DEATH
ವಾಲಿಬಾಲ್ ಆಡುತ್ತಿದ್ದಾಗಲೇ ಕುಸಿದು ಬಿದ್ದು 10ನೇ ತರಗತಿ ವಿದ್ಯಾರ್ಥಿ ದಾರುಣ ಸಾವು: ಕ್ರೀಡಾಪಟುಗಳ ಆರೋಗ್ಯ ಜಾಗೃತಿಗೆ ತಜ್ಞರ ಕರೆ
ಸುರತ್ಕಲ್: ಸ್ನೇಹಿತರೊಂದಿಗೆ ಉತ್ಸಾಹದಿಂದ ವಾಲಿಬಾಲ್ ಆಡುತ್ತಿದ್ದ 15 ವರ್ಷದ ವಿದ್ಯಾರ್ಥಿಯೊಬ್ಬ ಹಠಾತ್ ಕುಸಿದು ಬಿದ್ದು ಮೃತಪಟ್ಟ ಹೃದಯವಿದ್ರಾವಕ ಘಟನೆ ಸುರತ್ಕಲ್ ಸಮೀಪದ ಸೂರಿಂಜೆ ಗ್ರಾಮದಲ್ಲಿ ನಡೆದಿದೆ.
ಮೃತ ವಿದ್ಯಾರ್ಥಿಯನ್ನು ಮಾಧವ ಅಮೀನ್ ಅವರ ಪುತ್ರ ಲಿಖಿತ್ ಅಮೀನ್ (15) ಎಂದು ಗುರುತಿಸಲಾಗಿದೆ. ಈತ ಸೂರಿಂಜೆ ಕೋಟೆ ಬೋಳೂರು ಸರ್ಕಾರಿ ಪ್ರೌಢಶಾಲೆಯಲ್ಲಿ 10ನೇ ತರಗತಿಯಲ್ಲಿ ವ್ಯಾಸಂಗ ಮಾಡುತ್ತಿದ್ದ. ವಿದ್ಯಾಭ್ಯಾಸದಲ್ಲಿ ಮುಂಚೂಣಿಯಲ್ಲಿದ್ದ ಲಿಖಿತ್, ಕ್ರೀಡೆಯಲ್ಲೂ ಸಕ್ರಿಯವಾಗಿ ಪಾಲ್ಗೊಳ್ಳುತ್ತಿದ್ದ ಉದಯೋನ್ಮುಖ ಕ್ರೀಡಾಪಟುವಾಗಿದ್ದ.
ಸಿಸಿಟಿವಿಯಲ್ಲಿ ಸೆರೆಯಾಯ್ತು ಭೀಕರ ದೃಶ್ಯ: ಮಾಹಿತಿಯ ಪ್ರಕಾರ, ಸೂರಿಂಜೆ ಮೈದಾನದಲ್ಲಿ ಲಿಖಿತ್ ತನ್ನ ಸ್ನೇಹಿತರೊಂದಿಗೆ ವಾಲಿಬಾಲ್ ಆಡುತ್ತಿದ್ದಾಗ ಏಕಾಏಕಿ ಅಸ್ವಸ್ಥಗೊಂಡು ಮೈದಾನದಲ್ಲೇ ಕುಸಿದು ಬಿದ್ದಿದ್ದಾನೆ. ತಕ್ಷಣವೇ ಗಮನಿಸಿದ ಸ್ನೇಹಿತರು ಹಾಗೂ ಸ್ಥಳೀಯರು ಆತನನ್ನು ಸಮೀಪದ ಆಸ್ಪತ್ರೆಗೆ ಕರೆದೊಯ್ದರಾದರೂ, ಚಿಕಿತ್ಸೆ ಫಲಕಾರಿಯಾಗದೆ ಮೃತಪಟ್ಟಿರುವುದಾಗಿ ವೈದ್ಯರು ಘೋಷಿಸಿದ್ದಾರೆ. ಈ ಘಟನೆಯ ದೃಶ್ಯಗಳು ಸ್ಥಳೀಯ ಸಿಸಿಟಿವಿ ಕ್ಯಾಮೆರಾದಲ್ಲಿ ಸೆರೆಯಾಗಿದ್ದು, ನೋಡುಗರ ಕಣ್ಣಂಚಿನಲ್ಲಿ ನೀರು ತರಿಸುವಂತಿದೆ.
ಘಟನೆಯ ನಿಖರ ಕಾರಣ ಇನ್ನೂ ಸ್ಪಷ್ಟವಾಗಿಲ್ಲವಾದರೂ, ಮರಣೋತ್ತರ ಪರೀಕ್ಷೆಯ ವರದಿ ಬಂದ ಬಳಿಕಷ್ಟೇ ನಿಜವಾದ ಕಾರಣ ತಿಳಿಯಬೇಕಿದೆ. ಹಠಾತ್ ಸಂಭವಿಸಿದ ಈ ಘಟನೆಯಿಂದ ಕುಟುಂಬಸ್ಥರು, ಶಾಲಾ ಶಿಕ್ಷಕರು, ಸಹಪಾಠಿಗಳು ಹಾಗೂ ಗ್ರಾಮಸ್ಥರು ತೀವ್ರ ಆಘಾತಕ್ಕೊಳಗಾಗಿದ್ದಾರೆ.
ಆರೋಗ್ಯ ಜಾಗೃತಿ: ಕ್ರೀಡಾಪಟುಗಳು ಮತ್ತು ಪೋಷಕರು ಗಮನಿಸಬೇಕಾದ ಪ್ರಮುಖ ವಿಷಯಗಳು
ಇತ್ತೀಚಿನ ದಿನಗಳಲ್ಲಿ ಸಣ್ಣ ವಯಸ್ಸಿನ ಮಕ್ಕಳು ಹಾಗೂ ಯುವಕರಲ್ಲಿ ಹಠಾತ್ ಹೃದಯಾಘಾತ (Sudden Cardiac Arrest) ಉಂಟಾಗುವ ಪ್ರಕರಣಗಳು ಹೆಚ್ಚುತ್ತಿರುವುದು ತೀವ್ರ ಕಳವಳಕಾರಿ ಸಂಗತಿಯಾಗಿದೆ. ಈ ಹಿನ್ನೆಲೆಯಲ್ಲಿ ವೈದ್ಯಕೀಯ ತಜ್ಞರು ನೀಡಿರುವ ಪ್ರಮುಖ ಸಲಹೆಗಳು:
- ನಿಯಮಿತ ಆರೋಗ್ಯ ತಪಾಸಣೆ (Regular Health Check-ups):
- ಕ್ರೀಡೆಯಲ್ಲಿ ತೊಡಗಿಸಿಕೊಳ್ಳುವ ಮಕ್ಕಳು ಮತ್ತು ಯುವಕರು ಕಾಲಕಾಲಕ್ಕೆ ನಿಯಮಿತವಾಗಿ ವೈದ್ಯಕೀಯ ತಪಾಸಣೆ ಮಾಡಿಸಿಕೊಳ್ಳುವುದು ಅತ್ಯಗತ್ಯ.
- ವಿಶೇಶವಾಗಿ ಇಸಿಜಿ (ECG) ಮತ್ತು ಎಕೋ (ECHO) ನಂತಹ ಹೃದಯ ಸಂಬಂಧಿ ತಪಾಸಣೆಗಳನ್ನು ಮಾಡಿಸುವುದು ಸೂಕ್ತ.
- ಆರಂಭಿಕ ರೋಗಲಕ್ಷಣಗಳನ್ನು ನಿರ್ಲಕ್ಷಿಸಬೇಡಿ:
- ಆಟವಾಡುವಾಗ ಅಥವಾ ವ್ಯಾಯಾಮ ಮಾಡುವಾಗ ಎದೆನೋವು, ತೀವ್ರ ಉಸಿರಾಟದ ತೊಂದರೆ, ತಲೆಸುತ್ತು, ತೀವ್ರ ಆಯಾಸ ಅಥವಾ ಮೂರ್ಛೆ ಬೀಳುವಂತಹ ಲಕ್ಷಣಗಳು ಕಂಡುಬಂದರೆ ತಕ್ಷಣವೇ ಆಟವನ್ನು ನಿಲ್ಲಿಸಿ ವೈದ್ಯರನ್ನು ಸಂಪರ್ಕಿಸಬೇಕು.
- ಸಿಪಿಆರ್ (CPR) ತರಬೇತಿ ಹಾಗೂ ಪ್ರಥಮ ಚಿಕಿತ್ಸೆ:
- ಕ್ರೀಡಾಂಗಣಗಳು, ಶಾಲೆಗಳು ಹಾಗೂ ಸಾರ್ವಜನಿಕ ಸ್ಥಳಗಳಲ್ಲಿ ಪ್ರತಿಯೊಬ್ಬರಿಗೂ ಸಿಪಿಆರ್ (Cardiopulmonary Resuscitation) ತರಬೇತಿ ನೀಡುವುದು ಅಗತ್ಯ.
- ವ್ಯಕ್ತಿ ಕುಸಿದು ಬಿದ್ದ ತಕ್ಷಣವೇ ನೀಡುವ ಸಿಪಿಆರ್ ಚಿಕಿತ್ಸೆಯು ಜೀವ ಉಳಿಸುವಲ್ಲಿ ನಿರ್ಣಾಯಕ ಪಾತ್ರ ವಹಿಸುತ್ತದೆ.
- ದೇಹದ ನಿರ್ಜಲೀಕರಣ (Dehydration) ತಡೆಯಿರಿ:
- ಆಟವಾಡುವಾಗ ದೇಹದಲ್ಲಿ ನೀರಿನ ಪ್ರಮಾಣ ಕಡಿಮೆಯಾಗದಂತೆ ನೋಡಿಕೊಳ್ಳಿ. ಸಾಕಷ್ಟು ನೀರು ಮತ್ತು ಎಲೆಕ್ಟ್ರೋಲೈಟ್ (Electrolytes) ಸೇವನೆ ಮುನ್ನೆಚ್ಚರಿಕೆಯಾಗಿರಲಿ.
- ಕುಟುಂಬದ ಆರೋಗ್ಯ ಇತಿಹಾಸ:
- ಕುಟುಂಬದಲ್ಲಿ ಯಾರಿಗಾದರೂ ಸಣ್ಣ ವಯಸ್ಸಿನಲ್ಲಿ ಹೃದಯ ಸಂಬಂಧಿ ಕಾಯಿಲೆಗಳಿದ್ದಲ್ಲಿ, ಮಕ್ಕಳ ಆರೋಗ್ಯದ ಬಗ್ಗೆ ಹೆಚ್ಚಿನ ಮುನ್ನೆಚ್ಚರಿಕೆ ವಹಿಸುವುದು ಅಗತ್ಯ.
ಮಕ್ಕಳ ಸಕ್ರಿಯ ಜೀವನಶೈಲಿ ಎಷ್ಟು ಮುಖ್ಯವೋ, ಅವರ ಆಂತರಿಕ ಆರೋಗ್ಯದ ಕಾಳಜಿಯೂ ಅಷ್ಟೇ ಮುಖ್ಯ ಎಂಬುದನ್ನು ಈ ದುರಂತ ಘಟನೆ ನೆನಪಿಸುತ್ತದೆ

accident
ಬಂಟ್ವಾಳ: ಉಪ್ಪಿನಂಗಡಿ ಪೊಲೀಸ್ ಠಾಣಾ ವ್ಯಾಪ್ತಿಯ ಪೆರ್ಣೆಯಲ್ಲಿ ದುರ್ಘಟನೆ; ಕೌಟುಂಬಿಕ ಕಲಹದ ಹಿನ್ನೆಲೆ ಮಕ್ಕಳನ್ನು ಬಾವಿಗೆ ಎಸೆದ ತಾಯಿ – ಒಂದು ಮಗು ಸಾವು, ಮತ್ತೊಂದು ಮಗು ಆಸ್ಪತ್ರೆಗೆ ದಾಖಲು
ಬಂಟ್ವಾಳ: ದಿನಾಂಕ: 19.09.2026ರಂದು ಮಧ್ಯಾಹ್ನ ಉಪ್ಪಿನಂಗಡಿ ಠಾಣಾ ವ್ಯಾಪ್ತಿಯ ಪೆರ್ಣೆ ಮೈರಕಟ್ಟೆಯಲ್ಲಿ ನಡೆದ ದೊಡ್ಡ ದುರಂತವೊಂದು ಬೆಳಕಿಗೆ ಬಂದಿದೆ. ಪೆರ್ಣೆಯಲ್ಲಿ ವಾಸ್ತವವಿರುವ ಸಿನಾನ್ (32) ಹಾಗೂ ನೂರುನ್ನಿಸಾ (28) ಎಂಬ ದಂಪತಿಗಳ ನಡುವೆ ಫೋನ್ ಕರೆಯಲ್ಲಿ ವೈವಾಹಿಕ ಕಲಹ ನಡೆದಿದ್ದು, ಈ ವೇಳೆ ಕೋಪಗೊಂಡ ಆರೋಪಿತೆ ನೂರುನ್ನಿಸಾ ಮನೆಯಲ್ಲಿದ್ದ ಆಕೆಯ ಸುಮಾರು ಮೂರುವರೆ ವರ್ಷದ ಮಗು ಹಾಗೂ ಗಂಡನ ತಂಗಿಯ ಮಗುವನ್ನು ಮನೆ ಸಮೀಪದ ಕುಡಿಯುವ ನೀರಿನ ಬಾವಿಗೆ ಎಸೆದಿರುವುದಾಗಿ ಎಸ್‌ಪಿ ಮಾಹಿತಿ ನೀಡಿದ್ದಾರೆ.

ಆದರೆ, ಬೆಳಿಗ್ಗೆ ಸ್ಥಳೀಯ ವಾಹಿನಿಗಳಲ್ಲಿ ಹಾಗೂ ಆರಂಭಿಕ ವರದಿಗಳಲ್ಲಿ ಮಕ್ಕಳು ಆಟವಾಡುತ್ತಾ ಆಕಸ್ಮಿಕವಾಗಿ ಬಾವಿಗೆ ಬಿದ್ದಿವೆ ಎಂದು ಪ್ರಸಾರವಾಗಿತ್ತು. ಪ್ರತ್ಯಕ್ಷದರ್ಶಿಗಳು ಹಾಗೂ ಆರಂಭಿಕ ಮಾಹಿತಿಯಂತೆ, ಪೆರ್ಣೆ ಮೈರಕಟ್ಟೆಯಲ್ಲಿ ಮಕ್ಕಳು ಬಾವಿಯ ಸಮೀಪವಿದ್ದ ವೇಳೆ ಆಲಿಯಾ (4) ಆಕಸ್ಮಿಕವಾಗಿ ಬಾವಿಗೆ ಬಿದ್ದಿದ್ದು, ಇದನ್ನು ಗಮನಿಸಿದ ಸ್ಥಳೀಯರು ತಕ್ಷಣ ರಕ್ಷಿಸಿ ಮೇಲಕ್ಕೆ ಕರೆತಂದಿದ್ದರು. ಬಳಿಕ ಮತ್ತೊಂದು ಮಗು ಕೂಡ ಬಾವಿಗೆ ಬಿದ್ದಿರುವ ಬಗ್ಗೆ ಆಲಿಯಾ ಮಾಹಿತಿ ನೀಡಿದ್ದಾಳೆ ಎನ್ನಲಾಗಿದ್ದು, ಸ್ಥಳೀಯರು ಪರಿಶೀಲಿಸಿದಾಗ ರಬೀಹ್ (2) ಬಾವಿಯಲ್ಲಿ ಬಿದ್ದಿರುವುದು ಗಮನಕ್ಕೆ ಬಂದಿತ್ತು. ತಕ್ಷಣ ಮೇಲಕ್ಕೆತ್ತಿ ಆಸ್ಪತ್ರೆಗೆ ಕರೆದೊಯ್ದರೂ ರಬೀಹ್ ಚಿಕಿತ್ಸೆ ಫಲಕಾರಿಯಾಗದೆ ಮೃತಪಟ್ಟಿರುವುದಾಗಿ ಪ್ರಸಾರವಾಗಿತ್ತು.

ನೈಜ ಸತ್ಯ ಬಯಲುಗೊಳಿಸಿದ ಪೊಲೀಸರು:
ಸ್ಥಳೀಯ ಮಾದ್ಯಮಗಳಲ್ಲಿ ಆರಂಭದಲ್ಲಿ ಆಕಸ್ಮಿಕ ಸಾವು ಎಂದು ಬಿತ್ತರವಾಗಿದ್ದರೂ, ಪೊಲೀಸ್ ತನಿಖೆಯಿಂದ ಅಸಲಿ ವಿಚಾರ ಹೊರಬಂದಿದೆ. ದಂಪತಿಗಳ ನಡುವಿನ ಫೋನ್ ಕರೆಯ ಕೌಟುಂಬಿಕ ಕಲಹದ ರಭಸದಲ್ಲಿ ಕೋಪಗೊಂಡ ಆರೋಪಿತೆ ನೂರುನ್ನಿಸಾ ತಾನೇ ಸ್ವತಃ ಮಕ್ಕಳನ್ನು ಬಾವಿಗೆ ಎಸೆದಿರುವುದು ಎಸ್‌ಪಿ ನೀಡಿರುವ ಅಧಿಕೃತ ಮಾಹಿತಿಯಿಂದ ತಿಳಿದುಬಂದಿದೆ. ಸ್ಥಳೀಯರು ಸ್ಥಳಕ್ಕೆ ಆಗಮಿಸಿ ಮಕ್ಕಳನ್ನು ಮೇಲಕ್ಕೆ ಎತ್ತಿದ1ರ ಪೈಕಿ ಗಂಡನ ತಂಗಿಯ ಮಗು (ರಬೀಹ್ – 3) ಮೃತಪಟ್ಟಿದ್ದು, ಆರೋಪಿತೆಯ ಮಗು (ಆಲಿಯಾ – 4) ಗಾಯಗೊಂಡು ಮಂಗಳೂರಿನ ಖಾಸಗಿ ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿದೆ.
ಈ ಬಗ್ಗೆ ಉಪ್ಪಿನಂಗಡಿ ಪೊಲೀಸ್ ಠಾಣೆಯಲ್ಲಿ ಅ.ಕ್ರ: 121/2026 ರಡಿಯಲ್ಲಿ ಪ್ರಕರಣ ದಾಖಲಿಸಿಕೊಳ್ಳಲಾಗಿದ್ದು, ಆರೋಪಿತೆ ನೂರುನ್ನಿಸಾಳನ್ನು ಪೊಲೀಸರು ವಶಕ್ಕೆ ಪಡೆದು ತೀವ್ರ ವಿಚಾರಣೆ ನಡೆಸುತ್ತಿದ್ದಾರೆ. ಘಟನಾ ಸ್ಥಳಕ್ಕೆ ಉಪ್ಪಿನಂಗಡಿ ಪೊಲೀಸರು ಭೇಟಿ ನೀಡಿ ಪರಿಶೀಲನೆ ನಡೆಸಿದ್ದು, ಹೆಚ್ಚಿನ ತನಿಖೆ ಮುಂದುವರಿದಿದೆ.
DEATH
ಬೆಳಗಾವಿ: ಆಸ್ತಿಗಾಗಿ ಆಕ್ರೋಶ; ಗ್ರಾಮ ಪಂಚಾಯಿತಿ ಕಚೇರಿಯಲ್ಲೇ ತಂದೆ-ಮಗಳ ಬರ್ಬರ ಹತ್ಯೆ
ಬೆಳಗಾವಿ: ಆಸ್ತಿ ದಾಖಲೆಗಳನ್ನು ಪಡೆದುಕೊಳ್ಳಲು ಗ್ರಾಮ ಪಂಚಾಯಿತಿಗೆ ಬಂದಿದ್ದ ಮಾಜಿ ಯೋಧ ಹಾಗೂ ಅವರ ಪುತ್ರಿಯನ್ನು ಸಂಬಂಧಿಕರೇ ಮಾರಕಾಸ್ತ್ರಗಳಿಂದ ಕೊಚ್ಚಿ ಬರ್ಬರವಾಗಿ ಹತ್ಯೆ ಮಾಡಿರುವ ದಾರುಣ ಘಟನೆ ಬೆಳಗಾವಿ ಜಿಲ್ಲೆಯ ಕಿತ್ತೂರು ತಾಲೂಕಿನ ಅವರಾದಿ ಗ್ರಾಮದಲ್ಲಿ ನಡೆದಿದೆ.
ಮಾಜಿ ಯೋಧ ರುದ್ರಪ್ಪ ಕುಂದರಗಿ (67) ಮತ್ತು ಅವರ ಪುತ್ರಿ ಶಶಿಕಲಾ ಕುಂದರಗಿ (26) ಹತ್ಯೆಗೀಡಾದ ದುರ್ದೈವಿಗಳು. ಈ ಭೀಕರ ದಾಳಿಯಲ್ಲಿ ರುದ್ರಪ್ಪ ಅವರ ಕಾರು ಚಾಲಕ ಗಂಭೀರವಾಗಿ ಗಾಯಗೊಂಡಿದ್ದು, ಅವರನ್ನು ಸ್ಥಳೀಯ ಆಸ್ಪತ್ರೆಗೆ ದಾಖಲಿಸಿ ಚಿಕಿತ್ಸೆ ನೀಡಲಾಗುತ್ತಿದೆ.
ಘಟನೆಯ ಹಿನ್ನೆಲೆ:
ಮೃತರಾದ ರುದ್ರಪ್ಪ ಹಾಗೂ ಅವರ ಅಣ್ಣತಮ್ಮಂದಿರ ನಡುವೆ 38 ಗುಂಟೆ ಆಸ್ತಿಗೆ ಸಂಬಂಧಿಸಿದಂತೆ ದೀರ್ಘಕಾಲದಿಂದ ವ್ಯಾಜ್ಯವಿತ್ತು ಎನ್ನಲಾಗಿದೆ. ಈ ಆಸ್ತಿಯನ್ನು ಮೂವರಿಗೆ ಹಂಚಿಕೆ ಮಾಡುವಂತೆ ನ್ಯಾಯಾಲಯವೂ ಆದೇಶ ನೀಡಿತ್ತು. ಆದರೆ, ರುದ್ರಪ್ಪ ಅವರಿಗೆ ಸೇರಿದ್ದ ಜಮೀನನ್ನು ಅವರು ಈಗಾಗಲೇ ಮಾರಿಕೊಂಡಿದ್ದು, ಉಳಿದ ಜಮೀನಿನಲ್ಲೂ ತಮಗೆ ಪಾಲು ಬೇಕು ಎಂದು ಸಹೋದರರು ಪಟ್ಟು ಹಿಡಿದಿದ್ದರು. ರುದ್ರಪ್ಪ ಅವರ ಹೆಸರಿನಲ್ಲಿ ಆಸ್ತಿ ಮುಂದುವರಿದಿರುವ ವಿಚಾರವೇ ಈ ಮಾರಣಾಹೋಮಕ್ಕೆ ಪ್ರಮುಖ ಕಾರಣ ಎಂದು ತಿಳಿದುಬಂದಿದೆ.
ಪಂಚಾಯಿತಿ ಒಳಗಡೆಯೇ ಕೃತ್ಯ:
ಧಾರವಾಡದಿಂದ ಬಾಡಿಗೆ ಕಾರಿನಲ್ಲಿ ಗ್ರಾಮಕ್ಕೆ ಬಂದಿದ್ದ ರುದ್ರಪ್ಪ, ಆಸ್ತಿ ಪಾಲುದಾರಿಕೆ ಹಾಗೂ ದಾಖಲೆಗಳನ್ನು ಪಡೆದುಕೊಳ್ಳಲು ಅವರಾದಿ ಗ್ರಾಮ ಪಂಚಾಯಿತಿಗೆ ತೆರಳಿದ್ದರು. ರುದ್ರಪ್ಪ ಪಂಚಾಯಿತಿಗೆ ಬಂದಿರುವ ಸುದ್ಧಿ ತಿಳಿದು ಸ್ಥಳಕ್ಕೆ ಆಗಮಿಸಿದ ಅವರ ಸಹೋದರರಾದ ಬಸಪ್ಪ ಕುಂದರಗಿ, ಸಂಗಪ್ಪ ಕುಂದರಗಿ ಹಾಗೂ ಸಂಗಪ್ಪ ಅವರ ಪುತ್ರ ಮಡಿವಾಳಪ್ಪ ಕುಂದರಗಿ ಏಕಾಏಕಿ ದಾಳಿ ನಡೆಸಿದ್ದಾರೆ.
ಗ್ರಾಮ ಪಂಚಾಯಿತಿ ಕಚೇರಿಯ ಒಳಗಡೆಯೇ ಕೊಡಲಿ, ಕುಡಗೋಲು ಸೇರಿದಂತೆ ಮಾರಕಾಸ್ತ್ರಗಳಿಂದ ರುದ್ರಪ್ಪ ಅವರ ಮೇಲೆ ಹಲ್ಲೆ ನಡೆಸಲಾಗಿದೆ. ಈ ವೇಳೆ ತಂದೆಯನ್ನು ರಕ್ಷಿಸಲು ಮುಂದಾದ ಪುತ್ರಿ ಶಶಿಕಲಾ ಅವರ ಮೇಲೂ ದುಷ್ಕರ್ಮಿಗಳು ಮಾರಕಾಸ್ತ್ರಗಳಿಂದ ದಾಳಿ ನಡೆಸಿ ಇಬ್ಬರನ್ನೂ ನಿರ್ದಯವಾಗಿ ಹತ್ಯೆ ಮಾಡಿದ್ದಾರೆ.
ಈ ಸಂಬಂಧ ಕಿತ್ತೂರು ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದ್ದು, ಪೊಲೀಸರು ತನಿಖೆ ಮುಂದುವರಿಸಿದ್ದಾರೆ. ಪಂಚಾಯಿತಿ ಕಚೇರಿಯಲ್ಲೇ ನಡೆದ ಈ ಜೋಡಿ ಹತ್ಯೆಯು ಇಡೀ ಗ್ರಾಮದಲ್ಲಿ ತೀವ್ರ ಆತಂಕ ಹಾಗೂ ಶೋಕಮೂಡಿಸಿದೆ.
ಇಬ್ಬರ ಆಸ್ತಿಯಲ್ಲೂ ಪಾಲು ಕೇಳಿದ್ದಕ್ಕೆ ಕುಪಿತಗೊಂಡಿದ್ದ ಇಬ್ಬರು ಸಹೋದರರು, ಇಂದು ಜಮೀನು ದಾಖಲು ಮಾಡಲು ಗ್ರಾಮ ಪಂಚಾಯತ್ಗೆ ರುದ್ರಪ್ಪ ಬಂದಿದ್ದರು. ಈ ವೇಳೆಯೇ ದಾಳಿ ಮಾಡಿ ತಂದೆ-ಮಗಳನ್ನು ಕೊಲೆ ಮಾಡಿದ್ದಾರೆ. ಬಳಿಕ ಆರೋಪಿಗಳು ಅಲ್ಲಿಂದ ಪರಾರಿ ಆಗಿದ್ದಾರೆ ಅಂತಾ ಸ್ಥಳೀಯರು ಹೇಳಿದ್ದಾರೆ.
ತಂದೆ-ಮಗಳ ಕೊಲೆ ಹಿನ್ನೆಲೆಯಲ್ಲಿ ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ ಕೆ. ರಾಮರಾಜನ್ ಅವರು ಕೂಡ ಘಟನಾ ಸ್ಥಳಕ್ಕೆ ಭೇಟಿ ನೀಡಿ ಸ್ಥಳೀಯ ಪೊಲೀಸರಿಂದ ಮಾಹಿತಿ ಪಡೆದುಕೊಳ್ಳುತ್ತಿದ್ದಾರೆ. ಆರೋಪಿಗಳ ಪತ್ತೆಗೆ ಬಲೆ ಬೀಸಿದ್ದು, ಮುಂದಿನ ತನಿಖೆ ಕೈಗೊಂಡಿದ್ದಾರೆ. ಮೃತದೇಹಗಳನ್ನು ತಾಲೂಕಾಸ್ಪತ್ರೆಗೆ ರವಾನಿಸಲಾಗಿದೆ. ಜೋಡಿ ಕೊಲೆಯಿಂದ ಅವರಾದಿ ಗ್ರಾಮದಲ್ಲಿ ಜನರು ಬೆಚ್ಚಿಬಿದ್ದಿದ್ದಾರೆ. ಸ್ಥಳದಲ್ಲಿ ನೂರಾರು ಜನರು ಜಮಾವಣೆಗೊಂಡಿದ್ದಾರೆ.
Bantawala
ವಿಟ್ಲ ಕಸಬಾ ಗ್ರಾಮದ ಕೈಂತಿಲ ನಿವಾಸಿ, ಮಾಜಿ ಎಪಿಎಂಸಿ ಅಧ್ಯಕ್ಷ ಸಂಕಪ್ಪ ಗೌಡ ನಿಧನ
ವಿಟ್ಲ: ವಿಟ್ಲ ಕಸಬಾ ಗ್ರಾಮದ ಕೈಂತಿಲ ನಿವಾಸಿ, ಮಾಜಿ ಎಪಿಎಂಸಿ ಅಧ್ಯಕ್ಷರೂ ಹಾಗೂ ಮಾಜಿ ಗ್ರಾಮ ಪಂಚಾಯತ್ ಸದಸ್ಯರೂ ಆಗಿರುವ ಸಂಕಪ್ಪ ಗೌಡ (67) ಅವರು ಇಂದು ಮುಂಜಾನೆ ತಮ್ಮ ಸ್ವಗೃಹದಲ್ಲಿ ನಿಧನರಾದರು.
ಅವರು ಕಳೆದ ಕೆಲವು ದಿನಗಳಿಂದ ಅಲ್ಪಕಾಲದ ಅನಾರೋಗ್ಯದಿಂದ ಬಳಲುತ್ತಿದ್ದರು. ಭಾರತೀಯ ಜನತಾ ಪಕ್ಷದ (BJP) ನಿಷ್ಠಾವಂತ ಕಾರ್ಯಕರ್ತರಾಗಿ ಗುರುತಿಸಿಕೊಂಡಿದ್ದ ಅವರು, ಸಾರ್ವಜನಿಕ ಹಾಗೂ ರಾಜಕೀಯ ಕ್ಷೇತ್ರದಲ್ಲಿ ಸಕ್ರಿಯವಾಗಿ ತೊಡಗಿಸಿಕೊಂಡು ಜನಪರ ಕಾಳಜಿಯೊಂದಿಗೆ ಸೇವೆ ಸಲ್ಲಿಸಿದ್ದರು. ಅವರ ಅಗಲಿಕೆಯಿಂದ ಪಕ್ಷಕ್ಕೆ ಹಾಗೂ ಸ್ಥಳೀಯ ಸಮುದಾಯಕ್ಕೆ ತುಂಬಲಾರದ ನಷ್ಟ ಉಂಟಾಗಿದೆ.
ಮೃತರು ಪತ್ನಿ, ನಾಲ್ವರು ಪುತ್ರರು ಹಾಗೂ ಅಪಾರ ಬಂಧು-ಬಳಗವನ್ನು ಅಗಲಿದ್ದಾರೆ.
-
accident1 month agoಬಿ.ಸಿ. ರೋಡ್ ಸರ್ಕಲ್ನಲ್ಲಿ ಭೀಕರ ಅಪಘಾತ: ಟಿಪ್ಪರ್-ಆಕ್ಟಿವಾ ನಡುವೆ ಡಿಕ್ಕಿ, ಸವಾರರಿಬ್ಬರೂ ದುರ್ಮರಣ
-
Bantawala2 months agoಬಂಟ್ವಾಳದಲ್ಲಿ ಭೀಕರ ಹತ್ಯಾಕಾಂಡ: ಬಸ್ನಲ್ಲಿ ಕುಳಿತಿದ್ದ ಯುವತಿಯನ್ನು ಸಾರ್ವಜನಿಕರೆದುರೇ ಕೊಚ್ಚಿ ಕೊಂದ ತಲೆಹರಟೆ ಪ್ರೇಮಿ!
-
crime8 months agoಅತ್ಯಾಚಾರ ಯತ್ನಕ್ಕೆ ತಡೆದ ಸೊಸೆಯ ಮುಖಕ್ಕೆ ಕಚ್ಚಿ ಕೊಲೆಗೆ ಯತ್ನಿಸಿದ ಮಾವ..ತಂದೆಯ ರಾಕ್ಷಸೀ ಕೃತ್ಯಕ್ಕೆ ಬೆಂಬಲಿಸಿದ ಗಂಡ..ಸುಳ್ಯ ಠಾಣಾ ವ್ಯಾಪ್ತಿಯಲ್ಲಿ ಅದೃಷ್ಟವಶಾತ್ ಬಚಾವಾದ ಸೊಸೆ..
-
crime6 months agoಧಾರ್ಮಿಕ ನಂಬಿಕೆಗೆ ಅವಮಾನ: ಕೊಡಗಿನ ಎಮ್ಮೆಮಾಡಿನಲ್ಲಿ ದೈವದ ವೇಷದಂತೆ ಧರಿಸಿ ಮದುಮಗನ ಅತಿರೇಕದ ವರ್ತನೆ!
-
Bantawala6 months agoವಿಟ್ಲದಲ್ಲಿ ನಡೆಯಿತೊಂದು ದೈವ ಕಾರಣಿಕ; ಪೊಲೀಸರ ಕಣ್ಣಿಗೆ ಮಣ್ಣೆರಚಿದರೂ ದೈವದ ದೃಷ್ಟಿಗೆ ತತ್ತರಿಸಿದ ದನಕಳ್ಳ..
-
Bantawala8 months agoನಾಗಬನ, ರಕ್ತೇಶ್ವರಿ ತಾಣ, ದೈವದೇವರ ಸಾನಿಧ್ಯ ದ್ವಂಸ ಗೊಳಿಸಿದ ಧರ್ಮದ್ರೋಹಿ ಕೃತ್ಯದ ವಿರುದ್ಧ ಭಕ್ತರ ಆಕ್ರೋಶ ; ನಾಶವಾದ ಸಾನಿಧ್ಯದಲ್ಲಿಯೇ ಸ್ವಾಮೀಜಿಯವರ ಮಾರ್ಗದರ್ಶನದಲ್ಲಿ ಕುಟುಂಬಸ್ತರು, ಸಾರ್ವಜನಿಕರ ಸಾಮೂಹಿಕ ಪ್ರಾರ್ಥನೆ
-
accident2 months agoBreaking: ಬಂಟ್ವಾಳದಲ್ಲಿ ಶಾಲಾ ಬಸ್ ಮೇಲೆ ಉರುಳಿದ ಬೃಹತ್ ಮರ; ಕಲ್ಲಡ್ಕ ಶ್ರೀರಾಮ ಶಾಲೆಯ ಓರ್ವ ವಿದ್ಯಾರ್ಥಿ ಸಾವು, ಕೆಲವರು ಗಂಭೀರ, ಹಲವರಿಗೆ ಗಾಯ!
-
accident4 months agoವಿಟ್ಲ ಆಕಾಶದಲ್ಲಿ ಹಾರಾಡಿದ ವಿಮಾನ: ತಾಂತ್ರಿಕ ದೋಷವಲ್ಲ, ಹವಾಮಾನ ವೈಪರೀತ್ಯದ ಕಾರಣ ! ಸಾರ್ವಜನಿಕರು ಆತಂಕ ಪಡುವ ಅಗತ್ಯವಿಲ್ಲ
