Connect with us

arrest

ಉಡುಪಿ: ಬೀಗ ಹಾಕಿದ ಮನೆಗಳೇ ಕಳ್ಳರ ಟಾರ್ಗೆಟ್ – ಲಕ್ಷಾಂತರ ಮೌಲ್ಯದ ಸೊತ್ತು ಸಹಿತ ಇಬ್ಬರ ಬಂಧನ

Published

on

ಉಡುಪಿ: ಬೀಗ ಹಾಕಿದ ಮನೆಗಳನ್ನು ಗುರಿಯಾಗಿಸಿಕೊಂಡು ಕಳವು ನಡೆಸುತ್ತಿದ್ದ ಇಬ್ಬರು ಆರೋಪಿಗಳನ್ನು ಬಂಧಿಸುವಲ್ಲಿ ಉಡುಪಿ ನಗರ ಠಾಣೆ ಪೊಲೀಸರು ಯಶಸ್ವಿಯಾಗಿದ್ದಾರೆ. ಬಂಧಿತರಿಂದ ಒಟ್ಟು 23.56 ಲಕ್ಷ ರೂ. ಮೌಲ್ಯದ ನಗದು, ಚಿನ್ನಾಭರಣ, ಬೆಳ್ಳಿ, ವಿದೇಶಿ ಕರೆನ್ಸಿ ಹಾಗೂ ವಾಹನಗಳನ್ನು ವಶಪಡಿಸಿಕೊಳ್ಳಲಾಗಿದೆ.

ಅರುಣ್ ಆಚಾರಿ ಎಸ್.ವಿ. (43) ಮತ್ತು ಕೌಶಿಕ್ (19) ಬಂಧಿತ ಆರೋಪಿಗಳು.

ಘಟನೆಯ ವಿವರ: ಪುತ್ತೂರು ಗ್ರಾಮದ ಭಗವತಿ ಲೇಔಟ್‌ನ ನಿವಾಸಿಯೊಬ್ಬರು ವಿದೇಶದಿಂದ ಊರಿಗೆ ಬಂದಿದ್ದು, ಆಗಸ್ಟ್ 8ರಂದು ಸಂಬಂಧಿಕರ ಮನೆಗೆ ತೆರಳಿದ್ದರು. ಆ.11ರಂದು ವಾಪಸ್ ಬಂದಾಗ ಮನೆ ಟೆರೇಸ್ ಬಾಗಿಲು ಮುರಿದು ಕಪಾಟಿನಲ್ಲಿದ್ದ 10,000 ಎಇಡಿ (AED) ಹಾಗೂ 14,000 ರೂ. ನಗದು ಕಳವಾಗಿರುವುದು ಬೆಳಕಿಗೆ ಬಂದಿತ್ತು. ಈ ಕುರಿತು ನೀಡಿದ ದೂರಿನನ್ವಯ ಉಡುಪಿ ನಗರ ಠಾಣೆಯಲ್ಲಿ ಪ್ರಕರಣ ದಾಖಲಾಗಿತ್ತು.

ವಿಶೇಷ ಕಾರ್ಯಾಚರಣೆ ನಡೆಸಿದ ಪೊಲೀಸರು, ಆ.23ರಂದು ಪೆರಂಪಳ್ಳಿ ಸಂತೋಷನಗರದಲ್ಲಿ ಆರೋಪಿಗಳನ್ನು ಬಂಧಿಸಿ, ಕಸ್ಟಡಿಗೆ ಪಡೆದು ತನಿಖೆ ನಡೆಸುತ್ತಿದ್ದಾರೆ.

ವಶಪಡಿಸಿಕೊಂಡ ಸೊತ್ತುಗಳ ವಿವರ (ಒಟ್ಟು ಮೌಲ್ಯ: ₹23,56,230):

ಚಿನ್ನದ ಆಭರಣಗಳು & ನಾಣ್ಯ: 88.40 ಗ್ರಾಂ ಚಿನ್ನ (₹13.26 ಲಕ್ಷ) ಮತ್ತು 1.45 ಗ್ರಾಂ ಚಿನ್ನದ ನಾಣ್ಯ (₹22,500).

ಬೆಳ್ಳಿ ಆಭರಣಗಳು: 1 ಕೆಜಿ 360 ಗ್ರಾಂ (₹2.86 ಲಕ್ಷ).

ಕರೆನ್ಸಿ & ನಗದು: ₹2 ಲಕ್ಷ ಮೌಲ್ಯದ ವಿದೇಶಿ ಕರೆನ್ಸಿ ಮತ್ತು ₹33,000 ನಗದು.

ವಾಹನಗಳು: ₹4 ಲಕ್ಷ ಮೌಲ್ಯದ ಆಟೋರಿಕ್ಷಾ ಹಾಗೂ ಕಳವು ಮಾಡಿದ್ದ ₹45,000 ಮೌಲ್ಯದ ಪಲ್ಸರ್ ಬೈಕ್.

ಇತರ ವಸ್ತುಗಳು: ವಿದೇಶಿ ಕೈಗಡಿಯಾರ (₹30,000) ಮತ್ತು ಎರಡು ಮೊಬೈಲ್ ಫೋನ್‌ಗಳು (₹13,000).

ಐದು ಕಳವು ಪ್ರಕರಣಗಳಲ್ಲಿ ಭಾಗಿ: ತನಿಖೆಯ ವೇಳೆ ಆರೋಪಿಗಳು ಕಳವು ಮಾಡಿದ ಪಲ್ಸರ್ ಬೈಕ್ ಬಳಸಿಕೊಂಡು ಬೀಗ ಹಾಕಿದ ಮನೆಗಳನ್ನು ಗುರಿಯಾಗಿಸುತ್ತಿದ್ದುದು ತಿಳಿದುಬಂದಿದೆ. ಉಡುಪಿ ನಗರ ಠಾಣೆ ವ್ಯಾಪ್ತಿಯ ಕೊಡಂಕೂರು ಮತ್ತು ಭಗವತಿ ಲೇಔಟ್‌ನ ಕಳವು ಪ್ರಕರಣಗಳು ಹಾಗೂ ಮಲ್ಪೆ ಠಾಣಾ ವ್ಯಾಪ್ತಿಯ ನೇಜಾರು ಮಸೀದಿ ಬಳಿಯಿಂದ ಬೈಕ್ ಕಳವು ಮತ್ತು ಕೆಳಾರ್ಕಳಬೆಟ್ಟುವಿನ ಎರಡು ಮನೆಗಳಲ್ಲಿ ನಡೆಸಿದ ಕಳವು ಸೇರಿದಂತೆ ಒಟ್ಟು 5 ಪ್ರಕರಣಗಳಲ್ಲಿ ಇವರು ಭಾಗಿಯಾಗಿದ್ದಾರೆ.

ಪೋಕ್ಸೋ ಆರೋಪಿ: ಬಂಧಿತ ಅರುಣ್ ಆಚಾರಿ ಈ ಹಿಂದೆ ಮಣಿಪಾಲ ಠಾಣೆಯ ಪೋಕ್ಸೋ ಪ್ರಕರಣದಲ್ಲಿ 9 ವರ್ಷ ಜೈಲು ಶಿಕ್ಷೆ ಅನುಭವಿಸಿದ್ದು, 2025ರ ಜುಲೈನಲ್ಲಿ ಬೆಂಗಳೂರಿನ ಪರಪ್ಪನ ಅಗ್ರಹಾರ ಜೈಲಿನಿಂದ ಬಿಡುಗಡೆಯಾಗಿ ಬಂದಿದ್ದ ಎಂದು ಪೊಲೀಸರು ಮಾಹಿತಿ ನೀಡಿದ್ದಾರೆ.

ಜಿಲ್ಲಾ ಪೊಲೀಸ್ ಅಧೀಕ್ಷಕ ಹರಿರಾಮ್ ಶಂಕರ್ ಐಪಿಎಸ್, ಹೆಚ್ಚುವರಿ ಎಎಸ್ಪಿ ಸುಧಾಕರ್ ನಾಯ್ಕ ಹಾಗೂ ಡಿವೈಎಸ್ಪಿ ಬೆಳ್ಳಿಯಪ್ಪ ಅವರ ಮಾರ್ಗದರ್ಶನದಲ್ಲಿ, ಇನ್‌ಸ್ಪೆಕ್ಟರ್ ಮಹೇಶ್ ಪ್ರಸಾದ್, ಪಿಎಸ್‌ಐ ಪ್ರಕಾಶ್ ಹಾಗೂ ಸಿಬ್ಬಂದಿಗಳ ತಂಡ ಈ ಯಶಸ್ವಿ ಕಾರ್ಯಾಚರಣೆ ನಡೆಸಿದೆ

ads (2)
ads (3)
ads (4)
ads (5)
ads (6)
ads (1)
ads (8)
ads (7)
ಮುಂದಕ್ಕೆ ಓದಲು ಇಲ್ಲಿ ಕ್ಲಿಕ್‌ ಮಾಡಿ
Advertisement

arrest

ಕಾಸರಗೋಡು: ವಿವಾಹಿತ ಮಹಿಳೆಯ ಗೆಳೆಯನ ಜೊತೆ ನಿಲ್ಲಿಸಿ ಗೂಂಡಾಗಿರಿ, ಫೋಟೋ ತೋರಿಸಿ ಬ್ಲ್ಯಾಕ್ ಮೇಲ್ – ಐವರ ಬಂಧನ

Published

on

ಕಾಸರಗೋಡು: ವಿವಾಹಿತ ಮಹಿಳೆಯ ಮನೆಗೆ ಅಕ್ರಮ ಪ್ರವೇಶ ಮಾಡಿ ಗೂಂಡಾಗಿರಿ ನಡೆಸಿ, ಆಕೆ ಮತ್ತು ಆಕೆಯ ಪುರುಷ ಸ್ನೇಹಿತನನ್ನು ಬೆದರಿಸಿ ಹಣ ಮತ್ತು ಚಿನ್ನಾಭರಣ ಸುಲಿಗೆ ಮಾಡಿದ ಪ್ರಕರಣಕ್ಕೆ ಸಂಬಂಧಿಸಿದಂತೆ ಐವರು ಆರೋಪಿಗಳನ್ನು ವಿದ್ಯಾನಗರ ಪೊಲೀಸರು ಬಂಧಿಸಿದ್ದಾರೆ.

ಬಂಧಿತರನ್ನು ಮುಳಿಯಾರು ಪೊವ್ವಲ್ ನ ಬಿ. ಶರೀಫ್ (42), ಚೆಂಗಳ ಸಂತೋಷ್ ನಗರದ ಮೊಹಮ್ಮದ್ ಸಾಲಿಹ್ (22), ನಾಲ್ಕನೇ ಮೈಲ್ ನಿವಾಸಿಗಳಾದ ಉಮರ್ ಮುಖ್ತಾರ್ (18), ಮೊಹಮ್ಮದ್ ಶಿಹಾನ್ (20) ಹಾಗೂ ಆಲಂಪಾಡಿಯ ಅಬ್ದುಲ್ ರಶೀದ್ (36) ಎಂದು ಗುರುತಿಸಲಾಗಿದೆ. ಆರೋಪಿಗಳನ್ನು ನ್ಯಾಯಾಲಯಕ್ಕೆ ಹಾಜರುಪಡಿಸಲಾಗಿದ್ದು, ನ್ಯಾಯಾಂಗ ಬಂಧನಕ್ಕೆ ಒಪ್ಪಿಸಲಾಗಿದೆ.

ಘಟನೆ ಏನು?
ಮಹಿಳೆಯ ಮನೆಗೆ ಆಕೆಯ ಪುರುಷ ಸ್ನೇಹಿತ ಬಂದಿದ್ದ ವೇಳೆ ಆರೋಪಿಗಳ ಗುಂಪು ಅಕ್ರಮವಾಗಿ ಮನೆ ಪ್ರವೇಶ ಮಾಡಿದೆ. ಇಬ್ಬರನ್ನೂ ಒಟ್ಟಿಗೆ ನಿಲ್ಲಿಸಿ ಫೋಟೋ ತೆಗೆದಿರುವ ಆರೋಪಿಗಳು, ಆ ಫೋಟೋವನ್ನು ಬಹಿರಂಗಪಡಿಸುವುದಾಗಿ ಬೆದರಿಸಿ ಹಣಕ್ಕೆ ಬೇಡಿಕೆ ಇಟ್ಟಿದ್ದಾರೆ.

ಮೊದಲಿಗೆ ಮಹಿಳೆಯಿಂದ 2 ಪವನ್ ತೂಕದ ಚಿನ್ನದ ಸರ, ಉಂಗುರ ಹಾಗೂ 15,000 ರೂ. ನಗದನ್ನು ಕಸಿದುಕೊಂಡಿದ್ದಾರೆ. ಬಳಿಕ ಆಕೆಯ ಪುರುಷ ಸ್ನೇಹಿತನಿಂದ 40,000 ರೂ. ಹಣವನ್ನು ಸುಲಿಗೆ ಮಾಡಿದ್ದಾರೆ ಎಂದು ದೂರಿನಲ್ಲಿ ತಿಳಿಸಲಾಗಿದೆ.

ಘಟನೆಯ ನಂತರವೂ ಹೆಚ್ಚಿನ ಹಣ ಮತ್ತು ಚಿನ್ನಾಭರಣ ನೀಡುವಂತೆ ನಿರಂತರ ಬೆದರಿಕೆ ಹಾಕುತ್ತಿದ್ದ ಹಿನ್ನೆಲೆಯಲ್ಲಿ ಮಹಿಳೆ ವಿದ್ಯಾನಗರ ಪೊಲೀಸ್ ಠಾಣೆಗೆ ದೂರು ನೀಡಿದ್ದಾರೆ.

ದೂರು ದಾಖಲಿಸಿಕೊಂಡ ಪೊಲೀಸರು, ಇನ್ಸ್‌ಪೆಕ್ಟರ್ ಪಿ. ಪ್ರಮೋದ್ ಅವರ ನೇತೃತ್ವದಲ್ಲಿ ಕಾರ್ಯಾಚರಣೆ ನಡೆಸಿ ಐವರನ್ನೂ ಬಂಧಿಸಿದ್ದಾರೆ

Continue Reading

arrest

6 ವರ್ಷಗಳಿಂದ ವಿದೇಶದಲ್ಲಿದ್ದ ವಾರೆಂಟ್ ಆರೋಪಿ ವಿಮಾನ ನಿಲ್ದಾಣದಲ್ಲಿ ಅರೆಸ್ಟ್: ಬಂಟ್ವಾಳ ಪೊಲೀಸರ ಕಾರ್ಯಾಚರಣೆ

Published

on

ಮಂಗಳೂರು: ನ್ಯಾಯಾಲಯದ ವಿಚಾರಣೆಗೆ ಹಾಜರಾಗದೆ ಕಳೆದ 6 ವರ್ಷಗಳಿಂದ ವಿದೇಶದಲ್ಲಿ ತಲೆಮರೆಸಿಕೊಂಡಿದ್ದ ವಾರೆಂಟ್ ಆರೋಪಿಯನ್ನು ಬಂಟ್ವಾಳ ನಗರ ಪೊಲೀಸರು ಮಂಗಳೂರು ಅಂತಾರಾಷ್ಟ್ರೀಯ ವಿಮಾನ ನಿಲ್ದಾಣದಲ್ಲಿ ವಶಕ್ಕೆ ಪಡೆದಿದ್ದಾರೆ.

ಮಂಗಳೂರು ಬಜಾಲ್‌ನಂತೂರು ನಿವಾಸಿ ಮಹಮ್ಮದ್ ನೌಫಲ್ @ ಸಫಾರಿ ನೌಫಲ್ (34) ದಸ್ತಗಿರಿಯಾದ ಆರೋಪಿ.

ಪ್ರಕರಣದ ವಿವರ: ಬಂಟ್ವಾಳ ನಗರ ಪೊಲೀಸ್ ಠಾಣೆಯಲ್ಲಿ ದಾಖಲಾಗಿದ್ದ ಪ್ರಕರಣಕ್ಕೆ (ಅ.ಕ್ರ: 24/2020, ಐಪಿಸಿ ಕಲಂ: 143, 147, 148, 504, 323, 324, 506, 427 r/w 149 ಮತ್ತು ಕಾವಲು ಕಾಯ್ದೆ) ಸಂಬಂಧಿಸಿದಂತೆ ಈಾತನು ಮಾನ್ಯ ನ್ಯಾಯಾಲಯಕ್ಕೆ ವಿಚಾರಣೆಗೆ ಹಾಜರಾಗದೆ ವಿದೇಶಕ್ಕೆ ಪರಾರಿಯಾಗಿದ್ದ. ಈತನ ವಿರುದ್ಧ ನ್ಯಾಯಾಲಯದಿಂದ ವಾರೆಂಟ್ ಜಾರಿಯಾಗಿತ್ತು.

ಸೆಪ್ಟೆಂಬರ್ 15, 2026ರಂದು ವಿದೇಶದಿಂದ ಮನೆಗೆ ಹಿಂತಿರುಗುತ್ತಿದ್ದ ವೇಳೆ, ಮಂಗಳೂರು ಅಂತಾರಾಷ್ಟ್ರೀಯ ವಿಮಾನ ನಿಲ್ದಾಣದ ಇಮಿಗ್ರೇಷನ್ ವಿಭಾಗದ ಸಹಾಯದಿಂದ ಬಂಟ್ವಾಳ ನಗರ ಪೊಲೀಸರು ಆರೋಪಿಯನ್ನು ಯಶಸ್ವಿಯಾಗಿ ಬಂಧಿಸಿದ್ದಾರೆ.

ಬಂಧಿತ ಆರೋಪಿಯನ್ನು ಮಾನ್ಯ ನ್ಯಾಯಾಲಯಕ್ಕೆ ಹಾಜರುಪಡಿಸಲಾಗಿದ್ದು, ನ್ಯಾಯಾಲಯವು ಸೆಪ್ಟೆಂಬರ್ 29, 2026ರವರೆಗೆ ನ್ಯಾಯಾಂಗ ಬಂಧನ ವಿಧಿಸಿ ಆದೇಶಿಸಿದೆ.

Continue Reading

arrest

ಬೆಳ್ತಂಗಡಿ: ದಲಿತ ಕುಟುಂಬದ ಜಮೀನಿಗೆ ಅಕ್ರಮ ಪ್ರವೇಶಿಸಿ ಅಶ್ಲೀಲ ಪ್ರದರ್ಶನ – ಆರೋಪಿ ಬಂಧನ

Published

on

ಬೆಳ್ತಂಗಡಿ: ದಕ್ಷಿಣ ಕನ್ನಡ ಜಿಲ್ಲೆಯ ಬೆಳ್ತಂಗಡಿ ತಾಲೂಕಿನ ವೇಣೂರು ಸಮೀಪದಲ್ಲಿ ಪರಿಶಿಷ್ಟ ಜಾತಿಯ ಕುಟುಂಬಗಳಿಗೆ ಸೇರಿದ ಜಮೀನಿಗೆ ಅಕ್ರಮ ಪ್ರವೇಶಿಸಿ ಕೃತ್ಯವೆಸಗಿ, ದಲಿತ ಕುಟುಂಬದ ಮಹಿಳೆಯರ ಮುಂದೆ ಪಂಚೆ ಎತ್ತಿ ಮರ್ಮಾಂಗ ಪ್ರದರ್ಶಿಸಿ ವಿಕೃತಿ ಮೆರೆದ ವಿಲಕ್ಷಣ ಪ್ರಕರಣ ನಡೆದಿದ್ದು, ಈ ಬಗ್ಗೆ ವೇಣೂರು ಠಾಣೆಯಲ್ಲಿ ಪ್ರಕರಣ ದಾಖಲಾಗಿ ಆರೋಪಿಯನ್ನು ಪೊಲೀಸರು ಬಂಧಿಸಿದ್ದಾರೆ.

ಬಂಧಿತ ಆರೋಪಿಯನ್ನು ಬೆಳ್ತಂಗಡಿ ತಾಲೂಕಿನ ಹೊಸಂಗಡಿ ಗ್ರಾಮದ ಪಟ್ಟಾಡಿ ಮನೆಯ ಅಬ್ದುಲ್ ಹನೀಫ್ ಹುಸೇನ್ (50) ಎಂದು ಗುರುತಿಸಲಾಗಿದೆ.

ಘಟನೆ ವಿವರ:

ಬೆಳ್ತಂಗಡಿ ತಾಲೂಕಿನ ವೇಣೂರು ಸಮೀಪದ ಪಡ್ಯಾರಬೆಟ್ಟು ಎಂಬಲ್ಲಿ ಸುಮಾರು 40 ವರ್ಷಗಳಿಗಿಂತಲೂ ಹೆಚ್ಚು ಕಾಲದಿಂದ ವಾಸ್ತವ್ಯವಿದ್ದು ಕೃಷಿ ಚಟುವಟಿಕೆ ನಡೆಸಿಕೊಂಡು ಬರುತ್ತಿದ್ದ ಪರಿಶಿಷ್ಟ ಜಾತಿಯ ಕುಟುಂಬದ ಸ್ವಾಧೀನದ ಜಾಗದಲ್ಲಿ ಸಿಮೆಂಟ್ ಕಂಬ ಹಾಗೂ ತಂತಿ ಬೇಲಿ ಹಾಕಿ ಕುಟುಂಬ ಕೃಷಿ ಕಾರ್ಯದಲ್ಲಿ ತೊಡಗಿತ್ತು.

ಸೆ.7 ರಂದು ಸ್ಥಳೀಯ ನಿವಾಸಿ ಹನೀಫ್ ಎಂಬಾತ ಏಕಾಏಕಿ ಆ ಜಾಗಕ್ಕೆ ಅತಿಕ್ರಮ ಪ್ರವೇಶಿಸಿ, ಜಾತಿ ನಿಂದನೆ ಮಾಡಿ ಅವಾಚ್ಯ ಮತ್ತು ಅಶ್ಲೀಲ ಪದಗಳಿಂದ ನಿಂದಿಸಿದ್ದಾನೆ. ಬಡ ಕುಟುಂಬ ಹಾಕಿದ್ದ ಸಿಮೆಂಟ್ ಬೇಲಿ ಕಂಬ ಹಾಗೂ ತಂತಿ ಬೇಲಿಯನ್ನು ಕಿತ್ತೆಸೆದು, ಅಡಿಕೆ ಹಾಗೂ ಬಾಳೆ ಗಿಡಗಳನ್ನು ಮುರಿದು ದಾಂಧಲೆ ನಡೆಸಿ ಕೊಲೆ ಬೆದರಿಕೆ ಹಾಕಿದ್ದಾನೆ ಎಂದು ಆರೋಪಿಸಲಾಗಿದೆ.

ಈ ವೇಳೆ ಕೆಲಸದಲ್ಲಿ ತೊಡಗಿದ್ದ ದಲಿತ ಕುಟುಂಬದ ಮಹಿಳೆಯರು ದಾಂಧಲೆಯ ಘಟನೆಯನ್ನು ತಮ್ಮ ಮೊಬೈಲ್‌ನಲ್ಲಿ ವಿಡಿಯೋ ಚಿತ್ರೀಕರಣ ಮಾಡುತ್ತಿದ್ದಾಗ ಆರೋಪಿ ಹನೀಫ್ ಮಹಿಳೆಯರ ಎದುರು ಬಂದು ತಾನು ಉಟ್ಟಿದ್ದ ಪಂಚೆಯನ್ನು ಎತ್ತಿ ಒಳ ಉಡುಪನ್ನು ಜಾರಿಸಿ ತನ್ನ ಗುಪ್ತಾಂಗವನ್ನು ತೋರಿಸುತ್ತಾ ಸಾರ್ವಜನಿಕವಾಗಿ ವಿಕೃತಿಯನ್ನು ಮೆರೆದಿದ್ದಾನೆ. “ನಿಮ್ಮನ್ನು ಇದರಿಂದಲೇ ಅತ್ಯಾಚಾರ ಮಾಡುತ್ತೇನೆ, ಈ ಜಾಗ ಬಿಟ್ಟು ಹೋಗದಿದ್ದರೆ ನಿಮ್ಮನ್ನು ಕೊಲ್ಲದೆ ಬಿಡುವುದಿಲ್ಲ” ಎಂದು ಬೆದರಿಕೆ ಹಾಕಿ ಮಹಿಳೆಯರನ್ನು ಬೆನ್ನಟ್ಟಿಕೊಂಡು ಬಂದಿದ್ದಾನೆ ಎಂದು ದೂರಿನಲ್ಲಿ ತಿಳಿಸಲಾಗಿದೆ.

ದೂರು ಮತ್ತು ಬಂಧನ:

ಈತನ ವಿಕೃತಿಯಿಂದ ಭಯಗೊಂಡ ಬಡ ಕುಟುಂಬವು ಸ್ಥಳೀಯ ದಲಿತ ಮುಖಂಡರು ಹಾಗೂ ಕಾರ್ಯಕರ್ತರೊಂದಿಗೆ ವೇಣೂರು ಪೊಲೀಸ್ ಠಾಣೆಗೆ ತೆರಳಿ ವಿಡಿಯೋ ಚಿತ್ರೀಕರಣದ ದೃಶ್ಯಾವಳಿ ಸಾಕ್ಷ್ಯಾಧಾರಗಳೊಂದಿಗೆ ಸೆ.8 ರಂದು ದೂರು ನೀಡಿದೆ.

ದೂರಿನ ಅನ್ವಯ ವೇಣೂರು ಠಾಣೆಯಲ್ಲಿ ದಲಿತ ದೌರ್ಜನ್ಯ ಕಾಯ್ದೆ ಅಡಿಯಲ್ಲಿ ಹಾಗೂ ಬಿಎನ್ಎಸ್ 329(3), 352, 351(2), 75(1), 324(4) ರಂತೆ ಪ್ರಕರಣ ದಾಖಲಿಸಲಾಗಿದೆ.

ಪ್ರಕರಣ ದಾಖಲಿಸಿಕೊಂಡ ವೇಣೂರು ಪೊಲೀಸರು ಆರೋಪಿಯನ್ನು ಸಂಜೆ ಬಂಧಿಸಿ ಮಂಗಳೂರು ನ್ಯಾಯಾಲಯಕ್ಕೆ ಹಾಜರುಪಡಿಸಿದ್ದು, ನ್ಯಾಯಾಲಯ ಆರೋಪಿಗೆ ನ್ಯಾಯಾಂಗ ಬಂಧನ ವಿಧಿಸಿದೆ.

40 ವರ್ಷಗಳಿಂದ ಕೃಷಿ ಮಾಡಿಕೊಂಡು ಬಂದಿದ್ದ ಬಡ ಪರಿಶಿಷ್ಟ ಕುಟುಂಬದ ಮೇಲೆ ದೌರ್ಜನ್ಯ ನಡೆಸಿ, ಮಹಿಳೆಯರ ಮುಂದೆ ಅಸಭ್ಯವಾಗಿ ವರ್ತಿಸಿದ ಆರೋಪಿಗೆ ಸ್ಥಳೀಯ ದಲಿತ ಮುಖಂಡರು ಹಾಗೂ ಕಾರ್ಯಕರ್ತರ ಸಂಘಟಿತ ಹೋರಾಟದ ಫಲವಾಗಿ ಕಾನೂನಿನ ತಕ್ಕ ಪಾಠ ಕಲಿಸಿದಂತಾಗಿದ್ದು, ಈ ಹೋರಾಟಕ್ಕೆ ರಾಜ್ಯಾದ್ಯಂತ ಮೆಚ್ಚುಗೆ ವ್ಯಕ್ತವಾಗಿದೆ.

Continue Reading

Trending

Copyright © 2025 Deevatige