಿಗಳಿದ್ದರು. ʼದುರ್ಗಾʼ ಮತ್ತು ʼಕನಕʼ ಪಾತ್ರಗಳ ಮೂಲಕ ನಂದಿನಿ ಕಿರುತೆರೆ ವೀಕ್ಷಕರ ಮನಗೆಲ್ಲುವಲ್ಲಿ ಯಶಸ್ವಿಯಾಗಿದ್ದರು.

ನಂದಿನಿ ಅವರ ʼಗೌರಿʼ ಸೀರಿಯಲ್‌ನಲ್ಲಿ ಅವರ ಪಾತ್ರ ವಿಷ ಕುಡಿದು ಆತ್ಮಹತ್ಯೆ ಮಾಡಿಕೊಳ್ಳುವ ದೃಶ್ಯವೊಂದಿತ್ತು. ಆದರೆ ನಿಜ ಜೀವನದಲ್ಲೇ ಅವರು ನೇಣು ಬಿಗಿದು ಆತ್ಮಹತ್ಯೆ ಮಾಡಿಕೊಂಡಿರುವುದು ಅಭಿಮಾನಿಗಳ ದುಃಖಕ್ಕೆ ಕಾರಣವಾಗಿದೆ.
ನಂದಿನಿ ಅವರ ಸಾವಿಗೆ ನಿಖರವಾದ ಕಾರಣ ಇನ್ನಷ್ಟೇ ತಿಳಿದು ಬರಬೇಕಿದೆ. ಪೊಲೀಸರು ತನಿಖೆ ಆರಂಭಿಸಿದ್ದಾರೆ.
-
crime2 months agoಧಾರ್ಮಿಕ ನಂಬಿಕೆಗೆ ಅವಮಾನ: ಕೊಡಗಿನ ಎಮ್ಮೆಮಾಡಿನಲ್ಲಿ ದೈವದ ವೇಷದಂತೆ ಧರಿಸಿ ಮದುಮಗನ ಅತಿರೇಕದ ವರ್ತನೆ!
-
crime4 months agoಅತ್ಯಾಚಾರ ಯತ್ನಕ್ಕೆ ತಡೆದ ಸೊಸೆಯ ಮುಖಕ್ಕೆ ಕಚ್ಚಿ ಕೊಲೆಗೆ ಯತ್ನಿಸಿದ ಮಾವ..ತಂದೆಯ ರಾಕ್ಷಸೀ ಕೃತ್ಯಕ್ಕೆ ಬೆಂಬಲಿಸಿದ ಗಂಡ..ಸುಳ್ಯ ಠಾಣಾ ವ್ಯಾಪ್ತಿಯಲ್ಲಿ ಅದೃಷ್ಟವಶಾತ್ ಬಚಾವಾದ ಸೊಸೆ..
-
Bantawala2 months agoವಿಟ್ಲದಲ್ಲಿ ನಡೆಯಿತೊಂದು ದೈವ ಕಾರಣಿಕ; ಪೊಲೀಸರ ಕಣ್ಣಿಗೆ ಮಣ್ಣೆರಚಿದರೂ ದೈವದ ದೃಷ್ಟಿಗೆ ತತ್ತರಿಸಿದ ದನಕಳ್ಳ..
-
Bantawala5 months agoನಾಗಬನ, ರಕ್ತೇಶ್ವರಿ ತಾಣ, ದೈವದೇವರ ಸಾನಿಧ್ಯ ದ್ವಂಸ ಗೊಳಿಸಿದ ಧರ್ಮದ್ರೋಹಿ ಕೃತ್ಯದ ವಿರುದ್ಧ ಭಕ್ತರ ಆಕ್ರೋಶ ; ನಾಶವಾದ ಸಾನಿಧ್ಯದಲ್ಲಿಯೇ ಸ್ವಾಮೀಜಿಯವರ ಮಾರ್ಗದರ್ಶನದಲ್ಲಿ ಕುಟುಂಬಸ್ತರು, ಸಾರ್ವಜನಿಕರ ಸಾಮೂಹಿಕ ಪ್ರಾರ್ಥನೆ
-
accident3 weeks agoವಿಟ್ಲ ಆಕಾಶದಲ್ಲಿ ಹಾರಾಡಿದ ವಿಮಾನ: ತಾಂತ್ರಿಕ ದೋಷವಲ್ಲ, ಹವಾಮಾನ ವೈಪರೀತ್ಯದ ಕಾರಣ ! ಸಾರ್ವಜನಿಕರು ಆತಂಕ ಪಡುವ ಅಗತ್ಯವಿಲ್ಲ
-
Dakshina Kannada5 months agoಶಾಸಕರ ಉಪಸ್ಥಿತಿಯಲ್ಲಿ ಪೊಲೀಸರ ನಿರಾಕರಣೆ ಮಧ್ಯೆಯೇ ಕೇಪುವಿನಲ್ಲಿ ನಡೆದ ಕೋಳಿಅಂಕ
-
Bantawala4 months agoಕುದ್ರಿಯ ತರವಾಡು ಮನೆಯಲ್ಲಿ ಸಂಕ್ರಮಣದಂದು ರಣಾಂಗಣ; ಅಧ್ಯಕ್ಷ, ಟ್ರಸ್ಟಿ ಮೇಲೆ ಮಾರಣಾಂತಿಕ ಹಲ್ಲೆ
-
Bantawala5 months agoವಿಟ್ಲದಲ್ಲಿ ಶಾರ್ಟ್ ಸರ್ಕ್ಯೂಟ್..ಶ್ರೀ ಎಲೆಕ್ಟ್ರಾನಿಕ್ಸ್ ,ಅಮಿತ್ ಹೋಟೆಲ್..ಸೇರಿ ಐದಾರು ಕಟ್ಟಡಗಳು ಸಂಪೂರ್ಣ ಬೆಂಕಿಗಾಹುತಿ..
