Connect with us

Bantawala

ಬಾಕ್ಸೈಟ್ ಲಾರಿಗಳ ಅಟ್ಟಹಾಸ.ಎಕ್ಕುಟ್ಟಿ ಹೋದ ರಸ್ತೆಗಳು.. ಕನ್ಯಾನ-ನೆಲ್ಲಿಕಟ್ಟೆ-ಮುಗುಳಿ ಅಂತರ್ರಾಜ್ಯ ಸಂಪರ್ಕ ರಸ್ತೆ ದುರಸ್ತಿಗೆ ನಾಗರಿಕರ ಪ್ರತಿಭಟನೆ

Published

on

ಬಂಟ್ವಾಳ : ಇಲ್ಲಿನ ವಿಟ್ಲ ಠಾಣಾ ವ್ಯಾಪ್ತಿಯ ಕನ್ಯಾನ-ಕರೋಪಾಡಿ ಗ್ರಾಮ ಪಂಚಾಯತ್ ವ್ಯಾಪ್ತಿಗೊಳಪಟ್ಟ ನೆಲ್ಲಿಕಟ್ಟೆ-ಮುಗುಳಿ ಸಂಪರ್ಕ ರಸ್ತೆ ಎಂಬುದು ಲಂಗುಲಗಾಮಿಲ್ಲದ ಯಮದೂತ ಬಾಕ್ಸೈಟ್ ಲಾರಿಗಳ ಓಡಾಟದಿಂದಾಗಿ ಸಂಪೂರ್ಣ ನಾಶವಾಗಿದೆ.

ಸಾರಿಗೆ ನಿಯಮ ಉಲ್ಲಂಘಿಸಿ ಬೇಕಾಬಿಟ್ಟಿ ಸಂಚರಿಸುವ ಬಾಕ್ಸೈಟ್ ಲಾರಿಗಳಿಂದಾಗಿ ರಸ್ತೆಯಲ್ಲಿ ಇತರ ವಾಹನಗಳು ಸಂಚರಿಸುವುದೇ ಅಸಾಧ್ಯವಾಗಿದೆ. 12, 14, 16, 22ಚಕ್ರಗಳ ಭಾರೀ ಸರಕು ಸಾಗಾಟದ ಲಾರಿಗಳ ಸಂಚಾರ ತಡೆಯುವಂತೆ ಎಲ್ಲಾ ಇಲಾಖೆಗಳಿಗೂ ಸಾರ್ವಜನಿಕರು ಮನವಿ ಮಾಡಿದ್ದರೂ ಈವರೆಗೂ ಯಾವುದೇ ಪ್ರಯೋಜನವಾಗಿಲ್ಲ.


ರಾಜಕಾರಣಿಗಳ ಕೃಪಾಕಟಾಕ್ಷ..
ಬಿಜೆಪಿ, ಕಾಂಗ್ರೆಸ್ ಎಂಬ ಭೇದವಿಲ್ಲದೇ ಬಾಕ್ಸೈಟ್ ದಂಧೆಗೆ ಸಹಕಾರ ನೀಡುತ್ತಿದ್ದಾರೆ ಎಂದು ಸ್ಥಳೀಯರು ನೇರವಾಗಿ ಆರೋಪಿಸಿದ್ದಾರೆ. ಕೇವಲ 16ಟನ್ ಸಾಮರ್ಥ್ಯದ ಲಾರಿಗಳ ಓಡಾಟಕ್ಕಿರುವ ಗ್ರಾಮಾಂತರ ರಸ್ತೆಯಲ್ಲಿ 40, 50ಟನ್ ಸಾಮರ್ಥ್ಯದ ಬಾಕ್ಸೈಟ್ ಲಾರಿಗಳು ಓಡಾಡುತ್ತಿವೆ. ಈ ಬಗ್ಗೆ ರಾಜಕೀಯ ಮುಖಂಡರ ನಿರ್ಲಕ್ಷ್ಯ ಮತ್ತು ಅಧಿಕಾರಿಗಳ ಬೇಜವಾಬ್ದಾರಿ ಖಂಡಿಸಿ ಡಿಸೆಂಬರ್ 30ರಂದು ಮಂಗಳವಾರ ಬೆಳಗ್ಗೆ ಕನ್ಯಾನ ಮತ್ತು ಕರೋಪಾಡಿ ಗ್ರಾಮಗಳ ಗ್ರಾಮಸ್ಥರಿಂದ ನೆಲ್ಲಿಕಟ್ಟೆ ಜಂಕ್ಷನಲ್ಲಿ ಪ್ರತಿಭಟನೆ ಹಮ್ಮಿಕೊಂಡಿದ್ದಾರೆ.

Continue Reading
Advertisement

Bantawala

ಐಟಿಐ ವಿದ್ಯಾರ್ಥಿಗಳ ಬಡಿದಾಟ; ಇಬ್ಬರಿಗೆ ಚೂರಿ ಇರಿತ; ವಿಟ್ಲ ಪೊಲೀಸರ ವಶದಲ್ಲಿ ಆರೋಪಿ ವಿದ್ಯಾರ್ಥಿ..

Published

on

ವಿಟ್ಲದ ಖಾಸಗಿ ಐಟಿಐ ವಿದ್ಯಾಸಂಸ್ಥೆಯಲ್ಲಿ ಒಂದೇ ತರಗತಿಯ ವಿದ್ಯಾರ್ಥಿಗಳ ನಡುವೆ ಕ್ಷುಲ್ಲಕ ವಿಚಾರಕ್ಕಾಗಿ ಬಡಿದಾಟ ನಡೆದಿದ್ದು ಮುಂದುವರಿದ ಭಾಗವಾಗಿ ವಿದ್ಯಾರ್ಥಿಯೊಬ್ಬ ತನ್ನ ಸಹಪಾಠಿಗಳಿಬ್ಬರಿಗೆ ಚೂರಿಯಿಂದ ಇರಿದು ಗಾಯಗೊಳಿಸಿದ್ದಾನೆ.


ಪ್ರಥಮ ವರ್ಷದ ವಿದ್ಯಾರ್ಥಿಗಳ ನಡುವೆ ಘರ್ಷಣೆ ನಡೆದಿದ್ದು ಪುತ್ತೂರು ಬನ್ನೂರು ನಿವಾಸಿ ಮಹಮ್ಮದ್ ರಿಹಾನ್(18) ಮತ್ತು ಮಂಜೇಶ್ವರ ದೈಗೋಳಿ ನಿವಾಸಿ ಯಜ್ಞೇಶ್ (18) ಎಂಬಿಬ್ಬರ ಮೇಲೆ ಅದೇ ತರಗತಿಯ ವಿಟ್ಲ ನಿವಾಸಿ ಹೇಮಂತ್ (18) ಎಂಬಾತ ಚೂರಿಯಿಂದ ಇರಿದು ಘಾಸಿಗೊಳಿಸಿದ್ದಾನೆ.


ಫುಲ್ ಶೇವ್ ಮಾಡಿಕೊಂಡು ತರಗತಿ ಬರುತ್ತಿದ್ದ ಮಹಮ್ಮದ್ ರಿಹಾನ್ ನನ್ನು ಕೆಲದಿನಗಳಿಂದ ಹೇಮಂತ್ ತಮಾಷೆ ಮಾಡುತ್ತಾ ಇತರ ವಿದ್ಯಾರ್ಥಿಗಳ ಮುಂದೆ ಅವಮಾನ ಮಾಡುತ್ತಿದ್ದನೆನ್ನಲಾಗಿದೆ.

ಈ ಬಗ್ಗೆ ಎರಡು, ಮೂರು ದಿನಗಳಿಂದ ಮೊಹಮ್ಮದ್ ರಿಹಾನ್ ಹೇಮಂತ್ ನಲ್ಲಿ ತನ್ನನ್ನು ಗೇಲಿ ಮಾಡದಂತೆ ವಿನಂತಿಸುತ್ತಿದ್ದ. ಆದರೂ ಆತ ಮುಂದುವರಿಸಿದ್ದು ಇಂದು ಬೆಳಗ್ಗೆ ಮತ್ತೆ ಗೇಲಿ ಮಾಡಿದಾಗ ಇಬ್ಬರ ಮಧ್ಯೆ ಮಾತಿನ ಚಕಮಕಿ ನಡೆದಿತ್ತೆನ್ನಲಾಗಿದೆ.

ಇದೇ ಮತ್ತಷ್ಟು ಮುಂದುವರಿದು ತರಗತಿಯೊಳಗೆ ಪರಸ್ಪರ ನೂಕಾಟ, ತಳ್ಳಾಟ ನಡೆದು ಆಕ್ರೋಶಗೊಂಡ ಹೇಮಂತ್ ತನ್ನಲ್ಲಿದ್ದ ಚೂರಿಯಿಂದ ಮಹಮ್ಮದ್ ರಿಹಾನ್ ಹೊಟ್ಟೆಯ ಹಿಂಭಾಗಕ್ಕೆ ಇರಿದಿದ್ದಾನೆ. ತಡೆಯಲು ಹೋದ ಅದೇ ತರಗತಿಯ ವಿದ್ಯಾರ್ಥಿ ದೈಗೋಳಿ ನಿವಾಸಿ ಯಜ್ಞೇಶ್ ಎಂಬಾತನ ತೊಡೆಗೂ ಚೂರಿ ಇರಿದಿದ್ದಾನೆ.

ಗಾಯಾಳುಗಳಿಬ್ಬರನ್ನೂ ವಿಟ್ಲದ ಸರ್ಕಾರಿ ಆಸ್ಪತ್ರೆಗೆ ದಾಖಲಿಸಲಾಗಿದೆ. ಮಹಮ್ಮದ್ ರಿಹಾನ್ ಗೆ ಹನ್ನೊಂದು ಹೊಲಿಗೆ ಹಾಕಲಾಗಿದ್ದು, ಮತ್ತೋರ್ವ ಗಾಯಾಳು ಯಜ್ಞೇಶ್ ಗೆ ನಾಲ್ಕು ಹೊಲಿಗೆ ಹಾಕಲಾಗಿದೆ ಎಂದು ವೈದ್ಯರು ತಿಳಿಸಿದ್ದಾರೆ.

Continue Reading

Bantawala

ವಿಟ್ಲದಲ್ಲಿ ಬಡಕಾರ್ಮಿಕೆ ರಾಜೇಶ್ವರಿಯವರ ಮನೆ ಬೆಂಕಿಗಾಹುತಿ

Published

on

ವಿಟ್ಲ ಸಮೀಪದ ವೀರಕಂಬ ಗ್ರಾಮದ ಗಣೇಶ್ ಕೋಡಿ ನಿವಾಸಿ ಕಾರ್ಮಿಕೆಯಾಗಿರುವ ರಾಜೇಶ್ವರಿ ಎಂಬವರ ಮನೆ ಆಕಸ್ಮಿಕ ಬೆಂಕಿ ಅನಾಹುತಕ್ಕೆ ಹೊತ್ತಿ ಉರಿದ ಘಟನೆಯೊಂದು ಪೆ.10ರಂದು ಸಂಭವಿಸಿದ್ದು, ಬಡ ನಿರ್ಗತಿಕ ಕುಟುಂಬದ ಸ್ಥಿತಿ ಬಾಣಲೆಯಿಂದ ಬೆಂಕಿಗೆ ಬಿದ್ದಂತಾಗಿದೆ.


ಮನೆಯೊಡತಿ ರಾಜೇಶ್ವರಿ ಅವರು ಎಂದಿನಂತೆ ಬೆಳಗ್ಗೆ ಬೀಗ ಹಾಕಿ ಅಡಿಕೆ ಗಾರ್ಬನ್ ಕೆಲಸಕ್ಕೆ ಹೋಗಿದ್ದರೆ ಮಕ್ಕಳಿಬ್ಬರು ಶಾಲೆಗೆ ತೆರಳಿದ್ದರು. ಮನೆಯಲ್ಲಿ ಯಾರೂ ಇಲ್ಲದ ಸಂದರ್ಭದಲ್ಲಿ ವಿದ್ಯುತ್‌ ಶಾರ್ಟ್ ಸರ್ಕ್ಯೂಟ್ ಸಂಭವಿಸಿ ಬೆಂಕಿ ಹೊತ್ತಿಕೊಂಡು ಮನೆಯನ್ನು ಭಸ್ಮ ಮಾಡಿದೆ.

ಮನೆಯಿಂದ ವಿಪರೀತ ಹೊಗೆ ಬರುತ್ತಿರುವುದನ್ನು ಕಂಡ ಸ್ಥಳೀಯರು ತಕ್ಷಣ ಜಮಾಯಿಸಿ ಬೆಂಕಿಯನ್ನು ನಂದಿಸುವಷ್ಟರಲ್ಲಿಯೇ ಮನೆಯೊಳಗಿದ್ದ ಮಕ್ಕಳ ಬಟ್ಟೆಬರೆ ಶಾಲಾ ಪುಸ್ತಕಗಳು, ಮನೆಯ ದಾಖಲೆಪತ್ರಗಳು ಸೇರಿದಂತೆ ಮನೆಯೊಳಗಿದ್ದ ವಸ್ತುಗಳು ಕರಟಿಹೋಗಿದೆ ಎಂದು ಸ್ಥಳೀಯರು ತಿಳಿಸಿದ್ದಾರೆ.


ಬಡ ಕಾರ್ಮಿಕೆ ಗಾರ್ಬಲ್‌ ಕೆಲಸಕ್ಕೆ ಹೋಗಿ ದುಡಿದು ಜೀವನ ಸಾಗಿಸುತ್ತಿದ್ದು, ಮನೆ ಬೆಂಕಿಗಾಹುತಿಯಾದ ಘಟನೆಯಿಂದ ತೀವ್ರ ಅಸ್ವಸ್ಥರಾಗಿದ್ದು, ಅವರ ಕುಟುಂಬದ ಸ್ಥಿತಿ ಬಾಣಲೆಯಿಂದ ಬೆಂಕಿಗೆ ಬಿದ್ದಂತಾಗಿದೆ.

Continue Reading

accident

ರಾಷ್ಟ್ರ ಮಟ್ಟದ ಕಬಡ್ಡಿ ಆಟಗಾರ, ಪುಣಚ ನಿವಾಸಿ ನಿಶಿತ್ ನಾಯ್ಕ್ (25)ರೈಲಿನಿಂದ ಬಿದ್ದು ದುರ್ಮರಣ..

Published

on

ರಾಷ್ಟ್ರ ಮಟ್ಟದ ಕಬಡ್ಡಿ ಆಟಗಾರ, ಪುಣಚ ನಿವಾಸಿ ನಿಶಿತ್ ನಾಯ್ಕ್ (25)ರೈಲಿನಿಂದ ಬಿದ್ದು ನಿಧನರಾಗಿದ್ದಾರೆ. ಬೆಂಗಳೂರಿನ ಕಲ್ಯಾಣ್ ಜ್ಯುವೆಲ್ಲರ್ಸ್ ನಲ್ಲಿ ಉದ್ಯೋಗದಲ್ಲಿದ್ದ ನಿಶಿತ್ ಊರಿಗೆ ಬರಲು ಸೋಮವಾರ ರಾತ್ರಿ ಬೆಂಗಳೂರಿನಿಂದ ರೈಲಿನಲ್ಲಿ ಪ್ರಯಾಣ ಬೆಳೆಸಿದ್ದರು. ಜನರಲ್ ವಿಭಾಗದಲ್ಲಿ ಪ್ರಯಾಣಿಸುತ್ತಿದ್ದ ಅವರು ತಡರಾತ್ರಿ 2-30ರ ಸುಮಾರಿಗೆ ಚೆನ್ನರಾಯಪಟ್ಟಣ ಹೊರವಲಯದಲ್ಲಿ ರೈಲಿನಿಂದ ಹೊರಕ್ಕೆಸೆಯಲ್ಪಟ್ಟು ಮೃತಪಟ್ಟಿದ್ದಾರೆ ಎಂದು ತಿಳಿದುಬಂದಿದೆ. ಪುತ್ತೂರು ವಿವೇಕಾನಂದ ಕಾಲೇಜಿನ ಹಳೆ ವಿದ್ಯಾರ್ಥಿಯಾಗಿದ್ದ ನಿಶಿತ್ ನಾಯ್ಕ್ ರಾಷ್ಟ್ರ ಮಟ್ಟದ ಕಬಡ್ಡಿ ಆಟಗಾರರಾಗಿ ಗುರುತಿಸಿಕೊಂಡಿದ್ದರು.


ಪುಣಚ ಗ್ರಾಮದ ಬುಡಲೆ ನಿವಾಸಿ, ಮಾಜಿ ಸೈನಿಕರಾಗಿರುವ ಕುಂಞಣ್ಣ ನಾಯ್ಕ್ ಪುತ್ರ ನಿಧನದ ಸುದ್ದಿ ಗ್ರಾಮಸ್ಥರ ಅತೀವ ದು:ಖಕ್ಕೆ ಕಾರಣವಾಗಿದೆ. ಮೃತರು ತಂದೆ ಕುಂಞಣ್ಣ ನಾಯ್ಕ, ತಾಯಿ ರಾಧಾ ಹಾಗೂ ಓರ್ವ ಸಹೋದರಿ ನಿಶಾ ಹಾಗೂ ಅಪಾರ ಬಂಧು ಬಳಗವನ್ನು ಅಗಲಿದ್ದಾರೆ. ಇದೀಗ ಹಾಸನದಲ್ಲಿ ಮರಣೋತ್ತರ ಪರೀಕ್ಷೆ ನಡೆಯುತ್ತಿದ್ದು ರಾತ್ರಿ ಹತ್ತು ಗಂಟೆಯ ಸುಮಾರಿಗೆ ಪ್ರಾರ್ಥಿವ ಶರೀರ ಪುಣಚ ಗ್ರಾಮ ತಲುಪಲಿದೆ ಎಂದು ಮೂಲಗಳು ತಿಳಿಸಿವೆ.

Continue Reading

Trending

Copyright © 2025 Deevatige