Connect with us

arrest

ಅಕ್ರಮ ಸಂಬಂಧಕ್ಕಾಗಿ ಪತಿಯನ್ನೇ ಬಲಿ ಪಡೆದ ಪತ್ನಿ: ದೆಹಲಿಯಲ್ಲಿ ಬೆಚ್ಚಿಬೀಳಿಸುವ ದೃಶ್ಯ, ಗಂಡನ ಖಾಸಗಿ ಅಂಗಕ್ಕೆ ಕರೆಂಟ್ ಶಾಕ್ ಕೊಟ್ಟು ಭೀಕರ ಕೊಲೆ!

Published

on

ದೆಹಲಿ: ವಿವಾಹೇತರ ಸಂಬಂಧ ಮತ್ತು ಹಣದ ವ್ಯಾಮೋಹಕ್ಕೆ ಬಿದ್ದ ಪತ್ನಿಯೊಬ್ಬಳು, ತನ್ನ ಪ್ರಿಯಕರ ಹಾಗೂ ಆತನ ಸಹಚರನೊಂದಿಗೆ ಸೇರಿ ಸ್ವಂತ ಪತಿಯನ್ನೇ ಅತ್ಯಂತ ಕ್ರೂರವಾಗಿ ಹತ್ಯೆ ಮಾಡಿರುವ ಶಂಕಾಸ್ಪದ ಪ್ರಕರಣವೊಂದು ದಕ್ಷಿಣ ದೆಹಲಿಯ ಸಂಗಮ್ ವಿಹಾರ್‌ನ ರಾತಿಯಾ ಮಾರ್ಗ್ ಪ್ರದೇಶದಲ್ಲಿ ಬೆಳಕಿಗೆ ಬಂದಿದೆ.

58 ವರ್ಷದ ಆಸ್ತಿ ಉದ್ಯಮಿ ಮುನ್ನಾ ಲಾಲ್ ಹತ್ಯೆಯಾದ ದುರದೃಷ್ಟಕರ ಪತಿ. ಈ ಸಂಬಂಧ ಪತ್ನಿ ಮಂಜು ಅಲಿಯಾಸ್ ನಾಜಿಯಾ (45), ಆಕೆಯ ಪ್ರಿಯಕರ ಚಮನ್ (22) ಹಾಗೂ ಆತನ ಸಹಚರ ಕಿಶನ್ (24) ಎಂಬುವವರನ್ನು ಪೊಲೀಸರು ಹೆಡೆಮುರಿ ಕಟ್ಟಿ ಕಂಬಿ ಎಣಿಸುವಂತೆ ಮಾಡಿದ್ದಾರೆ.

ಸಂಚು ರೂಪಿಸಿದ್ದು ಹೇಗೆ? ಕೊಲೆಯಾದ ರಾತ್ರಿ ನಡೆದಿದ್ದೇನು?

ಪೊಲೀಸರ ತನಿಖೆಯ ಪ್ರಕಾರ, ಇದು ಸಂಪೂರ್ಣ ಪೂರ್ವಯೋಜಿತ ಕೊಲೆಯಾಗಿದೆ. ೨೨ ವರ್ಷಗಳ ದಾಂಪತ್ಯ ಜೀವನ ನಡೆಸಿದ್ದ ನಾಜಿಯಾ ಮತ್ತು ಮುನ್ನಾ ಲಾಲ್ ದಂಪತಿಗೆ ಮೂವರು ಮಕ್ಕಳಿದ್ದಾರೆ. ಆದರೆ, ಇತ್ತೀಚಿನ ದಿನಗಳಲ್ಲಿ ದಾಂಪತ್ಯದಲ್ಲಿ ಬಿರುಕು ಮೂಡಿತ್ತು. ಮನೆಯ ಬಳಿಯ ಅಂಗಡಿಯೊಂದರಲ್ಲಿ ಮೆಕ್ಯಾನಿಕ್ ಆಗಿ ಕೆಲಸ ಮಾಡುತ್ತಿದ್ದ 22 ವರ್ಷದ ಚಮನ್ ಜೊತೆ ನಾಜಿಯಾಗೆ ಅಕ್ರಮ ಸಂಬಂಧ ಬೆಳೆದಿತ್ತು.

ಪತಿಯನ್ನು ದಾರಿಯಿಂದ ತಪ್ಪಿಸಲು ನಾಜಿಯಾ, ಪ್ರಿಯಕರ ಚಮನ್‌ಗೆ 5 ಲಕ್ಷ ರೂಪಾಯಿ ಸುಪಾರಿ ಆಮಿಷ ಒಡ್ಡಿದ್ದಳು.

ಮಾದಕ ಔಷಧಿ ನೀಡಿಕೆ: ಕೊಲೆ ನಡೆದ ರಾತ್ರಿ ಚಮನ್ ನೀಡಿದ್ದ ನಿದ್ದೆ ಮಾತ್ರೆಗಳನ್ನು ನಾಜಿಯಾ ನೀರಿನಲ್ಲಿ ಬೆರೆಸಿ ಪತಿ ಮುನ್ನಾ ಲಾಲ್‌ಗೆ ಕುಡಿಸಿದ್ದಳು.

ರಾತ್ರಿ 1.45ಕ್ಕೆ ಮನೆಗೆ ಎಂಟ್ರಿ: ಪತಿ ಪ್ರಜ್ಞೆ ತಪ್ಪಿ ಮಲಗಿದ ತಕ್ಷಣ, ಚಮನ್ ಮತ್ತು ಆತನ ಸಹಚರ ಕಿಶನ್ ಮನೆಗೆ ಪ್ರವೇಶಿಸಿದ್ದಾರೆ.

ಭೀಕರ ಹತ್ಯೆ: ಗಂಡನ ಕತ್ತನ್ನು ಹಗ್ಗದಿಂದ ಬಿಗಿದು, ಉಸಿರುಗಟ್ಟಿಸಿ, ಬಳಿಕ ಖಾಸಗಿ ಅಂಗಕ್ಕೆ ವಿದ್ಯುತ್ ಶಾಕ್ (Current Shock) ನೀಡಿದ್ದಾರೆ. ಕೊನೆಗೆ ಪ್ರಾಣ ಹೋಗಿದೆಯೇ ಎಂದು ಖಚಿತಪಡಿಸಿಕೊಳ್ಳಲು ಮರದ ಕೋಲಿನಿಂದಲೂ ಹಲ್ಲೆ ನಡೆಸಿದ್ದಾರೆ.

ಸಾಕ್ಷ್ಯ ನಾಶಕ್ಕೆ ಯತ್ನ: ಕೊಲೆಯ ನಂತರ ಮೃತದೇಹವನ್ನು ರಸ್ತೆಯ ಬದಿಯಲ್ಲಿ ಎಸೆದು, ಮನೆಯಲ್ಲಿದ್ದ ವಸ್ತುಗಳನ್ನು ಚೆಲ್ಲಾಪಿಲ್ಲಿ ಮಾಡಿ ದರೋಡೆಕೋರರು ನುಗ್ಗಿ ಕೊಲೆ ಮಾಡಿದ್ದಾರೆ ಎಂದು ನಾಜಿಯಾ ನಾಟಕವಾಡಿದ್ದಳು.

ಪೊಲೀಸರ ಚಾಣಾಕ್ಷತನ: ಸಿಸಿಟಿವಿಯಲ್ಲಿ ಸಿಕ್ಕಿಬಿದ್ದ ಆರೋಪಿಗಳು

ಆಗಸ್ಟ್ 10ರಂದು ಬೆಳಗಿನ ಜಾವ ರಕ್ತದ ಮಡುವಿನಲ್ಲಿ ಬಿದ್ದಿದ್ದ ಮುನ್ನಾ ಲಾಲ್ ಅವರನ್ನು ಏಮ್ಸ್ ಟ್ರಾಮಾ ಸೆಂಟರ್‌ಗೆ ದಾಖಲಿಸಲಾಯಿತಾದರೂ, ಅವರು ಈಗಾಗಲೇ ಮೃತಪಟ್ಟಿರುವುದಾಗಿ ವೈದ್ಯರು ಘೋಷಿಸಿದರು.

ಘಟನಾ ಸ್ಥಳಕ್ಕೆ ಧಾವಿಸಿದ ದಕ್ಷಿಣ ದೆಹಲಿ ಪೊಲೀಸರು ಹಾಗೂ ಡಿಸಿಪಿ ಅನಂತ್ ಮಿತ್ತಲ್ ಅವರ ತಂಡಕ್ಕೆ ಪತ್ನಿಯ ಹೇಳಿಕೆಗಳ ಮೇಲೆ ಅನುಮಾನ ವ್ಯಕ್ತವಾಯಿತು. ರಕ್ತದ ಕಲೆಗಳನ್ನು ಒರೆಸಿ ಸಾಕ್ಷ್ಯ ನಾಶ ಮಾಡಲು ಯತ್ನಿಸಿರುವುದು ಕಂಡುಬಂದಿತ್ತು. ತಕ್ಷಣವೇ ಮನೆಯ ಹೊರಭಾಗದಲ್ಲಿದ್ದ ಸಿಸಿಟಿವಿ ದೃಶ್ಯಾವಳಿಗಳನ್ನು ಪರಿಶೀಲಿಸಿದಾಗ, ರಾತ್ರಿ 1.45ಕ್ಕೆ ಮಾಸ್ಕ್ ಧರಿಸಿದ್ದ ವ್ಯಕ್ತಿಯೊಬ್ಬ ಒಳಗೆ ಹೋಗಿ 3.15ಕ್ಕೆ ಹೊರಬಂದಿರುವುದು ಸ್ಪಷ್ಟವಾಗಿ ದಾಖಲಾಗಿತ್ತು.

ಸಿಸಿಟಿವಿ ಆಧಾರದ ಮೇಲೆ ನಾಜಿಯಾಳನ್ನು ತೀವ್ರ ವಿಚಾರಣೆಗೆ ಒಳಪಡಿಸಿದಾಗ ಆಕೆ ತನ್ನ ನೀಚ ಕೃತ್ಯವನ್ನು ಒಪ್ಪಿಕೊಂಡಿದ್ದಾಳೆ. ಕೊಲೆಯ ತಕ್ಷಣ ಆಕೆ ಪ್ರಿಯಕರನಿಗೆ ಮುಂಗಡವಾಗಿ 20,000 ರೂ. ನೀಡಿದ್ದಾಗಿ ತಿಳಿಸಿದ್ದಾಳೆ.

ಪೊಲೀಸ್ ಇಲಾಖೆಯ ಶ್ಲಾಘನೀಯ ಕಾರ್ಯ: ಇತ್ತೀಚಿನ ದಿನಗಳಲ್ಲಿ ದಾಂಪತ್ಯ ದ್ರೋಹ ಹಾಗೂ ವಿವಾಹೇತರ ಸಂಬಂಧಗಳಿಂದ ಇಂತಹ ಭೀಕರ ಅಪರಾಧಗಳು ಹೆಚ್ಚಾಗುತ್ತಿವೆಯಾದರೂ, ದೆಹಲಿ ಪೊಲೀಸರ ತಕ್ಷಣದ ಕಾರ್ಯಾಚರಣೆ ಹಾಗೂ ಚಾಣಾಕ್ಷ ತನಿಖೆಯಿಂದಾಗಿ ಆರೋಪಿಗಳು ಕಾನೂನಿನ ಕುಣಿಕೆಯಿಂದ ತಪ್ಪಿಸಿಕೊಳ್ಳಲು ಸಾಧ್ಯವಾಗಲಿಲ್ಲ. ಸದ್ಯ ಮೂವರೂ ಆರೋಪಿಗಳನ್ನು ಬಂಧಿಸಲಾಗಿದ್ದು, ಹೆಚ್ಚಿನ ತನಿಖೆ ಮುಂದುವರಿದಿದೆ.

ads (2)
ads (3)
ads (4)
ads (5)
ads (6)
ads (1)
ads (8)
ads (7)
ಮುಂದಕ್ಕೆ ಓದಲು ಇಲ್ಲಿ ಕ್ಲಿಕ್‌ ಮಾಡಿ
Advertisement

arrest

ಕಾಸರಗೋಡು: ವಿವಾಹಿತ ಮಹಿಳೆಯ ಗೆಳೆಯನ ಜೊತೆ ನಿಲ್ಲಿಸಿ ಗೂಂಡಾಗಿರಿ, ಫೋಟೋ ತೋರಿಸಿ ಬ್ಲ್ಯಾಕ್ ಮೇಲ್ – ಐವರ ಬಂಧನ

Published

on

ಕಾಸರಗೋಡು: ವಿವಾಹಿತ ಮಹಿಳೆಯ ಮನೆಗೆ ಅಕ್ರಮ ಪ್ರವೇಶ ಮಾಡಿ ಗೂಂಡಾಗಿರಿ ನಡೆಸಿ, ಆಕೆ ಮತ್ತು ಆಕೆಯ ಪುರುಷ ಸ್ನೇಹಿತನನ್ನು ಬೆದರಿಸಿ ಹಣ ಮತ್ತು ಚಿನ್ನಾಭರಣ ಸುಲಿಗೆ ಮಾಡಿದ ಪ್ರಕರಣಕ್ಕೆ ಸಂಬಂಧಿಸಿದಂತೆ ಐವರು ಆರೋಪಿಗಳನ್ನು ವಿದ್ಯಾನಗರ ಪೊಲೀಸರು ಬಂಧಿಸಿದ್ದಾರೆ.

ಬಂಧಿತರನ್ನು ಮುಳಿಯಾರು ಪೊವ್ವಲ್ ನ ಬಿ. ಶರೀಫ್ (42), ಚೆಂಗಳ ಸಂತೋಷ್ ನಗರದ ಮೊಹಮ್ಮದ್ ಸಾಲಿಹ್ (22), ನಾಲ್ಕನೇ ಮೈಲ್ ನಿವಾಸಿಗಳಾದ ಉಮರ್ ಮುಖ್ತಾರ್ (18), ಮೊಹಮ್ಮದ್ ಶಿಹಾನ್ (20) ಹಾಗೂ ಆಲಂಪಾಡಿಯ ಅಬ್ದುಲ್ ರಶೀದ್ (36) ಎಂದು ಗುರುತಿಸಲಾಗಿದೆ. ಆರೋಪಿಗಳನ್ನು ನ್ಯಾಯಾಲಯಕ್ಕೆ ಹಾಜರುಪಡಿಸಲಾಗಿದ್ದು, ನ್ಯಾಯಾಂಗ ಬಂಧನಕ್ಕೆ ಒಪ್ಪಿಸಲಾಗಿದೆ.

ಘಟನೆ ಏನು?
ಮಹಿಳೆಯ ಮನೆಗೆ ಆಕೆಯ ಪುರುಷ ಸ್ನೇಹಿತ ಬಂದಿದ್ದ ವೇಳೆ ಆರೋಪಿಗಳ ಗುಂಪು ಅಕ್ರಮವಾಗಿ ಮನೆ ಪ್ರವೇಶ ಮಾಡಿದೆ. ಇಬ್ಬರನ್ನೂ ಒಟ್ಟಿಗೆ ನಿಲ್ಲಿಸಿ ಫೋಟೋ ತೆಗೆದಿರುವ ಆರೋಪಿಗಳು, ಆ ಫೋಟೋವನ್ನು ಬಹಿರಂಗಪಡಿಸುವುದಾಗಿ ಬೆದರಿಸಿ ಹಣಕ್ಕೆ ಬೇಡಿಕೆ ಇಟ್ಟಿದ್ದಾರೆ.

ಮೊದಲಿಗೆ ಮಹಿಳೆಯಿಂದ 2 ಪವನ್ ತೂಕದ ಚಿನ್ನದ ಸರ, ಉಂಗುರ ಹಾಗೂ 15,000 ರೂ. ನಗದನ್ನು ಕಸಿದುಕೊಂಡಿದ್ದಾರೆ. ಬಳಿಕ ಆಕೆಯ ಪುರುಷ ಸ್ನೇಹಿತನಿಂದ 40,000 ರೂ. ಹಣವನ್ನು ಸುಲಿಗೆ ಮಾಡಿದ್ದಾರೆ ಎಂದು ದೂರಿನಲ್ಲಿ ತಿಳಿಸಲಾಗಿದೆ.

ಘಟನೆಯ ನಂತರವೂ ಹೆಚ್ಚಿನ ಹಣ ಮತ್ತು ಚಿನ್ನಾಭರಣ ನೀಡುವಂತೆ ನಿರಂತರ ಬೆದರಿಕೆ ಹಾಕುತ್ತಿದ್ದ ಹಿನ್ನೆಲೆಯಲ್ಲಿ ಮಹಿಳೆ ವಿದ್ಯಾನಗರ ಪೊಲೀಸ್ ಠಾಣೆಗೆ ದೂರು ನೀಡಿದ್ದಾರೆ.

ದೂರು ದಾಖಲಿಸಿಕೊಂಡ ಪೊಲೀಸರು, ಇನ್ಸ್‌ಪೆಕ್ಟರ್ ಪಿ. ಪ್ರಮೋದ್ ಅವರ ನೇತೃತ್ವದಲ್ಲಿ ಕಾರ್ಯಾಚರಣೆ ನಡೆಸಿ ಐವರನ್ನೂ ಬಂಧಿಸಿದ್ದಾರೆ

Continue Reading

arrest

6 ವರ್ಷಗಳಿಂದ ವಿದೇಶದಲ್ಲಿದ್ದ ವಾರೆಂಟ್ ಆರೋಪಿ ವಿಮಾನ ನಿಲ್ದಾಣದಲ್ಲಿ ಅರೆಸ್ಟ್: ಬಂಟ್ವಾಳ ಪೊಲೀಸರ ಕಾರ್ಯಾಚರಣೆ

Published

on

ಮಂಗಳೂರು: ನ್ಯಾಯಾಲಯದ ವಿಚಾರಣೆಗೆ ಹಾಜರಾಗದೆ ಕಳೆದ 6 ವರ್ಷಗಳಿಂದ ವಿದೇಶದಲ್ಲಿ ತಲೆಮರೆಸಿಕೊಂಡಿದ್ದ ವಾರೆಂಟ್ ಆರೋಪಿಯನ್ನು ಬಂಟ್ವಾಳ ನಗರ ಪೊಲೀಸರು ಮಂಗಳೂರು ಅಂತಾರಾಷ್ಟ್ರೀಯ ವಿಮಾನ ನಿಲ್ದಾಣದಲ್ಲಿ ವಶಕ್ಕೆ ಪಡೆದಿದ್ದಾರೆ.

ಮಂಗಳೂರು ಬಜಾಲ್‌ನಂತೂರು ನಿವಾಸಿ ಮಹಮ್ಮದ್ ನೌಫಲ್ @ ಸಫಾರಿ ನೌಫಲ್ (34) ದಸ್ತಗಿರಿಯಾದ ಆರೋಪಿ.

ಪ್ರಕರಣದ ವಿವರ: ಬಂಟ್ವಾಳ ನಗರ ಪೊಲೀಸ್ ಠಾಣೆಯಲ್ಲಿ ದಾಖಲಾಗಿದ್ದ ಪ್ರಕರಣಕ್ಕೆ (ಅ.ಕ್ರ: 24/2020, ಐಪಿಸಿ ಕಲಂ: 143, 147, 148, 504, 323, 324, 506, 427 r/w 149 ಮತ್ತು ಕಾವಲು ಕಾಯ್ದೆ) ಸಂಬಂಧಿಸಿದಂತೆ ಈಾತನು ಮಾನ್ಯ ನ್ಯಾಯಾಲಯಕ್ಕೆ ವಿಚಾರಣೆಗೆ ಹಾಜರಾಗದೆ ವಿದೇಶಕ್ಕೆ ಪರಾರಿಯಾಗಿದ್ದ. ಈತನ ವಿರುದ್ಧ ನ್ಯಾಯಾಲಯದಿಂದ ವಾರೆಂಟ್ ಜಾರಿಯಾಗಿತ್ತು.

ಸೆಪ್ಟೆಂಬರ್ 15, 2026ರಂದು ವಿದೇಶದಿಂದ ಮನೆಗೆ ಹಿಂತಿರುಗುತ್ತಿದ್ದ ವೇಳೆ, ಮಂಗಳೂರು ಅಂತಾರಾಷ್ಟ್ರೀಯ ವಿಮಾನ ನಿಲ್ದಾಣದ ಇಮಿಗ್ರೇಷನ್ ವಿಭಾಗದ ಸಹಾಯದಿಂದ ಬಂಟ್ವಾಳ ನಗರ ಪೊಲೀಸರು ಆರೋಪಿಯನ್ನು ಯಶಸ್ವಿಯಾಗಿ ಬಂಧಿಸಿದ್ದಾರೆ.

ಬಂಧಿತ ಆರೋಪಿಯನ್ನು ಮಾನ್ಯ ನ್ಯಾಯಾಲಯಕ್ಕೆ ಹಾಜರುಪಡಿಸಲಾಗಿದ್ದು, ನ್ಯಾಯಾಲಯವು ಸೆಪ್ಟೆಂಬರ್ 29, 2026ರವರೆಗೆ ನ್ಯಾಯಾಂಗ ಬಂಧನ ವಿಧಿಸಿ ಆದೇಶಿಸಿದೆ.

Continue Reading

arrest

ಬೆಳ್ತಂಗಡಿ: ದಲಿತ ಕುಟುಂಬದ ಜಮೀನಿಗೆ ಅಕ್ರಮ ಪ್ರವೇಶಿಸಿ ಅಶ್ಲೀಲ ಪ್ರದರ್ಶನ – ಆರೋಪಿ ಬಂಧನ

Published

on

ಬೆಳ್ತಂಗಡಿ: ದಕ್ಷಿಣ ಕನ್ನಡ ಜಿಲ್ಲೆಯ ಬೆಳ್ತಂಗಡಿ ತಾಲೂಕಿನ ವೇಣೂರು ಸಮೀಪದಲ್ಲಿ ಪರಿಶಿಷ್ಟ ಜಾತಿಯ ಕುಟುಂಬಗಳಿಗೆ ಸೇರಿದ ಜಮೀನಿಗೆ ಅಕ್ರಮ ಪ್ರವೇಶಿಸಿ ಕೃತ್ಯವೆಸಗಿ, ದಲಿತ ಕುಟುಂಬದ ಮಹಿಳೆಯರ ಮುಂದೆ ಪಂಚೆ ಎತ್ತಿ ಮರ್ಮಾಂಗ ಪ್ರದರ್ಶಿಸಿ ವಿಕೃತಿ ಮೆರೆದ ವಿಲಕ್ಷಣ ಪ್ರಕರಣ ನಡೆದಿದ್ದು, ಈ ಬಗ್ಗೆ ವೇಣೂರು ಠಾಣೆಯಲ್ಲಿ ಪ್ರಕರಣ ದಾಖಲಾಗಿ ಆರೋಪಿಯನ್ನು ಪೊಲೀಸರು ಬಂಧಿಸಿದ್ದಾರೆ.

ಬಂಧಿತ ಆರೋಪಿಯನ್ನು ಬೆಳ್ತಂಗಡಿ ತಾಲೂಕಿನ ಹೊಸಂಗಡಿ ಗ್ರಾಮದ ಪಟ್ಟಾಡಿ ಮನೆಯ ಅಬ್ದುಲ್ ಹನೀಫ್ ಹುಸೇನ್ (50) ಎಂದು ಗುರುತಿಸಲಾಗಿದೆ.

ಘಟನೆ ವಿವರ:

ಬೆಳ್ತಂಗಡಿ ತಾಲೂಕಿನ ವೇಣೂರು ಸಮೀಪದ ಪಡ್ಯಾರಬೆಟ್ಟು ಎಂಬಲ್ಲಿ ಸುಮಾರು 40 ವರ್ಷಗಳಿಗಿಂತಲೂ ಹೆಚ್ಚು ಕಾಲದಿಂದ ವಾಸ್ತವ್ಯವಿದ್ದು ಕೃಷಿ ಚಟುವಟಿಕೆ ನಡೆಸಿಕೊಂಡು ಬರುತ್ತಿದ್ದ ಪರಿಶಿಷ್ಟ ಜಾತಿಯ ಕುಟುಂಬದ ಸ್ವಾಧೀನದ ಜಾಗದಲ್ಲಿ ಸಿಮೆಂಟ್ ಕಂಬ ಹಾಗೂ ತಂತಿ ಬೇಲಿ ಹಾಕಿ ಕುಟುಂಬ ಕೃಷಿ ಕಾರ್ಯದಲ್ಲಿ ತೊಡಗಿತ್ತು.

ಸೆ.7 ರಂದು ಸ್ಥಳೀಯ ನಿವಾಸಿ ಹನೀಫ್ ಎಂಬಾತ ಏಕಾಏಕಿ ಆ ಜಾಗಕ್ಕೆ ಅತಿಕ್ರಮ ಪ್ರವೇಶಿಸಿ, ಜಾತಿ ನಿಂದನೆ ಮಾಡಿ ಅವಾಚ್ಯ ಮತ್ತು ಅಶ್ಲೀಲ ಪದಗಳಿಂದ ನಿಂದಿಸಿದ್ದಾನೆ. ಬಡ ಕುಟುಂಬ ಹಾಕಿದ್ದ ಸಿಮೆಂಟ್ ಬೇಲಿ ಕಂಬ ಹಾಗೂ ತಂತಿ ಬೇಲಿಯನ್ನು ಕಿತ್ತೆಸೆದು, ಅಡಿಕೆ ಹಾಗೂ ಬಾಳೆ ಗಿಡಗಳನ್ನು ಮುರಿದು ದಾಂಧಲೆ ನಡೆಸಿ ಕೊಲೆ ಬೆದರಿಕೆ ಹಾಕಿದ್ದಾನೆ ಎಂದು ಆರೋಪಿಸಲಾಗಿದೆ.

ಈ ವೇಳೆ ಕೆಲಸದಲ್ಲಿ ತೊಡಗಿದ್ದ ದಲಿತ ಕುಟುಂಬದ ಮಹಿಳೆಯರು ದಾಂಧಲೆಯ ಘಟನೆಯನ್ನು ತಮ್ಮ ಮೊಬೈಲ್‌ನಲ್ಲಿ ವಿಡಿಯೋ ಚಿತ್ರೀಕರಣ ಮಾಡುತ್ತಿದ್ದಾಗ ಆರೋಪಿ ಹನೀಫ್ ಮಹಿಳೆಯರ ಎದುರು ಬಂದು ತಾನು ಉಟ್ಟಿದ್ದ ಪಂಚೆಯನ್ನು ಎತ್ತಿ ಒಳ ಉಡುಪನ್ನು ಜಾರಿಸಿ ತನ್ನ ಗುಪ್ತಾಂಗವನ್ನು ತೋರಿಸುತ್ತಾ ಸಾರ್ವಜನಿಕವಾಗಿ ವಿಕೃತಿಯನ್ನು ಮೆರೆದಿದ್ದಾನೆ. “ನಿಮ್ಮನ್ನು ಇದರಿಂದಲೇ ಅತ್ಯಾಚಾರ ಮಾಡುತ್ತೇನೆ, ಈ ಜಾಗ ಬಿಟ್ಟು ಹೋಗದಿದ್ದರೆ ನಿಮ್ಮನ್ನು ಕೊಲ್ಲದೆ ಬಿಡುವುದಿಲ್ಲ” ಎಂದು ಬೆದರಿಕೆ ಹಾಕಿ ಮಹಿಳೆಯರನ್ನು ಬೆನ್ನಟ್ಟಿಕೊಂಡು ಬಂದಿದ್ದಾನೆ ಎಂದು ದೂರಿನಲ್ಲಿ ತಿಳಿಸಲಾಗಿದೆ.

ದೂರು ಮತ್ತು ಬಂಧನ:

ಈತನ ವಿಕೃತಿಯಿಂದ ಭಯಗೊಂಡ ಬಡ ಕುಟುಂಬವು ಸ್ಥಳೀಯ ದಲಿತ ಮುಖಂಡರು ಹಾಗೂ ಕಾರ್ಯಕರ್ತರೊಂದಿಗೆ ವೇಣೂರು ಪೊಲೀಸ್ ಠಾಣೆಗೆ ತೆರಳಿ ವಿಡಿಯೋ ಚಿತ್ರೀಕರಣದ ದೃಶ್ಯಾವಳಿ ಸಾಕ್ಷ್ಯಾಧಾರಗಳೊಂದಿಗೆ ಸೆ.8 ರಂದು ದೂರು ನೀಡಿದೆ.

ದೂರಿನ ಅನ್ವಯ ವೇಣೂರು ಠಾಣೆಯಲ್ಲಿ ದಲಿತ ದೌರ್ಜನ್ಯ ಕಾಯ್ದೆ ಅಡಿಯಲ್ಲಿ ಹಾಗೂ ಬಿಎನ್ಎಸ್ 329(3), 352, 351(2), 75(1), 324(4) ರಂತೆ ಪ್ರಕರಣ ದಾಖಲಿಸಲಾಗಿದೆ.

ಪ್ರಕರಣ ದಾಖಲಿಸಿಕೊಂಡ ವೇಣೂರು ಪೊಲೀಸರು ಆರೋಪಿಯನ್ನು ಸಂಜೆ ಬಂಧಿಸಿ ಮಂಗಳೂರು ನ್ಯಾಯಾಲಯಕ್ಕೆ ಹಾಜರುಪಡಿಸಿದ್ದು, ನ್ಯಾಯಾಲಯ ಆರೋಪಿಗೆ ನ್ಯಾಯಾಂಗ ಬಂಧನ ವಿಧಿಸಿದೆ.

40 ವರ್ಷಗಳಿಂದ ಕೃಷಿ ಮಾಡಿಕೊಂಡು ಬಂದಿದ್ದ ಬಡ ಪರಿಶಿಷ್ಟ ಕುಟುಂಬದ ಮೇಲೆ ದೌರ್ಜನ್ಯ ನಡೆಸಿ, ಮಹಿಳೆಯರ ಮುಂದೆ ಅಸಭ್ಯವಾಗಿ ವರ್ತಿಸಿದ ಆರೋಪಿಗೆ ಸ್ಥಳೀಯ ದಲಿತ ಮುಖಂಡರು ಹಾಗೂ ಕಾರ್ಯಕರ್ತರ ಸಂಘಟಿತ ಹೋರಾಟದ ಫಲವಾಗಿ ಕಾನೂನಿನ ತಕ್ಕ ಪಾಠ ಕಲಿಸಿದಂತಾಗಿದ್ದು, ಈ ಹೋರಾಟಕ್ಕೆ ರಾಜ್ಯಾದ್ಯಂತ ಮೆಚ್ಚುಗೆ ವ್ಯಕ್ತವಾಗಿದೆ.

Continue Reading

Trending

Copyright © 2025 Deevatige